Revelation · chapter 2 · verse 22
Revelation 2:22 in Kannada
ಇಗೋ, ನಾನು ಅವಳನ್ನು ಹಾಸಿಗೆಯಲ್ಲಿಯೂ ಅವಳೊಂದಿಗೆ ವ್ಯಭಿಚಾರ ಮಾಡಿದವರು ತಮ್ಮ ಕೃತ್ಯಗಳಿ ಗಾಗಿ ಮಾನಸಾಂತರಪಡದಿದ್ದರೆ ಅವರನ್ನು ಮಹಾಸಂಕ ಟದಲ್ಲಿಯೂ ಹಾಕುವೆನು.
Igo, naanu avalannu haasigeyalliyoo avalondige vyabhichaara maadidavaru tamma krutyagali gaagi maanasaantarapadadiddare avarannu mahaasanka tadalliyoo haakuvenu.
Revelation 2:22 in English
- King James Version (KJV)
- Behold, I will cast her into a bed, and them that commit adultery with her into great tribulation, except they repent of their deeds.
- World English Bible (WEB)
- Behold, I will throw her and those who commit adultery with her into a bed of great oppression, unless they repent of her works.
- American Standard Version (ASV)
- Behold, I cast her into a bed, and them that commit adultery with her into great tribulation, except they repent of her works.
- Bible in Basic English (BBE)
- See, I will put her into a bed, and those who make themselves unclean with her, into great trouble, if they go on with her works.
- Darby Translation (DBY)
- Behold, I cast her into a bed, and those that commit adultery with her into great tribulation, unless they repent of her works,
- Webster's Bible (WBS)
- Behold, I will cast her into a bed, and them that commit adultery with her into great tribulation, except they repent of their deeds.
- Young's Literal Translation (YLT)
- lo, I will cast her into a couch, and those committing adultery with her into great tribulation — if they may not repent of their works,
Read in context
- 20ಆದಾಗ್ಯೂ ನಿನಗೆ ವಿರೋಧವಾದ ಕೆಲವು ವಿಷಯಗಳು ನನಗಿವೆ; ಅದೇ ನಂದರೆ, ಯೆಜೆಬೇಲೆಂಬ ಆ ಹೆಂಗಸು ತನ್ನನ್ನು ಪ್ರವಾದಿ ನಿಯೆಂದು ಹೇಳಿಕೊಂಡು ಜಾರತ್ವ ಮಾಡುವದಕ್ಕೂ ವಿಗ್ರಹಗಳಿಗೆ ಅರ್ಪಣೆ ಮಾಡಿದ ಪದಾರ್ಥಗಳನ್ನು ತಿನ್ನುವದಕ್ಕೂ ನನ್ನ ದಾಸರಿಗೆ ಬೋಧಿಸುತ್ತಾ ಅವರನ್ನು ವಂಚಿಸುತ್ತಿರು
- 21ಅವಳು ಮಾಡಿದ ಜಾರತ್ವಕ್ಕಾಗಿ ಮಾನ ಸಾಂತರಪಡುವದಕ್ಕೆ ನಾನು ಅವಳಿಗೆ ಸಮಯವನ್ನು ಕೊಟ್ಟೆನು; ಆದರೆ ಅವಳು ಮಾನಸಾಂತರಪಡಲಿಲ್ಲ.
- 22ಇಗೋ, ನಾನು ಅವಳನ್ನು ಹಾಸಿಗೆಯಲ್ಲಿಯೂ ಅವಳೊಂದಿಗೆ ವ್ಯಭಿಚಾರ ಮಾಡಿದವರು ತಮ್ಮ ಕೃತ್ಯಗಳಿ ಗಾಗಿ ಮಾನಸಾಂತರಪಡದಿದ್ದರೆ ಅವರನ್ನು ಮಹಾಸಂಕ ಟದಲ್ಲಿಯೂ ಹಾಕುವೆನು.
- 23ಅವಳ ಮಕ್ಕಳನ್ನು ಕೊಂದೇಕೊಲ್ಲುವೆನು; ಆಗ ನಾನು ಅಂತರಿಂದ್ರಿಯಗ ಳನ್ನೂ ಹೃದಯಗಳನ್ನೂ ಪರೀಕ್ಷಿಸುವವನಾಗಿದ್ದೇನೆ ಂಬದು ಎಲ್ಲಾ ಸಭೆಗಳಿಗೆ ಗೊತ್ತಾಗುವದು; ನಿಮ್ಮಲ್ಲಿ ಪ್ರತಿಯೊಬ್ಬನಿಗೆ ನಿಮ್ಮ ಕೃತ್ಯಗಳ ಪ್ರಕಾರ ಕೊಡುವೆನು.
- 24ಆದರೆ ನಿಮಗೂ ಥುವತೈರದಲ್ಲಿರುವ ಮಿಕ್ಕಾದವ ರಿಗೂ ನಾನು ಹೇಳುವದೇನಂದರೆ, ಅವರು ಹೇಳಿಕೊ ಳ್ಳುವಂಥ ಸೈತಾನನ ಅಗಾಧವಾದ ಬೋಧನೆಯು ಯಾರಾರಲ್ಲಿ ಇರುವದಿಲ್ಲವೋ ಯಾರು ಅದನ್ನು ಅರಿ ಯದೆ ಇದ್ದಾರೋ ಅವರ ಮೇಲೆ ನಾನು ಬೇರೆ ಯಾವ ಭಾರವನ್ನೂ ಹಾಕುವದಿಲ್ಲ.
Cross references
- Revelation 17:2 ಪ್ರಕಟನೆ 17:2ಅವಳೊಂದಿಗೆ ಭೂರಾಜರು ಜಾರತ್ವ ಮಾಡಿದರು. ಭೂನಿವಾಸಿಗಳು ಅವಳ ಜಾರತ್ವವೆಂಬ ದ್ರಾಕ್ಷಾರಸವನ್ನು ಕುಡಿದು ಮತ್ತರಾದರು ಎಂದು ಹೇಳಿದನು.
- Ezekiel 16:37–41 ಯೆಹೆಜ್ಕೇಲನು 16:37–41ಇಗೋ, ನೀನು ಆನಂದ ಪಟ್ಟವರೊಂದಿಗೆ ಪ್ರೀತಿ ಮಾಡಿದವರೆ ಲ್ಲರನ್ನೂ ಹಗೆಮಾಡಿದವರೆಲ್ಲರನ್ನೂ ಸಹ ಕೂಡಿಸು ವೆನು; ನಾನು ಅವರನ್ನು ನಿನಗೆ ವಿರುದ್ಧವಾಗಿ ಸುತ್ತಲೂ ಕೂಡಿಸಿ ಅವರಿಗೆ ನಿನ್ನ ಬೆತ್ತಲೆಯನ್ನು ಪ್ರಕಟಪಡಿಸು ವೆನು. ಆಗ ಅವರು ನಿನ್ನ ಬೆತ್ತಲೆಯನ್ನು ನೋಡುವರು. ದಾಂಪತ್ಯವನ್ನು ಮುರಿದು ರಕ್ತ ಸುರಿಸುವಂಥ ಹೆಂಗಸರಿಗೆ ವಿಧಿಸುವಂಥ ತಕ್ಕ ದಂಡನೆಗಳನ್ನು ನಿನಗೂ ವಿಧಿಸಿ, ಕೋಪೋದ್ರೇಕದಿಂದಲೂ ರೋಷಾವೇಶ ದಿಂದಲೂ ನಿನಗೆ ರಕ್ತವನ್ನು ಸುರಿಸುವೆನು. ಇದಲ್ಲದೆ ನಿನ್ನನ್ನು ಅವರ ಕೈಗಳಲ್ಲಿ ಒಪ್ಪಿಸುವೆನು. ಅವರು ನಿನ್ನ ಎತ್ತರ ಸ್ಥಳಗಳನ್ನೆಲ್ಲಾ ಕೆಡವಿಹಾಕಿ ನಿನ್ನ ಉನ್ನತ ಸ್ಥಾನ ಗಳನ್ನು ಒಡೆದು ಬಿಡುವರು; ಅವರು ನಿನ್ನ ವಸ್ತ್ರಗಳನ್ನು ತೆಗೆದುಹಾಕಿ ನಿನ್ನ ಸೌಂದರ್ಯವುಳ್ಳ ಆಭರಣಗಳನ್ನು ಕಸಿದುಕೊಂಡು ನಿನ್ನನ್ನು ಬರೀ ಬೆತ್ತಲೆಯನ್ನಾಗಿ ಮಾಡಿ ಬಿಟ್ಟು ಹೋಗುವರು. ಅವರು ನಿನಗೆ ವಿರುದ್ಧವಾಗಿ ಒಂದು ಕೂಟವನ್ನು ಕರಕೊಂಡು ಬಂದು ಕಲ್ಲುಗಳನ್ನು ನಿನ್ನ ಮೇಲೆ ಎಸೆದು, ತಮ್ಮ ಕತ್ತಿಗಳಿಂದ ನಿನ್ನನ್ನು ತಿವಿಯುವರು. ಅವರು ನಿನ್ನ ಮನೆಗಳನ್ನು ಸುಟ್ಟು ಬಹಳ ಸ್ತ್ರೀಯರ ಕಣ್ಣುಗಳ ಮುಂದೆ ನಿನಗೆ ನ್ಯಾಯ ತೀರಿಸುವರು; ನೀನು ವ್ಯಭಿಚಾರ ಮಾಡುವದನ್ನು ನಾನು ನಿಲ್ಲಿಸುವೆನು; ಆಗ ನೀನು ಕೂಲಿ ಸಹ ಕೊಡುವದನ್ನು ನಿಲ್ಲಿಸುವೆನು;
- Luke 13:5 ಲೂಕನು 13:5ಆದರೆ--ಹಾಗಲ್ಲ ವೆಂದು ನಾನು ನಿಮಗೆ ಹೇಳುತ್ತೇನೆ; ನೀವು ಮಾನ ಸಾಂತರಪಡದೆ ಹೋದರೆ ನೀವೆಲ್ಲರೂ ಅವರಂತೆಯೇ ನಾಶವಾಗುವಿರಿ ಅಂದನು.
- Jeremiah 36:3 ಯೆರೆಮೀಯ 36:3ಒಂದು ವೇಳೆ ಯೆಹೂ ದದ ಮನೆತನದವರು ನಾನು ಅವರಿಗೆ ಮಾಡುವದಕ್ಕೆ ನೆನಸುವ ಕೇಡನ್ನೆಲ್ಲಾ ಕೇಳಿ ನಾನು ಅವರ ಅಕ್ರಮವನ್ನೂ ಪಾಪವನ್ನೂ ಮನ್ನಿಸುವ ಹಾಗೆ ತಮ್ಮ ತಮ್ಮ ಕೆಟ್ಟ ಮಾರ್ಗಗಳನ್ನು ಬಿಟ್ಟು ತಿರುಗಿಕೊಂಡಾರು ಅಂದನು.
- Revelation 18:9 ಪ್ರಕಟನೆ 18:9ಅವಳೊಂದಿಗೆ ಜಾರತ್ವ ಮಾಡಿ ವೈಭವದಲ್ಲಿ ಬದುಕಿದ ಭೂರಾಜರು ಅವಳ ದಹನದ ಹೊಗೆಯನ್ನು ನೋಡು ವಾಗ ಅವಳಿಗಾಗಿ ಗೋಳಾಡುತ್ತಾ ಪ್ರಲಾಪಿಸುವರು.
- Revelation 18:3 ಪ್ರಕಟನೆ 18:3ಎಲ್ಲಾ ಜನಾಂಗಗಳು ಅವಳ ಜಾರತ್ವವೆಂಬ ಕೋಪದ ದ್ರಾಕ್ಷಾರಸವನ್ನು ಕುಡಿದು ಮತ್ತರಾದರು; ಅವಳೊಂದಿಗೆ ಭೂರಾಜರು ಜಾರತ್ವ ಮಾಡಿದರು; ಅವಳ ಅತಿಶಯವಾದ ವೈಭವದಿಂದ ಭೂಲೋಕದ ವರ್ತಕರು ಐಶ್ವರ್ಯವಂತರಾದರು ಎಂದು ಹೇಳಿದನು.
- Ezekiel 18:30–32 ಯೆಹೆಜ್ಕೇಲನು 18:30–32ಆದದರಿಂದ ಇಸ್ರಾಯೇಲಿನ ಮನೆತನದವರೇ, ನಿಮ್ಮ ನಿಮ್ಮ ಮಾರ್ಗಗಳ ಪ್ರಕಾರ ನ್ಯಾಯತೀರಿಸುವೆನಂದು ದೇವ ರಾದ ಕರ್ತನು ಹೇಳುತ್ತಾನೆ; ನಿಮ್ಮ ದುಷ್ಟತ್ವಗಳನ್ನೆಲ್ಲಾ ಬಿಟ್ಟು ತಿರುಗಿಕೊಂಡು ಪಶ್ಚಾತ್ತಾಪಪಡಿರಿ; ಆಗ ಅಕ್ರಮ ಗಳು ನಿಮ್ಮನ್ನು ಆಳುವದಿಲ್ಲ. ನೀವು ಮಾಡುವ ದುಷ್ಟತ್ವಗಳನ್ನೆಲ್ಲಾ ನಿಮ್ಮಿಂದ ಬಿಟ್ಟುಬಿಡಿರಿ; ಹೊಸ ಹೃದಯವನ್ನೂ ಹೊಸ ಆತ್ಮವನ್ನೂ ನೀವು ಪಡಕೊಳ್ಳಿರಿ; ಯಾಕಂದರೆ ಓ ಇಸ್ರಾಯೇಲಿನ ಮನೆತನದವರೇ, ನೀವು ಸಾಯುವದೇಕೆ?ಸಾಯುವವನ ಸಾವಿನಲ್ಲಿ ನನಗೆ ಸಂತೋಷವಿಲ್ಲವೆಂದು ದೇವರಾದ ಕರ್ತನು ಹೇಳುತ್ತಾನೆ; ಆದಕಾರಣ ತಿರುಗಿಕೊಂಡು ಬಾಳಿರಿ. ಸಾಯುವವನ ಸಾವಿನಲ್ಲಿ ನನಗೆ ಸಂತೋಷವಿಲ್ಲವೆಂದು ದೇವರಾದ ಕರ್ತನು ಹೇಳುತ್ತಾನೆ; ಆದಕಾರಣ ತಿರುಗಿಕೊಂಡು ಬಾಳಿರಿ.
- Luke 13:3 ಲೂಕನು 13:3ಆದರೆ--ಹಾಗಲ್ಲವೆಂದು ನಾನು ನಿಮಗೆ ಹೇಳುತ್ತೇನೆ; ನೀವು ಮಾನಸಾಂತರ ಪಡದೆಹೋದರೆ ನೀವೆಲ್ಲರೂ ಅವರಂತೆಯೇ ನಾಶವಾ ಗುವಿರಿ.
- Ezekiel 23:29 ಯೆಹೆಜ್ಕೇಲನು 23:29ಅವರು ನಿನ್ನ ವಿಷಯದಲ್ಲಿ ಹಗೆಯವರಾಗಿ ನಡೆಯುವರು; ನಿನ್ನ ಕಷ್ಟಾರ್ಜಿತವನ್ನು ತೆಗೆದುಕೊಂಡು ನಿನ್ನನ್ನು ಬೆತ್ತಲೆಯಾಗಿಯೂ ಬರಿದಾಗಿಯೂ ಮಾಡಿ ಬಿಡುವರು. ಆಗ ನಿನ್ನ ವ್ಯಭಿಚಾರವೂ ದುಷ್ಕರ್ಮವೂ ಜಾರತ್ವವೂ ಪ್ರಕಟವಾಗುವದು.
- Zephaniah 3:7 ಚೆಫನ್ಯ 3:7ನಾನು--ನಿಶ್ಚಯವಾಗಿ ನೀನು ನನಗೆ ಭಯಪಟ್ಟು ಶಿಕ್ಷಣವನ್ನು ಹೊಂದುವಿ; ಹೀಗೆ ನಾನು ಅವರಿಗೆ ಶಿಕ್ಷೆ ವಿಧಿಸಿದರೂ ಅವರ ನಿವಾಸವು ಕಡಿದು ಬಿಡಲ್ಪ ಡುವದಿಲ್ಲ; ಆದರೆ ಅವರು ಬೇಗನೆ ಎದ್ದು ತಮ್ಮ ಕ್ರಿಯೆಗಳನ್ನೆಲ್ಲಾ ಕೆಡಿಸಿಬಿಟ್ಟರು ಅಂದೆನು.
- Revelation 19:18–21 ಪ್ರಕಟನೆ 19:18–21ರಾಜರ ಮಾಂಸವನ್ನೂ ಸೈನ್ಯಾಧಿಪತಿ ಗಳ ಮಾಂಸವನ್ನೂ ಪರಾಕ್ರಮಶಾಲಿಗಳ ಮಾಂಸವನ್ನೂ ಕುದುರೆಗಳ ಮಾಂಸವನ್ನೂ ಅವುಗಳ ಮೇಲೆ ಕೂತವರ ಮಾಂಸವನ್ನೂ ಮತ್ತು ಸ್ವತಂತ್ರರೂ ದಾಸರೂ ಚಿಕ್ಕವರೂ ದೊಡ್ಡವರೂ ಇವರೆಲ್ಲರ ಮಾಂಸವನ್ನೂ ತಿನ್ನುವದಕ್ಕೆ ಬನ್ನಿರಿ ಎಂದು ಹೇಳಿದನು. ತರುವಾಯ ಆ ಮೃಗವೂ ಭೂರಾಜರೂ ಅವರ ಸೈನ್ಯಗಳೂ ಆ ಕುದುರೆಯ ಮೇಲೆ ಕೂತಿದ್ದಾತನ ಮೇಲೆಯೂ ಆತನ ಸೈನ್ಯದ ಮೇಲೆಯೂ ಯುದ್ಧ ಮಾಡುವದಕ್ಕಾಗಿ ಕೂಡಿಬಂದಿರುವದನ್ನು ನಾನು ಕಂಡೆನು. ಆಗ ಮೃಗವು ಸೆರೆಸಿಕ್ಕಿತು; ಇದಲ್ಲದೆ ಮೃಗದ ಮುಂದೆ ಮಹತ್ಕಾರ್ಯಗಳನ್ನು ಮಾಡಿ ಮೃಗದ ಗುರುತು ಹಾಕಿಸಿಕೊಂಡವರನ್ನೂ ಅದರ ವಿಗ್ರಹವನ್ನು ಆರಾಧಿಸಿದವರನ್ನೂ ಮರುಳುಗೊಳಿಸಿದ ಆ ಸುಳ್ಳು ಪ್ರವಾದಿಯೂ ಆದರ ಜೊತೆಯಲ್ಲಿ ಸೆರೆ ಸಿಕ್ಕಿದನು. ಇವರಿಬ್ಬರೂ ಜೀವಸಹಿತವಾಗಿ ಗಂಧಕ ದಿಂದಮಿಕ್ಕಾದವರು ಆ ಕುದುರೆಯ ಮೇಲೆ ಕೂತಿದ್ದಾತನ ಕತ್ತಿಯಿಂದ ಅಂದರೆ ಆತನ ಬಾಯಿಂದ ಬಂದ ಕತ್ತಿ ಯಿಂದ ಹತರಾದರು; ಹಕ್ಕಿಗಳೆಲ್ಲಾ ಅವರ ಮಾಂಸವನು ಹೊಟ್ಟೆತುಂಬಾ ತಿಂದವು. ಮಿಕ್ಕಾದವರು ಆ ಕುದುರೆಯ ಮೇಲೆ ಕೂತಿದ್ದಾತನ ಕತ್ತಿಯಿಂದ ಅಂದರೆ ಆತನ ಬಾಯಿಂದ ಬಂದ ಕತ್ತಿ ಯಿಂದ ಹತರಾದರು; ಹಕ್ಕಿಗಳೆಲ್ಲಾ ಅವರ ಮಾಂಸವನು ಹೊಟ್ಟೆತುಂಬಾ ತಿಂದವು.
- 2 Timothy 2:25–26 2 ತಿಮೊಥೆಯನಿಗೆ 2:25–26ಎದುರಿಸುವವರನ್ನು ಸಾತ್ವಿಕತ್ವದಿಂದ ತಿದ್ದುವವನು ಆಗಿರಬೇಕು. ಒಂದು ವೇಳೆ ದೇವರು ಆ ಎದುರಿಸುವವರಲ್ಲಿ ಪಶ್ಚಾತ್ತಾಪವನ್ನುಂಟುಮಾಡಿ ಸತ್ಯದ ತಿಳುವಳಿಕೆಯನ್ನು ಅವರಿಗೆ ಕೊಟ್ಟಾನು.ಸೈತಾ ನನ ಉರ್ಲಿಗೆ ಬಿದ್ದು ಅವನ ಇಷ್ಟದಿಂದ ಸೆರೆ ಒಯ್ಯಲ್ಪಟ್ಟವರಾದ ಇವರು ಒಂದು ವೇಳೆ ಎಚ್ಚೆತ್ತಾರು. ಸೈತಾ ನನ ಉರ್ಲಿಗೆ ಬಿದ್ದು ಅವನ ಇಷ್ಟದಿಂದ ಸೆರೆ ಒಯ್ಯಲ್ಪಟ್ಟವರಾದ ಇವರು ಒಂದು ವೇಳೆ ಎಚ್ಚೆತ್ತಾರು.