Romans · chapter 1 · verse 30
Romans 1:30 in Kannada
ಚಾಡಿಹೇಳುವವರೂ ದೇವರನ್ನು ಹಗೆ ಮಾಡುವವರೂ ಧಿಕ್ಕರಿಸುವವರೂ ಅಹಂಕಾರಿಗಳೂ ಉಬ್ಬಿಕೊಳ್ಳುವವರೂ ಕೆಟ್ಟವುಗಳನ್ನು ಕಲ್ಪಿಸುವವರೂ ತಂದೆತಾಯಿಗಳಿಗೆ ಅವಿಧೇಯರೂ
Chaadiheluvavaroo devarannu hage maaduvavaroo dhikkarisuvavaroo ahankaarigaloo ubbikolluvavaroo kettavugalannu kalpisuvavaroo tandetaayigalige avidheyaroo
Romans 1:30 in English
- King James Version (KJV)
- Backbiters, haters of God, despiteful, proud, boasters, inventors of evil things, disobedient to parents,
- World English Bible (WEB)
- backbiters, hateful to God, insolent, arrogant, boastful, inventors of evil things, disobedient to parents,
- American Standard Version (ASV)
- backbiters, hateful to God, insolent, haughty, boastful, inventors of evil things, disobedient to parents,
- Bible in Basic English (BBE)
- Hated by God, full of pride, without respect, full of loud talk, given to evil inventions, not honouring father or mother,
- Darby Translation (DBY)
- back-biters, hateful to God, insolent, proud, boasters, inventors of evil things, disobedient to parents,
- Webster's Bible (WBS)
- Backbiters, haters of God, despiteful, proud, boasters, inventers of evil things, disobedient to parents,
- Young's Literal Translation (YLT)
- evil-speakers, God-haters, insulting, proud, boasters, inventors of evil things, disobedient to parents,
Read in context
- 28ಇದಲ್ಲದೆ ಅವರು ತಮ್ಮ ತಿಳುವಳಿಕೆಯಿಂದ ದೇವರನ್ನು ಸ್ಮರಿಸುವದಕ್ಕೆ ಮನಸ್ಸಿಲ್ಲದ ಕಾರಣ ದೇವರು ಅವರನ್ನು ಮಾಡಬಾರದವುಗಳನ್ನು ಮಾಡು ವಂತೆ ಅನಿಷ್ಟಭಾವಕ್ಕೆ ಒಪ್ಪಿಸಿದನು.
- 29ಹೀಗೆ ಅವರು ಸಕಲ ಅನೀತಿಯಿಂದಲೂ ಜಾರತ್ವ ದುರ್ಮಾರ್ಗತನ ದುರಾಶೆ ದುಷ್ಟತ್ವ ಇವುಗಳಿಂದಲೂ ತುಂಬಿದವರಾಗಿ ಹೊಟ್ಟೇಕಿಚ್ಚು ಕೊಲೆ ವಿವಾದ ಮೋಸ ತುಂಬಿದವರೂ ಅತಿಉಗ್ರತೆಯಿಂದ ತುಂಬಿದವರೂ ಪಿಸುಗುಟ್ಟುವ ವರೂ
- 30ಚಾಡಿಹೇಳುವವರೂ ದೇವರನ್ನು ಹಗೆ ಮಾಡುವವರೂ ಧಿಕ್ಕರಿಸುವವರೂ ಅಹಂಕಾರಿಗಳೂ ಉಬ್ಬಿಕೊಳ್ಳುವವರೂ ಕೆಟ್ಟವುಗಳನ್ನು ಕಲ್ಪಿಸುವವರೂ ತಂದೆತಾಯಿಗಳಿಗೆ ಅವಿಧೇಯರೂ
- 31ತಿಳುವಳಿಕೆಯಿಲ್ಲ ದವರೂ ಪ್ರಮಾಣಕ್ಕೆ ತಪ್ಪುವವರೂ ಸ್ವಾಭಾವಿಕವಾದ ಮಮತೆಯಿಲ್ಲದವರೂ ಸಮಾಧಾನವಾಗದವರೂ ಕರುಣೆಯಿಲ್ಲದವರೂ ಆದರು.ಇಂಥವುಗಳನ್ನು ಮಾಡುವವರು ಮರಣಕ್ಕೆ ಯೋಗ್ಯರೆಂಬ ದೇವರ ನ್ಯಾಯತೀರ್ಪನ್ನು ಅವರು ತಿಳಿದವರಾಗಿದ್ದರೂ ಅವು ಗಳನ್ನು ಮಾಡುವದಲ್ಲದೆ ಅಂಥವುಗಳನ್ನು ಮಾಡುವವ ರಲ್ಲಿ ಸಂತೋಷಪಡುತ್ತಾರೆ.
- 32ಇಂಥವುಗಳನ್ನು ಮಾಡುವವರು ಮರಣಕ್ಕೆ ಯೋಗ್ಯರೆಂಬ ದೇವರ ನ್ಯಾಯತೀರ್ಪನ್ನು ಅವರು ತಿಳಿದವರಾಗಿದ್ದರೂ ಅವು ಗಳನ್ನು ಮಾಡುವದಲ್ಲದೆ ಅಂಥವುಗಳನ್ನು ಮಾಡುವವ ರಲ್ಲಿ ಸಂತೋಷಪಡುತ್ತಾರೆ.
Cross references
- 2 Timothy 3:2 2 ತಿಮೊಥೆಯನಿಗೆ 3:2ಮನುಷ್ಯರು ತಮ್ಮನ್ನು ತಾವೇ ಪ್ರೀತಿಸಿ ಕೊಳ್ಳುವವರೂ ಲೋಭಿಗಳೂ ಬಡಾಯಿ ಕೊಚ್ಚುವ ವರೂ ಅಹಂಕಾರಿಗಳೂ ದೇವದೂಷಕರೂ ತಂದೆ ತಾಯಿಗಳಿಗೆ ಅವಿಧೇಯರೂ ಉಪಕಾರನೆನಸದವರೂ ಅಶುದ್ಧರೂ
- Jude 1:16 ಯೂದನು 1:16ಇವರು ಗುಣುಗುಟ್ಟು ವವರೂ ದೂರುವವರೂ ತಮ್ಮ ದುರಾಶೆಗಳನ್ನನುಸರಿಸಿ ನಡೆಯುವವರೂ ಆಗಿದ್ದಾರೆ. ಇವರ ಬಾಯಿಯು ದೊಡ್ಡ ದೊಡ್ಡ ಮಾತುಗಳನ್ನು ಆಡುತ್ತದೆ. ಇವರು ಸ್ವಪ್ರಯೋಜನಕ್ಕಾಗಿ ಮುಖಸ್ತುತಿ ಮಾಡುತ್ತಾರೆ.
- 2 Peter 2:18 2 ಪೇತ್ರನು 2:18ತಪ್ಪಾದ ಮಾರ್ಗದಲ್ಲಿ ಜೀವಿಸುವವರಿಂದ ಸಂಪೂರ್ಣವಾಗಿ ತಪ್ಪಿಸಿಕೊಂಡವರ ಸಂಗಡ ಇವರು ಹುರುಳಿಲ್ಲದ ದೊಡ್ಡ ದೊಡ್ಡ ಮಾತುಗಳನ್ನಾಡಿ ಶರೀರದ ದುರಾಶೆಗಳನ್ನು ಹುಟ್ಟಿಸಿ ಹೆಚ್ಚಾದ ಬಂಡುತನದಿಂದ ಅವರನ್ನು ಮರುಳುಗೊಳಿಸುತ್ತಾರೆ.
- James 4:16 ಯಾಕೋಬನು 4:16ಆದರೆ ನೀವು ನಿಮ್ಮ ಹೊಗಳಿಕೆಗಳಲ್ಲಿ ಸಂತೋಷಪಡುತ್ತೀರಿ. ಅಂಥ ಸಂತೋಷವೆಲ್ಲಾ ಕೆಟ್ಟದ್ದೇ.ಹೀಗಿರುವದರಿಂದ ಒಳ್ಳೇದನ್ನು ಮಾಡಬೇಕೆಂದು ತಿಳಿದು ಅದನ್ನು ಮಾಡದೆ ಇರುವವನಿಗೆ ಅದು ಪಾಪವಾಗಿದೆ.
- James 3:5 ಯಾಕೋಬನು 3:5ಹಾಗೆಯೇ ನಾಲಿಗೆಯು ಕೂಡ ಚಿಕ್ಕ ಅಂಗವಾಗಿದ್ದರೂ ದೊಡ್ಡ ಕಾರ್ಯಗಳನ್ನು ಕೊಚ್ಚಿಕೊಳ್ಳುತ್ತದೆ. ಇಗೋ, ಎಷ್ಟು ಕೊಂಚ ಕಿಚ್ಚು ದೊಡ್ಡ ಕಾಡನ್ನು ಸುಡುತ್ತದೆ ನೋಡಿರಿ.
- Titus 3:3 ತೀತನಿಗೆ 3:3ನಾವು ಸಹ ಮೊದಲು ಅವಿವೇಕಿಗಳೂ ಅವಿಧೇಯರೂ ಮೋಸಹೋದ ವರೂ ನಾನಾ ವಿಧವಾದ ದುರಾಶೆಗಳಿಗೆ ಮತ್ತು ಭೋಗಗಳಿಗೆ ದಾಸರೂ ಕೆಟ್ಟತನ ಹೊಟ್ಟೇಕಿಚ್ಚುಗಳಲ್ಲಿ ಜೀವಿಸುವವರೂ ಅಸಹ್ಯರೂ ಒಬ್ಬರನ್ನೊಬ್ಬರು ಹಗೆ ಮಾಡುವವರೂ ಆಗಿದ್ದೆವು.
- Romans 8:7–8 ರೋಮಾಪುರದವರಿಗೆ 8:7–8ಶರೀರ ಸಂಬಂಧವಾದ ಮನಸ್ಸು ದೇವರಿಗೆ ಶತ್ರುತ್ವವು; ಕಾರಣವೇನಂದರೆ ಅಂಥ ಮನಸ್ಸು ದೇವರ ನಿಯಮಕ್ಕೆ ಒಳಪಡುವದಿಲ್ಲ, ಒಳಪಡುವದಕ್ಕಾಗುವದೂ ಇಲ್ಲ. ಹೀಗಿರಲಾಗಿ ಶರೀರಾಧೀನರು ದೇವರನ್ನು ಮೆಚ್ಚಿಸಲಾರರು.
- Psalm 94:4 ಕೀರ್ತನೆಗಳು 94:4ಎಷ್ಟುಕಾಲ ಕಠಿಣ ವಾದವುಗಳನ್ನು ನುಡಿದು ಮಾತಾಡುತ್ತಾರೆ? ದುಷ್ಟತನ ಮಾಡುವವರೆಲ್ಲರು ಹೆಚ್ಚಿಸಿಕೊಳ್ಳುತ್ತಾರೆ;
- Acts 5:36 ಅಪೊಸ್ತಲರ ಕೃತ್ಯಗಳು 5:36ಇದಕ್ಕಿಂತ ಮುಂಚೆ ಥೈದನು ಎದ್ದು ತಾನೊಬ್ಬ ಗಣ್ಯವ್ಯಕ್ತಿ ಎಂದು ತನ್ನ ವಿಷಯವಾಗಿ ತಾನೇ ಕೊಚ್ಚಿಕೊಂಡಾಗ ಸುಮಾರು ನಾನೂರು ಜನರು ಅವನೊಂದಿಗೆ ಸೇರಿಕೊಂಡರು; ಅವನು ಕೊಲ್ಲಲ್ಪಟ್ಟದ್ದರಿಂದ ಅವನಿಗೆ ವಿಧೇಯರಾಗಿ ದ್ದವರೆಲ್ಲರೂ ಚದರಿಹೋಗಿ ಇಲ್ಲವಾದರು.
- Luke 21:16 ಲೂಕನು 21:16ಆದರೆ ತಂದೆ ತಾಯಿಗಳೂ ಸಹೋದರರೂ ಬಂಧುಗಳೂ ಸ್ನೇಹಿ ತರೂ ನಿಮ್ಮನ್ನು ಹಿಡಿದುಕೊಡುವರು; ನಿಮ್ಮಲ್ಲಿ ಕೆಲವ ರನ್ನು ಕೊಲ್ಲಿಸುವರು.
- Proverbs 25:23 ಜ್ಞಾನೋಕ್ತಿಗಳು 25:23ಉತ್ತರದ ಗಾಳಿಯು ಮಳೆಯನ್ನು ನೂಕುತ್ತದೆ; ಅದರಂತೆಯೇ ಚಾಡಿಯ ನಾಲಿಗೆ ಕೋಪದ ಮುಖ ಮಾಡುವದೆ.
- Ezekiel 22:7 ಯೆಹೆಜ್ಕೇಲನು 22:7ನಿನ್ನಲ್ಲಿ ತಂದೆಯನ್ನೂ ತಾಯಿಯನ್ನೂ ಅಲಕ್ಷ್ಯ ಮಾಡಿದ್ದಾರೆ; ನಿನ್ನಲ್ಲಿ ಅಪರಿಚಿತರಿಗೆ ಬಲಾತ್ಕಾರ ಮಾಡಿದ್ದಾರೆ; ನಿನ್ನಲ್ಲಿ ದಿಕ್ಕಿಲ್ಲದವನನ್ನೂ ವಿಧವೆಯನ್ನೂ ಪೀಡಿಸಿದ್ದಾರೆ.