Revelation · chapter 11 · verse 7
Revelation 11:7 in Kannada
ಇವರು ತಮ್ಮ ಸಾಕ್ಷಿಯನ್ನು ಹೇಳಿ ಮುಗಿಸಿದ ನಂತರ ತಳವಿಲ್ಲದ ತಗ್ಗಿನಿಂದ ಏರಿ ಬರುವ ಮೃಗವು ಇವರಿಗೆ ವಿರೋಧವಾಗಿ ಯುದ್ಧಮಾಡಿ ಇವರನ್ನು ಜಯಿಸಿ ಕೊಲ್ಲುವದು.
Ivaru tamma saakshiyannu heli mugisida nantara talavillada taggininda eri baruva mrugavu ivarige virodhavaagi yuddhamaadi ivarannu jayisi kolluvadu.
Revelation 11:7 in English
- King James Version (KJV)
- And when they shall have finished their testimony, the beast that ascendeth out of the bottomless pit shall make war against them, and shall overcome them, and kill them.
- World English Bible (WEB)
- When they have finished their testimony, the beast that comes up out of the abyss will make war with them, and overcome them, and kill them.
- American Standard Version (ASV)
- And when they shall have finished their testimony, the beast that cometh up out of the abyss shall make war with them, and overcome them, and kill them.
- Bible in Basic English (BBE)
- And when they have come to the end of their witness, the beast which comes up out of the great deep will make war on them and overcome them and put them to death.
- Darby Translation (DBY)
- And when they shall have completed their testimony, the beast who comes up out of the abyss shall make war with them, and shall conquer them, and shall kill them:
- Webster's Bible (WBS)
- And when they shall have finished their testimony, the beast that ascendeth out of the bottomless pit shall make war against them, and shall overcome them, and kill them.
- Young's Literal Translation (YLT)
- 'And when they may finish their testimony, the beast that is coming up out of the abyss shall make war with them, and overcome them, and kill them,
Read in context
- 5ಇವರಿಗೆ ಯಾವ ನಾದರೂ ಕೇಡನ್ನು ಮಾಡಬೇಕೆಂದಿದ್ದರೆ ಇವರ ಬಾಯೊಳಗಿಂದ ಬೆಂಕಿ ಹೊರಟು ಇವರ ಶತ್ರುಗಳನ್ನು ನುಂಗಿ ಬಿಡುವದು; ಇವರಿಗೆ ಯಾವನಾದರೂ ಕೇಡನ್ನು ಉಂಟು ಮಾಡಬೇಕೆಂದಿದ್ದರೆ ಅವನು ಈ ರೀತಿಯಾಗಿ ಕೊಲೆಯಾಗಬೇಕು.
- 6ಅವರ ಪ್ರವಾದನೆಯ ದಿನ ಗಳಲ್ಲಿ ಮಳೆಬೀಳದಂತೆ ಆಕಾಶವನ್ನು ಮುಚ್ಚುವ ಅಧಿಕಾರ ಇವರಿಗೆ ಉಂಟು. ಇದಲ್ಲದೆ ಇವರಿಗೆ ಇಷ್ಟ ಬಂದಾಗೆಲ್ಲಾ ನೀರು ರಕ್ತವಾಗುವಂತೆ ಮಾಡುವದಕ್ಕೂ ಸಕಲ ವಿಧವಾದ ಉಪದ್ರವಗಳಿಂದ ಭೂಮಿಯನ್ನು ಹೊಡೆಯುವದಕ್ಕೂ ಅಧಿಕಾರ ಉಂಟು.
- 7ಇವರು ತಮ್ಮ ಸಾಕ್ಷಿಯನ್ನು ಹೇಳಿ ಮುಗಿಸಿದ ನಂತರ ತಳವಿಲ್ಲದ ತಗ್ಗಿನಿಂದ ಏರಿ ಬರುವ ಮೃಗವು ಇವರಿಗೆ ವಿರೋಧವಾಗಿ ಯುದ್ಧಮಾಡಿ ಇವರನ್ನು ಜಯಿಸಿ ಕೊಲ್ಲುವದು.
- 8ಇವರ ಶವಗಳು ಮಹಾ ಪಟ್ಟಣದ ಬೀದಿಯಲ್ಲಿ ಬಿದ್ದಿರುವವು. ಆ ಪಟ್ಟಣಕ್ಕೆ ಆತ್ಮಿಕವಾಗಿ ಸೊದೋಮ್ ಎಂತಲೂ ಐಗುಪ್ತ ಎಂತಲೂ ಕರೆಯುವರು; ನಮ್ಮ ಕರ್ತನು ಅಲ್ಲಿಯೇ ಶಿಲುಬೆಗೆ ಹಾಕಲ್ಪಟ್ಟನು.
- 9ಆಗ ಪ್ರಜೆ ಕುಲ ಭಾಷೆ ಜನಾಂಗಗಳವರು ಸತ್ತುಹೋದ ಅವರ ಶವಗಳನ್ನು ಮೂರುವರೆ ದಿನಗಳು ನೋಡುವರು, ಸತ್ತುಹೋದ ಅವರ ಶವಗಳನ್ನು ಸಮಾಧಿಯಲ್ಲಿ ಇಡ ಗೊಡಿಸುವದಿಲ್ಲ.
Cross references
- Revelation 13:7 ಪ್ರಕಟನೆ 13:7ಇದಲ್ಲದೆ ಪರಿಶುದ್ಧರ ಮೇಲೆ ಯುದ್ಧಮಾಡಿ ಅವರನ್ನು ಗೆಲ್ಲುವಂತೆ ಅದಕ್ಕೆ ಅಧಿಕಾರವು ಕೊಡಲ್ಪಟ್ಟಿತು. ಸಕಲ ಕುಲ ಭಾಷೆ ಜನಾಂಗಗಳ ಮೇಲೆ ಅವನಿಗೆ ಅಧಿಕಾರವು ಕೊಡಲ್ಪಟ್ಟಿತು.
- Daniel 8:23–24 ದಾನಿಯೇಲನು 8:23–24ಅವರ ರಾಜ್ಯದ ಕಡೆಯ ಕಾಲದಲ್ಲಿ, ಯಾವಾಗ ಅಪರಾಧಿಗಳು ತುಂಬಿ ಬರುವರೋ, ಆಗ ಕ್ರೂರ ಮುಖವುಳ್ಳವನೂ ತಂತ್ರವುಳ್ಳವನೂ ಆದ ಒಬ್ಬ ಅರಸನು ಏಳುವನು. ಅವನ ಶಕ್ತಿಯು ಬಲವಾಗಿರುವದು, ಆದರೆ ಅದು ಸ್ವಂತ ಶಕ್ತಿಯಿಂದಲ್ಲ; ಅವನು ಆಶ್ಚರ್ಯದ ರೀತಿಯಲ್ಲಿ ನಾಶಮಾಡಿ ವೃದ್ಧಿಗೊಂಡು ಅಭ್ಯಾಸಮಾಡಿ, ಬಲವಾದ ಮತ್ತು ಪರಿಶುದ್ಧ ಜನರನ್ನು ನಾಶಮಾಡುವನು.
- Daniel 7:25 ದಾನಿಯೇಲನು 7:25ಅವನು ಮಹೋನ್ನತನಿಗೆ ವಿರೋಧವಾಗಿ ಕೊಚ್ಚಿಕೊಂಡು ಮಾತುಗಳನ್ನಾಡಿ ಪರಿ ಶುದ್ಧರನ್ನು ಬಾಧಿಸಿ, ಕಾಲನಿಯಮಗಳನ್ನು ಬದಲಾಯಿ ಸುವದಕ್ಕೆ ಯೋಚಿಸುವನು; ಕಾಲವು ಕಾಲನಿಯಮವು ವಿಭಾಗಿಸುವ ತನಕ ಅವರು ಅವನ ಕೈಯಲ್ಲಿ ಒಪ್ಪಿಸ ಲ್ಪಡುವರು.
- Luke 13:32 ಲೂಕನು 13:32ಅದಕ್ಕೆ ಆತನು ಅವರಿಗೆ--ಇಗೋ, ನಾನು ಈ ದಿವಸ ಮತ್ತು ನಾಳೆ ದೆವ್ವಗಳನ್ನು ಬಿಡಿಸಿ ಸ್ವಸ್ಥಮಾಡುತ್ತೇನೆ; ಮೂರನೆಯ ದಿನದಲ್ಲಿ ನಾನು ಸಿದ್ಧಿಗೆ ಬರುತ್ತೇನೆ ಎಂದು ನೀವು ಹೋಗಿ ಆ ನರಿಗೆ ಹೇಳಿರಿ.
- Daniel 7:21–22 ದಾನಿಯೇಲನು 7:21–22ನಾನು ನೋಡಲಾಗಿ ಆ ಕೊಂಬು ಪರಿಶುದ್ಧರ ಸಂಗಡ ಯುದ್ಧಮಾಡಿತು ಮತ್ತು ಅವರಿಗೆ ವಿರೋಧವಾಗಿ ಜಯಗಳಿಸಿತು; ಪೂರ್ವಿಕನ ಕಾಲ ಬಂದು ಮಹೋನ್ನತನ ಪರಿ ಶುದ್ಧರಿಗೆ ನ್ಯಾಯತೀರ್ಪು ಕೊಡುವ ವರೆಗೂ ಪರಿ ಶುದ್ಧರು ರಾಜ್ಯವನ್ನು ವಶಪಡಿಸಿಕೊಳ್ಳುವ ಕಾಲದ ವರೆಗೂ ಅವರ ಮೇಲೆ ಜಯವನ್ನು ಹೊಂದಿತು.
- John 17:4 ಯೋಹಾನನು 17:4ನಾನು ನಿನ್ನನ್ನು ಭೂಮಿಯ ಮೇಲೆ ಮಹಿಮೆಪಡಿಸಿದ್ದೇನೆ; ನೀನು ನನಗೆ ಕೊಟ್ಟ ಕೆಲಸವನ್ನು ನಾನು ಮುಗಿಸಿದ್ದೇನೆ;
- Revelation 13:1–4 ಪ್ರಕಟನೆ 13:1–4ಆಗ ನಾನು ಸಮುದ್ರದ ಮರಳಿನ ಮೇಲೆ ನಿಂತೆನು, ಸಮುದ್ರದೊಳಗಿಂದ ಮೃಗವು ಏರಿ ಬರುವದನ್ನು ಕಂಡೆನು. ಅದಕ್ಕೆ ಏಳು ತಲೆಗಳೂ ಹತ್ತು ಕೊಂಬುಗಳೂ ಕೊಂಬುಗಳ ಮೇಲೆ ಹತ್ತು ಕಿರೀಟಗಳೂ ತಲೆಗಳ ಮೇಲೆ ದೂಷಣೆಯ ನಾಮವೂ ಇದ್ದವು. ನಾನು ಕಂಡ ಮೃಗವು ಚಿರತೆಯಂತಿತ್ತು; ಅದರ ಕಾಲುಗಳು ಕರಡಿಯ ಕಾಲುಗಳಂತೆಯೂ ಅದರ ಬಾಯಿ ಸಿಂಹದ ಬಾಯಂತೆಯೂ ಇದ್ದವು; ಅದಕ್ಕೆ ಘಟಸರ್ಪವು ತನ್ನ ಶಕ್ತಿಯನ್ನೂ ತನ್ನ ಆಸನವನ್ನು ಮಹಾ ಅಧಿಕಾರವನ್ನೂ ಕೊಟ್ಟಿತು. ಅದರ ತಲೆಗಳಲ್ಲಿ ಒಂದು ಗಾಯ ಹೊಂದಿ ಸಾಯುವಹಾಗಿರುವದನ್ನು ನಾನು ಕಂಡೆನು. ಮರಣಕರವಾದ ಆ ಗಾಯವು ವಾಸಿಯಾಯಿತು; ಆಗ ಭೂಲೋಕದವರೆಲ್ಲರು ಆ ಮೃಗದ ವಿಷಯವಾಗಿ ಆಶ್ಚರ್ಯಪಟ್ಟರು. ಘಟ ಸರ್ಪನು ಆ ಮೃಗಕ್ಕೆ ಅಧಿಕಾರವನ್ನು ಕೊಟ್ಟವ ನಾದ್ದರಿಂದ ಅವರು ಆ ಘಟಸರ್ಪನನ್ನು ಆರಾಧನೆ ಮಾಡುವವರಾದರು. ಇದಲ್ಲದೆ ಆ ಮೃಗವನ್ನು ಆರಾ ಧಿಸಿ--ಈ ಮೃಗಕ್ಕೆ ಸಮಾನರು ಯಾರು? ಇದರ ಮೇಲೆ ಯುದ್ಧ ಮಾಡುವದಕ್ಕೆ ಯಾರು ಶಕ್ತರು ಅಂದರು.
- Revelation 17:6–8 ಪ್ರಕಟನೆ 17:6–8ಆ ಸ್ತ್ರೀಯು ಪರಿಶುದ್ದರ ರಕ್ತವನ್ನೂ ಯೇಸುವಿಗೋಸ್ಕರ ಸಾಕ್ಷಿಕೊಟ್ಟು ಹತರಾದವರ ರಕಆ ಸ್ತ್ರೀಯು ಪರಿಶುದ್ದರ ರಕ್ತವನ್ನೂ ಯೇಸುವಿಗೋಸ್ಕರ ಸಾಕ್ಷಿಕೊಟ್ಟು ಹತರಾದವರ ರಕ ಆಗ ಆ ದೂತನು ನನಗೆ--ನೀನೇಕೆ ಆಶ್ಚರ್ಯಪಟ್ಟೆ? ಆ ಸ್ತ್ರೀಯ ವಿಷಯವಾಗಿಯೂ ಅವಳನ್ನು ಹೊತ್ತುಕೊಂಡಿದ್ದ ಏಳು ತಲೆಗಳು ಮತ್ತು ಹತ್ತು ಕೊಂಬುಗಳುಳ್ಳ ಮೃಗದ ವಿಷಯವಾಗಿಯೂ ಇರುವ ಮರ್ಮವನ್ನು ನಾನು ನಿನಗೆ ತಿಳಿಸುತ್ತೇನೆ. ನೀನು ಕಂಡ ಈ ಮೃಗವು ಮೊದಲು ಇತ್ತು. ಈಗ ಇಲ್ಲ, ಅದು ತಳವಿಲ್ಲದ ತಗ್ಗಿನಿಂದ ಏರಿ ಬಂದು ನಾಶನಕ್ಕೆ ಹೋಗುವದು. ಭೂಮಿಯಲ್ಲಿ ವಾಸಿಸುವವರೊಳಗೆ ಯಾರಾರ ಹೆಸರು ಗಳು ಜಗತ್ತಿಗೆ ಅಸ್ತಿವಾರ ಹಾಕಿದಂದಿನಿಂದ ಜೀವಗ್ರಂಥ ದಲ್ಲಿ ಬರೆದಿರುವದಿಲ್ಲವೋ ಅವರು ಮೊದಲು ಇದ್ದು ಈಗ ಇಲ್ಲದ ಇನ್ನು
- Revelation 13:16–17 ಪ್ರಕಟನೆ 13:16–17ಅದು ಚಿಕ್ಕವರು ದೊಡ್ಡ ವರು ಐಶ್ವರ್ಯವಂತರು ಬಡವರು ಸ್ವತಂತ್ರರು ದಾಸರು ಎಲ್ಲರೂ ತಮ್ಮ ತಮ್ಮ ಬಲಗೈಯ ಮೇಲಾಗಲಿ ಹಣೆಗಳ ಮೇಲಾಗಲಿ ಗುರುತು ಹೊಂದಬೇಕೆಂತಲೂ ಆ ಗುರುತಾಗಲಿ ಮೃಗದ ಹೆಸರಾಗಲಿ ಅದರ ಹೆಸರಿನ ಅಂಕೆಯಾಗಲಿ ಇಲ್ಲದವನು ಕ್ರಯ ವಿಕ್ರಯಗಳನ್ನು ಮಾಡದಂತೆಯೂ ಅದು ಮಾಡುತ್ತದೆ.ಇದರಲ್ಲಿ ಜ್ಞಾನವಿದೆ. ತಿಳುವಳಿಕೆಯುಳ್ಳವನು ಆ ಮೃಗದ ಅಂಕೆಯನ್ನು ಎಣಿಸಲಿ; ಯಾಕಂದರೆ ಅದು ಒಬ್ಬ ಮನುಷ್ಯನ ಅಂಕೆಯಾಗಿದೆ; ಅವನ ಅಂಕೆಯು ಆರುನೂರ ಅರವತ್ತಾರು.
- Zechariah 14:2–21 ಜೆಕರ್ಯ 14:2–21ಆಗ ನಿನ್ನ ಕೊಳ್ಳೆಯು ನಿನ್ನ ಮಧ್ಯದಲ್ಲಿ ವಿಭಾಗಿಸ ಲ್ಪಡುವದು; ನಾನು ಜನಾಂಗಗಳನ್ನೆಲ್ಲಾ ಯೆರೂಸ ಲೇಮಿಗೆ ವಿರೋಧವಾಗಿ ಯುದ್ಧಕ್ಕೆ ಕೂಡಿಸುವೆನು; ಪಟ್ಟಣವು ಹಿಡಿಯಲ್ಪಡುವದು; ಮನೆಗಳು ಸುಲು ಕೊಳ್ಳಲ್ಪಡುವವು, ಹೆಂಗಸರು ಕೆಡಿಸಲ್ಪಡುವರು, ಪಟ್ಟಣದ ಅರವಾಸಿ ಜನರು ಸೆರೆಗೆ ಹೋಗುವರು; ಆದರೆ ಉಳಿದ ಜನರೆಲ್ಲರು ಪಟ್ಟಣದೊಳಗಿಂದ ತೆಗೆದುಬಿಡಲ್ಪಡುವದಿಲ್ಲ. ಆಗ ಕರ್ತನು ಹೊರಟು ಯುದ್ಧದ ದಿನದಲ್ಲಿ ಕಾದಾಟಮಾಡಿದ ಪ್ರಕಾರವೇ ಆ ಜನಾಂಗಗಳ ಸಂಗಡ ಆತನು ಕಾದಾಟ ಮಾಡುವನು. ಆ ದಿನದಲ್ಲಿ ಆತನ ಪಾದಗಳು ಯೆರೂಸಲೇಮಿನ ಮುಂದೆ ಪೂರ್ವ ದಿಕ್ಕಿನಲ್ಲಿರುವ ಎಣ್ಣೇ ಮರದ ಗುಡ್ಡದ ಮೇಲೆ ನಿಲ್ಲುವವು; ಎಣ್ಣೇ ಮರದ ಗುಡ್ಡವು ಅದರ ನಡುವೆಯಿಂದ ಪೂರ್ವಕ್ಕೂ ಪಶ್ಚಿಮಕ್ಕೂ ಸೀಳಿ ಬಹುದೊಡ್ಡ ತಗ್ಗಾಗುವದು; ಅರ್ಧ ಗುಡ್ಡವು ಉತ್ತರಕ್ಕೂ ಅರ್ಧ ದಕ್ಷಿಣಕ್ಕೂ ಸರಿದು ಕೊಳ್ಳುವದು. ನೀವು ಬೆಟ್ಟಗಳ ತಗ್ಗಿಗೆ ಓಡಿಹೋಗು ವಿರಿ; ಬೆಟ್ಟಗಳ ತಗ್ಗು ಆಚೆಲಿಗೆ ಮುಟ್ಟುವದು. ಹೌದು, ಯೆಹೂದದ ಅರಸನಾದ ಉಜ್ಜೀಯನ ದಿವಸಗಳಲ್ಲಿ ನೀವು ಭೂಕಂಪಕ್ಕೆ ಓಡಿಹೋದ ಹಾಗೆ ಓಡಿಹೋಗು ವಿರಿ; ನನ್ನ ದೇವರಾದ ಕರ್ತನು ತನ್ನ ಪರಿಶುದ್ಧರೆ ಲ್ಲರ ಸಂಗಡ ಬರುವನು. ಆ ದಿನದಲ್ಲಿ ಆಗುವದೇ ನಂದರೆ--ಬೆಳಕು ಇಲ್ಲವೆ ಕತ್ತಲೆಯು ಸ್ಪಷ್ಟವಾಗಿರದು. ಆದರೆ ಕರ್ತನಿಗೆ ತಿಳಿದಿರುವ ಒಂದು ದಿನ ಇರುವದು, ಅದು ಹಗಲೂ ಅಲ್ಲ, ರಾತ್ರಿಯೂ ಅಲ್ಲ; ಆದರೆ ಸಾಯಂಕಾಲದ ಸಮಯದಲ್ಲಿ ಬೆಳಕು ಇರುವದು. ಆ ದಿನದಲ್ಲಿ ಆಗುವದೇನಂದರೆ, ಯೆರೂಸಲೇಮಿ ನೊಳಗಿದ್ದ ಜೀವಜಲಗಳು ಹೊರಡುವವು; ಅವುಗ ಳಲ್ಲಿ ಅರ್ಧ ಪೂರ್ವ ಸಮುದ್ರಕ್ಕೆ ಅರ್ಧ ಪಶ್ಚಿಮ ಸಮುದ್ರಕ್ಕೆ ಹೋಗುವವು; ಅದು ಬೇಸಿಗೆ ಕಾಲ ದಲ್ಲಿಯೂ ಚಳಿಗಾಲದಲ್ಲಿಯೂ ಇರುವದು. ಕರ್ತನು ಭೂಮಿಗೆಲ್ಲಾ ಅರಸನಾಗಿರುವನು; ಆ ದಿನದಲ್ಲಿ ಕರ್ತನು ಒಬ್ಬನೇ ಇರುವನು; ಆತನ ಹೆಸರು ಒಂದೇ. ದೇಶವೆಲ್ಲಾ ಗೆಬ ಮೊದಲುಗೊಂಡು ಯೆರೂಸ ಲೇಮಿನ ದಕ್ಷಿಣದಲ್ಲಿರುವ ರಿಮ್ಮೋನಿನ ವರೆಗೂ ಬೈಲಿನ ಹಾಗೆ ಮಾರ್ಪಡುವದು; ಅದು ಎತ್ತಲ್ಪಟ್ಟು ತನ್ನ ಸ್ಥಳ ದಲ್ಲಿ ಬೆನ್ಯಾವಿಾನನ ಬಾಗಲು ಮೊದಲುಗೊಂಡು ಮೊದಲನೇ ಬಾಗಲಿನ ಸ್ಥಳದ ವರೆಗೂ ಮೂಲೆ ಬಾಗಲಿನ ವರೆಗೂ ಹನನೇಲನ ಗೋಪುರ ಮೊದಲು ಗೊಂಡು ಅರಸನ ದ್ರಾಕ್ಷೇ ಅಲೆಗಳ ವರೆಗೂ ನಿವಾಸ ವಾಗುವದು. ಅದರಲ್ಲಿ ಜನರು ವಾಸವಾಗಿರುವರು; ಅಲ್ಲಿ ಇನ್ನು ಮೇಲೆ ಸಂಪೂರ್ಣವಾದ ನಾಶವಿರದು; ಆದರೆ ಯೆರೂಸಲೇಮು ಭದ್ರವಾಗಿ ವಾಸಿಸುವದು. ಯೆರೂಸಲೇಮಿಗೆ ವಿರೋಧವಾಗಿ ದಂಡುಕಟ್ಟಿ ಕೊಂಡಿರುವ ಎಲ್ಲಾ ಜನಗಳನ್ನು ಕರ್ತನು ವ್ಯಾಧಿ ಯಿಂದ ಬಾಧಿಸುವನು; ಹೀಗೆಯೇ ಅವರು ಕಾಲಿನ ಮೇಲೆ ನಿಲ್ಲುವಾಗ ಅವರ ಶರೀರವು ಕ್ಷಯಿಸಿಹೋಗು ವದು; ಅವರ ಕಣ್ಣುಗಳು ಗುಣಿಗಳಲ್ಲಿ ಇಂಗಿಹೋಗು ವವು; ಅವರ ನಾಲಿಗೆ ಅವರ ಬಾಯಲ್ಲಿ ಕ್ಷಯಿಸಿ ಹೋಗುವದು. ಆ ದಿನದಲ್ಲಿ ಆಗುವದೇನಂದರೆ --ಕರ್ತನಿಂದಾದ ದೊಡ್ಡ ಕೋಲಾಹಲ ಅವರಲ್ಲಿ ಇರುವದು; ಆಗ ಒಬ್ಬೊಬ್ಬನು ತನ್ನ ತನ್ನ ನೆರೆಯವನ ಕೈಯನ್ನು ಹಿಡಿಯುವನು ಮತ್ತು ಅವನ ಕೈ ತನ್ನ ನೆರೆಯವನ ಮೇಲೆ ಎತ್ತಲ್ಪಡುವದು. ಯೆಹೂದವು ಸಹ ಯೆರೂಸಲೇಮಿನಲ್ಲಿ ಯುದ್ಧ ಮಾಡುವದು; ಸುತ್ತಲಿರುವ ಎಲ್ಲಾ ಅನ್ಯ ಜನಾಂಗಗಳ ಸಂಪತ್ತಾಗಿ ರುವ, ಚಿನ್ನ, ಬೆಳ್ಳಿ, ವಸ್ತ್ರಗಳು ಬಹು ಹೇರಳವಾಗಿ ಕೂಡಿಸಲ್ಪಡುವವು. ಆ ಗುಡಾರಗಳಲ್ಲಿರುವ ಕುದುರೆ, ಹೇಸರಕತ್ತೆ, ಒಂಟೆ, ಕತ್ತೆ ಮೊದಲಾದ ಎಲ್ಲಾ ಪಶುಗಳ ಬಾಧೆಯು ಈ ಬಾಧೆಯ ಹಾಗೆಯೇ ಇರುವದು. ಆಗುವದೇನಂದರೆ--ಯೆರೂಸಲೇಮಿಗೆ ವಿರೋಧವಾಗಿ ಬಂದ ಎಲ್ಲಾ ಜನಾಂಗ ಗಳಲ್ಲಿ ಉಳಿದವರೆಲ್ಲಾ ವರುಷ ವರುಷಕ್ಕೆ ಸೈನ್ಯಗಳ ಕರ್ತನಾದ ಅರಸನನ್ನು ಆರಾಧಿಸುವದಕ್ಕೂ ಗುಡಾ ರಗಳ ಹಬ್ಬವನ್ನು ಆಚರಿಸುವದಕ್ಕೂ ಹೋಗುವರು. ಆಗುವದೇನಂದರೆ, ಭೂಮಿಯ ಗೋತ್ರಗಳಲ್ಲಿ ಸೈನ್ಯಗಳ ಕರ್ತನಾದ ಅರಸನನ್ನು ಆರಾಧಿಸುವದಕ್ಕೆ ಯೆರೂಸಲೇಮಿಗೆ ಹೋಗದೆ ಇರುವವರ್ಯಾರೋ ಅವರ ಮೇಲೆ ಮಳೆ ಇಲ್ಲದೆ ಇರುವದು. ಮಳೆ ಇಲ್ಲದ ಐಗುಪ್ತದ ಗೋತ್ರದವರು ಹೋಗದಿದ್ದರೆ ಗುಡಾರಗಳ ಹಬ್ಬವನ್ನು ಆಚರಿಸುವದಕ್ಕೆ ಬಾರದ ಅನ್ಯಜನಾಂಗಗಳನ್ನು ಕರ್ತನು ಹೊಡೆಯುವ ವ್ಯಾಧಿಯು ಅವರ ಮೇಲೆ ಇರುವದು. ಇದೇ ಐಗುಪ್ತದ ದಂಡನೆಯೂ ಗುಡಾರಗಳ ಹಬ್ಬ ವನ್ನು ಆಚರಿಸುವದಕ್ಕೆ ಬಾರದ ಎಲ್ಲಾ ಜನಾಂಗಗಳ ದಂಡನೆಯೂ ಆಗಿರುವದು. ಆ ದಿನದಲ್ಲಿ ಕುದುರೆಗಳ ಗೆಜ್ಜೆಗಳ ಮೇಲೆ ಕರ್ತನಿಗೆ ಪರಿಶುದ್ಧವು ಎಂದಿರುವದು; ಕರ್ತನ ಆಲಯದ ಪಾತ್ರೆಗಳು ಬಲಿಪೀಠದ ಮುಂದಿನ ಪಾತ್ರೆಗಳ ಹಾಗಿರುವವು.ಹೌದು, ಯೆರೂಸಲೇಮಿ ನಲ್ಲಿಯೂ ಯೆಹೂದದಲ್ಲಿಯೂ ಇರುವ ಪ್ರತಿ ಯೊಂದು ಪಾತ್ರೆಯು ಸೈನ್ಯಗಳ ಕರ್ತನಿಗೆ ಪರಿಶುದ್ಧ ವಾಗಿರುವವು; ಯಜ್ಞಗಳನ್ನು ಅರ್ಪಿಸುವವರೆಲ್ಲರು ಬಂದು ಅವುಗಳಲ್ಲಿ ತಕ್ಕೊಂಡು ಬೇಯಿಸುವರು; ಆ ದಿನದಲ್ಲಿ ಕಾನಾನ್ಯನು ಸೈನ್ಯಗಳ ಕರ್ತನ ಆಲಯದಲ್ಲಿ ಇನ್ನು ಮೇಲೆ ಇರುವದೇ ಇಲ್ಲ. ಹೌದು, ಯೆರೂಸಲೇಮಿ ನಲ್ಲಿಯೂ ಯೆಹೂದದಲ್ಲಿಯೂ ಇರುವ ಪ್ರತಿ ಯೊಂದು ಪಾತ್ರೆಯು ಸೈನ್ಯಗಳ ಕರ್ತನಿಗೆ ಪರಿಶುದ್ಧ ವಾಗಿರುವವು; ಯಜ್ಞಗಳನ್ನು ಅರ್ಪಿಸುವವರೆಲ್ಲರು ಬಂದು ಅವುಗಳಲ್ಲಿ ತಕ್ಕೊಂಡು ಬೇಯಿಸುವರು; ಆ ದಿನದಲ್ಲಿ ಕಾನಾನ್ಯನು ಸೈನ್ಯಗಳ ಕರ್ತನ ಆಲಯದಲ್ಲಿ ಇನ್ನು ಮೇಲೆ ಇರುವದೇ ಇಲ್ಲ.
- 2 Thessalonians 2:8–9 2 ಥೆಸಲೊನೀಕದವರಿಗೆ 2:8–9ಆಗ ಆ ದುಷ್ಟನು ಪ್ರತ್ಯಕ್ಷನಾಗುವನು; ಕರ್ತನು ತನ್ನ ಬಾಯಿಯ ಉಸುರಿನಿಂದ ಅವನನ್ನು ದಹಿಸಿ ತನ್ನ ಪ್ರತ್ಯಕ್ಷತೆಯ ಪ್ರಕಾಶದಿಂದ ನಾಶಮಾಡುವನು. ಆ ಕೆಡುಕನ ಬರುವಿಕೆಯು ಸೈತಾನನ ಕಾರ್ಯಕ್ಕನು ಸಾರವಾಗಿರುವದು; ಅದು ಎಲ್ಲಾ ಶಕ್ತಿಯಿಂದಲೂ ಸೂಚಕ ಕಾರ್ಯಗಳಿಂದಲೂ ಸುಳ್ಳಾದ ಅದ್ಭುತ ಕಾರ್ಯಗಳಿಂದಲೂ
- Revelation 19:19–20 ಪ್ರಕಟನೆ 19:19–20ತರುವಾಯ ಆ ಮೃಗವೂ ಭೂರಾಜರೂ ಅವರ ಸೈನ್ಯಗಳೂ ಆ ಕುದುರೆಯ ಮೇಲೆ ಕೂತಿದ್ದಾತನ ಮೇಲೆಯೂ ಆತನ ಸೈನ್ಯದ ಮೇಲೆಯೂ ಯುದ್ಧ ಮಾಡುವದಕ್ಕಾಗಿ ಕೂಡಿಬಂದಿರುವದನ್ನು ನಾನು ಕಂಡೆನು. ಆಗ ಮೃಗವು ಸೆರೆಸಿಕ್ಕಿತು; ಇದಲ್ಲದೆ ಮೃಗದ ಮುಂದೆ ಮಹತ್ಕಾರ್ಯಗಳನ್ನು ಮಾಡಿ ಮೃಗದ ಗುರುತು ಹಾಕಿಸಿಕೊಂಡವರನ್ನೂ ಅದರ ವಿಗ್ರಹವನ್ನು ಆರಾಧಿಸಿದವರನ್ನೂ ಮರುಳುಗೊಳಿಸಿದ ಆ ಸುಳ್ಳು ಪ್ರವಾದಿಯೂ ಆದರ ಜೊತೆಯಲ್ಲಿ ಸೆರೆ ಸಿಕ್ಕಿದನು. ಇವರಿಬ್ಬರೂ ಜೀವಸಹಿತವಾಗಿ ಗಂಧಕ ದಿಂದಮಿಕ್ಕಾದವರು ಆ ಕುದುರೆಯ ಮೇಲೆ ಕೂತಿದ್ದಾತನ ಕತ್ತಿಯಿಂದ ಅಂದರೆ ಆತನ ಬಾಯಿಂದ ಬಂದ ಕತ್ತಿ ಯಿಂದ ಹತರಾದರು; ಹಕ್ಕಿಗಳೆಲ್ಲಾ ಅವರ ಮಾಂಸವನು ಹೊಟ್ಟೆತುಂಬಾ ತಿಂದವು.
Original words (Greek)
- And · G2532καί kaí
- when · G3752ὅταν hótan
- finished · G5055τελέω teléō
- their · G846αὐτός autós
- testimony · G3141μαρτυρία martyría
- beast · G2342θηρίον thēríon
- ascendeth · G305ἀναβαίνω anabaínō
- of · G1537ἐκ ek
- pit · G12ἄβυσσος ábyssos
- make · G4160ποιέω poiéō
- war · G4171πόλεμος pólemos
- against · G3326μετά metá
- them · G846αὐτός autós
- and · G2532καί kaí
- overcome · G3528νικάω nikáō
- them · G846αὐτός autós
- and · G2532καί kaí
- kill · G615ἀποκτείνω apokteínō
- them · G846αὐτός autós