Revelation · chapter 14 · verse 20
Revelation 14:20 in Kannada
ಆ ದ್ರಾಕ್ಷೇ ತೊಟ್ಟಿಯನ್ನು ಪಟ್ಟಣದ ಹೊರಗೆ ತುಳಿದರು. ಆ ತೊಟ್ಟಿಯೊಳಗಿಂದ ರಕ್ತವು ಹೊರಟು ಕುದುರೆಗಳ ಕಡಿವಾಣಗಳನ್ನು ಮುಟ್ಟುವಷ್ಟು ಇನ್ನೂರು ಮೈಲಿ ದೂರ ಹರಿಯಿತು.
Aa draakshe tottiyannu pattanada horage tulidaru. Aa tottiyolaginda raktavu horatu kuduregala kadivaanagalannu muttuvashtu innooru maili doora hariyitu.
Revelation 14:20 in English
- King James Version (KJV)
- And the winepress was trodden without the city, and blood came out of the winepress, even unto the horse bridles, by the space of a thousand [and] six hundred furlongs.
- World English Bible (WEB)
- The wine press was trodden outside of the city, and blood came out of the wine press, up to the bridles of the horses, as far as one thousand six hundred stadia.
- American Standard Version (ASV)
- And the winepress was trodden without the city, and there came out blood from the winepress, even unto the bridles of the horses, as far as a thousand and six hundred furlongs.
- Bible in Basic English (BBE)
- And the grapes were crushed under foot outside the town, and blood came out from them, even to the head-bands of the horses, two hundred miles.
- Darby Translation (DBY)
- and the wine-press was trodden without the city, and blood went out of the wine-press to the bits of the horses for a thousand six hundred stadia.
- Webster's Bible (WBS)
- And the wine-press was trodden without the city, and blood came out of the wine-press, even to the horses' bridles, by the space of a thousand [and] six hundred furlongs.
- Young's Literal Translation (YLT)
- and trodden was the wine-press outside of the city, and blood did come forth out of the wine-press — unto the bridles of the horses, a thousand, six hundred furlongs.
Read in context
- 18ಬೆಂಕಿಯ ಮೇಲೆ ಅಧಿಕಾರವಿದ್ದ ಇನ್ನೊಬ್ಬ ದೂತನು ಯಜ್ಞವೇದಿಯ ಬಳಿಯಿಂದ ಬಂದು ಆ ಹದವಾದ ಕುಡುಗೋಲು ಇದ್ದವನಿಗೆ--ನಿನ್ನ ಹದವಾದ ಕುಡುಗೋಲನ್ನು ಹಾಕಿ ಭೂಮಿಯ ದ್ರಾಕ್ಷೇ ಗೊಂಚಲುಗಳನ್ನು ಕೂಡಿಸು; ಯಾಕಂದರೆ ಅದರ ಹಣ್ಣುಗಳು ಪೂರಾ ಮಾಗಿವೆ ಎಂದು ಮಹಾಶಬ್ದದಿಂದ ಕೂಗಿ ಹೇಳಿದನು.
- 19ಆಗ ಆ ದೂತನು ತನ್ನ ಕುಡುಗೋಲನ್ನು ಭೂಮಿಗೆ ಹಾಕಿ ಭೂಮಿಯ ದ್ರಾಕ್ಷೇಹಣ್ಣನ್ನು ಕೂಡಿಸಿ ದೇವರ ರೌದ್ರದ ದೊಡ್ಡ ದ್ರಾಕ್ಷೇತೊಟ್ಟಿಯಲ್ಲಿ ಹಾಕಿದನು.ಆ ದ್ರಾಕ್ಷೇ ತೊಟ್ಟಿಯನ್ನು ಪಟ್ಟಣದ ಹೊರಗೆ ತುಳಿದರು. ಆ ತೊಟ್ಟಿಯೊಳಗಿಂದ ರಕ್ತವು ಹೊರಟು ಕುದುರೆಗಳ ಕಡಿವಾಣಗಳನ್ನು ಮುಟ್ಟುವಷ್ಟು ಇನ್ನೂರು ಮೈಲಿ ದೂರ ಹರಿಯಿತು.
- 20ಆ ದ್ರಾಕ್ಷೇ ತೊಟ್ಟಿಯನ್ನು ಪಟ್ಟಣದ ಹೊರಗೆ ತುಳಿದರು. ಆ ತೊಟ್ಟಿಯೊಳಗಿಂದ ರಕ್ತವು ಹೊರಟು ಕುದುರೆಗಳ ಕಡಿವಾಣಗಳನ್ನು ಮುಟ್ಟುವಷ್ಟು ಇನ್ನೂರು ಮೈಲಿ ದೂರ ಹರಿಯಿತು.
Cross references
- Lamentations 1:15 ಪ್ರಲಾಪಗಳು 1:15ಕರ್ತನು ನನ್ನ ಎದುರಿನಲ್ಲಿ ನನ್ನ ಪರಾಕ್ರಮಶಾಲಿಗಳನ್ನೆಲ್ಲಾ ಕಾಲಿನ ಕೆಳಗೆ ತುಳಿದುಬಿಟ್ಟಿದ್ದಾನೆ; ಆತನು ನನ್ನ ಯೌವನಸ್ಥರನ್ನು ಜಜ್ಜಲು ನನಗೆ ವಿರುದ್ಧವಾಗಿ ಸಭೆಯನ್ನು ಕರೆದಿದ್ದಾನೆ; ಕರ್ತನು ಯೆಹೂದದ ಮಗಳಾದ ಕನ್ಯೆಯನ್ನು ದ್ರಾಕ್ಷೆಯ ತೊಟ್ಟಿಯಂತೆ ತುಳಿದಿದ್ದಾನೆ.
- Hebrews 13:11–12 ಇಬ್ರಿಯರಿಗೆ 13:11–12ಮಹಾಯಾಜಕನು ಪಾಪದ ನಿಮಿತ್ತವಾಗಿ ಪಶುಗಳ ರಕ್ತವನ್ನು ತೆಗೆದುಕೊಂಡು ಪವಿತ್ರ ಸ್ಥಾನದೊಳಗೆ ಹೋಗಲು ಆ ಪಶುಗಳ ದೇಹಗಳು ಪಾಳೆಯದ ಆಚೆ ಸುಡಲ್ಪಡುತ್ತವಲ್ಲಾ; ಅದರಂತೆ ಯೇಸು ಕೂಡ ತನ್ನ ಸ್ವಂತ ರಕ್ತದಿಂದ ಜನರನ್ನು ಪವಿತ್ರಪಡಿಸುವದಕ್ಕೋಸ್ಕರ ಊರ ಬಾಗಿಲ ಹೊರಗೆ ಶ್ರಮೆಪಟ್ಟನು.
- Revelation 19:14–21 ಪ್ರಕಟನೆ 19:14–21ಪರಲೋಕದಲ್ಲಿರುವ ಸೈನ್ಯಗಳು ಶುಭ್ರವಾಗಿಯೂ ನಿರ್ಮಲವಾಗಿಯೂ ಇರುವ ನಯವಾದ ನಾರುಮಡಿಯನ್ನು ಧರಿಸಿಕೊಂಡು ಬಿಳೀ ಕುದುರೆಗಳ ಮೇಲೆ ಆತನ ಹಿಂದೆ ಬರುತ್ತಿದ್ದವು. ಜನಾಂಗಗಳನ್ನು ಹೊಡೆಯುವದಕ್ಕಾಗಿ ಹದವಾದ ಕತ್ತಿಯು ಆತನ ಬಾಯಿಂದ ಹೊರಡುತ್ತದೆ. ಆತನು ಅವರನ್ನು ಕಬ್ಬಿಣದ ಕೋಲಿನಿಂದ ಆಳುವನು. ಆತನು ಸರ್ವಶಕ್ತನಾದ ದೇವರ ಉಗ್ರಕೋಪವೆಂಬ ದ್ರಾಕ್ಷೆಯ ತೊಟ್ಟಿಯಲ್ಲಿರುವದನ್ನು ತುಳಿಯುತ್ತಾನೆ. ಆತನ ತೊಡೆಯ ಮೇಲೆಯೂ ವಸ್ತ್ರದ ಮೇಲೆಯೂ--ರಾಜಾ ಧಿರಾಜನೂ ಕರ್ತರ ಕರ್ತನೂ ಎಂಬ ಹೆಸರು ಬರೆದದೆ. ಆಮೇಲೆ ಒಬ್ಬ ದೂತನು ಸೂರ್ಯನಲ್ಲಿ ನಿಂತಿರುವದನ್ನು ನಾನು ಕಂಡೆನು. ಅವನು ಮಹಾ ಶಬ್ದದಿಂದ ಕೂಗುತ್ತಾ ಆಕಾಶದಲ್ಲಿ ಹಾರಾಡುವ ಎಲ್ಲಾ ಪಕ್ಷಿಗಳಿಗೆ--ಬನ್ನಿರಿ, ಮಹಾ ದೇವರ ಭೋಜನಕ್ಕೆ ಕೂಡಿಕೊಳ್ಳಿರಿ, ರಾಜರ ಮಾಂಸವನ್ನೂ ಸೈನ್ಯಾಧಿಪತಿ ಗಳ ಮಾಂಸವನ್ನೂ ಪರಾಕ್ರಮಶಾಲಿಗಳ ಮಾಂಸವನ್ನೂ ಕುದುರೆಗಳ ಮಾಂಸವನ್ನೂ ಅವುಗಳ ಮೇಲೆ ಕೂತವರ ಮಾಂಸವನ್ನೂ ಮತ್ತು ಸ್ವತಂತ್ರರೂ ದಾಸರೂ ಚಿಕ್ಕವರೂ ದೊಡ್ಡವರೂ ಇವರೆಲ್ಲರ ಮಾಂಸವನ್ನೂ ತಿನ್ನುವದಕ್ಕೆ ಬನ್ನಿರಿ ಎಂದು ಹೇಳಿದನು. ತರುವಾಯ ಆ ಮೃಗವೂ ಭೂರಾಜರೂ ಅವರ ಸೈನ್ಯಗಳೂ ಆ ಕುದುರೆಯ ಮೇಲೆ ಕೂತಿದ್ದಾತನ ಮೇಲೆಯೂ ಆತನ ಸೈನ್ಯದ ಮೇಲೆಯೂ ಯುದ್ಧ ಮಾಡುವದಕ್ಕಾಗಿ ಕೂಡಿಬಂದಿರುವದನ್ನು ನಾನು ಕಂಡೆನು. ಆಗ ಮೃಗವು ಸೆರೆಸಿಕ್ಕಿತು; ಇದಲ್ಲದೆ ಮೃಗದ ಮುಂದೆ ಮಹತ್ಕಾರ್ಯಗಳನ್ನು ಮಾಡಿ ಮೃಗದ ಗುರುತು ಹಾಕಿಸಿಕೊಂಡವರನ್ನೂ ಅದರ ವಿಗ್ರಹವನ್ನು ಆರಾಧಿಸಿದವರನ್ನೂ ಮರುಳುಗೊಳಿಸಿದ ಆ ಸುಳ್ಳು ಪ್ರವಾದಿಯೂ ಆದರ ಜೊತೆಯಲ್ಲಿ ಸೆರೆ ಸಿಕ್ಕಿದನು. ಇವರಿಬ್ಬರೂ ಜೀವಸಹಿತವಾಗಿ ಗಂಧಕ ದಿಂದಮಿಕ್ಕಾದವರು ಆ ಕುದುರೆಯ ಮೇಲೆ ಕೂತಿದ್ದಾತನ ಕತ್ತಿಯಿಂದ ಅಂದರೆ ಆತನ ಬಾಯಿಂದ ಬಂದ ಕತ್ತಿ ಯಿಂದ ಹತರಾದರು; ಹಕ್ಕಿಗಳೆಲ್ಲಾ ಅವರ ಮಾಂಸವನು ಹೊಟ್ಟೆತುಂಬಾ ತಿಂದವು. ಮಿಕ್ಕಾದವರು ಆ ಕುದುರೆಯ ಮೇಲೆ ಕೂತಿದ್ದಾತನ ಕತ್ತಿಯಿಂದ ಅಂದರೆ ಆತನ ಬಾಯಿಂದ ಬಂದ ಕತ್ತಿ ಯಿಂದ ಹತರಾದರು; ಹಕ್ಕಿಗಳೆಲ್ಲಾ ಅವರ ಮಾಂಸವನು ಹೊಟ್ಟೆತುಂಬಾ ತಿಂದವು.
- Isaiah 63:1–3 ಯೆಶಾಯ 63:1–3ಎದೋಮಿನಿಂದಲೂ ರಕ್ತಾಂಬರ ಧರಿಸಿಕೊಂಡು ಬೊಚ್ರದಿಂದಲೂ ಬರುವ ಇವನ್ಯಾರು? ಪ್ರಭೆಯುಳ್ಳ ವಸ್ತ್ರಗಳನ್ನು ತೊಟ್ಟುಕೊಂಡ ವನಾಗಿ ತನ್ನ ಮಹಾಪರಾಕ್ರಮದಲ್ಲಿ ಸಂಚಾರ ಮಾಡುವ ಇವನ್ಯಾರು? ನೀತಿಯಲ್ಲಿ ಮಾತನಾಡು ವವನೂ ರಕ್ಷಿಸಲು ಬಲಿಷ್ಠನೂ ಆಗಿರುವ ನಾನೇ. ನಿನ್ನ ವಸ್ತ್ರಗಳು ಯಾಕೆ ಕೆಂಪಾದವು? ನಿನ್ನ ಬಟ್ಟೆಗಳು ಯಾಕೆ ದ್ರಾಕ್ಷೇಯನ್ನು ತುಳಿಯುವವನ ಹಾಗಿವೆ? ದ್ರಾಕ್ಷೇ ತೊಟ್ಟಿಯನ್ನು ನಾನೊಬ್ಬನೇ ತುಳಿದಿದ್ದೇನೆ, ಜನಗಳಲ್ಲಿ ಒಬ್ಬನಾದರೂ ನನ್ನ ಸಂಗಡ ಇರಲಿಲ್ಲ; ನನ್ನ ಕೋಪದಲ್ಲಿ ಅವರನ್ನು ತುಳಿದಿದ್ದೇನೆ, ನನ ಉರಿಯಲ್ಲಿ ಅವರನ್ನು ಜಜ್ಜಿಬಿಟ್ಟಿದ್ದೇನೆ. ಆದದರಿಂದ ಅವರ ರಕ್ತವು ನನ್ನ ಬಟ್ಟೆಗಳ ಮೇಲೆ ಚಿಮುಕಿಸ ಲ್ಪಟ್ಟಿದೆ, ನನ್ನ ವಸ್ತ್ರಗಳೆಲ್ಲಾ ಮೈಲಿಗೆಯಾದವು.
- Revelation 11:8 ಪ್ರಕಟನೆ 11:8ಇವರ ಶವಗಳು ಮಹಾ ಪಟ್ಟಣದ ಬೀದಿಯಲ್ಲಿ ಬಿದ್ದಿರುವವು. ಆ ಪಟ್ಟಣಕ್ಕೆ ಆತ್ಮಿಕವಾಗಿ ಸೊದೋಮ್ ಎಂತಲೂ ಐಗುಪ್ತ ಎಂತಲೂ ಕರೆಯುವರು; ನಮ್ಮ ಕರ್ತನು ಅಲ್ಲಿಯೇ ಶಿಲುಬೆಗೆ ಹಾಕಲ್ಪಟ್ಟನು.
- Isaiah 66:24 ಯೆಶಾಯ 66:24ಅವರು ಮುಂದೆ ಹೋಗಿ ನನಗೆ ವಿರೋಧವಾಗಿ ದ್ರೋಹ ಮಾಡಿದ ಮನುಷ್ಯರ ಹೆಣಗಳನ್ನು ನೋಡುವರು; ಯಾಕಂದರೆ ಅವರ ಹುಳ ಸಾಯುವದಿಲ್ಲ; ಅವರ ಬೆಂಕಿ ಆರುವದಿಲ್ಲ; ಅವರು ಎಲ್ಲಾ ಮನುಷ್ಯರಿಗೆ ಹೇಸಿಕೆಯಾಗುವರು.
- Isaiah 34:5–7 ಯೆಶಾಯ 34:5–7ನನ್ನ ಖಡ್ಗವು ಪರಲೋಕದಲ್ಲಿ ರೋಷ ಪಾನಮಾಡುವದು; ಇಗೋ, ಅದು ಎದೋ ಮಿನ ಮತ್ತು ನಾನು ಶಪಿಸಿದ ಜನರ ಮೇಲೆ ನ್ಯಾಯ ತೀರಿಸುವದಕ್ಕಾಗಿ ಕೆಳಗೆ ಇಳಿದು ಬರುವದು. ಕರ್ತನ ಖಡ್ಗವು ರಕ್ತದಿಂದ ತುಂಬಿದೆ; ಅದು ಕುರಿಹೋತಗಳ ರಕ್ತದಿಂದಲೂ ಟಗರುಗಳ ಮೂತ್ರಪಿಂಡದ ಕೊಬ್ಬಿ ನಿಂದಲೂ ಪುಷ್ಟಿಯಾಯಿತು; ಯಾಕಂದರೆ ಕರ್ತನು ಬೊಚ್ರದಲ್ಲಿ ಬಲಿಯನ್ನೂ ಎದೋಮಿನ ದೇಶದಲ್ಲಿ ದೊಡ್ಡ ಕೊಲೆಯನ್ನೂ ಉಂಟು ಮಾಡಿದ್ದಾನೆ. ಕಾಡು ಕೋಣಗಳು ಅವುಗಳ ಸಂಗಡಲೂ ಎತ್ತುಗಳು ಹೋರಿ ಗಳ ಸಂಗಡಲೂ ಬೀಳುವವು; ಅವರ ದೇಶವು ರಕ್ತ ದಿಂದ ನೆನೆಯುವದು, ಅವರ ಧೂಳು ಕೊಬ್ಬಿನಿಂದ ಪುಷ್ಟಿಯಾಗುವದು--
- Ezekiel 39:17–21 ಯೆಹೆಜ್ಕೇಲನು 39:17–21ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಮನುಷ್ಯಪುತ್ರನೇ, ನೀನು ಪ್ರತಿಯೊಂದು ರೀತಿಯ ಪಕ್ಷಿಗಳಿಗೂ ಮತ್ತು ಬಯಲಿನ ಪ್ರತಿಯೊಂದು ಪ್ರಾಣಿ ಗಳಿಗೂ ಮಾತನಾಡಿ--ಒಟ್ಟಾಗಿ ಬನ್ನಿರಿ. ನಾನು ನಿಮ ಗಾಗಿ ಅರ್ಪಿಸುವ ನನ್ನ ಯಜ್ಞಕ್ಕೋಸ್ಕರ ಪ್ರತಿಯೊಂದು ಕಡೆಯಿಂದಲೂ ಸೇರಿರಿ; ಇದು ಇಸ್ರಾಯೇಲ್ ಪರ್ವತಗಳ ಮೇಲೆ ನಡೆಯುವ ಮಹಾಯಜ್ಞವಾಗಿದೆ. ನೀವು ಮಾಂಸವನ್ನು ತಿಂದು ರಕ್ತವನ್ನು ಕುಡಿಯ ಬಹುದು. ನೀವು ಶೂರರ ಮಾಂಸವನ್ನು ತಿನ್ನುವಿರಿ ಮತ್ತು ಭೂಮಿಯ ಪ್ರಭುಗಳ ಟಗರು ಕುರಿಮರಿ ಹೋತ ಮತ್ತು ಹೋರಿಗಳ ಬಾಷಾನಿನ ಕೊಬ್ಬಿದ ಪಶು ಇವೆಲ್ಲವುಗಳ ರಕ್ತವನ್ನು ಕುಡಿಯುವಿರಿ. ನಾನು ನಿಮಗೋಸ್ಕರ ಅರ್ಪಿಸಿದ ನನ್ನ ಯಜ್ಞದಲ್ಲಿ ನಿಮಗೆ ತೃಪ್ತಿಯಾಗುವ ವರೆಗೂ ಕೊಬ್ಬನ್ನು ತಿಂದು ಮತ್ತೇರುವ ವರೆಗೂ ರಕ್ತವನ್ನು ಕುಡಿಯಬಹುದು. ಹೀಗೆ ನೀವು ನನ್ನ ಮೇಜಿನಲ್ಲಿ ಕುದುರೆಗಳಿಂದಲೂ ರಥಗಳಿಂದಲೂ ಶೂರರಿಂದಲೂ ಯುದ್ಧದ ಎಲ್ಲಾ ಮನುಷ್ಯರಿಂದಲೂ ತುಂಬುವಿರಿ ಎಂದು ದೇವರಾದ ಕರ್ತನು ಹೇಳುತ್ತಾನೆ. ನಾನು ನನ್ನ ಮಹಿಮೆಯನ್ನು ಅನ್ಯಜನಾಂಗಗಳಲ್ಲಿ ಸ್ಥಾಪಿಸುತ್ತೇನೆ; ಎಲ್ಲಾ ಅನ್ಯಜನಾಂಗಗಳು ನಾನು ನಡೆಸಿದ ನನ್ನ ನ್ಯಾಯತೀರ್ಪನ್ನು ಮತ್ತು ಅವರ ಮೇಲೆ ಇರಿಸಿದ ನನ್ನ ಕೈಯನ್ನು ನೋಡುವವು.
Original words (Greek)
- And · G2532καί kaí
- winepress · G3025ληνός lēnós
- trodden · G3961πατέω patéō
- without · G1854ἔξω éxō
- city · G4172πόλις pólis
- and · G2532καί kaí
- blood · G129αἷμα haîma
- came · G1831ἐξέρχομαι exérchomai
- of · G1537ἐκ ek
- winepress · G3025ληνός lēnós
- unto · G891ἄχρι áchri
- horse · G2462ἵππος híppos
- bridles · G5469χαλινός chalinós
- of · G575ἀπό apó
- thousand · G5507χίλιοι chílioi
- hundred · G1812ἑξακόσιοι hexakósioi
- furlongs · G4712στάδιον stádion