Psalms · chapter 97 · verse 7
Psalm 97:7 in Kannada
ಕೆತ್ತಿದ ವಿಗ್ರಹಗಳನ್ನು ಸೇವಿಸಿ, ವಿಗ್ರಹಗಳಲ್ಲಿ ಹೆಮ್ಮೆಪಡುವ ವರೆಲ್ಲರು ನಾಚಿಕೆಪಡಲಿ; ಎಲ್ಲಾ ದೇವರುಗಳೇ, ಆತನನ್ನು ಆರಾಧಿಸಿರಿ.
Kettida vigrahagalannu sevisi, vigrahagalalli hemmepaduva varellaru naachikepadali; ellaa devarugale, aatanannu aaraadhisiri.
Psalm 97:7 in English
- King James Version (KJV)
- Confounded be all they that serve graven images, that boast themselves of idols: worship him, all [ye] gods.
- World English Bible (WEB)
- Let all them be shamed who serve engraved images, who boast in their idols. Worship him, all you gods!
- American Standard Version (ASV)
- Let all them be put to shame that serve graven images, That boast themselves of idols: Worship him, all ye gods.
- Bible in Basic English (BBE)
- Shamed be all those who give worship to images, and take pride in false gods; give him worship, all you gods.
- Darby Translation (DBY)
- Ashamed be all they that serve graven images, that boast themselves of idols. Worship him, all ye gods.
- Webster's Bible (WBS)
- Confounded be all they that serve graven images, that boast themselves of idols; worship him, all [ye] gods.
- Young's Literal Translation (YLT)
- Ashamed are all servants of a graven image, Those boasting themselves in idols, Bow yourselves to him, all ye gods.
Read in context
- 5ಕರ್ತನ ಸನ್ನಿಧಿಯಲ್ಲಿ ಸಮಸ್ತ ಭೂಮಿಯು ಕರ್ತನ ಮುಂದೆ ಬೆಟ್ಟಗಳು ಮೇಣದ ಹಾಗೆ ಕರಗುತ್ತವೆ.
- 6ಆಕಾಶಗಳು ಆತನ ನೀತಿಯನ್ನು ತಿಳಿಸುತ್ತವೆ; ಎಲ್ಲಾ ಜನಗಳು ಆತನ ಘನವನ್ನು ನೋಡುತ್ತಾರೆ.
- 7ಕೆತ್ತಿದ ವಿಗ್ರಹಗಳನ್ನು ಸೇವಿಸಿ, ವಿಗ್ರಹಗಳಲ್ಲಿ ಹೆಮ್ಮೆಪಡುವ ವರೆಲ್ಲರು ನಾಚಿಕೆಪಡಲಿ; ಎಲ್ಲಾ ದೇವರುಗಳೇ, ಆತನನ್ನು ಆರಾಧಿಸಿರಿ.
- 8ಚೀಯೋನ್ ಇದನ್ನು ಕೇಳಿ ಸಂತೋಷಿಸಿತು. ಓ ಕರ್ತನೇ, ನಿನ್ನ ನ್ಯಾಯಗಳ ನಿಮಿತ್ತ ಯೆಹೂದದ ಕುಮಾರ್ತೆಗಳು ಉಲ್ಲಾಸಿಸುತ್ತಾರೆ.
- 9ಕರ್ತನೇ, ನೀನು ಸಮಸ್ತ ಭೂಮಿಯ ಮೇಲೆ ಮಹೋನ್ನತನಾಗಿದ್ದೀ; ಎಲ್ಲಾ ದೇವರುಗಳ ಮೇಲೆ ಬಹಳವಾಗಿ ಹೆಚ್ಚಿಸಲ್ಪಟ್ಟಿದ್ದೀ.
Cross references
- Jeremiah 10:14 ಯೆರೆಮೀಯ 10:14ಪ್ರತಿ ಮನುಷ್ಯನು ತನ್ನ ಜ್ಞಾನದಲ್ಲಿ ಪಶುವಾಗಿದ್ದಾನೆ; ಎರಕ ಹೊಯ್ಯುವವರೆಲ್ಲಾ ಕೆತ್ತಿದ ವಿಗ್ರಹಕ್ಕೋಸ್ಕರ ನಾಚಿಕೆಪಡುತ್ತಾರೆ; ಅವರ ಎರಕ ವಿಗ್ರಹವು ಸುಳ್ಳಾದದ್ದು; ಅವುಗಳಲ್ಲಿ ಉಸಿರು ಇಲ್ಲ.
- Hebrews 1:6 ಇಬ್ರಿಯರಿಗೆ 1:6ಇದಲ್ಲದೆ ದೇವರು ಮೊದಲು ಹುಟ್ಟಿದಾತನನ್ನು ಲೋಕದೊಳಗೆ ಬರ ಮಾಡುವಾಗ--ದೇವದೂತರೆಲ್ಲರೂ ಆತನನ್ನು ಆರಾಧಿಸಲಿ ಎಂದು ಹೇಳುತ್ತಾನೆ.
- Isaiah 42:17 ಯೆಶಾಯ 42:17ಕೆತ್ತಿದ ವಿಗ್ರಹಗಳಲ್ಲಿ ನಂಬಿಕೆಯಿಡುವವರು ಎರಕಹೊಯ್ದ ವಿಗ್ರಹಗಳಿಗೆ ನೀವೇ ನಮ್ಮ ದೇವರುಗಳೆಂದು ಹೇಳುವ ವರು ಹಿಂದೆ ಬಿದ್ದು ನಾಚಿಕೆಗೆ ಈಡಾಗುವರು.
- Leviticus 26:1 ಯಾಜಕಕಾಂಡ 26:1ನೀವು ನಿಮಗಾಗಿ ವಿಗ್ರಹಗಳನ್ನಾಗಲಿ ಕೆತ್ತಿದ ಪ್ರತಿಮೆಯನ್ನಾಗಲಿ ಮಾಡಿಕೊಳ್ಳಬೇಡಿರಿ; ನಿಲ್ಲಿಸುವ ಪ್ರತಿಮೆಯನ್ನಾಗಲಿ ಮಾಡಿಕೊಳ್ಳಬೇಡಿರಿ. ಕಲ್ಲಿನ ವಿಗ್ರಹಗಳನ್ನಾಗಲಿ ನಿಮ್ಮ ದೇಶದಲ್ಲಿಟ್ಟು ಕೊಂಡು ಅವುಗಳಿಗೆ ಅಡ್ಡ ಬೀಳಬೇಡಿರಿ. ನಿಮ್ಮ ದೇವರಾಗಿರುವ ಕರ್ತನು ನಾನೇ.
- Revelation 5:11–14 ಪ್ರಕಟನೆ 5:11–14ಇದಲ್ಲದೆ ನಾನು ನೋಡಲಾಗಿ ಸಿಂಹಾಸನದ, ಜೀವಿಗಳ ಮತ್ತು ಹಿರಿಯರ ಸುತ್ತಲು ಬಹುಮಂದಿ ದೂತರ ಶಬ್ದವನ್ನು ಕೇಳಿದೆನು; ಅವರ ಸಂಖ್ಯೆಯು ಕೋಟ್ಯಾನುಕೋಟಿ ಯಾಗಿಯೂ ಲಕ್ಷೋಪಲಕ್ಷವಾಗಿಯೂ ಇತ್ತು. ಅವರು--ವಧಿತನಾದ ಕುರಿಮರಿಯು ಬಲ ಐಶ್ವರ್ಯ ಜ್ಞಾನ ಸಾಮರ್ಥ್ಯ ಮಾನಪ್ರಭಾವ ಸ್ತೋತ್ರಗಳನ್ನು ಹೊಂದುವದಕ್ಕೆ ಯೋಗ್ಯನು ಎಂದು ಮಹಾಶಬ್ದದಿಂದ ಹೇಳಿದರು. ಇದಲ್ಲದೆ ಆಕಾಶ ದಲ್ಲಿಯೂ ಭೂಮಿಯ ಮೇಲೆಯೂ ಭೂಮಿಯ ಕೆಳಗೂ ಸಮುದ್ರದಲ್ಲಿಯೂ ಅವುಗಳಲ್ಲಿರುವ ಎಲ್ಲಾ ಸೃಷ್ಟಿಗಳೂ--ಸಿಂಹಾಸನಾಸೀನನಾಗಿರುವಾತನಿಗೂ ಕುರಿಮರಿಯಾದಾತನಿಗೂ ಸ್ತೋತ್ರಮಾನ ಪ್ರಭಾವ ಬಲವು ಯುಗಯುಗಾಂತರಗಳಲ್ಲಿಯೂ ಇರಲಿ ಎಂದು ಹೇಳುವದನ್ನು ನಾನು ಕೇಳಿದೆನು.ಆಗ ನಾಲ್ಕು ಜೀವಿಗಳು--ಆಮೆನ್ ಅಂದವು; ಇಪ್ಪತ್ತನಾಲ್ಕು ಮಂದಿ ಹಿರಿಯರು ಅಡ್ಡ ಬಿದ್ದು ಯುಗಯುಗಾಂತರಗಳಲ್ಲಿ ಜೀವಿಸುವಾತನನ್ನು ಆರಾಧಿಸಿದರು. ಆಗ ನಾಲ್ಕು ಜೀವಿಗಳು--ಆಮೆನ್ ಅಂದವು; ಇಪ್ಪತ್ತನಾಲ್ಕು ಮಂದಿ ಹಿರಿಯರು ಅಡ್ಡ ಬಿದ್ದು ಯುಗಯುಗಾಂತರಗಳಲ್ಲಿ ಜೀವಿಸುವಾತನನ್ನು ಆರಾಧಿಸಿದರು.
- Exodus 20:4 ವಿಮೋಚನಕಾಂಡ 20:4ನಿನಗೆ ಆಕಾಶದಲ್ಲಾಗಲಿ ಭೂಮಿಯಲ್ಲಾಗಲಿ ಭೂಮಿಯ ಕೆಳಗಿರುವ ನೀರುಗಳಲ್ಲಾಗಲಿ ಯಾವದರ ವಿಗ್ರಹವನ್ನಾಗಲಿ ರೂಪವನ್ನಾಗಲಿ ನೀನು ಮಾಡಿಕೊಳ್ಳ ಬಾರದು.
- Isaiah 44:9–11 ಯೆಶಾಯ 44:9–11ಕೆತ್ತಿದ ವಿಗ್ರಹವನ್ನು ಮಾಡುವವರೆಲ್ಲರೂ ವ್ಯರ್ಥ ರೇ; ಅವರ ಮನೋರಂಜಕ ವಸ್ತುಗಳು ಯಾತಕ್ಕೂ ಬಾರವು; ಅವರು ನೋಡದೆ ಇಲ್ಲವೆ ತಿಳಿಯದೆ, ನಾಚಿಕೆಗೆ ಗುರಿಯಾಗುವಂತೆ ಅವುಗಳೇ ಅವರಿಗೆ ಸ್ವಂತ ಸಾಕ್ಷಿಗಳಾಗಿರುವವು. ದೇವರನ್ನು ರೂಪಿ ಸುವವರೂ ಇಲ್ಲವೆ ಕೆತ್ತಿದ ವ್ಯರ್ಥವಾದ ವಿಗ್ರಹವನ್ನು ಎರಕ ಹೊಯ್ಯುವವರು ಯಾರು? ಇಗೋ, ಅವನ ಸಂಗಡಿಗರೆಲ್ಲಾ ನಾಚಿಕೆಗೊಳಗಾಗುವರು; ಆ ಕೆಲಸ ದವರು ಮನುಷ್ಯ ಮಾತ್ರದವರೇ; ಅವರೆಲ್ಲರೂ ಒಟ್ಟುಗೂಡಿಕೊಂಡು ನಿಂತುಕೊಳ್ಳಲಿ, ಆದರೂ ಅವರು ಭಯಪಟ್ಟು ಒಟ್ಟಿಗೆ ಲಜ್ಜೆಪಡುವರು.
- Isaiah 41:29 ಯೆಶಾಯ 41:29ಇಗೋ, ಅವರೆಲ್ಲಾ ವ್ಯರ್ಥವೇ, ಅವರ ಕಾರ್ಯಗಳು ಶೂನ್ಯವೇ. ಅವರ ಕೆತ್ತಿದ ವಿಗ್ರಹಗಳು ಗಾಳಿ ಮತ್ತು ಗಲಿಬಿಲಿಯೇ.
- Deuteronomy 5:8 ಧರ್ಮೋಪದೇಶಕಾಂಡ 5:8ಮೇಲಿನ ಆಕಾಶ ದಲ್ಲಾಗಲಿ ಕೆಳಗಿನ ಭೂಮಿಯಲ್ಲಾಗಲಿ ಭೂಮಿಯ ಕೆಳಗಿನ ನೀರುಗಳಲ್ಲಾಗಲಿ ಇರುವಂಥ ಯಾವ ದೊಂದರ ರೂಪದ ವಿಗ್ರಹವನ್ನು ನಿನಗೆ ಮಾಡಿ ಕೊಳ್ಳಬಾರದು,
- Exodus 25:20 ವಿಮೋಚನಕಾಂಡ 25:20ಆ ಕೆರೂಬಿಗಳು ತಮ್ಮ ರೆಕ್ಕೆಗಳನ್ನು ಮೇಲಕ್ಕೆ ಚಾಚಿದವುಗ ಳಾಗಿಯೂ ರೆಕ್ಕೆಗಳಿಂದ ಕರುಣಾಸನವನ್ನು ಮುಚ್ಚುವವು ಗಳಾಗಿಯೂ ಒಂದರ ಮುಖವನ್ನು ಒಂದು ನೋಡು ವವುಗಳಾಗಿಯೂ ಇರಬೇಕು. ಕೆರೂಬಿಗಳ ಮುಖಗಳು ಕರುಣಾಸನದ ಕಡೆಗೆ ತಿರುಗಿರಬೇಕು.
- Deuteronomy 27:15 ಧರ್ಮೋಪದೇಶಕಾಂಡ 27:15ಕರ್ತನಿಗೆ ಅಸಹ್ಯ ವಾಗಿರುವ ವಿಗ್ರಹವನ್ನಾಗಲಿ ಎರಕ ಹೊಯಿದದ್ದ ನ್ನಾಗಲಿ ಮಾಡಿಕೊಂಡು ಶಿಲ್ಪಿಯ ಕೈಯಿಂದ ಮಾಡಿಸಿಗುಪ್ತವಾಗಿ ನಿಲ್ಲಿಸುವವನಿಗೆ ಶಾಪ. ಜನವೆಲ್ಲಾ ಉತ್ತರ ಕೊಟ್ಟು ಆಮೆನ್ ಎಂದು ಹೇಳಲಿ.
- Isaiah 37:18–19 ಯೆಶಾಯ 37:18–19ಕರ್ತನೇ, ಅಶ್ಶೂರದ ಅರಸರು ಸಕಲ ಜನಾಂಗ ಗಳನ್ನೂ ದೇಶಗಳನ್ನೂ ಹಾಳುಮಾಡಿ, ಅವರ ದೇವತೆ ಗಳನ್ನು ಸಹ ಬೆಂಕಿಯಲ್ಲಿ ಹಾಕಿದ್ದು ನಿಜ. ಅವು ದೇವರುಗಳಲ್ಲ, ಮರ, ಕಲ್ಲು, ಮನುಷ್ಯರ ಕೈ ಕೆಲಸ ಗಳೇ ಆದದರಿಂದಲೇ ಅವರು ಅವುಗಳನ್ನು ಹಾಳು ಮಾಡಿದರು.