Psalms · chapter 94 · verse 19
Psalm 94:19 in Kannada
ನನ್ನ ಚಿಂತೆಗಳು ಅಂತರಂಗದಲ್ಲಿ ಹೆಚ್ಚುವಾಗ ನಿನ್ನ ಆದರಣೆಗಳು ನನ್ನ ಪ್ರಾಣವನ್ನು ಆನಂದಪಡಿಸುತ್ತವೆ.
Nanna chintegalu antarangadalli hechchuvaaga ninna aadaranegalu nanna praanavannu aanandapadisuttave.
Psalm 94:19 in English
- King James Version (KJV)
- In the multitude of my thoughts within me thy comforts delight my soul.
- World English Bible (WEB)
- In the multitude of my thoughts within me, your comforts delight my soul.
- American Standard Version (ASV)
- In the multitude of my thoughts within me Thy comforts delight my soul.
- Bible in Basic English (BBE)
- Among all my troubled thoughts, your comforts are the delight of my soul.
- Darby Translation (DBY)
- In the multitude of my anxious thoughts within me thy comforts have delighted my soul.
- Webster's Bible (WBS)
- In the multitude of my thoughts within me, thy comforts delight my soul.
- Young's Literal Translation (YLT)
- In the abundance of my thoughts within me, Thy comforts delight my soul.
Read in context
- 17ಕರ್ತನು ನನಗೆ ಸಹಾಯಕ ನಾಗಿರದಿದ್ದರೆ ನನ್ನ ಪ್ರಾಣವು ಮೌನದಲ್ಲಿ ವಾಸಿಸ ಬೇಕಾಗಿತ್ತು.
- 18ನನ್ನ ಕಾಲುಜಾರಿತೋ ಎಂದು ನಾನು ಅಂದಾಗಲೇ ಓ ಕರ್ತನೇ, ನಿನ್ನ ಕರುಣೆಯು ನನ್ನನ್ನು ಎತ್ತಿಹಿಡಿಯಿತು.
- 19ನನ್ನ ಚಿಂತೆಗಳು ಅಂತರಂಗದಲ್ಲಿ ಹೆಚ್ಚುವಾಗ ನಿನ್ನ ಆದರಣೆಗಳು ನನ್ನ ಪ್ರಾಣವನ್ನು ಆನಂದಪಡಿಸುತ್ತವೆ.
- 20ವಿಧಿಯಿಂದ ಕೇಡನ್ನು ಕಲ್ಪಿಸುವ ಅಪರಾಧದ ಸಿಂಹಾಸನವು ನಿನ್ನ ಸಂಗಡ ಅನ್ಯೋನ್ಯವಾಗಿರು ವದೋ?
- 21ನೀತಿವಂತನ ಪ್ರಾಣಕ್ಕೆ ವಿರೋಧವಾಗಿ ಅವರು ಕೂಡಿಕೊಳ್ಳುತ್ತಾರೆ; ನಿರಪರಾಧಿಯ ರಕ್ತವನ್ನು ಖಂಡಿಸುತ್ತಾರೆ.
Cross references
- Psalm 61:2 ಕೀರ್ತನೆಗಳು 61:2ನನ್ನ ಹೃದಯವು ಕುಂದಿಹೋಗಿರಲಾಗಿ, ಭೂಮಿಯ ಕಡೇ ಭಾಗದಿಂದ ನಿನ್ನನ್ನು ಕೂಗುವೆನು; ನನಗಿಂತ ಎತ್ತರ ವಾದ ಬಂಡೆಗೆ ನನ್ನನ್ನು ನಡಿಸು.
- 2 Corinthians 1:4–5 2 ಕೊರಿಂಥದವರಿಗೆ 1:4–5ನಮಗೆ ಸಂಭವಿಸುವ ಎಲ್ಲಾ ಸಂಕಟಗಳಲಿನಮಗೆ ಸಂಭವಿಸುವ ಎಲ್ಲಾ ಸಂಕಟಗಳಲಿ ಆತನು ನಮ್ಮನ್ನು ಸಂತೈಸುತ್ತಾನೆ; ಹೀಗೆ ದೇವರಿಂದ ನಮಗಾಗುವ ಆದರಣೆಯ ಮೂಲಕ ನಾವು ನಾನಾ ವಿಧವಾದ ಸಂಕಟಗಳಲ್ಲಿ ಇರುವವರನ್ನು ಸಂತೈಸು ವದಕ್ಕೆ ಶಕ್ತರಾಗುತ್ತೇವೆ. ಕ್ರಿಸ್ತನ ನಿಮಿತ್ತ ನಮಗೆ ಬಾಧೆಗಳು ಹೇಗೆ ಹೇರಳವಾಗಿ ಉಂಟಾಗುತ್ತವೆಯೋ ಹಾಗೆಯೇ ಆದರಣೆಯೂ ಕೂಡ ಕ್ರಿಸ್ತನ ಮೂಲಕ ಹೇರಳವಾಗಿ ಉಂಟಾಗುತ್ತದೆ.
- Psalm 77:2–10 ಕೀರ್ತನೆಗಳು 77:2–10ನನ್ನ ಇಕ್ಕ ಟ್ಟಿನ ದಿವಸದಲ್ಲಿ ಕರ್ತನನ್ನು ಹುಡುಕಿದೆನು; ನಾನು ರಾತ್ರಿಯೆಲ್ಲಾ ವ್ಯಥೆಪಟ್ಟದ್ದರಿಂದ ನನ್ನ ಪ್ರಾಣವು ಆದರಣೆ ಹೊಂದಲೊಲ್ಲದು. ನಾನು ವ್ಯಥೆಪಡುತ್ತಾ ದೇವರನ್ನು ಜ್ಞಾಪಕಮಾಡಿಕೊಂಡೆನು. ನಾನು ಚಿಂತಿ ಸುವದರಿಂದ ನನ್ನ ಆತ್ಮವು ಬಳಲಿ ಹೋಗಿದೆ ಸೆಲಾ. ನನ್ನ ಕಣ್ಣುಗಳನ್ನು ಮುಚ್ಚದಂತೆ ನೀನು ಹಿಡಿಯುತ್ತೀ; ನಾನು ಮಾತಾಡದಂತೆ ಕಳವಳಪಟ್ಟಿದ್ದೇನೆ. ಪುರಾ ತನ ದಿವಸಗಳನ್ನೂ ಆದಿಕಾಲದ ವರುಷಗಳನ್ನೂ ಯೋಚಿಸಿದೆನು. ನನ್ನ ಹಾಡನ್ನು ರಾತ್ರಿಯಲ್ಲಿ ಜ್ಞಾಪಕ ಮಾಡಿಕೊಳ್ಳುತ್ತೇನೆ; ನನ್ನ ಹೃದಯದ ಸಂಗಡ ಮಾತಾ ಡುತ್ತೇನೆ; ನನ್ನ ಆತ್ಮವು ಪರಿಶೋಧನೆ ಮಾಡಿತು. ನಿರಂತರವಾಗಿ ಕರ್ತನು ತಳ್ಳಿಬಿಡುವನೋ? ಇನ್ನು ದಯೆತೋರದೆ ಇರುವನೋ? ಆತನ ಕೃಪೆಯು ಸದಾಕಾಲಕ್ಕೆ ನಿಂತು ಹೋಗುತ್ತದೋ? ನಿರಂತರಕ್ಕೂ ವಾಗ್ದಾನ ತಪ್ಪಿಹೋಗುತ್ತದೋ? ದೇವರು ಕರು ಣಿಸುವದನ್ನು ಮರೆತು ಬಿಟ್ಟಿದ್ದಾನೋ? ತನ್ನ ಅಂತಃ ಕರಣಗಳನ್ನು ಕೋಪದಿಂದ ಮುಚ್ಚಿಕೊಂಡಿದ್ದಾನೋ? ಸೆಲಾ. ಇದೇ ನನ್ನ ಬಲಹೀನತೆ ಎಂದು ನಾನು ಅಂದುಕೊಂಡೆನು. ಮಹೋನ್ನತನ ಬಲಗೈಯ ವರ್ಷ ಗಳನ್ನು ಜ್ಞಾಪಕಮಾಡಿಕೊಳ್ಳುವೆನು;
- Romans 5:2–5 ರೋಮಾಪುರದವರಿಗೆ 5:2–5ಈಗ ನಾವು ನೆಲೆ ಗೊಂಡಿರುವ ಈ ಕೃಪೆಯಲ್ಲಿ ಆತನ ಮುಖಾಂತರವೇ ನಂಬಿಕೆಯಿಂದ ಪ್ರವೇಶವಾದದರಿಂದ ದೇವರ ಮಹಿ ಮೆಯ ನಿರೀಕ್ಷೆಯಲ್ಲಿ ಉಲ್ಲಾಸಿಸುತ್ತೇವೆ. ಇದು ಮಾತ್ರವಲ್ಲದೆ ನಮಗೆ ಉಂಟಾಗುವ ಉಪದ್ರವ ಗಳಲ್ಲಿಯೂ ಹೆಚ್ಚಳ ಪಡುತ್ತೇವೆ; ಉಪದ್ರವದಿಂದ ತಾಳ್ಮೆಯೂ ತಾಳ್ಮೆಯಿಂದ ಅನುಭವವೂ ಅನುಭವ ದಿಂದ ನಿರೀಕ್ಷೆಯೂ ಉಂಟಾಗುತ್ತವೆಂದು ಬಲ್ಲೆವು. ಈ ನಿರೀಕ್ಷೆಯು ನಾಚಿಕೆಪಡಿಸುವದಿಲ್ಲ; ನಮಗೆ ಕೊಡಲ್ಪಟ್ಟಿರುವ ಪವಿತ್ರಾತ್ಮನ ಮೂಲಕವಾಗಿ ದೇವರ ಪ್ರೀತಿಯು ನಮ್ಮ ಹೃದಯಗಳಲ್ಲಿ ಧಾರಾಳವಾಗಿ ಸುರಿದದೆ.
- Habakkuk 3:16–18 ಹಬಕ್ಕೂಕ 3:16–18ನಾನು ಕೇಳಿದಾಗ ನನ್ನ ಹೊಟ್ಟೆಯು ತಳಮಳಗೊಂಡಿತು, ಆ ಶಬ್ದಕ್ಕೆ ನನ್ನ ತುಟಿಗಳು ಅದರಿದವು; ಇಕ್ಕಟ್ಟಿನ ದಿನದಲ್ಲಿ ನಾನು ವಿಶ್ರಾಂತಿಯನ್ನು ಹೊಂದುವ ಹಾಗೆ ಕೊಳೆಯುವಿಕೆಯು ನನ್ನ ಎಲುಬುಗಳಲ್ಲಿ ಸೇರಿತು, ನಾನು ನಿಂತ ಹಾಗೆಯೇ ನಡುಗಿದೆನು; ಆತನು ಜನರ ಬಳಿಗೆ ಬರುವಾಗ ತನ್ನ ಸೈನ್ಯಗಳ ಕೂಡ ಅವರ ಮೇಲೆ ದಾಳಿ ಮಾಡುವನು. ಅಂಜೂರದ ಮರವು ಚಿಗುರ ದಿದ್ದರೂ ದ್ರಾಕ್ಷೇಬಳ್ಳಿಗಳಲ್ಲಿ ಹಣ್ಣು ಇಲ್ಲದಿದ್ದರೂ ಎಣ್ಣೇ ಮರಗಳ ಉತ್ಪತ್ತಿಯು ನಿಂತುಹೋದರೂ ಹೊಲಗಳು ಆಹಾರ ಕೊಡದಿದ್ದರೂ ಹಟ್ಟಿಯೊಳಗಿಂದ ಮಂದೆಗಳು ಕಡಿದು ಬಿಡಲ್ಪಟ್ಟಿದ್ದರೂ ಗೋದಲಿಗಳಲ್ಲಿ ಮಂದೆ ಇಲ್ಲದಿದ್ದರೂ ನಾನು ಕರ್ತನಲ್ಲಿ ಸಂತೋಷಿ ಸುವೆನು, ನನ್ನ ರಕ್ಷಣೆಯ ದೇವರಲ್ಲಿ ಉಲ್ಲಾಸಪಡು ವೆನು.ಕರ್ತನಾದ ದೇವರು ನನ್ನ ಬಲವಾಗಿದ್ದಾನೆ. ಆತನು ನನ್ನ ಕಾಲುಗಳನ್ನು ಜಿಂಕೆಯ ಕಾಲುಗಳ ಹಾಗೆ ಮಾಡಿ ನನ್ನ ಉನ್ನತ ಸ್ಥಳಗಳಲ್ಲಿ ನಾನು ನಡೆಯುವಂತೆ ಆತನು ಮಾಡುವನು. ಪ್ರಧಾನ ಗಾಯಕನ ಕೀರ್ತನ ಸಂಗ್ರಹದಿಂದ ತೆಗೆದದ್ದು: ನನ್ನ ತಂತಿವಾದ್ಯದೊಡನೆ ಹಾಡತಕ್ಕದ್ದು.
- Psalm 63:5–6 ಕೀರ್ತನೆಗಳು 63:5–6ನಾನು ರಾತ್ರಿ ಜಾವಗಳಲ್ಲಿ ನಿನ್ನನ್ನು ಧ್ಯಾನಿಸುವಾಗ ಸಾರದಿಂದಲೂ ಕೊಬ್ಬಿನಿಂದಲೂ ನನ್ನ ಪ್ರಾಣವು ತೃಪ್ತಿಯಾಗುವದು; ಆಗ ನನ್ನ ಬಾಯಿಯು ಉತ್ಸಾಹದ ತುಟಿಗಳಿಂದ ನಿನ್ನನ್ನು ಸ್ತುತಿಸುವದು.
- 1 Peter 1:7–8 1 ಪೇತ್ರನು 1:7–8ಭಂಗಾರವು ನಾಶವಾಗುವಂಥದ್ದಾಗಿದ್ದರೂ ಅದನ್ನು ಬೆಂಕಿಯಿಂದ ಶೋಧಿಸುವದುಂಟಷ್ಟೆ. ಭಂಗಾರಕ್ಕಿಂತ ಬಹು ಅಮೂಲ್ಯವಾಗಿರುವ ನಿಮ್ಮ ನಂಬಿಕೆಯು ಈ ಕಷ್ಟಗಳಿಂದ ಶೋಧಿತವಾಗಿ ಯೇಸು ಕ್ರಿಸ್ತನು ಪ್ರತ್ಯಕ್ಷನಾಗುವಾಗ ನಿಮಗೆ ಕೀರ್ತಿ ಪ್ರಭಾವಮಾನ ಗಳನ್ನು ಉಂಟುಮಾಡುವದು. ನೀವು ಆತನನ್ನು ನೋಡಲಿಲ್ಲವಾದರೂ ಆತನನ್ನು ಪ್ರೀತಿಸುತ್ತೀರಿ; ನೀವು ಈಗ ಆತನನ್ನು ಕಾಣದಿದ್ದರೂ ಆತನಲ್ಲಿ ನಂಬಿಕೆಯಿಟ್ಟು ಹೇಳಲಶಕ್ಯವಾದಂಥ ಪ್ರಭಾವವುಳ್ಳ ಸಂತೋಷದಿಂದ ಹರ್ಷಿಸುತ್ತೀರಿ.
- Psalm 43:2–5 ಕೀರ್ತನೆಗಳು 43:2–5ನೀನು ನನ್ನ ಬಲವಾದ ದೇವರಾಗಿದ್ದೀ; ಯಾಕೆ ನನ್ನನ್ನು ತಳ್ಳಿ ಬಿಟ್ಟಿದ್ದೀ? ಯಾಕೆ ನಾನು ಶತ್ರುವಿನ ಬಾಧೆಯಲ್ಲಿ ಇದ್ದು ದುಃಖದಲ್ಲಿ ನಡೆದುಕೊಳ್ಳಬೇಕು? ನಿನ್ನ ಬೆಳ ಕನ್ನೂ ಸತ್ಯವನ್ನೂ ಕಳುಹಿಸು; ಅವು ನನ್ನನ್ನು ನಡಿಸಿ ನಿನ್ನ ಪರಿಶುದ್ಧ ಪರ್ವತಕ್ಕೂ ಗುಡಾರಗಳಿಗೂ ನನ್ನನ್ನು ಬರಮಾಡಲಿ. ಆಗ ದೇವರ ಬಲಿಪೀಠದ ಬಳಿಗೂ ನನ್ನ ಅಧಿಕ ಸಂತೋಷವಾದ ದೇವರ ಬಳಿಗೂ ಬಂದು ಹೌದು, ಕಿನ್ನರಿಯಿಂದ, ನನ್ನ ದೇವರಾದ ಓ ದೇವರೇ, ನಿನ್ನನ್ನು ಕೊಂಡಾಡುವೆನು.ಓ ನನ್ನ ಪ್ರಾಣವೇ, ಕುಗ್ಗಿಹೋಗಿರುವದೇನು? ಯಾಕೆ ನನ್ನಲ್ಲಿ ವ್ಯಾಕುಲಪಡುತ್ತೀ? ದೇವರನ್ನು ನಿರೀಕ್ಷಿಸು. ನನ್ನ ಮುಖದ ಲಕ್ಷಣವೂ ನನ್ನ ದೇವರೂ ಆಗಿರುವಾತನನ್ನು ಇನ್ನೂ ಕೊಂಡಾಡುವೆನು. ಓ ನನ್ನ ಪ್ರಾಣವೇ, ಕುಗ್ಗಿಹೋಗಿರುವದೇನು? ಯಾಕೆ ನನ್ನಲ್ಲಿ ವ್ಯಾಕುಲಪಡುತ್ತೀ? ದೇವರನ್ನು ನಿರೀಕ್ಷಿಸು. ನನ್ನ ಮುಖದ ಲಕ್ಷಣವೂ ನನ್ನ ದೇವರೂ ಆಗಿರುವಾತನನ್ನು ಇನ್ನೂ ಕೊಂಡಾಡುವೆನು.
- Jeremiah 20:7–11 ಯೆರೆಮೀಯ 20:7–11ಓ ಕರ್ತನೇ, ನೀನು ನನ್ನನ್ನು ವಂಚಿಸಿದಿ; ನಾನು ವಂಚಿಸಲ್ಪಟ್ಟೆನು. ನೀನು ನನಗಿಂತ ಬಲಿಷ್ಠನಾಗಿದ್ದು ಜಯಿಸಿದಿ; ನಾನು ಪ್ರತಿದಿನ ಪರಿಹಾಸ್ಯಕ್ಕೆ ಗುರಿ ಯಾಗಿದ್ದೇನೆ; ಪ್ರತಿಯೊಬ್ಬನು ನನ್ನನ್ನು ಹಾಸ್ಯಮಾಡು ತ್ತಾನೆ. ನಾನು ಮಾತನಾಡುವನಾದದ್ದರಿಂದ ಗಟ್ಟಿಯಾಗಿ ಕೂಗುತ್ತೇನೆ; ಬಲಾತ್ಕಾರವೂ ಕೊಳ್ಳೆಯೂ ಎಂದು ಕೂಗುತ್ತೇನೆ ಕರ್ತನ ವಾಕ್ಯವು ನನಗೆ ಪ್ರತಿದಿನ ಪರಿಹಾಸ್ಯಕ್ಕೂ ಗೇಲಿಗೂ ಆಯಿತು. ಆಗ ನಾನು ಆತನನ್ನು ಕುರಿತು ಏನೂ ಹೇಳುವದಿಲ್ಲ, ಇಲ್ಲವೆ ಆತನ ಹೆಸರಿನಲ್ಲಿ ಇನ್ನು ಮಾತನಾಡುವದೇ ಇಲ್ಲ ಎಂದು ಅಂದುಕೊಂಡೆನು; ಆದರೆ ಆತನ ವಾಕ್ಯವು ನನ್ನ ಎಲುಬುಗಳಲ್ಲಿ ಮುಚ್ಚಲ್ಪಟ್ಟಿರುವ ಸುಡುವ ಬೆಂಕಿಯ ಹಾಗೆ ನನ್ನ ಹೃದಯದಲ್ಲಿ ಇತ್ತು; ಬಿಗಿಹಿಡಿದು ದಣಿ ದೆನು. ನನ್ನಿಂದ ಆಗದೆ ಹೋಯಿತು. ಅನೇಕರ ಚಾಡಿಯನ್ನು ಕೇಳಿದೆನು; ಸುತ್ತಲೂ ಭಯವದೆ--ತಿಳಿಸಿರಿ, ಆಗ ಅದನ್ನು ನಾವು ತಿಳಿಸುತ್ತೇವೆ ಎಂದು ಅನ್ನುತ್ತಾರೆ; ನನ್ನ ಆಪ್ತರೆಲ್ಲರೂ ನಾನು ಕುಂಟುವದನ್ನು ನೋಡಿಕೊಳ್ಳುತ್ತಾ--ಒಂದು ವೇಳೆ ಅವನು ಮೋಸ ಗೊಂಡಾನು; ಆಗ ನಾವು ಅವನನ್ನು ಗೆದ್ದು ಅವನಲ್ಲಿ ಮುಯ್ಯಿ ತೀರಿಸಿಕೊಳ್ಳುವೆವು ಅನ್ನುತ್ತಾರೆ. ಆದರೆ ಕರ್ತನು ಭಯಂಕರವಾದ ಪರಾಕ್ರಮಶಾಲಿಯ ಹಾಗೆ ನನ್ನ ಸಂಗಡ ಇದ್ದಾನೆ; ಆದದರಿಂದ ನನ್ನನ್ನು ಹಿಂಸಿಸು ವವರು ಎಡವುವರು, ಗೆಲ್ಲುವದಿಲ್ಲ; ಅನುಕೂಲ ವಾಗದೆ ಇದ್ದದರಿಂದ ಅವರು ಬಹಳ ನಾಚಿಕೆಪಡುವರು; ಅವರ ಗಲಿಬಿಲಿಯು ನಿತ್ಯವಾಗಿರುವದು. ಅದು ಮರೆತು ಹೋಗಲ್ಪಡುವದಿಲ್ಲ.
- Psalm 73:12–16 ಕೀರ್ತನೆಗಳು 73:12–16ಇಗೋ, ಇಹಲೋಕದಲ್ಲಿ ವೃದ್ಧಿಯಾಗುವ ದುಷ್ಟರು ಇವರೇ, ಐಶ್ವರ್ಯದಲ್ಲಿ ಇವರು ಹೆಚ್ಚುತ್ತಾರೆ. ನಿಶ್ಚಯವಾಗಿ ನನ್ನ ಹೃದಯವನ್ನು ವ್ಯರ್ಥವಾಗಿ ನಿರ್ಮಲ ಮಾಡಿಕೊಂಡು ನನ್ನ ಕೈಗಳನ್ನು ನಿರಪರಾಧ ದಲ್ಲಿ ತೊಳೆದಿದ್ದೇನೆ. ನಾನು ದಿನವೆಲ್ಲಾ ವ್ಯಾಧಿ ಪೀಡಿತನಾಗಿದ್ದೇನೆ; ಪ್ರತಿ ಉದಯದಲ್ಲಿ ನನಗೆ ಶಿಕ್ಷೆ ಯಾಯಿತು. ಹೀಗೆ ನಾನು ಮಾತನಾಡುವೆನೆಂದು ಹೇಳಿದರೆ, ಇಗೋ, ನಿನ್ನ ಮಕ್ಕಳ ವಂಶಕ್ಕೆ ವಿರೋಧ ವಾಗಿ ಆತಂಕ ಮಾಡುವೆನು. ಇದನ್ನು ತಿಳಿಯು ವದಕ್ಕೆ ನಾನು ಯೋಚಿಸಿದಾಗ, ನಾನು ದೇವರ ಪರಿಶುದ್ಧ ಸ್ಥಳಗಳಿಗೆ ಬರುವ ವರೆಗೆ