Psalms · chapter 96 · verse 10
Psalm 96:10 in Kannada
ಕರ್ತನು ಆಳುತ್ತಾನೆ; ಲೋಕವು ಸ್ಥಿರವಾಗಿದೆ, ಕದಲುವದಿಲ್ಲ. ಆತನು ಜನಗಳಿಗೆ ನೀತಿಯಲ್ಲಿ ನ್ಯಾಯತೀರಿಸುವನೆಂದು ಅನ್ಯಜನಾಂಗಗಳಲ್ಲಿ ಹೇಳಿರಿ.
Kartanu aaluttaane; lokavu sthiravaagide, kadaluvadilla. Aatanu janagalige neetiyalli nyaayateerisuvanendu anyajanaangagalalli heliri.
Psalm 96:10 in English
- King James Version (KJV)
- Say among the heathen [that] the LORD reigneth: the world also shall be established that it shall not be moved: he shall judge the people righteously.
- World English Bible (WEB)
- Say among the nations, “The LORD reigns.” The world is also established. It can’t be moved. He will judge the peoples with equity.
- American Standard Version (ASV)
- Say among the nations, Jehovah reigneth: The world also is established that it cannot be moved: He will judge the peoples with equity.
- Bible in Basic English (BBE)
- Say among the nations, The Lord is King; yes, the world is ordered so that it may not be moved; he will be an upright judge of the peoples.
- Darby Translation (DBY)
- Say among the nations, Jehovah reigneth! yea, the world is established, it shall not be moved; he will execute judgment upon the peoples with equity.
- Webster's Bible (WBS)
- Say among the heathen [that] the LORD reigneth: the world also shall be established that it shall not be moved: he will judge the people righteously.
- Young's Literal Translation (YLT)
- Say among nations, 'Jehovah hath reigned, Also — established is the world, unmoved, He judgeth the peoples in uprightness.'
Read in context
- 8ಕರ್ತನಿಗೆ, ಆತನ ಹೆಸರಿಗೆ ಸಲ್ಲತಕ್ಕ ಘನವನ್ನು ಸಲ್ಲಿಸಿರಿ; ಕಾಣಿಕೆ ತೆಗೆದುಕೊಂಡು ಆತನ ಅಂಗಳಗಳಿಗೆ ಬನ್ನಿರಿ.
- 9ಪರಿಶುದ್ಧತ್ವದ ಸೌಂದರ್ಯದಿಂದ ಕರ್ತನನ್ನು ಆರಾಧಿಸಿರಿ; ಸಮಸ್ತ ಭೂಮಿಯೇ, ಆತನ ಮುಂದೆ ಭಯಪಡು,
- 10ಕರ್ತನು ಆಳುತ್ತಾನೆ; ಲೋಕವು ಸ್ಥಿರವಾಗಿದೆ, ಕದಲುವದಿಲ್ಲ. ಆತನು ಜನಗಳಿಗೆ ನೀತಿಯಲ್ಲಿ ನ್ಯಾಯತೀರಿಸುವನೆಂದು ಅನ್ಯಜನಾಂಗಗಳಲ್ಲಿ ಹೇಳಿರಿ.
- 11ಆಕಾಶಗಳು ಸಂತೋಷಿಸಲಿ; ಭೂಮಿಯು ಉಲ್ಲಾಸಪಡಲಿ; ಸಮುದ್ರವೂ ಅದರ ಪರಿಪೂರ್ಣ ತೆಯೂ ಘೋಷಿಸಲಿ.
- 12ಹೊಲವೂ ಅದರಲ್ಲಿರುವ ಸಮಸ್ತವೂ ಉತ್ಸಾಹಪಡಲಿ; ಅಡವಿಯ ಮರಗಳೆಲ್ಲಾ ಕರ್ತನ ಮುಂದೆಯೇ ಉತ್ಸಾಹಧ್ವನಿ ಮಾಡಲಿ.ಆತನು ಬರುತ್ತಾನೆ, ಭೂಮಿಗೆ ನ್ಯಾಯತೀರಿಸಲು ಬರುತ್ತಾನೆ; ಲೋಕಕ್ಕೆ ನೀತಿಯಿಂದಲೂ ಜನಗಳಿಗೆ ತನ್ನ ಸತ್ಯದಿಂದಲೂ ನ್ಯಾಯತೀರಿಸುವನು.
Cross references
- Psalm 93:1 ಕೀರ್ತನೆಗಳು 93:1ಕರ್ತನು ಆಳುತ್ತಾನೆ, ಆತನು ಘನತೆಯನ್ನು ಹೊದ್ದುಕೊಂಡಿದ್ದಾನೆ; ಕರ್ತನು ಬಲ ದಿಂದ ಹೊದ್ದುಕೊಂಡಿದ್ದಾನೆ, ಅದರಿಂದ ತನ್ನ ನಡು ವನ್ನು ಕಟ್ಟಿಕೊಂಡಿದ್ದಾನೆ; ಲೋಕವು ಸಹ ಸ್ಥಿರವಾಗಿದೆ; ಕದಲುವದಿಲ್ಲ.
- Psalm 67:4 ಕೀರ್ತನೆಗಳು 67:4ಜನಾಂಗಗಳು ಸಂತೋಷಪಟ್ಟು ಉತ್ಸಾಹಕ್ಕಾಗಿ ಹಾಡಲಿ; ನೀನು ಜನರನ್ನು ನೀತಿಯಿಂದ ನ್ಯಾಯತೀರಿಸಿ ಜನಾಂಗಗಳನ್ನು ಭೂಮಿಯಲ್ಲಿ ಪರಿಪಾಲಿಸುತ್ತೀ. ಸೆಲಾ.
- Psalm 9:8 ಕೀರ್ತನೆಗಳು 9:8ಆತನೇ ನೀತಿಯಿಂದ ಲೋಕಕ್ಕೆ ನ್ಯಾಯತೀರಿಸುವನು; ಆತನು ಪ್ರಜೆಗಳಿಗೆ ಯಥಾರ್ಥವಾಗಿ ನ್ಯಾಯತೀರ್ಪು ಕೊಡುವನು.
- Acts 17:31 ಅಪೊಸ್ತಲರ ಕೃತ್ಯಗಳು 17:31ಯಾಕಂದರೆ ಆತನು ನಿಷ್ಕರ್ಷೆಮಾಡಿದ ಪುರುಷನ ಕೈಯಿಂದ ನೀತಿಗನುಸಾರವಾಗಿ ಭೂಲೋಕದ ನ್ಯಾಯವಿಚಾರಣೆ ಮಾಡುವದಕ್ಕೆ ಒಂದು ದಿವಸ ವನ್ನು ನೇಮಕ ಮಾಡಿದ್ದಾನೆ. ಆತನನ್ನು ಸತ್ತವರೊಳ ಗಿಂದ ಎಬ್ಬಿಸಿದ್ದರಿಂದ ಇದಕ್ಕೆ ಎಲ್ಲರಿಗೂ ಆಧಾರ ಕೊಟ್ಟಿದ್ದಾನೆ ಅಂದನು.
- Malachi 1:11 ಮಲಾಕಿಯ 1:11ಸೂರ್ಯೋದಯವು ಮೊದಲುಗೊಂಡು ಅದರ ಅಸ್ತಮಾನದ ವರೆಗೂ ನನ್ನ ಹೆಸರು ಅನ್ಯಜನಾಂಗ ಗಳಲ್ಲಿ ಘನವಾಗಿರುವದು; ಸಕಲ ಸ್ಥಳಗಳಲ್ಲಿ ನನ್ನ ಹೆಸರಿಗೆ ಧೂಪವೂ ಶುದ್ಧಕಾಣಿಕೆಯೂ ಅರ್ಪಿಸ ಲ್ಪಡುವದು; ನನ್ನ ಹೆಸರು ಅನ್ಯಜನಾಂಗಗಳಲ್ಲಿ ಘನ ವಾಗಿ ರುವದೆಂದು ಸೈನ್ಯಗಳ ಕರ್ತನು ಹೇಳುತ್ತಾನೆ.
- Revelation 19:11 ಪ್ರಕಟನೆ 19:11ಪರಲೋಕವು ತೆರೆದಿರುವದನ್ನು ನಾನು ಕಂಡೆನು. ಆಗ ಬಿಳೀ ಕುದುರೆಯು ಕಾಣಿಸಿತು; ಅದರ ಮೇಲೆ ಕೂತಿದ್ದಾತನು ನಂಬಿಗಸ್ತನೂ ಸತ್ಯವಂತನೂ ಎಂದು ಕರೆಯಲ್ಪಟ್ಟನು. ಆತನು ನೀತಿಯಿಂದ ನ್ಯಾಯವಿಚಾರಣೆ ಮಾಡಿ ಯುದ್ಧ ಮಾಡುತ್ತಾನೆ;
- Revelation 11:15 ಪ್ರಕಟನೆ 11:15ಏಳನೆಯ ದೂತನು ತುತೂರಿಯನ್ನೂದಿದನು. ಆಗ ಪರಲೋಕದಲ್ಲಿ ಮಹಾಶಬ್ದಗಳುಂಟಾಗಿ-- ಈ ಲೋಕದ ರಾಜ್ಯಗಳು ನಮ್ಮ ಕರ್ತನ ಮತ್ತು ಆತನ ಕ್ರಿಸ್ತನ ರಾಜ್ಯಗಳಾದವು; ಆತನು ಯುಗ ಯುಗಾಂತರಗಳಲ್ಲಿಯೂ ಆಳುವನು ಎಂದು ಹೇಳಿ ದವು.
- Malachi 1:14 ಮಲಾಕಿಯ 1:14ಆದರೆ ತನ್ನ ಮಂದೆಯಲ್ಲಿ ಗಂಡು ಇರಲಾಗಿ ಪ್ರಮಾಣ ಮಾಡಿ ಕರ್ತನಿಗೆ ಕೆಟ್ಟು ಹೋದದ್ದನ್ನು ಅರ್ಪಿಸುವ ಮೋಸಗಾರನಿಗೆ ಶಾಪ; ನಾನು ಮಹಾ ಅರಸನು, ನನ್ನ ಹೆಸರು ಅನ್ಯಜನಾಂಗಗಳಲ್ಲಿ ಭಯಂಕರ ವಾದದ್ದು ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ.
- Hebrews 1:3 ಇಬ್ರಿಯರಿಗೆ 1:3ಈತನು ದೇವರ ಮಹಿಮೆಯ ಪ್ರಕಾಶವೂ ಆತನ ವ್ಯಕ್ತಿತ್ವದ ಪ್ರತಿರೂಪವೂ ತನ್ನ ಬಲವುಳ್ಳ ವಾಕ್ಯದಿಂದ ಸಮಸ್ತಕ್ಕೆ ಆಧಾರವೂ ಆಗಿದ್ದು ತಾನೇ ನಮ್ಮ ಪಾಪಗಳನ್ನು ತೊಳೆದ ಮೇಲೆ ಉನ್ನತದೊಳಗೆ ಮಹೋನ್ನತನ ಬಲ ಗಡೆಯಲ್ಲಿ ಕೂತುಕೊಂಡನು.
- Daniel 2:44 ದಾನಿಯೇಲನು 2:44ಅರ ಸರ ದಿವಸಗಳಲ್ಲಿ ಪರಲೋಕದ ದೇವರು ಎಂದಿಗೂ ನಾಶವಾಗದ ರಾಜ್ಯವನ್ನು ಸ್ಥಾಪಿಸುವನು. ಅದರ ರಾಜ್ಯ ವನ್ನು ಬೇರೆ ಜನರಿಗೆ ಕೊಡದೆ ಆ ರಾಜ್ಯಗಳನ್ನೆಲ್ಲಾ ಧ್ವಂಸ ಮಾಡಿ ಮುಗಿಸಿ ಎಂದೆಂದಿಗೂ ನಿಲ್ಲುವದು.