Revelation · chapter 2 · verse 4
Revelation 2:4 in Kannada
ಆದಾಗ್ಯೂ ನಿನ್ನಲ್ಲಿ ನನಗೆ ವಿರೋಧವಾದದ್ದು ಇದೆ. ಯಾಕಂದರೆ ನೀನು ನಿನ್ನ ಮೊದಲಿನ ಪ್ರೀತಿಯನ್ನು ಬಿಟ್ಟುಬಿಟ್ಟಿದ್ದೀ.
Aadaagyoo ninnalli nanage virodhavaadaddu ide. Yaakandare neenu ninna modalina preetiyannu bittubittiddee.
Revelation 2:4 in English
- King James Version (KJV)
- Nevertheless I have [somewhat] against thee, because thou hast left thy first love.
- World English Bible (WEB)
- But I have this against you, that you left your first love.
- American Standard Version (ASV)
- But I have [this] against thee, that thou didst leave thy first love.
- Bible in Basic English (BBE)
- But I have this against you, that you are turned away from your first love.
- Darby Translation (DBY)
- but I have against thee, that thou hast left thy first love.
- Webster's Bible (WBS)
- Nevertheless, I have [somewhat] against thee, because thou hast left thy first love.
- Young's Literal Translation (YLT)
- 'But I have against thee: That thy first love thou didst leave!
Read in context
- 2ನಿನ್ನ ಕ್ರಿಯೆಗಳನ್ನೂ ಪ್ರಯಾಸವನ್ನೂ ತಾಳ್ಮೆಯನ್ನೂ ನಾನು ಬಲ್ಲೆನು; ನೀನು ದುಷ್ಟರನ್ನು ಸಹಿಸಲಾರಿ; ಅಪೊಸ್ತಲರಲ್ಲದಿದ್ದರೂ ತಮ್ಮನ್ನು ಅಪೊಸ್ತಲರೆಂದು ಹೇಳಿಕೊಳ್ಳುವವರನ್ನು, ನೀನು ಪರೀಕ್ಷಿಸಿ ಅವರನ್ನು ಸುಳ್ಳುಗಾರರೆಂದು ಕಂಡುಕೊಂಡಿ;
- 3ನೀನು ಸಹಿಸಿ ಕೊಂಡು ತಾಳ್ಮೆಯುಳ್ಳವನಾಗಿ ನನ್ನ ಹೆಸರಿನ ನಿಮಿತ್ತ ಪ್ರಯಾಸಪಟ್ಟು ಬೇಸರಗೊಳ್ಳಲಿಲ್ಲ.
- 4ಆದಾಗ್ಯೂ ನಿನ್ನಲ್ಲಿ ನನಗೆ ವಿರೋಧವಾದದ್ದು ಇದೆ. ಯಾಕಂದರೆ ನೀನು ನಿನ್ನ ಮೊದಲಿನ ಪ್ರೀತಿಯನ್ನು ಬಿಟ್ಟುಬಿಟ್ಟಿದ್ದೀ.
- 5ಆದದ ರಿಂದ ನೀನು ಎಲ್ಲಿಂದ ಬಿದ್ದಿದ್ದೀಯೋ ಅದನ್ನು ನಿನ್ನ ನೆನಪಿಗೆ ತಂದುಕೊಂಡು ಮಾನಸಾಂತರಪಡು. ನೀನು ಮೊದಲು ಮಾಡುತ್ತಿದ್ದ ಕ್ರಿಯೆಗಳನ್ನು ಮಾಡು. ನೀನು ಮಾನಸಾಂತರಪಡದೆ ಹೋದರೆ ನಾನು ನಿನ್ನ ಬಳಿಗೆ ಬೇಗನೆ ಬಂದು ನಿನ್ನ ದೀಪ ಸ್ತಂಭವನ್ನು ಅದರ ಸ್ಥಳದಿಂದ ತೆಗೆದುಹಾಕುವೆನು
- 6ಆದರೆ ಇದು ನಿನ್ನಲ್ಲಿ ಇದೆ; ಅದೇನಂದರೆ--ನೀನು ದ್ವೇಷಿಸುವ ನಿಕೊಲಾಯಿ ತರ ಕೃತ್ಯಗಳನ್ನು ನಾನು ಸಹ ದ್ವೇಷಿಸುತ್ತೇನೆ.
Cross references
- Matthew 24:12–13 ಮತ್ತಾಯನು 24:12–13ದುಷ್ಟತನ ಹೆಚ್ಚಾಗುವದರಿಂದ ಬಹಳ ಜನರ ಪ್ರೀತಿಯು ತಣ್ಣಗಾಗುವದು. ಆದರೆ ಕಡೇವರೆಗೆ ತಾಳುವವನೇ ರಕ್ಷಿಸಲ್ಪಡುವನು.
- Jeremiah 2:2–5 ಯೆರೆಮೀಯ 2:2–5ನೀನು ಹೋಗಿ ಯೆರೂಸಲೇಮಿನ ಕಿವಿಗಳಲ್ಲಿ ಕೂಗಿ ಹೇಳ ಬೇಕಾದದ್ದೇನಂದರೆ, ಕರ್ತನು ಹೀಗೆ ಹೇಳುತ್ತಾನೆ --ನಾನು ನಿನ್ನನ್ನು ನಿನ್ನ ಯೌವನದ ವಾತ್ಸಲ್ಯವನ್ನೂ ನಿನ್ನ ನಿಶ್ಚಿತಾರ್ಥದ ಪ್ರೀತಿಯನ್ನೂ ನೀನು ಅರಣ್ಯದಲ್ಲಿ ಬಿತ್ತಲ್ಪಡದ ದೇಶದಲ್ಲಿ ನನ್ನನ್ನು ಹಿಂಬಾಲಿಸಿದ್ದನ್ನೂ ಜ್ಞಾಪಕಮಾಡಿಕೊಳ್ಳುತ್ತೇನೆ. ಇಸ್ರಾಯೇಲು ಕರ್ತನಿಗೆ ಪರಿಶುದ್ಧವೂ ಆತನ ಹುಟ್ಟುವಳಿಯ ಪ್ರಥಮ ಫಲವೂ ಆಗಿತ್ತು; ಅದನ್ನು ತಿಂದುಬಿಟ್ಟವರೆಲ್ಲರೂ ಅಪರಾಧಿ ಗಳಾಗುವರು; ಅವರಿಗೆ ಕೇಡು ಬರುವದೆಂದು ಕರ್ತನು ಅನ್ನುತ್ತಾನೆ. ಓ ಯಾಕೋಬಿನ ಮನೆತನವೇ, ಇಸ್ರಾಯೇಲಿನ ಮನೆತನದ ಎಲ್ಲಾ ಕುಟುಂಬಗಳೇ, ಕರ್ತನ ವಾಕ್ಯವನ್ನು ನೀವು ಕೇಳಿರಿ. ಕರ್ತನು ಹೀಗೆ ಹೇಳುತ್ತಾನೆ, ನಿಮ್ಮ ತಂದೆಗಳು ನನಗೆ ದೂರವಾಗಿ ವ್ಯರ್ಥತ್ವವನ್ನು ಹಿಂದಟ್ಟಿ ವ್ಯರ್ಥವಾಗುವ ಹಾಗೆ ನನ್ನಲ್ಲಿ ಯಾವ ಅಕ್ರಮವನ್ನು ಕಂಡಿದ್ದಾರೆ?
- Hebrews 6:10–11 ಇಬ್ರಿಯರಿಗೆ 6:10–11ನೀವು ಪರಿಶುದ್ಧರಿಗೆ ಉಪಚಾರ ಮಾಡಿದಿರಿ, ಇನ್ನು ಮಾಡುತ್ತಾ ಇದ್ದೀರಿ. ಈ ನಿಮ್ಮ ಕೆಲಸವನ್ನೂ ಇದರಲ್ಲಿ ನೀವು ಆತನ ನಾಮದ ವಿಷಯವಾಗಿ ತೋರಿಸಿದ ಪ್ರೀತಿಯ ಪ್ರಯಾಸವನ್ನೂ ಮರೆಯು ವದಕ್ಕೆ ದೇವರು ಅನ್ಯಾಯಸ್ಥನಲ್ಲ. ಅಂತ್ಯದವರೆಗೆ ನಿರೀಕ್ಷೆಯ ಸಂಪೂರ್ಣ ನಿಶ್ಚಯ ತ್ವಕ್ಕಾಗಿ ನಿಮ್ಮಲ್ಲಿ ಪ್ರತಿಯೊಬ್ಬರು ಅದೇ ಆಸಕ್ತಿಯನ್ನು ತೋರಿಸಬೇಕೆಂದು ನಾವು ಅಪೇಕ್ಷಿಸುತ್ತೇವೆ.
- Philippians 1:9 ಫಿಲಿಪ್ಪಿಯವರಿಗೆ 1:9ನಿಮ್ಮ ಪ್ರೀತಿಯು ಹೆಚ್ಚುತ್ತಾ ಹೆಚ್ಚುತ್ತಾ ನೀವು ಜ್ಞಾನ ಮತ್ತು ಪೂರ್ಣ ವಿವೇಕಗಳಿಂದ ಕೂಡಿದವರಾಗಿರಬೇಕೆಂತಲೂ
- 2 Thessalonians 1:3 2 ಥೆಸಲೊನೀಕದವರಿಗೆ 1:3ಸಹೋದರರೇ, ನಾವು ಯಾವಾಗಲೂ ನಿಮ್ಮ ವಿಷಯದಲ್ಲಿ ದೇವರಿಗೆ ಕೃತಜ್ಞತಾಸ್ತುತಿ ಮಾಡುವದಕ್ಕೆ ಬದ್ಧರಾಗಿದ್ದೇವೆ. ಹಾಗೆ ಮಾಡುವದು ಯೋಗ್ಯ; ಯಾಕಂದರೆ ನಿಮ್ಮ ನಂಬಿಕೆಯು ಬಹಳ ಅಭಿವೃದ್ಧಿ ಹೊಂದುತ್ತಾ ಪರಸ್ಪರವಾದ ಪ್ರೀತಿಯು ನಿಮ್ಮೆಲ್ಲ ರಲ್ಲಿಯೂ ಹೆಚ್ಚುತ್ತಾ ಬರುತ್ತದೆ.
- Revelation 3:14–17 ಪ್ರಕಟನೆ 3:14–17ಲವೊದಿಕೀಯದಲ್ಲಿರುವ ಸಭೆಯ ದೂತನಿಗೆ ಬರೆ: ಆಮೆನ್ ಎಂಬಾತನು ಮತ್ತು ನಂಬಿಗಸ್ತನೂ ಸತ್ಯಸಾಕ್ಷಿಯೂ ದೇವರ ಸೃಷ್ಟಿಯ ಆದಿಯೂ ಆಗಿರುವಾತನು ಹೇಳುವವುಗಳು ಯಾವವೆಂದರೆ, ನೀನು ತಣ್ಣಗೂ ಬೆಚ್ಚಗೂ ಅಲ್ಲದಿರುವ ನಿನ್ನ ಕ್ರಿಯೆಗಳನ್ನು ನಾನು ಬಲ್ಲೆನು; ನೀನು ತಣ್ಣಗಾಗಲಿ ಬೆಚ್ಚಗಾಗಲಿ ಇರಬೇಕೆಂಬದು ನನ್ನ ಇಷ್ಟವಾಗಿತ್ತು. ಆದರೆ ನೀನು ತಣ್ಣಗಾಗಲಿ ಇಲ್ಲವೆ ಬೆಚ್ಚಗಾಗಲಿ ಇಲ್ಲದೆ ಉಗುರು ಬೆಚ್ಚಗಿರುವದರಿಂದ ನಿನ್ನನ್ನು ನಾನು ನನ್ನ ಬಾಯೊಳಗಿಂದ ಕಾರುವೆನು. ನೀನು--ನಾನು ಐಶ್ವರ್ಯವಂತನು, ಧನವೃದ್ಧಿಯುಳ್ಳವನು, ಯಾವದರ ಲ್ಲಿಯೂ ಕೊರತೆಯಿಲ್ಲದವನು ಎಂದು ಹೇಳಿಕೊಳ್ಳುತ್ತೀ; ಆದರೆ ನೀನು ಕೇವಲ ನಿರ್ಗತಿಕನು, ದರಿದ್ರನು, ಬಡವನು, ಕುರುಡನು, ಬೆತ್ತಲೆಯಾದವನು ಆಗಿರುವ ದನ್ನು ತಿಳಿಯದೆ ಇದ್ದೀ.
- 1 Thessalonians 4:9–10 1 ಥೆಸಲೊನೀಕದವರಿಗೆ 4:9–10ಆದರೆ ಸಹೋದರ ಪ್ರೀತಿಯ ವಿಷಯದಲ್ಲಿ ನಿಮಗೆ ಬರೆಯುವದು ಅವಶ್ಯವಿಲ್ಲ; ಒಬ್ಬರನ್ನೊಬ್ಬರು ಪ್ರೀತಿಸ ಬೇಕೆಂಬ ಉಪದೇಶವನ್ನು ನೀವೇ ದೇವರಿಂದ ಹೊಂದಿದವರಾಗಿದ್ದೀರಿ. ಸಮಸ್ತ ಮಕೆದೋನ್ಯ ದಲ್ಲಿರುವ ಸಹೋದರರನ್ನೆಲ್ಲಾ ಪ್ರೀತಿಸುವವರಾಗಿಯೇ ಇದ್ದೀರಿ; ಆದರೂ ಸಹೋದರರೇ, ನೀವು ಪ್ರೀತಿಯಲ್ಲಿ ಇನ್ನೂ ಹೆಚ್ಚುತ್ತಾ ಬರಬೇಕೆಂದು ನಾವು ನಿಮ್ಮನ್ನು ಬೇಡಿಕೊಳ್ಳುತ್ತೇವೆ.
- Philippians 3:13–16 ಫಿಲಿಪ್ಪಿಯವರಿಗೆ 3:13–16ಸಹೋದರರೇ, ನಾನಂತೂ ಹಿಡಿದುಕೊಂಡವ ನೆಂದು ನನ್ನನ್ನು ಎಣಿಸಿಕೊಳ್ಳುವದಿಲ್ಲ; ಆದರೆ ಇದೊಂ ದನ್ನು ಮಾಡುತ್ತೇನೆ, ನಾನು ಹಿಂದಿನ ವಿಷಯಗಳನ್ನು ಮರೆತುಬಿಟ್ಟು ಮುಂದಿನವುಗಳನ್ನು ಹಿಡಿಯುವದಕ್ಕಾಗಿ ಕ್ರಿಸ್ತ ಯೇಸುವಿನಲ್ಲಿ ದೇವರ ಉನ್ನತವಾದ ಕರೆಯುವಿಕೆಯ ಬಹುಮಾನವನ್ನು ಗುರಿಮಾಡಿಕೊಂಡು ಓಡುತ್ತಾ ಇದ್ದೇನೆ. ಆದದರಿಂದ ನಮ್ಮಲ್ಲಿ ಪರಿ ಪೂರ್ಣರಾದವರು ಇದೇ ಅಭಿಪ್ರಾಯವುಳ್ಳವರಾಗಿ ರೋಣ; ಯಾವದಾದರೂ ಒಂದು ವಿಷಯದಲ್ಲಿ ನೀವು ಬೇರೆ ಅಭಿಪ್ರಾಯವುಳ್ಳವರಾಗಿದ್ದರೆ ಅದನ್ನೂ ದೇವರು ನಿಮಗೆ ತೋರಿಸಿಕೊಡುವನು. ಆದಾಗ್ಯೂ ಈಗಾ ಗಲೇ ನಾವು ಯಾವದನ್ನು ಹೊಂದಿಕೊಂಡಿದ್ದೇವೋ ಅದೇ ಸೂತ್ರವನ್ನು ಅನುಸರಿಸಿ ನಡೆದುಕೊಳ್ಳುತ್ತಾ ಒಂದೇ ಮನಸ್ಸುಳ್ಳವರಾಗಿರೋಣ.
- Revelation 2:14 ಪ್ರಕಟನೆ 2:14ಆದರೂ ನಿನಗೆ ವಿರೋಧವಾದ ಕೆಲವು ವಿಷಯಗಳು ನನಗಿವೆ. ವಿಗ್ರಹಗಳಿಗೆ ಯಜ್ಞಾರ್ಪಣೆ ಮಾಡಿದ ಪದಾರ್ಥಗಳನ್ನು ತಿನ್ನುವ ದಕ್ಕೂ ಜಾರತ್ವ ಮಾಡುವದಕ್ಕೂ ಇಸ್ರಾಯೇಲಿನ ಮಕ್ಕಳ ಮುಂದೆ ಮುಗ್ಗರಿಸುವ ಬಂಡೆಯನ್ನು ಹಾಕ ಬೇಕೆಂದು ಬಿಳಾಮನು ಬಾಲಾಕನಿಗೆ ಹೇಳಿದ ಬೋಧನೆಯನ್ನು
- Revelation 2:20 ಪ್ರಕಟನೆ 2:20ಆದಾಗ್ಯೂ ನಿನಗೆ ವಿರೋಧವಾದ ಕೆಲವು ವಿಷಯಗಳು ನನಗಿವೆ; ಅದೇ ನಂದರೆ, ಯೆಜೆಬೇಲೆಂಬ ಆ ಹೆಂಗಸು ತನ್ನನ್ನು ಪ್ರವಾದಿ ನಿಯೆಂದು ಹೇಳಿಕೊಂಡು ಜಾರತ್ವ ಮಾಡುವದಕ್ಕೂ ವಿಗ್ರಹಗಳಿಗೆ ಅರ್ಪಣೆ ಮಾಡಿದ ಪದಾರ್ಥಗಳನ್ನು ತಿನ್ನುವದಕ್ಕೂ ನನ್ನ ದಾಸರಿಗೆ ಬೋಧಿಸುತ್ತಾ ಅವರನ್ನು ವಂಚಿಸುತ್ತಿರು