Psalms · chapter 99 · verse 8
Psalm 99:8 in Kannada
ನಮ್ಮ ದೇವರಾದ ಓ ಕರ್ತನೇ, ನೀನು ಅವರಿಗೆ ಉತ್ತರಕೊಟ್ಟೆ; ಅವರ ಕೃತ್ಯಗಳಿಗೋಸ್ಕರ ನೀನು ಅವ ರಿಗೆ ಮುಯ್ಯಿಗೆ ಮುಯ್ಯಿ ಕೊಡುವಾತನಾಗಿದ್ದರೂ ಅವರನ್ನು ಕ್ಷಮಿಸುವ ದೇವರು ನೀನಾಗಿದ್ದೀ.ನಮ್ಮ ದೇವರಾದ ಕರ್ತನನ್ನು ಉನ್ನತಪಡಿಸಿರಿ; ಆತನ ಪರಿ ಶುದ್ಧ ಪರ್ವತದಲ್ಲಿ ಆರಾಧಿಸಿರಿ; ನಮ್ಮ ದೇವರಾದ ಕರ್ತನು ಪರಿಶುದ್ಧನೇ.
Namma devaraada o kartane, neenu avarige uttarakotte; avara krutyagaligoskara neenu ava rige muyyige muyyi koduvaatanaagiddaroo avarannu kshamisuva devaru neenaagiddee.namma devaraada kartanannu unnatapadisiri; aatana pari shuddha parvatadalli aaraadhisiri; namma devaraada kartanu parishuddhane.
Psalm 99:8 in English
- King James Version (KJV)
- Thou answeredst them, O LORD our God: thou wast a God that forgavest them, though thou tookest vengeance of their inventions.
- World English Bible (WEB)
- You answered them, LORD our God. You are a God who forgave them, although you took vengeance for their doings.
- American Standard Version (ASV)
- Thou answeredst them, O Jehovah our God: Thou wast a God that forgavest them, Though thou tookest vengeance of their doings.
- Bible in Basic English (BBE)
- You gave them an answer, O Lord our God; you took away their sin, though you gave them punishment for their wrongdoing.
- Darby Translation (DBY)
- Jehovah, our God, thou answeredst them: a forgiving God wast thou unto them, though thou tookest vengeance of their doings.
- Webster's Bible (WBS)
- Thou didst answer them, O LORD our God: thou wast a God that forgavest them, though thou tookest vengeance of their inventions.
- Young's Literal Translation (YLT)
- O Jehovah, our God, Thou hast afflicted them, A God forgiving Thou hast been to them, And taking vengeance on their actions.
Read in context
- 6ಆತನ ಯಾಜಕರಲ್ಲಿ ಮೋಶೆಯೂ ಆರೋನನೂ ಆತನ ಹೆಸರನ್ನು ಕರೆಯುವವರಲ್ಲಿ ಸಮುವೇಲನೂ; ಅವರು ಕರ್ತನನ್ನು ಕರೆದಾಗ ಆತನು ಅವರಿಗೆ ಉತ್ತರ ಕೊಟ್ಟನು.
- 7ಆತನು ಮೇಘಸ್ತಂಭದಲ್ಲಿಂದ ಅವರ ಸಂಗಡ ಮಾತನಾಡಿದನು; ಆತನ ಸಾಕ್ಷಿಗಳನ್ನೂ ಆತನು ಅವರಿಗೆ ಕೊಟ್ಟ ನಿಯಮಗಳನ್ನೂ ಅವರು ಕೈಕೊಂಡರು.
- 8ನಮ್ಮ ದೇವರಾದ ಓ ಕರ್ತನೇ, ನೀನು ಅವರಿಗೆ ಉತ್ತರಕೊಟ್ಟೆ; ಅವರ ಕೃತ್ಯಗಳಿಗೋಸ್ಕರ ನೀನು ಅವ ರಿಗೆ ಮುಯ್ಯಿಗೆ ಮುಯ್ಯಿ ಕೊಡುವಾತನಾಗಿದ್ದರೂ ಅವರನ್ನು ಕ್ಷಮಿಸುವ ದೇವರು ನೀನಾಗಿದ್ದೀ.ನಮ್ಮ ದೇವರಾದ ಕರ್ತನನ್ನು ಉನ್ನತಪಡಿಸಿರಿ; ಆತನ ಪರಿ ಶುದ್ಧ ಪರ್ವತದಲ್ಲಿ ಆರಾಧಿಸಿರಿ; ನಮ್ಮ ದೇವರಾದ ಕರ್ತನು ಪರಿಶುದ್ಧನೇ.
- 9ನಮ್ಮ ದೇವರಾದ ಕರ್ತನನ್ನು ಉನ್ನತಪಡಿಸಿರಿ; ಆತನ ಪರಿ ಶುದ್ಧ ಪರ್ವತದಲ್ಲಿ ಆರಾಧಿಸಿರಿ; ನಮ್ಮ ದೇವರಾದ ಕರ್ತನು ಪರಿಶುದ್ಧನೇ.
Cross references
- Numbers 20:12 ಅರಣ್ಯಕಾಂಡ 20:12ಆಗ ಕರ್ತನು ಮೋಶೆ ಆರೋನನ ಸಂಗಡ ಮಾತನಾಡಿ--ನೀವು ಇಸ್ರಾಯೇಲ್ ಮಕ್ಕಳ ಕಣ್ಣುಗಳ ಮುಂದೆ ನನ್ನನ್ನು ಪರಿಶುದ್ಧಮಾಡುವದಕ್ಕೆ ನನ್ನಲ್ಲಿ ವಿಶ್ವಾಸಿ ಸದೆ ಇದ್ದ ಕಾರಣ ನಾನು ಅವರಿಗೆ ಕೊಟ್ಟ ದೇಶದಲ್ಲಿ ನೀವು ಸಮೂಹವನ್ನು ಸೇರಿಸುವದಿಲ್ಲ ಅಂದನು.
- Psalm 89:33 ಕೀರ್ತನೆಗಳು 89:33ಆದಾಗ್ಯೂ ನನ್ನ ಪ್ರೀತಿ ಕರುಣೆಯನ್ನು ಅವನಿಂದ ಸಂಪೂರ್ಣವಾಗಿ ತೊಲಗಿಸೆನು; ಇಲ್ಲವೇ ನನ್ನ ನಂಬಿಗಸ್ತಿಕೆಯನ್ನು ವ್ಯರ್ಥ ಮಾಡೆನು.
- Jeremiah 46:28 ಯೆರೆಮೀಯ 46:28ನನ್ನ ಸೇವಕನಾದ ಯಾಕೋಬನೇ, ನೀನು ಭಯಪಡ ಬೇಡವೆಂದು ಕರ್ತನು ಅನ್ನುತ್ತಾನೆ; ನಾನೇ ನಿನ್ನ ಸಂಗಡ ಇದ್ದೇನೆ; ನಾನು ನಿನ್ನನ್ನು ಎಲ್ಲಿಗೆ ಓಡಿಸಿ ದೆನೋ ಆ ಜನಾಂಗಗಳನ್ನೆಲ್ಲಾ ಸಂಪೂರ್ಣವಾಗಿ ನಾಶಮಾಡು ತ್ತೇನೆ; ಆದರೆ ನಿನ್ನನ್ನು ನಾಶಮಾಡುವದಿಲ್ಲ; ನ್ಯಾಯದಿಂದಲೇ ನಿನ್ನನ್ನು ಶಿಕ್ಷಿಸುತ್ತೇನೆ; ಆದಾಗ್ಯೂ ನಿನ್ನನ್ನು ಶಿಕ್ಷಿಸದೇ ಬಿಡುವದಿಲ್ಲ.
- Ecclesiastes 7:29 ಪ್ರಸಂಗಿ 7:29ಇಗೋ, ದೇವರು ಮನುಷ್ಯನನ್ನು ಸತ್ಯವಂತನನ್ನಾಗಿ ಮಾಡಿದನು. ಇದನ್ನು ಮಾತ್ರ ನಾನು ಕಂಡುಕೊಂಡಿದ್ದೇನೆ, ಅವರಾದರೋ ಅನೇಕ ಕಲ್ಪನೆ ಗಳನ್ನು ಹುಡುಕಿದ್ದಾರೆ.
- Deuteronomy 9:19–20 ಧರ್ಮೋಪದೇಶಕಾಂಡ 9:19–20ಕರ್ತನು ನಿಮ್ಮನ್ನು ನಾಶಮಾಡುವ ಹಾಗೆ ನಿಮ್ಮ ಮೇಲೆ ಮಾಡುವ ಕೋಪ ರೌದ್ರಗಳಿಗೆ ಹೆದರಿದೆನು; ಆ ಕಾಲದಲ್ಲಿಯೂ ಕರ್ತನು ನನ್ನ ಪ್ರಾರ್ಥನೆ ಯನ್ನು ಕೇಳಿದನು. ಆರೋನನನ್ನು ನಾಶಮಾಡುವ ಹಾಗೆ ಕರ್ತನು ಅವನ ಮೇಲೆಯೂ ಬಹಳ ಕೋಪ ಗೊಂಡನು. ಆದದರಿಂದ ಆರೋನನಿಗೋಸ್ಕರವೂ ಆ ಸಮಯದಲ್ಲಿ ಪ್ರಾರ್ಥನೆಮಾಡಿದೆನು.
- Numbers 20:24 ಅರಣ್ಯಕಾಂಡ 20:24ಆರೋನನು ತನ್ನ ಜನರ ಸಂಗಡ ಕೂಡಿಸಲ್ಪಡುವನು; ನೀವು ಮೆರೀಬಾದ ನೀರಿನ ಹತ್ತಿರ ನನ್ನ ಮಾತಿಗೆ ತಿರುಗಿ ಬಿದ್ದದರಿಂದ ನಾನು ಇಸ್ರಾಯೇಲ್ ಮಕ್ಕಳಿಗೆ ಕೊಟ್ಟ ದೇಶಕ್ಕೆ ಅವನು ಪ್ರವೇಶಿಸುವದಿಲ್ಲ.
- Numbers 14:20–34 ಅರಣ್ಯಕಾಂಡ 14:20–34ಆಗ ಕರ್ತನು--ನಿನ್ನ ಮಾತಿನ ಪ್ರಕಾರ ಮನ್ನಿಸಿ ದ್ದೇನೆ. ಆದಾಗ್ಯೂ ನನ್ನ ಜೀವದಾಣೆ, ಭೂಮಿಯೆಲ್ಲಾ ಕರ್ತನ ಮಹಿಮೆಯಿಂದ ತುಂಬಿರುವದು. ಐಗುಪ್ತ ದೇಶದಲ್ಲಿಯೂ ಅರಣ್ಯದಲ್ಲಿಯೂ ನಾನು ನಡಿಸಿದ ಸೂಚಕಕಾರ್ಯಗಳನ್ನೂ ನನ್ನ ಮಹಿಮೆಯನ್ನೂ ನೋಡಿದ ಈ ಸಕಲ ಮನುಷ್ಯರು ನನ್ನನ್ನು ಈಗ ಹತ್ತು ಸಾರಿ ಶೊಧಿಸಿ ಕೇಳದೆ ಹೋದದ್ದರಿಂದ ನಾನು ಅವರ ಪಿತೃಗಳಿಗೆ ಪ್ರಮಾಣಮಾಡಿದ ದೇಶವನ್ನು ನಿಶ್ಚಯವಾಗಿ ಅವರು ನೋಡುವದಿಲ್ಲ; ಇಲ್ಲವೆ ನನಗೆ ಕೋಪವನ್ನು ಎಬ್ಬಿಸಿದವರು ಸಹ ಅದನ್ನು ನೋಡು ವದಿಲ್ಲ. ಆದರೆ ನನ್ನ ಸೇವಕನಾದ ಕಾಲೇಬನಲ್ಲಿ ನನ್ನ ಆತ್ಮವಿದದ್ದರಿಂದಲೂ ಅವನು ನನ್ನನ್ನು ಪೂರ್ಣ ವಾಗಿ ಹಿಂಬಾಲಿಸಿದ್ದರಿಂದಲೂ ಅವನು ಸಂಚರಿಸಿದ ದೇಶಕ್ಕೆ ಅವನನ್ನು ತರುವೆನು; ಅವನ ಸಂತಾನವು ಅದನ್ನು ಸ್ವತಂತ್ರಿಸಿಕೊಳ್ಳುವದು. (ಆಗ ಅಮಾಲೇ ಕ್ಯರೂ ಕಾನಾನ್ಯರೂ ತಗ್ಗಿನಲ್ಲಿ ವಾಸಮಾಡುತ್ತಿದ್ದರು.) ನಾಳೆ ನೀವು ತಿರುಗಿಕೊಂಡು ಕೆಂಪು ಸಮುದ್ರದ ಮಾರ್ಗವಾಗಿ ಅರಣ್ಯಕ್ಕೆ ಹೊರಡಿರಿ ಎಂದು ಹೇಳಿದನು. ಕರ್ತನು ಮಾತನಾಡಿ ಮೋಶೆಗೂ ಆರೋನ ನಿಗೂ-- ಈ ಕೆಟ್ಟ ಸಭೆಯು ನನಗೆ ವಿರೋಧವಾಗಿ ಗುಣುಗುಟ್ಟುವದನ್ನು ನಾನು ಎಷ್ಟುಕಾಲ ಸಹಿಸಲಿ? ಇಸ್ರಾಯೇಲ್ ಮಕ್ಕಳು ನನಗೆ ವಿರೋಧವಾಗಿ ಗುಣುಗುಟ್ಟಿದ್ದನ್ನು ನಾನು ಕೇಳಿದ್ದೇನೆ. ಆದದರಿಂದ ನೀನು ಅವರಿಗೆ--ನನ್ನ ಜೀವದಾಣೆ, ನೀವು ನನ್ನ ಕಿವಿಗಳು ಕೇಳುವಂತೆ ಮಾತನಾಡಿದ ಪ್ರಕಾರವೇ ನಿಮಗೆ ಮಾಡುವೆನು ಎಂದು ಕರ್ತನು ಹೇಳುತ್ತಾನೆ. ಈ ಅರಣ್ಯದಲ್ಲಿ ನಿಮ್ಮ ಹೆಣಗಳು ಬೀಳುವವು. ನನಗೆ ವಿರೋಧವಾಗಿ ಗುಣುಗುಟ್ಟಿದವರೆಲ್ಲರೂ ನಿಮ್ಮ ಪೂರ್ಣ ಸಂಖ್ಯೆಯ ಪ್ರಕಾರ ಎಣಿಸಿದ ಇಪ್ಪತ್ತು ವರುಷವೂ ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳವರೂ ಆದ ನೀವೇ. ಯೆಫುನ್ನೆಯ ಮಗನಾದ ಕಾಲೇಬನು ನೂನನ ಮಗನಾದ ಯೆಹೋಶುವನ ಹೊರತು ನಾನು ನಿಮ್ಮನ್ನು ವಾಸಮಾಡಿಸುವದಕ್ಕಾಗಿ ಪ್ರಮಾಣಮಾಡಿದ ದೇಶಕ್ಕೆ ನಿಸ್ಸಂದೇಹವಾಗಿ ನೀವು ಬಾರದೆ ಇರುವಿರಿ. ಆದರೆ ಸುಲಿಗೆಯಾಗುವರೆಂದು ನೀವು ಹೇಳಿದ ನಿಮ್ಮ ಮಕ್ಕಳನ್ನು ಅಲ್ಲಿಗೆ ತರುವೆನು; ನೀವು ಅಲಕ್ಷ್ಯ ಮಾಡಿದ ದೇಶವನ್ನು ಅವರು ಅನುಭವಿಸುವರು. ನಿಮ್ಮ ವಿಷಯವಾಗಿಯಾದರೋ ನಿಮ್ಮ ಹೆಣಗಳು ಈ ಅರಣ್ಯದಲ್ಲಿ ಬೀಳುವವು. ಇದಲ್ಲದೆ ನಿಮ್ಮ ಮಕ್ಕಳು ನಾಲ್ವತ್ತು ವರುಷ ಅರಣ್ಯದಲ್ಲಿ ಅಲೆದಾಡಿ ನಿಮ್ಮ ಹೆಣಗಳು ಅರಣ್ಯದಲ್ಲಿ ಹಾಳಾಗಿ ಹೋಗುವ ತನಕ ನಿಮ್ಮ ಜಾರತ್ವ ಗಳನ್ನು ತಾಳಿಕೊಳ್ಳುವರು. ನೀವು ಆ ದೇಶವನ್ನು ಪರೀಕ್ಷಿಸಿದ ನಾಲ್ವತ್ತು ದಿವಸಗಳ ಪ್ರಕಾರ ಒಂದು ದಿನಕ್ಕೆ ಒಂದು ವರುಷವಾಗಿ ಈ ಪ್ರಕಾರ ನಾಲ್ವತ್ತು ವರುಷ ನಿಮ್ಮ ಅಪರಾಧಗಳನ್ನು ಹೊತ್ತು ನನ್ನ ವಾಗ್ದಾನವನ್ನು ಭಂಗಪಡಿಸಿದ ಫಲವನ್ನು ನೀವು ಅನುಭವಿಸುವಿರಿ.