Revelation · chapter 2 · verse 14
Revelation 2:14 in Kannada
ಆದರೂ ನಿನಗೆ ವಿರೋಧವಾದ ಕೆಲವು ವಿಷಯಗಳು ನನಗಿವೆ. ವಿಗ್ರಹಗಳಿಗೆ ಯಜ್ಞಾರ್ಪಣೆ ಮಾಡಿದ ಪದಾರ್ಥಗಳನ್ನು ತಿನ್ನುವ ದಕ್ಕೂ ಜಾರತ್ವ ಮಾಡುವದಕ್ಕೂ ಇಸ್ರಾಯೇಲಿನ ಮಕ್ಕಳ ಮುಂದೆ ಮುಗ್ಗರಿಸುವ ಬಂಡೆಯನ್ನು ಹಾಕ ಬೇಕೆಂದು ಬಿಳಾಮನು ಬಾಲಾಕನಿಗೆ ಹೇಳಿದ ಬೋಧನೆಯನ್ನು
Aadaroo ninage virodhavaada kelavu vishayagalu nanagive. Vigrahagalige yajnyaarpane maadida padaarthagalannu tinnuva dakkoo jaaratva maaduvadakkoo israayelina makkala munde muggarisuva bandeyannu haaka bekendu bilaamanu baalaakanige helida bodhaneyannu
Revelation 2:14 in English
- King James Version (KJV)
- But I have a few things against thee, because thou hast there them that hold the doctrine of Balaam, who taught Balac to cast a stumblingblock before the children of Israel, to eat things sacrificed unto idols, and to commit fornication.
- World English Bible (WEB)
- But I have a few things against you, because you have there some who hold the teaching of Balaam, who taught Balak to throw a stumbling block before the children of Israel, to eat things sacrificed to idols, and to commit sexual immorality.
- American Standard Version (ASV)
- But I have a few things against thee, because thou hast there some that hold the teaching of Balaam, who taught Balak to cast a stumblingblock before the children of Israel, to eat things sacrificed to idols, and to commit fornication.
- Bible in Basic English (BBE)
- But I have some things against you, because you have with you those who keep the teaching of Balaam, by whose suggestion Balak made the children of Israel go out of the right way, taking food which was offered to false gods, and going after the desires of the flesh.
- Darby Translation (DBY)
- But I have a few things against thee: that thou hast there those who hold the doctrine of Balaam, who taught Balak to cast a snare before the sons of Israel, to eat [of] idol sacrifices and commit fornication.
- Webster's Bible (WBS)
- But I have a few things against thee, because thou hast there them that hold the doctrine of Balaam, who taught Balak to cast a stumbling-block before the children of Israel, to eat things sacrificed to idols, and to commit lewdness.
- Young's Literal Translation (YLT)
- 'But I have against thee a few things: That thou hast there those holding the teaching of Balaam, who did teach Balak to cast a stumbling-block before the sons of Israel, to eat idol-sacrifices, and to commit whoredom;
Read in context
- 12ಪೆರ್ಗಮದಲ್ಲಿರುವ ಸಭೆಯ ದೂತನಿಗೆ ಬರೆ: ಹದವಾದ ಇಬ್ಬಾಯಿ ಕತ್ತಿಯನ್ನು ಹಿಡಿದಾತನು ಹೇಳು ವವುಗಳು ಯಾವವೆಂದರೆ,
- 13ನಿನ್ನ ಕ್ರಿಯೆಗಳನ್ನೂ ನೀನು ವಾಸಮಾಡುವ ಸ್ಥಳವನ್ನೂ ಬಲ್ಲೆನು; ಅದು ಸೈತಾನನ ಆಸನವಿರುವ ಸ್ಥಳವಾಗಿದೆ; ನೀನು ನನ್ನ ಹೆಸರನ್ನು ಬಿಗಿಯಾಗಿ ಹಿಡುಕೊಂಡಿದ್ದೀ; ನಿಮ್ಮಲ್ಲಿರುವ ಸೈತಾನನ ನಿವಾಸದಲ್ಲಿ ನನಗೆ ನಂಬಿಗಸ್ತನಾದ ಹತಸಾಕ್ಷಿಯಾದ ಅಂತಿಪನು ಕೊಲ್ಲಲ್ಪಟ್ಟ ದಿನಗಳಲ್ಲಿ ಯಾದರೂ ನ
- 14ಆದರೂ ನಿನಗೆ ವಿರೋಧವಾದ ಕೆಲವು ವಿಷಯಗಳು ನನಗಿವೆ. ವಿಗ್ರಹಗಳಿಗೆ ಯಜ್ಞಾರ್ಪಣೆ ಮಾಡಿದ ಪದಾರ್ಥಗಳನ್ನು ತಿನ್ನುವ ದಕ್ಕೂ ಜಾರತ್ವ ಮಾಡುವದಕ್ಕೂ ಇಸ್ರಾಯೇಲಿನ ಮಕ್ಕಳ ಮುಂದೆ ಮುಗ್ಗರಿಸುವ ಬಂಡೆಯನ್ನು ಹಾಕ ಬೇಕೆಂದು ಬಿಳಾಮನು ಬಾಲಾಕನಿಗೆ ಹೇಳಿದ ಬೋಧನೆಯನ್ನು
- 15ಅದರಂತೆ ನಾನು ಹಗೆ ಮಾಡುವ ನಿಕೊಲಾಯಿತರ ಬೋಧನೆಯನ್ನು ಅವಲಂಬಿಸಿರುವವರೂ ನಿನ್ನಲ್ಲಿದ್ದಾರೆ.
- 16ಆದದರಿಂದ ಮಾನಸಾಂತರಪಡು, ಇಲ್ಲದಿದ್ದರೆ ನಾನು ನಿನ್ನ ಬಳಿಗೆ ಬೇಗನೆ ಬಂದು ನನ್ನ ಬಾಯಿ ಕತ್ತಿಯಿಂದ ಅವರ ಮೇಲೆ ಯುದ್ಧ ಮಾಡುವೆನು.
Cross references
- Numbers 31:16 ಅರಣ್ಯಕಾಂಡ 31:16ಇಗೋ, ಇವರೇ ಬಿಳಾಮನ ಮಾತಿನಿಂದ ಪೆಗೋರನ ಕಾರ್ಯದಲ್ಲಿ ಕರ್ತನಿಗೆ ವಿರೋಧವಾಗಿ ದ್ರೋಹ ಮಾಡುವದಕ್ಕೆ ಇಸ್ರಾ ಯೇಲ್ ಮಕ್ಕಳಿಗೆ ಕಾರಣವಾಗಿದ್ದರು. ಕರ್ತನ ಸಭೆ ಯೊಳಗೆ ಇವರಿಂದಲೇ ವ್ಯಾಧಿಯಾಯಿತು.
- 2 Peter 2:15 2 ಪೇತ್ರನು 2:15ಇವರು ನೀಟಾದ ಮಾರ್ಗವನ್ನು ಬಿಟ್ಟು ಬೆಯೋರನ ಮಗನಾದ ಬಿಳಾಮನ ಮಾರ್ಗವನ್ನು ಹಿಡಿದು ತಪ್ಪಿಹೋಗಿದ್ದಾರೆ. ಈ ಬಿಳಾಮನು ಅನೀತಿಯಿಂದ ದೊರಕುವ ಸಂಬಳವನ್ನು ಪ್ರೀತಿಸಿದನು.
- Revelation 2:20 ಪ್ರಕಟನೆ 2:20ಆದಾಗ್ಯೂ ನಿನಗೆ ವಿರೋಧವಾದ ಕೆಲವು ವಿಷಯಗಳು ನನಗಿವೆ; ಅದೇ ನಂದರೆ, ಯೆಜೆಬೇಲೆಂಬ ಆ ಹೆಂಗಸು ತನ್ನನ್ನು ಪ್ರವಾದಿ ನಿಯೆಂದು ಹೇಳಿಕೊಂಡು ಜಾರತ್ವ ಮಾಡುವದಕ್ಕೂ ವಿಗ್ರಹಗಳಿಗೆ ಅರ್ಪಣೆ ಮಾಡಿದ ಪದಾರ್ಥಗಳನ್ನು ತಿನ್ನುವದಕ್ಕೂ ನನ್ನ ದಾಸರಿಗೆ ಬೋಧಿಸುತ್ತಾ ಅವರನ್ನು ವಂಚಿಸುತ್ತಿರು
- Numbers 25:1–3 ಅರಣ್ಯಕಾಂಡ 25:1–3ಆಗ ಇಸ್ರಾಯೇಲ್ಯರು ಶಿಟ್ಟೀಮಿನಲ್ಲಿ ವಾಸವಾಗಿದ್ದಾಗ ಜನರು ಮೋವಾಬಿನ ಕುಮಾರ್ತೆಯರ ಸಂಗಡ ಜಾರತ್ವ ಮಾಡಲಾರಂಭಿ ಸಿದರು. ಇವರು ಜನರನ್ನು ತಮ್ಮ ದೇವರುಗಳ ಬಲಿಗಳಿಗೆ ಕರೆದರು; ಜನರು ತಿಂದು ಅವರ ದೇವರು ಗಳಿಗೆ ಅಡ್ಡಬಿದ್ದರು. ಇಸ್ರಾಯೇಲ್ ಬಾಳ್ಪೆಯೋರಿಗೆ ತಾನೇ ಕೂಡಿಕೊಂಡದ್ದರಿಂದ ಕರ್ತನ ಕೋಪವು ಇಸ್ರಾಯೇಲಿನ ಮೇಲೆ ಉರಿಯಿತು.
- Jude 1:11 ಯೂದನು 1:11ಅವರು ಕಾಯಿನನ ಮಾರ್ಗ ಹಿಡಿದವರೂ ಪ್ರತೀಕಾರ ಹೊಂದುವದಕ್ಕಾಗಿ ಬಿಳಾಮನ ದೋಷವನ್ನು ಮಾಡುವದಕ್ಕೆ ದುರಾಶೆ ಯಿಂದ ಓಡುವವರೂ ಕೋರಹನಂತೆ ಎದುರು ಮಾತನಾಡಿ ನಾಶವಾಗುವವರೂ ಆಗಿರುವ ಅವರಿಗೆ ಅಯ್ಯೋ!
- Acts 15:29 ಅಪೊಸ್ತಲರ ಕೃತ್ಯಗಳು 15:29ಏನಂದರೆ ವಿಗ್ರಹಗಳಿಗೆ ಅರ್ಪಿಸಿದ ಭೋಜನ ಪದಾರ್ಥಗಳನ್ನೂ ರಕ್ತವನ್ನೂ ಕುತ್ತಿಗೆ ಹಿಸುಕಿ ಕೊಂದವುಗಳನ್ನೂ ಜಾರತ್ವವನ್ನೂ ನೀವು ವಿಸರ್ಜಿಸಬೇಕೆಂಬದೇ. ಇವುಗಳಿಂದ ನಿಮ್ಮನ್ನು ನೀವು ಕಾಪಾಡಿಕೊಂಡರೆ ನಿಮಗೆ ಒಳ್ಳೇದಾಗುವದು. ನಿಮಗೆ ಶುಭವಾಗಲಿ.
- Joshua 24:9 ಯೆಹೋಶುವ 24:9ಆಗ ಮೋವಾಬ್ಯರ ಅರಸನಾದ ಚಿಪ್ಪೋರನ ಮಗ ನಾದ ಬಾಲಾಕನು ಎದ್ದು ಇಸ್ರಾಯೇಲಿಗೆ ವಿರೋಧ ವಾಗಿ ಯುದ್ಧಮಾಡಿ ನಿಮ್ಮನ್ನು ಶಪಿಸುವ ಹಾಗೆ ಬೆಯೋರನ ಮಗನಾದ ಬಿಳಾಮನನ್ನು ಕರೇ ಕಳುಹಿಸಿ ದನು.
- Hebrews 13:4 ಇಬ್ರಿಯರಿಗೆ 13:4ವಿವಾಹವು ಎಲ್ಲಾದರಲ್ಲಿ ಗೌರವವಾದದ್ದೂ ಹಾಸಿಗೆಯು ನಿಷ್ಕಳಂಕವಾದದ್ದೂ ಆಗಿದೆ. ಆದರೆ ಜಾರರಿಗೂ ವ್ಯಭಿಚಾರಿಗಳಿಗೂ ದೇವರು ನ್ಯಾಯತೀರಿಸುವನು.
- 1 Peter 2:8 1 ಪೇತ್ರನು 2:8ಅದು ಎಡವುವ ಕಲ್ಲೂ ಮುಗ್ಗರಿಸುವ ಬಂಡೆಯೂ ಆಗಿದೆ; ಅವರು ವಾಕ್ಯಕ್ಕೆ ಅವಿಧೇಯರಾದದರಿಂದ ಆ ಕಲ್ಲನ್ನು ಎಡವಿ ಬೀಳುತ್ತಾರೆ. ಅದಕ್ಕಾಗಿಯೇ ಅವರು ನೇಮಕವಾದರು.
- 1 Corinthians 10:18–31 1 ಕೊರಿಂಥದವರಿಗೆ 10:18–31ಶರೀರದ ಪ್ರಕಾರ ಇಸ್ರಾಯೇಲ್ಯರನ್ನು ನೋಡಿರಿ; ಯಜ್ಞ ಮಾಡಿದವು ಗಳನ್ನು ತಿನ್ನುವವರು ಯಜ್ಞವೇದಿಯೊಂದಿಗೆ ಪಾಲು ಗಾರರಾಗಿದ್ದಾರಲ್ಲವೇ? ಹಾಗಾದರೆ ನಾನು ಏನು ಹೇಳಲಿ? ವಿಗ್ರಹವು ಏನಾದರೂ ವಿಶೇಷವೋ? ಇಲ್ಲವೆ ವಿಗ್ರಹಗಳಿಗೆ ಯಜ್ಞಾರ್ಪಣೆ ಮಾಡಿದ್ದು ಏನಾದರೂ ವಿಶೇಷವೋ? ಆದರೆ ಅನ್ಯಜನರು ಯಜ್ಞಾರ್ಪಣೆ ಮಾಡುವದು ದೆವ್ವಗಳಿಗೆ, ದೇವರಿಗಲ್ಲ; ನೀವು ದೆವ್ವಗಳೊಂದಿಗೆ ಅನ್ಯೋನ್ಯವಾಗಿರಬೇಕೆಂದು ನಾನು ಇಷ್ಟಪಡುವದಿಲ್ಲ. ನೀವು ಕರ್ತನಪಾತ್ರೆ ಯಲ್ಲಿಯೂ ದೆವ್ವಗಳ ಪಾತ್ರೆಯಲ್ಲಿಯೂ ಕುಡಿಯ ಲಾರಿರಿ; ನೀವು ಕರ್ತನ ಮೇಜಿನಲ್ಲಿಯೂ ದೆವ್ವಗಳ ಮೇಜಿನಲ್ಲಿಯೂ ಪಾಲುಗಾರರಾಗಲಾರಿರಿ. ಕರ್ತ ನನ್ನು ರೇಗಿಸಬೇಕೆಂದಿದ್ದೇವೋ? ಆತನಿಗಿಂತಲೂ ನಾವು ಬಲಿಷ್ಠರೇನು? ನನಗೆ ಎಲ್ಲಾ ವಿಷಯಗಳು ನ್ಯಾಯಸಮ್ಮತ ವಾಗಿವೆ; ಆದರೆ ಎಲ್ಲವೂ ವಿಹಿತವಾಗಿರುವದಿಲ್ಲ; ಎಲ್ಲಾ ವಿಷಯಗಳು ನನಗೆ ನ್ಯಾಯಸಮ್ಮತವಾಗಿವೆ; ಆದರೆ ಎಲ್ಲವೂ ಭಕ್ತಿವೃದ್ಧಿಯನ್ನುಂಟು ಮಾಡುವದಿಲ್ಲ. ಪ್ರತಿಯೊಬ್ಬನು ತನ್ನ ಹಿತವನ್ನು ಚಿಂತಿಸದೆ ಪರ ಹಿತವನ್ನು ಚಿಂತಿಸಲಿ. ಕಟುಕರ ಅಂಗಡಿಯಲ್ಲಿ ಮಾರುವದೇನಿದ್ದರೂ ಮನಸ್ಸಾಕ್ಷಿಯ ನಿಮಿತ್ತ ಯಾವ ಪ್ರಶ್ನೆಯನ್ನೂ ಕೇಳದೆ ತಿನ್ನಿರಿ. ಭೂಮಿಯೂ ಅದರಲ್ಲಿರುವ ಸಮಸ್ತವೂ ಕರ್ತನದಾಗಿದೆಯಲ್ಲವೇ? ನಂಬದವರಲ್ಲಿ ಯಾವನಾದರೂ ನಿಮ್ಮನ್ನು ಊಟಕ್ಕೆ ಕರೆಯುವಾಗ ಹೋಗುವದಕ್ಕೆ ನಿಮಗಿಷ್ಟವಿದ್ದರೆ ನಿಮ ಗೇನು ಬಡಿಸಿದರೂ ಅದನ್ನು ಮನಸ್ಸಾಕ್ಷಿಯ ನಿಮಿತ್ತ ಯಾವ ಪ್ರಶ್ನೆಯನ್ನೂ ಕೇಳದೆ ತಿನ್ನಿರಿ. ಆದರೆ ಒಬ್ಬನು ನಿಮಗೆ--ಇದು ವಿಗ್ರಹಕ್ಕೆ ಬಲಿಕೊಟ್ಟದ್ದು ಎಂದು ಹೇಳಿದರೆ ಈ ವಿಷಯವನ್ನು ತಿಳಿಸಿದವನ ನಿಮಿತ್ತ ವಾಗಿಯೂ ಮನಸ್ಸಾಕ್ಷಿಯ ನಿಮಿತ್ತವಾಗಿಯೂ ತಿನ್ನ ಬೇಡಿರಿ; ಭೂಮಿಯೂ ಅದರಲ್ಲಿರುವ ಸಮಸ್ತವೂ ಕರ್ತನದಾಗಿದೆಯಲ್ಲವೇ? ಆದರೆ ನಿನ್ನ ಸ್ವಂತ ಮನಸ್ಸಾಕ್ಷಿಗಾಗಿ ಅಲ್ಲ, ಬೇರೆಯವನ ಮನಸ್ಸಾಕ್ಷಿಗಾಗಿ ನಾನು ಹೇಳುತ್ತೇನೆ. ಮತ್ತೊಬ್ಬನ ಮನಸ್ಸಾಕ್ಷಿಯ ನಿಮಿತ್ತ ನನ್ನ ಸ್ವಾತಂತ್ರ್ಯಕ್ಕೆ ಯಾಕೆ ತೀರ್ಪಾಗಬೇಕು? ನಾನು ಕೃಪೆಯಿಂದ ಪಾಲುಗಾರನಾಗಿ ಯಾವದಕ್ಕೋಸ್ಕರ ಕೃತಜ್ಞತೆಯನ್ನು ಸಲ್ಲಿಸುತ್ತೇನೋ ಅದರ ವಿಷಯದಲ್ಲಿ ನಾನು ಯಾಕೆ ದೂಷಿಸಲ್ಪಡಬೇಕು? ಆದದರಿಂದ ನೀವು ತಿಂದರೂ ಕುಡಿದರೂ ಏನು ಮಾಡಿದರೂ ಎಲ್ಲವನ್ನು ದೇವರ ಮಹಿಮೆಗಾಗಿ ಮಾಡಿರಿ.
- Acts 15:20–21 ಅಪೊಸ್ತಲರ ಕೃತ್ಯಗಳು 15:20–21ಆದರೆ ಅವರು ವಿಗ್ರಹಗಳ ಮಲಿನತೆಯನ್ನೂ ಜಾರತ್ವವನ್ನೂ ಕುತ್ತಿಗೆ ಹಿಸುಕಿ ಕೊಂದವುಗಳನ್ನೂ ರಕ್ತವನ್ನೂ ವಿಸ ರ್ಜಿಸಬೇಕೆಂದು ನಾವು ಅವರಿಗೆ ಬರೆಯುವೆವು. ಯಾಕಂದರೆ ಪುರಾತನ ಕಾಲದಿಂದ ಎಲ್ಲಾ ಪಟ್ಟಣಗಳಲ್ಲಿ ಮೋಶೆಯ ಗ್ರಂಥವನ್ನು ಬೋಧಿಸುವ ವರು ಇದ್ದಾರೆ; ಅದು ಪ್ರತಿ ಸಬ್ಬತ್ ದಿನವೂ ಸಭಾಮಂದಿರಗಳಲ್ಲಿ ಪಾರಾಯಣವಾಗುತ್ತದಲ್ಲಾ ಎಂದು ಹೇಳಿದನು.
- Numbers 31:8 ಅರಣ್ಯಕಾಂಡ 31:8ಕೊಲ್ಲಲ್ಪಟ್ಟವರಲ್ಲದೆ ಮಿದ್ಯಾನಿನ ಅರಸರನ್ನು ಕೊಂದು ಹಾಕಿದರು. ಯಾರಂದರೆ, ಮಿದ್ಯಾ ನಿನ ಐದು ಮಂದಿ ಅರಸರಾಗಿರುವ ಎವೀ, ರೆಕೆಮ್, ಚೂರ್, ಹೂರ್, ರೆಬಾ, ಬೆಯೋರನ ಮಗನಾದ ಬಿಳಾಮನನ್ನೂ ಕತ್ತಿಯಿಂದ ಕೊಂದುಹಾಕಿದರು.