Romans · chapter 1 · verse 4
Romans 1:4 in Kannada
ಪರಿಶುದ್ಧ ಆತ್ಮಕ್ಕನು ಸಾರವಾಗಿ ಸತ್ತವರೊಳ ಗಿಂದ ಪುನರುತ್ಥಾನ ಹೊಂದುವದರ ಮೂಲಕ ಆತನು ದೇವಕುಮಾರನೆಂದು ಬಲದೊಂದಿಗೆ ಪ್ರಕಟಿಸಲ್ಪ ಟ್ಟನು;
Parishuddha aatmakkanu saaravaagi sattavarola ginda punarutthaana honduvadara moolaka aatanu devakumaaranendu baladondige prakatisalpa ttanu;
Romans 1:4 in English
- King James Version (KJV)
- And declared [to be] the Son of God with power, according to the spirit of holiness, by the resurrection from the dead:
- World English Bible (WEB)
- who was declared to be the Son of God with power according to the Spirit of holiness, by the resurrection from the dead, Jesus Christ our Lord,
- American Standard Version (ASV)
- who was declared [to be] the Son of God with power, according to the spirit of holiness, by the resurrection from the dead; [even] Jesus Christ our Lord,
- Bible in Basic English (BBE)
- But was marked out as Son of God in power by the Holy Spirit through the coming to life again of the dead; Jesus Christ our Lord,
- Darby Translation (DBY)
- marked out Son of God in power, according to [the] Spirit of holiness, by resurrection of [the] dead) Jesus Christ our Lord;
- Webster's Bible (WBS)
- And declared [to be] the Son of God, with power, according to the spirit of holiness, by the resurrection from the dead:
- Young's Literal Translation (YLT)
- who is marked out Son of God in power, according to the Spirit of sanctification, by the rising again from the dead,) Jesus Christ our Lord;
Read in context
- 2(ಆ ಸುವಾರ್ತೆಯನ್ನು ಆತನು ಮುಂಚಿತವಾಗಿ ಪರಿಶುದ್ಧ ಬರಹಗಳಲ್ಲಿ ತನ್ನ ಪ್ರವಾದಿ ಗಳ ಮುಖಾಂತರ ವಾಗ್ದಾನ ಮಾಡಿದ್ದನು).
- 3ಅದು ಯಾವದೆಂದರೆ, ಆತನು ಶಾರೀರಕವಾಗಿ ದಾವೀದನ ಸಂತಾನದಲ್ಲಿ ಹುಟ್ಟಿದಾತನೂ ನಮ್ಮ ಕರ್ತನೂ ಆಗಿರುವ ದೇವರಕುಮಾರನಾದ ಯೇಸು ಕ್ರಿಸ್ತನ ವಿಷಯವಾ ದದ್ದೇ;
- 4ಪರಿಶುದ್ಧ ಆತ್ಮಕ್ಕನು ಸಾರವಾಗಿ ಸತ್ತವರೊಳ ಗಿಂದ ಪುನರುತ್ಥಾನ ಹೊಂದುವದರ ಮೂಲಕ ಆತನು ದೇವಕುಮಾರನೆಂದು ಬಲದೊಂದಿಗೆ ಪ್ರಕಟಿಸಲ್ಪ ಟ್ಟನು;
- 5ಆತನ ಹೆಸರಿಗಾಗಿ ಎಲ್ಲಾ ಜನಾಂಗಗಳವರು ನಂಬಿಕೆಗೆ ವಿಧೇಯರಾಗುವಂತೆ ಆತನಿಂದ ನಾವು ಕೃಪೆಯನ್ನೂ ಅಪೊಸ್ತಲತನವನ್ನೂ ಹೊಂದಿದ್ದೇವೆ.
- 6ಅವರೊಳಗೆ ನೀವು ಸಹ ಯೇಸು ಕ್ರಿಸ್ತನವರಾಗಿರುವ ದಕ್ಕಾಗಿ ಕರೆಯಲ್ಪಟ್ಟಿದ್ದೀರಿ.
Cross references
- Hebrews 5:5–6 ಇಬ್ರಿಯರಿಗೆ 5:5–6ಹಾಗೆಯೇ ಕ್ರಿಸ್ತನು ಸಹ ಮಹಾಯಾಜಕನಾಗುವದಕ್ಕೆ ತನ್ನನ್ನು ತಾನೇ ಘನಪಡಿಸಿಕೊಳ್ಳಲಿಲ್ಲ; ಆದರೆ--ನೀನು ನನ್ನ ಮಗನು; ನಾನೇ ಈ ದಿನ ನಿನ್ನನ್ನು ಪಡೆದಿದ್ದೇನೆ ಎಂದು ಹೇಳಿದಾತನೇ ಈ ಗೌರವವನ್ನು ಆತನಿಗೆ ಕೊಟ್ಟನು. ಆತನು ಇನ್ನೊಂದು ಸ್ಥಳದಲ್ಲಿ--ನೀನು ಸದಾಕಾಲವೂ ಮೆಲ್ಕಿಜೆದೇಕನ ತರಹದ ಯಾಜಕನು ಎಂದು ಹೇಳುತ್ತಾನೆ.
- Ephesians 1:19–23 ಎಫೆಸದವರಿಗೆ 1:19–23ನಂಬುವವರಾದ ನಮ್ಮಲ್ಲಿ ಆತನು ಸಾಧಿಸುವ ಪರಾಕ್ರಮವು ಎಷ್ಟು ಅತಿಶಯವಾದ ದ್ದೆಂಬದನ್ನೂ ಆತನ ಬಲಾತಿಶಯವು ಎಷ್ಟು ಮಹತ್ತಾದ ದ್ದೆಂಬದನ್ನೂ ನೀವು ತಿಳುಕೊಳ್ಳು ವಂತೆ ಅನುಗ್ರಹಿಸಲಿ. ಬಲಾತಿಶಯವು ಕ್ರಿಸ್ತನಲ್ಲಿ ತೋರಿಬಂದಿದೆ; ಹೇಗಂ ದರೆ ದೇವರು ಕ್ರಿಸ್ತನನ್ನು ಸತ್ತವರೊಳಗಿಂದ ಎಬ್ಬಿಸಿ ಸಕಲ ರಾಜತ್ವ ಅಧಿಕಾರ ಮಹತ್ವ ಪ್ರಭುತ್ವಾಧಿಗಳ ಮೇಲೆಯೂ ಈ ಲೋಕದಲ್ಲಿ ಮಾತ್ರವಲ್ಲದೆ ಬರುವ ಲೋಕದಲ್ಲಿ ಸಹ ಹೆಸರುಗೊಂಡವರೆಲ್ಲರ ಮೇಲೆಯೂ ಎಷ್ಟೋ ಹೆಚ್ಚಾಗಿ ಪರಲೊಕದೊಳಗೆ ತನ್ನ ಸ್ವಂತ ಬಲಪಾರ್ಶ್ವದಲ್ಲಿ ಆತನನ್ನು ಕೂಡ್ರಿಸಿಕೊಂಡನು. ದೇವರು ಸಮಸ್ತವನ್ನೂ ಆತನ ಪಾದಗಳ ಕೆಳಗೆ ಹಾಕಿದನು. ಇದಲ್ಲದೆ ಆತನನ್ನು ಎಲ್ಲಾದರ ಮೇಲೆ ಇರಿಸಿ ಸಭೆಗೆ ಶಿರಸ್ಸಾಗಿ ನೇಮಿಸಿದನು.ಸಭೆಯು ಆತನ ದೇಹವಾಗಿದೆ; ಎಲ್ಲವನ್ನು ಎಲ್ಲಾ ಸಂಬಂಧದಲ್ಲಿ ವ್ಯಾಪಿಸುವಾತನಿಂದ ಅದು ಪರಿಪೂರ್ಣತೆಯುಳ್ಳ ದಾಗಿದೆ. ಸಭೆಯು ಆತನ ದೇಹವಾಗಿದೆ; ಎಲ್ಲವನ್ನು ಎಲ್ಲಾ ಸಂಬಂಧದಲ್ಲಿ ವ್ಯಾಪಿಸುವಾತನಿಂದ ಅದು ಪರಿಪೂರ್ಣತೆಯುಳ್ಳ ದಾಗಿದೆ.
- Hebrews 9:14 ಇಬ್ರಿಯರಿಗೆ 9:14ನಿತ್ಯಾತ್ಮನಿಂದ ತನ್ನನ್ನು ತಾನೇ ನಿರ್ದೋಷಿಯನ್ನಾಗಿ ದೇವರಿಗೆ ಸಮರ್ಪಿಸಿ ಕೊಂಡ ಕ್ರಿಸ್ತನ ರಕ್ತವು ಎಷ್ಟೋ ಹೆಚ್ಚಾಗಿ ನಿರ್ಜೀವ ಕ್ರಿಯೆಗಳಿಂದ ಬಿಡಿಸಿ ಜೀವವುಳ್ಳ ದೇವರನ್ನು ಸೇವಿಸುವಂತೆ ನಿಮ್ಮ ಮನ ಸ್ಸಾಕ್ಷಿಯನ್ನು ಶುದ್ಧೀಕರಿಸು ವದಲ್ಲವೇ.
- 2 Corinthians 13:4 2 ಕೊರಿಂಥದವರಿಗೆ 13:4ಬಲಹೀನತೆಯ ಮೂಲಕ ಆತನು ಶಿಲುಬೆಗೆ ಹಾಕಲ್ಪಟ್ಟಿದ್ದಾಗ್ಯೂ ದೇವರ ಬಲದಿಂದ ಇನ್ನೂ ಬದುಕುತ್ತಾನೆ; ನಾವು ಸಹ ಆತನಲ್ಲಿ ಬಲಹೀನ ರಾಗಿದ್ದೇವೆ, ಆದರೂ ನಾವು ನಿಮಗೋಸ್ಕರವಾಗಿ ದೇವರ ಬಲದಿಂದ ಆತನೊಂದಿಗೆ ಬದುಕುವೆವು.
- Acts 13:33–35 ಅಪೊಸ್ತಲರ ಕೃತ್ಯಗಳು 13:33–35ಏನಂ ದರೆ--ನೀನು ನನ್ನ ಮಗನು, ಈ ದಿನ ನಾನು ನಿನ್ನನ್ನು ಪಡೆದಿದ್ದೇನೆ ಎಂದು ಎರಡನೆಯ ಕೀರ್ತನೆಯಲ್ಲಿ ಸಹ ಬರೆದಿರುವ ಪ್ರಕಾರ ಅವರ ಮಕ್ಕಳಾದ ನಮಗೆ ದೇವರು ಯೇಸುವನ್ನು ತಿರಿಗಿ ಎಬ್ಬಿಸುವದರ ಮೂಲಕ ಅದನ್ನು ನೆರವೇರಿಸಿದ್ದಾನೆ ಎಂಬದೇ. ಇದಲ್ಲದೆ ದೇವರು ಯೇಸುವನ್ನು ಸತ್ತವರೊಳಗಿಂದ ಎಬ್ಬಿಸಿದ್ದರಿಂದ ಆತನು ಇನ್ನೆಂದಿಗೂ ಕೊಳೆಯುವ ಅವಸ್ಥೆಗೆ ಸೇರ ತಕ್ಕವನಲ್ಲವೆಂಬದರ ವಿಷಯದಲ್ಲಿ ಆತನು ಹೇಳಿರು ವದೇನಂದರೆ--ದಾವೀದನ ಖಂಡಿತವಾದ ಕರುಣೆ ಗಳನ್ನು ನಾನು ನಿಮಗೆ ಕೊಡುತ್ತೇನೆ ಎಂಬದು. ಅದಕ್ಕನುಸಾರವಾಗಿ ಆತನು--ನೀನು ನಿನ್ನ ಪರಿ ಶುದ್ಧನಿಗೆ ಕೊಳೆಯುವ ಅವಸ್ಥೆಯನ್ನು ನೋಡಗೊಡಿ ಸುವದಿಲ್ಲವೆಂದು ಬೇರೊಂದು ಕೀರ್ತನೆಯಲ್ಲಿಯೂ ಹೇಳುತ್ತಾನೆ.
- Acts 5:30–32 ಅಪೊಸ್ತಲರ ಕೃತ್ಯಗಳು 5:30–32ನೀವು ಮರಕ್ಕೆ ತೂಗುಹಾಕಿ ಕೊಂದ ಯೇಸುವನ್ನು ನಮ್ಮ ಪಿತೃಗಳ ದೇವರು ಎಬ್ಬಿಸಿದನು. ಇಸ್ರಾಯೇಲ್ಯ ರಲ್ಲಿ ಮಾನಸಾಂತರ ಉಂಟುಮಾಡಿ ಪಾಪಗಳ ಪರಿಹಾರವನ್ನು ಕೊಡುವ ಹಾಗೆ ಆತನು ಪ್ರಭುವೂ ರಕ್ಷಕನೂ ಆಗಿರುವಂತೆ ದೇವರು ತನ್ನ ಬಲಗೈಯಿಂದ ಆತನನ್ನು ಉನ್ನತಕ್ಕೆ ಏರಿಸಿದ್ದಾನೆ. ದೇವರು ತನಗೆ ವಿಧೇಯರಾಗುವವರಿಗೆ ದಯಪಾಲಿಸಿದ ಪವಿತ್ರಾ ತ್ಮನೂ ನಾವೂ ಇವುಗಳಿಗೆ ಆತನ ಸಾಕ್ಷಿಗಳಾಗಿದ್ದೇವೆ ಎಂದು ಹೇಳಿದರು.
- John 2:18–21 ಯೋಹಾನನು 2:18–21ಆಗ ಯೆಹೂದ್ಯರು ಆತನಿಗೆ--ನೀನು ಇವುಗಳನ್ನು ಮಾಡುವದಕ್ಕೆ ಯಾವ ಸೂಚಕಕಾರ್ಯ ವನ್ನು ನಮಗೆ ತೋರಿಸುತ್ತೀ ಎಂದು ಕೇಳಿದರು. ಯೇಸು ಪ್ರತ್ಯುತ್ತರವಾಗಿ ಅವರಿಗೆ--ಈ ದೇವಾಲ ಯವನ್ನು ಕೆಡವಿದರೆ ನಾನು ಮೂರು ದಿನಗಳಲ್ಲಿ ಅದನ್ನು ಎಬ್ಬಿಸುವೆನು ಅಂದನು. ಅದಕ್ಕೆ ಯೆಹೂದ್ಯರು-- ಈ ದೇವಾಲಯವನ್ನು ಕಟ್ಟುವದಕ್ಕೆ ನಾಲ್ವತ್ತಾರು ವರುಷಗಳು ಹಿಡಿದವು; ನೀನು ಮೂರು ದಿನಗಳಲ್ಲಿ ಅದನ್ನು ಎಬ್ಬಿಸುವಿಯೋ ಅಂದರು. ಆದರೆ ಆತನು ತನ್ನ ದೇಹವೆಂಬ ಆಲಯವನ್ನು ಕುರಿತು ಹೇಳಿದನು.
- 2 Peter 1:21 2 ಪೇತ್ರನು 1:21ಯಾಕಂದರೆ ಹಿಂದಿನ ಕಾಲದಲ್ಲಿ ಯಾವ ಪ್ರವಾದನೆಯೂ ಮನುಷ್ಯನ ಚಿತ್ತದಿಂದ ಬರಲಿಲ್ಲ; ಪರಿಶುದ್ಧರಾದ ದೇವಜನರು ಪವಿತ್ರಾತ್ಮ ಪ್ರೇರಿತರಾಗಿ ಮಾತನಾಡಿದರು.
- 1 Peter 1:11 1 ಪೇತ್ರನು 1:11ತಮ್ಮಲ್ಲಿದ್ದ ಕ್ರಿಸ್ತನ ಆತ್ಮನು ಕ್ರಿಸ್ತನಿಗೆ ಬರಬೇಕಾದ ಬಾಧೆಗಳನ್ನೂ ಅವುಗಳ ತರುವಾಯ ಉಂಟಾಗುವ ಪ್ರಭಾವವನ್ನೂ ಮುಂದಾಗಿ ಸಾಕ್ಷೀಕರಿಸಿದಾಗ ಆತನು ಯಾವ ಕಾಲವನ್ನು ಇಲ್ಲವೆ ಎಂಥ ಕಾಲವನ್ನು ಸೂಚಿಸುವ ನೆಂಬದನ್ನು ಅವರು ಪರಿಶೋಧನೆ ಮಾಡಿದರು.
- Acts 2:32 ಅಪೊಸ್ತಲರ ಕೃತ್ಯಗಳು 2:32ಈ ಯೇಸುವನ್ನೇ ದೇವರು ಎಬ್ಬಿಸಿದನು. ಇದಕ್ಕೆ ನಾವೆಲ್ಲರೂ ಸಾಕ್ಷಿ ಗಳಾಗಿದ್ದೇವೆ.
- Acts 17:31 ಅಪೊಸ್ತಲರ ಕೃತ್ಯಗಳು 17:31ಯಾಕಂದರೆ ಆತನು ನಿಷ್ಕರ್ಷೆಮಾಡಿದ ಪುರುಷನ ಕೈಯಿಂದ ನೀತಿಗನುಸಾರವಾಗಿ ಭೂಲೋಕದ ನ್ಯಾಯವಿಚಾರಣೆ ಮಾಡುವದಕ್ಕೆ ಒಂದು ದಿವಸ ವನ್ನು ನೇಮಕ ಮಾಡಿದ್ದಾನೆ. ಆತನನ್ನು ಸತ್ತವರೊಳ ಗಿಂದ ಎಬ್ಬಿಸಿದ್ದರಿಂದ ಇದಕ್ಕೆ ಎಲ್ಲರಿಗೂ ಆಧಾರ ಕೊಟ್ಟಿದ್ದಾನೆ ಅಂದನು.
- Acts 2:24 ಅಪೊಸ್ತಲರ ಕೃತ್ಯಗಳು 2:24ದೇವರು ಆತನನ್ನು ಮರಣ ವೇದನೆಗಳಿಂದ ಬಿಡಿಸಿ ಎಬ್ಬಿಸಿದನು. ಯಾಕಂದರೆ ಮರಣವು ಆತನನ್ನು ಹಿಡಿದುಕೊಂಡಿರುವದು ಅಸಾಧ್ಯ ವಾಗಿತ್ತು.