Revelation · chapter 19 · verse 13
Revelation 19:13 in Kannada
ಆತನು ರಕ್ತದಲ್ಲಿ ಅದ್ದಿದ ವಸ್ತ್ರವನ್ನು ಧರಿಸಿ ಕೊಂಡಿದ್ದನು. ಆತನ ಹೆಸರು ದೇವರವಾಕ್ಯ ವೆಂದು ಕರೆಯಲ್ಪಡುತ್ತದೆ.
Aatanu raktadalli addida vastravannu dharisi kondiddanu. Aatana hesaru devaravaakya vendu kareyalpaduttade.
Revelation 19:13 in English
- King James Version (KJV)
- And he [was] clothed with a vesture dipped in blood: and his name is called The Word of God.
- World English Bible (WEB)
- He is clothed in a garment sprinkled with blood. His name is called “The Word of God.”
- American Standard Version (ASV)
- And he [is] arrayed in a garment sprinkled with blood: and his name is called The Word of God.
- Bible in Basic English (BBE)
- And he is clothed in a robe washed with blood: and his name is The Word of God.
- Darby Translation (DBY)
- and [he is] clothed with a garment dipped in blood; and his name is called The Word of God.
- Webster's Bible (WBS)
- And he [was] clothed with a vesture dipped in blood: and his name is called, The Word of God.
- Young's Literal Translation (YLT)
- and he is arrayed with a garment covered with blood, and his name is called, The Word of God.
Read in context
- 11ಪರಲೋಕವು ತೆರೆದಿರುವದನ್ನು ನಾನು ಕಂಡೆನು. ಆಗ ಬಿಳೀ ಕುದುರೆಯು ಕಾಣಿಸಿತು; ಅದರ ಮೇಲೆ ಕೂತಿದ್ದಾತನು ನಂಬಿಗಸ್ತನೂ ಸತ್ಯವಂತನೂ ಎಂದು ಕರೆಯಲ್ಪಟ್ಟನು. ಆತನು ನೀತಿಯಿಂದ ನ್ಯಾಯವಿಚಾರಣೆ ಮಾಡಿ ಯುದ್ಧ ಮಾಡುತ್ತಾನೆ;
- 12ಆತನ ಕಣ್ಣುಗಳು ಬೆಂಕಿಯ ಉರಿಯಂತಿದ್ದವು; ಆತನ ತಲೆಯ ಮೇಲೆ ಅನೇಕ ಕಿರೀಟಗಳು ಇದ್ದವು. ಬರೆಯಲ್ಪಟ್ಟ ಹೆಸರು ಆತನಿಗೆ ಇತ್ತು. ಅದು ಆತನಿಗೇ ಹೊರತು ಮತ್ತಾರಿಗೂ ತಿಳಿದಿರಲಿಲ್ಲ.
- 13ಆತನು ರಕ್ತದಲ್ಲಿ ಅದ್ದಿದ ವಸ್ತ್ರವನ್ನು ಧರಿಸಿ ಕೊಂಡಿದ್ದನು. ಆತನ ಹೆಸರು ದೇವರವಾಕ್ಯ ವೆಂದು ಕರೆಯಲ್ಪಡುತ್ತದೆ.
- 14ಪರಲೋಕದಲ್ಲಿರುವ ಸೈನ್ಯಗಳು ಶುಭ್ರವಾಗಿಯೂ ನಿರ್ಮಲವಾಗಿಯೂ ಇರುವ ನಯವಾದ ನಾರುಮಡಿಯನ್ನು ಧರಿಸಿಕೊಂಡು ಬಿಳೀ ಕುದುರೆಗಳ ಮೇಲೆ ಆತನ ಹಿಂದೆ ಬರುತ್ತಿದ್ದವು.
- 15ಜನಾಂಗಗಳನ್ನು ಹೊಡೆಯುವದಕ್ಕಾಗಿ ಹದವಾದ ಕತ್ತಿಯು ಆತನ ಬಾಯಿಂದ ಹೊರಡುತ್ತದೆ. ಆತನು ಅವರನ್ನು ಕಬ್ಬಿಣದ ಕೋಲಿನಿಂದ ಆಳುವನು. ಆತನು ಸರ್ವಶಕ್ತನಾದ ದೇವರ ಉಗ್ರಕೋಪವೆಂಬ ದ್ರಾಕ್ಷೆಯ ತೊಟ್ಟಿಯಲ್ಲಿರುವದನ್ನು ತುಳಿಯುತ್ತಾನೆ.
Cross references
- John 1:1 ಯೋಹಾನನು 1:1ಆದಿಯಲ್ಲಿ ವಾಕ್ಯವಿದ್ದನು; ಆ ವಾಕ್ಯವು ದೇವರೊಂದಿಗೆ ಇದ್ದನು; ಆ ವಾಕ್ಯವು ದೇವರಾಗಿದ್ದನು.
- Isaiah 63:1–6 ಯೆಶಾಯ 63:1–6ಎದೋಮಿನಿಂದಲೂ ರಕ್ತಾಂಬರ ಧರಿಸಿಕೊಂಡು ಬೊಚ್ರದಿಂದಲೂ ಬರುವ ಇವನ್ಯಾರು? ಪ್ರಭೆಯುಳ್ಳ ವಸ್ತ್ರಗಳನ್ನು ತೊಟ್ಟುಕೊಂಡ ವನಾಗಿ ತನ್ನ ಮಹಾಪರಾಕ್ರಮದಲ್ಲಿ ಸಂಚಾರ ಮಾಡುವ ಇವನ್ಯಾರು? ನೀತಿಯಲ್ಲಿ ಮಾತನಾಡು ವವನೂ ರಕ್ಷಿಸಲು ಬಲಿಷ್ಠನೂ ಆಗಿರುವ ನಾನೇ. ನಿನ್ನ ವಸ್ತ್ರಗಳು ಯಾಕೆ ಕೆಂಪಾದವು? ನಿನ್ನ ಬಟ್ಟೆಗಳು ಯಾಕೆ ದ್ರಾಕ್ಷೇಯನ್ನು ತುಳಿಯುವವನ ಹಾಗಿವೆ? ದ್ರಾಕ್ಷೇ ತೊಟ್ಟಿಯನ್ನು ನಾನೊಬ್ಬನೇ ತುಳಿದಿದ್ದೇನೆ, ಜನಗಳಲ್ಲಿ ಒಬ್ಬನಾದರೂ ನನ್ನ ಸಂಗಡ ಇರಲಿಲ್ಲ; ನನ್ನ ಕೋಪದಲ್ಲಿ ಅವರನ್ನು ತುಳಿದಿದ್ದೇನೆ, ನನ ಉರಿಯಲ್ಲಿ ಅವರನ್ನು ಜಜ್ಜಿಬಿಟ್ಟಿದ್ದೇನೆ. ಆದದರಿಂದ ಅವರ ರಕ್ತವು ನನ್ನ ಬಟ್ಟೆಗಳ ಮೇಲೆ ಚಿಮುಕಿಸ ಲ್ಪಟ್ಟಿದೆ, ನನ್ನ ವಸ್ತ್ರಗಳೆಲ್ಲಾ ಮೈಲಿಗೆಯಾದವು. ಮುಯ್ಯಿ ತೀರಿಸುವ ದಿನವು ನನ್ನ ಹೃದಯದಲ್ಲಿ ಇದೆ; ನಾನು ವಿಮೋಚಿಸಿದವರ ವರುಷವು ಬಂತು. ನಾನು ನೋಡಲು ಸಹಾಯಕರು ಯಾರೂ ಇರಲಿಲ್ಲ; ಉದ್ಧಾರ ಮಾಡುವವನು ಇಲ್ಲದ್ದರಿಂದ ಆಶ್ಚರ್ಯಪಟ್ಟೆನು; ಆದದರಿಂದ ನನ್ನ ಸ್ವಂತ ಬಾಹುವು ನನಗೆ ರಕ್ಷಣೆಯನ್ನುಂಟುಮಾಡಿತು; ನನ್ನ ರೋಷವು ನನ್ನನ್ನು ಮೆಲಕ್ಕೆತ್ತಿತು. ನನ್ನ ಕೋಪ ದಲ್ಲಿ ಜನಗಳನ್ನು ತುಳಿದು ಬಿಟ್ಟೆನು; ನನ್ನ ರೋಷ ದಲ್ಲಿ ಅವರನ್ನು ಕುಡಿಯುವಂತೆ ಮಾಡಿದೆನು; ಅವರ ಶಕ್ತಿಯನ್ನು ಭೂಮಿಗೆ ಇಳಿಯುವಂತೆ ಮಾಡಿದೆನು.
- John 1:14 ಯೋಹಾನನು 1:14ಇದಲ್ಲದೆ ಆ ವಾಕ್ಯವಾಗಿರುವಾತನು ಶರೀರಧಾರಿ ಯಾಗಿ ಕೃಪೆಯಿಂದಲೂ ಸತ್ಯದಿಂದಲೂ ತುಂಬಿ ನಮ್ಮ ಮಧ್ಯದಲ್ಲಿ ವಾಸಮಾಡಿದನು. (ತಂದೆಯಿಂದ ಹುಟ್ಟಿದ ಒಬ್ಬನೇ ಮಗನ ಮಹಿಮೆಯಂತೆ ನಾವು ಆತನ ಮಹಿಮೆಯನ್ನು ನೋಡಿದೆವು).
- Psalm 58:10 ಕೀರ್ತನೆಗಳು 58:10ಮುಯ್ಯಿಗೆಮುಯ್ಯಿ ಆಗುವದನ್ನು ನೀತಿವಂತನು ದೃಷ್ಟಿಸುವಾಗ ಅವನು ಸಂತೋಷ ಪಡುವನು; ಅವನು ತನ್ನ ಪಾದಗಳನ್ನು ದುಷ್ಟರ ರಕ್ತ ದಲ್ಲಿ ತೊಳೆಯುವನು.ನಿಶ್ಚಯವಾಗಿ ನೀತಿವಂತನಿಗೆ ಪ್ರತಿಫಲವಿದೆ; ನಿಶ್ಚಯವಾಗಿ ಭೂಮಿಯಲ್ಲಿ ನ್ಯಾಯ ತೀರಿಸುವ ದೇವರು ಆತನೇ ಎಂದು ಮನುಷ್ಯನು ಹೇಳುವನು.
- Revelation 14:20 ಪ್ರಕಟನೆ 14:20ಆ ದ್ರಾಕ್ಷೇ ತೊಟ್ಟಿಯನ್ನು ಪಟ್ಟಣದ ಹೊರಗೆ ತುಳಿದರು. ಆ ತೊಟ್ಟಿಯೊಳಗಿಂದ ರಕ್ತವು ಹೊರಟು ಕುದುರೆಗಳ ಕಡಿವಾಣಗಳನ್ನು ಮುಟ್ಟುವಷ್ಟು ಇನ್ನೂರು ಮೈಲಿ ದೂರ ಹರಿಯಿತು.
- 1 John 1:1 1 ಯೋಹಾನನು 1:1ಆದಿಯಿಂದ ಇದ್ದದ್ದನ್ನೂ ಆ ಜೀವ ವಾಕ್ಯದ ವಿಷಯವಾಗಿ ಕೇಳಿದ್ದನ್ನೂ ಕಣ್ಣಾರೆ ಕಂಡು ನೋಡಿದ್ದನ್ನೂ ನಾವು ಕೈಯಿಂದ ಮುಟ್ಟಿದ್ದೇವೆ.
- Isaiah 9:5 ಯೆಶಾಯ 9:5ಯುದ್ಧವೀರರ ಪ್ರತಿಯುದ್ಧವು ಗಲಿಬಿಲಿಯ ಗದ್ದಲ ದಿಂದ ಕೂಡಿದ್ದಾಗಿಯೂ ವಸ್ತ್ರಗಳು ರಕ್ತದಲ್ಲಿ ಹೊರಳಾ ಡಿದವುಗಳಾಗಿಯೂ ಇರುತ್ತವೆ; ಆದರೆ ಇವು ಬೆಂಕಿಗೆ ಆಹುತಿಯಾಗಿ ಸುಟ್ಟುಹೋಗುವವು.
- Isaiah 34:3–8 ಯೆಶಾಯ 34:3–8ಅವರಲ್ಲಿ ಕೊಂದುಹಾಕಲ್ಪಟ್ಟವರು ಬಿಸಾಡಲ್ಪಡು ವರು. ಅವರ ಹೆಣಗಳ ದುರ್ವಾಸನೆಯು ಮೇಲಕ್ಕೆ ಏರುವದು. ಅವರ ರಕ್ತಪ್ರವಾಹದಿಂದ ಪರ್ವತಗಳು ಕರಗಿಹೋಗುವವು. ಆಕಾಶದ ಸೈನ್ಯವೆಲ್ಲಾ ಗತಿಸಿ ಹೋಗುವದು. ಆಕಾಶಮಂಡಲವು ಸುರುಳಿಯಂತೆ ಸುತ್ತಿಕೊಳ್ಳುವದು, ದ್ರಾಕ್ಷೆಯ ಎಲೆ ಒಣಗಿ ಗಿಡದಿಂದ ಬೀಳುವಂತೆಯೂ ಅಂಜೂರ ಮರದಿಂದ ತರಗು ಉದುರುವ ಹಾಗೂ ಅವುಗಳ ಸೈನ್ಯವೆಲ್ಲಾ ಬಾಡಿ ಕೆಳಗೆ ಬೀಳುವದು. ನನ್ನ ಖಡ್ಗವು ಪರಲೋಕದಲ್ಲಿ ರೋಷ ಪಾನಮಾಡುವದು; ಇಗೋ, ಅದು ಎದೋ ಮಿನ ಮತ್ತು ನಾನು ಶಪಿಸಿದ ಜನರ ಮೇಲೆ ನ್ಯಾಯ ತೀರಿಸುವದಕ್ಕಾಗಿ ಕೆಳಗೆ ಇಳಿದು ಬರುವದು. ಕರ್ತನ ಖಡ್ಗವು ರಕ್ತದಿಂದ ತುಂಬಿದೆ; ಅದು ಕುರಿಹೋತಗಳ ರಕ್ತದಿಂದಲೂ ಟಗರುಗಳ ಮೂತ್ರಪಿಂಡದ ಕೊಬ್ಬಿ ನಿಂದಲೂ ಪುಷ್ಟಿಯಾಯಿತು; ಯಾಕಂದರೆ ಕರ್ತನು ಬೊಚ್ರದಲ್ಲಿ ಬಲಿಯನ್ನೂ ಎದೋಮಿನ ದೇಶದಲ್ಲಿ ದೊಡ್ಡ ಕೊಲೆಯನ್ನೂ ಉಂಟು ಮಾಡಿದ್ದಾನೆ. ಕಾಡು ಕೋಣಗಳು ಅವುಗಳ ಸಂಗಡಲೂ ಎತ್ತುಗಳು ಹೋರಿ ಗಳ ಸಂಗಡಲೂ ಬೀಳುವವು; ಅವರ ದೇಶವು ರಕ್ತ ದಿಂದ ನೆನೆಯುವದು, ಅವರ ಧೂಳು ಕೊಬ್ಬಿನಿಂದ ಪುಷ್ಟಿಯಾಗುವದು-- ಏಕಂದರೆ ಅದು ಕರ್ತನು ಮುಯ್ಯಿ ತೀರಿಸುವ ದಿನವಾಗಿದೆ; ಚೀಯೋನಿನ ವ್ಯಾಜ್ಯದಲ್ಲಿ ದಂಡನೆ ವಿಧಿಸತಕ್ಕ ವರುಷವು ಒದಗಿದೆ.
- 1 John 5:7 1 ಯೋಹಾನನು 5:7ಪರಲೋಕದಲ್ಲಿ ಸಾಕ್ಷಿಕೊಡುವವರು ಮೂವರಿದ್ದಾರೆ; ಅವರು ಯಾರಂದರೆ ತಂದೆಯು, ವಾಕ್ಯವು ಮತ್ತು ಪರಿಶುದ್ಧಾತ್ಮನು; ಮೂವರಾಗಿರುವ ಇವರು ಒಂದಾಗಿದ್ದಾರೆ.