Psalms · chapter 94 · verse 12
Psalm 94:12 in Kannada
ಓ ಕರ್ತನೇ, ನೀನು ಶಿಕ್ಷಿಸುವವನೂ ನಿನ್ನ ನ್ಯಾಯ ಪ್ರಮಾಣದಿಂದ ಯಾರಿಗೆ ಕಲಿಸುವಿಯೋ ಅವನು ಧನ್ಯನು.
O kartane, neenu shikshisuvavanoo ninna nyaaya pramaanadinda yaarige kalisuviyo avanu dhanyanu.
Psalm 94:12 in English
- King James Version (KJV)
- Blessed [is] the man whom thou chastenest, O LORD, and teachest him out of thy law;
- World English Bible (WEB)
- Blessed is the man whom you discipline, LORD, and teach out of your law,
- American Standard Version (ASV)
- Blessed is the man whom thou chastenest, O Jehovah, And teachest out of thy law;
- Bible in Basic English (BBE)
- Happy is the man who is guided by you, O Jah, and to whom you give teaching out of your law;
- Darby Translation (DBY)
- Blessed is the man whom thou chastenest, O Jah, and whom thou teachest out of thy law;
- Webster's Bible (WBS)
- Blessed [is] the man whom thou chastenest, O LORD, and teachest him out of thy law;
- Young's Literal Translation (YLT)
- O the happiness of the man Whom Thou instructest, O Jah, And out of Thy law teachest him,
Read in context
- 10ಜನಾಂಗಗಳನ್ನು ಶಿಕ್ಷಿಸುವ ವನೂ ಮನುಷ್ಯನಿಗೆ ತಿಳುವಳಿಕೆಯನ್ನು ಕಲಿಸುವವನೂ ಗದರಿಸನೋ?
- 11ಕರ್ತನು ಮನುಷ್ಯನ ಯೋಚನೆ ಗಳನ್ನು ವ್ಯರ್ಥವೆಂದು ತಿಳುಕೊಳ್ಳುತ್ತಾನೆ.
- 12ಓ ಕರ್ತನೇ, ನೀನು ಶಿಕ್ಷಿಸುವವನೂ ನಿನ್ನ ನ್ಯಾಯ ಪ್ರಮಾಣದಿಂದ ಯಾರಿಗೆ ಕಲಿಸುವಿಯೋ ಅವನು ಧನ್ಯನು.
- 13ದುಷ್ಟನಿಗಾಗಿ ಕುಣಿಯು ಅಗಿಯಲ್ಪಡುವ ವರೆಗೆ ಕಷ್ಟದ ದಿವಸಗಳಲ್ಲಿ ಅಂಥವನಿಗೆ ವಿಶ್ರಾಂತಿ ಯನ್ನು ಕೊಡುವನು.
- 14ಕರ್ತನು ತನ್ನ ಜನರನ್ನು ತೊರೆಯನು; ಇಲ್ಲವೆ ತನ್ನ ಸ್ವಾಸ್ಥ್ಯವನ್ನು ಬಿಟ್ಟುಬಿಡನು.
Cross references
- Proverbs 3:11–12 ಜ್ಞಾನೋಕ್ತಿಗಳು 3:11–12ನನ್ನ ಮಗನೇ, ಕರ್ತನ ಶಿಕ್ಷೆಯನ್ನು ತಾತ್ಸಾರ ಮಾಡಬೇಡ. ಮಾತ್ರವಲ್ಲದೆ ಆತನ ತಿದ್ದುವಿಕೆಗೆ ಬೇಸರ ಗೊಳ್ಳಬೇಡ; ತಾನು ಮೆಚ್ಚುವ ಮಗನನ್ನು ತಂದೆಯು ಶಿಕ್ಷಿಸುವಂತೆ ಕರ್ತನು ಯಾರನ್ನು ಪ್ರೀತಿಸುತ್ತಾನೋ ಅವನನ್ನು ಆತನು ತಿದ್ದುವನು.
- Job 5:17 ಯೋಬನು 5:17ಇಗೋ, ದೇವರು ಗದರಿಸುವ ಮನುಷ್ಯನು ಭಾಗ್ಯ ವಂತನು; ಸರ್ವಶಕ್ತನ ಶಿಕ್ಷೆಯನ್ನು ಅಲಕ್ಷ್ಯಮಾಡ ಬೇಡ.
- 1 Corinthians 11:32 1 ಕೊರಿಂಥದವರಿಗೆ 11:32ಆದರೆ ನಾವು ನಮ್ಮನ್ನು ವಿಚಾರಿಸಿ ಕೊಂಡಾಗ ಲೋಕದವರ ಸಂಗಡ ನಮಗೆ ಅಪರಾಧಿಗಳೆಂಬ ನಿರ್ಣಯವಾಗಬಾರದೆಂದು ಕರ್ತನು ನಮ್ಮನ್ನು ಶಿಕ್ಷಿಸುತ್ತಾನೆ.
- Hebrews 12:5–11 ಇಬ್ರಿಯರಿಗೆ 12:5–11ಮಕ್ಕಳಿಗೆ ಹೇಳುವಂತೆ ನಿಮಗೆ ಹೇಳಿದ ಎಚ್ಚರಿಕೆಯ ಮಾತನ್ನು ಮರೆತುಬಿಟ್ಟಿದ್ದೀರೋ? ಏನಂದರೆ--ನನ್ನ ಮಗನೇ, ಕರ್ತನ ಶಿಕ್ಷೆಯನ್ನು ತಾತ್ಸಾರ ಮಾಡಬೇಡ; ಇಲ್ಲವೆ ಆತನು ನಿನ್ನನ್ನು ಗದರಿಸುವಾಗ ಬೇಸರಗೊಳ್ಳ ಬೇಡ; ಕರ್ತನು ತಾನು ಪ್ರೀತಿಸುವವನನ್ನೇ ಶಿಕ್ಷಿಸು ತ್ತಾನೆ; ತಾನು ಸೇರಿಸಿಕೊಳ್ಳುವ ಪ್ರತಿಯೊಬ್ಬ ಮಗನನ್ನು ಹೊಡೆಯುತ್ತಾನೆ ಎಂಬದು. ನೀವು ಶಿಕ್ಷೆಯನ್ನು ತಾಳಿಕೊಂಡರೆ ದೇವರು ನಿಮ್ಮನ್ನು ಪುತ್ರರೆಂದು ನಡಿಸು ತ್ತಾನೆ. ತಂದೆಯಿಂದ ಶಿಕ್ಷೆ ಹೊಂದದ ಮಗನೆಲ್ಲಿ? ನೀವು ಶಿಕ್ಷೆ ಹೊಂದುವವರೆಲ್ಲರೊಂದಿಗೆ ಪಾಲುಗಾರ ರಾಗಿರದಿದ್ದರೆ ನೀವು ಹಾದರದಿಂದ ಹುಟ್ಟಿದವರೇ ಹೊರತು ಪುತ್ರರಲ್ಲ. ಇದು ಮಾತ್ರವಲ್ಲದೆ ನಮ್ಮನ್ನು ಶಿಕ್ಷಿಸಿದಂಥ ಶರೀರ ಸಂಬಂಧವಾದ ತಂದೆಗಳನ್ನು ಸನ್ಮಾನಿ ಸಿದೆವಷ್ಟೆ; ಆತ್ಮಗಳಿಗೆ ತಂದೆಯಾಗಿರುವಾತನಿಗೆ ನಾವು ಇನ್ನೂ ಎಷ್ಟೋ ಹೆಚ್ಚಾಗಿ ಒಳಪಟ್ಟು ಜೀವಿಸಬೇಕಲ್ಲವೇ? ಅವರು ನಿಜವಾಗಿಯೂ ಕೆಲವು ದಿವಸಗಳ ಪ್ರಯೋ ಜನವನ್ನು ಲಕ್ಷ್ಯಕ್ಕೆ ತೆಗೆದುಕೊಂಡು ತಮ್ಮ ಮನಸ್ಸಿಗೆ ತೋರಿದಂತೆ ನಮ್ಮನ್ನು ಶಿಕ್ಷಿಸಿದರು; ಆತನಾದರೋ ನಾವು ತನ್ನ ಪರಿಶುದ್ಧತೆಯಲ್ಲಿ ಪಾಲುಗಾರರಾಗ ಬೇಕೆಂದು ನಮ್ಮ ಪ್ರಯೋಜನಕ್ಕಾಗಿಯೇ ಶಿಕ್ಷಿಸುತ್ತಾನೆ. ಯಾವ ಶಿಕ್ಷೆಯಾದರೂ ತತ್ಕಾಲಕ್ಕೆ ಸಂತೋಷಕರ ವಾಗಿ ತೋಚದೆ ಕ್ರೂರವಾಗಿ ತೋಚುತ್ತದೆ; ಆದರೂ ತರುವಾಯ ಅದು ಶಿಕ್ಷೆ ಹೊಂದಿದವರಿಗೆ ಸಮಾಧಾನ ವುಳ್ಳ ನೀತಿಯ ಫಲವನ್ನು ಕೊಡುತ್ತದೆ.
- Revelation 3:19 ಪ್ರಕಟನೆ 3:19ನಾನು ಯಾರಾರನ್ನು ಪ್ರೀತಿಸುತ್ತೇನೋ ಅವರನ್ನು ಗದರಿಸುತ್ತೇನೆ ಮತ್ತು ಶಿಕ್ಷಿಸುತ್ತೇನೆ; ಆದದರಿಂದ ನೀನು ಆಸಕ್ತನಾಗಿರು; ಮಾನಸಾಂತರಪಡು.
- Psalm 119:71 ಕೀರ್ತನೆಗಳು 119:71ನಿನ್ನ ನಿಯಮಗಳನ್ನು ಕಲಿಯುವ ಹಾಗೆ ನಾನು ಶ್ರಮೆಪಟ್ಟದ್ದು ನನಗೆ ಒಳ್ಳೇದು.
- Psalm 119:67 ಕೀರ್ತನೆಗಳು 119:67ನಾನು ಶ್ರಮೆಪಡು ವದಕ್ಕಿಂತ ಮುಂಚೆ ತಪ್ಪಿಹೋಗುತ್ತಿದ್ದೆನು; ಆದರೆ ಈಗ ನಿನ್ನ ವಾಕ್ಯವನ್ನು ಕೈಕೊಂಡಿದ್ದೇನೆ.
- Deuteronomy 8:5 ಧರ್ಮೋಪದೇಶಕಾಂಡ 8:5ಇದಲ್ಲದೆ ಒಬ್ಬನು ತನ್ನ ಮಗ ನನ್ನು ಶಿಕ್ಷಿಸುವ ಪ್ರಕಾರ ನಿನ್ನ ದೇವರಾದ ಕರ್ತನು ನಿನ್ನನ್ನು ಶಿಕ್ಷಿಸುತ್ತಾನೆಂದು ನಿನ್ನ ಹೃದಯದಲ್ಲಿ ತಿಳು ಕೊಳ್ಳಬೇಕು.
- Job 33:16–25 ಯೋಬನು 33:16–25ಆತನು ಮನುಷ್ಯರ ಕಿವಿಗಳನ್ನು ತೆರೆದು ಶಿಕ್ಷಣದ ಮಾತು ಗಳನ್ನು ಅವರಿಗೆ ಮುದ್ರೆಹಾಕುತ್ತಾನೆ. ಮನುಷ್ಯ ನನ್ನು ಅವನ ಉದ್ದೇಶದಿಂದ ತೊಲಗಿಸುವದಕ್ಕೂ ಮನುಷ್ಯನ ಗರ್ವವನ್ನು ಅಡಗಿಸುವದಕ್ಕೂ ಹಾಗೆ ಮಾಡುತ್ತಾನೆ. ಅವನ ಪ್ರಾಣವನ್ನು ಕುಣಿಯಿಂದ ಲೂ ಅವನ ಜೀವವನ್ನು ಕತ್ತಿಯಿಂದ ನಾಶವಾಗದ ಹಾಗೆಯೂ ಕಾಪಾಡುತ್ತಾನೆ. ಅವನು ತನ್ನ ಹಾಸಿಗೆಯಲ್ಲಿ ನೋವಿನಿಂದ ಶಿಕ್ಷಿಸ ಲ್ಪಡುತ್ತಾನೆ; ಅವನ ಎಲುಬುಗಳಿಗೆಲ್ಲಾ ಕಠಿಣವಾದ ನೋವು ಉಂಟು. ಅವನ ಜೀವಕ್ಕೆ ರೊಟ್ಟಿಯೂ ಅವನ ಪ್ರಾಣಕ್ಕೆ ಸವಿ ಊಟವೂ ಅಸಹ್ಯವಾಗಿವೆ. ಅವನ ಶರೀರವು ಕಾಣದ ಹಾಗೆ ಸವೆಯುತ್ತದೆ; ಕಾಣದಿದ್ದ ಅವನ ಎಲುಬುಗಳು ಬೈಲಾಗುತ್ತವೆ. ಹೌದು, ಅವನ ಆತ್ಮವು ಸಮಾಧಿಗೂ ಅವನ ಪ್ರಾಣವು ನಾಶಮಾಡುವವರ ಸವಿಾಪಕ್ಕೂ ಎಳೆಯಲ್ಪ ಡುತ್ತದೆ. ಸಹಸ್ರ ಜನರಲ್ಲಿ ಒಬ್ಬನಾದ ಮಧ್ಯಸ್ಥ ನಾಗಿರುವ ದೂತನು ಮನುಷ್ಯನಿಗೆ ಅವನ ಯಥಾರ್ಥ ತೆಯನ್ನು ತಿಳಿಸುವದಕ್ಕೆ ಅವನ ಬಳಿಯಲ್ಲಿದ್ದರೆ, ಆಗ ಆತನು ಅವನಿಗೆ ಕೃಪಾಳುವಾಗಿದ್ದು ಕುಣಿಗೆ ಇಳಿಯು ವದರಿಂದ ಅವನನ್ನು ಬಿಡಿಸುತ್ತಾನೆ; ನಾನು ವಿಮೋ ಚನೆಯ ಕ್ರಯವನ್ನು ಕಂಡುಕೊಂಡೆನು. ಆಗ ಅವನ ಶರೀರವು ಮಗುವಿನ ಶರೀರಕ್ಕಿಂತ ಮೃದುವಾಗಿರು ವದು; ಅವನು ತನ್ನ ಯೌವನ ದಿವಸಗಳಿಗೆ ತಿರುಗಿ ಕೊಳ್ಳುವನು.
- Micah 6:9 ಮೀಕ 6:9ಕರ್ತನ ಸ್ವರವು ಪಟ್ಟಣಕ್ಕೆ ಕೂಗುತ್ತದೆ, ಮತ್ತು ಬುದ್ಧಿವಂತನು ನಿನ್ನ ಹೆಸರನ್ನು ನೋಡುವನು; ಬೆತ್ತ ವನ್ನೂ ಅದನ್ನು ನೇಮಿಸಿದವನನ್ನೂ ಕೇಳಿರಿ.