Revelation · chapter 4 · verse 5
Revelation 4:5 in Kannada
ಸಿಂಹಾಸನದೊಳಗಿಂದ ಮಿಂಚುಗಳೂ ಗುಡುಗುಗಳೂ ಶಬ್ದಗಳೂ ಹೊರಟವು; ಅದರ ಮುಂದೆ ದೇವರ ಏಳು ಆತ್ಮಗಳಾಗಿರುವ ಏಳು ಬೆಂಕಿಯ ದೀಪಗಳು ಉರಿಯುತ್ತಿದ್ದವು.
Sinhaasanadolaginda minchugaloo gudugugaloo shabdagaloo horatavu; adara munde devara elu aatmagalaagiruva elu benkiya deepagalu uriyuttiddavu.
Revelation 4:5 in English
- King James Version (KJV)
- And out of the throne proceeded lightnings and thunderings and voices: and [there were] seven lamps of fire burning before the throne, which are the seven Spirits of God.
- World English Bible (WEB)
- Out of the throne proceed lightnings, sounds, and thunders. There were seven lamps of fire burning before his throne, which are the seven Spirits of God.
- American Standard Version (ASV)
- And out of the throne proceed lightnings and voices and thunders. And [there were] seven lamps of fire burning before the throne, which are the seven Spirits of God;
- Bible in Basic English (BBE)
- And out of the high seat came flames and voices and thunders. And seven lights of fire were burning before the high seat, which are the seven Spirits of God;
- Darby Translation (DBY)
- And out of the throne go forth lightnings, and voices, and thunders; and seven lamps of fire, burning before the throne, which are the seven Spirits of God;
- Webster's Bible (WBS)
- And out of the throne proceeded lightnings and thunderings and voices. And [there were] seven lamps of fire burning before the throne, which are the seven Spirits of God.
- Young's Literal Translation (YLT)
- and out of the throne proceed do lightnings, and thunders, and voices; and seven lamps of fire are burning before the throne, which are the Seven Spirits of God,
Read in context
- 3ಕೂತಿದ್ದಾತನು ಸೂರ್ಯಕಾಂತ ಪದ್ಮರಾಗ ಕಲ್ಲುಗಳಂತೆ ಕಾಣುತ್ತಿದ್ದನು; ಸಿಂಹಾಸನದ ಸುತ್ತಲೂ ಪಚ್ಚೆಯಂತೆ ತೋರುತ್ತಿದ್ದ ಮಳೆ ಬಿಲ್ಲು ಇತ್ತು.
- 4ಇದಲ್ಲದೆ ಸಿಂಹಾಸನದ ಸುತ್ತಲೂ ಇಪ್ಪತ್ತನಾಲ್ಕು ಆಸನಗಳಿದ್ದವು; ಆ ಆಸನಗಳ ಮೇಲೆ ಬಿಳೀ ವಸ್ತ್ರ ಧರಿಸಿಕೊಂಡಿದ್ದ ಇಪ್ಪತ್ತು ನಾಲ್ಕು ಮಂದಿ ಹಿರಿಯರು ಕೂತಿದ್ದರು; ಅವರ ತಲೆಗಳ ಮೇಲೆ ಚಿನ್ನದ ಕಿರೀಟ ಗಳಿದ್ದವು.
- 5ಸಿಂಹಾಸನದೊಳಗಿಂದ ಮಿಂಚುಗಳೂ ಗುಡುಗುಗಳೂ ಶಬ್ದಗಳೂ ಹೊರಟವು; ಅದರ ಮುಂದೆ ದೇವರ ಏಳು ಆತ್ಮಗಳಾಗಿರುವ ಏಳು ಬೆಂಕಿಯ ದೀಪಗಳು ಉರಿಯುತ್ತಿದ್ದವು.
- 6ಇದಲ್ಲದೆ ಸಿಂಹಾಸನದ ಮುಂದೆ ಸ್ಫಟಿಕಕ್ಕೆ ಸಮಾನವಾದ ಗಾಜಿನ ಸಮುದ್ರವಿದ್ದ ಹಾಗೆ ಇತ್ತು. ಸಿಂಹಾಸನದ ಮಧ್ಯದಲ್ಲಿ ಮತ್ತು ಅದರ ಸುತ್ತಲೂ ನಾಲ್ಕು ಜೀವಿಗಳಿದ್ದವು; ಅವುಗಳಿಗೆ ಹಿಂದೆ ಯೂ ಮುಂದೆಯೂ ತುಂಬಾ ಕಣ್ಣುಗಳಿದ್ದವು.
- 7ಮೊದಲನೆಯ ಜೀವಿಯು, ಸಿಂಹದಂತಿತ್ತು, ಎರಡ ನೆಯ ಜೀವಿಯು ಹೋರಿಯಂತಿತ್ತು; ಮೂರನೆಯ ಜೀವಿಯ ಮುಖವು ಮನುಷ್ಯರ ಮುಖದಂತಿತ್ತು; ನಾಲ್ಕನೆಯ ಜೀವಿಯು ಹಾರುವ ಗರುಡ ಪಕ್ಷಿಯಂತಿತ್ತು.
Cross references
- Revelation 11:19 ಪ್ರಕಟನೆ 11:19ಆಗ ಪರಲೋಕದಲ್ಲಿ ದೇವಾಲಯವು ತೆರೆಯ ಲ್ಪಟ್ಟಿತು; ಆತನ ಆಲಯದಲ್ಲಿ ಆತನ ಒಡಂಬಡಿಕೆಯ ಮಂಜೂಷವು ಕಾಣಿಸಿತು; ಇದಲ್ಲದೆ ಮಿಂಚುಗಳೂ ವಾಣಿಗಳೂ ಗುಡುಗುಗಳೂ ಭೂಕಂಪವೂ ದೊಡ್ಡ ಆನೆಕಲ್ಲಿನ ಮಳೆಯೂ ಉಂಟಾದವು.
- Revelation 8:5 ಪ್ರಕಟನೆ 8:5ತರುವಾಯ ಆ ದೇವದೂತನು ಧೂಪದ ಪಾತ್ರೆಯನ್ನು ತೆಗೆದುಕೊಂಡು ಯಜ್ಞವೇದಿಯ ಬೆಂಕಿಯಿಂದ ಅದನ್ನು ತುಂಬಿಸಿ ಭೂಮಿಗೆ ಬಿಸಾಡಿದನು. ಆಗ ವಾಣಿಗಳೂ ಗುಡುಗುಗಳೂ ಮಿಂಚುಗಳೂ ಭೂ ಕಂಪವೂ ಉಂಟಾದವು.
- Revelation 1:4 ಪ್ರಕಟನೆ 1:4ಯೋಹಾನನು ಆಸ್ಯದಲ್ಲಿರುವ ಏಳು ಸಭೆಗ ಳಿಗೆ--ಇರುವಾತನೂ ಇದ್ದಾತನೂ ಬರುವಾತನೂ ಆಗಿರುವಾತನಿಂದಲೂ ಆತನ ಸಿಂಹಾಸನದ ಮುಂದಿ ರುವ ಏಳು ಆತ್ಮಗಳಿಂದಲೂ ನಂಬತಕ್ಕ ಸಾಕ್ಷಿಯೂ ಸತ್ತವರೊಳಗಿಂದ ಮೊದಲು ಎದ್ದು ಬಂದಾತನೂ ಭೂರಾಜರ ಪ್ರಭುವೂ ಆಗಿರುವ ಯೇಸು ಕ್ರಿಸ್ತ ನಿಂದ
- Revelation 16:17–18 ಪ್ರಕಟನೆ 16:17–18ಏಳನೆಯ ದೂತನು ತನ್ನ ಪಾತ್ರೆಯಲ್ಲಿದ್ದದ್ದನ್ನು ವಾಯುಮಂಡಲದಲ್ಲಿ ಹೊಯ್ಯಲು ಪರಲೋಕದಲ್ಲಿದ್ದ ಆಲಯದೊಳಗಿಂದಲೂ ಸಿಂಹಾಸನದಿಂದಲೂ ಮಹಾಶಬ್ದವು ಬಂದು--ಮುಗಿಯಿತು ಎಂದು ಹೇಳಿತು. ಆಗ ವಾಣಿಗಳೂ ಗುಡುಗುಗಳೂ ಮಿಂಚುಗಳೂ ಉಂಟಾದವು; ಇದಲ್ಲದೆ ಮಹಾ ಭೂಕಂಪವುಂಟಾಯಿತು; ಮನುಷ್ಯರು ಭೂಮಿಯ ಮೇಲೆ ಇದ್ದಂದಿನಿಂದ ಅಂಥ ಬಲವಾದ ಮತ್ತು ದೊಡ್ಡ ದಾದ ಭೂಕಂಪವಾಗಿರಲಿಲ್ಲ.
- Revelation 5:6 ಪ್ರಕಟನೆ 5:6ನಾನು ನೋಡಲಾಗಿ ಇಗೋ, ಸಿಂಹಾಸ ನದ ಮತ್ತು ನಾಲ್ಕು ಜೀವಿಗಳ ಮಧ್ಯದಲ್ಲಿಯೂ ಹಿರಿಯರ ಮಧ್ಯದಲ್ಲಿಯೂ ಒಂದು ಕುರಿಮರಿಯು ವಧಿಸಲ್ಪಟ್ಟಂತೆ ನಿಂತಿರುವದನ್ನು ಕಂಡೆನು; ಅದಕ್ಕೆ ಏಳು ಕೊಂಬುಗಳೂ ಏಳು ಕಣ್ಣುಗಳೂ ಇದ್ದವು; ಅವು ಭೂಮಿಯ ಮೇಲೆಲ್ಲಾ ಕಳುಹಿಸಲ್ಪಟ್ಟಿರುವ ದೇವರ ಏಳು ಆತ್ಮ
- Revelation 3:1 ಪ್ರಕಟನೆ 3:1ಸಾರ್ದಿಸಿನಲ್ಲಿರುವ ಸಭೆಯ ದೂತನಿಗೆ ಬರೆ: ದೇವರ ಏಳು ಆತ್ಮಗಳೂ ಏಳೂ ನಕ್ಷತ್ರಗಳೂ ಉಳ್ಳಾತನು ಹೇಳುವಂಥವುಗಳೇನಂದರೆ, ನಿನ್ನ ಕ್ರಿಯೆಗಳನ್ನು ಅಂದರೆ ಜೀವಿಸುವವನು ಎಂದು ಹೆಸರು ನಿನಗಿದ್ದರೂ ಸತ್ತವನಾಗಿದ್ದೀ ಎಂದು ನಾನು ಬಲ್ಲೆನು.
- Exodus 19:16 ವಿಮೋಚನಕಾಂಡ 19:16ಮೂರನೆಯ ದಿನದಲ್ಲಿ ಉದಯವಾದಾಗ ಬೆಟ್ಟದ ಮೇಲೆ ಗುಡುಗುಗಳೂ ಮಿಂಚುಗಳೂ ಮಂದವಾದ ಮೇಘವೂ ಉಂಟಾಗಿ ಬಹು ಬಲವಾದ ತುತೂರಿಯ ಶಬ್ದವಾಯಿತು. ಪಾಳೆಯದಲ್ಲಿದ್ದ ಜನರೆಲ್ಲರೂ ನಡುಗಿ ದರು.
- Zechariah 4:2 ಜೆಕರ್ಯ 4:2ಒಬ್ಬನನ್ನು ನಿದ್ರೆಯಿಂದ ಎಬ್ಬಿಸುವಂತೆ ನನ್ನನ್ನು ಎಬ್ಬಿಸಿದನು. ಆಗ ಅವನು ನನಗೆ--ನೀನು ಏನು ನೋಡುತ್ತೀ ಅಂದನು. ಅದಕ್ಕೆ--ನಾನು ನೋಡಿದ್ದೇನೆ; ಇಗೋ, ಒಂದು ದೀಪಸ್ತಂಭವು, ಅದು ಎಲ್ಲಾ ಬಂಗಾರದ್ದೇ; ಅದರ ತಲೆಯ ಮೇಲೆ ಪಾತ್ರೆ ಉಂಟು; ಅದರ ಮೇಲೆ ಅದರ ಏಳು ದೀಪಗಳುಂಟು.
- Exodus 20:18 ವಿಮೋಚನಕಾಂಡ 20:18ಜನರೆಲ್ಲಾ ಗುಡುಗುಗಳನ್ನೂ ಮಿಂಚುಗಳನ್ನೂ ತುತೂರಿಯ ಶಬ್ದವನ್ನೂ ಬೆಟ್ಟವು ಹೊಗೆ ಹಾಯು ವದನ್ನೂ ನೋಡಿದರು; ಜನರು ಅದನ್ನು ನೋಡಿ ದೂರ ಹೋಗಿ ನಿಂತುಕೊಂಡರು.
- Joel 3:16 ಯೋವೇಲ 3:16ಕರ್ತನು ಚೀಯೋನಿನೊಳಗಿಂದ ಘರ್ಜಿಸಿ ಯೆರೂಸಲೇಮಿನೊಳಗಿಂದ ತನ್ನ ಶಬ್ದವನ್ನು ಕೊಡುವನು. ಆಕಾಶಗಳೂ ಭೂಮಿಯೂ ಕದಲು ವವು; ಆದರೆ ಕರ್ತನು ತನ್ನ ಜನರಿಗೆ ನಿರೀಕ್ಷೆಯೂ ಇಸ್ರಾಯೇಲನ ಮಕ್ಕಳಿಗೆ ಬಲವೂ ಆಗಿರುವನು.
- Psalm 18:13–14 ಕೀರ್ತನೆಗಳು 18:13–14ಕರ್ತನು ಆಕಾಶಗಳಲ್ಲಿ ಗುಡುಗಿದನು; ಮಹೋನ್ನತನು ಕಲ್ಮಳೆಯಿಂದಲೂ ಉರಿಗೆಂಡಗಳಿಂದಲೂ ತನ್ನ ಶಬ್ದವನ್ನು ಕೊಟ್ಟನು ಹೌದು, ತನ್ನ ಬಾಣಗಳನ್ನು ಕಳುಹಿಸಿ ಅವರನ್ನು ಚದುರಿಸಿದನು; ಮಿಂಚುಗಳನ್ನೆಸೆದು ಅವರನ್ನು ಗಲಿಬಿಲಿ ಮಾಡಿದನು.
- Hebrews 12:18–29 ಇಬ್ರಿಯರಿಗೆ 12:18–29ಮುಟ್ಟಬಹುದಾದ ಮತ್ತು ಬೆಂಕಿ ಹತ್ತಿದಂಥ ಬೆಟ್ಟಕ್ಕೂ ಮೊಬ್ಬಿಗೂ ಕತ್ತಲೆಗೂ ಬಿರುಗಾಳಿಗೂ ತುತೂರಿಯ ಧ್ವನಿಗೂ ಮಾತುಗಳ ಶಬ್ದಕ್ಕೂ ಬಂದವರಲ್ಲ. ಆ ಶಬ್ದವನ್ನು ಕೇಳಿದವರು ತಮಗೆ ಇನ್ನು ಒಂದು ಮಾತನ್ನಾದರೂ ಹೇಳಬಾರದೆಂದು ಬೇಡಿಕೊಂಡರು; (ಯಾಕಂದರೆ ಯಾವ ಮೃಗವಾ ದರೂ ಬೆಟ್ಟವನ್ನು ಮುಟ್ಟಿದರೆ ಅದನ್ನು ಕಲ್ಲೆಸೆದು ಕೊಲ್ಲ ಬೇಕು, ಇಲ್ಲವೆ ಈಟಿಯಿಂದ ತಿವಿಯಬೇಕೆಂದು ಅವರು ಆಜ್ಞಾಪಿಸಿದ್ದನ್ನು ತಾಳಲಾರದೆ ಇದ್ದರು. ಇದಲ್ಲದೆ ಅಲ್ಲಿ ತೋರಿದ್ದು ಅಷ್ಟು ಭಯಂಕರವಾಗಿದ್ದದರಿಂದ ಮೋಶೆಯು--ನನಗೆ ಬಹು ಭಯವಾಗುತ್ತದೆ, ನಡು ಗುತ್ತೇನೆ ಎಂದು ಹೇಳಿದನು). ಆದರೆ ನೀವು ಚೀಯೋನ್ ಪರ್ವತಕ್ಕೂ ಜೀವಸ್ವರೂಪನಾದ ದೇವರ ಪಟ್ಟಣವಾಗಿರುವ ಪರಲೋಕದ ಯೆರೂಸಲೇಮಿಗೂ ಎಣಿಸಲಸಾಧ್ಯವಾದ ದೂತ ಗಣಗಳ ಬಳಿಗೂ ಪರ ಲೋಕದಲ್ಲಿ ಹೆಸರು ಬರೆಸಿಕೊಂಡಿರುವ ಸಾರ್ವತ್ರಿಕ ಸಂಘಕ್ಕೂ ಚೊಚ್ಚಲ ಮಕ್ಕಳ ಸಭೆಗೂ ಎಲ್ಲರಿಗೆ ನ್ಯಾಯಾ ಧಿಪತಿಯಾಗಿರುವ ದೇವರ ಬಳಿಗೂ ಸಿದ್ದಿಗೆ ಬಂದಿರುವ ನೀತಿವಂತರ ಆತ್ಮಗಳ ಬಳಿಗೂ ಹೊಸಒಡಂಬಡಿಕೆಗೆ ಮಧ್ಯಸ್ಥನಾಗಿರುವ ಯೇಸುವಿನ ಬಳಿಗೂ ಹೇಬೆಲನ ರಕ್ತಕ್ಕಿಂತ ಹಿತಕರವಾಗಿ ಮಾತನಾಡುವ ಪ್ರೋಕ್ಷಣ ರಕ್ತದ ಬಳಿಗೂ ಬಂದಿದ್ದೀರಿ. ನೀವು ಮಾತನಾಡು ತ್ತಿರುವಾತನನ್ನು ಅಸಡ್ಡೆ ಮಾಡದಂತೆ ನೋಡಿಕೊಳ್ಳಿರಿ. ಯಾಕಂದರೆ ಭೂಮಿಯ ಮೇಲೆ ಮಾತನಾಡಿದವನನ್ನು ಅಸಡ್ಡೆ ಮಾಡಿದ್ದಕ್ಕೆ ಅವರು ತಪ್ಪಿಸಿಕೊಳ್ಳದಿದ್ದರೆ ಪರ ಲೋಕದಿಂದ ಮಾತನಾಡುವಾತನಿಂದ ನಾವು ತೊಲಗಿ ದರೆ ಎಷ್ಟೋ ಹೆಚ್ಚಾಗಿ ನಾವು ತಪ್ಪಿಸಿಕೊಳ್ಳಲಾರೆವು. ಆತನ ಧ್ವನಿಯು ಆಗ ಭೂಮಿಯನ್ನು ಕದಲಿಸಿತು; ಈಗಲಾದರೋ ಆತನು--ಇನ್ನೊಂದೇ ಸಾರಿ ನಾನು ಭೂಮಿಯನ್ನು ಮಾತ್ರವಲ್ಲದೆ ಪರಲೋಕವನ್ನೂ ಕದಲಿಸುತ್ತೇನೆಂದು ವಾಗ್ದಾನ ಮಾಡಿ ಹೇಳಿದ್ದಾನೆ. ಇದಲ್ಲದೆ ಇನ್ನೊಂದೇ ಸಾರಿ ಎಂಬ ಮಾತು ಕದಲಿ ಸಿರುವ ವಸ್ತುಗಳು ನಿರ್ಮಿತವಾದವುಗಳಾದದರಿಂದ ತೆಗೆದುಹಾಕಲ್ಪಡ ಬೇಕೆಂಬದನ್ನು ಸೂಚಿಸುತ್ತದೆ; ಆಗ ಕದಲಿಸದೆ ಇರುವ ವಸ್ತುಗಳು ಸ್ಥಿರವಾಗಿ ನಿಲ್ಲುವವು. ಆದಕಾರಣ ಯಾರೂ ಕದಲಿಸಲಾರದ ರಾಜ್ಯವನ್ನು ಪಡೆಯುವವರಾದ ನಾವು ವಿನಯದಿಂದಲೂ ದೇವರ ಭಯದಿಂದಲೂ ದೇವರನ್ನು ಯೋಗ್ಯವಾಗಿ ಸೇವಿಸು ವಂತೆ ಕೃಪೆಯನ್ನು ಹೊಂದಿಕೊಳ್ಳೋಣ.ಯಾಕಂದರೆ ನಮ್ಮ ದೇವರು ದಹಿಸುವ ಅಗ್ನಿಯಾಗಿದ್ದಾನೆ. ಯಾಕಂದರೆ ನಮ್ಮ ದೇವರು ದಹಿಸುವ ಅಗ್ನಿಯಾಗಿದ್ದಾನೆ.
Original words (Greek)
- And · G2532καί kaí
- of · G1537ἐκ ek
- throne · G2362θρόνος thrónos
- proceeded · G1607ἐκπορεύομαι ekporeúomai
- lightnings · G796ἀστραπή astrapḗ
- and · G2532καί kaí
- thunderings · G1027βροντή brontḗ
- and · G2532καί kaí
- voices · G5456φωνή phōnḗ
- and · G2532καί kaí
- seven · G2033ἑπτά heptá
- lamps · G2985λαμπάς lampás
- fire · G4442πῦρ pŷr
- burning · G2545καίω kaíō
- before · G1799ἐνώπιον enṓpion
- throne · G2362θρόνος thrónos
- which · G3739ὅς hós
- are · G1526εἰσί eisí
- seven · G2033ἑπτά heptá
- Spirits · G4151πνεῦμα pneûma
- God · G2316θεός theós