Romans · chapter 1 · verse 19
Romans 1:19 in Kannada
ದೇವರ ವಿಷಯವಾಗಿ ತಿಳಿಯಬಹು ದಾದದ್ದು ಅವರಲ್ಲಿ ಪ್ರಕಟವಾಗಿದೆ; ದೇವರೇ ಅದನ್ನು ಅವರಿಗೆ ತಿಳಿಯಪಡಿಸಿದ್ದಾನೆ.
Devara vishayavaagi tiliyabahu daadaddu avaralli prakatavaagide; devare adannu avarige tiliyapadisiddaane.
Romans 1:19 in English
- King James Version (KJV)
- Because that which may be known of God is manifest in them; for God hath shewed [it] unto them.
- World English Bible (WEB)
- because that which is known of God is revealed in them, for God revealed it to them.
- American Standard Version (ASV)
- because that which is known of God is manifest in them; for God manifested it unto them.
- Bible in Basic English (BBE)
- Because the knowledge of God may be seen in them, God having made it clear to them.
- Darby Translation (DBY)
- Because what is known of God is manifest among them, for God has manifested [it] to them,
- Webster's Bible (WBS)
- Because that which may be known of God, is manifest in them; for God hath shown [it] to them.
- Young's Literal Translation (YLT)
- Because that which is known of God is manifest among them, for God did manifest [it] to them,
Read in context
- 17ನೀತಿವಂತನು ನಂಬಿಕೆಯಿಂದಲೇ ಜೀವಿಸುವನು ಎಂದು ಬರೆಯಲ್ಪಟ್ಟಂತೆ ದೇವರ ನೀತಿಯು ಅದರಲ್ಲಿ ವಿಶ್ವಾಸದಿಂದ ವಿಶ್ವಾಸಕ್ಕೆ ಪ್ರಕಟವಾಯಿತು.
- 18ಸತ್ಯವನ್ನು ಅನೀತಿಯಲ್ಲಿ ತಡೆಹಿಡಿದ ಮನುಷ್ಯರ ಎಲ್ಲಾ ಭಕ್ತಿಹೀನತೆಗೆ ಮತ್ತು ಅನೀತಿಗೆ ವಿರೋಧ ವಾಗಿ ದೇವರ ಕೋಪವು ಪರಲೋಕದಿಂದ ತೋರಿ ಬರುತ್ತದೆ.
- 19ದೇವರ ವಿಷಯವಾಗಿ ತಿಳಿಯಬಹು ದಾದದ್ದು ಅವರಲ್ಲಿ ಪ್ರಕಟವಾಗಿದೆ; ದೇವರೇ ಅದನ್ನು ಅವರಿಗೆ ತಿಳಿಯಪಡಿಸಿದ್ದಾನೆ.
- 20ಹೇಗೆಂದರೆ ಜಗದು ತ್ಪತ್ತಿಗೆ ಮೊದಲುಗೊಂಡು ಆತನ ಅದೃಶ್ಯವಾದವುಗಳು ಅಂದರೆ ಆತನ ನಿತ್ಯ ಶಕ್ತಿಯೂ ದೈವತ್ವವೂ ಸೃಷ್ಟಿಗಳನ್ನು ಗ್ರಹಿಸುವದರ ಮೂಲಕ ಸ್ಪಷ್ಟವಾಗಿ ಕಾಣಬರುತ್ತವೆ.ಆದಕಾರಣ ಅವರು ನೆವವಿಲ್ಲದವರಾಗಿದ್ದಾರೆ.
- 21ಅವರು ದೇವರನ್ನು ಅರಿತಾಗ ಆತನನ್ನು ದೇವರೆಂದು ಮಹಿಮೆಪಡಿಸಲಿಲ್ಲ, ಕೃತಜ್ಞತೆಯುಳ್ಳವರಾಗಿಯೂ ಇರಲಿಲ್ಲ; ಅವರು ತಮ್ಮ ಕಲ್ಪನೆಗಳಲ್ಲಿ ವಿಫಲರಾದರು ಮತ್ತು ಮೂರ್ಖತನದ ಅವರ ಹೃದಯವು ಕತ್ತಲಾ ಯಿತು.
Cross references
- Acts 14:16–17 ಅಪೊಸ್ತಲರ ಕೃತ್ಯಗಳು 14:16–17ಗತಿಸಿಹೋದ ಕಾಲಗಳಲ್ಲಿ ಆತನು ಎಲ್ಲಾ ಜನಾಂಗಗಳವರನ್ನು ತಮ್ಮ ಸ್ವಂತ ಮಾರ್ಗಗಳಲ್ಲಿ ನಡೆಯುವದಕ್ಕೆ ಬಿಟ್ಟುಬಿಟ್ಟನು; ಆದರೂ ಆತನು ತನ್ನ ವಿಷಯದಲ್ಲಿ ಸಾಕ್ಷಿಕೊಡದೆ ಇರಲಿಲ್ಲ; ಆಕಾಶದಿಂದ ಮಳೆಯನ್ನೂ ಸುಗ್ಗೀಕಾಲ ಗಳನ್ನೂ ದಯಪಾಲಿಸಿ ನಮಗೆ ಆಹಾರ ಕೊಟ್ಟು ನಮ್ಮ ಹೃದಯಗಳನ್ನು ಆನಂದದಿಂದ ತುಂಬಿಸಿ ಒಳ್ಳೇದನ್ನು ಮಾಡುತ್ತಾ ಬಂದನು ಎಂದು ಹೇಳಿದರು.
- Romans 1:20 ರೋಮಾಪುರದವರಿಗೆ 1:20ಹೇಗೆಂದರೆ ಜಗದು ತ್ಪತ್ತಿಗೆ ಮೊದಲುಗೊಂಡು ಆತನ ಅದೃಶ್ಯವಾದವುಗಳು ಅಂದರೆ ಆತನ ನಿತ್ಯ ಶಕ್ತಿಯೂ ದೈವತ್ವವೂ ಸೃಷ್ಟಿಗಳನ್ನು ಗ್ರಹಿಸುವದರ ಮೂಲಕ ಸ್ಪಷ್ಟವಾಗಿ ಕಾಣಬರುತ್ತವೆ.ಆದಕಾರಣ ಅವರು ನೆವವಿಲ್ಲದವರಾಗಿದ್ದಾರೆ.
- Psalm 19:1–6 ಕೀರ್ತನೆಗಳು 19:1–6ಆಕಾಶಗಳು ದೇವರ ಮಹಿಮೆಯನ್ನು ಸಾರುತ್ತವೆ; ಅಂತರಿಕ್ಷವು ಆತನ ಕೈ ಕೆಲಸ ವನ್ನು ತೋರಿಸುತ್ತದೆ. ದಿನವು ದಿನಕ್ಕೆ ಮಾತನ್ನು ಉಚ್ಚರಿಸುತ್ತದೆ; ರಾತ್ರಿಯು ರಾತ್ರಿಗೆ ತಿಳುವಳಿಕೆಯನ್ನು ಅರುಹುತ್ತದೆ. ಮಾತಿಲ್ಲ, ಭಾಷೆಯೂ ಇಲ್ಲ; ಅವುಗಳ ಶಬ್ದವು ಕೇಳುವದಿಲ್ಲ. ಭೂಮಿಯ ಮೇಲೆಲ್ಲಾ ಅವು ಗಳ ಪ್ರಭುತ್ವವೂ ಭೂಲೋಕದ ಅಂತ್ಯದ ವರೆಗೆ ಅವುಗಳ ನುಡಿಗಳೂ ಹರಡಿವೆ; ಅವುಗಳಲ್ಲಿ ಆತನು ಸೂರ್ಯನಿಗೆ ಗುಡಾರವನ್ನು ಹಾಕಿದ್ದಾನೆ. ಅವನು ಮದಲಿಂಗನ ಹಾಗೆ ತನ್ನ ಕೊಠಡಿಯಿಂದ ಹೊರಟುಬಂದು ಪರಾಕ್ರಮಶಾಲಿಯ ಹಾಗೆ ಓಡಲು ಸಂತೋಷಿಸುತ್ತಾನೆ. ಆಕಾಶದ ಅಂತ್ಯದಿಂದ ಹೊರಟು ಅದರ ಅಂತ್ಯಗಳ ವರೆಗೆ ಸುತ್ತುತ್ತಾನೆ; ಅವನ ಬಿಸಿಲಿಗೆ ಮರೆಯಾದದ್ದು ಒಂದೂ ಇಲ್ಲ.
- Acts 17:23–30 ಅಪೊಸ್ತಲರ ಕೃತ್ಯಗಳು 17:23–30ನಾನು ಹಾದು ಹೋಗುತ್ತಿರಲು ನಿಮ್ಮ ಧ್ಯಾನಗಳನ್ನು ನೋಡುತ್ತಾ ಇದ್ದಾಗ ಒಂದು ಬಲಿಪೀಠವು ನನ್ನ ಕಣ್ಣಿಗೆ ಬಿತ್ತು; ಅದರ ಮೇಲೆ--ತಿಳಿಯದ ದೇವರಿಗೆ ಎಂದು ಬರೆದಿತ್ತು. ಆದಕಾರಣ ನೀವು ಯಾವದನ್ನು ತಿಳಿಯದೆ ಪೂಜಿಸುತ್ತೀರೋ ಅದನ್ನೇ ನಿಮಗೆ ತಿಳಿಯಪಡಿ ಸುತ್ತೇನೆ. ಜಗತ್ತನ್ನೂ ಅದರಲ್ಲಿರುವ ಎಲ್ಲವುಗಳನ್ನೂ ಉಂಟುಮಾಡಿದ ದೇವರು ಭೂಮ್ಯಾಕಾಶಗಳ ಒಡೆಯ ನಾಗಿರುವದರಿಂದ ಕೈಯಿಂದ ಕಟ್ಟಿರುವ ಗುಡಿಗಳಲ್ಲಿ ವಾಸಮಾಡುವಾತನಲ್ಲ. ಇಲ್ಲವೆ ತಾನೇ ಎಲ್ಲರಿಗೆ ಜೀವವನ್ನು ಶ್ವಾಸವನ್ನು ಎಲ್ಲವನ್ನು ಕೊಡುವಾತ ನಾಗಿರಲಾಗಿ ಕೊರತೆಯಿದ್ದವನಂತೆ ಮನುಷ್ಯರ ಕೈಗಳಿಂದ ಆರಾಧನೆ ಹೊಂದುವಾತನಲ್ಲ; ಆತನು ಒಂದೇ ರಕ್ತದಿಂದ ಎಲ್ಲಾ ಜನಾಂಗಗಳ ಮನುಷ್ಯರನ್ನು ಭೂಮುಖದ ಮೇಲೆಲ್ಲಾ ವಾಸಿಸುವದಕ್ಕಾಗಿ ಉಂಟು ಮಾಡಿದನು. ಆತನು ನಮ್ಮಲ್ಲಿ ಒಬ್ಬನಿಗೂ ದೂರ ವಾದವನಲ್ಲದಿದ್ದರೂ ಅವರು ಕರ್ತನನ್ನು ತಡವಾಡಿ ಕಂಡುಕೊಂಡಾರೇನೋ ಎಂದು ಮೊದಲೇ ನೇಮಕ ವಾದ ಕಾಲಗಳನ್ನೂ ಅವರ ನಿವಾಸದ ಮೇರೆಗಳನ್ನೂ ನಿಶ್ಚಯಿಸಿದನು. ಆತನಲ್ಲಿಯೇ ನಾವು ಜೀವಿಸುತ್ತೇವೆ ಚಲಿಸುತ್ತೇವೆ ಇರುತ್ತೇವೆ. ನಿಮ್ಮ ಸ್ವಂತ ಕವಿಗಳಲ್ಲಿಯೂ ಕೆಲವರು--ನಾವೂ ಆತನ ಸಂತಾನದವರೇ ಎಂಬ ದಾಗಿ ಹೇಳಿದ್ದಾರೆ. ನಾವು ದೇವರ ಸಂತಾನದವ ರಾಗಿದ್ದ ಮೇಲೆ ದೈವತ್ವವು ಮನುಷ್ಯನ ಶಿಲ್ಪ ವಿದ್ಯೆ ಯಿಂದಲೂ ಕಲ್ಪನೆಯಿಂದಲೂ ಕೆತ್ತಿರುವ ಚಿನ್ನ ಬೆಳ್ಳಿ ಕಲ್ಲಿಗೆ ಸಮಾನವೆಂದು ನಾವು ಭಾವಿಸಲೇಬಾರದು. ಈ ಅಜ್ಞಾನಕಾಲಗಳನ್ನು ದೇವರುಲಕ್ಷ್ಯಕ್ಕೆ ತರಲಿಲ್ಲ; ಈಗಲಾದರೋ ಆತನು ಎಲ್ಲಾ ಕಡೆಯಲ್ಲಿರುವ ಮನು ಷ್ಯರೆಲ್ಲರೂ ಮಾನಸಾಂತರಪಡಬೇಕೆಂದು ಅಪ್ಪಣೆ ಕೊಡುತ್ತಾನೆ.
- Isaiah 40:26 ಯೆಶಾಯ 40:26ನಿಮ್ಮ ಕಣ್ಣುಗಳನ್ನು ಮೇಲಕ್ಕೆತ್ತಿ ನೋಡಿರಿ; ಇಗೋ, ಇವುಗಳನ್ನು ಸೃಷ್ಟಿಸಿದಾತನು ಯಾರು? ಆತನೇ ತನ್ನ ಮಹಾಶಕ್ತಿಯಿಂದಲೂ ಅವುಗಳ ಸೈನ್ಯವನ್ನೆಲ್ಲಾ ಲೆಕ್ಕಮಾಡಿ ಹೊರಗೆ ತರು ವನು. ಆತನು ಅತಿ ಬಲಾಢ್ಯನಾಗಿರುವದರಿಂದ ಅವುಗಳೊಳಗೆ ಒಂದೂ ತಪ್ಪದು.
- John 1:9 ಯೋಹಾನನು 1:9ಲೋಕದಲ್ಲಿ ಬರುವ ಪ್ರತಿಯೊಬ್ಬ ಮನುಷ್ಯನಿಗೆ ಆತನು ಬೆಳಕನ್ನು ಕೊಡುವ ನಿಜವಾದ ಬೆಳಕಾಗಿದ್ದನು.
- Jeremiah 10:10–13 ಯೆರೆಮೀಯ 10:10–13ಆದರೆ ಕರ್ತನು ನಿಜವಾದ ದೇವರಾಗಿದ್ದಾನೆ, ಆತನು ಜೀವವುಳ್ಳ ದೇವರೂ ನಿತ್ಯವಾದ ಅರಸನೂ ಆಗಿದ್ದಾನೆ; ಆತನ ರೌದ್ರದಿಂದ ಭೂಮಿ ಕಂಪಿಸುವದು ಆತನ ಉಗ್ರತೆಯನ್ನು ಜನಾಂಗಗಳು ತಾಳಲಾರವು. ನೀವು ಅವರಿಗೆ ಹೀಗೆ ಹೇಳಬೇಕು--ಆಕಾಶ ಗಳನ್ನೂ ಭೂಮಿಯನ್ನೂ ಸೃಷ್ಟಿಸದ ದೇವರುಗಳು ಭೂಮಿಯ ಮೇಲಿನಿಂದಲೂ ಈ ಆಕಾಶಗಳ ಕೆಳಗಿ ನಿಂದಲೂ ನಾಶವಾಗುವವು. ಆತನು ಭೂಮಿಯನ್ನು ತನ್ನ ಶಕ್ತಿಯಿಂದ ಉಂಟು ಮಾಡಿದನು, ಭೂಲೋಕವನ್ನು ತನ್ನ ಜ್ಞಾನದಿಂದ ಸ್ಥಾಪಿಸಿದನು, ಆಕಾಶಗಳನ್ನು ತನ್ನ ವಿವೇಕದಿಂದ ಹಾಸಿ ದನು; ಆತನು ತನ್ನ ಶಬ್ದ ಮಾಡುವಾಗಲೇ ಆಕಾಶ ಗಳಲ್ಲಿ ನೀರುಗಳ ಸಮೂಹವಿರುವದು. ಆತನು ಭೂಮಿಯ ಅಂತ್ಯದಿಂದ ಹಬೆಯನ್ನು ಏಳಮಾಡುತ್ತಾನೆ; ಮಳೆಯ ಸಂಗಡ ಮಿಂಚನ್ನು ಉಂಟು ಮಾಡುತ್ತಾನೆ; ತನ್ನ ಭಂಡಾರಗಳೊಳಗಿಂದ ಗಾಳಿಯನ್ನು ಹೊರಗೆ ತರುತ್ತಾನೆ.