Romans · chapter 11 · verse 13
Romans 11:13 in Kannada
ಅನ್ಯಜನರಾದ ನಿಮ್ಮೊಂದಿಗೆ ನಾನು ಮಾತನಾಡು ತ್ತೇನೆ. ನಾನು ಅನ್ಯಜನಗಳಿಗೆ ಅಪೊಸ್ತಲನಾಗಿ ರುವದರಿಂದ ನನ್ನ ಉದ್ಯೋಗವನ್ನು ಗಣನೆಗೆ ತರುತ್ತೇನೆ.
Anyajanaraada nimmondige naanu maatanaadu ttene. Naanu anyajanagalige apostalanaagi ruvadarinda nanna udyogavannu gananege taruttene.
Romans 11:13 in English
- King James Version (KJV)
- For I speak to you Gentiles, inasmuch as I am the apostle of the Gentiles, I magnify mine office:
- World English Bible (WEB)
- For I speak to you who are Gentiles. Since then as I am an apostle to Gentiles, I glorify my ministry,
- American Standard Version (ASV)
- But I speak to you that are Gentiles. Inasmuch then as I am an apostle of Gentiles, I glorify my ministry;
- Bible in Basic English (BBE)
- But I say to you, Gentiles, in so far as I am the Apostle of the Gentiles, I make much of my position:
- Darby Translation (DBY)
- For I speak to you, the nations, inasmuch as I am apostle of nations, I glorify my ministry;
- Webster's Bible (WBS)
- For I speak to you Gentiles, inasmuch as I am the apostle of the Gentiles, I magnify my office:
- Young's Literal Translation (YLT)
- For to you I speak — to the nations — inasmuch as I am indeed an apostle of nations, my ministration I do glorify;
Read in context
- 11ಹಾಗಾದರೆ--ಅವರು ಬಿದ್ದುಹೋಗುವಂತೆ ಎಡವಿದರೆಂದು ನಾನು ಹೇಳಬೇಕೋ? ಹಾಗೆ ಎಂದಿಗೂ ಆಗಬಾರದು; ಆದರೆ ಅವರಲ್ಲಿ ಹುರುಡು ಹುಟ್ಟಿಸುವದಕ್ಕಾಗಿ ಅವರ ಬೀಳುವಿಕೆಯ ಮೂಲಕವೇ ಅನ್ಯಜನರಿಗೆ ರಕ್ಷಣೆಯುಂಟಾಯಿತು.
- 12ಅವರ ಬೀಳುವಿಕೆಯು ಲೋಕದ ಐಶ್ವರ್ಯಕ್ಕೂ ಅವರ ಕುಂದುವಿಕೆಯು ಅನ್ಯಜನಗಳ ಸಂಪತ್ತಿಗೂ ಆಗಿರು ವದಾದರೆ ಅವರ ಸಮೃದ್ಧಿಯು ಇನ್ನೂ ಎಷ್ಟೋ ಹೆಚ್ಚಾಗಿರುವದಲ್ಲವೇ?
- 13ಅನ್ಯಜನರಾದ ನಿಮ್ಮೊಂದಿಗೆ ನಾನು ಮಾತನಾಡು ತ್ತೇನೆ. ನಾನು ಅನ್ಯಜನಗಳಿಗೆ ಅಪೊಸ್ತಲನಾಗಿ ರುವದರಿಂದ ನನ್ನ ಉದ್ಯೋಗವನ್ನು ಗಣನೆಗೆ ತರುತ್ತೇನೆ.
- 14ಹೀಗೆ ಯಾವ ವಿಧದಲ್ಲಿಯಾದರೂ ನನ್ನ ಸ್ವಜನರಲ್ಲಿ ಹುರುಡನ್ನು ಹುಟ್ಟಿಸಿ ಅವರಲ್ಲಿ ಕೆಲವರು ರಕ್ಷಣೆ ಹೊಂದುವಂತೆ ಮಾಡೇನು.
- 15ಅವರನ್ನು ತಳ್ಳುವದರಿಂದ ಲೋಕವು ಸಮಾಧಾನವಾಗು ವದಾದರೆ ಅವರನ್ನು ಸೇರಿಸಿಕೊಳ್ಳುವದರಿಂದ ಏನಾಗುವದು? ಸತ್ತವರು ಜೀವಿತರಾಗಿ ಎದ್ದು ಬಂದಂತಾಗುವದಿಲ್ಲವೇ.
Cross references
- Acts 9:15 ಅಪೊಸ್ತಲರ ಕೃತ್ಯಗಳು 9:15ಆದರೆ ಕರ್ತನು ಅವನಿಗೆ--ನೀನು ಹೋಗು; ಯಾಕಂದರೆ ಆ ಮನುಷ್ಯನು ಅನ್ಯಜನರ ಮುಂದೆಯೂ ಅರಸುಗಳ ಮುಂದೆಯೂ ಇಸ್ರಾಯೇಲ್ಯರ ಮುಂದೆಯೂ ನನ್ನ ಹೆಸರನ್ನು ಹೊರುವದಕ್ಕಾಗಿ ನಾನು ಆರಿಸಿಕೊಂಡ ಪಾತ್ರೆಯಾಗಿದ್ದಾನೆ.
- 2 Timothy 1:11–12 2 ತಿಮೊಥೆಯನಿಗೆ 1:11–12ಅದಕ್ಕೋಸ್ಕರ ನಾನು ಸಾರುವವನಾಗಿಯೂ ಅಪೊಸ್ತಲನಾಗಿಯೂ ಅನ್ಯಜನ ರಿಗೆ ಉಪದೇಶಕನಾಗಿಯೂ ನೇಮಿಸಲ್ಪಟ್ಟೆನು. ಇದರ ನಿಮಿತ್ತದಿಂದಲೇ ಈ ಶ್ರಮೆಗಳನ್ನು ಅನುಭವಿಸುತ್ತಾ ಇದ್ದೇನೆ; ಆದರೂ ನಾನು ನಾಚಿಕೆಪಡುವದಿಲ್ಲ; ಯಾಕಂ ದರೆ ನಾನು ನಂಬಿರುವಾತನನ್ನು ಬಲ್ಲೆನು, ನಾನು ಆತನಿಗೆ ಒಪ್ಪಿಸಿದ್ದನ್ನು ಆತನು ಆ ದಿನಕ್ಕಾಗಿ ಕಾಪಾಡು ವದಕ್ಕೆ ಶಕ್ತನಾಗಿದ್ದಾನೆಂದೂ ದೃಢವಾಗಿ ನಂಬಿದ್ದೇನೆ.
- 1 Timothy 2:7 1 ತಿಮೊಥೆಯನಿಗೆ 2:7ಆ ಸಾಕ್ಷಿಯನ್ನು ಪ್ರಸಿದ್ಧಿ ಪಡಿಸುವದಕ್ಕಾಗಿಯೇ ನಾನು ಸಾರುವವನಾಗಿಯೂ ಅಪೊಸ್ತಲನಾಗಿಯೂ ನಂಬಿಕೆಯಿಂದ ಮತ್ತು ಸತ್ಯದಿಂದ ಅನ್ಯಜನರಿಗೆ ಬೋಧಿಸುವವನಾಗಿಯೂ ನೇಮಿಸಲ್ಪ ಟ್ಟೆನು. (ಇದನ್ನು ಸುಳ್ಳಾಡದೆ ಕ್ರಿಸ್ತನಲ್ಲಿ ಸತ್ಯವಾಗಿ ಹೇಳುತ್ತೇನೆ.)
- Ephesians 3:8 ಎಫೆಸದವರಿಗೆ 3:8ಕ್ರಿಸ್ತನ ಶೋಧಿಸಲ ಶಕ್ಯವಾದ ಐಶ್ವರ್ಯದ ವಿಷಯವಾಗಿ ಅನ್ಯಜನರಿಗೆ ನಾನು ಸಾರುವ ಹಾಗೆ ಪರಿಶುದ್ಧರೊಳಗೆ ಅತ್ಯಲ್ಪ ನಾದ ನನಗೆ ಅನುಗ್ರಹಿಸೋಣವಾಯಿತು.
- Romans 15:16–19 ರೋಮಾಪುರದವರಿಗೆ 15:16–19ಹೀಗೆ ಅನ್ಯಜನಗಳೆಂಬ ಅರ್ಪಣೆಯು ಪವಿತ್ರಾತ್ಮನ ಮೂಲಕ ಶುದ್ಧೀಕರಿಸಲ್ಪಟ್ಟು ಆತನಿಂದ ಅಂಗೀಕಾರವಾಗುವಂತೆ ನಾನು ದೇವರ ಸುವಾರ್ತಾ ಸೇವೆಯನ್ನು ನಡಿಸುತ್ತಾ ಅನ್ಯಜನರಿಗೆ ಯೇಸು ಕ್ರಿಸ್ತನ ಸೇವಕನಾಗಿರುವೆನು. ಆದದರಿಂದ ದೇವರಿಗೆ ಸಂಬಂಧಪಟ್ಟವುಗಳಲ್ಲಿ ಯೇಸು ಕ್ರಿಸ್ತನ ಮೂಲಕ ನಾನು ಹೆಚ್ಚಳಪಡುತ್ತೇನೆ. ಮಾತಿ ನಿಂದಲೂ ಕ್ರಿಯೆಯಿಂದಲೂ ಬಲವಾದ ಸೂಚಕ ಕಾರ್ಯಗಳಿಂದಲೂ ಅದ್ಭುತಕಾರ್ಯಗಳಿಂದಲೂ ದೇವರಾತ್ಮನ ಬಲದಿಂದಲೂ ಅನ್ಯಜನಗಳವರು ವಿಧೇಯರಾಗುವಂತೆ ಕ್ರಿಸ್ತನು ನನ್ನ ಮೂಲಕ ಮಾಡ ದಿರುವವುಗಳನ್ನು ಮಾತನಾಡಲು ನಾನು ಧೈರ್ಯ ಪಡುವದಿಲ್ಲ. ಹೀಗೆ ಯೆರೂಸಲೇಮ್ ಮೊದಲು ಗೊಂಡು ಇಲ್ಲುರಿಕದ ಸುತ್ತಲೂ ನಾನು ಕ್ರಿಸ್ತನ ಸುವಾರ್ತೆಯನ್ನು ಪೂರ್ಣವಾಗಿ ಸಾರಿದ್ದೇನೆ.
- Galatians 1:16 ಗಲಾತ್ಯದವರಿಗೆ 1:16ಇದಲ್ಲದೆ ದೇವರು ಅನ್ಯಜನರಲ್ಲಿ ತನ್ನ ಮಗನನ್ನು ನಾನು ಸಾರುವವನಾಗಬೇಕೆಂದು ಆತನನ್ನು ನನ್ನೊಳಗೆ ಪ್ರಕಟಿಸುವದಕ್ಕೆ ಇಚ್ಛೈಸಿದಾಗಲೇ ನಾನು ಮನುಷ್ಯರನ್ನು ವಿಚಾರಿಸದೆ
- Acts 22:21 ಅಪೊಸ್ತಲರ ಕೃತ್ಯಗಳು 22:21ಅದಕ್ಕೆ ಆತನು--ಹೋಗು, ನಾನು ನಿನ್ನನ್ನು ದೂರಕ್ಕೆ ಅನ್ಯಜನರ ಬಳಿಗೆ ಕಳುಹಿಸುವೆನು ಎಂದು ನನಗೆ ಹೇಳಿದನು.
- Galatians 2:2 ಗಲಾತ್ಯದವರಿಗೆ 2:2ಪ್ರಕಟನೆಗನುಸಾರವಾಗಿ ಅಲ್ಲಿಗೆ ಹೋಗಿ ಅನ್ಯಜನ ರಲ್ಲಿ ನಾನು ಸಾರುವ ಸುವಾರ್ತೆಯನ್ನು ಅಲ್ಲಿದ್ದವರಿಗೆ ತಿಳಿಸಿದೆನು; ಆದರೆ ನಾನು ಪಡುತ್ತಿರುವ ಪ್ರಯಾಸ ವಾಗಲಿ ಪಟ್ಟ ಪ್ರಯಾಸವಾಗಲಿ ನಿಷ್ಫಲವಾಗಬಾರ ದೆಂದು ಮಾನಿಷ್ಠರಿಗೆ ಏಕಾಂತದಲ್ಲಿ ತಿಳಿಸಿದೆನು.
- Galatians 2:7–9 ಗಲಾತ್ಯದವರಿಗೆ 2:7–9ಅದಕ್ಕೆ ಬದಲಾಗಿ ಸುನ್ನತಿಯವರ ಸುವಾರ್ತೆಯು ಪೇತ್ರನಿಗೆ ಹೇಗೋ ಹಾಗೆಯೇ ಸುನ್ನತಿಯಿಲ್ಲದವರ ಸುವಾ ರ್ತೆಯು ನನಗೆ ಒಪ್ಪಿಸಲ್ಪಟ್ಟಿತು. ಸುನ್ನತಿಯಾದವರಿಗೆ ಪೇತ್ರನ ಅಪೊಸ್ತಲತನವು ಪರಿಣಾಮವನ್ನುಂಟು ಮಾಡುವ ಹಾಗೆ ಮಾಡಿದಾತನೇ ಅನ್ಯ ಜನರಿಗೆ ನನ್ನ ಅಪೊಸ್ತಲತನವು ಶಕ್ತಿಯುಳ್ಳದ್ದಾಗಿರುವಂತೆ ಮಾಡಿ ದ್ದನ್ನು ಅವರು ಕಂಡರು. ಸ್ತಂಭಗಳೆಂದು ಕಾಣಿಸಿ ಕೊಂಡಿರುವ ಯಾಕೋಬ ಕೇಫ ಯೋಹಾನರು ನನಗೆ ದಯಪಾಲಿಸಿರುವ ಕೃಪೆಯನ್ನು ತಿಳಿದುಕೊಂಡು ಅನ್ಯೋ ನ್ಯತೆಯನ್ನು ತೋರಿಸುವದಕ್ಕಾಗಿ ನನಗೂ ಬಾರ್ನಬ ನಿಗೂ ಬಲಗೈಕೊಟ್ಟು --ತಾವು ಸುನ್ನತಿಯವರ ಬಳಿಗೂ ನಾವು ಅನ್ಯಜನರ ಬಳಿಗೂ ಹೋಗುವದಕ್ಕೆ ಹೇಳಿ ದರು.
- Acts 26:17–18 ಅಪೊಸ್ತಲರ ಕೃತ್ಯಗಳು 26:17–18ಈ ಜನರಿಂದ ಮತ್ತು ಈಗ ನಾನು ನಿನ್ನನ್ನು ಕಳುಹಿಸುವ ಅನ್ಯಜನರಿಂದ ನಿನ್ನನ್ನು ಬಿಡಿಸುವದಕ್ಕೂ ಅವರ ಕಣ್ಣುಗಳನ್ನು ತೆರೆಯುವದಕ್ಕೂ ಮತ್ತು ಕತ್ತಲೆಯಿಂದ ಬೆಳಕಿಗೂ ಸೈತಾನನ ಅಧಿಕಾರದಿಂದ ದೇವರ ಕಡೆಗೆ ಅವರನ್ನು ತಿರುಗಿಸುವದಕ್ಕೂ ಅವರು ನನ್ನಲ್ಲಿ ಇಡುವ ನಂಬಿಕೆಯಿಂದಾಗುವ ಪಾಪಕ್ಷಮಾ ಪಣೆಯನ್ನೂ ಪವಿತ್ರರಾದವರಲ್ಲಿ ಸ್ವಾಸ್ಥ್ಯವನ್ನೂ ಹೊಂದುವಂತೆ ಮಾಡುವದಕ್ಕಾಗಿ ನಾನು
- Acts 13:2 ಅಪೊಸ್ತಲರ ಕೃತ್ಯಗಳು 13:2ಇವರು ಕರ್ತನನ್ನು ಸೇವಿಸುತ್ತಾ ಉಪವಾಸ ಮಾಡುತ್ತಾ ಇದ್ದಾಗ ಪವಿ ತ್ರಾತ್ಮನು--ನಾನು ಬಾರ್ನಬ ಸೌಲರನ್ನು ಕರೆದ ಕೆಲಸಕ್ಕೆ ನನಗಾಗಿ ಅವರನ್ನು ಪ್ರತ್ಯೇಕಿಸಿರಿ ಎಂದು ಹೇಳಿದನು.