Psalms · chapter 94 · verse 14
Psalm 94:14 in Kannada
ಕರ್ತನು ತನ್ನ ಜನರನ್ನು ತೊರೆಯನು; ಇಲ್ಲವೆ ತನ್ನ ಸ್ವಾಸ್ಥ್ಯವನ್ನು ಬಿಟ್ಟುಬಿಡನು.
Kartanu tanna janarannu toreyanu; illave tanna svaasthyavannu bittubidanu.
Psalm 94:14 in English
- King James Version (KJV)
- For the LORD will not cast off his people, neither will he forsake his inheritance.
- World English Bible (WEB)
- For the LORD won’t reject his people, neither will he forsake his inheritance.
- American Standard Version (ASV)
- For Jehovah will not cast off his people, Neither will he forsake his inheritance.
- Bible in Basic English (BBE)
- The Lord will not give up his people, or take away his support from his heritage;
- Darby Translation (DBY)
- For Jehovah will not cast off his people, neither will he forsake his inheritance;
- Webster's Bible (WBS)
- For the LORD will not cast off his people, neither will he forsake his inheritance.
- Young's Literal Translation (YLT)
- For Jehovah leaveth not His people, And His inheritance forsaketh not.
Read in context
- 12ಓ ಕರ್ತನೇ, ನೀನು ಶಿಕ್ಷಿಸುವವನೂ ನಿನ್ನ ನ್ಯಾಯ ಪ್ರಮಾಣದಿಂದ ಯಾರಿಗೆ ಕಲಿಸುವಿಯೋ ಅವನು ಧನ್ಯನು.
- 13ದುಷ್ಟನಿಗಾಗಿ ಕುಣಿಯು ಅಗಿಯಲ್ಪಡುವ ವರೆಗೆ ಕಷ್ಟದ ದಿವಸಗಳಲ್ಲಿ ಅಂಥವನಿಗೆ ವಿಶ್ರಾಂತಿ ಯನ್ನು ಕೊಡುವನು.
- 14ಕರ್ತನು ತನ್ನ ಜನರನ್ನು ತೊರೆಯನು; ಇಲ್ಲವೆ ತನ್ನ ಸ್ವಾಸ್ಥ್ಯವನ್ನು ಬಿಟ್ಟುಬಿಡನು.
- 15ನ್ಯಾಯವು ನೀತಿಗೆ ತಿರುಗಿಕೊಳ್ಳುವದು; ಯಥಾರ್ಥ ಹೃದಯದವರೆಲ್ಲರು ಅದನ್ನು ಹಿಂಬಾಲಿಸುವರು.
- 16ನನಗೋಸ್ಕರ ದುರ್ಮಾರ್ಗಿಗಳಿಗೆ ವಿರೋಧ ವಾಗಿ ಏಳುವವನ್ಯಾರು? ಇಲ್ಲವೆ ಅಪರಾಧ ಮಾಡು ವವರಿಗೆ ವಿರೋಧವಾಗಿ ನನಗೋಸ್ಕರ ನಿಂತು ಕೊಳ್ಳುವವನಾರು?
Cross references
- 1 Samuel 12:22 1 ಸಮುವೇಲನು 12:22ನಿಮ್ಮನ್ನು ತನ್ನ ಜನರಾಗಿ ಮಾಡಿಕೊಳ್ಳಲು ಇಚ್ಛೈಸಿದ್ದಾನಲ್ಲಾ! ಇದಲ್ಲದೆ ನಾನು ನಿಮಗೋಸ್ಕರ ಪ್ರಾರ್ಥನೆ ಮಾಡದೆ ಕರ್ತನಿಗೆ ವಿರೋಧವಾಗಿ ಮಾಡುವ ಪಾಪವು ನನಗೆ ದೂರವಾಗಿರಲಿ.
- Romans 11:1–2 ರೋಮಾಪುರದವರಿಗೆ 11:1–2ಹಾಗಾದರೆ--ದೇವರು ತನ್ನ ಪ್ರಜೆಯನ್ನು ತಳ್ಳಿಬಿಟ್ಟದ್ದುಂಟೇ ಎಂದು ನಾನು ಕೇಳುತ್ತೇನೆ. ಹಾಗೆ ಎಂದಿಗೂ ಹೇಳಬಾರದು. ಯಾಕಂದರೆ ನಾನು ಸಹ ಇಸ್ರಾಯೇಲ್ಯನು. ಅಬ್ರ ಹಾಮನ ಸಂತತಿಯವನು, ಬೆನ್ಯಾವಿಾನನ ಗೋತ್ರ ದವನು ಆಗಿದ್ದೇನಲ್ಲಾ. ದೇವರು ಮುಂದಾಗಿ ಅರಿತುಕೊಂಡಿದ್ದ ತನ್ನ ಜನರನ್ನು ತಳ್ಳಿಹಾಕಲಿಲ್ಲ. ಎಲೀಯನ ವಿಷಯವಾಗಿಯಾದರೋ ಅವನು ಇಸ್ರಾಯೇಲ್ಯರಿಗೆ ವಿರೋಧವಾಗಿ ದೇವರಿಗೆ ವಿಜ್ಞಾಪನೆ ಮಾಡುತ್ತಾ--
- Psalm 37:28 ಕೀರ್ತನೆಗಳು 37:28ಕರ್ತನು ನ್ಯಾಯವನ್ನು ಪ್ರೀತಿಮಾಡುತ್ತಾನೆ; ತನ್ನ ಪರಿಶುದ್ಧರನ್ನು ತೊರೆದುಬಿಡನು; ಅವರು ಯುಗ ಯುಗಕ್ಕೂ ಕಾಪಾಡಲ್ಪಡುವರು; ಆದರೆ ದುಷ್ಟರ ಸಂತತಿಯು ಕಡಿದುಹಾಕಲ್ಪಡುವದು.
- Deuteronomy 32:9 ಧರ್ಮೋಪದೇಶಕಾಂಡ 32:9ಕರ್ತನ ಪಾಲು ಆತನ ಜನವೇ; ಯಾಕೋಬು ಆತನ ಸ್ವಾಸ್ತ್ಯದ ಪಾಲು.
- John 10:27–31 ಯೋಹಾನನು 10:27–31ನನ್ನ ಕುರಿಗಳು ನನ್ನ ಸ್ವರಕ್ಕೆ ಕಿವಿಗೊಡುತ್ತವೆ, ನಾನು ಅವುಗಳನ್ನು ಬಲ್ಲೆನು; ಅವು ನನ್ನನ್ನು ಹಿಂಬಾಲಿಸುತ್ತವೆ. ನಾನು ಅವುಗಳಿಗೆ ನಿತ್ಯಜೀವವನ್ನು ಕೊಡುತ್ತೇನೆ; ಅವು ಎಂದಿಗೂ ನಾಶವಾಗುವದಿಲ್ಲ; ಇಲ್ಲವೆ ಅವು ಗಳನ್ನು ಯಾವನೂ ನನ್ನ ಕೈಯೊಳಗಿಂದ ಕಸಕೊಳ್ಳ ಲಾರನು. ಅವುಗಳನ್ನು ನನಗೆ ಕೊಟ್ಟ ನನ್ನ ತಂದೆಯು ಎಲ್ಲರಿಗಿಂತಲೂ ದೊಡ್ಡವನು; ನನ್ನ ತಂದೆಯ ಕೈಯೊಳ ಗಿಂದ ಅವುಗಳನ್ನು ಯಾವನೂ ಕಸಕೊಳ್ಳಲಾರನು. ನಾನು ಮತ್ತು ನನ್ನ ತಂದೆಯು ಒಂದಾಗಿದ್ದೇವೆ ಎಂದು ಉತ್ತರಕೊಟ್ಟನು. ಆಗ ಯೆಹೂದ್ಯರು ತಿರಿಗಿ ಆತನನ್ನು ಕೊಲ್ಲುವ ದಕ್ಕಾಗಿ ಕಲ್ಲುಗಳನ್ನು ತಕ್ಕೊಂಡರು.
- Hebrews 13:5 ಇಬ್ರಿಯರಿಗೆ 13:5ನಿಮ್ಮ ನಡತೆಯು ದ್ರವ್ಯಾಶೆ ಯಿಲ್ಲದ್ದಾಗಿರಲಿ; ನಿಮಗಿರುವವುಗಳಲ್ಲಿ ತೃಪ್ತರಾಗಿರ್ರಿ; ಯಾಕಂದರೆ--ನಾನು ನಿನ್ನನ್ನು ಎಂದಿಗೂ ಕೈಬಿಡುವದಿಲ್ಲ ಇಲ್ಲವೆ ತೊರೆಯುವದಿಲ್ಲವೆಂದು ಆತನು ಹೇಳಿದ್ದಾನೆ.
- Ephesians 1:18 ಎಫೆಸದವರಿಗೆ 1:18ಆತನು ನಿಮ್ಮ ಮನೋನೇತ್ರಗಳನ್ನು ಬೆಳಗಿಸಿ ಆತನ ಕರೆಯು ವಿಕೆಯ ನಿರೀಕ್ಷೆಯು ಎಂಥದೆಂಬದನ್ನೂ ಪರಿಶುದ್ಧ ರಲ್ಲಿರುವ ಆತನ ಸ್ವಾಸ್ಥ್ಯದ ಮಹಿಮಾತಿಶಯವು ಎಂಥದೆಂಬದನ್ನೂ
- Isaiah 49:14–15 ಯೆಶಾಯ 49:14–15ಆದರೆ ಚೀಯೋನು--ಕರ್ತನು ನನ್ನನ್ನು ತಳ್ಳಿ ಬಿಟ್ಟಿದ್ದಾನೆ ಮತ್ತು ನನ್ನ ಕರ್ತನು ನನ್ನನ್ನು ಮರೆತು ಬಿಟ್ಟಿದ್ದಾನಲ್ಲಾ ಎಂದು ಅಂದುಕೊಂಡಳು. ತನ್ನ ಗರ್ಭದ ಮಗನ ಮೇಲೆ ಕರುಣಿಸದೆ ಒಬ್ಬ ಹೆಂಗಸು ತನ್ನ ಮೊಲೇ ಕೂಸನ್ನು ಮರೆತಾಳೇ? ಹೌದು, ಅವಳು ಮರೆಯಬಹುದು, ಆದರೂ ನಾನು ನಿನ್ನನ್ನು ಮರೆ ಯುವದಿಲ್ಲ.
- Romans 8:30 ರೋಮಾಪುರದವರಿಗೆ 8:30ಇದಲ್ಲದೆ ಯಾರನ್ನು ಮೊದಲು ನೇಮಿಸಿ ದನೋ ಅವರನ್ನು ಕರೆದನು; ಯಾರನ್ನು ಕರೆದನೋ ಅವರನ್ನು ನೀತಿವಂತರೆಂದು ನಿರ್ಣಯಿಸಿದನು; ಯಾರನ್ನು ನೀತಿವಂತರೆಂದು ನಿರ್ಣಯಿಸಿದನೋ ಅವರನ್ನು ಮಹಿಮೆಪಡಿಸಿದನು.
- Jeremiah 32:39–40 ಯೆರೆಮೀಯ 32:39–40ಅವರಿಗೂ ಅವರ ತರುವಾಯ ಅವರ ಮಕ್ಕಳಿಗೂ ಒಳ್ಳೇದಕ್ಕಾಗಿ ಅವರು ಯಾವಾಗಲೂ ನನಗೆ ಭಯ ಪಡುವ ಹಾಗೆ ಅವರಿಗೆ ಒಂದೇ ಹೃದಯವನ್ನೂ ಒಂದೇ ಮಾರ್ಗವನ್ನೂ ಕೊಡುವೆನು. ಅವರಿಗೆ ಒಳ್ಳೇದನ್ನು ಮಾಡುವ ಹಾಗೆ ನಾನು ತಿರುಗಿಸಿ ಬಿಡೆನೆಂದು ನಿತ್ಯವಾದ ಒಡಂಬಡಿಕೆಯನ್ನು ಅವರ ಸಂಗಡ ಮಾಡುತ್ತೇನೆ; ಅವರು ನನ್ನನ್ನು ಬಿಡದ ಹಾಗೆ ನನ್ನ ಭಯವನ್ನು ಅವರ ಹೃದಯಗಳಲ್ಲಿ ಇಡುತ್ತೇನೆ.
- Romans 8:38–39 ರೋಮಾಪುರದವರಿಗೆ 8:38–39ಹೇಗಂದರೆ ಮರಣವಾಗಲಿ ಜೀವವಾಗಲಿ ದೂತರಾಗಲಿ ರಾಜತ್ವಗಳಾಗಲಿ ಅಧಿಕಾರಗಳಾಗಲಿ ಈಗಿನವುಗಳಾ ಗಲಿ ಮುಂಬರುವವುಗಳಾಗಲಿಉನ್ನತವಾಗಲಿ ಅಗಾಧವಾಗಲಿ ಬೇರೆ ಯಾವ ಸೃಷ್ಟಿಯಾಗಲಿ ನಮ್ಮನ್ನು ನಮ್ಮ ಕರ್ತನಾದ ಕ್ರಿಸ್ತ ಯೇಸುವಿನಲ್ಲಿರುವ ದೇವರ ಪ್ರೀತಿಯಿಂದ ಅಗಲಿಸಲಾರವೆಂದು ನನಗೆ ನಿಶ್ಚಯ ಉಂಟು. ಉನ್ನತವಾಗಲಿ ಅಗಾಧವಾಗಲಿ ಬೇರೆ ಯಾವ ಸೃಷ್ಟಿಯಾಗಲಿ ನಮ್ಮನ್ನು ನಮ್ಮ ಕರ್ತನಾದ ಕ್ರಿಸ್ತ ಯೇಸುವಿನಲ್ಲಿರುವ ದೇವರ ಪ್ರೀತಿಯಿಂದ ಅಗಲಿಸಲಾರವೆಂದು ನನಗೆ ನಿಶ್ಚಯ ಉಂಟು.
- Psalm 34:12 ಕೀರ್ತನೆಗಳು 34:12ಒಳ್ಳೆಯದನ್ನು ನೋಡುವಂತೆ ದಿವಸಗಳನ್ನು ಪ್ರೀತಿ ಮಾಡಿ, ಜೀವವನ್ನು ಕೋರುವ ಮನುಷ್ಯನು ಯಾರು?