Revelation · chapter 16 · verse 17
Revelation 16:17 in Kannada
ಏಳನೆಯ ದೂತನು ತನ್ನ ಪಾತ್ರೆಯಲ್ಲಿದ್ದದ್ದನ್ನು ವಾಯುಮಂಡಲದಲ್ಲಿ ಹೊಯ್ಯಲು ಪರಲೋಕದಲ್ಲಿದ್ದ ಆಲಯದೊಳಗಿಂದಲೂ ಸಿಂಹಾಸನದಿಂದಲೂ ಮಹಾಶಬ್ದವು ಬಂದು--ಮುಗಿಯಿತು ಎಂದು ಹೇಳಿತು.
Elaneya dootanu tanna paatreyalliddaddannu vaayumandaladalli hoyyalu paralokadallidda aalayadolagindaloo sinhaasanadindaloo mahaashabdavu bandu--mugiyitu endu helitu.
Revelation 16:17 in English
- King James Version (KJV)
- And the seventh angel poured out his vial into the air; and there came a great voice out of the temple of heaven, from the throne, saying, It is done.
- World English Bible (WEB)
- The seventh poured out his bowl into the air. A loud voice came out of the temple of heaven, from the throne, saying, “It is done!”
- American Standard Version (ASV)
- And the seventh poured out his bowl upon the air; and there came forth a great voice out of the temple, from the throne, saying, It is done:
- Bible in Basic English (BBE)
- And the seventh let what was in his vessel come out on the air; and there came out a great voice from the house of God, from the high seat, saying, It is done.
- Darby Translation (DBY)
- And the seventh poured out his bowl on the air; and there came out a great voice from the temple of the heaven, from the throne, saying, It is done.
- Webster's Bible (WBS)
- And the seventh angel poured out his vial into the air; and there came a great voice out of the temple of heaven, from the throne, saying, It is done.
- Young's Literal Translation (YLT)
- And the seventh messenger did pour out his vial to the air, and there came forth a great voice from the sanctuary of the heaven, from the throne, saying, 'It hath come!'
Read in context
- 15ಇಗೋ, ಕಳ್ಳನು ಬರುವಂತೆ ನಾನು ಬರುತ್ತೇನೆ. ನಿರ್ವಾಣನಾಗಿ ತಿರುಗಾಡುವಾಗ ಜನರು ತನ್ನ ನಾಚಿಕೆಯನ್ನು ನೋಡಿಯಾರೆಂದು ಎಚ್ಚರ ವಾಗಿದ್ದು ತನ್ನ ವಸ್ತ್ರಗಳನ್ನು ಕಾಪಾಡಿಕೊಳ್ಳುವವನು ಧನ್ಯನು.
- 16ಅವನು ಅವರನ್ನು ಇಬ್ರಿಯ ಭಾಷೆಯಲ್ಲಿ ಹರ್ಮಗೆದೋನ್ ಎಂದು ಕರೆಯಲ್ಪಟ್ಟ ಸ್ಥಳಕ್ಕೆ ಕೂಡಿಸುವನು.
- 17ಏಳನೆಯ ದೂತನು ತನ್ನ ಪಾತ್ರೆಯಲ್ಲಿದ್ದದ್ದನ್ನು ವಾಯುಮಂಡಲದಲ್ಲಿ ಹೊಯ್ಯಲು ಪರಲೋಕದಲ್ಲಿದ್ದ ಆಲಯದೊಳಗಿಂದಲೂ ಸಿಂಹಾಸನದಿಂದಲೂ ಮಹಾಶಬ್ದವು ಬಂದು--ಮುಗಿಯಿತು ಎಂದು ಹೇಳಿತು.
- 18ಆಗ ವಾಣಿಗಳೂ ಗುಡುಗುಗಳೂ ಮಿಂಚುಗಳೂ ಉಂಟಾದವು; ಇದಲ್ಲದೆ ಮಹಾ ಭೂಕಂಪವುಂಟಾಯಿತು; ಮನುಷ್ಯರು ಭೂಮಿಯ ಮೇಲೆ ಇದ್ದಂದಿನಿಂದ ಅಂಥ ಬಲವಾದ ಮತ್ತು ದೊಡ್ಡ ದಾದ ಭೂಕಂಪವಾಗಿರಲಿಲ್ಲ.
- 19ಆ ಮಹಾಪಟ್ಟಣವು ಮೂರು ಭಾಗಗಳಾಗಿ ವಿಭಾಗವಾಯಿತು; ಜನಾಂಗಗಳ ಪಟ್ಟಣಗಳು ಬಿದ್ದವು; ಇದಲ್ಲದೆ ಮಹಾಬಾಬೆಲಿಗೆ ಉಗ್ರಕೋಪವೆಂಬ ದ್ರಾಕ್ಷಾರಸದ ಪಾತ್ರೆಯನ್ನು ಕೊಡು ವಂತೆ ದೇವರ ಮುಂದೆ ಅದು ಜ್ಞಾಪಕಕ್ಕೆ ಬಂತು.
Cross references
- Revelation 21:6 ಪ್ರಕಟನೆ 21:6ಇದಲ್ಲದೆ ಆತನು ನನಗೆ--ಎಲ್ಲಾ ಮುಗಿಯಿತು. ನಾನು ಅಲ್ಫಾವೂ ಓಮೆಗವೂ ಆದಿಯೂ ಅಂತ್ಯವೂ ಆಗಿದ್ದೇನೆ. ದಾಹವುಳ್ಳವನಿಗೆ ಜೀವದ ನೀರಿನ ಬುಗ್ಗೆಯಿಂದ ನಾನು ನೀರನ್ನು ಉಚಿತವಾಗಿ ಕೊಡುವೆನು.
- John 19:30 ಯೋಹಾನನು 19:30ಯೇಸು ಆ ಹುಳಿರಸವನ್ನು ತಕ್ಕೊಂಡ ಮೇಲೆ--ತೀರಿತು ಎಂದು ಹೇಳಿ ತನ್ನ ತಲೆಯನ್ನು ಬಾಗಿಸಿ ಆತ್ಮವನ್ನು ಒಪ್ಪಿಸಿಕೊಟ್ಟನು.
- Ephesians 2:2 ಎಫೆಸದವರಿಗೆ 2:2ನೀವು ಪೂರ್ವದಲ್ಲಿ ಅಪರಾಧ ಗಳನ್ನೂ ಪಾಪಗಳನ್ನೂ ಮಾಡುವವರಾಗಿದ್ದು ಇಹ ಲೋಕಾಚಾರಕ್ಕೆ ಅನುಸಾರವಾಗಿ ನಡೆದುಕೊಂಡಿರಿ; ವಾಯುಮಂಡಲದಲ್ಲಿ ಅಧಿಕಾರ ನಡಿಸುವ ಅಧಿಪತಿಗೆ ಅಂದರೆ ಅವಿಧೇಯತೆಯ ಮಕ್ಕಳಲ್ಲಿ ಈಗ ಕೆಲಸ ನಡಿಸುವ ಆತ್ಮನಿಗನುಸಾರವಾಗಿ ನಡೆದುಕೊಂಡಿರಿ;
- Ephesians 6:12 ಎಫೆಸದವರಿಗೆ 6:12ನಾವು ಹೋರಾಡುವದು ಮನುಷ್ಯಮಾತ್ರದವರ ಸಂಗಡವಲ್ಲ; ರಾಜತ್ವಗಳ ಮೇಲೆಯೂ ಅಧಿಕಾರಿಗಳ ಮೇಲೆಯೂ ಈ ಲೋಕದ ಅಂಧಕಾರದ ಅಧಿಪತಿಗಳ ಮೇಲೆಯೂ ಆಕಾಶಮಂಡಲದಲ್ಲಿರುವ ದುರಾತ್ಮಗಳ ದುಷ್ಟತನದ ಮೇಲೆಯೂ ಹೋರಾಡುವವರಾಗಿದ್ದೇವೆ.
- Revelation 10:6–7 ಪ್ರಕಟನೆ 10:6–7ಪರಲೋಕವನ್ನೂ ಅದರಲ್ಲಿರುವವುಗಳನ್ನೂ ಭೂಮಿಯನ್ನೂ ಅದರಲ್ಲಿರುವವುಗಳನ್ನೂ ಸಮುದ್ರ ವನ್ನೂ ಅದರಲ್ಲಿರುವವುಗಳನ್ನೂ ಸೃಷ್ಟಿಸಿ ಯುಗ ಯುಗಾಂತರಗಳಲ್ಲಿ ಜೀವಿಸುವಾತನ ಮೇಲೆ ಆಣೆ ಯಿಟ್ಟು ಇನ್ನು ಸಮಯವಿರುವದಿಲ್ಲ ಎಂತಲೂ ಏಳನೆಯ ದೂತನು ಶಬ್ದಮಾಡುವ ದಿನಗಳಲ್ಲಿ ಅಂದರೆ ಅವನು ತುತೂರಿಯನ್ನು ಊದುವದಕ್ಕೆ ಪ್ರಾರಂಭಿಸು ವಾಗ ದೇವರ ರಹಸ್ಯವನ್ನು ತನ್ನ ಸೇವಕರಾದ ಪ್ರವಾದಿ ಗಳಿಗೆ ತಿಳಿಸಿದ್ದ ಪ್ರಕಾರ ಸಮಾಪ್ತಿಯಾಗತಕ್ಕದ್ದು ಎಂತಲೂ ಹೇಳಿದನು.
- Revelation 15:5–6 ಪ್ರಕಟನೆ 15:5–6ಇದಾದ ಮೇಲೆ ನಾನು ನೋಡಿದಾಗ ಇಗೋ, ಪರಲೋಕದಲ್ಲಿರುವ ಸಾಕ್ಷೀ ಗುಡಾರದ ಆಲಯವು ತೆರೆಯಲ್ಪಟ್ಟಿತು. ಇದಾದ ಮೇಲೆ ನಾನು ನೋಡಿದಾಗ ಇಗೋ, ಪರಲೋಕದಲ್ಲಿರುವ ಸಾಕ್ಷೀ ಗುಡಾರದ ಆಲಯವು ತೆರೆಯಲ್ಪಟ್ಟಿತು.
- Daniel 12:7–13 ದಾನಿಯೇಲನು 12:7–13ನದಿಯ ನೀರಿನ ಮೇಲೆ ನಿಂತು ನಾರು ಬಟ್ಟೆಯನ್ನು ಧರಿಸಿ ನಿಂತಿದ್ದ ಮನುಷ್ಯನು ತನ್ನ ಎಡಗೈಯನ್ನೂ ಬಲಗೈಯನ್ನೂ ಆಕಾಶದ ಕಡೆಗೆ ಎತ್ತಿ ಸದಾಕಾಲ ಜೀವಂತವಾಗಿರುವಾತನ ಮೇಲೆ ಆಣೆ ಇಟ್ಟು--ಅದು ಕಾಲ, ಕಾಲಗಳು, ಅರ್ಧಕಾಲ ಇರುವದೆಂದೂ ಆತನು ಪರಿಶುದ್ಧ ಜನರ ಬಲವನ್ನು ಚದರಿಸಿದ ಮೇಲೆ ಇವೆಲ್ಲವುಗಳು ಈಡೇರುವವೆಂದೂ ಅಂದದ್ದನ್ನು ನಾನು ಕೇಳಿದೆನು. ಆದರೆ ಗ್ರಹಿಸಲಿಲ್ಲ; ಆಗ ನಾನು--ಓ ನನ್ನ ಕರ್ತನೇ, ಈ ಸಂಗತಿಗಳ ಅಂತ್ಯವೇನು ಎಂದು ಕೇಳಿದೆನು. ದಾನಿಯೇಲನೇ, ನಿನ್ನ ದಾರಿಯಲ್ಲಿ ಹೋಗು; ಈ ಮಾತುಗಳು ಅಂತ್ಯಕಾಲದ ವರೆಗೂ ಮುಚ್ಚಲ್ಪಟ್ಟು ಮುದ್ರೆ ಹಾಕಲ್ಪ ಟ್ಟಿವೆ. ಅನೇಕರು ಇನ್ನು ಶುದ್ಧಮಾಡಲ್ಪಟ್ಟು, ಶುಭ್ರ ಮಾಡಲ್ಪಟ್ಟು, ಶೋಧಿಸಲ್ಪಟ್ಟಿರುವರು; ಆದರೆ ಕೆಟ್ಟವರು ಕೆಟ್ಟದ್ದನ್ನೇ ಮಾಡುವರು; ಕೆಟ್ಟವರಲ್ಲಿ ಅದನ್ನು ಒಬ್ಬನೂ ಅರ್ಥ ಮಾಡಿಕೊಳ್ಳುವದಿಲ್ಲ; ಆದರೆ ಬುದ್ಧಿವಂತರು ಅರ್ಥ ಮಾಡಿಕೊಳ್ಳುವರು. ಪ್ರತಿದಿನದ ಯಜ್ಞವು ಸಕಾಲಕ್ಕೆ ತೆಗೆದುಹಾಕಲ್ಪಟ್ಟು ಹಾಳುಮಾಡುವಂಥ ಅಸಹ್ಯವು ಇರಿಸಲ್ಪಡುವ ವರೆಗೂ ಸಾವಿರದ ಇನ್ನೂರ ತೊಂಭತ್ತೊಂಭತ್ತು ದಿನಗಳು ಇರುವವು. ಸಾವಿರದ ಮುನ್ನೂರ ಮೂವತ್ತೈದು ದಿನಗಳು ಬರುವ ವರೆಗೆ ಕಾದಿರುವವನೇ ಭಾಗ್ಯವಂತನು.ಆದರೆ ನೀನು ಅಂತ್ಯದ ವರೆಗೂ ಹೋಗು; ಯಾಕಂದರೆ ನೀನು ವಿಶ್ರಮಿಸಿಕೊಳ್ಳುವಿ ಮತ್ತು ದಿನಗಳ ಅಂತ್ಯದಲ್ಲಿ ನಿನ್ನ ಭಾಗದಲ್ಲಿ ನಿಲ್ಲುವಿ (ಎಂದು ಹೇಳಿದನು.) ಆದರೆ ನೀನು ಅಂತ್ಯದ ವರೆಗೂ ಹೋಗು; ಯಾಕಂದರೆ ನೀನು ವಿಶ್ರಮಿಸಿಕೊಳ್ಳುವಿ ಮತ್ತು ದಿನಗಳ ಅಂತ್ಯದಲ್ಲಿ ನಿನ್ನ ಭಾಗದಲ್ಲಿ ನಿಲ್ಲುವಿ (ಎಂದು ಹೇಳಿದನು.)
- Revelation 14:15 ಪ್ರಕಟನೆ 14:15ಆಗ ಮತ್ತೊಬ್ಬ ದೂತನು ಆಲಯದೊಳಗಿಂದ ಬಂದು ಮೇಘದ ಮೇಲೆ ಕೂತಿದ್ದಾತನಿಗೆ--ನಿನಗೆ ಕೊಯ್ಯುವ ಕಾಲ ಬಂದಿರುವದರಿಂದ ನಿನ್ನ ಕುಡುಗೋಲನ್ನು ಹಾಕಿ ಕೊಯ್ಯಿ; ಯಾಕಂದರೆ ಭೂಮಿಯ ಪೈರು ಮಾಗಿದೆ ಎಂದು ಮಹಾಶಬ್ದದಿಂದ ಕೂಗಿದನು.
- Revelation 11:19 ಪ್ರಕಟನೆ 11:19ಆಗ ಪರಲೋಕದಲ್ಲಿ ದೇವಾಲಯವು ತೆರೆಯ ಲ್ಪಟ್ಟಿತು; ಆತನ ಆಲಯದಲ್ಲಿ ಆತನ ಒಡಂಬಡಿಕೆಯ ಮಂಜೂಷವು ಕಾಣಿಸಿತು; ಇದಲ್ಲದೆ ಮಿಂಚುಗಳೂ ವಾಣಿಗಳೂ ಗುಡುಗುಗಳೂ ಭೂಕಂಪವೂ ದೊಡ್ಡ ಆನೆಕಲ್ಲಿನ ಮಳೆಯೂ ಉಂಟಾದವು.
- Revelation 14:17 ಪ್ರಕಟನೆ 14:17ಮತ್ತೊಬ್ಬ ದೂತನು ಪರಲೋಕದಲ್ಲಿರುವ ದೇವಾಲಯದೊಳಗಿಂದ ಬಂದನು; ಅವನಲ್ಲಿಯೂ ಹದವಾದ ಕುಡುಗೋಲು ಇತ್ತು.
- Revelation 16:1 ಪ್ರಕಟನೆ 16:1ಆಗ ಆಲಯದಿಂದ ಬಂದ ಮಹಾಶಬ್ದ ವನ್ನು ಕೇಳಿದೆನು. ಅದು ಆ ಏಳು ಮಂದಿ ದೂತರಿಗೆ--ನೀವು ಹೋಗಿ ಆ ಪಾತ್ರೆಗಳ ಲ್ಲಿರುವ ದೇವರ ರೌದ್ರವನ್ನು ಭೂಮಿಯ ಮೇಲೆ ಹೊಯ್ಯಿರಿ ಎಂದು ಹೇಳಿತು.
- Revelation 11:15 ಪ್ರಕಟನೆ 11:15ಏಳನೆಯ ದೂತನು ತುತೂರಿಯನ್ನೂದಿದನು. ಆಗ ಪರಲೋಕದಲ್ಲಿ ಮಹಾಶಬ್ದಗಳುಂಟಾಗಿ-- ಈ ಲೋಕದ ರಾಜ್ಯಗಳು ನಮ್ಮ ಕರ್ತನ ಮತ್ತು ಆತನ ಕ್ರಿಸ್ತನ ರಾಜ್ಯಗಳಾದವು; ಆತನು ಯುಗ ಯುಗಾಂತರಗಳಲ್ಲಿಯೂ ಆಳುವನು ಎಂದು ಹೇಳಿ ದವು.
Original words (Greek)
- And · G2532καί kaí
- seventh · G1442ἕβδομος hébdomos
- angel · G32ἄγγελος ángelos
- out · G1632ἐκχέω ekchéō
- his · G846αὐτός autós
- vial · G5357φιάλη phiálē
- into · G1519εἰς eis
- air · G109ἀήρ aḗr
- and · G2532καί kaí
- came · G1831ἐξέρχομαι exérchomai
- great · G3173μέγας mégas
- voice · G5456φωνή phōnḗ
- out · G575ἀπό apó
- temple · G3485ναός naós
- heaven · G3772οὐρανός ouranós
- from · G575ἀπό apó
- throne · G2362θρόνος thrónos
- saying · G3004λέγω légō
- done · G1096γίνομαι gínomai