Psalms · chapter 98 · verse 5
Psalm 98:5 in Kannada
ಕರ್ತನಿಗೆ ಕಿನ್ನರಿಯಿಂದ, ಹೌದು, ಕಿನ್ನರಿ ಯಿಂದಲೂ ಕೀರ್ತನೆಯ ಸ್ವರದಿಂದಲೂ ಹಾಡಿರಿ.
Kartanige kinnariyinda, haudu, kinnari yindaloo keertaneya svaradindaloo haadiri.
Psalm 98:5 in English
- King James Version (KJV)
- Sing unto the LORD with the harp; with the harp, and the voice of a psalm.
- World English Bible (WEB)
- Sing praises to the LORD with the harp, with the harp and the voice of melody.
- American Standard Version (ASV)
- Sing praises unto Jehovah with the harp; With the harp and the voice of melody.
- Bible in Basic English (BBE)
- Make melody to the Lord with instruments of music; with a corded instrument and the voice of song.
- Darby Translation (DBY)
- Sing psalms unto Jehovah with the harp: with the harp, and the voice of a song;
- Webster's Bible (WBS)
- Sing to the LORD with the harp; with the harp, and the voice of a psalm.
- Young's Literal Translation (YLT)
- Sing to Jehovah with harp, With harp, and voice of praise,
Read in context
- 3ತನ್ನ ಕರುಣೆ ಯನ್ನೂ ಸತ್ಯತೆಯನ್ನೂ ಇಸ್ರಾಯೇಲಿನ ಮನೆಗೋಸ್ಕರ ಜ್ಞಾಪಕ ಮಾಡಿಕೊಂಡಿದ್ದಾನೆ; ಭೂಮಿಯ ಕೊನೆಗಳೆಲ್ಲಾ ನಮ್ಮ ದೇವರ ರಕ್ಷಣೆಯನ್ನು ನೋಡಿವೆ.
- 4ಸಮಸ್ತ ಭೂಮಿಯೇ; ಕರ್ತನಿಗೆ ಉತ್ಸಾಹಧ್ವನಿ ಮಾಡಿರಿ, ಗಟ್ಟಿಯಾದ ಧ್ವನಿಯಿಂದ ಸಂತೋಷಿಸಿ ಕೀರ್ತಿಸಿರಿ.
- 5ಕರ್ತನಿಗೆ ಕಿನ್ನರಿಯಿಂದ, ಹೌದು, ಕಿನ್ನರಿ ಯಿಂದಲೂ ಕೀರ್ತನೆಯ ಸ್ವರದಿಂದಲೂ ಹಾಡಿರಿ.
- 6ತುತೂರಿಗಳಿಂದಲೂ ಹೌದು, ತುತೂರಿಯ ಶಬ್ಧ ದಿಂದಲೂ, ಅರಸನಾದ ಕರ್ತನ ಮುಂದೆ ಜಯಧ್ವನಿ ಮಾಡಿರಿ.
- 7ಸಮುದ್ರವೂ ಅದರ ಪರಿಪೂರ್ಣತೆಯೂ ಲೋಕ ವೂ ಅದರ ನಿವಾಸಿಗಳೂ ಘೋಷಿಸಲಿ.
Cross references
- Revelation 14:2–3 ಪ್ರಕಟನೆ 14:2–3ಇದಲ್ಲದೆ ಪರಲೋಕದ ಕಡೆಯಿಂದ ಬಹಳ ನೀರುಗಳಂತೆಯೂ ಮಹಾಗುಡುಗಿನಂತೆಯೂ ಇದ್ದ ಶಬ್ದವನ್ನು ನಾನು ಕೇಳಿದೆನು. ತಮ್ಮ ವೀಣೆಗಳನ್ನು ಬಾರಿಸುತ್ತಿದ್ದ ವೀಣೆಗಾರರ ಸ್ವರವನ್ನೂ ನಾನು ಕೇಳಿದೆನು. ಅವರು ಸಿಂಹಾಸನದ ಮುಂದೆಯೂ ಆ ನಾಲ್ಕು ಜೀವಿಗಳ ಮತ್ತು ಹಿರಿಯರ ಮುಂದೆಯೂ ಹೊಸ ಹಾಡಿನಂತಿದ್ದ ಹಾಡನ್ನು ಅವರು ಹಾಡಿದರು. ಭೂ ಲೋಕದೊಳಗಿಂದ ವಿಮೋಚಿಸಲ್ಪಟ್ಟ ಆ ಲಕ್ಷದ ನಾಲ್ವತ್ತು ನಾಲ್ಕು ಸಾವಿರ ಜನರೇ ಹೊರತು ಬೇರೆ ಯಾರೂ ಆ ಹಾಡನ್ನು ಕಲಿಯಲಾರರು.
- Revelation 5:8 ಪ್ರಕಟನೆ 5:8ಆತನು ಆ ಪುಸ್ತಕವನ್ನು ತೆಗೆದುಕೊಂಡಾಗ ಆ ನಾಲ್ಕು ಜೀವಿಗಳೂ ಇಪ್ಪತ್ತನಾಲ್ಕು ಮಂದಿ ಹಿರಿಯರೂ ಕುರಿಮರಿಯಾದಾತನ ಮುಂದೆ ಅಡ್ಡಬಿದ್ದರು; ಅವರೆಲ್ಲರ ಕೈಗಳಲ್ಲಿ ವೀಣೆಗಳೂ ಪರಿ ಶುದ್ಧರ ಪರಿಮಳವಾದ ಪ್ರಾರ್ಥನೆಗಳಿಂದ ತುಂಬಿದ್ದ ಚಿನ್ನದ ಪಾತ್ರೆಗಳೂ ಇದ್ದವು.
- Psalm 33:2 ಕೀರ್ತನೆಗಳು 33:2ಕರ್ತನನ್ನು ಕಿನ್ನರಿ ಯಿಂದ ಕೊಂಡಾಡಿರಿ; ಹತ್ತು ತಂತಿಗಳ ವೀಣೆಯಿಂದ ಆತನನ್ನು ಕೀರ್ತಿಸಿರಿ.
- Isaiah 51:3 ಯೆಶಾಯ 51:3ಕರ್ತನು ಚೀಯೋನನ್ನು ಆದರಿಸುವನು; ಆತನು ಅದರ ಹಾಳಾದ ಸ್ಥಳಗ ಳನ್ನು ಸುಧಾರಿಸುವನು; ಅದರ ಅರಣ್ಯವನ್ನು ಏದೆನ್ ಹಾಗೆಯೂ ಮರುಭೂಮಿಯನ್ನು ಕರ್ತನ ತೋಟದ ಹಾಗೆಯೂ ಮಾಡುವನು. ಅಲ್ಲಿ ಆನಂದವೂ ಉಲ್ಲಾ ಸವೂ ಉಪಕಾರ ಸ್ತುತಿಯೂ ಇಂಪಾದ ಸ್ವರವೂ ಕಂಡುಬರುವವು.
- Psalm 92:3–4 ಕೀರ್ತನೆಗಳು 92:3–4ಹತ್ತು ತಂತಿ ವೀಣೆ ಯಿಂದಲೂ ವಾದ್ಯದಿಂದಲೂ ಕಿನ್ನರಿಯ ಘನ ಸ್ವರ ದಿಂದಲೂ ತಿಳಿಸುವದು ಒಳ್ಳೇದು. ಕರ್ತನೇ, ನಿನ್ನ ಕ್ರಿಯೆಯಿಂದ ನನ್ನನ್ನು ಸಂತೋಷ ಪಡಿಸಿದ್ದೀ. ನಿನ್ನ ಕೈಕೆಲಸಗಳಲ್ಲಿ ನಾನು ಜಯ ಧ್ವನಿಗೈಯುತ್ತೇನೆ.
- 1 Chronicles 25:1–6 1 ಪೂರ್ವಕಾಲವೃತ್ತಾಂತ 25:1–6ಇದಲ್ಲದೆ ದಾವೀದನೂ ಸೈನ್ಯಾಧಿಪತಿಗಳೂ ಆಸಾಫ್ ಹೇಮಾನ್ ಯೆದುತೂನ್ ಇವರ ಕುಮಾರರಲ್ಲಿ ಕಿನ್ನರಿ ವೀಣೆ ತಾಳಗಳಿಂದ ಪ್ರವಾದಿಸಲು ತಕ್ಕವರನ್ನು ಸೇವೆಗೆ ಪ್ರತ್ಯೇಕಿಸಿದರು. ಮತ್ತು ಕೆಲಸದವರ ಲೆಕ್ಕವು ಅವರ ಸೇವೆಯ ಪ್ರಕಾರ ವಾಗಿತ್ತು. ಅವರು ಯಾರಂದರೆ, ಆಸಾಫನ ಕುಮಾರ ರಲ್ಲಿ ಜಕ್ಕೂರನು ಯೋಸೇಫನು ನೆತನ್ಯನು ಅಶರೇ ಲನು; ಇವರು ಆಸಾಫನ ಕುಮಾರರು; ಅರಸ ಆಜ್ಞೆಯ ಪ್ರಕಾರ ಆಸಾಫನ ಕೈಕೆಳಗೆ ಪ್ರವಾದಿಸಿದವರು. ಯೆದುತೂನನ ಕುಮಾರರಲ್ಲಿ ಗೆದಲ್ಯನು, ಚೆರೀಯು, ಯೆಶಾಯನು, ಹಷಬ್ಯನು, ಮತ್ತಿತ್ಯನು ಈ ಆರು ಮಂದಿಯು; ತಮ್ಮ ತಂದೆಯಾದ ಯೆದುತೂನನ ಕೈಕೆಳಗೆ ಕಿನ್ನರಿಗಳಿಂದ ಕರ್ತನನ್ನು ಕೊಂಡಾಡುವದಕ್ಕೂ ಸ್ತುತಿಸುವದಕ್ಕೂ ಪ್ರವಾದಿಸಿದವರು. ಹೆಮಾನನ ಕುಮಾರರಲ್ಲಿ ಬುಕ್ಕೀಯನು, ಮತ್ತನ್ಯನು, ಉಜ್ಜಿಯೇ ಲನು, ಶೆಬೂವೇಲನು, ಯೆರೀಮೋತನು, ಹನನ್ಯನು, ಹನಾನೀಯು, ಎಲೀಯಾತನು, ಗಿದ್ದಲ್ತಿಯು, ರೋಮ ಮ್ತಿಯೆಜರನು, ಯೊಷ್ಬೆಕಾಷನು, ಮಲ್ಲೋತೀಯು, ಹೋತೀರನು, ಮಹಜೀಯೋತನು. ಇವರೆಲ್ಲರು ದೇವರ ಕಾರ್ಯಗಳಲ್ಲಿ ಕೊಂಬು ಊದುವ ಅರಸನ ದರ್ಶಿಯಾದ ಹೆಮಾನನ ಕುಮಾರರು. ದೇವರು ಹೆಮಾನನಿಗೆ ಹದಿನಾಲ್ಕು ಮಂದಿ ಕುಮಾರರನ್ನೂ ಮೂರು ಮಂದಿ ಕುಮಾರ್ತೆಯರನ್ನೂ ಕೊಟ್ಟನು. ಅರಸನು ಆಸಾಫನಿಗೂ ಯೆದುತೂನನಿಗೂ ಹೆಮಾ ನನಿಗೂ ಆಜ್ಞಾಪಿಸಿದ ಪ್ರಕಾರ ಇವರೆಲ್ಲರು ದೇವರ ಮಂದಿರದ ಸೇವೆಗೋಸ್ಕರ ಕರ್ತನ ಮನೆಯಲ್ಲಿ ತಾಳ ವೀಣೆ ಕಿನ್ನರಿಗಳಿಂದ ಹಾಡುವದಕ್ಕೆ ತಮ್ಮ ತಂದೆಯ ಕೈಕೆಳಗೆ ಇದ್ದರು.
- 2 Chronicles 29:25 2 ಪೂರ್ವಕಾಲವೃತ್ತಾಂತ 29:25ಇದಲ್ಲದೆ ದಾವೀದನೂ ಅರಸನ ದರ್ಶಿಯಾದ ಗಾದನೂ ಪ್ರವಾ ದಿಯಾದ ನಾತಾನನೂ ಇವರ ಆಜ್ಞೆಯ ಪ್ರಕಾರ ತಾಳ ವೀಣೆ ಕಿನ್ನರಿಗಳನ್ನು ಹಿಡಿದವರಾಗಿ ಕರ್ತನ ಆಲಯದಲ್ಲಿ ಲೇವಿಯರನ್ನು ನಿಲ್ಲಿಸಿದನು. ಕರ್ತನ ಆಜ್ಞೆಯು ಅವನ ಪ್ರವಾದಿಗಳ ಮುಖಾಂತರ ಹಾಗೆ ಇತ್ತು.
- 1 Chronicles 15:16 1 ಪೂರ್ವಕಾಲವೃತ್ತಾಂತ 15:16ಇದಲ್ಲದೆ ದಾವೀದನು ವಿಶೇಷವಾದ ವೀಣೆ ಗಳನ್ನೂ ಕಿನ್ನರಿಗಳನ್ನೂ ತಾಳಗಳನ್ನೂ ಬಾರಿಸಿ ಸಂತೋಷದಿಂದ ಸ್ವರವನ್ನು ಎತ್ತುವ ಹಾಗೆ ತಮ್ಮ ಸಹೋದರರಲ್ಲಿ ಹಾಡುಗಾರರನ್ನು ನೇಮಿಸುವ ದಕ್ಕೆ ಲೇವಿಯರ ಪ್ರಧಾನರಿಗೆ ಆಜ್ಞಾಪಿಸಿದನು.