Romans · chapter 10 · verse 4
Romans 10:4 in Kannada
ನಂಬುವ ಪ್ರತಿಯೊಬ್ಬನು ನೀತಿವಂತನಾಗುವಂತೆ ಕ್ರಿಸ್ತನು ನ್ಯಾಯಪ್ರಮಾಣದ ಅಂತ್ಯವಾಗಿದ್ದಾನೆ.
Nambuva pratiyobbanu neetivantanaaguvante kristanu nyaayapramaanada antyavaagiddaane.
Romans 10:4 in English
- King James Version (KJV)
- For Christ [is] the end of the law for righteousness to every one that believeth.
- World English Bible (WEB)
- For Christ is the fulfillment of the law for righteousness to everyone who believes.
- American Standard Version (ASV)
- For Christ is the end of the law unto righteousness to every one that believeth.
- Bible in Basic English (BBE)
- For Christ is the end of the law for righteousness to everyone who has faith.
- Darby Translation (DBY)
- For Christ is [the] end of law for righteousness to every one that believes.
- Webster's Bible (WBS)
- For Christ [is] the end of the law for righteousness to every one that believeth.
- Young's Literal Translation (YLT)
- For Christ is an end of law for righteousness to every one who is believing,
Read in context
- 2ದೇವರಲ್ಲಿ ಆಸಕ್ತರಾಗಿದ್ದಾರೆಂದು ನಾನು ಅವರ ವಿಷಯದಲ್ಲಿ ಸಾಕ್ಷಿಕೊಡುತ್ತೇನೆ; ಆದರೂ ಅವರ ಆಸಕ್ತಿಯು ಜ್ಞಾನಾನುಸಾರವಾದದ್ದಲ್ಲ.
- 3ಅವರು ದೇವ ರಿಂದ ದೊರಕುವ ನೀತಿಯನ್ನರಿಯದೆ ಸ್ವನೀತಿಯನ್ನೇ ಸ್ಥಾಪಿಸಬೇಕೆಂದು ಪ್ರಯತ್ನಿಸುತ್ತಾ ಇದ್ದದರಿಂದ ದೇವರ ನೀತಿಗೆ ಅಧೀನರಾಗಲಿಲ್ಲ.
- 4ನಂಬುವ ಪ್ರತಿಯೊಬ್ಬನು ನೀತಿವಂತನಾಗುವಂತೆ ಕ್ರಿಸ್ತನು ನ್ಯಾಯಪ್ರಮಾಣದ ಅಂತ್ಯವಾಗಿದ್ದಾನೆ.
- 5ಇದಲ್ಲದೆ-- ನ್ಯಾಯಪ್ರಮಾಣವು ಹೇಳುವವುಗಳನ್ನು ಮಾಡುವವನು ಅವುಗಳಿಂದಲೇ ಜೀವಿಸುವನು ಎಂದು ಮೋಶೆಯು ಅದರ ನೀತಿಯ ವಿಷಯವಾಗಿ ವಿವರಿಸುತ್ತಾನೆ.
- 6ಆದರೆ ನಂಬಿಕೆ ಯಿಂದುಂಟಾಗುವ ನೀತಿಯು ಹೇಳುವದೇನಂದರೆ, (ಮೇಲಿನಿಂದ ಕ್ರಿಸ್ತನನ್ನು ತರುವಂತೆ) ಪರಲೋಕಕ್ಕೆ ಏರಿ ಹೋಗುವವನು ಯಾರು?
Cross references
- Galatians 3:24 ಗಲಾತ್ಯದವರಿಗೆ 3:24ನಾವು ನಂಬಿಕೆಯ ಮೂಲಕ ನೀತಿವಂತರೆಂದು ನಿರ್ಣಯಿಸಲ್ಪಡುವಂತೆ ನಮ್ಮನ್ನು ಕ್ರಿಸ್ತನ ಬಳಿಗೆ ತರುವದಕ್ಕಾಗಿ ನ್ಯಾಯಪ್ರಮಾಣವು ನಮ್ಮ ಉಪಾಧ್ಯಾಯನಂತಿತ್ತು.
- Romans 8:3–4 ರೋಮಾಪುರದವರಿಗೆ 8:3–4ನ್ಯಾಯಪ್ರಮಾಣವು ಶರೀರದ ಮೂಲಕ ನಿರ್ಬಲವಾಗಿ ಯಾವದನ್ನು ಮಾಡಲಾರದೆ ಇತ್ತೋ ಅದನ್ನು ದೇವರೇ ಮಾಡಿದನು; ಹೇಗಂದರೆ ಆತನು ತನ್ನ ಸ್ವಂತ ಮಗನನ್ನು ಪಾಪಶರೀರದ ಹೋಲಿಕೆ ಯಲ್ಲಿ ಕಳುಹಿಸಿ ಪಾಪಕ್ಕಾಗಿ ಆ ಶರೀರದಲ್ಲಿಯೇ ಪಾಪವನ್ನು ದಂಡಿಸಿದನು. ಹೀಗೆ ಶರೀರಕ್ಕನುಸಾರ ವಾಗಿ ನಡೆಯದೆ ಆತ್ಮನಿಗನುಸಾರವಾಗಿ ನಡೆಯುವವ ರಾದ ನಮ್ಮಲ್ಲಿ ನ್ಯಾಯಪ್ರಮಾಣದ ನೀತಿಯು ನೆರ ವೇರುವದು.
- Matthew 5:17–18 ಮತ್ತಾಯನು 5:17–18ನ್ಯಾಯಪ್ರಮಾಣವನ್ನಾಗಲೀ ಪ್ರವಾದನೆಗಳ ನ್ನಾಗಲೀ ಹಾಳುಮಾಡುವದಕ್ಕಾಗಿ ನಾನು ಬಂದೆ ನೆಂದು ನೆನಸಬೇಡಿರಿ, ಹಾಳುಮಾಡುವದಕ್ಕಾಗಿ ಅಲ್ಲ; ಆದರೆ ನೆರವೇರಿಸುವದಕ್ಕಾಗಿ ಬಂದೆನು. ಆಕಾಶವೂ ಭೂಮಿಯೂ ಗತಿಸಿ ಹೋಗುವ ತನಕ ಎಲ್ಲವೂ ನೆರವೇರದ ಹೊರತು ನ್ಯಾಯಪ್ರಮಾಣದಿಂದ ಒಂದು ಸೊನ್ನೆಯಾದರೂ ಒಂದು ಗುಡುಸಾದರೂ ಅಳಿದು ಹೋಗುವದೇ ಇಲ್ಲವೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ.
- Acts 13:38–39 ಅಪೊಸ್ತಲರ ಕೃತ್ಯಗಳು 13:38–39ಆದದರಿಂದ ಜನರೇ, ಸಹೋದರರೇ, ಈ ಮನುಷ್ಯನ ಮೂಲಕವಾಗಿ ಪಾಪಪರಿಹಾರವು ದೊರೆಯುತ್ತದೆಂಬದು ನಿಮಗೆ ಸಾರೋಣವಾಗು ತ್ತದೆಂದೂ ಮೋಶೆಯ ಯಾವ ನ್ಯಾಯಪ್ರಮಾಣ ದಿಂದ ಯಾವವುಗಳಲ್ಲಿ ನೀವು ನೀತಿವಂತರೆಂಬ ನಿರ್ಣಯವನ್ನು ಹೊಂದಲಾರದೆ ಹೋಗಿದ್ದಿರೋ ಅವೆಲ್ಲವುಗಳಿಂದ ನಂಬುವವರೆಲ್ಲರೂ ಆತನ ಮೂಲಕ ನೀತಿವಂತರೆಂಬ ನಿರ್ಣಯವನ್ನು ಹೊಂದಿದ್ದಾರೆಂದು ನಿಮಗೆ ತಿಳಿದಿರಲಿ.
- John 1:17 ಯೋಹಾನನು 1:17ನ್ಯಾಯಪ್ರಮಾಣವು ಮೋಶೆಯ ಮುಖಾಂತರ ವಾಗಿ ಕೊಡಲ್ಪಟ್ಟಿತು; ಆದರೆ ಕೃಪೆಯೂ ಸತ್ಯವೂ ಯೇಸು ಕ್ರಿಸ್ತನ ಮುಖಾಂತರವಾಗಿ ಬಂದವು.
- Hebrews 10:14 ಇಬ್ರಿಯರಿಗೆ 10:14ಆತನು ಪವಿತ್ರರಾಗುವವರನ್ನು ಒಂದೇ ಅರ್ಪಣೆಯಿಂದ ನಿರಂ ತರಕ್ಕೂ ಸಂಪೂರ್ಣರನ್ನಾಗಿ ಮಾಡಿದ್ದಾನೆ.
- Isaiah 53:11 ಯೆಶಾಯ 53:11ಆತನು ತನ್ನ ಆತ್ಮದ ವೇದನೆಯನ್ನು ಕಂಡು ತೃಪ್ತನಾಗುವನು; ತನ್ನ ತಿಳುವ ಳಿಕೆಯಿಂದ ನೀತಿವಂತನಾದ ನನ್ನ ಸೇವಕನು ಅನೇಕ ರಿಗೆ ನೀತಿಯನು ಉಂಟುಮಾಡುವನು; ಯಾಕಂದರೆ ಆತನು ಅವರ ದುಷ್ಕೃತ್ಯಗಳನ್ನು ಹೊತ್ತುಕೊಳ್ಳುವನು.ಆದದರಿಂದ ನಾನು ಆತನಿಗೋಸ್ಕರ ದೊಡ್ಡ ವರೊಂದಿಗೆ ಭಾಗಮಾಡುವೆನು ಆತನು ಬಲಿಷ್ಠರ ಸಂಗಡ ಕೊಳ್ಳೆಯಲ್ಲಿ ಪಾಲುಮಾಡುವನು; ಆತನು ತನ್ನ ಪ್ರಾಣವನ್ನು ಮರಣದ ವರೆಗೆ ಹೊಯ್ದು ಬಿಟ್ಟು ದ್ರೋಹಿಗಳೊಂದಿಗೆ ಎಣಿಸಲ್ಪಟ್ಟನು; ಅನೇಕರ ಪಾಪ ವನ್ನು ಹೊತ್ತುಕೊಂಡು ದ್ರೋಹಿಗಳಿಗೋಸ್ಕರ ವಿಜ್ಞಾ ಪನೆ ಮಾಡಿದನು.
- Colossians 2:17 ಕೊಲೊಸ್ಸೆಯವರಿಗೆ 2:17ಇವು ಬರಬೇಕಾಗಿದ್ದವುಗಳ ಛಾಯೆ ಯಾಗಿವೆ; ಆದರೆ ಶರೀರವು ಕ್ರಿಸ್ತನದೇ.
- Romans 7:1–4 ರೋಮಾಪುರದವರಿಗೆ 7:1–4ಸಹೋದರರೇ, (ನ್ಯಾಯಪ್ರಮಾಣವನ್ನು ತಿಳಿದವರಿಗೆ ನಾನು ಹೇಳುವದೇ ನಂದರೆ,) ಒಬ್ಬ ಮನುಷ್ಯನು ಜೀವದಿಂದಿರುವ ತನಕ ಅವನ ಮೇಲೆ ನ್ಯಾಯಪ್ರಮಾಣವು ಪ್ರಭುತ್ವ ಮಾಡುತ್ತ ದೆಂಬದು ನಿಮಗೆ ಗೊತ್ತಿಲ್ಲವೇ? ಗಂಡನಿರುವ ಸ್ತ್ರೀಯು ಅವನು ಬದುಕಿರುವ ತನಕ ನ್ಯಾಯಪ್ರಮಾಣದಿಂದ ಅವನಿಗೆ ಕಟ್ಟಲ್ಪಟ್ಟಿದ್ದಾಳೆ; ಗಂಡನು ಸತ್ತರೆ ಆಕೆಯು ಅವನ ನ್ಯಾಯಪ್ರಮಾಣದಿಂದ ಬಿಡುಗಡೆಯಾಗಿ ದ್ದಾಳೆ. ಹೀಗಿರಲಾಗಿ ಗಂಡನು ಜೀವದಿಂದಿರುವಾಗ ಆಕೆ ಬೇರೊಬ್ಬನನ್ನು ಮದುವೆ ಮಾಡಿಕೊಂಡರೆ ವ್ಯಭಿ ಚಾರಿಣಿ ಎಂದು ಕರೆಯಲ್ಪಡುವಳು; ಗಂಡನು ಸತ್ತರೆ ಆ ನ್ಯಾಯಪ್ರಮಾಣದಿಂದ ಆಕೆಯು ಬಿಡುಗಡೆಯಾಗಿ ದ್ದಾಳೆ. ಹೀಗೆ ಆಕೆ ಮತ್ತೊಬ್ಬನನ್ನು ಮದುವೆ ಮಾಡಿ ಕೊಂಡರೂ ವ್ಯಭಿಚಾರಿಣಿಯಲ್ಲ. ಹಾಗೆಯೇ ನನ್ನ ಸಹೋದರರೇ, ನೀವು ಸಹ ಕ್ರಿಸ್ತನ ದೇಹದ ಮೂಲಕವಾಗಿ ನ್ಯಾಯಪ್ರಮಾಣದ ಪಾಲಿಗೆ ಸತ್ತಿರಿ. ದೇವರಿಗೆ ಫಲಫಲಿಸುವದಕ್ಕಾಗಿ ಮತ್ತೊಬ್ಬನನ್ನು ಅಂದರೆ ಸತ್ತುಜೀವಿತನಾಗಿ ಎದ್ದಾತನನ್ನು ಸೇರಿಕೊಂಡಿರಿ.
- Colossians 2:10 ಕೊಲೊಸ್ಸೆಯವರಿಗೆ 2:10ನೀವು ಆತನಲ್ಲಿದ್ದು ಕೊಂಡೇ ಪರಿಪೂರ್ಣತೆಯನ್ನು ಹೊಂದಿದವರಾಗಿ ದ್ದೀರಿ. ಆತನು ಎಲ್ಲಾ ದೊರೆತನಕ್ಕೂ ಅಧಿಕಾರಕ್ಕೂ ಶಿರಸ್ಸಾಗಿದ್ದಾನೆ.
- Romans 3:25–31 ರೋಮಾಪುರದವರಿಗೆ 3:25–31ಈತನು ತನ್ನ ರಕ್ತದ ಮೂಲಕ ನಂಬಿಕೆಯಿದ್ದವರಿಗಾಗಿ ಪಾಪದ ಪ್ರಾಯಶ್ಚಿತ್ತವಾಗಿರಬೇಕೆಂದು ದೇವರು ಈತನನ್ನು ಮುಂದಿಟ್ಟನು. ದೇವರು ಹಿಂದಿನಕಾಲದ ಪಾಪಗಳನ್ನು ಸಹಿಸಿಕೊಂಡಿರಲಾಗಿ ತನ್ನ ನೀತಿಯನ್ನು ಈಗಿನ ಕಾಲದಲ್ಲಿ ಹೀಗೆ ತೋರಿಸಿ ತಾನು ನೀತಿವಂತನಾಗಿಯೂ ಯೇಸುವಿನಲ್ಲಿ ನಂಬಿಕೆಯಿಡುವವರನ್ನು ನೀತಿವಂತ ರೆಂದು ನಿರ್ಣಯಿಸುವವನಾಗಿಯೂ ಪ್ರಸಿದ್ಧಿಪಡಿಸಿ ಕೊಂಡನು. ಹಾಗಾದರೆ ಹೊಗಳಿಕೊಳ್ಳುವದು ಹೇಗೆ? ಅದು ಇಲ್ಲದೆ ಹೋಯಿತು. ಯಾವ ನಿಯಮದಿಂದ? ಕ್ರಿಯೆಗಳಿಂದಲೋ? ಅಲ್ಲ; ವಿಶ್ವಾಸ ನಿಯಮವನ್ನು ಅನುಸರಿಸುವದರಿಂದಲೇ. ಆದದರಿಂದ ನ್ಯಾಯ ಪ್ರಮಾಣದ ಕ್ರಿಯೆಗಳಿಲ್ಲದೆ ನಂಬಿಕೆಯಿಂದಲೇ ಮನು ಷ್ಯನು ನೀತಿವಂತನೆಂದು ನಿರ್ಣಯಿಸಲ್ಪಡುವನೆಂಬ ದಾಗಿ ನಾವು ತೀರ್ಮಾನಿಸಿಕೊಂಡಿದ್ದೇವಲ್ಲಾ. ದೇವರು ಯೆಹೂದ್ಯರಿಗೆ ಮಾತ್ರ ದೇವರಾಗಿ ದ್ದಾನೋ? ಅನ್ಯಜನಗಳಿಗೆ ಸಹ ದೇವರಲ್ಲವೇ? ಹೌದು, ಆತನು ಅನ್ಯಜನರಿಗೆ ಸಹ ದೇವರಾಗಿದ್ದಾನೆ; ದೇವರು ಒಬ್ಬನೇ ಆಗಿರಲಾಗಿ ಆತನು ಸುನ್ನತಿಯವರನ್ನು ನೀತಿವಂತರೆಂದು ನಿರ್ಣಯಿಸು ವದಕ್ಕೆ ಅವರ ನಂಬಿಕೆಯಿಂದಲೇ. ಸುನ್ನತಿಯಿಲ್ಲ ದವರನ್ನು ಹಾಗೆಯೇ ನಿರ್ಣಯಿಸುವದು ನಂಬಿಕೆಯ ಮೂಲಕವೇ.ಹಾಗಾದರೆ ನಂಬಿಕೆಯಿಂದ ನ್ಯಾಯಪ್ರಮಾಣವನ್ನು ನಿರರ್ಥಕ ಮಾಡುತ್ತೇವೋ? ಹಾಗೆ ಎಂದಿಗೂ ಅಲ್ಲ; ಹೌದು, ನಾವು ನ್ಯಾಯಪ್ರಮಾಣವನ್ನು ಸ್ಥಿರಪಡಿಸುತ್ತೇವೆ. ಹಾಗಾದರೆ ನಂಬಿಕೆಯಿಂದ ನ್ಯಾಯಪ್ರಮಾಣವನ್ನು ನಿರರ್ಥಕ ಮಾಡುತ್ತೇವೋ? ಹಾಗೆ ಎಂದಿಗೂ ಅಲ್ಲ; ಹೌದು, ನಾವು ನ್ಯಾಯಪ್ರಮಾಣವನ್ನು ಸ್ಥಿರಪಡಿಸುತ್ತೇವೆ.
- Romans 3:22 ರೋಮಾಪುರದವರಿಗೆ 3:22ದೇವರಿಂದಾಗುವ ಆ ನೀತಿಯು ಯಾವ ದೆಂದರೆ ಯೇಸು ಕ್ರಿಸ್ತನನ್ನು ನಂಬುವದರಿಂದಲೇ. ನಂಬುವವರೆಲ್ಲರಿಗೆ ಮತ್ತು ಎಲ್ಲರ ಮೇಲೆಯೂ ದೊರ ಕುವಂಥದು. ಹೆಚ್ಚು ಕಡಿಮೆ ಏನೂ ಇಲ್ಲ;