Romans · chapter 10 · verse 17
Romans 10:17 in Kannada
ಕೇಳುವದರಿಂದ ನಂಬಿಕೆಯುಂಟಾಗುತ್ತದೆ. ದೇವರ ವಾಕ್ಯವನ್ನು ಕೇಳುವದ ರಿಂದಲೇ.
Keluvadarinda nambikeyuntaaguttade. Devara vaakyavannu keluvada rindale.
Romans 10:17 in English
- King James Version (KJV)
- So then faith [cometh] by hearing, and hearing by the word of God.
- World English Bible (WEB)
- So faith comes by hearing, and hearing by the word of God.
- American Standard Version (ASV)
- So belief [cometh] of hearing, and hearing by the word of Christ.
- Bible in Basic English (BBE)
- So faith comes by hearing, and hearing by the word of Christ.
- Darby Translation (DBY)
- So faith then [is] by a report, but the report by God's word.
- Webster's Bible (WBS)
- So then, faith [cometh] by hearing, and hearing by the word of God.
- Young's Literal Translation (YLT)
- so then the faith [is] by a report, and the report through a saying of God,
Read in context
- 15ಇದ ಲ್ಲದೆ ಸಾರುವವರನ್ನು ಕಳುಹಿಸದಿದ್ದರೆ ಅವರು ಸಾರು ವದು ಹೇಗೆ? ಮತ್ತು--ಸಮಾಧಾನದ ಸುವಾರ್ತೆ ಯನ್ನು ಸಾರುವವರ ಮತ್ತು ಸಂತೋಷದ ಸುವರ್ತ ಮಾನವನ್ನು ತರುವವರ ಪಾದಗಳು ಎಷ್ಟೋ ಅಂದ ವಾಗಿವೆ ಎಂದು ಬರೆದದೆ.
- 16ಆದರೆ ಅವರೆಲ್ಲರೂ ಸುವಾರ್ತೆಗೆ ವಿಧೇಯರಾಗಲಿಲ್ಲ. ಆದದರಿಂದ ಯೆಶಾಯನು--ಕರ್ತನೇ, ನಮ್ಮ ವಾರ್ತೆಯನ್ನು ಯಾರು ನಂಬಿದರು ಅನ್ನುತ್ತಾನೆ.
- 17ಕೇಳುವದರಿಂದ ನಂಬಿಕೆಯುಂಟಾಗುತ್ತದೆ. ದೇವರ ವಾಕ್ಯವನ್ನು ಕೇಳುವದ ರಿಂದಲೇ.
- 18ಆದರೆ--ಅವರು ಕೇಳಲಿಲ್ಲವೇನು ಎಂದು ನಾನು ಕೇಳುತ್ತೇನೆ. ಹೌದು ನಿಜವೇ, ಅವರ ಧ್ವನಿಯು ಭೂಮಿಯಲ್ಲೆಲ್ಲಾ ಪ್ರಸರಿಸಿತು, ಅವರ ನುಡಿಗಳು ಲೋಕದ ಕಟ್ಟಕಡೆಯ ವರೆಗೂ ವ್ಯಾಪಿಸಿದವು.
- 19ಆದರೆ--ಇಸ್ರಾಯೇಲ್ಯರು ತಿಳುಕೊಳ್ಳಲಿಲ್ಲವೇನು ಎಂದು ನಾನು ಕೇಳುತ್ತೇನೆ. ಈ ವಿಷಯದಲ್ಲಿ--ನನ್ನ ಜನಾಂಗವಲ್ಲದವರ ಮೂಲಕ ನಿಮ್ಮಲ್ಲಿ ಹುರುಡು ಹುಟ್ಟಿಸುವೆನು; ವಿವೇಕವಿಲ್ಲದ ಜನರ ಮೂಲಕ ನಿಮ್ಮನ್ನು ಸಿಟ್ಟಿಗೆಬ್ಬಿಸುವೆನು ಎಂದು ಮೊದಲು ಮೋಶೆಯು ಹೇಳುತ್ತಾನೆ.
Cross references
- Galatians 3:2 ಗಲಾತ್ಯದವರಿಗೆ 3:2ಒಂದು ಸಂಗತಿಯನ್ನು ಮಾತ್ರ ನಿಮ್ಮಿಂದ ತಿಳುಕೊಳ್ಳಬೇಕೆಂದಿದ್ದೇನೆ. ನೀವು ಆತ್ಮನನ್ನು ಹೊಂದಿದ್ದು ನ್ಯಾಯಪ್ರಮಾಣದ ಕ್ರಿಯೆಗಳಿಂದಲೋ? ಇಲ್ಲವೆ ಕೇಳಿ ನಂಬಿದ್ದ ರಿಂದಲೋ?
- Galatians 3:5 ಗಲಾತ್ಯದವರಿಗೆ 3:5ಆತನು ಆತ್ಮನನ್ನು ನಿಮಗೆ ಕೊಟ್ಟು ನಿಮ್ಮಲ್ಲಿ ಮಹತ್ಕಾರ್ಯಗಳನ್ನು ನಡಿಸಿದನಲ್ಲಾ. ಹಾಗೆ ಮಾಡಿದ್ದು ನ್ಯಾಯಪ್ರಮಾಣದ ಕ್ರಿಯೆಗಳಿಂದಲೋ ಇಲ್ಲವೆ ಕೇಳಿ ನಂಬಿದ್ದರಿಂದಲೋ?
- Luke 11:28 ಲೂಕನು 11:28ಆದರೆ ಆತನು--ಹೌದು, ಇದಕ್ಕಿಂ ತಲೂ ದೇವರ ವಾಕ್ಯವನ್ನು ಕೇಳಿ ಅದರಂತೆ ನಡೆಯು ವವರೇ ಧನ್ಯರು ಎಂದು ಹೇಳಿದನು.
- Colossians 3:16 ಕೊಲೊಸ್ಸೆಯವರಿಗೆ 3:16ಸಕಲ ಜ್ಞಾನದಲ್ಲಿ ಕ್ರಿಸ್ತನ ವಾಕ್ಯವು ನಿಮ್ಮಲ್ಲಿ ಸಮೃದ್ಧಿಯಾಗಿ ವಾಸಿಸಲಿ; ಒಬ್ಬರಿಗೊಬ್ಬರು ಉಪದೇಶಿಸುತ್ತಾ ಬುದ್ದಿ ಹೇಳುತ್ತಾ ಕೀರ್ತನೆಗಳಿಂದಲೂ ಸಂಗೀತಗಳಿಂದಲೂ ಆತ್ಮ ಸಂಬಂಧವಾದ ಹಾಡುಗಳಿಂದಲೂ ಕೃಪೆಯಿಂದ ನಿಮ್ಮ ಹೃದಯಗಳಲ್ಲಿ ಕರ್ತನಿಗೆ ಹಾಡುತ್ತಾ ಇರ್ರಿ.
- 1 Thessalonians 2:13 1 ಥೆಸಲೊನೀಕದವರಿಗೆ 2:13ಹೀಗಿರಲಾಗಿ ನೀವು ದೇವರ ವಾಕ್ಯವನ್ನು ನಮ್ಮಿಂದ ಕೇಳಿದಾಗ ಅದನ್ನು ಮನುಷ್ಯರ ವಾಕ್ಯವೆಂದೆಣಿಸದೆ ನಿಜವಾಗಿಯೂ ದೇವರ ವಾಕ್ಯವೆಂದೇ ತಿಳಿದು ಅಂಗೀ ಕರಿಸಿದ್ದಕ್ಕಾಗಿ ನಾವಂತೂ ಎಡೆಬಿಡದೆ ದೇವರಿಗೆ ಕೃತಜ್ಞತಾಸ್ತುತಿ ಮಾಡುತ್ತೇವೆ; ಅದು ನಂಬುವವರಾದ ನಿಮ್ಮೊಳಗೆ ಬಲವಾಗಿ ಕೆಲಸ ನಡಿಸುತ್ತದೆ.
- Mark 4:24 ಮಾರ್ಕನು 4:24ಆತನು ಅವರಿಗೆ--ನೀವು ಕೇಳುವದರಲ್ಲಿ ಎಚ್ಚರವಾಗಿರ್ರಿ; ನೀವು ಯಾವ ಅಳತೆಯಿಂದ ಅಳೆಯುತ್ತೀರೋ ಅದು ನಿಮಗೂ ಅಳೆಯಲ್ಪಡುವದು; ಮತ್ತು ಕೇಳುವವ ರಾದ ನಿಮಗೆ ಹೆಚ್ಚಾಗಿ ಕೊಡಲ್ಪಡುವದು.
- Luke 8:21 ಲೂಕನು 8:21ಆದರೆ ಆತನು ಪ್ರತ್ಯುತ್ತರವಾಗಿ ಅವರಿಗೆ--ದೇವರ ವಾಕ್ಯವನ್ನು ಕೇಳಿ ಅದರಂತೆ ಮಾಡುವ ಇವರೇ ನನ್ನ ತಾಯಿಯೂ ನನ್ನ ಸಹೋದರರೂ ಆಗಿದ್ದಾರೆ ಎಂದು ಹೇಳಿದನು.
- Romans 1:16 ರೋಮಾಪುರದವರಿಗೆ 1:16ಕ್ರಿಸ್ತನ ಸುವಾರ್ತೆಯ ವಿಷಯದಲ್ಲಿ ನಾನು ನಾಚಿಕೆಪಡುವದಿಲ್ಲ; ಅದು ಮೊದಲು ಯೆಹೂದ್ಯ ರಿಗೂ ತರುವಾಯ ಗ್ರೀಕರಿಗೂ ಅಂತೂ ನಂಬುವ ಪ್ರತಿಯೊಬ್ಬನಿಗೂ ರಕ್ಷಣೆಗಾಗಿ ದೇವರ ಶಕ್ತಿಯಾಗಿದೆ.
- Romans 10:14 ರೋಮಾಪುರದವರಿಗೆ 10:14ಆದರೆ ತಾವು ಯಾವಾತನನ್ನು ನಂಬಲಿಲ್ಲವೋ ಆತನನ್ನು ಬೇಡಿಕೊಳ್ಳುವದು ಹೇಗೆ? ಆತನ ವಿಷಯ ವಾಗಿ ಕೇಳದಿರುವಲ್ಲಿ ಆತನನ್ನು ನಂಬುವದು ಹೇಗೆ? ಸಾರಿ ಹೇಳುವವನಿಲ್ಲದೆ ಕೇಳುವದು ಹೇಗೆ?
- Hebrews 4:12–13 ಇಬ್ರಿಯರಿಗೆ 4:12–13ಯಾಕಂದರೆ ದೇವರ ವಾಕ್ಯವು ಸಜೀವ ವಾದದ್ದು, ಶಕ್ತಿಯುಳ್ಳದ್ದು, ಯಾವ ಇಬ್ಬಾಯಿ ಕತ್ತಿ ಗಿಂತಲೂ ಹದವಾದದ್ದು, ಪ್ರಾಣ ಆತ್ಮಗಳನ್ನೂ ಕೀಲು ಮಜ್ಜೆಗಳನ್ನೂ ವಿಭಾಗಿಸುವಷ್ಟರ ಮಟ್ಟಿಗೆ ತೂರಿ ಹೋಗುವಂಥದ್ದೂ ಹೃದಯದ ಆಲೋಚನೆಗಳನ್ನೂ ಉದ್ದೇಶಗಳನ್ನೂ ವಿವೇಚಿಸುವಂಥದ್ದೂ ಆಗಿದೆ. ನಾವು ಯಾವಾತನಿಗೆ ಲೆಕ್ಕ ಒಪ್ಪಿಸಬೇಕಾಗಿದೆಯೋ ಆತನ ದೃಷ್ಟಿಗೆ ಸಮಸ್ತವೂ ಮುಚ್ಚುಮರೆಯಿಲ್ಲ ದ್ದಾಗಿಯೂ ಬೈಲಾದದ್ದಾಗಿಯೂ ಆದರೆ ಆತನ ಸನ್ನಿಧಿಯಲ್ಲಿ ಅಗೋಚರವಾಗಿರುವ ಸೃಷ್ಟಿಯು ಒಂದೂ ಇಲ್ಲ.
- 1 Corinthians 1:18–24 1 ಕೊರಿಂಥದವರಿಗೆ 1:18–24ನಾಶವಾಗುವವರಿಗೆ ಶಿಲುಬೆಯ ವಿಷಯವಾದ ಸಾರೋಣವು ಹುಚ್ಚುತನವಾಗಿದೆ; ರಕ್ಷಣೆ ಹೊಂದಿದ ನಮಗಾದರೋ ಅದು ದೇವರ ಶಕ್ತಿಯಾಗಿದೆ. ನಾನು ಜ್ಞಾನಿಗಳ ಜ್ಞಾನವನ್ನು ನಾಶಮಾಡುವೆನು; ವಿವೇಕಿಗಳ ವಿವೇಕವನ್ನು ಇಲ್ಲದಂತಾಗ ಮಾಡುವೆನು ಎಂದು ಬರೆಯಲ್ಪಟ್ಟಿದೆ. ಜ್ಞಾನಿಯು ಎಲ್ಲಿ? ಶಾಸ್ತ್ರಿಯು ಎಲ್ಲಿ? ಲೋಕದ ತರ್ಕವಾದಿ ಎಲ್ಲಿ? ದೇವರು ಈ ಲೋಕದ ಜ್ಞಾನವನ್ನು ಹುಚ್ಚುತನವನ್ನಾಗಿ ಮಾಡಿದ್ದಾನಲ್ಲವೇ? ಯಾಕಂದರೆ ದೇವರ ಜ್ಞಾನದಲ್ಲಿ ಲೋಕವು(ತನ್ನ) ಜ್ಞಾನದ ಮೂಲಕ ದೇವರನ್ನು ತಿಳಿದುಕೊಳ್ಳಲಿಲ್ಲವಾದ ದರಿಂದ ಪ್ರಸಂಗದ ಹುಚ್ಚುತನದಿಂದಲೇ ನಂಬುವ ವರನ್ನು ರಕ್ಷಿಸುವದು ದೇವರಿಗೆ ಇಷ್ಟವಾಗಿತ್ತು. ಯೆಹೂದ್ಯರು ಸೂಚಕಕಾರ್ಯವನ್ನು ಕೇಳುತ್ತಾರೆ; ಗ್ರೀಕರು ಜ್ಞಾನವನ್ನು ಹುಡುಕುತ್ತಾರೆ; ನಾವಾದರೋ ಶಿಲುಬೆಗೆ ಹಾಕಲ್ಪಟ್ಟವನಾದ ಕ್ರಿಸ್ತನನ್ನು ಪ್ರಚುರ ಪಡಿಸುತ್ತೇವೆ. ಆತನು ಯೆಹೂದ್ಯರಿಗೆ ಅಭ್ಯಂತರವೂ ಗ್ರೀಕರಿಗೆ ಹುಚ್ಚುತನವೂ ಆಗಿದ್ದಾನೆ. ಆದರೆ ಕರೆಯಲ್ಪಟ್ಟ ಯೆಹೂದ್ಯರಿಗೂ ಗ್ರೀಕರಿಗೂ ಕ್ರಿಸ್ತನೇ ದೇವರ ಶಕ್ತಿಯೂ ದೇವರ ಜ್ಞಾನವೂ ಆಗಿದ್ದಾನೆ.
- 2 Thessalonians 2:13–14 2 ಥೆಸಲೊನೀಕದವರಿಗೆ 2:13–14ಕರ್ತನಿಗೆ ಪ್ರಿಯರಾಗಿರುವ ಸಹೊದರರೇ, ನೀವು ಆತ್ಮನಿಂದ ಶುದ್ಧೀಕರಿಸಲ್ಪಟ್ಟವರಾಗಿ ಸತ್ಯದ ಮೇಲೆ ನಂಬಿಕೆಯನ್ನಿಟ್ಟು ರಕ್ಷಣೆಯನ್ನು ಪಡೆಯುವದಕ್ಕಾಗಿ ದೇವರು ನಿಮ್ಮನ್ನು ಆದಿಯಿಂದ ಆರಿಸಿಕೊಂಡದ್ದರಿಂದ ನಾವು ನಿಮ್ಮ ವಿಷಯದಲ್ಲಿ ಯಾವಾಗಲೂ ದೇವರಿಗೆ ಕೃತಜ್ಞತಾಸ್ತುತಿ ಮಾಡುವದಕ್ಕೆ ಬದ್ದರಾಗಿದ್ದೇವೆ ನಮ್ಮ ಕರ್ತನಾದ ಯೇಸು ಕ್ರಿಸ್ತನ ಪ್ರಭಾವವನ್ನು ಹೊಂದಿ ಕೊಳ್ಳಬೇಕೆಂದು ದೇವರು ನಮ್ಮ ಸುವಾರ್ತೆಯ ಮೂಲಕವಾಗಿ ನಿಮ್ಮನ್ನು ಅದಕ್ಕೆ ಕರೆದನು.