Revelation · chapter 11 · verse 14
Revelation 11:14 in Kannada
ಎರಡನೆಯ ಆಪತ್ತು ಕಳೆದುಹೋಯಿತು; ಇಗೋ, ಮೂರನೆಯ ಆಪತ್ತು ಬೇಗನೆ ಬರುತ್ತದೆ.
Eradaneya aapattu kaleduhoyitu; igo, mooraneya aapattu begane baruttade.
Revelation 11:14 in English
- King James Version (KJV)
- The second woe is past; [and], behold, the third woe cometh quickly.
- World English Bible (WEB)
- The second woe is past. Behold, the third woe comes quickly.
- American Standard Version (ASV)
- The second Woe is past: behold, the third Woe cometh quickly.
- Bible in Basic English (BBE)
- The second Trouble is past: see, the third Trouble comes quickly.
- Darby Translation (DBY)
- The second woe has passed; behold, the third woe comes quickly.
- Webster's Bible (WBS)
- The second woe is past; [and] behold, the third woe cometh quickly.
- Young's Literal Translation (YLT)
- The second woe did go forth, lo, the third woe doth come quickly.
Read in context
- 12ಆಮೇಲೆ ಅವರಿಗೆ--ಇಲ್ಲಿ ಮೇಲಕ್ಕೆ ಬನ್ನಿರಿ ಎಂದು ಹೇಳುವ ಪರಲೋಕದ ಮಹಾಶಬ್ದವನ್ನು ಅವರು ಕೇಳಿದರು. ಆಗ ಅವರು ಮೇಘದಲ್ಲಿ ಪರಲೋಕಕ್ಕೆ ಏರಿಹೋದರು; ಅವರ ಶತ್ರುಗಳು ಅವರನ್ನು ನೋಡಿದರು.
- 13ಅದೇ ತಾಸಿನಲ್ಲಿ ಮಹಾಭೂಕಂಪವುಂಟಾಗಿ ಆ ಪಟ್ಟಣದ ಹತ್ತರಲ್ಲೊಂದ ಂಶವು ಬಿದ್ದು ಹೋಯಿತು; ಆ ಭೂಕಂಪದಲ್ಲಿ ಏಳು ಸಾವಿರ ಮಂದಿ ಹತರಾದರು ಉಳಿದವರು ಭಯ ಗ್ರಸ್ಥರಾಗಿ ಪರಲೋಕದ ದೇವರನ್ನು ಮಹಿಮೆ ಪಡಿಸಿದರು.
- 14ಎರಡನೆಯ ಆಪತ್ತು ಕಳೆದುಹೋಯಿತು; ಇಗೋ, ಮೂರನೆಯ ಆಪತ್ತು ಬೇಗನೆ ಬರುತ್ತದೆ.
- 15ಏಳನೆಯ ದೂತನು ತುತೂರಿಯನ್ನೂದಿದನು. ಆಗ ಪರಲೋಕದಲ್ಲಿ ಮಹಾಶಬ್ದಗಳುಂಟಾಗಿ-- ಈ ಲೋಕದ ರಾಜ್ಯಗಳು ನಮ್ಮ ಕರ್ತನ ಮತ್ತು ಆತನ ಕ್ರಿಸ್ತನ ರಾಜ್ಯಗಳಾದವು; ಆತನು ಯುಗ ಯುಗಾಂತರಗಳಲ್ಲಿಯೂ ಆಳುವನು ಎಂದು ಹೇಳಿ ದವು.
- 16ತರುವಾಯ ದೇವರ ಸಮಕ್ಷಮದಲ್ಲಿ ತಮ ತಮ್ಮ ಆಸನಗಳ ಮೇಲೆ ಕೂತಿರುವ ಇಪ್ಪತ್ತನಾಲ್ಕು ಮಂದಿ ಹಿರಿಯರು ಅಡ್ಡಬಿದ್ದು--
Cross references
- Revelation 8:13 ಪ್ರಕಟನೆ 8:13ಆಮೇಲೆ ನಾನು ನೋಡಲಾಗಿ ಇಗೋ, ಒಬ್ಬ ದೂತನು ಆಕಾಶ ಮಧ್ಯದಲ್ಲಿ ಹಾರುತ್ತಾ--ಇನ್ನೂ ಊದಬೇಕಾಗಿರುವ ಮೂವರು ದೂತರ ಮಿಕ್ಕಾದ ತುತೂರಿಯ ಧ್ವನಿಗಳು ಉಂಟಾಗುವಾಗ ಭೂನಿವಾಸಿ ಗಳಿಗೆ ಅಯ್ಯೋ, ಅಯ್ಯೋ, ಅಯ್ಯೋ ಎಂದು ಮಹಾ ಶಬ್ದದಿಂದ ಹೇಳುವದನ್ನು ಕೇಳಿದೆನು.
- Revelation 9:12 ಪ್ರಕಟನೆ 9:12ಒಂದು ಆಪತ್ತು ಕಳೆದುಹೋಯಿತು; ಇದಾದ ಮೇಲೆ ಇಗೋ, ಇನ್ನೂ ಎರಡು ಆಪತ್ತುಗಳು ಬರುವದಕ್ಕಿವೆ.
- Revelation 15:1 ಪ್ರಕಟನೆ 15:1ಪರಲೋಕದಲ್ಲಿ ದೊಡ್ಡ ಅದ್ಭುತಕರವಾದ ಮತ್ತೊಂದು ಗುರುತನ್ನು ನಾನು ನೋಡಿ ದೆನು. ಏಳು ಮಂದಿ ದೂತರಲ್ಲಿ ಏಳು ಕಡೇ ಉಪದ್ರವ ಗಳಿದ್ದವು; ಯಾಕಂದರೆ ಅವುಗಳಲ್ಲಿ ದೇವರ ರೌದ್ರವು ತುಂಬಿದೆ.
- Revelation 16:1–21 ಪ್ರಕಟನೆ 16:1–21ಆಗ ಆಲಯದಿಂದ ಬಂದ ಮಹಾಶಬ್ದ ವನ್ನು ಕೇಳಿದೆನು. ಅದು ಆ ಏಳು ಮಂದಿ ದೂತರಿಗೆ--ನೀವು ಹೋಗಿ ಆ ಪಾತ್ರೆಗಳ ಲ್ಲಿರುವ ದೇವರ ರೌದ್ರವನ್ನು ಭೂಮಿಯ ಮೇಲೆ ಹೊಯ್ಯಿರಿ ಎಂದು ಹೇಳಿತು. ಆಗ ಮೊದಲನೆಯವನು ಹೊರಟು ತನ್ನ ಪಾತ್ರೆ ಯಲ್ಲಿದ್ದದ್ದನ್ನು ಭೂಮಿಯ ಮೇಲೆ ಹೊಯಿದನು; ಆಗ ಮೃಗದ ಗುರುತನ್ನು ಹೊಂದಿ ಅದರ ವಿಗ್ರಹಕ್ಕೆ ಆರಾಧನೆ ಮಾಡಿದ ಮನುಷ್ಯರ ಮೇಲೆ ಕೊಳೆಯುವ ಘೋರವಾದ ಹುಣ್ಣು ಎದ್ದಿತು. ಎರಡನೆಯ ದೂತನು ತನ್ನ ಪಾತ್ರೆಯಲ್ಲಿದ್ದದ್ದನ್ನು ಸಮುದ್ರದ ಮೇಲೆ ಹೊಯಿದಾಗ ಅದು ಸತ್ತವನ ರಕ್ತದ ಹಾಗಾಯಿತು; ಸಮುದ್ರದಲ್ಲಿ ಬದುಕುವ ಪ್ರತಿಯೊಂದು ಪ್ರಾಣಿಯು ಸತ್ತಿತು. ಮೂರನೆಯ ದೂತನು ತನ್ನ ಪಾತ್ರೆಯಲ್ಲಿ ದ್ದದ್ದನ್ನು ನದಿಗಳ ಮೇಲೆಯೂ ನೀರಿನ ಬುಗ್ಗೆಗಳ ಮೇಲೆಯೂ ಹೊಯಿದನು; ಅವುಗಳ ನೀರು ರಕ್ತವಾಯಿತು. ಅಮೇಲೆ ಜಲಗಳ ದೂತನು--ಓ ಕರ್ತನೇ, ನೀನು ಇರುವಾತನೂ ಇದ್ದಾತನೂ ಬರುವಾತನೂ ಆಗಿರುವದರಿಂದ ನೀನು ಹೀಗೆ ತೀರ್ಪು ಮಾಡಿದ್ದರಲ್ಲಿ ನೀತಿ ಸ್ವರೂಪನಾಗಿದ್ದೀ. ಅವರು ಪರಿಶುದ್ಧರ ಮತ್ತು ಪ್ರವಾದಿಗಳ ರಕ್ತವನ್ನು ಸುರಿಸಿದರು; ನೀನು ಅವರಿಗೆ ರಕ್ತವನ್ನೇ ಕುಡಿಯುವದಕ್ಕೆ ಕೊಟ್ಟಿದ್ದೀ;ಇದಕ್ಕೆ ಅವರು ಪಾತ್ರರು ಎಂದು ಹೇಳುವದನ್ನು ನಾನು ಕೇಳಿದೆನು. ಆಮೇಲೆ ಯಜ್ಞವೇದಿಯೊಳಗಿಂದ ಮತ್ತೊಬ್ಬನು--ಹೌದು, ಸರ್ವಶಕ್ತನಾಗಿರುವ ದೇವ ರಾದ ಕರ್ತನೇ, ನಿನ್ನ ನ್ಯಾಯತೀರ್ಪುಗಳು ಸತ್ಯವೂ ನೀತಿಯುಳ್ಳವುಗಳೂ ಆಗಿವೆ ಎಂದು ಹೇಳುವದನ್ನು ನಾನು ಕೇಳಿದೆನು. ನಾಲ್ಕನೆಯ ದೂತನು ತನ್ನ ಪಾತ್ರೆಯಲ್ಲಿದ್ದದ್ದನ್ನು ಸೂರ್ಯನ ಮೇಲೆ ಹೊಯಿದನು. ಆಗ ಸೂರ್ಯ ನಿಗೆ ಬೆಂಕಿಯಿಂದ ಮನುಷ್ಯರನ್ನು ಕಂದಿಸುವ ಶಕ್ತಿಯು ಕೊಡಲ್ಪಟ್ಟಿತು. ಮನುಷ್ಯರು ಬಲವಾದ ಕಾವಿನಿಂದ ಕಂದಿಹೋದರೂ ಅವರು ದೇವರನ್ನು ಘನಪಡಿಸುವ ಹಾಗೆ ಮಾನಸಾಂತರ ಮಾಡಿಕೊಳ್ಳದೆ ಈ ಉಪದ್ರವ ಗಳ ಮೇಲೆ ಅಧಿಕಾರವುಳ್ಳ ದೇವರ ನಾಮವನ್ನು ದೂಷಿಸಿದರು. ಐದನೆಯ ದೂತನು ತನ್ನ ಪಾತ್ರೆಯಲ್ಲಿದ್ದದ್ದನ್ನು ಮೃಗದ ಆಸನದ ಮೇಲೆ ಹೊಯ್ಯಲು ಅದರ ರಾಜ್ಯವು ತುಂಬಾ ಕತ್ತಲಾಯಿತು; ಜನರು ತಮಗಾದ ನೋವಿನ ದೆಸೆಯಿಂದ ತಮ್ಮ ನಾಲಿಗೆಗಳನ್ನು ಕಚ್ಚಿಕೊಂಡು ತಮ್ಮ ಕೃತ್ಯಗಳ ವಿಷಯದಲ್ಲಿ ಮಾನಸಾಂತರ ಮಾಡಿ ಕೊಳ್ಳದೆ ತಮ್ಮ ನೋವಿನ ದೆಸೆಯಿಂದಲೂ ಹುಣ್ಣುಗಳ ದೆಸೆಯಿಂದಲೂ ಪರಲೋಕದೇವರನ್ನು ದೂಷಿಸಿದರು. ಆರನೆಯ ದೂತನು ತನ್ನ ಪಾತ್ರೆಯಲ್ಲಿದ್ದದ್ದನ್ನು ಯೂಫ್ರೇಟೀಸ್ ಮಹಾನದಿಯ ಮೇಲೆ ಹೊಯ್ಯಲು ಮೂಡಣ ದಿಕ್ಕಿನಿಂದ ಬರುವ ರಾಜರಿಗೆ ಮಾರ್ಗವು ಸಿದ್ಧವಾಗುವಂತೆ ಅದರ ನೀರು ಬತ್ತಿ ಹೋಯಿತು. ಘಟಸರ್ಪದ ಬಾಯಿಂದಲೂ ಮೃಗದ ಬಾಯಿಂ ದಲೂ ಸುಳ್ಳು ಪ್ರವಾದಿಯ ಬಾಯಿಂದಲೂ ಕಪ್ಪೆಗಳಂ ತಿದ್ದ ಮೂರು ಅಶುದ್ಧಾತ್ಮಗಳು ಹೊರಗೆ ಬರುವದನ್ನು ನಾನು ಕಂಡೆನು. ಅವು ಮಹತ್ಕಾರ್ಯಗಳನ್ನು ಮಾಡುವ ದೆವ್ವಗಳ ಆತ್ಮಗಳೇ; ಸರ್ವಶಕ್ತನಾದ ದೇವರ ಮಹಾ ದಿನದಲ್ಲಾಗುವ ಯುದ್ಧಕ್ಕೆ ಭೂಲೋಕದ ಮತ್ತು ಪ್ರಪಂಚದ ಎಲ್ಲಾ ರಾಜರನ್ನು ಕೂಡಿಸುವದಕ್ಕಾಗಿ ಅವರ ಬಳಿಗೆ ಹೋಗುವವು. ಇಗೋ, ಕಳ್ಳನು ಬರುವಂತೆ ನಾನು ಬರುತ್ತೇನೆ. ನಿರ್ವಾಣನಾಗಿ ತಿರುಗಾಡುವಾಗ ಜನರು ತನ್ನ ನಾಚಿಕೆಯನ್ನು ನೋಡಿಯಾರೆಂದು ಎಚ್ಚರ ವಾಗಿದ್ದು ತನ್ನ ವಸ್ತ್ರಗಳನ್ನು ಕಾಪಾಡಿಕೊಳ್ಳುವವನು ಧನ್ಯನು. ಅವನು ಅವರನ್ನು ಇಬ್ರಿಯ ಭಾಷೆಯಲ್ಲಿ ಹರ್ಮಗೆದೋನ್ ಎಂದು ಕರೆಯಲ್ಪಟ್ಟ ಸ್ಥಳಕ್ಕೆ ಕೂಡಿಸುವನು. ಏಳನೆಯ ದೂತನು ತನ್ನ ಪಾತ್ರೆಯಲ್ಲಿದ್ದದ್ದನ್ನು ವಾಯುಮಂಡಲದಲ್ಲಿ ಹೊಯ್ಯಲು ಪರಲೋಕದಲ್ಲಿದ್ದ ಆಲಯದೊಳಗಿಂದಲೂ ಸಿಂಹಾಸನದಿಂದಲೂ ಮಹಾಶಬ್ದವು ಬಂದು--ಮುಗಿಯಿತು ಎಂದು ಹೇಳಿತು. ಆಗ ವಾಣಿಗಳೂ ಗುಡುಗುಗಳೂ ಮಿಂಚುಗಳೂ ಉಂಟಾದವು; ಇದಲ್ಲದೆ ಮಹಾ ಭೂಕಂಪವುಂಟಾಯಿತು; ಮನುಷ್ಯರು ಭೂಮಿಯ ಮೇಲೆ ಇದ್ದಂದಿನಿಂದ ಅಂಥ ಬಲವಾದ ಮತ್ತು ದೊಡ್ಡ ದಾದ ಭೂಕಂಪವಾಗಿರಲಿಲ್ಲ. ಆ ಮಹಾಪಟ್ಟಣವು ಮೂರು ಭಾಗಗಳಾಗಿ ವಿಭಾಗವಾಯಿತು; ಜನಾಂಗಗಳ ಪಟ್ಟಣಗಳು ಬಿದ್ದವು; ಇದಲ್ಲದೆ ಮಹಾಬಾಬೆಲಿಗೆ ಉಗ್ರಕೋಪವೆಂಬ ದ್ರಾಕ್ಷಾರಸದ ಪಾತ್ರೆಯನ್ನು ಕೊಡು ವಂತೆ ದೇವರ ಮುಂದೆ ಅದು ಜ್ಞಾಪಕಕ್ಕೆ ಬಂತು. ಆಗ ದ್ವೀಪಗಳೆಲ್ಲಾ ಓಡಿಹೋದವು; ಬೆಟ್ಟಗಳು ಸಿಕ್ಕದೆ ಹೋದವು.ಆಕಾಶದಿಂದ ಮನುಷ್ಯರ ಮೇಲೆ ದೊಡ್ಡ ಅನೇ ಕಲ್ಲುಗಳು ಸುರಿದವು; ಒಂದೊಂದು ಕಲ್ಲು ಹೆಚ್ಚು ಕಡಿಮೆ ನಾಲ್ಕು ಮಣ ತೂಕವಾಗಿತ್ತು; ಆ ಆನೆಕಲ್ಲುಗಳ ಉಪದ್ರವವು ಬಹಳ ಅತಿದೊಡ್ಡದಾಗಿ ದ್ದದರಿಂದ ಮನುಷ್ಯರು ದೇವರನ್ನು ದೂಷಿಸಿದರು. ಆಕಾಶದಿಂದ ಮನುಷ್ಯರ ಮೇಲೆ ದೊಡ್ಡ ಅನೇ ಕಲ್ಲುಗಳು ಸುರಿದವು; ಒಂದೊಂದು ಕಲ್ಲು ಹೆಚ್ಚು ಕಡಿಮೆ ನಾಲ್ಕು ಮಣ ತೂಕವಾಗಿತ್ತು; ಆ ಆನೆಕಲ್ಲುಗಳ ಉಪದ್ರವವು ಬಹಳ ಅತಿದೊಡ್ಡದಾಗಿ ದ್ದದರಿಂದ ಮನುಷ್ಯರು ದೇವರನ್ನು ದೂಷಿಸಿದರು.