Skip to content
ThuthiThuthiThuthi
Revelation · chapter 1 of 22 · 20 verses

Revelation 1 in Kannada

ಪ್ರಕಟನೆ 1

  1. ಯೇಸು ಕ್ರಿಸ್ತನ ಪ್ರಕಟನೆಯು ಆತನು ಬೇಗನೆ ಸಂಭವಿಸತಕ್ಕವುಗಳನ್ನು ತನ್ನ ಸೇವಕರಿಗೆ ತೋರಿಸುವದಕ್ಕಾಗಿ ದೇವರು ಈ ಪ್ರಕಟನೆ ಯನ್ನು ಆತನಿಗೆ ಕೊಟ್ಟನು; ಇದಲ್ಲದೆ ಆತನು ತನ್ನ ದೂತನನ್ನು ಕಳುಹಿಸಿ ಅವನ ಮೂಲಕ ಅದನ್ನು ತನ್ನ ಸೇವಕನಾದ ಯೋಹಾನನಿಗೆ ಸೂಚಿಸಿದ

    The Revelation of Jesus Christ, which God gave unto him, to shew unto his servants things which must shortly come to pass; and he sent and signified [it] by his angel unto his servant John:

  2. ಯೋಹಾನನು ದೇವರ ವಾಕ್ಯದ ವಿಷಯವಾಗಿಯೂ ಯೇಸು ಕ್ರಿಸ್ತನ ವಿಷಯವಾಗಿಯೂ ತಾನು ಕಂಡದ್ದನ್ನೆಲ್ಲ ತಿಳಿಸುವವನಾಗಿ ಸಾಕ್ಷಿಕೊಟ್ಟನು.

    Who bare record of the word of God, and of the testimony of Jesus Christ, and of all things that he saw.

  3. ಇದನ್ನು ಓದುವಂಥ ವನೂ ಈ ಪ್ರವಾದನಾ ವಾಕ್ಯಗಳನ್ನು ಕೇಳುವಂಥವರೂ ಅದರಲ್ಲಿ ಬರೆದಿರುವಂಥವುಗಳನ್ನು ಕಾಪಾಡುವಂಥ ವರೂ ಧನ್ಯರು. ಯಾಕಂದರೆ ಕಾಲವು ಸವಿಾಪವಾಗಿದೆ.

    Blessed [is] he that readeth, and they that hear the words of this prophecy, and keep those things which are written therein: for the time [is] at hand.

  4. ಯೋಹಾನನು ಆಸ್ಯದಲ್ಲಿರುವ ಏಳು ಸಭೆಗ ಳಿಗೆ--ಇರುವಾತನೂ ಇದ್ದಾತನೂ ಬರುವಾತನೂ ಆಗಿರುವಾತನಿಂದಲೂ ಆತನ ಸಿಂಹಾಸನದ ಮುಂದಿ ರುವ ಏಳು ಆತ್ಮಗಳಿಂದಲೂ ನಂಬತಕ್ಕ ಸಾಕ್ಷಿಯೂ ಸತ್ತವರೊಳಗಿಂದ ಮೊದಲು ಎದ್ದು ಬಂದಾತನೂ ಭೂರಾಜರ ಪ್ರಭುವೂ ಆಗಿರುವ ಯೇಸು ಕ್ರಿಸ್ತ ನಿಂದ

    John to the seven churches which are in Asia: Grace [be] unto you, and peace, from him which is, and which was, and which is to come; and from the seven Spirits which are before his throne;

  5. ಆತನು ನಮ್ಮನ್ನು ಪ್ರೀತಿಸಿ ತನ್ನ ಸ್ವಂತ ರಕ್ತದಿಂದ ನಮ್ಮನ್ನು ನಮ್ಮ ಪಾಪಗಳಿಂದ ತೊಳೆದು

    And from Jesus Christ, [who is] the faithful witness, [and] the first begotten of the dead, and the prince of the kings of the earth. Unto him that loved us, and washed us from our sins in his own blood,

  6. ತನ್ನ ತಂದೆ ಯಾದ ದೇವರಿಗೆ ನಮ್ಮನ್ನು ರಾಜರನ್ನಾಗಿಯೂ ಯಾಜಕ ರನ್ನಾಗಿಯೂ ಮಾಡಿದನು. ಆತನಿಗೆ ಯುಗ ಯುಗಾಂತರಗಳಲ್ಲಿ ಮಹಿಮೆಯೂ ಅಧಿಪತ್ಯವೂ ಇರಲಿ. ಆಮೆನ್‌.

    And hath made us kings and priests unto God and his Father; to him [be] glory and dominion for ever and ever. Amen.

  7. ಇಗೋ ಆತನು ಮೇಘಗ ಳೊಂದಿಗೆ ಬರುತ್ತಾನೆ; ಎಲ್ಲರ ಕಣ್ಣುಗಳು ಆತನನ್ನು ಕಾಣುವವು; ಆತನನ್ನು ಇರಿದವರು ಸಹ ಕಾಣುವರು; ಭೂಮಿಯಲ್ಲಿರುವ ಎಲ್ಲಾ ಕುಲದವರು ಆತನ ನಿಮಿತ್ತ ಗೋಳಾಡುವರು. ಹೌದು, ಹಾಗೆಯೇ ಆಗುವದು. ಆಮೆನ್‌.

    Behold, he cometh with clouds; and every eye shall see him, and they [also] which pierced him: and all kindreds of the earth shall wail because of him. Even so, Amen.

  8. ನಾನೇ ಅಲ್ಫಾವೂ ಓಮೆಗವೂ ಆದಿಯೂ ಅಂತ್ಯವೂ ಇರುವಾತನೂ ಇದ್ದಾತನೂ ಮತ್ತು ಬರು ವಾತನೂ ಸರ್ವಶಕ್ತನೂ ಆಗಿದ್ದೇನೆ ಎಂದು ಕರ್ತನು ಹೇಳುತ್ತಾನೆ.

    I am Alpha and Omega, the beginning and the ending, saith the Lord, which is, and which was, and which is to come, the Almighty.

  9. ನಿಮ್ಮ ಸಹೋದರನೂ ಯೇಸು ಕ್ರಿಸ್ತನ ನಿಮಿತ್ತ ಸಂಕಟದಲ್ಲಿ ರಾಜ್ಯದಲ್ಲಿ ಮತ್ತು ತಾಳ್ಮೆಯಲ್ಲಿ ಜೊತೆ ಗಾರನೂ ಆಗಿರುವ ಯೋಹಾನನೆಂಬ ನಾನು ದೇವರ ವಾಕ್ಯಕ್ಕೋಸ್ಕರವೂ ಯೇಸು ಕ್ರಿಸ್ತನ ವಿಷಯವಾದ ಸಾಕ್ಷೀಗೋಸ್ಕರವೂ ಪತ್ಮೊಸ್‌ ಎಂದು ಕರೆಯಲ್ಪಟ್ಟ ದ್ವೀಪದಲ್ಲಿದ್ದೆನು.

    I John, who also am your brother, and companion in tribulation, and in the kingdom and patience of Jesus Christ, was in the isle that is called Patmos, for the word of God, and for the testimony of Jesus Christ.

  10. ನಾನು ಕರ್ತನ ದಿನದಲ್ಲಿ ಆತ್ಮನ ವಶದಲ್ಲಿದ್ದಾಗ ನನ್ನ ಹಿಂದುಗಡೆ ತುತೂರಿಯ ಶಬ್ದದಂತಿ ರುವ ಮಹಾಶಬ್ದವನ್ನು ಕೇಳಿದೆನು.

    I was in the Spirit on the Lord’s day, and heard behind me a great voice, as of a trumpet,

  11. ಅದು--ನಾನೇ ಅಲ್ಫಾವೂ ಓಮೆಗವೂ ಮೊದಲನೆಯವನೂ ಕಡೆ ಯವನೂ ಆಗಿದ್ದೇನೆ; ನೀನು ನೋಡುವದನ್ನೂ ಪುಸ್ತಕದಲ್ಲಿ ಬರೆದು ಆಸ್ಯದಲ್ಲಿನ ಎಫೆಸ, ಸ್ಮುರ್ನ, ಪೆರ್ಗಮ, ಥುವತೈರ, ಸಾರ್ದಿಸ್‌, ಫಿಲದೆಲ್ಫಿಯ, ಲವೊದಿಕೀಯ ಎಂಬ ಈ ಏಳು ಸಭೆಗಳಿಗೆ ಅದನ್ನು ಕಳುಹಿಸಬೇಕೆಂದು ಹೇಳಿತು.

    Saying, I am Alpha and Omega, the first and the last: and, What thou seest, write in a book, and send [it] unto the seven churches which are in Asia; unto Ephesus, and unto Smyrna, and unto Pergamos, and unto Thyatira, and unto Sardis, and unto Philadelphia, and unto Laodicea.

  12. ನನ್ನ ಸಂಗಡ ಮಾತ ನಾಡುತ್ತಿದ್ದ ಶಬ್ದವನ್ನು ನೋಡುವದಕ್ಕಾಗಿ ಹಿಂದಕ್ಕೆ ತಿರುಗಿದೆನು. ತಿರುಗಿದಾಗ ಚಿನ್ನದ ಏಳು ದೀಪಸ್ತಂಭ ಗಳನ್ನು ನಾನು ನೋಡಿದೆನು.

    And I turned to see the voice that spake with me. And being turned, I saw seven golden candlesticks;

  13. ಆ ಏಳು ದೀಪಸ್ತಂಭಗಳ ಮಧ್ಯದಲ್ಲಿ ಮನುಷ್ಯಕುಮಾರನಂತಿದ್ದಾತನನ್ನು ಕಂಡೆನು. ಆತನು ಪಾದದವರೆಗೆ ಇರುವ ನಿಲುವಂಗಿಯನ್ನು ತೊಟ್ಟು ಚಿನ್ನದ ಪಟ್ಟಿಯನ್ನು ಎದೆಗೆ ಕಟ್ಟಿಕೊಂಡಿದ್ದನು.

    And in the midst of the seven candlesticks [one] like unto the Son of man, clothed with a garment down to the foot, and girt about the paps with a golden girdle.

  14. ಆತನ ತಲೆ ಮತ್ತು ಕೂದಲು ಬಿಳೀ ಉಣ್ಣೆಯಂತೆಯೂ ಹಿಮದಂತೆಯೂ ಬೆಳ್ಳಗಿತ್ತು. ಆತನ ಕಣ್ಣುಗಳು ಬೆಂಕಿಯ ಉರಿಯಂತೆ ಇದ್ದವು.

    His head and [his] hairs [were] white like wool, as white as snow; and his eyes [were] as a flame of fire;

  15. ಆತನ ಪಾದಗಳು ಕುಲುಮೆ ಯಲ್ಲಿ ಕಾಯಿಸಿದ ಶುದ್ಧವಾದ ತಾಮ್ರದಂತೆಯೂ ಆತನ ಧ್ವನಿಯು ಜಲಪ್ರವಾಹದ ಘೋಷದಂತೆಯೂ ಇದ್ದವು.

    And his feet like unto fine brass, as if they burned in a furnace; and his voice as the sound of many waters.

  16. ಆತನ ಬಲಗೈಯಲ್ಲಿ ಏಳು ನಕ್ಷತ್ರಗಳಿದ್ದವು; ಆತನ ಬಾಯೊಳಗಿಂದ ಹದವಾದ ಇಬ್ಬಾಯಿ ಕತ್ತಿಯು ಹೊರಟಿತು. ಆತನ ಮುಖವು ಸೂರ್ಯನು ತನ್ನ ಬಲದಲ್ಲಿ ಪ್ರಕಾಶಿಸುವಂತಿತ್ತು.

    And he had in his right hand seven stars: and out of his mouth went a sharp twoedged sword: and his countenance [was] as the sun shineth in his strength.

  17. ನಾನು ಆತನನ್ನು ಕಂಡಾಗ ಸತ್ತವನ ಹಾಗೆ ಆತನ ಪಾದಗಳ ಮುಂದೆ ಬಿದ್ದೆನು. ಆತನು ತನ್ನ ಬಲಗೈಯನ್ನು ನನ್ನ ಮೇಲಿಟ್ಟು--ಹೆದರಬೇಡ, ನಾನು ಮೊದಲನೆಯ ವನೂ ಕಡೆಯವನೂ ಆಗಿದ್ದೇನೆ.

    And when I saw him, I fell at his feet as dead. And he laid his right hand upon me, saying unto me, Fear not; I am the first and the last:

  18. ಸತ್ತವನಾದೆನು,ಈಗ ಬದುಕುವವನಾಗಿದ್ದೇನೆ. ಇಗೋ, ನಾನು ಎಂದೆಂ ದಿಗೂ ಬದುಕುವವನಾಗಿದ್ದೇನೆ. ಆಮೆನ್‌. ನರಕದ ಮತ್ತು ಮರಣದ ಬೀಗದ ಕೈಗಳೂ ನನ್ನಲ್ಲಿ ಅವೆ.

    I [am] he that liveth, and was dead; and, behold, I am alive for evermore, Amen; and have the keys of hell and of death.

  19. ನೀನು ಕಂಡವುಗಳನ್ನೂ ಈಗ ನಡೆಯುತ್ತಿರುವವು ಗಳನ್ನೂ ಇನ್ನು ಮುಂದೆ ಆಗಬೇಕಾದವುಗಳನ್ನೂ ಬರೆ.ನನ್ನ ಬಲಗೈಯಲ್ಲಿ ನೀನು ಕಂಡ ಏಳು ನಕ್ಷತ್ರಗಳ ಮತ್ತು ಏಳು ಚಿನ್ನದ ದೀಪಸ್ತಂಭಗಳ ಮರ್ಮವನ್ನು ಬರೆ. ಆ ಏಳು ನಕ್ಷತ್ರಗಳು ಆ ಏಳು ಸಭೆಗಳ ದೂತರು; ನೀನು ಕಂಡ ಆ ಏಳು ದೀಪಸ್ತಂಭಗಳು ಆ ಏಳು ಸಭೆಗಳು ಎಂದು ಹೇಳಿದನು.

    Write the things which thou hast seen, and the things which are, and the things which shall be hereafter;

  20. ನನ್ನ ಬಲಗೈಯಲ್ಲಿ ನೀನು ಕಂಡ ಏಳು ನಕ್ಷತ್ರಗಳ ಮತ್ತು ಏಳು ಚಿನ್ನದ ದೀಪಸ್ತಂಭಗಳ ಮರ್ಮವನ್ನು ಬರೆ. ಆ ಏಳು ನಕ್ಷತ್ರಗಳು ಆ ಏಳು ಸಭೆಗಳ ದೂತರು; ನೀನು ಕಂಡ ಆ ಏಳು ದೀಪಸ್ತಂಭಗಳು ಆ ಏಳು ಸಭೆಗಳು ಎಂದು ಹೇಳಿದನು.

    The mystery of the seven stars which thou sawest in my right hand, and the seven golden candlesticks. The seven stars are the angels of the seven churches: and the seven candlesticks which thou sawest are the seven churches.

All chapters of Revelation · Kannada Bible · Revelation 1 in Tamil

Kannada Bible: Kannada Old Version, public domain.

King James Version: public domain.