Psalms · chapter 96 · verse 1
Psalm 96:1 in Kannada
ಕರ್ತನಿಗೆ ಹೊಸ ಹಾಡನ್ನು ಹಾಡಿರಿ; ಸಮಸ್ತ ಭೂಮಿಯೇ, ಕರ್ತನಿಗೆ ಹಾಡಿರಿ.
Kartanige hosa haadannu haadiri; samasta bhoomiye, kartanige haadiri.
Psalm 96:1 in English
- King James Version (KJV)
- O sing unto the LORD a new song: sing unto the LORD, all the earth.
- World English Bible (WEB)
- Sing to the LORD a new song! Sing to the LORD, all the earth.
- American Standard Version (ASV)
- Oh sing unto Jehovah a new song: Sing unto Jehovah, all the earth.
- Bible in Basic English (BBE)
- O make a new song to the Lord; let all the earth make melody to the Lord.
- Darby Translation (DBY)
- Sing ye unto Jehovah a new song: sing unto Jehovah, all the earth.
- Webster's Bible (WBS)
- O sing to the LORD a new song: sing to the LORD, all the earth.
- Young's Literal Translation (YLT)
- Sing to Jehovah a new song, Sing to Jehovah all the earth.
Read in context
- 1ಕರ್ತನಿಗೆ ಹೊಸ ಹಾಡನ್ನು ಹಾಡಿರಿ; ಸಮಸ್ತ ಭೂಮಿಯೇ, ಕರ್ತನಿಗೆ ಹಾಡಿರಿ.
- 2ಕರ್ತನಿಗೆ ಹಾಡಿರಿ, ಆತನ ಹೆಸರನ್ನು ಸ್ತುತಿಸಿರಿ; ಆತನ ರಕ್ಷಣೆಯನ್ನು ದಿನ ದಿನಕ್ಕೆ ಸಾರಿ ಹೇಳಿರಿ.
- 3ಅನ್ಯಜನಾಂಗದಲ್ಲಿ ಆತನ ಘನವನ್ನೂ ಎಲ್ಲಾ ಜನಾಂಗಗಳಲ್ಲಿ ಆತನ ಅದ್ಭುತಗಳನ್ನೂ ವಿವ ರಿಸಿರಿ.
Cross references
- 1 Chronicles 16:23–33 1 ಪೂರ್ವಕಾಲವೃತ್ತಾಂತ 16:23–33ಸಮಸ್ತ ಭೂಮಿಯೇ, ಕರ್ತನಿಗೆ ಹಾಡಿರಿ; ಆತನ ರಕ್ಷಣೆಯನ್ನು ದಿನ ದಿನಕ್ಕೆ ಸಾರಿ ಹೇಳಿರಿ. ಜನಾಂಗಗಳಲ್ಲಿ ಆತನ ಘನವನ್ನೂ ಎಲ್ಲಾ ಜನಗಳಲ್ಲಿ ಆತನ ಅದ್ಭುತಗಳನ್ನೂ ಪ್ರಕಟಿಸಿರಿ. ಯಾಕಂದರೆ ಕರ್ತನು ದೊಡ್ಡವನೂ ಬಹಳವಾಗಿ ಸ್ತುತಿಸಲ್ಪಡತಕ್ಕವನೂ; ಆತನು ಎಲ್ಲಾ ದೇವರುಗಳ ಮೇಲೆ ಭಯಂಕರನೂ. ಯಾಕಂದರೆ ಜನಗಳ ದೇವರುಗಳೆಲ್ಲಾ ಬೊಂಬೆಗಳಾಗಿವೆ. ಆದರೆ ಕರ್ತನು ಆಕಾಶಗಳನ್ನು ಉಂಟುಮಾಡಿದನು. ಮಹಿ ಮೆಯೂ ಪ್ರಭೆಯೂ ಆತನ ಮುಂದೆ ಅವೆ. ಬಲವೂ ಆನಂದವೂ ಆತನ ಸ್ಥಳದಲ್ಲಿ ಅವೆ. ಜನಸಂತತಿಗಳೇ, ಕರ್ತನಿಗೆ ಬಲ ಪ್ರಭಾವವನ್ನೂ ತನ್ನಿರಿ, ಕರ್ತನಿಗೆ ಆತನ ಹೆಸರಿನ ಘನವನ್ನೂ ತನ್ನಿರಿ; ಅರ್ಪಣೆಯನ್ನು ತೆಗೆದುಕೊಂಡು ಆತನ ಮುಂದೆ ಬನ್ನಿರಿ. ಪರಿಶುದ್ಧತ್ವ ವೆಂಬ ಸೌಂದರ್ಯದಿಂದ ಕರ್ತನನ್ನು ಆರಾಧಿಸಿರಿ. ಸಮಸ್ತ ಭೂಮಿಯೇ, ಆತನ ಮುಂದೆ ನಡುಗು. ಲೋಕವು ಸ್ಥಿರವಾಗಿದೆ, ಕದಲುವದಿಲ್ಲ. ಆಕಾಶ ಗಳು ಸಂತೋಷಿಸಲಿ, ಭೂಮಿಯು ಉಲ್ಲಾಸಪಡಲಿ. ಕರ್ತನು ಆಳುತ್ತಾನೆಂದು ಜನಾಂಗಗಳಲ್ಲಿ ಹೇಳಲಿ. ಸಮುದ್ರವೂ ಅದರ ಪರಿಪೂರ್ಣತ್ವವೂ ಘೋಷಿಸಲಿ; ಹೊಲಗಳೂ ಅವುಗಳಲ್ಲಿರುವ ಸಮಸ್ತವೂ ಉತ್ಸಾಹ ಪಡಲಿ. ಆಗ ಕರ್ತನ ಮುಂದೆಯೇ ಅಡವಿಯ ಮರಗಳೆಲ್ಲಾ ಉತ್ಸಾಹ ಧ್ವನಿಮಾಡಲಿ; ಆತನು ಭೂಮಿಗೆ ನ್ಯಾಯತೀರಿಸಲು ಬರುತ್ತಾನೆ.
- Psalm 98:1 ಕೀರ್ತನೆಗಳು 98:1ಕರ್ತನಿಗೆ ಹೊಸ ಹಾಡನ್ನು ಹಾಡಿರಿ; ಆತನು ಅದ್ಭುತಗಳನ್ನು ಮಾಡಿದ್ದಾನೆ; ಆತನ ಬಲಗೈಯೂ ಪರಿಶುದ್ಧತೋಳೂ ಆತನಿಗೆ ಜಯ ವನ್ನು ತಂದಿವೆ.
- Psalm 149:1 ಕೀರ್ತನೆಗಳು 149:1ಕರ್ತನನ್ನು ಸ್ತುತಿಸಿರಿ. ಕರ್ತನಿಗೆ ಹೊಸ ಹಾಡನ್ನೂ ಪರಿಶುದ್ಧರ ಸಭೆ ಯಲ್ಲಿ ಆತನ ಸ್ತೋತ್ರವನ್ನೂ ಹಾಡಿರಿ.
- Psalm 33:3 ಕೀರ್ತನೆಗಳು 33:3ಆತನಿಗೆ ಹೊಸ ಹಾಡನ್ನು ಹಾಡಿರಿ; ಮಹಾಧ್ವನಿಯಿಂದ ಇಂಪಾಗಿ ಬಾರಿಸಿರಿ.
- Revelation 14:3 ಪ್ರಕಟನೆ 14:3ಅವರು ಸಿಂಹಾಸನದ ಮುಂದೆಯೂ ಆ ನಾಲ್ಕು ಜೀವಿಗಳ ಮತ್ತು ಹಿರಿಯರ ಮುಂದೆಯೂ ಹೊಸ ಹಾಡಿನಂತಿದ್ದ ಹಾಡನ್ನು ಅವರು ಹಾಡಿದರು. ಭೂ ಲೋಕದೊಳಗಿಂದ ವಿಮೋಚಿಸಲ್ಪಟ್ಟ ಆ ಲಕ್ಷದ ನಾಲ್ವತ್ತು ನಾಲ್ಕು ಸಾವಿರ ಜನರೇ ಹೊರತು ಬೇರೆ ಯಾರೂ ಆ ಹಾಡನ್ನು ಕಲಿಯಲಾರರು.
- Psalm 67:3–6 ಕೀರ್ತನೆಗಳು 67:3–6ಓ ದೇವರೇ, ಜನರು ನಿನ್ನನ್ನು ಕೊಂಡಾಡಲಿ. ಜನರೆಲ್ಲಾ ನಿನ್ನನ್ನು ಕೊಂಡಾಡಲಿ. ಜನಾಂಗಗಳು ಸಂತೋಷಪಟ್ಟು ಉತ್ಸಾಹಕ್ಕಾಗಿ ಹಾಡಲಿ; ನೀನು ಜನರನ್ನು ನೀತಿಯಿಂದ ನ್ಯಾಯತೀರಿಸಿ ಜನಾಂಗಗಳನ್ನು ಭೂಮಿಯಲ್ಲಿ ಪರಿಪಾಲಿಸುತ್ತೀ. ಸೆಲಾ. ಓ ದೇವರೇ, ಜನರು ನಿನ್ನನ್ನು ಕೊಂಡಾಡಲಿ; ಜನರೆಲ್ಲಾ ನಿನ್ನನ್ನು ಕೊಂಡಾಡಲಿ. ಆಗ ಭೂಮಿಯು ತನ್ನ ಸಮೃದ್ಧಿಯಾದ ಬೆಳೆಯನ್ನು ಕೊಡುವದು; ದೇವರೇ, ಹೌದು, ನಮ್ಮ ದೇವರೇ ನಮ್ಮನ್ನು ಆಶೀರ್ವದಿಸುವನು.ದೇವರು ನಮ್ಮನ್ನು ಆಶೀರ್ವದಿಸುವನು; ಭೂಮಿಯ ಕೊನೆಯ ಭಾಗಗಳು ಆತನಿಗೆ ಭಯಪಡುವವು.
- Revelation 5:9 ಪ್ರಕಟನೆ 5:9ಅವರು ಹೊಸ ಹಾಡನ್ನು ಹಾಡುತ್ತಾ--ನೀನು ಪುಸ್ತಕವನ್ನು ತೆಗೆದುಕೊಳ್ಳುವದಕ್ಕೂ ಅದರ ಮುದ್ರೆಗಳನ್ನು ಬಿಚ್ಚುವದಕ್ಕೂ ಯೋಗ್ಯ ನಾಗಿದ್ದೀ; ಯಾಕಂದರೆ ನೀನು ವಧಿತನಾಗಿ ನಿನ್ನ ರಕ್ತದಿಂದ ಸಕಲ ಕುಲ ಭಾಷೆ ಪ್ರಜೆ ಜನಾಂಗಗಳ ವರಿಂದ ನಮ್ಮನ್ನು ದೇವರಿಗಾಗಿ ವಿಮೋಚಿಸಿದ್ದೀ;
- Romans 15:11 ರೋಮಾಪುರದವರಿಗೆ 15:11ತಿರಿಗಿ--ಎಲ್ಲಾ ಅನ್ಯಜನರೇ, ಕರ್ತನನ್ನು ಸ್ತುತಿಸಿರಿ; ಎಲ್ಲಾ ಜನರೇ, ಆತನನ್ನು ಕೊಂಡಾಡಿರಿ ಅನ್ನುತ್ತಾನೆ.
- Psalm 68:32 ಕೀರ್ತನೆಗಳು 68:32ಭೂಮಿಯ ರಾಜ್ಯಗಳೇ, ನೀವು ದೇವರಿಗೆ ಹಾಡಿರಿ; ಕರ್ತನಿಗೆ ಸ್ತುತಿಗಳನ್ನು ಹಾಡಿರಿ. ಸೆಲಾ.