Skip to content
ThuthiThuthiThuthi
Romans · chapter 1 of 16 · 32 verses

Romans 1 in Kannada

ರೋಮಾಪುರದವರಿಗೆ 1

  1. ಪೌಲನೆಂಬ ನಾನು ಯೇಸು ಕ್ರಿಸ್ತನ ದಾಸನೂ ಅಪೊಸ್ತಲನಾಗಿರುವದಕ್ಕೆ ಕರೆ ಯಲ್ಪಟ್ಟು ದೇವರ ಸುವಾರ್ತೆಗೋಸ್ಕರ ಪ್ರತ್ಯೇಕಿಸ ಲ್ಪಟ್ಟವನೂ ಆಗಿದ್ದೇನೆ.

    Paul, a servant of Jesus Christ, called [to be] an apostle, separated unto the gospel of God,

  2. (ಆ ಸುವಾರ್ತೆಯನ್ನು ಆತನು ಮುಂಚಿತವಾಗಿ ಪರಿಶುದ್ಧ ಬರಹಗಳಲ್ಲಿ ತನ್ನ ಪ್ರವಾದಿ ಗಳ ಮುಖಾಂತರ ವಾಗ್ದಾನ ಮಾಡಿದ್ದನು).

    (Which he had promised afore by his prophets in the holy scriptures,)

  3. ಅದು ಯಾವದೆಂದರೆ, ಆತನು ಶಾರೀರಕವಾಗಿ ದಾವೀದನ ಸಂತಾನದಲ್ಲಿ ಹುಟ್ಟಿದಾತನೂ ನಮ್ಮ ಕರ್ತನೂ ಆಗಿರುವ ದೇವರಕುಮಾರನಾದ ಯೇಸು ಕ್ರಿಸ್ತನ ವಿಷಯವಾ ದದ್ದೇ;

    Concerning his Son Jesus Christ our Lord, which was made of the seed of David according to the flesh;

  4. ಪರಿಶುದ್ಧ ಆತ್ಮಕ್ಕನು ಸಾರವಾಗಿ ಸತ್ತವರೊಳ ಗಿಂದ ಪುನರುತ್ಥಾನ ಹೊಂದುವದರ ಮೂಲಕ ಆತನು ದೇವಕುಮಾರನೆಂದು ಬಲದೊಂದಿಗೆ ಪ್ರಕಟಿಸಲ್ಪ ಟ್ಟನು;

    And declared [to be] the Son of God with power, according to the spirit of holiness, by the resurrection from the dead:

  5. ಆತನ ಹೆಸರಿಗಾಗಿ ಎಲ್ಲಾ ಜನಾಂಗಗಳವರು ನಂಬಿಕೆಗೆ ವಿಧೇಯರಾಗುವಂತೆ ಆತನಿಂದ ನಾವು ಕೃಪೆಯನ್ನೂ ಅಪೊಸ್ತಲತನವನ್ನೂ ಹೊಂದಿದ್ದೇವೆ.

    By whom we have received grace and apostleship, for obedience to the faith among all nations, for his name:

  6. ಅವರೊಳಗೆ ನೀವು ಸಹ ಯೇಸು ಕ್ರಿಸ್ತನವರಾಗಿರುವ ದಕ್ಕಾಗಿ ಕರೆಯಲ್ಪಟ್ಟಿದ್ದೀರಿ.

    Among whom are ye also the called of Jesus Christ:

  7. ಇದಲ್ಲದೆ ದೇವರಿಗೆ ಪ್ರಿಯ ರಾಗಿದ್ದು ಪರಿಶುದ್ಧರಾಗುವದಕ್ಕೆ ಕರೆಯಲ್ಪಟ್ಟ ರೋಮ್‌ ನಲ್ಲಿರುವವರೆಲ್ಲರಿಗೆ ನಮ್ಮ ತಂದೆಯಾದ ದೇವ ರಿಂದಲೂ ಕರ್ತನಾದ ಯೇಸು ಕ್ರಿಸ್ತನಿಂದಲೂ ನಿಮಗೆ ಕೃಪೆಯೂ ಸಮಾಧಾನವೂ ಉಂಟಾಗಲಿ.

    To all that be in Rome, beloved of God, called [to be] saints: Grace to you and peace from God our Father, and the Lord Jesus Christ.

  8. ಮೊದಲನೆಯದಾಗಿ ನಿಮ್ಮ ನಂಬಿಕೆಯು ಲೋಕ ದಲ್ಲೆಲ್ಲಾ ಪ್ರಸಿದ್ಧವಾದದರಿಂದ ನಿಮ್ಮೆಲ್ಲರ ವಿಷಯವಾಗಿ ಯೇಸು ಕ್ರಿಸ್ತನ ಮುಖಾಂತರ ನಾನು ನನ್ನ ದೇವರಿಗೆ ಸ್ತೋತ್ರಸಲ್ಲಿಸುತ್ತೇನೆ.

    First, I thank my God through Jesus Christ for you all, that your faith is spoken of throughout the whole world.

  9. ನಾನು ಯಾವಾಗಲೂ ಪ್ರಾರ್ಥನೆಗಳಲ್ಲಿ ಎಡೆಬಿಡದೆ ನಿಮ್ಮನ್ನು ಜ್ಞಾಪಕ ಮಾಡಿ ಕೊಳ್ಳುತ್ತೇನೆ. ನಾನು ಯಾವಾತನ ಮಗನ ಸುವಾರ್ತೆ ಯಲ್ಲಿ ನನ್ನ ಆತ್ಮದೊಂದಿಗೆ ಸೇವಿಸುತ್ತೇನೋ ಆ ದೇವರೇ ಇದಕ್ಕೆ ನನ್ನ ಸಾಕ್ಷಿ.

    For God is my witness, whom I serve with my spirit in the gospel of his Son, that without ceasing I make mention of you always in my prayers;

  10. ಕೊನೆಯದಾಗಿ ನಾನು ನಿಮ್ಮ ಬಳಿಗೆ ಹೇಗಾದರೂ ಬರುವದಕ್ಕೆ ದೇವರ ಚಿತ್ತದಿಂದ ನನ್ನ ಪ್ರಯಾಣವು ಸಫಲವಾಗುವಂತೆ ಬೇಡಿಕೊಳ್ಳುತ್ತೇನೆ.

    Making request, if by any means now at length I might have a prosperous journey by the will of God to come unto you.

  11. ನೀವು ಸ್ಥಿರಗೊಳ್ಳುವಂತೆ ನನ್ನ ಮುಖಾಂತರ ನಿಮಗೆ ಯಾವದಾದರೂ ಆತ್ಮೀಕದಾನ ದೊರೆಯಲಿ ಎಂದು ನಾನು ನಿಮ್ಮನ್ನು ನೋಡಲು ಹಂಬಲಿಸುತ್ತೇನೆ.

    For I long to see you, that I may impart unto you some spiritual gift, to the end ye may be established;

  12. ಹೀಗೆ ಪರಸ್ಪರ ನಂಬಿಕೆಯ ಮೂಲಕ ನಾನು ನಿಮ್ಮೊಂ ದಿಗೆ ಆದರಿಸಲ್ಪಡುವೆನು.

    That is, that I may be comforted together with you by the mutual faith both of you and me.

  13. ಇದಲ್ಲದೆ ಸಹೋದರರೇ, ಬೇರೆ ಅನ್ಯಜನಗಳಲ್ಲಿ ಫಲವುಂಟಾ ದಂತೆ ನಿಮ್ಮಲ್ಲಿಯೂ ನನಗೆ ಯಾವದಾದರೂ ಫಲ ದೊರೆಯಲೆಂದು ನಿಮ್ಮ ಬಳಿಗೆ ಬರುವದಕ್ಕೆ ನಾನು ಅನೇಕಸಾರಿ ಉದ್ದೇಶಿಸಿ ದಾಗ್ಯೂ ಈ ವರೆಗೆ ಅಡ್ಡಿಯಾಯಿತೆಂದು ನೀವು ತಿಳಿದಿರಬೇಕೆಂದು ನಾನು ಆಶಿಸುತ್ತೇನೆ.

    Now I would not have you ignorant, brethren, that oftentimes I purposed to come unto you, (but was let hitherto,) that I might have some fruit among you also, even as among other Gentiles.

  14. ನಾನು ಗ್ರೀಕರಿಗೂ ಅನ್ಯಜನರಿಗೂ ಜ್ಞಾನಿಗಳಿಗೂ ಅಜ್ಞಾನಿ ಗಳಿಗೂ ಋಣಸ್ಥನಾಗಿದ್ದೇನೆ.

    I am debtor both to the Greeks, and to the Barbarians; both to the wise, and to the unwise.

  15. ಹೀಗೆ ನಾನಾದರೋ ರೋಮ್‌ನಲ್ಲಿರುವ ನಿಮಗೂ ಸುವಾರ್ತೆಯನ್ನು ಸಾರಲು ಸಿದ್ಧನಾಗಿದ್ದೇನೆ.

    So, as much as in me is, I am ready to preach the gospel to you that are at Rome also.

  16. ಕ್ರಿಸ್ತನ ಸುವಾರ್ತೆಯ ವಿಷಯದಲ್ಲಿ ನಾನು ನಾಚಿಕೆಪಡುವದಿಲ್ಲ; ಅದು ಮೊದಲು ಯೆಹೂದ್ಯ ರಿಗೂ ತರುವಾಯ ಗ್ರೀಕರಿಗೂ ಅಂತೂ ನಂಬುವ ಪ್ರತಿಯೊಬ್ಬನಿಗೂ ರಕ್ಷಣೆಗಾಗಿ ದೇವರ ಶಕ್ತಿಯಾಗಿದೆ.

    For I am not ashamed of the gospel of Christ: for it is the power of God unto salvation to every one that believeth; to the Jew first, and also to the Greek.

  17. ನೀತಿವಂತನು ನಂಬಿಕೆಯಿಂದಲೇ ಜೀವಿಸುವನು ಎಂದು ಬರೆಯಲ್ಪಟ್ಟಂತೆ ದೇವರ ನೀತಿಯು ಅದರಲ್ಲಿ ವಿಶ್ವಾಸದಿಂದ ವಿಶ್ವಾಸಕ್ಕೆ ಪ್ರಕಟವಾಯಿತು.

    For therein is the righteousness of God revealed from faith to faith: as it is written, The just shall live by faith.

  18. ಸತ್ಯವನ್ನು ಅನೀತಿಯಲ್ಲಿ ತಡೆಹಿಡಿದ ಮನುಷ್ಯರ ಎಲ್ಲಾ ಭಕ್ತಿಹೀನತೆಗೆ ಮತ್ತು ಅನೀತಿಗೆ ವಿರೋಧ ವಾಗಿ ದೇವರ ಕೋಪವು ಪರಲೋಕದಿಂದ ತೋರಿ ಬರುತ್ತದೆ.

    For the wrath of God is revealed from heaven against all ungodliness and unrighteousness of men, who hold the truth in unrighteousness;

  19. ದೇವರ ವಿಷಯವಾಗಿ ತಿಳಿಯಬಹು ದಾದದ್ದು ಅವರಲ್ಲಿ ಪ್ರಕಟವಾಗಿದೆ; ದೇವರೇ ಅದನ್ನು ಅವರಿಗೆ ತಿಳಿಯಪಡಿಸಿದ್ದಾನೆ.

    Because that which may be known of God is manifest in them; for God hath shewed [it] unto them.

  20. ಹೇಗೆಂದರೆ ಜಗದು ತ್ಪತ್ತಿಗೆ ಮೊದಲುಗೊಂಡು ಆತನ ಅದೃಶ್ಯವಾದವುಗಳು ಅಂದರೆ ಆತನ ನಿತ್ಯ ಶಕ್ತಿಯೂ ದೈವತ್ವವೂ ಸೃಷ್ಟಿಗಳನ್ನು ಗ್ರಹಿಸುವದರ ಮೂಲಕ ಸ್ಪಷ್ಟವಾಗಿ ಕಾಣಬರುತ್ತವೆ.ಆದಕಾರಣ ಅವರು ನೆವವಿಲ್ಲದವರಾಗಿದ್ದಾರೆ.

    For the invisible things of him from the creation of the world are clearly seen, being understood by the things that are made, [even] his eternal power and Godhead; so that they are without excuse:

  21. ಅವರು ದೇವರನ್ನು ಅರಿತಾಗ ಆತನನ್ನು ದೇವರೆಂದು ಮಹಿಮೆಪಡಿಸಲಿಲ್ಲ, ಕೃತಜ್ಞತೆಯುಳ್ಳವರಾಗಿಯೂ ಇರಲಿಲ್ಲ; ಅವರು ತಮ್ಮ ಕಲ್ಪನೆಗಳಲ್ಲಿ ವಿಫಲರಾದರು ಮತ್ತು ಮೂರ್ಖತನದ ಅವರ ಹೃದಯವು ಕತ್ತಲಾ ಯಿತು.

    Because that, when they knew God, they glorified [him] not as God, neither were thankful; but became vain in their imaginations, and their foolish heart was darkened.

  22. ತಾವು ಜ್ಞಾನಿಗಳೆಂದು ಹೇಳಿಕೊಂಡು ಹುಚ್ಚ ರಾದರು;

    Professing themselves to be wise, they became fools,

  23. ಲಯವಿಲ್ಲದ ದೇವರ ಮಹಿಮೆಯನ್ನು ಲಯವಾಗುವ ಮನುಷ್ಯ, ಪಕ್ಷಿ, ಪಶುಗಳ ಮತ್ತು ಹರಿದಾಡುವವುಗಳ ಪ್ರತಿಮೆಗೆ ಮಾರ್ಪಡಿಸಿದರು.

    And changed the glory of the uncorruptible God into an image made like to corruptible man, and to birds, and fourfooted beasts, and creeping things.

  24. ಆದಕಾರಣ ತಮ್ಮ ಹೃದಯಗಳ ದುರಾಶೆಗಳ ಮೂಲಕ ತಮ್ಮ ಸ್ವಂತ ದೇಹಗಳನ್ನು ತಮ್ಮೊಳಗೆ ಅವ ಮಾನಪಡಿಸಿಕೊಳ್ಳುವಂತೆ ದೇವರು ಅವರನ್ನು ಅಶುದ್ಧ ತನಕ್ಕೆ ಒಪ್ಪಿಸಿದನು;

    Wherefore God also gave them up to uncleanness through the lusts of their own hearts, to dishonour their own bodies between themselves:

  25. ಅವರು ದೇವರ ವಿಷಯವಾದ ಸತ್ಯವನ್ನು ಸುಳ್ಳಿಗೆ ಬದಲಾಯಿಸಿ ಸೃಷ್ಟಿಕರ್ತನಿಗಿಂತ ಹೆಚ್ಚಾಗಿ ಸೃಷ್ಟಿಯನ್ನೇ ಆರಾಧಿಸಿ ಸೇವಿಸಿದರು; ಆತನು (ಸೃಷ್ಟಿಕರ್ತನು) ಎಂದೆಂದಿಗೂ ಸ್ತುತಿ ಹೊಂದತಕ್ಕವನು. ಆಮೆನ್‌.

    Who changed the truth of God into a lie, and worshipped and served the creature more than the Creator, who is blessed for ever. Amen.

  26. ಈ ಕಾರಣದಿಂದ ದೇವರು ಅವರನ್ನು ತುಚ್ಛ ವಾದ ಮನೋಭಾವಗಳಿಗೆ ಒಪ್ಪಿಸಿಬಿಟ್ಟನು. ಹೇಗೆಂದರೆ ಅವರ ಹೆಂಗಸರು ಸಹ ಸ್ವಾಭಾವಿಕವಾದ ಭೋಗ ವನ್ನು ಸ್ವಭಾವ ವಿರುದ್ಧವಾದ ಭೋಗಕ್ಕೆ ಮಾರ್ಪಡಿ ಸಿದರು.

    For this cause God gave them up unto vile affections: for even their women did change the natural use into that which is against nature:

  27. ಅದರಂತೆ ಗಂಡಸರೂ ಸ್ವಾಭಾವಿಕ ಸ್ತ್ರೀ ಭೋಗವನ್ನು ಬಿಟ್ಟು ಒಬ್ಬರಮೇಲೊಬ್ಬರು ತಮ್ಮ ಕಾಮಾತುರದಿಂದ ತಾಪಪಡುತ್ತಾ ಗಂಡಸರ ಸಂಗಡ ಗಂಡಸರು ಅಯೋಗ್ಯವಾದದ್ದನ್ನು ಮಾಡುತ್ತಾ ತಮ್ಮ ತಪ್ಪಿಗೆ ತಕ್ಕ ಪ್ರತಿಫಲವನ್ನು ತಮ್ಮಲ್ಲಿ ಹೊಂದಿದರು.

    And likewise also the men, leaving the natural use of the woman, burned in their lust one toward another; men with men working that which is unseemly, and receiving in themselves that recompence of their error which was meet.

  28. ಇದಲ್ಲದೆ ಅವರು ತಮ್ಮ ತಿಳುವಳಿಕೆಯಿಂದ ದೇವರನ್ನು ಸ್ಮರಿಸುವದಕ್ಕೆ ಮನಸ್ಸಿಲ್ಲದ ಕಾರಣ ದೇವರು ಅವರನ್ನು ಮಾಡಬಾರದವುಗಳನ್ನು ಮಾಡು ವಂತೆ ಅನಿಷ್ಟಭಾವಕ್ಕೆ ಒಪ್ಪಿಸಿದನು.

    And even as they did not like to retain God in [their] knowledge, God gave them over to a reprobate mind, to do those things which are not convenient;

  29. ಹೀಗೆ ಅವರು ಸಕಲ ಅನೀತಿಯಿಂದಲೂ ಜಾರತ್ವ ದುರ್ಮಾರ್ಗತನ ದುರಾಶೆ ದುಷ್ಟತ್ವ ಇವುಗಳಿಂದಲೂ ತುಂಬಿದವರಾಗಿ ಹೊಟ್ಟೇಕಿಚ್ಚು ಕೊಲೆ ವಿವಾದ ಮೋಸ ತುಂಬಿದವರೂ ಅತಿಉಗ್ರತೆಯಿಂದ ತುಂಬಿದವರೂ ಪಿಸುಗುಟ್ಟುವ ವರೂ

    Being filled with all unrighteousness, fornication, wickedness, covetousness, maliciousness; full of envy, murder, debate, deceit, malignity; whisperers,

  30. ಚಾಡಿಹೇಳುವವರೂ ದೇವರನ್ನು ಹಗೆ ಮಾಡುವವರೂ ಧಿಕ್ಕರಿಸುವವರೂ ಅಹಂಕಾರಿಗಳೂ ಉಬ್ಬಿಕೊಳ್ಳುವವರೂ ಕೆಟ್ಟವುಗಳನ್ನು ಕಲ್ಪಿಸುವವರೂ ತಂದೆತಾಯಿಗಳಿಗೆ ಅವಿಧೇಯರೂ

    Backbiters, haters of God, despiteful, proud, boasters, inventors of evil things, disobedient to parents,

  31. ತಿಳುವಳಿಕೆಯಿಲ್ಲ ದವರೂ ಪ್ರಮಾಣಕ್ಕೆ ತಪ್ಪುವವರೂ ಸ್ವಾಭಾವಿಕವಾದ ಮಮತೆಯಿಲ್ಲದವರೂ ಸಮಾಧಾನವಾಗದವರೂ ಕರುಣೆಯಿಲ್ಲದವರೂ ಆದರು.ಇಂಥವುಗಳನ್ನು ಮಾಡುವವರು ಮರಣಕ್ಕೆ ಯೋಗ್ಯರೆಂಬ ದೇವರ ನ್ಯಾಯತೀರ್ಪನ್ನು ಅವರು ತಿಳಿದವರಾಗಿದ್ದರೂ ಅವು ಗಳನ್ನು ಮಾಡುವದಲ್ಲದೆ ಅಂಥವುಗಳನ್ನು ಮಾಡುವವ ರಲ್ಲಿ ಸಂತೋಷಪಡುತ್ತಾರೆ.

    Without understanding, covenantbreakers, without natural affection, implacable, unmerciful:

  32. ಇಂಥವುಗಳನ್ನು ಮಾಡುವವರು ಮರಣಕ್ಕೆ ಯೋಗ್ಯರೆಂಬ ದೇವರ ನ್ಯಾಯತೀರ್ಪನ್ನು ಅವರು ತಿಳಿದವರಾಗಿದ್ದರೂ ಅವು ಗಳನ್ನು ಮಾಡುವದಲ್ಲದೆ ಅಂಥವುಗಳನ್ನು ಮಾಡುವವ ರಲ್ಲಿ ಸಂತೋಷಪಡುತ್ತಾರೆ.

    Who knowing the judgment of God, that they which commit such things are worthy of death, not only do the same, but have pleasure in them that do them.

All chapters of Romans · Kannada Bible · Romans 1 in Tamil

Kannada Bible: Kannada Old Version, public domain.

King James Version: public domain.