Revelation · chapter 6 · verse 17
Revelation 6:17 in Kannada
ಆತನ ಕೋಪದ ಮಹಾದಿನ ಬಂದದೆ; ಅದರ ಮುಂದೆ ನಿಲ್ಲುವದಕ್ಕೆ ಯಾರು ಶಕ್ತರು ಎಂದು ಹೇಳಿದರು.
Aatana kopada mahaadina bandade; adara munde nilluvadakke yaaru shaktaru endu helidaru.
Revelation 6:17 in English
- King James Version (KJV)
- For the great day of his wrath is come; and who shall be able to stand?
- World English Bible (WEB)
- for the great day of his wrath has come, and who is able to stand?”
- American Standard Version (ASV)
- for the great day of their wrath is come; and who is able to stand?
- Bible in Basic English (BBE)
- For the great day of their wrath is come, and who may keep his place?
- Darby Translation (DBY)
- because the great day of his wrath is come, and who is able to stand?
- Webster's Bible (WBS)
- For the great day of his wrath is come; and who will be able to stand?
- Young's Literal Translation (YLT)
- because come did the great day of His anger, and who is able to stand?
Read in context
- 15ಭೂರಾಜರೂ ದೊಡ್ಡ ವರೂ ಐಶ್ವರ್ಯವಂತರೂ ಮುಖ್ಯಾಧಿಪತಿಗಳೂ ಪರಾ ಕ್ರಮಶಾಲಿಗಳೂ ಎಲ್ಲಾ ದಾಸರೂ ಸ್ವತಂತ್ರರೂ ಗವಿ ಗಳಲ್ಲಿಯೂ ಬೆಟ್ಟಗಳ ಬಂಡೆಗಳಲ್ಲಿಯೂ ಅಡಗಿ ಕೊಂಡು
- 16ಪರ್ವತಗಳಿಗೂ ಬಂಡೆಗಳಿಗೂ--ನಮ್ಮ ಮೇಲೆ ಬೀಳಿರಿ, ಸಿಂಹಾಸನದ ಮೇಲೆ ಕೂತಿದ್ದಾತನ ಮುಖಕ್ಕೂ ಕುರಿಮರಿಯಾದಾತನ ಕೋಪಕ್ಕೂ ನಮ್ಮನ್ನು ಮರೆಮಾಡಿರಿ;ಆತನ ಕೋಪದ ಮಹಾದಿನ ಬಂದದೆ; ಅದರ ಮುಂದೆ ನಿಲ್ಲುವದಕ್ಕೆ ಯಾರು ಶಕ್ತರು ಎಂದು ಹೇಳಿದರು.
- 17ಆತನ ಕೋಪದ ಮಹಾದಿನ ಬಂದದೆ; ಅದರ ಮುಂದೆ ನಿಲ್ಲುವದಕ್ಕೆ ಯಾರು ಶಕ್ತರು ಎಂದು ಹೇಳಿದರು.
Cross references
- Psalm 76:7 ಕೀರ್ತನೆಗಳು 76:7ನೀನು, ನೀನೇ, ಭಯಹುಟ್ಟಿಸುತ್ತೀ; ನೀನು ಒಂದು ಸಾರಿ ಕೋಪಿಸಿಕೊಂಡರೆ ನಿನ್ನ ಮುಂದೆ ನಿಲ್ಲುವವನಾರು?
- Malachi 3:2 ಮಲಾಕಿಯ 3:2ಆದರೆ ಆತನ ಬರುವಿಕೆಯ ದಿವಸದಲ್ಲಿ ಯಾರು ಉಳಿದಾರು? ಆತನು ಪ್ರತ್ಯಕ್ಷವಾಗುವಾಗ ಯಾರು ನಿಲ್ಲುವರು? ಆತನು ಅಕ್ಕಸಾಲಿಗನ ಬೆಂಕಿಯ ಹಾಗೆಯೂ ಅಗಸನ ಚೌಳಿನ ಹಾಗೆಯೂ ಇದ್ದಾನೆ.
- Joel 2:11 ಯೋವೇಲ 2:11ಕರ್ತನು ತನ್ನ ಸೈನ್ಯದ ಮುಂದೆ ತನ್ನ ಶಬ್ದವನ್ನು ಮಾಡುತ್ತಾನೆ; ಆತನ ದಂಡು ಬಹು ದೊಡ್ಡದಾಗಿದೆ; ಹೌದು, ಬಲವಾದ ದ್ದಾಗಿದ್ದು ಆತನ ವಾಕ್ಯವನ್ನು ನಡಿಸುತ್ತದೆ; ಕರ್ತನ ದಿನವು ದೊಡ್ಡದು, ಮಹಾ ಭಯಂಕರವಾದದ್ದು, ಅದನ್ನು ತಾಳಿಕೊಳ್ಳುವವನ್ಯಾರು?
- Joel 2:31 ಯೋವೇಲ 2:31ಕರ್ತನ ದೊಡ್ಡ ಭಯಂಕರವಾದ ದಿನವು ಬರುವದಕ್ಕಿಂತ ಮುಂಚೆ, ಸೂರ್ಯನು ಕತ್ತಲೆಗೂ ಚಂದ್ರನು ರಕ್ತಕ್ಕೂ ಮಾರ್ಪಡುವವು.ಆಗುವದೇನಂದರೆ--ಕರ್ತನ ಹೆಸರನ್ನು ಹೇಳಿ ಕೊಳ್ಳುವವರೆಲ್ಲರೂ ರಕ್ಷಿಸಲ್ಪಡುವರು; ಚೀಯೋನ್ ಪರ್ವತದಲ್ಲಿಯೂ ಯೆರೂಸಲೇಮಿನಲ್ಲಿಯೂ ಕರ್ತನು ಕರೆಯುವ ಉಳಿದವರಲ್ಲಿಯೂ ಕರ್ತನು ಹೇಳಿದ ಪ್ರಕಾರ ಬಿಡುಗಡೆಯು ಇರುವದು.
- Jeremiah 30:7 ಯೆರೆಮೀಯ 30:7ಅಯ್ಯೋ, ಆ ದಿನವು ಭಯಂಕರವಾದದ್ದು; ಅದರಂಥದ್ದು ಯಾವದೂ ಇಲ್ಲ; ಅದು ಯಾಕೋಬನಿಗೆ ಇಕ್ಕಟ್ಟಿನ ಕಾಲವೇ; ಆದಾಗ್ಯೂ ಅವನು ಅದರಿಂದ ರಕ್ಷಿಸಲ್ಪಡುವನು.
- Revelation 16:14 ಪ್ರಕಟನೆ 16:14ಅವು ಮಹತ್ಕಾರ್ಯಗಳನ್ನು ಮಾಡುವ ದೆವ್ವಗಳ ಆತ್ಮಗಳೇ; ಸರ್ವಶಕ್ತನಾದ ದೇವರ ಮಹಾ ದಿನದಲ್ಲಾಗುವ ಯುದ್ಧಕ್ಕೆ ಭೂಲೋಕದ ಮತ್ತು ಪ್ರಪಂಚದ ಎಲ್ಲಾ ರಾಜರನ್ನು ಕೂಡಿಸುವದಕ್ಕಾಗಿ ಅವರ ಬಳಿಗೆ ಹೋಗುವವು.
- Zephaniah 1:14–18 ಚೆಫನ್ಯ 1:14–18ಕರ್ತನ ಮಹಾದಿನವು ಸವಿಾಪವಾಗಿದೆ, ಅದು ಬಹು ತ್ವರೆಪಡುತ್ತದೆ; ಕರ್ತನ ದಿನದ ಶಬ್ದವು ತ್ವರೆ ಪಡುತ್ತದೆ; ಶೂರನು ಅಲ್ಲಿ ಘೋರವಾಗಿ ಗೋಳಿಡು ವನು. ಆ ದಿನವು ರೌದ್ರದ ದಿನವು, ಇಕ್ಕಟ್ಟು ಸಂಕಟಗಳ ದಿನವು, ಹಾಳು ಪಾಳುಗಳ ದಿನವು, ಕತ್ತಲೆ ಮೊಬ್ಬುಗಳ ದಿನವು, ಮೇಘ ಮೋಡಗಳ ದಿನವು. ಅದರ ಕೋಟೆಯುಳ್ಳ ಪಟ್ಟಣಗಳಿಗೆ ವಿರೋಧವಾಗಿಯೂ ಉನ್ನತವಾದ ಗೋಪುರಗಳಿಗೆ ವಿರೋಧವಾಗಿಯೂ ತುತೂರಿ ಅರ್ಭಟಗಳ ದಿನವು. ಆಗ ನಾನು ಮನುಷ್ಯರ ಮೇಲೆ ಇಕ್ಕಟ್ಟು ತರಿಸುವೆನು; ಅವರು ಕುರುಡರ ಹಾಗೆ ನಡೆಯುವರು; ಕರ್ತನಿಗೆ ವಿರೋಧವಾಗಿ ಅವರು ಪಾಪಮಾಡಿದ್ದಾರೆ; ಅವರ ರಕ್ತವು ದೂಳಿನಂತೆಯೂ ಅವರ ಮಾಂಸವು ಗೊಬ್ಬರ ದಂತೆಯೂ ಸುರಿಯಲ್ಪಡುವದು.ಕರ್ತನ ರೌದ್ರದ ದಿನದಲ್ಲಿ ಅವರ ಬೆಳ್ಳಿಯಾದರೂ ಅವರ ಬಂಗಾರ ವಾದರೂ ಅವರನ್ನು ತಪ್ಪಿಸಲಾರವು; ಆತನ ಕೋಪದ ಬೆಂಕಿಯು ದೇಶವನ್ನೆಲ್ಲಾ ನುಂಗುವದು. ಕರ್ತನ ರೌದ್ರದ ದಿನದಲ್ಲಿ ಅವರ ಬೆಳ್ಳಿಯಾದರೂ ಅವರ ಬಂಗಾರ ವಾದರೂ ಅವರನ್ನು ತಪ್ಪಿಸಲಾರವು; ಆತನ ಕೋಪದ ಬೆಂಕಿಯು ದೇಶವನ್ನೆಲ್ಲಾ ನುಂಗುವದು.
- Isaiah 13:6–22 ಯೆಶಾಯ 13:6–22ನೀವು ಗೋಳಾ ಡಿರಿ, ಕರ್ತನ ದಿನವು ಸವಿಾಪವಾಯಿತು; ಅದು ಸರ್ವಶಕ್ತನಿಂದ ನಾಶನದಂತೆ ಬರುವದು. ಆದ ಕಾರಣ ಎಲ್ಲಾ ಕೈಗಳು ಜೋಲು ಬೀಳುವವು ಪ್ರತಿ ಯೊಬ್ಬನ ಹೃದಯವು ಕರಗುವದು. ಅವರು ಭಯ ಪಡುವರು; ನೋವು ಮತ್ತು ಬೇನೆಗಳು ಅವರನ್ನು ಆವರಿಸಿಕೊಳ್ಳುವವು; ಹೆರುವ ಹೆಂಗಸಿನಂತೆ ಸಂಕಟ ಪಡುವರು; ಅವರು ಒಬ್ಬರಿಗೊಬ್ಬರು ಭ್ರಮೆಪಡು ವರು; ಅವರ ಮುಖಗಳು ಜ್ವಾಲೆಯಂತಿರುವವು. ಇಗೋ, ಕರ್ತನ ದಿನವು ಬರುತ್ತದೆ, ಭೂಮಿಯನ್ನು ಹಾಳುಮಾಡುವದಕ್ಕೂ ಅಲ್ಲಿಂದ ಪಾಪಿಗಳನ್ನು ನಿರ್ಮೂಲಮಾಡುವದಕ್ಕೂ ಅದು ಕೋಪೋದ್ರೇಕ ದಿಂದಲೂ ತೀಕ್ಷ್ಣ ರೋಷದಿಂದಲೂ ಕ್ರೂರವಾಗಿರು ವದು. ಆಕಾಶದ ನಕ್ಷತ್ರಗಳು ಅದರ ರಾಶಿಗಳು ತಮ್ಮ ಬೆಳಕನ್ನು ಕೊಡುವುದಿಲ್ಲ; ಸೂರ್ಯನು ಮೂಡಿ ಹೋಗುತ್ತಿರುವಾಗಲೇ ಕತ್ತಲಾಗುವನು. ಚಂದ್ರನು ತನ್ನ ಬೆಳಕನ್ನು ಕೊಡುವದಿಲ್ಲ. ಅವರ ಕೆಟ್ಟವುಗಳಿಗೋಸ್ಕರವೂ ದುಷ್ಟರ ಅಪ ರಾಧಗಳಿಗೋಸ್ಕರವೂ ನಾನು ಲೋಕವನ್ನು ಶಿಕ್ಷಿಸು ವೆನು; ಗರ್ವಿಷ್ಟರ ಅಹಂಕಾರವನ್ನು ನಿಲ್ಲಿಸಿಬಿಡುವೆನು, ಭಯಂಕರವಾದ ಹೆಮ್ಮೆಯನ್ನು ತಗ್ಗಿಸುವೆನು. ನಾನು ಮನುಷ್ಯನನ್ನು ಚೊಕ್ಕ ಬಂಗಾರಕ್ಕಿಂತಲೂ ಇಲ್ಲವೆ ಒಫೀರಿನ ಬಂಗಾರಕ್ಕಿಂತಲೂ ಅಮೂಲ್ಯನನ್ನಾಗಿ ಮಾಡುವೆನು. ಆದದರಿಂದ ಸೈನ್ಯಗಳ ಕರ್ತನ ಉಗ್ರದಲ್ಲಿಯೂ ಆತನ ಕೋಪೋದ್ರೇಕದ ದಿನ ದಲ್ಲಿಯೂ ನಾನು ಆಕಾಶಗಳನ್ನು ನಡುಗಿಸುವೆನು, ಭೂಮಿಯನ್ನು ಅದರ ಸ್ಥಳದಿಂದ ತೆಗೆದುಬಿಡುವೆನು. ಅದು ಅಟ್ಟಿದ ಜಿಂಕೆಯಂತೆಯೂ ಯಾರೂ ಕೂಡಿ ಸದ ಕುರಿಗಳಂತೆಯೂ ಇರುವದು. ಅವರಲ್ಲಿ ಪ್ರತಿಯೊ ಬ್ಬನೂ ತನ್ನ ಜನರ ಕಡೆಗೆ ತಿರುಗಿಕೊಳ್ಳುವನು ಪ್ರತಿಯೊ ಬ್ಬನೂ ತನ್ನ ಸ್ವದೇಶಕ್ಕೆ ಓಡಿಹೋಗುವನು. ಸಿಕ್ಕಿದ ಪ್ರತಿಯೊಬ್ಬನೂ ಇರಿಯಲ್ಪಡುವನು; ಅವರೊಂದಿಗೆ ಸೇರಿಕೊಂಡ ಪ್ರತಿಯೊಬ್ಬನೂ ಕತ್ತಿಯಿಂದ ಬೀಳು ವನು. ಅವರ ಮಕ್ಕಳೂ ಅವರ ಕಣ್ಣೆದುರಿಗೆ ತುಂಡು ತುಂಡಾಗುವಂತೆ ಅಪ್ಪಳಿಸಲ್ಪಡುವರು; ಅವರ ಮನೆ ಗಳು ಸೂರೆಯಾಗುವವು; ಅವರ ಪತ್ನಿಯರು ಕೆಡಿ ಸಲ್ಪಡುವರು. ಇಗೋ, ಬೆಳ್ಳಿಯನ್ನು ಲಕ್ಷಿಸದೆ ಬಂಗಾರದಲ್ಲಿ ಆನಂದಿಸದೆ ಇರುವ ಮೇದ್ಯರನ್ನು ಅವರಿಗೆ ವಿರೋಧ ವಾಗಿ ನಾನು ಎಬ್ಬಿಸುವೆನು. ಅವರ ಬಿಲ್ಲುಗಳು ಸಹ ಯುವಕರನ್ನು ಹೊಡೆದು ತುಂಡುತುಂಡು ಮಾಡುವವು; ಇವರು ಗರ್ಭಫಲವನ್ನು ಕರುಣಿಸರು, ಇವರ ಕಣ್ಣುಗಳು ಮಕ್ಕಳನ್ನೂ ಉಳಿಸುವದಿಲ್ಲ. ರಾಜ್ಯಗಳ ಘನತೆಯೂ ಕಸ್ದೀಯರ ಶ್ರೇಷ್ಠವಾದ ಸೌಂದರ್ಯವೂ ಆದ ಬಾಬೆಲಿಗೆ ದೇವರು ಸೊದೋ ಮ್ ಗೊಮೋರಗಳನ್ನು ಕೆಡವಿಬಿಟ್ಟಂತೆ ಇದನ್ನು ಸಹ ಕೆಡವಿಬಿಡುವನು. ಅದು ಎಂದಿಗೂ ನಿವಾಸ ಸ್ಥಳ ವಾಗದು, ಇಲ್ಲವೆ ತಲತಲಾಂತರಕ್ಕೂ ಅಲ್ಲಿ ಯಾರೂ ವಾಸಿಸರು; ಇಲ್ಲವೆ ಯಾವ ಅರಬಿಯನೂ ಗುಡಾರ ಹಾಕನು; ಅಥವಾ ಕುರುಬರು ಮಂದೆಯನ್ನು ತಂಗಿಸರು. ಆದರೆ ಮರುಭೂಮಿಯ ಕಾಡುಮೃಗಗಳು ಅಲ್ಲಿ ಮಲಗುವವು; ಅವರ ಮನೆಗಳು ವ್ಯೆಥೆಯಿಂದ ತುಂಬಿರುವವು; ಅಲ್ಲಿ ಗೂಬೆಗಳು ವಾಸಿಸುವವು, ದೆವ್ವಗಳು ಕುಣಿದಾಡುವವು.ಅವರ ಹಾಳಾದ ಮನೆಗಳಲ್ಲಿ ದ್ವೀಪಗಳ ಕಾಡುಮೃಗಗಳು ಕೂಗುವವು; ಅವರ ಮೆಚ್ಚಿಕೆಯಾದ ಅರಮನೆಗಳಲ್ಲಿ ಸರ್ಪಗಳು ವಾಸಿಸುವವು; ಅವಳ ಕಾಲವು ಸವಿಾಪಿಸಿತು, ಇನ್ನು ಅವಳ ದಿನಗಳು ಮುಂದುವರಿಯವು. ಅವರ ಹಾಳಾದ ಮನೆಗಳಲ್ಲಿ ದ್ವೀಪಗಳ ಕಾಡುಮೃಗಗಳು ಕೂಗುವವು; ಅವರ ಮೆಚ್ಚಿಕೆಯಾದ ಅರಮನೆಗಳಲ್ಲಿ ಸರ್ಪಗಳು ವಾಸಿಸುವವು; ಅವಳ ಕಾಲವು ಸವಿಾಪಿಸಿತು, ಇನ್ನು ಅವಳ ದಿನಗಳು ಮುಂದುವರಿಯವು.
- Romans 2:5 ರೋಮಾಪುರದವರಿಗೆ 2:5ಹೀಗೆ ನಿನ್ನ ಕಾಠಿಣ್ಯತೆ ಮತ್ತು ಪಶ್ಚಾತ್ತಾಪವಿಲ್ಲದ ಹೃದಯದಿಂದ ಉಗ್ರತೆಯ ದಿನಕ್ಕಾಗಿಯೂ ದೇವರ ನೀತಿಯುಳ್ಳ ನ್ಯಾಯತೀರ್ವಿಕೆಯ ಪ್ರತ್ಯಕ್ಷತೆಗಾಗಿಯೂ ದೇವರ ಕೋಪವನ್ನು ನಿನಗೋಸ್ಕರ ಕೂಡಿಸಿಟ್ಟುಕೊಳ್ಳುತ್ತಾ ಇದ್ಧೀ.
- Psalm 130:3–4 ಕೀರ್ತನೆಗಳು 130:3–4ಕರ್ತನೇ, ನೀನು ಅಕ್ರಮಗಳ ಮೇಲೆ ಕಣ್ಣಿಟ್ಟರೆ ಓ ಕರ್ತನೇ, ಯಾರು ನಿಲ್ಲುವರು? ಆದರೆ ಜನರು ನಿನಗೆ ಭಯಪಡುವ ಹಾಗೆ ನಿನ್ನಲ್ಲಿ ಕ್ಷಮಾಪಣೆ ಉಂಟು.
- Luke 21:36 ಲೂಕನು 21:36ಆದಕಾರಣ ಸಂಭವಿಸುವದಕ್ಕಿರುವ ಇವೆಲ್ಲವುಗಳಿಂದ ನೀವು ತಪ್ಪಿಸಿಕೊಳ್ಳುವದಕ್ಕೆ ಯೋಗ್ಯರೆಂದು ಎಣಿಸಲ್ಪಡು ವಂತೆಯೂ ಮನುಷ್ಯಕುಮಾರನ ಮುಂದೆ ನಿಂತು ಕೊಳ್ಳುವಂತೆಯೂ ಎಚ್ಚರವಾಗಿದ್ದು ಯಾವಾಗಲೂ ಪ್ರಾರ್ಥಿಸುತ್ತಾ ಇರ್ರಿ ಅಂದನು.
- Jude 1:6 ಯೂದನು 1:6ತಮ್ಮ ಮೊದಲಿನ ಸ್ಥಿತಿಯನ್ನು ಕಾಪಾಡದೆ ತಮ್ಮ ಸ್ವಂತ ವಾಸಸ್ಥಾನವನ್ನು ಬಿಟ್ಟ ದೂತರಿಗೆ ಆತನು ನಿತ್ಯವಾದ ಬೇಡಿಗಳನ್ನು ಹಾಕಿ ಮಹಾ ದಿನದ ತೀರ್ಪಿಗಾಗಿ ಅವರನ್ನು ಕತ್ತಲೆ ಯೊಳಗೆ ಕಾದಿಟ್ಟಿದ್ದಾನೆ.