Psalms · chapter 97 · verse 2
Psalm 97:2 in Kannada
ಮೇಘಗಳೂ ಕಾರ್ಗತ್ತಲೂ ಆತನ ಸುತ್ತಲು ಅವೆ; ನೀತಿಯೂ ನ್ಯಾಯವೂ ಆತನ ಸಿಂಹಾಸನದ ಸ್ಥಳವಾಗಿದೆ.
Meghagaloo kaargattaloo aatana suttalu ave; neetiyoo nyaayavoo aatana sinhaasanada sthalavaagide.
Psalm 97:2 in English
- King James Version (KJV)
- Clouds and darkness [are] round about him: righteousness and judgment [are] the habitation of his throne.
- World English Bible (WEB)
- Clouds and darkness are around him. Righteousness and justice are the foundation of his throne.
- American Standard Version (ASV)
- Clouds and darkness are round about him: Righteousness and justice are the foundation of his throne.
- Bible in Basic English (BBE)
- Dark clouds are round him; his kingdom is based on righteousness and right judging.
- Darby Translation (DBY)
- Clouds and darkness are round about him; righteousness and judgment are the foundation of his throne.
- Webster's Bible (WBS)
- Clouds and darkness surround him: righteousness and judgment [are] the habitation of his throne.
- Young's Literal Translation (YLT)
- Cloud and darkness [are] round about Him, Righteousness and judgment the basis of His throne.
Read in context
- 1ಕರ್ತನು ಆಳುತ್ತಾನೆ; ಭೂಮಿಯು ಉಲ್ಲಾಸಪಡಲಿ; ದ್ವೀಪಗಳ ಸಮೂಹವು ಸಂತೋ ಷಿಸಲಿ.
- 2ಮೇಘಗಳೂ ಕಾರ್ಗತ್ತಲೂ ಆತನ ಸುತ್ತಲು ಅವೆ; ನೀತಿಯೂ ನ್ಯಾಯವೂ ಆತನ ಸಿಂಹಾಸನದ ಸ್ಥಳವಾಗಿದೆ.
- 3ಬೆಂಕಿಯು ಆತನ ಮುಂದೆ ಹೋಗಿ ಆತನ ವೈರಿಗಳನ್ನು ಸುತ್ತಲೂ ದಹಿಸುವದು.
- 4ಆತನ ಮಿಂಚುಗಳು ಲೋಕವನ್ನು ಬೆಳಗಿಸುತ್ತವೆ; ಭೂಮಿಯು ನೋಡಿ, ನಡುಗುತ್ತದೆ.
Cross references
- Psalm 89:14 ಕೀರ್ತನೆಗಳು 89:14ನೀತಿಯೂ ನ್ಯಾಯವೂ ನಿನ್ನ ಸಿಂಹಾಸನದ ಸ್ಥಳವಾಗಿದೆ ಕೃಪೆಯೂ ಸತ್ಯವೂ ನಿನ್ನ ಮುಂದೆ ಹೋಗುತ್ತವೆ;
- Exodus 19:9 ವಿಮೋಚನಕಾಂಡ 19:9ಕರ್ತನು ಮೋಶೆಗೆ--ಇಗೋ, ನಾನು ನಿನ್ನ ಸಂಗಡ ಮಾತನಾಡುವದನ್ನು ಜನರು ಕೇಳುವ ಹಾಗೆಯೂ ಅವರು ಸದಾಕಾಲ ನಿನ್ನನ್ನು ನಂಬುವಂತೆಯೂ ಮಂದ ವಾದ ಮೇಘದಲ್ಲಿ ನಾನು ನಿನ್ನ ಬಳಿಗೆ ಬರುತ್ತೇನೆ ಅಂದನು. ಮೋಶೆಯು ಜನರ ಮಾತುಗಳನ್ನು ಕರ್ತನಿಗೆ ತಿಳಿಸಿದನು.
- Proverbs 16:12 ಜ್ಞಾನೋಕ್ತಿಗಳು 16:12ಕೆಟ್ಟದ್ದನ್ನು ಮಾಡುವವರು ರಾಜರಿಗೆ ಅಸಹ್ಯರು; ನೀತಿಯಿಂದ ಸಿಂಹಾಸನವು ಸ್ಥಾಪಿಸಲ್ಪಡು ತ್ತದೆ.
- Hebrews 1:8–9 ಇಬ್ರಿಯರಿಗೆ 1:8–9ಮಗನ ವಿಷಯದಲ್ಲಿಯಾದರೋ--ಓ ದೇವರೇ, ನಿನ್ನ ಸಿಂಹಾಸನವು ಯುಗಯುಗಾಂತರಗಳಲ್ಲಿಯೂ ಇರುವದು; ನೀತಿದಂಡವೇ ನಿನ್ನ ರಾಜದಂಡವಾಗಿದೆ. ನೀನು ನೀತಿಯನ್ನು ಪ್ರೀತಿಸಿದ್ದೀ, ದುಷ್ಠತನವನ್ನು ದ್ವೇಷಿಸಿದ್ದೀ; ಆದದರಿಂದ ದೇವರು, ನಿನ್ನ ದೇವರೇ, ನಿನ್ನನ್ನು ನಿನ್ನ ಜೊತೆಗಾರರಿಗಿಂತ ಮಿಗಿಲಾಗಿ ಆನಂದದ ತೈಲದಿಂದ ಅಭಿಷೇಕಿಸಿದ್ದಾನೆಂತಲೂ
- Psalm 99:4 ಕೀರ್ತನೆಗಳು 99:4ಅರಸನ ಬಲವು ನ್ಯಾಯವನ್ನು ಪ್ರೀತಿ ಮಾಡುತ್ತದೆ; ನೀನು ನೀತಿಯನ್ನು ಸ್ಥಿರಪಡಿಸುತ್ತೀ; ನ್ಯಾಯವನ್ನೂ ನೀತಿಯನ್ನೂ ಯಾಕೋ ಬಿನಲ್ಲಿ ನೀನು ಮಾಡಿದ್ದೀ.
- Genesis 18:25 ಆದಿಕಾಂಡ 18:25ಆ ಪ್ರಕಾರ ಮಾಡಿ ನೀತಿವಂತರನ್ನು ದುಷ್ಟರ ಸಂಗಡ ಕೊಲ್ಲುವದು ನಿನಗೆ ದೂರವಾಗಿರಲಿ; ಹಾಗೆ ನೀತಿವಂತರನ್ನು ದುಷ್ಟರಿಗೆ ಸಮಾನಮಾಡುವದು ನಿನಗೆ ದೂರ ವಾಗಿರಲಿ; ಭೂಲೋಕಕ್ಕೆಲ್ಲಾ ನ್ಯಾಯಾಧಿಪತಿಯಾಗಿ ರುವಾತನು ನ್ಯಾಯವಾದದ್ದನ್ನು ಮಾಡದೆ ಇರುವನೇ ಅಂದನು.
- Nahum 1:3 ನಹೂಮ 1:3ಕರ್ತನು ಕೋಪಿಸುವದರಲ್ಲಿ ನಿಧಾನ ಮಾಡುವವನಾದರೂ ಶಕ್ತಿಯಲ್ಲಿ ಮಹತ್ತಾದವನು; ದುರ್ಮಾರ್ಗದವರನ್ನು ಎಷ್ಟು ಮಾತ್ರಕ್ಕೂ ನಿರ್ಮಲರೆಂದು ತೀರ್ಮಾನಿಸ ದವನು; ಕರ್ತನ ಮಾರ್ಗವು ಸುಳಿಗಾಳಿಯಲ್ಲಿಯೂ ಬಿರುಗಾಳಿಯಲ್ಲಿಯೂ ಉಂಟು; ಮೇಘಗಳು ಆತನ ಕಾಲುಗಳ ಧೂಳೇ.
- 1 Kings 8:10–12 1 ಅರಸುಗಳು 8:10–12ಯಾಜಕರು ಪರಿಶುದ್ಧ ಸ್ಥಳದಿಂದ ಬಂದಾಗ ಮೇಘವು ಕರ್ತನ ಮಂದಿರವನ್ನು ತುಂಬಿತ್ತು. ಕರ್ತನ ತೇಜಸ್ಸಿ ನಿಂದ ವ್ಯಾಪ್ತವಾಗಿದ್ದ ಮೇಘವು ಆಲಯವನ್ನು ತುಂಬಿ ಕೊಂಡದರಿಂದ ಯಾಜಕರು ಅಲ್ಲಿ ನಿಂತು ಸೇವೆಮಾಡ ಲಾರದವರಾದರು. ಆಗ ಸೊಲೊಮೋನನು--ಕಾರ್ಗತ್ತಲಲ್ಲಿ ವಾಸ ವಾಗಿರುವೆನೆಂದು ಕರ್ತನು ಹೇಳಿದ್ದಾನೆ.
- Psalm 45:6–7 ಕೀರ್ತನೆಗಳು 45:6–7ಓ ದೇವರೇ, ನಿನ್ನ ಸಿಂಹಾಸ ನವು ಎಂದೆಂದಿಗೂ ಇರುವದು; ನಿನ್ನ ರಾಜ್ಯದಂಡವು ನ್ಯಾಯದಂಡವಾಗಿದೆ. ನೀನು ನೀತಿಯನ್ನು ಪ್ರೀತಿ ಮಾಡುತ್ತೀ; ದುಷ್ಟತ್ವವನ್ನು ಹಗೆಮಾಡುತ್ತೀ; ಆದದ ರಿಂದ ದೇವರು, ನಿನ್ನ ದೇವರು, ನಿನ್ನ ಸಂಗಡಿಗರಿಗಿಂತ ಹೆಚ್ಚಾಗಿ ನಿನ್ನನ್ನು ಆನಂದ ತೈಲದಿಂದ ಅಭಿಷೇಕಿಸಿ ದ್ದಾನೆ.
- Deuteronomy 4:11–12 ಧರ್ಮೋಪದೇಶಕಾಂಡ 4:11–12ಆಗ ನೀವು ಹತ್ತಿರ ಬಂದು ಬೆಟ್ಟದ ಕೆಳಗೆ ನಿಂತಿರಿ; ಆ ಬೆಟ್ಟವು ಕತ್ತಲೆಯಾ ಗಿದ್ದು ಮೇಘಗಳೂ ಗಾಢಾಂಧಕಾರವೂ ಉಂಟಾಗಿ ಆಕಾಶ ಮಧ್ಯದ ವರೆಗೆ ಬೆಂಕಿಯಿಂದ ಉರಿಯು ತ್ತಿತ್ತು. ಬೆಂಕಿಯ ಮಧ್ಯದೊಳಗಿಂದ ಕರ್ತನು ನಿಮ್ಮ ಸಂಗಡ ಮಾತನಾಡಿದನು; ವಾಕ್ಯಗಳ ಧ್ವನಿಯನ್ನು ನೀವು ಕೇಳಿದಿರಿ; ಆದರೆ ಆಕಾರವನ್ನು ನೋಡಲಿಲ್ಲ; ಧ್ವನಿಯನ್ನು ಮಾತ್ರ ಕೇಳಿದಿರಿ.
- Exodus 24:16–18 ವಿಮೋಚನಕಾಂಡ 24:16–18ಇದ ಲ್ಲದೆ ಕರ್ತನ ಮಹಿಮೆಯು ಸೀನಾಯಿಬೆಟ್ಟದ ಮೇಲೆ ನೆಲೆಯಾಗಿದದ್ದರಿಂದ ಮೇಘವು ಅದನ್ನು ಆರು ದಿನಗಳ ವರೆಗೆ ಮುಚ್ಚಿಕೊಂಡಿತು; ಏಳನೆಯ ದಿನದಲ್ಲಿ ಆತನು ಮೇಘದೊಳಗಿಂದ ಮೋಶೆಯನ್ನು ಕರೆದನು. ಇದಲ್ಲದೆ ಇಸ್ರಾಯೇಲ್ ಮಕ್ಕಳ ಕಣ್ಣುಗಳ ಮುಂದೆ ಬೆಟ್ಟದ ತುದಿಯಲ್ಲಿ ಕರ್ತನ ಮಹಿಮೆಯ ದೃಶ್ಯವು ದಹಿಸುವ ಅಗ್ನಿಯಂತೆ ಇತ್ತು.ಆಗ ಮೋಶೆಯು ಮೇಘದ ಮಧ್ಯಕ್ಕೆ ಹೋಗಿ ಬೆಟ್ಟವನ್ನೇರಿದನು. ಅವನು ನಾಲ್ವತ್ತು ಹಗಲೂ ನಾಲ್ವತ್ತು ರಾತ್ರಿಯೂ ಪರ್ವತದಲ್ಲಿದ್ದನು. ಆಗ ಮೋಶೆಯು ಮೇಘದ ಮಧ್ಯಕ್ಕೆ ಹೋಗಿ ಬೆಟ್ಟವನ್ನೇರಿದನು. ಅವನು ನಾಲ್ವತ್ತು ಹಗಲೂ ನಾಲ್ವತ್ತು ರಾತ್ರಿಯೂ ಪರ್ವತದಲ್ಲಿದ್ದನು.
- Psalm 18:11–12 ಕೀರ್ತನೆಗಳು 18:11–12ಕತ್ತಲನ್ನು ತನಗೆ ಮರೆಯ ಸ್ಥಳವಾಗಿ ಯೂ ಕತ್ತಲಿನ ನೀರುಗಳನ್ನು ಆಕಾಶದ ಮಂದವಾದ ಮೋಡಗಳನ್ನು ತನ್ನ ಸುತ್ತಲು ಡೇರೆಯಾಗಿಯೂ ಮಾಡಿ ದನು. ಆತನ ಮುಂದಿದ್ದ ಪ್ರಕಾಶದಿಂದ ಆತನ ಮಂದವಾದ ಮೋಡಗಳೂ ಕಲ್ಮಳೆಗಳೂ ಉರಿಗೆಂಡ ಗಳೂ ಹಾದು ಹೋದವು.