Psalms · chapter 94 · verse 16
Psalm 94:16 in Kannada
ನನಗೋಸ್ಕರ ದುರ್ಮಾರ್ಗಿಗಳಿಗೆ ವಿರೋಧ ವಾಗಿ ಏಳುವವನ್ಯಾರು? ಇಲ್ಲವೆ ಅಪರಾಧ ಮಾಡು ವವರಿಗೆ ವಿರೋಧವಾಗಿ ನನಗೋಸ್ಕರ ನಿಂತು ಕೊಳ್ಳುವವನಾರು?
Nanagoskara durmaargigalige virodha vaagi eluvavanyaaru? Illave aparaadha maadu vavarige virodhavaagi nanagoskara nintu kolluvavanaaru?
Psalm 94:16 in English
- King James Version (KJV)
- Who will rise up for me against the evildoers? [or] who will stand up for me against the workers of iniquity?
- World English Bible (WEB)
- Who will rise up for me against the wicked? Who will stand up for me against the evildoers?
- American Standard Version (ASV)
- Who will rise up for me against the evil-doers? Who will stand up for me against the workers of iniquity?
- Bible in Basic English (BBE)
- Who will give me help against the sinners? and who will be my support against the workers of evil?
- Darby Translation (DBY)
- Who will rise up for me against the evil-doers? who will stand for me against the workers of iniquity?
- Webster's Bible (WBS)
- Who will rise up for me against the evil-doers? [or] who will stand up for me against the workers of iniquity?
- Young's Literal Translation (YLT)
- Who riseth up for me with evil doers? Who stationeth himself for me with workers of iniquity?
Read in context
- 14ಕರ್ತನು ತನ್ನ ಜನರನ್ನು ತೊರೆಯನು; ಇಲ್ಲವೆ ತನ್ನ ಸ್ವಾಸ್ಥ್ಯವನ್ನು ಬಿಟ್ಟುಬಿಡನು.
- 15ನ್ಯಾಯವು ನೀತಿಗೆ ತಿರುಗಿಕೊಳ್ಳುವದು; ಯಥಾರ್ಥ ಹೃದಯದವರೆಲ್ಲರು ಅದನ್ನು ಹಿಂಬಾಲಿಸುವರು.
- 16ನನಗೋಸ್ಕರ ದುರ್ಮಾರ್ಗಿಗಳಿಗೆ ವಿರೋಧ ವಾಗಿ ಏಳುವವನ್ಯಾರು? ಇಲ್ಲವೆ ಅಪರಾಧ ಮಾಡು ವವರಿಗೆ ವಿರೋಧವಾಗಿ ನನಗೋಸ್ಕರ ನಿಂತು ಕೊಳ್ಳುವವನಾರು?
- 17ಕರ್ತನು ನನಗೆ ಸಹಾಯಕ ನಾಗಿರದಿದ್ದರೆ ನನ್ನ ಪ್ರಾಣವು ಮೌನದಲ್ಲಿ ವಾಸಿಸ ಬೇಕಾಗಿತ್ತು.
- 18ನನ್ನ ಕಾಲುಜಾರಿತೋ ಎಂದು ನಾನು ಅಂದಾಗಲೇ ಓ ಕರ್ತನೇ, ನಿನ್ನ ಕರುಣೆಯು ನನ್ನನ್ನು ಎತ್ತಿಹಿಡಿಯಿತು.
Cross references
- Judges 5:23 ನ್ಯಾಯಸ್ಥಾಪಕರು 5:23ನೀವು ಮೇರೋಜನ್ನು ಶಪಿಸಿರಿ; ಅದರ ನಿವಾಸಿಗಳನ್ನು ಕಠಿಣವಾಗಿ ಶಪಿಸಿರಿ ಎಂದು ಕರ್ತನ ದೂತನು ಹೇಳುತ್ತಾನೆ; ಯಾಕಂದರೆ ಅವರು ಕರ್ತನ ಸಹಾಯಕ್ಕೂ ಪರಾಕ್ರಮಶಾಲಿಗಳಿಗೆ ವಿರೋ ಧವಾಗಿ ಕರ್ತನ ಸಹಾಯಕ್ಕೂ ಬಾರದೆ ಹೋದರು.
- 3 John 1:8 3 ಯೋಹಾನನು 1:8ಆದದರಿಂದ ನಾವು ಸತ್ಯಕ್ಕೆ ಸಹಕಾರಿಗಳಾಗುವಂತೆ ಅಂಥವರನ್ನು ಸೇರಿಸಿಕೊಳ್ಳುವ ಹಂಗಿನಲ್ಲಿದ್ದೇವೆ.
- John 7:50–51 ಯೋಹಾನನು 7:50–51ನಿಕೊದೇಮನು ಅವರಿಗೆ--(ರಾತ್ರಿಯಲ್ಲಿ ಯೇಸುವಿನ ಬಳಿಗೆ ಬಂದಿದ್ದ ಇವನು ಅವರಲ್ಲಿ ಒಬ್ಬ ನಾಗಿದ್ದನು.) ಒಬ್ಬನನ್ನು ವಿಚಾರಿಸಿ ಅವನು ಮಾಡು ವದೇನೆಂದು ತಿಳಿದುಕೊಳ್ಳುವದಕ್ಕಿಂತ ಮುಂಚೆ ಅವ ನನ್ನು ನಮ್ಮ ನ್ಯಾಯಪ್ರಮಾಣವು ತೀರ್ಪು ಮಾಡುವ ದುಂಟೇ ಅಂದನು.
- Numbers 25:6–13 ಅರಣ್ಯಕಾಂಡ 25:6–13ಇಗೋ, ಇಸ್ರಾಯೇಲ್ ಮಕ್ಕಳಲ್ಲಿ ಒಬ್ಬನು ಬಂದು ಮೋಶೆಗೂ ಸಭೆಯ ಗುಡಾರದ ಮುಂದೆ ಅಳುತ್ತಿರುವ ಇಸ್ರಾಯೇಲ್ ಮಕ್ಕಳ ಸಮಸ್ತ ಸಭೆಗೂ ಕಾಣುವ ಹಾಗೆ ತನ್ನ ಸಹೋದರರೊಳಗೆ ಒಬ್ಬ ಮಿದ್ಯಾನ್ ಸ್ತ್ರೀಯನ್ನು ತಂದನು. ಆರೋನನ ಮಗನಾಗಿದ್ದ ಎಲೀಯಾಜರನ ಮಗನಾದ ಫೀನೆಹಾಸನೆಂಬ ಯಾಜಕನು ಅದನ್ನು ನೋಡಿ ಸಭೆಯ ಮಧ್ಯದಿಂದ ಎದ್ದು ತನ್ನ ಕೈಯಲ್ಲಿ ಭಲ್ಲೆಯನ್ನು ಹಿಡುಕೊಂಡು ಇಸ್ರಾಯೇಲಿನವನಾದ ಆ ಮನುಷ್ಯನ ಹಿಂದೆ ಡೇರೆಯೊಳಗೆ ಪ್ರವೇಶಿಸಿ ಇಸ್ರಾಯೇಲಿನವನನ್ನೂ ಆ ಸ್ತ್ರೀಯನ್ನೂ ಇಬ್ಬರ ಹೊಟ್ಟೆಯನ್ನು ತಿವಿದನು; ಹೀಗೆ ಇಸ್ರಾಯೇಲ್ ಮಕ್ಕಳಿಗೆ ಉಂಟಾಗಿದ್ದ ವ್ಯಾಧಿಯು ನಿಂತುಹೋಯಿತು. ಆದರೆ ವ್ಯಾಧಿ ಯಿಂದ ಸತ್ತವರು ಇಪ್ಪತ್ತುನಾಲ್ಕು ಸಾವಿರ ಮಂದಿಯಾಗಿದ್ದರು. ಆಗ ಕರ್ತನು ಮೋಶೆಗೆ-- ಆರೋನನ ಮೊಮ್ಮಗನೂ ಎಲ್ಲಾಜಾರನ ಮಗನಾದ ಯಾಜಕ ನಾಗಿರುವ ಫೀನೆಹಾಸನು ಇಸ್ರಾಯೇಲಿನ ಮಕ್ಕಳಲ್ಲಿ ನನಗೋಸ್ಕರ ಆಸಕ್ತನಾಗಿದ್ದು ನಾನು ನನ್ನ ರೋಷದಿಂದ ಅವರನ್ನು ನಾಶಮಾಡದ ಹಾಗೆ ನನ್ನ ಕೋಪವನ್ನು ಅವರ ಮೇಲಿನಿಂದ ತಿರುಗಿಸಿ ಬಿಟ್ಟಿದ್ದಾನೆ. ಆದ ಕಾರಣ--ಇಗೋ, ನಾನು ಅವನೊಂದಿಗೆ ನನ್ನ ಸಮಾಧಾನದ ಒಡಂಬಡಿಕೆಯನ್ನು ಮಾಡುತ್ತೇನೆ ಎಂದು ಹೇಳು. ಅವನು ತನ್ನ ದೇವರಿಗೋಸ್ಕರ ಆಸಕ್ತನಾಗಿದ್ದು ಇಸ್ರಾಯೇಲಿನ ಮಕ್ಕಳಿಗೋಸ್ಕರ ಪಾಪ ಪ್ರಾಯಶ್ಚಿತ್ತ ಮಾಡಿದ್ದರಿಂದ ಅವನಿಗೂ ಅವನ ಹಿಂದೆ ಬರುವ ಅವನ ಸಂತತಿಗೂ ನಿತ್ಯ ಯಾಜಕತ್ವದ ಒಡಂಬಡಿಕೆಯಾಗಿರುವದು ಎಂದು ಹೇಳಿದನು.
- Jeremiah 5:1 ಯೆರೆಮೀಯ 5:1ಯೆರೂಸಲೇಮಿನ ಬೀದಿಗಳಲ್ಲಿ ಅತ್ತಿತ್ತ ಓಡಾಡಿ ನ್ಯಾಯವನ್ನು ಮಾಡುವವನೂ ಸತ್ಯವನ್ನು ಹುಡುಕುವವನೂ ನಿಮಗೆ ಒಬ್ಬನಾದರೂ ಸಿಕ್ಕುವನೋ? ಅವಳ ವಿಶಾಲ ಸ್ಥಳಗಳಲ್ಲಿ ನೋಡಿ ತಿಳಿದು ಹುಡುಕಿರಿ. ಸಿಕ್ಕಿದರೆ ಅವಳಿಗೆ ಮನ್ನಿಸುವೆನು.
- Isaiah 63:5 ಯೆಶಾಯ 63:5ನಾನು ನೋಡಲು ಸಹಾಯಕರು ಯಾರೂ ಇರಲಿಲ್ಲ; ಉದ್ಧಾರ ಮಾಡುವವನು ಇಲ್ಲದ್ದರಿಂದ ಆಶ್ಚರ್ಯಪಟ್ಟೆನು; ಆದದರಿಂದ ನನ್ನ ಸ್ವಂತ ಬಾಹುವು ನನಗೆ ರಕ್ಷಣೆಯನ್ನುಂಟುಮಾಡಿತು; ನನ್ನ ರೋಷವು ನನ್ನನ್ನು ಮೆಲಕ್ಕೆತ್ತಿತು.
- Psalm 59:2 ಕೀರ್ತನೆಗಳು 59:2ಅಪರಾಧ ಮಾಡುವವರಿಂದ ನನ್ನನ್ನು ಬಿಡಿಸು; ಕೊಲೆಪಾತಕರಿಂದ ನನ್ನನ್ನು ರಕ್ಷಿಸು.
- Exodus 32:26–29 ವಿಮೋಚನಕಾಂಡ 32:26–29ಅವನು ಪಾಳೆಯದ ಬಾಗಿಲಲ್ಲಿ ನಿಂತುಕೊಂಡು--ಕರ್ತನ ಪಕ್ಷದವನು ಯಾರು ಅವನು ನನ್ನ ಬಳಿಗೆ ಬರಲಿ ಅಂದನು. ಆಗ ಲೇವಿಯ ಕುಮಾರರೆಲ್ಲರು ಅವನ ಬಳಿಗೆ ಕೂಡಿ ಬಂದರು. ಅವನು ಅವರಿಗೆ--ಇಸ್ರಾಯೇಲಿನ ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಪ್ರತಿಯೊಬ್ಬನು ತನ್ನ ಕತ್ತಿಯನ್ನು ಸೊಂಟಕ್ಕೆ ಕಟ್ಟಿಕೊಂಡು ಪಾಳೆಯದಲ್ಲೆಲ್ಲಾ ಒಳಗಿನಿಂದ ಹೊರಕ್ಕೆ ದ್ವಾರದಿಂದ ದ್ವಾರಕ್ಕೆ ಹೋಗಿ ತನ್ನ ಸಹೋದರನನ್ನೂ ತನ್ನ ಜೊತೆಗಾರನನ್ನೂ ತನ್ನ ನೆರೆಯವನನ್ನೂ ಕೊಲ್ಲಲಿ ಎಂದು ಹೇಳಿದನು. ಲೇವಿಯ ಮಕ್ಕಳು ಮೋಶೆಯ ಮಾತಿನಂತೆ ಮಾಡಿದರು. ಆ ದಿನದಲ್ಲಿ ಜನರೊಳಗೆ ಹೆಚ್ಚು ಕಡಿಮೆ ಮೂರುಸಾವಿರ ಜನರು ಸತ್ತರು. ಮೋಶೆಯು--ಈ ದಿನ ಆತನು ನಿಮ್ಮ ಮೇಲೆ ತನ್ನ ಆಶೀರ್ವಾದವನ್ನು ಅನುಗ್ರಹಿಸುವಂತೆ ನಿಮ್ಮಲ್ಲಿ ಪ್ರತಿಯೊಬ್ಬನು ತನ್ನ ಮಗನಿಗೋಸ್ಕರವೂ ತನ್ನ ಸಹೋದರನಿಗೋಸ್ಕರವೂ ಈ ದಿನ ಕರ್ತನಿಗೆ ಪ್ರತಿಷ್ಠೆ ಮಾಡಿಕೊಳ್ಳಲಿ ಅಂದನು.
- 2 Kings 10:15 2 ಅರಸುಗಳು 10:15ಯೇಹುವು ಅಲ್ಲಿಂದ ಹೋಗಿ ತನ್ನನ್ನು ಎದುರು ಗೊಳ್ಳಲು ರೇಕಾಬನ ಮಗನಾದ ಯೆಹೋನಾದಾ ಬನನ್ನು ಕಂಡು ಅವನನ್ನು ವಂದಿಸಿ ಅವನಿಗೆ--ನನ್ನ ಹೃದಯವು ನಿನ್ನ ಹೃದಯದೊಂದಿಗೆ ಇರುವಂತೆ ನಿನ್ನ ಹೃದಯವು ನನ್ನೊಂದಿಗೆ ಸರಿಯಾಗಿದೆಯೋ ಅಂದನು. ಯೆಹೋನಾದಾಬನು--ಅದೆ ಅಂದನು. ಹಾಗಾದರೆ ನಿನ್ನ ಕೈಕೊಡು ಅಂದನು. ಇವನು ತನ್ನ ಕೈಕೊಟ್ಟನು. ತನ್ನ ಬಳಿಗೆ ರಥದ ಮೇಲೆ ಏರಿಸಿಕೊಂಡು ಅವ ನಿಗೆ--
- Jeremiah 26:16–19 ಯೆರೆಮೀಯ 26:16–19ಆಗ ಪ್ರಧಾನರೂ ಜನರೆಲ್ಲರೂ ಯಾಜಕರಿಗೂ ಪ್ರವಾದಿಗಳಿಗೂ--ಈ ಮನುಷ್ಯನು ಮರಣದ ನಿರ್ಣ ಯಕ್ಕೆ ತಕ್ಕವನಲ್ಲ; ನಮ್ಮ ದೇವರಾದ ಕರ್ತನ ಹೆಸರಿ ನಲ್ಲಿ ನಮ್ಮ ಸಂಗಡ ಮಾತನಾಡಿದ್ದಾನೆ ಅಂದರು. ದೇಶದ ಹಿರಿಯರಲ್ಲಿ ಕೆಲವರು ಎದ್ದು ಜನರ ಕೂಟ ಕ್ಕೆಲ್ಲಾ ಹೇಳಿದ್ದೇನಂದರೆ-- ಮೋರೇಷೆತಿನವನಾದ ವಿಾಕಾಯನು ಯೆಹೂದದ ಅರಸನಾದ ಹಿಜ್ಕೀಯನ ದಿನಗಳಲ್ಲಿ ಪ್ರವಾದಿಸಿ ಯೆಹೂದದ ಜನರಿಗೆಲ್ಲಾ ಹೇಳಿದ್ದೇನಂದರೆ--ಸೈನ್ಯಗಳ ಕರ್ತನು ಹೀಗೆ ಹೇಳು ತ್ತಾನೆ--ಚೀಯೋನು ಹೊಲದ ಹಾಗೆ ಉಳಲ್ಪಡು ವದು; ಯೆರೂಸಲೇಮು ದಿಬ್ಬಗಳಾಗುವದು; ಮಂದಿ ರದ ಬೆಟ್ಟವು ಅಡವಿಯ ಉನ್ನತ ಸ್ಥಳವಾಗುವದು. ಅವನನ್ನು ಯೆಹೂದ ಅರಸನಾದ ಹಿಜ್ಕೀಯನೂ ಸಮಸ್ತ ಯೆಹೂದವೂ ಕೊಂದುಹಾಕಿದರೋ? ಅವನು ಕರ್ತನಿಗೆ ಭಯಪಟ್ಟು ಕರ್ತನ ಸಮ್ಮುಖದಲ್ಲಿ ಮೊರೆ ಯಿಟ್ಟನಲ್ಲವೋ? ಆ ಮೇಲೆ ಕರ್ತನು ಅವರಿಗೆ ವಿರೋಧವಾಗಿ ಮಾತನಾಡಿದ ಕೇಡಿನ ವಿಷಯದಲ್ಲಿ ಪಶ್ಚಾತ್ತಾಪಪಡಲಿಲ್ಲವೋ? ಆದರೆ ನಾವು ದೊಡ್ಡ ಕೇಡನ್ನು ನಮ್ಮ ಪ್ರಾಣಗಳ ಮೇಲೆ ತಂದುಕೊಳ್ಳಬಹುದು.
- 2 Kings 9:32 2 ಅರಸುಗಳು 9:32ಅವನು ತನ್ನ ಮುಖವನ್ನು ಆ ಕಿಟಕಿಯ ಕಡೆಗೆ ಎತ್ತಿ--ನನ್ನ ಕಡೆ ಇರುವವರು ಯಾರು ಅಂದನು. ಆಗ ಇಬ್ಬರು ಮೂವರು ಕಂಚುಕಿಗಳು ಆ ಕಿಟಕಿ ಯಲ್ಲಿಂದ ಅವನನ್ನು ನೋಡಿದರು.
- Numbers 10:35 ಅರಣ್ಯಕಾಂಡ 10:35ಇದ ಲ್ಲದೆ ಮಂಜೂಷವು ಹೊರಡುವಾಗ ಮೋಶೆಯುಕರ್ತನೇ, ಎದ್ದೇಳು, ನಿನ್ನ ಶತ್ರುಗಳು ಚದರಿಹೋಗಲಿ; ನಿನ್ನನ್ನು ಹಗೆಮಾಡುವವರು ನಿನ್ನ ಎದುರಿನಿಂದ ಓಡಿ ಹೋಗಲಿ ಎಂದು ಹೇಳಿದನು.ಅದು ಇಳಿದಾಗ ಅವನು--ಓ ಕರ್ತನೇ, ಅನೇಕ ಸಹಸ್ರ ಇಸ್ರಾಯೇ ಲ್ಯರ ಬಳಿಗೆ ಹಿಂದಿರುಗು ಅಂದನು.