Romans · chapter 1 · verse 3
Romans 1:3 in Kannada
ಅದು ಯಾವದೆಂದರೆ, ಆತನು ಶಾರೀರಕವಾಗಿ ದಾವೀದನ ಸಂತಾನದಲ್ಲಿ ಹುಟ್ಟಿದಾತನೂ ನಮ್ಮ ಕರ್ತನೂ ಆಗಿರುವ ದೇವರಕುಮಾರನಾದ ಯೇಸು ಕ್ರಿಸ್ತನ ವಿಷಯವಾ ದದ್ದೇ;
Adu yaavadendare, aatanu shaareerakavaagi daaveedana santaanadalli huttidaatanoo namma kartanoo aagiruva devarakumaaranaada yesu kristana vishayavaa dadde;
Romans 1:3 in English
- King James Version (KJV)
- Concerning his Son Jesus Christ our Lord, which was made of the seed of David according to the flesh;
- World English Bible (WEB)
- concerning his Son, who was born of the offspring of David according to the flesh,
- American Standard Version (ASV)
- concerning his Son, who was born of the seed of David according to the flesh,
- Bible in Basic English (BBE)
- About his Son who, in the flesh, came from the family of David,
- Darby Translation (DBY)
- concerning his Son (come of David's seed according to flesh,
- Webster's Bible (WBS)
- Concerning his Son Jesus Christ our Lord, who was born of the seed of David according to the flesh.
- Young's Literal Translation (YLT)
- concerning His Son, (who is come of the seed of David according to the flesh,
Read in context
- 1ಪೌಲನೆಂಬ ನಾನು ಯೇಸು ಕ್ರಿಸ್ತನ ದಾಸನೂ ಅಪೊಸ್ತಲನಾಗಿರುವದಕ್ಕೆ ಕರೆ ಯಲ್ಪಟ್ಟು ದೇವರ ಸುವಾರ್ತೆಗೋಸ್ಕರ ಪ್ರತ್ಯೇಕಿಸ ಲ್ಪಟ್ಟವನೂ ಆಗಿದ್ದೇನೆ.
- 2(ಆ ಸುವಾರ್ತೆಯನ್ನು ಆತನು ಮುಂಚಿತವಾಗಿ ಪರಿಶುದ್ಧ ಬರಹಗಳಲ್ಲಿ ತನ್ನ ಪ್ರವಾದಿ ಗಳ ಮುಖಾಂತರ ವಾಗ್ದಾನ ಮಾಡಿದ್ದನು).
- 3ಅದು ಯಾವದೆಂದರೆ, ಆತನು ಶಾರೀರಕವಾಗಿ ದಾವೀದನ ಸಂತಾನದಲ್ಲಿ ಹುಟ್ಟಿದಾತನೂ ನಮ್ಮ ಕರ್ತನೂ ಆಗಿರುವ ದೇವರಕುಮಾರನಾದ ಯೇಸು ಕ್ರಿಸ್ತನ ವಿಷಯವಾ ದದ್ದೇ;
- 4ಪರಿಶುದ್ಧ ಆತ್ಮಕ್ಕನು ಸಾರವಾಗಿ ಸತ್ತವರೊಳ ಗಿಂದ ಪುನರುತ್ಥಾನ ಹೊಂದುವದರ ಮೂಲಕ ಆತನು ದೇವಕುಮಾರನೆಂದು ಬಲದೊಂದಿಗೆ ಪ್ರಕಟಿಸಲ್ಪ ಟ್ಟನು;
- 5ಆತನ ಹೆಸರಿಗಾಗಿ ಎಲ್ಲಾ ಜನಾಂಗಗಳವರು ನಂಬಿಕೆಗೆ ವಿಧೇಯರಾಗುವಂತೆ ಆತನಿಂದ ನಾವು ಕೃಪೆಯನ್ನೂ ಅಪೊಸ್ತಲತನವನ್ನೂ ಹೊಂದಿದ್ದೇವೆ.
Cross references
- Galatians 4:4 ಗಲಾತ್ಯದವರಿಗೆ 4:4ಆದರೆ ಕಾಲವು ಪರಿಪೂರ್ಣವಾದಾಗ ದೇವರು ತನ್ನ ಮಗನನ್ನು ಸ್ತ್ರೀಯಿಂದ ಹುಟ್ಟಿದವನನ್ನಾಗಿಯೂ ನ್ಯಾಯ ಪ್ರಮಾಣಕ್ಕೆ ಒಳಗಾದವನನ್ನಾಗಿಯೂ ಮಾಡಿ ಕಳುಹಿಸಿದ್ದಲ್ಲದೆ
- Matthew 1:1 ಮತ್ತಾಯನು 1:1ಯೇಸು ಕ್ರಿಸ್ತನ ವಂಶಾವಳಿಯ ಪುಸ್ತಕವು; ಆತನು ದಾವೀದನ ಮಗನು, ಆತನು ಅಬ್ರ ಹಾಮನ ಮಗನು.
- Jeremiah 23:5–6 ಯೆರೆಮೀಯ 23:5–6ಇಗೋ, ದಿನಗಳು ಬರುವವೆಂದು ಕರ್ತನು ಅನ್ನು ತ್ತಾನೆ; ಆಗ ನಾನು ದಾವೀದನಿಗೆ ನೀತಿಯುಳ್ಳ ಚಿಗುರನ್ನು ಎಬ್ಬಿಸುತ್ತೇನೆ; ಅರಸನು ರಾಜ್ಯವಾಳಿ ವೃದ್ಧಿಯಾಗುವನು; ಭೂಮಿಯಲ್ಲಿ ನ್ಯಾಯವನ್ನೂ ನೀತಿಯನ್ನೂ ನಡಿಸು ವನು. ಅವನ ದಿನಗಳಲ್ಲಿ ಯೆಹೂದವು ರಕ್ಷಿಸಲ್ಪಡು ವದು; ಇಸ್ರಾಯೇಲು ಭದ್ರವಾಗಿ ವಾಸಿಸುವದು; ಆತನು ಕರೆಯಲ್ಪಡುವ ಹೆಸರು ಯಾವದಂದರೆ--ನಮ್ಮ ನೀತಿಯು ಕರ್ತನೇ.
- John 1:14 ಯೋಹಾನನು 1:14ಇದಲ್ಲದೆ ಆ ವಾಕ್ಯವಾಗಿರುವಾತನು ಶರೀರಧಾರಿ ಯಾಗಿ ಕೃಪೆಯಿಂದಲೂ ಸತ್ಯದಿಂದಲೂ ತುಂಬಿ ನಮ್ಮ ಮಧ್ಯದಲ್ಲಿ ವಾಸಮಾಡಿದನು. (ತಂದೆಯಿಂದ ಹುಟ್ಟಿದ ಒಬ್ಬನೇ ಮಗನ ಮಹಿಮೆಯಂತೆ ನಾವು ಆತನ ಮಹಿಮೆಯನ್ನು ನೋಡಿದೆವು).
- Luke 1:31–33 ಲೂಕನು 1:31–33ಇಗೋ, ನೀನು ಗರ್ಭಿಣಿಯಾಗಿ ಒಬ್ಬ ಮಗನನ್ನು ಹೆರುವಿ; ಆತನಿಗೆ ಯೇಸು ಎಂದು ಹೆಸರಿಡಬೇಕು. ಆತನು ದೊಡ್ಡವನಾಗಿದ್ದು ಮಹೋನ್ನತನ ಕುಮಾರನೆಂದು ಕರೆಯಲ್ಪಡುವನು; ದೇವರಾದ ಕರ್ತನು ಆತನ ತಂದೆ ಯಾದ ದಾವೀದನ ಸಿಂಹಾಸನವನ್ನು ಆತನಿಗೆ ಕೊಡು ವನು. ಆತನು ಯಾಕೋಬನ ಮನೆತನವನ್ನು ಸದಾ ಕಾಲವೂ ಆಳುವನು; ಆತನ ರಾಜ್ಯಕ್ಕೆ ಅಂತ್ಯವೇ ಇಲ್ಲ ಎಂದು ಹೇಳಿದನು.
- Matthew 1:20–23 ಮತ್ತಾಯನು 1:20–23ಅವನು ಇವುಗಳನ್ನು ಆಲೋಚನೆ ಮಾಡುತ್ತಿದ್ದಾಗ ಇಗೋ, ಕರ್ತನ ದೂತನು ಅವನಿಗೆ ಕನಸಿನಲ್ಲಿ ಕಾಣಿಸಿ ಕೊಂಡು-- ಯೋಸೇಫನೇ, ದಾವೀದನ ಕುಮಾರನೇ, ನಿನ್ನ ಹೆಂಡತಿಯಾದ ಮರಿಯಳನ್ನು ಸೇರಿಸಿಕೊಳ್ಳು ವದಕ್ಕೆ ಭಯಪಡಬೇಡ; ಯಾಕಂದರೆ ಆಕೆಯ ಗರ್ಭವು ಪವಿತ್ರಾತ್ಮನಿಂದಲೇ ಆಗಿದೆ. ಆಕೆಯು ಒಬ್ಬ ಮಗನನ್ನು ಹೆರುವಳು; ನೀನು ಆತನಿಗೆ ಯೇಸು ಎಂದು ಕರೆಯಬೇಕು; ಯಾಕೆಂದರೆ ಆತನು ತನ್ನ ಜನರನ್ನು ಅವರ ಪಾಪಗಳಿಂದ ರಕ್ಷಿಸುವನು ಅಂದನು. ಪ್ರವಾದಿಯ ಮುಖಾಂತರ ಕರ್ತನು ಹೇಳಿದ ಮಾತು ನೆರವೇರುವಂತೆ ಇದೆಲ್ಲಾ ನಡೆಯಿತು. ಆ ಮಾತೇನಂದರೆ -- ಇಗೋ, ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಒಬ್ಬ ಮಗನನ್ನು ಹೆರುವಳು; ಅವರು ಆತನ ಹೆಸರನ್ನು ಇಮ್ಮಾನುವೇಲ್ ಎಂದು ಕರೆಯುವರು ಎಂಬದೇ. ದೇವರು ನಮ್ಮ ಕೂಡ ಇದ್ದಾನೆ ಎಂಬದು ಇದರ ಅರ್ಥ.
- Amos 9:11 ಆಮೋಸ 9:11ಆ ದಿನದಲ್ಲಿ ಬಿದ್ದ ದಾವೀದನ ಗುಡಾರವನ್ನು ನಾನು ನಿಲ್ಲಿಸಿ ಅದರ ಹರಕುಗಳನ್ನು ಮುಚ್ಚುವೆನು. ಅವನ ಹಾಳಾದದ್ದನ್ನು ಎಬ್ಬಿಸಿ ಹಿಂದಿನ ದಿವಸಗಳಲ್ಲಿ ಮಾಡಿದ ಹಾಗೆ ಕಟ್ಟುವೆನು.
- Isaiah 9:6–7 ಯೆಶಾಯ 9:6–7ಒಂದು ಮಗು ನಮಗಾಗಿ ಹುಟ್ಟಿದೆಯಷ್ಟೆ, ಆ ಮಗನು ನಮಗೆ ಕೊಡಲ್ಪಟ್ಟಿದ್ದಾನೆ; ಆಡಳಿತವು ಆತನ ಬಾಹುವಿನ ಮೇಲಿರುವದು; ಅದ್ಭುತ ಸ್ವರೂಪನು, ಆಲೋಚನಾ ಕರ್ತನು, ಪರಾಕ್ರಮಿಯಾದ ದೇವರು, ನಿತ್ಯನಾದ ತಂದೆ, ಸಮಾಧಾನದ ಪ್ರಭು ಎಂದು ಆತನ ಹೆಸರು ಕರೆಯಲ್ಪಡುವದು. ಅದನ್ನು ನೇಮಿಸುವದಕ್ಕೂ ಇಂದಿನಿಂದ ಎಂದೆಂದಿಗೂ ನೀತಿ ನ್ಯಾಯಗಳೊಂದಿಗೆ ಅದನ್ನು ಸ್ಥಾಪಿಸುವದಕ್ಕೂ ದಾವೀದನ ಸಿಂಹಾಸನ ಕ್ಕಾಗಲಿ ಅವನ ರಾಜ್ಯಕ್ಕಾಗಲಿ ಅವನ ಪರಿಪಾಲ ನೆಯ ಮತ್ತು ಶಾಂತಿಯ ಅಭಿವೃದ್ಧಿಗಾಗಲಿ ಅಂತ್ಯವೇ ಇಲ್ಲ; ಸೈನ್ಯಗಳ ಕರ್ತನ ಆಸಕ್ತಿಯು ಇದನ್ನು ನೆರವೇರಿ ಸುವದು.
- 1 John 4:9–10 1 ಯೋಹಾನನು 4:9–10ನಾವು ಆತನ ಮೂಲಕ ಜೀವಿಸು ವದಕ್ಕಾಗಿ ದೇವರು ತನ್ನ ಒಬ್ಬನೇ ಮಗನನ್ನು ಲೋಕಕ್ಕೆ ಕಳುಹಿಸಿಕೊಟ್ಟದ್ದರಲ್ಲಿಯೇ ದೇವರ ಪ್ರೀತಿಯು ನಮ್ಮ ಕಡೆಗೆ ಪ್ರತ್ಯಕ್ಷವಾಗಿದೆ. ನಾವು ದೇವರನ್ನು ಪ್ರೀತಿಸಿ ದ್ದರಲ್ಲಿಯಲ್ಲ, ಆತನು ನಮ್ಮನ್ನು ಪ್ರೀತಿಸಿ ನಮ್ಮ ಪಾಪಗಳಿಗೆ ಪ್ರಾಯಶ್ಚಿತ್ತವಾಗಿ ತನ್ನ ಮಗನನ್ನು ಕಳುಹಿಸಿ ಕೊಟ್ಟದ್ದರಲ್ಲಿಯೇ ಆತನ ಪ್ರೀತಿಯು ಇರುತ್ತದೆ.
- John 1:49 ಯೋಹಾನನು 1:49ನತಾನ ಯೇಲನು ಪ್ರತ್ಯುತ್ತರವಾಗಿ ಆತನಿಗೆ--ರಬ್ಬಿಯೇ, ನೀನು ದೇವರಕುಮಾರನು; ನೀನು ಇಸ್ರಾಯೇಲಿನ ಅರಸನು ಅಂದನು.
- Psalm 2:7 ಕೀರ್ತನೆಗಳು 2:7ಕಟ್ಟಳೆಯನ್ನು ಸಾರುತ್ತೇನೆ; ಕರ್ತನು ನನಗೆ ಹೇಳಿದ್ದು--ನೀನು ನನ್ನ ಮಗನು, ನಾನು ಈ ಹೊತ್ತು ನಿನ್ನನ್ನು ಪಡೆದಿದ್ದೇನೆ.
- Genesis 3:15 ಆದಿಕಾಂಡ 3:15ನಿನಗೂ ಸ್ತ್ರೀಗೂ ನಿನ್ನ ಸಂತತಿಗೂ ಸ್ತ್ರೀ ಸಂತತಿಗೂ ಹಗೆತನ ಇಡುವೆನು; ಆತನು ನಿನ್ನ ತಲೆಯನ್ನು ಜಜ್ಜುವನು ಮತ್ತು ನೀನು ಆತನ ಹಿಮ್ಮಡಿಯನ್ನು, ಕಚ್ಚುವಿ ಅಂದನು.