Romans · chapter 11 · verse 10
Romans 11:10 in Kannada
ನೋಡದಂತೆ ಅವರ ಕಣ್ಣು ಗಳು ಮೊಬ್ಬಾಗಲಿ; ಅವರ ಬೆನ್ನು ಯಾವಾಗಲೂ ಬೊಗ್ಗಿಕೊಂಡಿರಲಿ ಎಂದು ಅನ್ನುತ್ತಾನೆ.
Nodadante avara kannu galu mobbaagali; avara bennu yaavaagaloo boggikondirali endu annuttaane.
Romans 11:10 in English
- King James Version (KJV)
- Let their eyes be darkened, that they may not see, and bow down their back alway.
- World English Bible (WEB)
- Let their eyes be darkened, that they may not see. Always keep their backs bent.”
- American Standard Version (ASV)
- Let their eyes be darkened, that they may not see, And bow thou down their back always.
- Bible in Basic English (BBE)
- Let their eyes be made dark so that they may not see, and let their back be bent down at all times.
- Darby Translation (DBY)
- let their eyes be darkened not to see, and bow down their back alway.
- Webster's Bible (WBS)
- Let their eyes be darkened, that they may not see, and bow down their back always.
- Young's Literal Translation (YLT)
- let their eyes be darkened — not to behold, and their back do Thou always bow down.'
Read in context
- 8(ಬರೆದಿರುವಂತೆ ದೇವರು ಅವರಿಗೆ ತೂಕಡಿಕೆಯ ಆತ್ಮವನ್ನೂ ಕಾಣದ ಕಣ್ಣುಗಳನ್ನೂ ಕೇಳದ ಕಿವಿಗಳನ್ನೂ ಕೊಟ್ಟಿದ್ದಾನೆ). ಉಳಿದವರು ಈ ದಿನದ ವರೆಗೂ ಕುರುಡರಾಗಿದ್ದಾರೆ.
- 9ಇದಲ್ಲದೆ ದಾವೀದನು--ಅವರ ಊಟವು ಅವರಿಗೆ ಉರ್ಲೂ ಬೋನೂ ಅಭ್ಯಂತರವೂ ಪ್ರತಿಫಲವೂ ಆಗಲಿ.
- 10ನೋಡದಂತೆ ಅವರ ಕಣ್ಣು ಗಳು ಮೊಬ್ಬಾಗಲಿ; ಅವರ ಬೆನ್ನು ಯಾವಾಗಲೂ ಬೊಗ್ಗಿಕೊಂಡಿರಲಿ ಎಂದು ಅನ್ನುತ್ತಾನೆ.
- 11ಹಾಗಾದರೆ--ಅವರು ಬಿದ್ದುಹೋಗುವಂತೆ ಎಡವಿದರೆಂದು ನಾನು ಹೇಳಬೇಕೋ? ಹಾಗೆ ಎಂದಿಗೂ ಆಗಬಾರದು; ಆದರೆ ಅವರಲ್ಲಿ ಹುರುಡು ಹುಟ್ಟಿಸುವದಕ್ಕಾಗಿ ಅವರ ಬೀಳುವಿಕೆಯ ಮೂಲಕವೇ ಅನ್ಯಜನರಿಗೆ ರಕ್ಷಣೆಯುಂಟಾಯಿತು.
- 12ಅವರ ಬೀಳುವಿಕೆಯು ಲೋಕದ ಐಶ್ವರ್ಯಕ್ಕೂ ಅವರ ಕುಂದುವಿಕೆಯು ಅನ್ಯಜನಗಳ ಸಂಪತ್ತಿಗೂ ಆಗಿರು ವದಾದರೆ ಅವರ ಸಮೃದ್ಧಿಯು ಇನ್ನೂ ಎಷ್ಟೋ ಹೆಚ್ಚಾಗಿರುವದಲ್ಲವೇ?
Cross references
- Psalm 69:23 ಕೀರ್ತನೆಗಳು 69:23ಅವರ ಕಣ್ಣಗಳು ಕಾಣದ ಹಾಗೆ ಕತ್ತಲಾಗಲಿ; ಅವರ ಸೊಂಟಗಳನ್ನು ಯಾವಾಗಲೂ ಕದಲಿಸು.
- Deuteronomy 28:64–68 ಧರ್ಮೋಪದೇಶಕಾಂಡ 28:64–68ಇದ ಲ್ಲದೆ ಕರ್ತನು ನಿನ್ನನ್ನು ಭೂಮಿಯ ಈ ಮೇರೆಯಿಂದ ಆ ಮೇರೆಯ ವರೆಗೂ ಎಲ್ಲಾ ಜನಗಳಲ್ಲಿ ಚದರಿಸು ವನು; ಅಲ್ಲಿ ನೀನೂ ನಿನ್ನ ಪಿತೃಗಳೂ ತಿಳಿಯದಂಥ ಮರವೂ ಕಲ್ಲೂ ಆಗಿರುವಂಥ ಬೇರೆ ದೇವರುಗಳನ್ನು ಸೇವಿಸುವಿ. ಈ ಜನಾಂಗಗಳಲ್ಲಿ ನಿನಗೆ ನೆಮ್ಮದಿ ಇರುವದಿಲ್ಲ; ನಿನ್ನ ಅಂಗಾಲಿಗೆ ವಿಶ್ರಾಂತಿ ಆಗುವದಿಲ್ಲ; ಅಲ್ಲಿ ಕರ್ತನು ನಿನಗೆ ನಡುಗುವ ಹೃದಯವನ್ನೂ ಕ್ಷೀಣಿಸುವ ಕಣ್ಣುಗಳನ್ನೂ ಕುಗ್ಗಿದ ಮನಸ್ಸನ್ನೂ ಕೊಡು ವನು. ನಿನ್ನ ಜೀವವು ನಿನ್ನ ಮುಂದೆ ತೂಗಾಡುವದು. ರಾತ್ರಿ ಹಗಲು ನಿನ್ನ ಜೀವನಕ್ಕೆ ನಿಶ್ಚಯವಿಲ್ಲದೆ ಹೆದರುವಿ. ನಿನ್ನ ಹೃದಯದಲ್ಲಿ ಆಗುವ ಹೆದರಿಕೆಯ ನಿಮಿತ್ತವೂ ನಿನ್ನ ಕಣ್ಣುಗಳು ನೋಡುವ ನೋಟದ ನಿಮಿತ್ತವೂ ಮುಂಜಾನೆಯಲ್ಲಿ--ಅಯ್ಯೋ, ಸಂಜೆ ಆಗ ಬೇಕು ಅನ್ನುವಿ. ಸಂಜೆಯಲ್ಲಿ--ಅಯ್ಯೋ, ಮುಂಜಾನೆ ಆಗಬೇಕು ಅನ್ನುವಿ.ಇದಲ್ಲದೆ ಕರ್ತನು--ನೀನು ಇನ್ನು ಮೇಲೆ ನೋಡುವದಿಲ್ಲವೆಂದು ನಾನು ಹೇಳಿದ ಮಾರ್ಗದಿಂದ ಹಡಗುಗಳಲ್ಲಿ ನಿನ್ನನ್ನು ಐಗುಪ್ತ್ಯಕ್ಕೆ ತಿರಿಗಿ ಬರಮಾಡುವೆನು; ಅಲ್ಲಿ ದಾಸ ರಾಗಿಯೂ ದಾಸಿಗಳಾಗಿಯೂ ನಿಮ್ಮ ಶತ್ರುಗಳಿಗೆ ಮಾರಲ್ಪಡುವಿರಿ. ಆದರೆ ಕೊಂಡುಕೊಳ್ಳುವವ ನೊಬ್ಬನೂ ಇರುವದಿಲ್ಲ. ಇದಲ್ಲದೆ ಕರ್ತನು--ನೀನು ಇನ್ನು ಮೇಲೆ ನೋಡುವದಿಲ್ಲವೆಂದು ನಾನು ಹೇಳಿದ ಮಾರ್ಗದಿಂದ ಹಡಗುಗಳಲ್ಲಿ ನಿನ್ನನ್ನು ಐಗುಪ್ತ್ಯಕ್ಕೆ ತಿರಿಗಿ ಬರಮಾಡುವೆನು; ಅಲ್ಲಿ ದಾಸ ರಾಗಿಯೂ ದಾಸಿಗಳಾಗಿಯೂ ನಿಮ್ಮ ಶತ್ರುಗಳಿಗೆ ಮಾರಲ್ಪಡುವಿರಿ. ಆದರೆ ಕೊಂಡುಕೊಳ್ಳುವವ ನೊಬ್ಬನೂ ಇರುವದಿಲ್ಲ.
- Romans 1:21 ರೋಮಾಪುರದವರಿಗೆ 1:21ಅವರು ದೇವರನ್ನು ಅರಿತಾಗ ಆತನನ್ನು ದೇವರೆಂದು ಮಹಿಮೆಪಡಿಸಲಿಲ್ಲ, ಕೃತಜ್ಞತೆಯುಳ್ಳವರಾಗಿಯೂ ಇರಲಿಲ್ಲ; ಅವರು ತಮ್ಮ ಕಲ್ಪನೆಗಳಲ್ಲಿ ವಿಫಲರಾದರು ಮತ್ತು ಮೂರ್ಖತನದ ಅವರ ಹೃದಯವು ಕತ್ತಲಾ ಯಿತು.
- 2 Peter 2:4 2 ಪೇತ್ರನು 2:4ಹೇಗೆಂದರೆ ದೂತರು ಪಾಪಮಾಡಿದಾಗ ದೇವರು ಅವರನ್ನು ಸುಮ್ಮನೆ ಬಿಡದೆ ನರಕಕ್ಕೆ ದೊಬ್ಬಿ ನ್ಯಾಯ ತೀರ್ಪನ್ನು ಹೊಂದುವದಕ್ಕೆ ಇಡಲ್ಪಟ್ಟವರಾಗಿರ ಬೇಕೆಂದು ಕತ್ತಲೆಯ ಸಂಕೋಲೆಗಳಿಗೆ ಒಪ್ಪಿಸಿದನು.
- Romans 11:8 ರೋಮಾಪುರದವರಿಗೆ 11:8(ಬರೆದಿರುವಂತೆ ದೇವರು ಅವರಿಗೆ ತೂಕಡಿಕೆಯ ಆತ್ಮವನ್ನೂ ಕಾಣದ ಕಣ್ಣುಗಳನ್ನೂ ಕೇಳದ ಕಿವಿಗಳನ್ನೂ ಕೊಟ್ಟಿದ್ದಾನೆ). ಉಳಿದವರು ಈ ದಿನದ ವರೆಗೂ ಕುರುಡರಾಗಿದ್ದಾರೆ.
- Ephesians 4:18 ಎಫೆಸದವರಿಗೆ 4:18ಅವರ ಮನಸ್ಸು ಮೊಬ್ಬಾಗಿ ಹೋಗಿದೆ. ಅವರು ತಮ್ಮ ಹೃದಯದ ಕುರುಡುತನದ ನಿಮಿತ್ತದಿಂದಲೂ ತಮ್ಮಲ್ಲಿರುವ ಆಜ್ಞಾನದ ನಿಮಿತ್ತದಿಂದಲೂ ದೇವರಿಂದಾಗುವ ಜೀವಕ್ಕೆ ಅನ್ಯರಾಗಿದ್ದಾರೆ.
- Isaiah 65:12 ಯೆಶಾಯ 65:12ಆದದರಿಂದ ನಿಮ್ಮನ್ನು ಕತ್ತಿಗೆ ನೇಮಿಸು ವೆನು ನೀವೆಲ್ಲರೂ ಕೊಲೆಗೆ ಬೊಗ್ಗಿಕೊಳ್ಳುವಿರಿ. ನಾನು ಕರೆಯಲು, ನೀವು ಉತ್ತರ ಕೊಡಲಿಲ್ಲ; ನಾನು ಮಾತನಾಡಲು ನೀವು ಕೇಳಿಸಿಕೊಳ್ಳಲಿಲ್ಲ; ನನ್ನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದಿರಿ, ನಾನು ಮೆಚ್ಚದ್ದನ್ನು ಆರಿಸಿಕೊಂಡಿರಿ.
- Zechariah 11:17 ಜೆಕರ್ಯ 11:17ಮಂದೆಯನ್ನು ಕೈಬಿಡುವಂಥ ಮೈಗಳ್ಳನಾದ ಕುರುಬನಿಗೆ ಅಯ್ಯೋ! ಕತ್ತಿಯು ಅವನ ತೋಳಿನ ಮೇಲೆಯೂ ಅವನ ಬಲಗಣ್ಣಿನ ಮೇಲೆಯೂ ಇರುವದು; ಅವನ ತೋಳು ತೀರಾ ಒಣಗುವದು; ಅವನ ಬಲಗಣ್ಣು ಪೂರ್ಣವಾಗಿ ಕತ್ತಲಾಗುವದು.
- Jude 1:6 ಯೂದನು 1:6ತಮ್ಮ ಮೊದಲಿನ ಸ್ಥಿತಿಯನ್ನು ಕಾಪಾಡದೆ ತಮ್ಮ ಸ್ವಂತ ವಾಸಸ್ಥಾನವನ್ನು ಬಿಟ್ಟ ದೂತರಿಗೆ ಆತನು ನಿತ್ಯವಾದ ಬೇಡಿಗಳನ್ನು ಹಾಕಿ ಮಹಾ ದಿನದ ತೀರ್ಪಿಗಾಗಿ ಅವರನ್ನು ಕತ್ತಲೆ ಯೊಳಗೆ ಕಾದಿಟ್ಟಿದ್ದಾನೆ.
- Jude 1:13 ಯೂದನು 1:13ಸ್ವಂತ ಅವಮಾನವೆಂಬ ನೊರೆಯನ್ನು ಕಾರುವ ಸಮುದ್ರದ ಹುಚ್ಚು ತೆರೆಗಳೂ ಆಗಿದ್ದಾರೆ. ಅಲೆಯುವ ನಕ್ಷತ್ರ ಗಳಾದ ಇವರ ಪಾಲಿಗೆ ಕಾರ್ಗತ್ತಲೆಯು ಸದಾಕಾಲ ಇಟ್ಟಿರುವದು.
- 2 Peter 2:17 2 ಪೇತ್ರನು 2:17ಇವರು ನೀರಿಲ್ಲದ ಭಾವಿಗಳೂ ಬಿರುಗಾಳಿಯಿಂದ ಬಡಿಸಿಕೊಂಡು ಹಾರಿ ಹೋಗುವ ಮೇಘಗಳೂ ಆಗಿದ್ದಾರೆ. ಇಂಥವರ ಪಾಲಿಗೆ ನಿರಂತರವಾದ ಕಾರ್ಗತ್ತಲು ಇಟ್ಟಿರುವದು.
- Isaiah 51:23 ಯೆಶಾಯ 51:23ಆದರೆ ನಾವು ಹಾದುಹೋಗುವಂತೆ ಬಗ್ಗಿಕೋ ಎಂದು ನಿನ್ನ ಪ್ರಾಣಕ್ಕೆ ಹೇಳಿ, ನಿನ್ನನ್ನು ಹಿಂಸಿಸಿದವನ ಕೈಯಲ್ಲಿ ಅದನ್ನು ನಾನು ಇಡುತ್ತೇನೆ; ನೀನು ಹಾದುಹೋಗುವ ವರಿಗೆ ನಿನ್ನ ಶರೀರವನ್ನು ನೆಲದಂತೆಯೂ ಬೀದಿ ಯಂತೆಯೂ ಇಟ್ಟಿಯಲ್ಲಾ.