Revelation · chapter 14 · verse 5
Revelation 14:5 in Kannada
ಇವರ ಬಾಯಲ್ಲಿ ವಂಚನೆ ಸಿಕ್ಕಲಿಲ್ಲ; ಯಾಕಂದರೆ ಇವರು ದೇವರ ಸಿಂಹಾಸನದ ಮುಂದೆ ನಿರ್ದೋಷಿಗಳಾಗಿದ್ದಾರೆ.
Ivara baayalli vanchane sikkalilla; yaakandare ivaru devara sinhaasanada munde nirdoshigalaagiddaare.
Revelation 14:5 in English
- King James Version (KJV)
- And in their mouth was found no guile: for they are without fault before the throne of God.
- World English Bible (WEB)
- In their mouth was found no lie, for they are blameless.
- American Standard Version (ASV)
- And in their mouth was found no lie: they are without blemish.
- Bible in Basic English (BBE)
- And in their mouth there was no false word, for they are untouched by evil.
- Darby Translation (DBY)
- and in their mouths was no lie found; [for] they are blameless.
- Webster's Bible (WBS)
- And in their mouth was found no guile: for they are without fault before the throne of God.
- Young's Literal Translation (YLT)
- and in their mouth there was not found guile, for unblemished are they before the throne of God.
Read in context
- 3ಅವರು ಸಿಂಹಾಸನದ ಮುಂದೆಯೂ ಆ ನಾಲ್ಕು ಜೀವಿಗಳ ಮತ್ತು ಹಿರಿಯರ ಮುಂದೆಯೂ ಹೊಸ ಹಾಡಿನಂತಿದ್ದ ಹಾಡನ್ನು ಅವರು ಹಾಡಿದರು. ಭೂ ಲೋಕದೊಳಗಿಂದ ವಿಮೋಚಿಸಲ್ಪಟ್ಟ ಆ ಲಕ್ಷದ ನಾಲ್ವತ್ತು ನಾಲ್ಕು ಸಾವಿರ ಜನರೇ ಹೊರತು ಬೇರೆ ಯಾರೂ ಆ ಹಾಡನ್ನು ಕಲಿಯಲಾರರು.
- 4ಸ್ತ್ರೀಯ ರೊಂದಿಗೆ ಮಲಿನರಾಗದವರು ಇವರೇ. ಯಾಕಂದರೆ ಇವರು ಕನ್ನಿಕೆಯರು. ಕುರಿಮರಿಯಾದಾತನು ಎಲ್ಲಿಗೆ ಹೋದರೂ ಆತನ ಹಿಂದೆ ಹೋಗುವವರು ಇವರೇ. ದೇವರಿಗೂ ಕುರಿಮರಿಯಾದಾತನಿಗೂ ಪ್ರಥಮ ಫಲ ವಾಗಿರುವ ಇವರು ಮನುಷ್ಯರೊಳಗಿಂದ ವಿಮೋಚಿಸ ಲ್ಪಟ್ಟವರು.
- 5ಇವರ ಬಾಯಲ್ಲಿ ವಂಚನೆ ಸಿಕ್ಕಲಿಲ್ಲ; ಯಾಕಂದರೆ ಇವರು ದೇವರ ಸಿಂಹಾಸನದ ಮುಂದೆ ನಿರ್ದೋಷಿಗಳಾಗಿದ್ದಾರೆ.
- 6ಭೂಮಿಯಲ್ಲಿ ವಾಸಿಸುವ ಪ್ರತಿಯೊಂದು ಜನಾಂಗ ಕ್ಕೂ ಕುಲದವರಿಗೂ ಭಾಷೆಯವರಿಗೂ ಮತ್ತು ಜನ ರಿಗೂ ಸಾರುವದಕ್ಕೆ ನಿತ್ಯವಾದ ಸುವಾರ್ತೆ ಇದ್ದ ಇನ್ನೊಬ್ಬ ದೂತನು ಆಕಾಶದ ಮಧ್ಯದಲ್ಲಿ ಹಾರುವದನ್ನು ನಾನು ಕಂಡೆನು.
- 7ಅವನು--ದೇವರಿಗೆ ಭಯಪಟ್ಟು ಆತನನ್ನು ಘನಪಡಿಸಿರಿ; ಯಾಕಂದರೆ ಆತನು ನ್ಯಾಯತೀರ್ಪು ಮಾಡುವ ಗಳಿಗೆ ಬಂದದೆ; ಪರಲೋಕವನ್ನೂ ಭೂ ಲೋಕವನ್ನೂ ಸಮುದ್ರವನ್ನೂ ನೀರಿನ ಬುಗ್ಗೆಗಳನ್ನೂ ಉಂಟು ಮಾಡಿದಾತನನ್ನೇ ಆರಾಧಿಸಿರಿ ಎಂದು ಮಹಾ ಶಬ್ದದಿಂದ ಹೇಳಿದನು.
Cross references
- Ephesians 5:27 ಎಫೆಸದವರಿಗೆ 5:27ಅದನ್ನು ಕಳಂಕ ಸುಕ್ಕು ಇಂಥಾದ್ದು ಯಾವದೂ ಇಲ್ಲದೆ ಪರಿಶುದ್ಧವೂ ದೋಷವಿಲ್ಲದ್ದೂ ಆಗಿರುವ ಮಹಿಮೆಯುಳ್ಳ ಸಭೆಯ ನ್ನಾಗಿ ತನಗೆ ತಾನೇ ಸಮರ್ಪಿಸಿಕೊಳ್ಳಬೇಕೆಂದಿದ್ದಾನೆ.
- Psalm 32:2 ಕೀರ್ತನೆಗಳು 32:2ಕರ್ತನು ಯಾವನಿಗೆ ಅಪರಾಧ ವನ್ನು ಎಣಿಸುವದಿಲ್ಲವೋ, ಯಾವನ ಹೃದಯದಲ್ಲಿ ವಂಚನೆ ಇರುವದಿಲ್ಲವೋ, ಆ ಮನುಷ್ಯ ಧನ್ಯನು.
- Zephaniah 3:13 ಚೆಫನ್ಯ 3:13ಇಸ್ರಾಯೇಲಿನಲ್ಲಿ ಉಳಿದವರು ಅನ್ಯಾಯಮಾಡುವದಿಲ್ಲ; ಸುಳ್ಳು ಹೇಳುವದಿಲ್ಲ; ಅವರ ಬಾಯಲ್ಲಿ ಮೋಸದ ನಾಲಿಗೆ ಕಾಣುವದಿಲ್ಲ; ಅವರು ಮಂದೆಯಂತೆ ಮೇದು ಮಲಗುವರು; ಭಯಪಡಿಸು ವವನು ಒಬ್ಬನೂ ಇರುವದಿಲ್ಲ.
- John 1:47 ಯೋಹಾನನು 1:47ಯೇಸು ತನ್ನ ಬಳಿಗೆ ಬರುವ ನತಾನಯೇಲನನ್ನು ಕಂಡು ಅವನ ವಿಷಯವಾಗಿ--ಇಗೋ, ಇವನು ನಿಜ ವಾಗಿಯೂ ಇಸ್ರಾಯೇಲನು; ಇವನಲ್ಲಿ ಕಪಟವಿಲ್ಲ ಅಂದನು.
- Jude 1:24 ಯೂದನು 1:24ಎಡವಿಬೀಳದಂತೆ ನಿಮ್ಮನ್ನು ಕಾಪಾಡುವದಕ್ಕೂ ತನ್ನ ಪ್ರಭಾವದ ಸಮಕ್ಷಮದಲ್ಲಿ ನಿಮ್ಮನ್ನು ನಿರ್ದೋಷಿ ಗಳನ್ನಾಗಿ ಅತ್ಯಂತ ಹರ್ಷದೊಡನೆ ನಿಲ್ಲಿಸುವದಕ್ಕೂ ಶಕ್ತನಾಗಿರುವಒಬ್ಬನೇ ಜ್ಞಾನವುಳ್ಳ ನಮ್ಮ ರಕ್ಷಕನಾದ ದೇವರಿಗೆ ಪ್ರಭಾವ ಮಹತ್ವ ಆಧಿಪತ್ಯ ಅಧಿಕಾರಗಳು ಈಗಲೂ ಯಾವಾಗಲೂ ಇರಲಿ. ಆಮೆನ್.
- 1 Peter 3:10 1 ಪೇತ್ರನು 3:10ಜೀವವನ್ನು ಪ್ರೀತಿಸಿ ಸುದಿನಗಳನ್ನು ನೋಡುವದಕ್ಕೆ ಇಷ್ಟವುಳ್ಳವನು ಕೆಟ್ಟ ದ್ದನ್ನು ನುಡಿಯದಂತೆ ತನ್ನ ನಾಲಿಗೆಯನ್ನೂ ವಂಚನೆಯ ಮಾತುಗಳನ್ನಾಡದ ಹಾಗೆ ತನ್ನ ತುಟಿಗಳನ್ನೂ ಬಿಗಿ ಹಿಡಿಯಲಿ.
- Psalm 34:13 ಕೀರ್ತನೆಗಳು 34:13ಕೇಡಿನಿಂದ ನಿನ್ನ ನಾಲಿಗೆಯನ್ನೂ ಮೋಸವನ್ನು ನುಡಿಯದ ಹಾಗೆ ನಿನ್ನ ತುಟಿಗಳನ್ನೂ ಕಾಯಿ.
- Colossians 1:22 ಕೊಲೊಸ್ಸೆಯವರಿಗೆ 1:22ತನ್ನ ಸ್ಥೂಲ ದೇಹದಲ್ಲಿ ಉಂಟಾದ ಮರಣದ ಮೂಲಕ ನಿಮ್ಮನ್ನು ಪರಿಶುದ್ಧರನ್ನಾಗಿಯೂ ನಿರ್ದೋಷಿಗಳನ್ನಾಗಿಯೂ ನಿರಪರಾಧಿಗಳನ್ನಾಗಿಯೂ ತನ್ನ ಸನ್ನಿಧಿಯಲ್ಲಿ ನಿಲ್ಲಿಸಬೇಕೆಂದಿದ್ದಾನೆ.
- Matthew 12:34 ಮತ್ತಾಯನು 12:34ಓ ಸರ್ಪಸಂತತಿಯವರೇ, ಕೆಟ್ಟವರಾಗಿ ರುವ ನೀವು ಒಳ್ಳೆಯವುಗಳನ್ನು ಹೇಗೆ ಮಾತನಾಡೀರಿ? ಯಾಕಂದರೆ ಹೃದಯದಲ್ಲಿ ಸಮೃದ್ಧಿಯಾಗಿರುವದನ್ನೇ ಬಾಯಿ ಮಾತನಾಡುತ್ತದೆ.
- Daniel 6:4 ದಾನಿಯೇಲನು 6:4ಹೀಗಿರಲು ಪ್ರಧಾನಿಗಳೂ ದೇಶಾಧಿಪತಿಗಳೂ ರಾಜ್ಯ ಭಾರದ ವಿಷಯವಾಗಿ ದಾನಿಯೇಲನ ವಿರೋಧವಾಗಿ ತಪ್ಪುಹೊರಿಸುವದಕ್ಕೆ ಸಂದರ್ಭ ಹುಡುಕುತ್ತಿದ್ದರು. ಆದರೆ ಅವನು ನಂಬಿಗಸ್ತನಾಗಿದ್ದು ಅವನಲ್ಲಿ ತಪ್ಪು ದೋಷವು ಇಲ್ಲದಿದ್ದದ್ದರಿಂದ ಅವರಿಗೆ ಯಾವ ತಪ್ಪೂ ಸಿಗಲಾರದೆ ಹೋಯಿತು.
- Luke 23:4 ಲೂಕನು 23:4ತರುವಾಯ ಪಿಲಾತನು ಪ್ರಧಾ ನಯಾಜಕರಿಗೂ ಜನರಿಗೂ--ಈ ಮನುಷ್ಯನಲ್ಲಿ ನಾನು ಯಾವ ತಪ್ಪನ್ನೂ ಕಾಣಲಿಲ್ಲ ಅಂದನು.
- Proverbs 8:8 ಜ್ಞಾನೋಕ್ತಿಗಳು 8:8ನನ್ನ ಬಾಯಿಯ ಮಾತುಗಳೆಲ್ಲಾ ನೀತಿಯಲ್ಲಿವೆ; ಮೂರ್ಖ ತನವಾಗಲಿ ವಕ್ರತೆಯಾಗಲಿ ಅವುಗಳಲ್ಲಿ ಇಲ್ಲ.