Revelation · chapter 21 · verse 12
Revelation 21:12 in Kannada
ಆ ಪಟ್ಟಣಕ್ಕೆ ಬಹಳ ಎತ್ತರವಾದ ಗೋಡೆ ಇತ್ತು; ಅದಕ್ಕೆ ಹನ್ನೆರಡು ಹೆಬ್ಬಾಗಿಲು ಗಳಿದ್ದವು; ಆ ಬಾಗಿಲುಗಳ ಬಳಿಯಲ್ಲಿ ಹನ್ನೆರಡು ಮಂದಿ ದೂತರಿದ್ದರು; ಅವುಗಳ ಮೇಲೆ ಇಸ್ರಾ ಯೇಲ್ಯರ ಹನ್ನೆರಡು ಗೋತ್ರಗಳ ಹೆಸರುಗಳು ಬರೆ ದಿದ್ದವು.
Aa pattanakke bahala ettaravaada gode ittu; adakke hanneradu hebbaagilu galiddavu; aa baagilugala baliyalli hanneradu mandi dootariddaru; avugala mele israa yelyara hanneradu gotragala hesarugalu bare diddavu.
Revelation 21:12 in English
- King James Version (KJV)
- And had a wall great and high, [and] had twelve gates, and at the gates twelve angels, and names written thereon, which are [the names] of the twelve tribes of the children of Israel:
- World English Bible (WEB)
- having a great and high wall with twelve gates, and at the gates twelve angels, and names written on them, which are the names of the twelve tribes of the children of Israel.
- American Standard Version (ASV)
- having a wall great and high; having twelve gates, and at the gates twelve angels; and names written thereon, which are [the names] of the twelve tribes of the children of Israel:
- Bible in Basic English (BBE)
- She had a wall great and high, with twelve doors, and at the doors twelve angels; and names on them, which are the names of the twelve tribes of the children of Israel.
- Darby Translation (DBY)
- having a great and high wall; having twelve gates, and at the gates twelve angels, and names inscribed, which are those of the twelve tribes of [the] sons of Israel.
- Webster's Bible (WBS)
- And had a wall great and high, [and] had twelve gates, and at the gates twelve angels, and names written on them, which are [the names] of the twelve tribes of the children of Israel.
- Young's Literal Translation (YLT)
- having also a wall great and high, having twelve gates, and at the gates twelve messengers, and names written thereon, which are [those] of the twelve tribes of the sons of Israel,
Read in context
- 10ಅವನು ಆತ್ಮದಲ್ಲಿ ನನ್ನನ್ನು ಎತ್ತರವಾದ ದೊಡ್ಡ ಬೆಟ್ಟಕ್ಕೆ ಎತ್ತಿಕೊಂಡು ಹೋಗಿ ಪರಲೋಕ ದೊಳಗಿಂದ ಪರಿಶುದ್ಧವಾದ ಯೆರೂಸಲೇಮೆಂಬ ಆ ದೊಡ್ಡ ಪಟ್ಟಣವು ದೇವರ ಕಡೆಯಿಂದ ಇಳಿದು ಬರುವ ದನ್ನು ನನಗೆ ತೋರಿಸಿದನು.
- 11ಅದರಲ್ಲಿ ದೇವರ ಮಹಿಮೆ ಇತ್ತು; ಪಟ್ಟಣದ ಪ್ರಕಾಶವು ಅಮೂಲ್ಯವಾದ ಕಲ್ಲಿನ ಪ್ರಕಾಶಕ್ಕೆ ಸಮಾನವಾಗಿತ್ತು; ಅದು ಸೂರ್ಯ ಕಾಂತದಂತೆ ಥಳಥಳಿಸುತ್ತಿತ್ತು.
- 12ಆ ಪಟ್ಟಣಕ್ಕೆ ಬಹಳ ಎತ್ತರವಾದ ಗೋಡೆ ಇತ್ತು; ಅದಕ್ಕೆ ಹನ್ನೆರಡು ಹೆಬ್ಬಾಗಿಲು ಗಳಿದ್ದವು; ಆ ಬಾಗಿಲುಗಳ ಬಳಿಯಲ್ಲಿ ಹನ್ನೆರಡು ಮಂದಿ ದೂತರಿದ್ದರು; ಅವುಗಳ ಮೇಲೆ ಇಸ್ರಾ ಯೇಲ್ಯರ ಹನ್ನೆರಡು ಗೋತ್ರಗಳ ಹೆಸರುಗಳು ಬರೆ ದಿದ್ದವು.
- 13ಪೂರ್ವ ದಿಕ್ಕಿನಲ್ಲಿ ಮೂರು ಹೆಬ್ಬಾಗಿಲು ಗಳು. ಉತ್ತರ ದಿಕ್ಕಿನಲ್ಲಿ ಮೂರು ಹೆಬ್ಬಾಗಿಲುಗಳು, ದಕ್ಷಿಣ ದಿಕ್ಕಿನಲ್ಲಿ ಮೂರು ಹೆಬ್ಬಾಗಿಲುಗಳು, ಪಶ್ಚಿಮ ದಿಕ್ಕಿನಲ್ಲಿ ಮೂರು ಹೆಬ್ಬಾಗಿಲುಗಳು ಇದ್ದವು.
- 14ಪಟ್ಟಣದ ಗೋಡೆಗೆ ಹನ್ನೆರಡು ಅಸ್ತಿವಾರಗಳಿದ್ದವು; ಅವುಗಳ ಮೇಲೆ ಕುರಿಮರಿಯಾದಾತನ ಹನ್ನೆರಡು ಮಂದಿ ಅಪೊಸ್ತಲರ ಹೆಸರುಗಳಿದ್ದವು.
Cross references
- Ezekiel 48:31–34 ಯೆಹೆಜ್ಕೇಲನು 48:31–34ಪಟ್ಟಣದ ಬಾಗಲುಗಳು ಇಸ್ರಾಯೇಲಿನ ಗೋತ್ರಗಳ ಹೆಸರುಗಳ ಪ್ರಕಾರ ಇರಬೇಕು; ಉತ್ತರಕ್ಕೆ ಮೂರು ಬಾಗಲುಗಳು; ರೂಬೇ ನನ ಬಾಗಲು ಒಂದು, ಯೆಹೂದನ ಬಾಗಲು ಒಂದು; ಲೇವಿಯ ಬಾಗಲು ಒಂದು. ಪೂರ್ವದ ಗಡಿಯಲ್ಲಿ ನಾಲ್ಕು ಸಾವಿರದ ಐನೂರು, ಮತ್ತು ಮೂರು ಬಾಗ ಲುಗಳು; ಯೋಸೇಫನ ಬಾಗಲು ಒಂದು, ಬೆನ್ಯಾ ವಿಾನನ ಬಾಗಲು ಒಂದು; ದಾನನ ಬಾಗಲು ಒಂದು ದಕ್ಷಿಣದ ಕಡೆಯಲ್ಲಿ ನಾಲ್ಕು ಸಾವಿರದ ಐನೂರು ಅಳತೆಗಳು; ಮೂರು ಬಾಗಲುಗಳು; ಸಿಮೆಯೋನನ ಬಾಗಲು ಒಂದು, ಇಸ್ಸಾಕಾರನ ಬಾಗಲು ಒಂದು; ಜೆಬುಲೋನನ ಬಾಗಲು ಒಂದು. ಪಶ್ಚಿಮದ ಕಡೆಯಲ್ಲಿ ನಾಲ್ಕು ಸಾವಿರದ ಐನೂರು, ಅದರ ಬಾಗಲುಗಳು ಮೂರು; ಗಾದ ಬಾಗಲು ಒಂದು, ಆಶೇರ ಬಾಗಲು ಒಂದು, ನಫ್ತಾಲಿ ಬಾಗಲು ಒಂದು.ಸುತ್ತಲೂ ಹದಿನೆಂಟು ಸಾವಿರ ಅಳತೆಗಳು; ಆ ದಿನದಿಂದ ಆ ಪಟ್ಟಣದ ಹೆಸರು ಕರ್ತನು ನೆಲೆ ಯಾಗಿರುವನು ಎಂಬದೇ ಆಗಿರುವದು.
- Revelation 7:4–8 ಪ್ರಕಟನೆ 7:4–8ಮುದ್ರೆ ಹೊಂದಿದವರ ಸಂಖ್ಯೆಯನ್ನು ನಾನು ಕೇಳಿದೆನು; ಇಸ್ರಾಯೇಲ್ಯನ ಮಕ್ಕಳ ಗೋತ್ರದವರಲ್ಲಿ ಮುದ್ರೆಯನ್ನು ಹೊಂದಿದವರು ಒಂದು ಲಕ್ಷ ನಾಲ್ವತ್ತು ನಾಲ್ಕು ಸಾವಿರ. ಯೂದನ ಗೋತ್ರದವರಲ್ಲಿ ಮುದ್ರಿಸಲ್ಪಟ್ಟವರು ಹನ್ನೆರಡು ಸಾವಿರ, ರೂಬೇನನ ಗೋತ್ರದವರಲ್ಲಿ ಮುದ್ರಿಸಲ್ಪಟ್ಟವರು ಹನ್ನೆರಡು ಸಾವಿರ, ಗಾದನ ಗೋತ್ರ ದವರಲ್ಲಿ ಮುದ್ರಿಸಲ್ಪಟ್ಟವರು ಹನ್ನೆರಡು ಸಾವಿರ. ಅಷೇರನ ಗೋತ್ರದವರಲ್ಲಿ ಮುದ್ರಿಸಲ್ಪಟ್ಟವರು ಹನ್ನೆ ರಡು ಸಾವಿರ, ನೆಫ್ತಲೀಮನ ಗೋತ್ರದವರಲ್ಲಿ ಮುದ್ರಿಸ ಲ್ಪಟ್ಟವರು ಹನ್ನೆರಡು ಸಾವಿರ, ಮನಸ್ಸೆಯ ಗೋತ್ರದವ ರಲ್ಲಿ ಮುದ್ರಿಸಲ್ಪಟ್ಟವರು ಹನ್ನೆರಡು ಸಾವಿರ. ಸಿಮೆ ಯೋನನ ಗೋತ್ರದವರಲ್ಲಿ ಮುದ್ರಿಸಲ್ಪಟ್ಟವರು ಹನ್ನೆ ರಡು ಸಾವಿರ, ಲೇವಿಯ ಗೋತ್ರದವರಲ್ಲಿ ಮುದ್ರಿಸ ಲ್ಪಟ್ಟವರು ಹನ್ನೆರಡು ಸಾವಿರ, ಇಸ್ಸಾಕಾರನ ಗೋತ್ರ ದವರಲ್ಲಿ ಮುದ್ರಿಸಲ್ಪಟ್ಟವರು ಹನ್ನೆರಡು ಸಾವಿರ. ಜೆಬುಲೂನನ ಗೋತ್ರದವರಲ್ಲಿ ಮುದ್ರಿಸಲ್ಪಟ್ಟವರು ಹನ್ನೆರಡು ಸಾವಿರ, ಯೋಸೇಫನ ಗೋತ್ರದವರಲ್ಲಿ ಮುದ್ರಿಸಲ್ಪಟ್ಟವರು ಹನ್ನೆರಡು ಸಾವಿರ, ಬೆನ್ಯಾವಿಾನನ ಗೋತ್ರದವರಲ್ಲಿ ಮುದ್ರಿಸಲ್ಪಟ್ಟವರು ಹನ್ನೆರಡುಸಾವಿರ.
- Revelation 21:17–21 ಪ್ರಕಟನೆ 21:17–21ಅದರ ಗೋಡೆಯನ್ನು ಅವನು ಅಳತೆ ಮಾಡಿದನು; ಅದು ನೂರನಾಲ್ವತ್ತ ನಾಲ್ಕು ಮೊಳ ದಷ್ಟಿತ್ತು. ಈ ಲೆಕ್ಕದಲ್ಲಿ ಮನುಷ್ಯನ ಮೊಳ ಅಂದರೆ ದೂತನ ಮೊಳ. ಆ ಗೋಡೆಯ ಕಟ್ಟಡವು ಸೂರ್ಯ ಕಾಂತದಿಂದ ಆಗಿತ್ತು; ಪಟ್ಟಣವು ಶುದ್ಧ ಗಾಜಿನಂತಿರುವ ಸೋಸಿದ ಭಂಗಾರವೇ. ಪಟ್ಟಣದ ಗೋಡೆಯ ಅಸ್ತಿವಾರಗಳು ಸಕಲವಿಧವಾದ ಅಮೂಲ್ಯವಾದ ಕಲ್ಲುಗಳಿಂದ ಅಲಂಕೃತವಾಗಿದ್ದವು. ಮೊದಲನೆಯ ಅಸ್ತಿ ವಾರವು ಸೂರ್ಯಕಾಂತ, ಎರಡನೆಯದು ನೀಲಮಣಿ, ಮೂರನೆಯದು ಕೆಂಪು, ನಾಲ್ಕನೆಯದು ಪಚ್ಚೆ. ಐದನೆಯದು ಗೋಮೇಧಿಕ. ಆರನೆಯದು ಮಾಣಿಕ್ಯ, ಏಳನೆಯದು ಪೀತರತ್ನ, ಎಂಟನೆಯದು ಬೆರುಲ್ಲ, ಒಂಭತ್ತನೆಯದು ಪುಷ್ಯರಾಗ, ಹತ್ತನೆಯದು ಗರುಡಪಚ್ಚೆ, ಹನ್ನೊಂದನೆಯದು ಕೆಂಗಿತ್ತಳೆ, ಹನ್ನೆರಡನೆ ಯದು ನೀಲಸ್ಪಟಿಕ. ಹನ್ನೆರಡು ಹೆಬ್ಬಾಗಿಲುಗಳು ಹನ್ನೆರಡು ಮುತ್ತುಗಳಾಗಿದ್ದವು; ಒಂದೊಂದು ಬಾಗಿಲು ಒಂದೊಂದು ಮುತ್ತಿನಿಂದ ಮಾಡಲ್ಪಟ್ಟಿತ್ತು. ಪಟ್ಟಣದ ಬೀದಿಯು ಸ್ವಚ್ಛವಾದ ಗಾಜಿನಂತಿರುವ ಸೋಸಿದ ಬಂಗಾರವಾಗಿತ್ತು.
- Isaiah 54:12 ಯೆಶಾಯ 54:12ನಿನ್ನ ಕಿಟಕಿಗಳನ್ನು ಮಾಣಿಕ್ಯಗಳಿಂದ, ನಿನ್ನ ಬಾಗಿಲುಗಳನ್ನು ಪದ್ಮರಾಗಗಳಿಂದ ನಿನ್ನ ಮೇರೆ ಗಳನ್ನು ಮನೋಹರವಾದ ರತ್ನಗಳಿಂದ ನಾನು ಮಾಡು ವೆನು.
- Revelation 21:25 ಪ್ರಕಟನೆ 21:25ಅದರ ಹೆಬ್ಬಾಗಿಲು ಗಳನ್ನು ಹಗಲಿನಲ್ಲಿ ಮುಚ್ಚುವದೇ ಇಲ್ಲ. ಯಾಕಂದರೆ ರಾತ್ರಿಯು ಅಲ್ಲಿಲ್ಲ.
- Psalm 122:7 ಕೀರ್ತನೆಗಳು 122:7ನಿನ್ನ ಪ್ರಾಕಾರದಲ್ಲಿ ಸಮಾಧಾನವೂ ಅರಮನೆಗಳಲ್ಲಿ ಅಭಿವೃದ್ಧಿಯೂ ಇರಲಿ.
- Psalm 51:18 ಕೀರ್ತನೆಗಳು 51:18ನಿನ್ನ ದಿವ್ಯ ಚಿತ್ತದ ಪ್ರಕಾರ ಚೀಯೋನಿಗೆ ಒಳ್ಳೇದು ಮಾಡು; ಯೆರೂಸಲೇಮಿನ ಗೋಡೆಗಳನ್ನು ಕಟ್ಟು.ಆಗ ನೀತಿಯ ಯಜ್ಞಗಳಲ್ಲಿಯೂ ದಹನ ಬಲಿಯಲ್ಲಿಯೂ ಪೂರ್ಣವಾದ ದಹನಬಲಿಯ ಲ್ಲಿಯೂ ನೀನು ಸಂತೋಷಪಡುವಿ; ಆಗ ನಿನ್ನ ಬಲಿ ಪೀಠದ ಮೇಲೆ ಅವರು ಹೋರಿಗಳನ್ನು ಅರ್ಪಿಸುವರು.
- Numbers 2:2–32 ಅರಣ್ಯಕಾಂಡ 2:2–32ಇಸ್ರಾಯೇಲ್ ಮಕ್ಕಳು ಒಬ್ಬೊಬ್ಬರಾಗಿ ತಂದೆ ಮನೆಯ ಗುರುತುಗಳ ಪ್ರಕಾರ ತಮ್ಮ ತಮ್ಮ ಧ್ವಜಗಳ ಬಳಿಯಲ್ಲಿ ಇಳುಕೊಳ್ಳಬೇಕು; ಅವರು ಸಭೆಯ ಗುಡಾರದ ಎದುರಿನಲ್ಲಿ ಸುತ್ತಮುತ್ತಲೂ ಇಳುಕೊಳ್ಳಬೇಕು. ಪೂರ್ವ ದಿಕ್ಕಿನಲ್ಲಿ ಸೂರ್ಯೋದಯದ ಕಡೆಗೆ ಇಳುಕೊಳ್ಳುವವರು ಅವರವರ ಸೈನ್ಯಗಳ ಪ್ರಕಾರ ಯೆಹೂದನ ದಂಡಿನ ಧ್ವಜವು; ಯೆಹೂದನ ಮಕ್ಕಳಿಗೆ ಅವ್ಮೆಾನಾದಾಬನ ಮಗನಾದ ನಹಶೋನನು ಸೈನ್ಯಾಧಿಪತಿ. ಅವನ ಸೈನ್ಯವೂ ಎಣಿಸಲ್ಪಟ್ಟವರೂ ಎಪ್ಪತ್ತನಾಲ್ಕು ಸಾವಿರದ ಆರುನೂರು. ಅವನ ಬಳಿ ಯಲ್ಲಿ ಇಳುಕೊಳ್ಳುವವರು ಇಸ್ಸಾಕಾರನ ಗೋತ್ರವು; ಇಸ್ಸಾಕಾರನ ಮಕ್ಕಳಿಗೆ ಚೂವಾರನ ಮಗನಾದ ನೆತನೇಲನು ಸೈನ್ಯಾಧಿಪತಿ. ಅವನ ಸೈನ್ಯವೂ ಎಣಿಸಲ್ಪ ಟ್ಟವರೂ ಐವತ್ತು ನಾಲ್ಕುಸಾವಿರದ ನಾಲ್ಕುನೂರು. ಜೆಬುಲೂನನ ಮಕ್ಕಳಿಗೆ ಹೇಲೋನನ ಮಗನಾದ ಎಲೀಯಾಬನು ಸೈನ್ಯಾಧಿಪತಿ. ಅವನ ಸೈನ್ಯವೂ ಎಣಿಸಲ್ಪಟ್ಟವರೂ ಐವತ್ತೇಳುಸಾವಿರದ ನಾಲ್ಕುನೂರು. ಯೆಹೂದನ ಪಾಳೆಯದಲ್ಲಿ ಎಣಿಸಲ್ಪಟ್ಟವರೆಲ್ಲರೂ ಅವರ ಸೈನ್ಯಗಳ ಪ್ರಕಾರ ಲಕ್ಷದ ಎಂಭತ್ತಾರು ಸಾವಿರದ ನಾಲ್ಕುನೂರು. ಅವರು ಮೊದಲು ಹೊರಡತಕ್ಕವರು. ರೂಬೇನನ ಪಾಳೆಯದ ಧ್ವಜವು ಅವರವರ ಸೈನ್ಯಗಳ ಪ್ರಕಾರ ತೆಂಕಣದಲ್ಲಿರುವದು; ರೂಬೇನನ ಮಕ್ಕಳಿಗೆ ಶೆದೇಯೂರನ ಮಗನಾದ ಎಲೀಚೂರನು ಸೈನ್ಯಾಧಿಪತಿ; ಅವನ ಸೈನ್ಯವೂ ಎಣಿಸಲ್ಪಟ್ಟವರೂ ನಲವತ್ತಾರು ಸಾವಿರದ ಐದುನೂರು. ಅವನ ಬಳಿ ಯಲ್ಲಿ ಇಳುಕೊಳ್ಳುವವರು ಸಿಮೆಯೋನನ ಗೋತ್ರ ದವರು; ಸಿಮೆಯೋನನ ಮಕ್ಕಳಿಗೆ ಚೂರೀಷದ್ದೈಯನ ಮಗನಾದ ಶೆಲುವಿಾಯೇಲನು ಸೈನ್ಯಾಧಿಪತಿ; ಅವನ ಸೈನ್ಯವೂ ಎಣಿಸಲ್ಪಟ್ಟವರೂ ಐವತ್ತೊಂಭತ್ತು ಸಾವಿರದ ಮುನ್ನೂರು. ತರುವಾಯ ಗಾದನ ಗೋತ್ರವು: ಗಾದನ ಮಕ್ಕಳಿಗೆ ರೆಗೂವೇಲನ ಮಗ ನಾದ ಎಲ್ಯಾಸಾಫನು ಸೈನ್ಯಾಧಿಪತಿ; ಅವನ ಸೈನ್ಯವೂ ಎಣಿಸಲ್ಪಟ್ಟವರೂ ನಲವತ್ತೈದು ಸಾವಿರದ ಆರುನೂರ ಐವತ್ತು. ರೂಬೇನನ ಪಾಳೆಯದಲ್ಲಿ ಎಣಿಸಲ್ಪಟ್ಟವರೆಲ್ಲರೂ ಅವರವರ ಸೈನ್ಯಗಳ ಪ್ರಕಾರ ಲಕ್ಷದ ಐವತ್ತೊಂದು ಸಾವಿರದ ನಾನೂರಐವತ್ತು; ಅವರು ಎರಡನೆಯದಾಗಿ ಹೊರಡತಕ್ಕದ್ದು. ತರುವಾಯ ಸಭೆಯ ಗುಡಾರವೂ ಲೇವಿಯರ ಪಾಳೆಯವೂ ಪಾಳೆಯಗಳ ಮಧ್ಯದಲ್ಲಿ ಹೊರಡಬೇಕು. ಅವರು ಇಳುಕೊಳ್ಳುವ ಪ್ರಕಾರವೇ ತಮ್ಮ ತಮ್ಮ ಕಡೆ ಯಲ್ಲಿಯೂ ತಮ್ಮ ತಮ್ಮ ಧ್ವಜಗಳ ಪ್ರಕಾರವಾಗಿಯೂ ಹೊರಡಬೇಕು. ಎಫ್ರಾಯಾಮಿನವರ ಪಾಳೆಯದ ಧ್ವಜವು ಅವರ ಸೈನ್ಯಗಳ ಪ್ರಕಾರ ಪಶ್ಚಿಮದಲ್ಲಿರುವದು; ಎಫ್ರಾ ಯಾಮನ ಮಕ್ಕಳಿಗೆ ಅವ್ಮೆಾಹೂದನ ಮಗನಾದ ಎಲೀಷಾಮಾನು ಸೈನ್ಯಾಧಿಪತಿ. ಅವನ ಸೈನ್ಯವೂ ಎಣಿಸಲ್ಪಟ್ಟವರೂ ನಲವತ್ತು ಸಾವಿರದ ಐದು ನೂರು. ಅವನ ಬಳಿಯಲ್ಲಿ ಮನಸ್ಸೆ ಗೋತ್ರವು; ಮನಸ್ಸೆ ಮಕ್ಕಳಿಗೆ ಪೆದಾಚೂರನ ಮಗನಾದ ಗವ್ಲೆಾಯೇಲನು ಸೈನ್ಯಾಧಿಪತಿ. ಅವನ ಸೈನ್ಯವೂ ಎಣಿಸಲ್ಪಟ್ಟವರೂ ಮೂವತ್ತೆರಡು ಸಾವಿರದ ಇನ್ನೂರು. ತರುವಾಯ ಬೆನ್ಯಾವಿಾನನ ಗೋತ್ರವು; ಬೆನ್ಯಾವಿಾನನ ಮಕ್ಕಳಿಗೆ ಗಿದ್ಯೋನಿಯ ಮಗನಾದ ಅಬೀದಾನನು ಸೈನ್ಯಾಧಿಪತಿ. ಅವನ ಸೈನ್ಯವೂ ಎಣಿಸಲ್ಪಟ್ಟವರೂ ಮುವತ್ತೈದು ಸಾವಿರದ ನಾಲ್ಕುನೂರು. ಎಫ್ರಾಯಾಮನ ಪಾಳೆ ಯದಲ್ಲಿ ಎಣಿಸಲ್ಪಟ್ಟವರೆಲ್ಲರೂ ಅವರ ಸೈನ್ಯಗಳ ಪ್ರಕಾರವಾಗಿ ಲಕ್ಷದ ಎಂಟುಸಾವಿರದ ನೂರು. ಇವರು ಮೂರನೆಯವರಾಗಿ ಹೊರಡತಕ್ಕವರು. ದಾನನ ದಂಡಿನ ಧ್ವಜವು ಅವರವರ ಸೈನ್ಯಗಳ ಪ್ರಕಾರವಾಗಿ ಉತ್ತರದಲ್ಲಿರುವದು. ದಾನನ ಮಕ್ಕಳಿಗೆ ಅವ್ಮೆಾಷದ್ದೈಯನ ಮಗನಾದ ಅಹೀಗೆಜರನು ಸೈನ್ಯಾಧಿಪತಿ. ಅವನ ಸೈನ್ಯವೂ ಎಣಿಸಲ್ಪಟ್ಟವರೂ ಅರವತ್ತೆರಡು ಸಾವಿರದ ಏಳು ನೂರು. ಅವನ ಬಳಿಯಲ್ಲಿ ಇಳುಕೊಳ್ಳುವವರು ಆಶೇರನ ಗೋತ್ರ ದವರು; ಆಶೇರನ ಮಕ್ಕಳಿಗೆ ಒಕ್ರಾನನ ಮಗನಾದ ಪಗೀಯೇಲನು ಸೈನ್ಯಾಧಿಪತಿ; ಅವನ ಸೈನ್ಯವೂ ಎಣಿಸಲ್ಪಟ್ಟವರೂ ನಲವತ್ತೊಂದು ಸಾವಿರದ ಐದು ನೂರು. ತರುವಾಯ ನಫ್ತಾಲಿ ಗೋತ್ರದವರು; ನಫ್ತಾಲಿ ಮಕ್ಕಳಿಗೆ ಏನಾನನ ಮಗನಾದ ಅಹೀರನು ಸೈನ್ಯಾಧಿಪತಿ. ಅವನ ಸೈನ್ಯವೂ ಎಣಿಸಲ್ಪಟ್ಟವರೂ ಐವತ್ತಮೂರು ಸಾವಿರದ ನಾಲ್ಕುನೂರು. ದಾನನ ಪಾಳೆಯದಲ್ಲಿ ಎಣಿಸಲ್ಪಟ್ಟವರೆಲ್ಲರೂ ಲಕ್ಷದ ಐವತ್ತೇಳು ಸಾವಿರದ ಆರುನೂರು. ಅವರು ತಮ್ಮ ಧ್ವಜಗಳ ಪ್ರಕಾರ ಕಡೆಯವರಾಗಿ ಹೊರಡತಕ್ಕದ್ದು. ಇಸ್ರಾಯೇಲ್ ಮಕ್ಕಳಲ್ಲಿ ತಮ್ಮ ತಂದೆಗಳ ಮನೆಯ ಪ್ರಕಾರವಾಗಿ ಎಣಿಸಲ್ಪಟ್ಟವರು ಇವರೇ; ಪಾಳೆಯದೊಳಗೆ ಅವರವರ ಸೈನ್ಯಗಳ ಪ್ರಕಾರ ಎಣಿಸ ಲ್ಪಟ್ಟವರೆಲ್ಲರೂ ಆರುಲಕ್ಷ ಮೂರುಸಾವಿರದ ಐದು ನೂರಐವತ್ತು ಎಂಬದೇ.
- Nehemiah 12:27 ನೆಹೆಮೀಯ 12:27ಯೆರೂಸಲೇಮಿನ ಗೋಡೆಯನ್ನು ಪ್ರತಿಷ್ಠೆ ಮಾಡುವಾಗ ಸ್ತುತಿಗಳಿಂದಲೂ ಹಾಡುವದರಿಂದಲೂ ತಾಳಗಳಿಂದಲೂ ವೀಣೆಗಳಿಂದಲೂ ಕಿನ್ನರಿಗಳಿಂದಲೂ ಪ್ರತಿಷ್ಠೆಯನ್ನು ಸಂತೋಷವಾಗಿ ಆಚರಿಸುವದಕ್ಕೆ ಲೇವಿ ಯರನ್ನು ಯೆರೂಸಲೇಮಿಗೆ ಬರಮಾಡುವ ನಿಮಿತ್ತವಾಗಿ ಅವರನ್ನು ಅವರ ಸಮಸ್ತ ಸ್ಥಳಗಳಲ್ಲಿ ಹುಡುಕಿದರು.
- Isaiah 60:18 ಯೆಶಾಯ 60:18ಬಲಾತ್ಕಾರವೂ ನಿನ್ನ ದೇಶದೊಳಗೆ ಹಾಳಾದದ್ದೂ ನಾಶವೂ ನಿನ್ನ ಮೇರೆ ಗಳಲ್ಲಿ ಕೇಳಲ್ಪಡುವದಿಲ್ಲ; ನಿನ್ನ ಗೋಡೆಗಳಿಗೆ ರಕ್ಷಣೆ ಎಂದೂ ನಿನ್ನ ಬಾಗಿಲುಗಳಿಗೆ ಸ್ತೋತ್ರವೆಂದೂ ಹೆಸರಿ ಡುವಿ.
- Ezra 9:9 ಎಜ್ರನು 9:9ನಾವು ದಾಸರಾಗಿದ್ದೆವು; ಆದಾಗ್ಯೂ ನಮ್ಮ ದೇವರು ನಮ್ಮ ದಾಸತ್ವದಲ್ಲಿ ನಮ್ಮ ಕೈ ಬಿಟ್ಟುಬಿಡದೆ ನಮ್ಮನ್ನು ಉಜ್ಜೀವಿಸುವದಕ್ಕೂ ನಮ್ಮ ದೇವರ ಆಲಯವನ್ನು ಕಟ್ಟಿಸುವದಕ್ಕೂ ಅದರ ಹಾಳಾ ದವುಗಳನ್ನು ದುರಸ್ತು ಮಾಡುವದಕ್ಕೂ ಯೆಹೂದ ದಲ್ಲಿ ಮತ್ತು ಯೆರೂಸಲೇಮಿನಲ್ಲಿ ನಮಗೆ ಗೋಡೆ ಯನ್ನು ಕೊಡುವದಕ್ಕೂ ಪಾರಸಿಯ ಅರಸುಗಳ ಸಮ್ಮು ಖದಲ್ಲಿ ನಮ್ಮ ಮೇಲೆ ಕೃಪೆಯನ್ನು ಮುಂದುವರಿಸಿದ್ದಾನೆ.
- Matthew 18:10 ಮತ್ತಾಯನು 18:10ಚಿಕ್ಕವರಲ್ಲಿ ಒಬ್ಬನನ್ನಾದರೂ ನೀವು ತಾತ್ಸಾರ ಮಾಡದಂತೆ ನೋಡಿಕೊಳ್ಳಿರಿ; ಯಾಕಂದರೆ ನಾನು ನಿಮಗೆ ಹೇಳುವದೇನಂದರೆ--ಪರಲೋಕದಲ್ಲಿ ಅವರ ದೂತರು ಪರಲೋಕದಲ್ಲಿರುವ ನನ್ನ ತಂದೆಯ ಮುಖವನ್ನು ಯಾವಾಗಲೂ ನೋಡುತ್ತಾರೆ.
Original words (Greek)
- And · G5037τέ té
- had · G2192ἔχω échō
- wall · G5038τεῖχος teîchos
- great · G3173μέγας mégas
- and · G2532καί kaí
- high · G5308ὑψηλός hypsēlós
- had · G2192ἔχω échō
- twelve · G1427δώδεκα dṓdeka
- gates · G4440πυλών pylṓn
- and · G2532καί kaí
- at · G1909ἐπί epí
- gates · G4440πυλών pylṓn
- twelve · G1427δώδεκα dṓdeka
- angels · G32ἄγγελος ángelos
- and · G2532καί kaí
- names · G3686ὄνομα ónoma
- thereon · G1924ἐπιγράφω epigráphō
- which · G3739ὅς hós
- are · G2076ἐστί estí
- twelve · G1427δώδεκα dṓdeka
- tribes · G5443φυλή phylḗ
- children · G5207υἱός huiós
- Israel · G2474Ἰσραήλ Israḗl