Revelation · chapter 16 · verse 1
Revelation 16:1 in Kannada
ಆಗ ಆಲಯದಿಂದ ಬಂದ ಮಹಾಶಬ್ದ ವನ್ನು ಕೇಳಿದೆನು. ಅದು ಆ ಏಳು ಮಂದಿ ದೂತರಿಗೆ--ನೀವು ಹೋಗಿ ಆ ಪಾತ್ರೆಗಳ ಲ್ಲಿರುವ ದೇವರ ರೌದ್ರವನ್ನು ಭೂಮಿಯ ಮೇಲೆ ಹೊಯ್ಯಿರಿ ಎಂದು ಹೇಳಿತು.
Aaga aalayadinda banda mahaashabda vannu kelidenu. Adu aa elu mandi dootarige--neevu hogi aa paatregala lliruva devara raudravannu bhoomiya mele hoyyiri endu helitu.
Revelation 16:1 in English
- King James Version (KJV)
- And I heard a great voice out of the temple saying to the seven angels, Go your ways, and pour out the vials of the wrath of God upon the earth.
- World English Bible (WEB)
- I heard a loud voice out of the temple, saying to the seven angels, “Go and pour out the seven bowls of the wrath of God on the earth!”
- American Standard Version (ASV)
- And I heard a great voice out of the temple, saying to the seven angels, Go ye, and pour out the seven bowls of the wrath of God into the earth.
- Bible in Basic English (BBE)
- And a great voice out of the house of God came to my ears, saying to the seven angels, Go, and let that which is in the seven vessels of the wrath of God come down on the earth.
- Darby Translation (DBY)
- And I heard a great voice out of the temple, saying to the seven angels, Go and pour out the seven bowls of the fury of God upon the earth.
- Webster's Bible (WBS)
- And I heard a great voice out of the temple, saying to the seven angels, Go, and pour out the vials of the wrath of God upon the earth.
- Young's Literal Translation (YLT)
- And I heard a great voice out of the sanctuary saying to the seven messengers, 'Go away, and pour out the vials of the wrath of God to the earth;'
Read in context
- 1ಆಗ ಆಲಯದಿಂದ ಬಂದ ಮಹಾಶಬ್ದ ವನ್ನು ಕೇಳಿದೆನು. ಅದು ಆ ಏಳು ಮಂದಿ ದೂತರಿಗೆ--ನೀವು ಹೋಗಿ ಆ ಪಾತ್ರೆಗಳ ಲ್ಲಿರುವ ದೇವರ ರೌದ್ರವನ್ನು ಭೂಮಿಯ ಮೇಲೆ ಹೊಯ್ಯಿರಿ ಎಂದು ಹೇಳಿತು.
- 2ಆಗ ಮೊದಲನೆಯವನು ಹೊರಟು ತನ್ನ ಪಾತ್ರೆ ಯಲ್ಲಿದ್ದದ್ದನ್ನು ಭೂಮಿಯ ಮೇಲೆ ಹೊಯಿದನು; ಆಗ ಮೃಗದ ಗುರುತನ್ನು ಹೊಂದಿ ಅದರ ವಿಗ್ರಹಕ್ಕೆ ಆರಾಧನೆ ಮಾಡಿದ ಮನುಷ್ಯರ ಮೇಲೆ ಕೊಳೆಯುವ ಘೋರವಾದ ಹುಣ್ಣು ಎದ್ದಿತು.
- 3ಎರಡನೆಯ ದೂತನು ತನ್ನ ಪಾತ್ರೆಯಲ್ಲಿದ್ದದ್ದನ್ನು ಸಮುದ್ರದ ಮೇಲೆ ಹೊಯಿದಾಗ ಅದು ಸತ್ತವನ ರಕ್ತದ ಹಾಗಾಯಿತು; ಸಮುದ್ರದಲ್ಲಿ ಬದುಕುವ ಪ್ರತಿಯೊಂದು ಪ್ರಾಣಿಯು ಸತ್ತಿತು.
Cross references
- Zephaniah 3:8 ಚೆಫನ್ಯ 3:8ಆದದರಿಂದ ನಾನು ಕೊಳ್ಳೆಗೆ ಏಳುವ ದಿನದ ವರೆಗೂ ನನಗೆ ಕಾದುಕೊಳ್ಳಿರಿ; ಜನಾಂಗಗಳನ್ನು ಕೂಡಿಸುವದಕ್ಕೂ ರಾಜ್ಯಗಳನ್ನು ಒಟ್ಟು ಸೇರಿಸುವದಕ್ಕೂ ಅವುಗಳ ಮೇಲೆ ನನ್ನ ರೌದ್ರವನ್ನೂ ಕೋಪದ ಎಲ್ಲಾ ಉರಿಯನ್ನೂ ಹೊಯ್ಯುವದಕ್ಕೂ ತೀರ್ಮಾನಿಸಿಕೊಂಡಿದ್ದೇನೆ; ನನ್ನ ರೋಷದ ಬೆಂಕಿಯಿಂದ ಭೂಮಿಯೆಲ್ಲಾ ದಹಿಸ ಲ್ಪಡುವದು.
- Revelation 15:1 ಪ್ರಕಟನೆ 15:1ಪರಲೋಕದಲ್ಲಿ ದೊಡ್ಡ ಅದ್ಭುತಕರವಾದ ಮತ್ತೊಂದು ಗುರುತನ್ನು ನಾನು ನೋಡಿ ದೆನು. ಏಳು ಮಂದಿ ದೂತರಲ್ಲಿ ಏಳು ಕಡೇ ಉಪದ್ರವ ಗಳಿದ್ದವು; ಯಾಕಂದರೆ ಅವುಗಳಲ್ಲಿ ದೇವರ ರೌದ್ರವು ತುಂಬಿದೆ.
- Jeremiah 10:25 ಯೆರೆಮೀಯ 10:25ನಿನ್ನನ್ನು ತಿಳಿಯದ ಅನ್ಯರ ಮೇಲೆಯೂ ನಿನ್ನ ಹೆಸರನ್ನು ಕರೆಯದ ಕುಟುಂಬಗಳ ಮೇಲೆಯೂ ನಿನ್ನ ರೌದ್ರವನ್ನು ಹೊಯಿದುಬಿಡು; ಅವರು ಯಾಕೋ ಬ್ಯರನ್ನು ತಿಂದು ಬಿಟ್ಟಿದ್ದಾರೆ; ಅವರನ್ನು ನುಂಗಿ ಇಲ್ಲದಾಗಿ ಮಾಡಿ ಅವರ ನಿವಾಸವನ್ನು ಹಾಳುಮಾಡಿದ್ದಾರೆ.
- Revelation 16:17 ಪ್ರಕಟನೆ 16:17ಏಳನೆಯ ದೂತನು ತನ್ನ ಪಾತ್ರೆಯಲ್ಲಿದ್ದದ್ದನ್ನು ವಾಯುಮಂಡಲದಲ್ಲಿ ಹೊಯ್ಯಲು ಪರಲೋಕದಲ್ಲಿದ್ದ ಆಲಯದೊಳಗಿಂದಲೂ ಸಿಂಹಾಸನದಿಂದಲೂ ಮಹಾಶಬ್ದವು ಬಂದು--ಮುಗಿಯಿತು ಎಂದು ಹೇಳಿತು.
- Psalm 79:6 ಕೀರ್ತನೆಗಳು 79:6ನಿನ್ನನ್ನು ತಿಳಿಯದ ಜನಾಂಗ ಗಳ ಮೇಲೆಯೂ ನಿನ್ನ ಹೆಸರನ್ನು ಕರೆಯದ ರಾಜ್ಯಗಳ ಮೇಲೆಯೂ ನಿನ್ನ ಕೋಪವನ್ನು ಹೊಯಿದುಬಿಡು.
- Revelation 16:2–12 ಪ್ರಕಟನೆ 16:2–12ಆಗ ಮೊದಲನೆಯವನು ಹೊರಟು ತನ್ನ ಪಾತ್ರೆ ಯಲ್ಲಿದ್ದದ್ದನ್ನು ಭೂಮಿಯ ಮೇಲೆ ಹೊಯಿದನು; ಆಗ ಮೃಗದ ಗುರುತನ್ನು ಹೊಂದಿ ಅದರ ವಿಗ್ರಹಕ್ಕೆ ಆರಾಧನೆ ಮಾಡಿದ ಮನುಷ್ಯರ ಮೇಲೆ ಕೊಳೆಯುವ ಘೋರವಾದ ಹುಣ್ಣು ಎದ್ದಿತು. ಎರಡನೆಯ ದೂತನು ತನ್ನ ಪಾತ್ರೆಯಲ್ಲಿದ್ದದ್ದನ್ನು ಸಮುದ್ರದ ಮೇಲೆ ಹೊಯಿದಾಗ ಅದು ಸತ್ತವನ ರಕ್ತದ ಹಾಗಾಯಿತು; ಸಮುದ್ರದಲ್ಲಿ ಬದುಕುವ ಪ್ರತಿಯೊಂದು ಪ್ರಾಣಿಯು ಸತ್ತಿತು. ಮೂರನೆಯ ದೂತನು ತನ್ನ ಪಾತ್ರೆಯಲ್ಲಿ ದ್ದದ್ದನ್ನು ನದಿಗಳ ಮೇಲೆಯೂ ನೀರಿನ ಬುಗ್ಗೆಗಳ ಮೇಲೆಯೂ ಹೊಯಿದನು; ಅವುಗಳ ನೀರು ರಕ್ತವಾಯಿತು. ಅಮೇಲೆ ಜಲಗಳ ದೂತನು--ಓ ಕರ್ತನೇ, ನೀನು ಇರುವಾತನೂ ಇದ್ದಾತನೂ ಬರುವಾತನೂ ಆಗಿರುವದರಿಂದ ನೀನು ಹೀಗೆ ತೀರ್ಪು ಮಾಡಿದ್ದರಲ್ಲಿ ನೀತಿ ಸ್ವರೂಪನಾಗಿದ್ದೀ. ಅವರು ಪರಿಶುದ್ಧರ ಮತ್ತು ಪ್ರವಾದಿಗಳ ರಕ್ತವನ್ನು ಸುರಿಸಿದರು; ನೀನು ಅವರಿಗೆ ರಕ್ತವನ್ನೇ ಕುಡಿಯುವದಕ್ಕೆ ಕೊಟ್ಟಿದ್ದೀ;ಇದಕ್ಕೆ ಅವರು ಪಾತ್ರರು ಎಂದು ಹೇಳುವದನ್ನು ನಾನು ಕೇಳಿದೆನು. ಆಮೇಲೆ ಯಜ್ಞವೇದಿಯೊಳಗಿಂದ ಮತ್ತೊಬ್ಬನು--ಹೌದು, ಸರ್ವಶಕ್ತನಾಗಿರುವ ದೇವ ರಾದ ಕರ್ತನೇ, ನಿನ್ನ ನ್ಯಾಯತೀರ್ಪುಗಳು ಸತ್ಯವೂ ನೀತಿಯುಳ್ಳವುಗಳೂ ಆಗಿವೆ ಎಂದು ಹೇಳುವದನ್ನು ನಾನು ಕೇಳಿದೆನು. ನಾಲ್ಕನೆಯ ದೂತನು ತನ್ನ ಪಾತ್ರೆಯಲ್ಲಿದ್ದದ್ದನ್ನು ಸೂರ್ಯನ ಮೇಲೆ ಹೊಯಿದನು. ಆಗ ಸೂರ್ಯ ನಿಗೆ ಬೆಂಕಿಯಿಂದ ಮನುಷ್ಯರನ್ನು ಕಂದಿಸುವ ಶಕ್ತಿಯು ಕೊಡಲ್ಪಟ್ಟಿತು. ಮನುಷ್ಯರು ಬಲವಾದ ಕಾವಿನಿಂದ ಕಂದಿಹೋದರೂ ಅವರು ದೇವರನ್ನು ಘನಪಡಿಸುವ ಹಾಗೆ ಮಾನಸಾಂತರ ಮಾಡಿಕೊಳ್ಳದೆ ಈ ಉಪದ್ರವ ಗಳ ಮೇಲೆ ಅಧಿಕಾರವುಳ್ಳ ದೇವರ ನಾಮವನ್ನು ದೂಷಿಸಿದರು. ಐದನೆಯ ದೂತನು ತನ್ನ ಪಾತ್ರೆಯಲ್ಲಿದ್ದದ್ದನ್ನು ಮೃಗದ ಆಸನದ ಮೇಲೆ ಹೊಯ್ಯಲು ಅದರ ರಾಜ್ಯವು ತುಂಬಾ ಕತ್ತಲಾಯಿತು; ಜನರು ತಮಗಾದ ನೋವಿನ ದೆಸೆಯಿಂದ ತಮ್ಮ ನಾಲಿಗೆಗಳನ್ನು ಕಚ್ಚಿಕೊಂಡು ತಮ್ಮ ಕೃತ್ಯಗಳ ವಿಷಯದಲ್ಲಿ ಮಾನಸಾಂತರ ಮಾಡಿ ಕೊಳ್ಳದೆ ತಮ್ಮ ನೋವಿನ ದೆಸೆಯಿಂದಲೂ ಹುಣ್ಣುಗಳ ದೆಸೆಯಿಂದಲೂ ಪರಲೋಕದೇವರನ್ನು ದೂಷಿಸಿದರು. ಆರನೆಯ ದೂತನು ತನ್ನ ಪಾತ್ರೆಯಲ್ಲಿದ್ದದ್ದನ್ನು ಯೂಫ್ರೇಟೀಸ್ ಮಹಾನದಿಯ ಮೇಲೆ ಹೊಯ್ಯಲು ಮೂಡಣ ದಿಕ್ಕಿನಿಂದ ಬರುವ ರಾಜರಿಗೆ ಮಾರ್ಗವು ಸಿದ್ಧವಾಗುವಂತೆ ಅದರ ನೀರು ಬತ್ತಿ ಹೋಯಿತು.
- Revelation 15:5–8 ಪ್ರಕಟನೆ 15:5–8ಇದಾದ ಮೇಲೆ ನಾನು ನೋಡಿದಾಗ ಇಗೋ, ಪರಲೋಕದಲ್ಲಿರುವ ಸಾಕ್ಷೀ ಗುಡಾರದ ಆಲಯವು ತೆರೆಯಲ್ಪಟ್ಟಿತು. ಇದಾದ ಮೇಲೆ ನಾನು ನೋಡಿದಾಗ ಇಗೋ, ಪರಲೋಕದಲ್ಲಿರುವ ಸಾಕ್ಷೀ ಗುಡಾರದ ಆಲಯವು ತೆರೆಯಲ್ಪಟ್ಟಿತು. ದೇವರ ಮಹಿಮೆ ಯಿಂದಲೂ ಆತನ ಶಕ್ತಿಯಿಂದಲೂ ಉಂಟಾದ ಹೊಗೆ ಯಿಂದ ಆಲಯವು ತುಂಬಿದ ಕಾರಣ ಆ ಏಳುಮಂದಿ ದೂತರ ಏಳು ಉಪದ್ರವಗಳು ತೀರುವ ತನಕ ಆ ಆಲಯದೊಳಗೆ ಪ್ರವೇಶಿಸುವದಕ್ಕೆ ಯಾರಿಂದಲೂ ಆಗಲಿಲ್ಲ.ದೇವರ ಮಹಿಮೆ ಯಿಂದಲೂ ಆತನ ಶಕ್ತಿಯಿಂದಲೂ ಉಂಟಾದ ಹೊಗೆ ಯಿಂದ ಆಲಯವು ತುಂಬಿದ ಕಾರಣ ಆ ಏಳುಮಂದಿ ದೂತರ ಏಳು ಉಪದ್ರವಗಳು ತೀರುವ ತನಕ ಆ ಆಲಯದೊಳಗೆ ಪ್ರವೇಶಿಸುವದಕ್ಕೆ ಯಾರಿಂದಲೂ ಆಗಲಿಲ್ಲ. ದೇವರ ಮಹಿಮೆ ಯಿಂದಲೂ ಆತನ ಶಕ್ತಿಯಿಂದಲೂ ಉಂಟಾದ ಹೊಗೆ ಯಿಂದ ಆಲಯವು ತುಂಬಿದ ಕಾರಣ ಆ ಏಳುಮಂದಿ ದೂತರ ಏಳು ಉಪದ್ರವಗಳು ತೀರುವ ತನಕ ಆ ಆಲಯದೊಳಗೆ ಪ್ರವೇಶಿಸುವದಕ್ಕೆ ಯಾರಿಂದಲೂ ಆಗಲಿಲ್ಲ.
- Matthew 13:41–42 ಮತ್ತಾಯನು 13:41–42ಮನುಷ್ಯಕುಮಾರನು ತನ್ನ ದೂತರನ್ನು ಕಳುಹಿ ಸುವನು; ಅವರು ಆತಂಕ ಮಾಡುವ ಎಲ್ಲವುಗಳನ್ನೂ ದುಷ್ಟತನ ಮಾಡುವವರನ್ನೂ ಆತನ ರಾಜ್ಯದೊಳಗಿಂದ ಕೂಡಿಸಿ ಅವರನ್ನು ಬೆಂಕಿಯ ಆವಿಗೆಯಲ್ಲಿ ಹಾಕುವರು; ಅಲ್ಲಿ ಗೋಳಾಟವೂ ಹಲ್ಲು ಕಡಿಯೋಣವೂ ಇರುವವು.
- Ezekiel 9:5–8 ಯೆಹೆಜ್ಕೇಲನು 9:5–8ಅದನ್ನು ನಾನು ಕೇಳುತ್ತಿರುವಾಗ ಇತರರಿಗೆ ಅವನು ಹೇಳಿದ್ದೇನಂದರೆ --ನೀವೂ ಅವನ ಹಿಂದೆ ಪಟ್ಟಣದಲ್ಲಿ ಹಾದು ಹೋಗಿ ಹೊಡೆಯಿರಿ; ನಿಮ್ಮ ಕಣ್ಣುಗಳು ಕನಿಕರಿಸದೆ ಇರಲಿ, ಕಟಾಕ್ಷಿಸದೆಯೂ ಇರಲಿ. ವೃದ್ಧ ಯುವಕ ಯುವತಿ ಯರನ್ನು ಎಳೆಕೂಸುಗಳನ್ನು ಮತ್ತು ಹೆಂಗಸರನ್ನು ಸಂಪೂರ್ಣವಾಗಿ ಕೊಂದುಹಾಕಿರಿ. ಆದರೆ ಗುರುತು ಯಾವನ ಮೇಲೆ ಇದೆಯೋ ಅವನ ಹತ್ತಿರ ಹೋಗ ಬೇಡಿರಿ; ನನ್ನ ಪರಿಶುದ್ಧ ಸ್ಥಳದಿಂದಲೇ ಪ್ರಾರಂಭಿಸಿರಿ ಅಂದಾಗ, ಅವರು ಆಲಯದ ಮುಂದಿದ್ದ ಹಿರಿಯರಿಂದ ಪ್ರಾರಂಭಿಸಿದರು. ಆತನು ಅವರಿಗೆ--ಆಲಯವನ್ನು ಅಶುದ್ಧ ಮಾಡಿರಿ, ಹತರಾದವರಿಂದ ಅಂಗಳಗಳನ್ನು ತುಂಬಿಸಿ, ಹೊರಡಿರಿ ಎಂದು ಹೇಳಿದನು. ಅವರು ಹೊರಟು ನಗರದಲ್ಲಿದ್ದವರನ್ನು ಹತಮಾಡಿದರು. ಅವರು ಹತಮಾಡುತ್ತಿರುವಾಗ ನಾನು ಬಿಡಿಸಲ್ಪಟ್ಟೆನು. ಆಗ ನಾನು ಮೋರೆ ಕೆಳಗಾಗಿ ಬಿದ್ದು ಕೂಗಿ--ಹಾ, ದೇವರಾದ ಕರ್ತನೇ, ನೀನು ಯೆರೂಸಲೇಮಿನ ಮೇಲೆ ನಿನ್ನ ಕೋಪಾಗ್ನಿಯನ್ನು ಸುರಿಯುವದರಲ್ಲಿಯೇ ಇಸ್ರಾ ಯೇಲ್ಯರಲ್ಲಿ ಉಳಿದವರನ್ನೆಲ್ಲಾ ನಾಶಮಾಡುವಿಯಾ ಎಂದೆನು.
- Revelation 14:9–11 ಪ್ರಕಟನೆ 14:9–11ತರುವಾಯ ಮೂರನೆಯ ದೂತನು ಅವರನ್ನು ಹಿಂಬಾಲಿಸಿ--ಯಾರಾದರೂ ಮೃಗವನ್ನೂ ಅದರ ವಿಗ್ರಹವನ್ನೂ ಆರಾಧಿಸಿ ತನ್ನ ಹಣೆಯ ಮೇಲಾಗಲಿ ತನ್ನ ಕೈಯ ಮೇಲಾಗಲಿ ಅದರ ಗುರುತು ಹಾಕಿಸಿ ಕೊಂಡರೆ ಅಂಥವನು ದೇವರ ಕೋಪವೆಂಬ ಪಾತ್ರೆ ಯಲ್ಲಿ ಏನೂ ಬೆರಸದೆ ಹಾಕಿದ ಆತನ ರೌದ್ರವೆಂಬ ದ್ರಾಕ್ಷಾರಸವನ್ನು ಕುಡಿಯುವನು. ಪರಿಶುದ್ಧ ದೂತರ ಮುಂದೆಯೂ ಕುರಿಮರಿಯಾದಾತನ ಮುಂದೆಯೂ ಬೆಂಕಿಯಿಂದ ಮತ್ತು ಗಂಧಕದಿಂದ ಯಾತನೆಪಡು ವನು. ಅವರ ಯಾತನೆಯ ಹೊಗೆಯು ಯುಗ ಯುಗಾಂತರಗಳಲ್ಲಿ ಏರುತ್ತಿರುವದು. ಆ ಮೃಗಕ್ಕೂ ಅದರ ವಿಗ್ರಹಕ್ಕೂ ಆರಾಧನೆ ಮಾಡುವವರೂ ಅದರ ಹೆಸರಿನ ಗುರುತನ್ನು ಹಾಕಿಸಿಕೊಂಡಿರುವವರೂ ಹಗಲಿ ರುಳು ವಿಶ್ರಾಂತಿಯಿಲ್ಲದೆ ಇರುವರು ಎಂದು ಮಹಾ ಶಬ್ದದಿಂದ ಹೇಳಿದನು.
- Ezekiel 10:2 ಯೆಹೆಜ್ಕೇಲನು 10:2ಆತನು ನಾರುಮಡಿಯನ್ನು ಧರಿಸಿ ಕೊಂಡಿದ್ದ ಮನುಷ್ಯನಿಗೆ ಹೇಳಿದ್ದೇನಂದರೆ--ನೀನು ಕೆರೂಬಿಗಳ ಕೆಳಗೆ ಇರುವ ಚಕ್ರಗಳ ನಡುವೆ ಪ್ರವೇಶಿಸಿ, ಕೆರೂಬಿಗಳ ನಡುವೆ ಇರುವ ಉರಿಕೆಂಡಗಳ ತಳದಲಿ ನಿನ್ನ ಕೈತುಂಬ ಎತ್ತಿ ಅದನ್ನು ಪಟ್ಟಣದ ಮೇಲೆ ಚೆಲ್ಲು ಅಂದನು. ಹಾಗೆಯೇ ನಾನು ಕಂಡಂತೆ ಒಳಗೆ ಪ್ರವೇಶಿಸಿದನು.
- Revelation 14:15 ಪ್ರಕಟನೆ 14:15ಆಗ ಮತ್ತೊಬ್ಬ ದೂತನು ಆಲಯದೊಳಗಿಂದ ಬಂದು ಮೇಘದ ಮೇಲೆ ಕೂತಿದ್ದಾತನಿಗೆ--ನಿನಗೆ ಕೊಯ್ಯುವ ಕಾಲ ಬಂದಿರುವದರಿಂದ ನಿನ್ನ ಕುಡುಗೋಲನ್ನು ಹಾಕಿ ಕೊಯ್ಯಿ; ಯಾಕಂದರೆ ಭೂಮಿಯ ಪೈರು ಮಾಗಿದೆ ಎಂದು ಮಹಾಶಬ್ದದಿಂದ ಕೂಗಿದನು.
Original words (Greek)
- And · G2532καί kaí
- heard · G191ἀκούω akoúō
- great · G3173μέγας mégas
- voice · G5456φωνή phōnḗ
- of · G1537ἐκ ek
- temple · G3485ναός naós
- saying · G3004λέγω légō
- seven · G2033ἑπτά heptá
- angels · G32ἄγγελος ángelos
- ways · G5217ὑπάγω hypágō
- and · G2532καί kaí
- out · G1632ἐκχέω ekchéō
- vials · G5357φιάλη phiálē
- wrath · G2372θυμός thymós
- God · G2316θεός theós
- upon · G1519εἰς eis
- earth · G1093γῆ gē