Romans · chapter 11 · verse 15
Romans 11:15 in Kannada
ಅವರನ್ನು ತಳ್ಳುವದರಿಂದ ಲೋಕವು ಸಮಾಧಾನವಾಗು ವದಾದರೆ ಅವರನ್ನು ಸೇರಿಸಿಕೊಳ್ಳುವದರಿಂದ ಏನಾಗುವದು? ಸತ್ತವರು ಜೀವಿತರಾಗಿ ಎದ್ದು ಬಂದಂತಾಗುವದಿಲ್ಲವೇ.
Avarannu talluvadarinda lokavu samaadhaanavaagu vadaadare avarannu serisikolluvadarinda enaaguvadu? Sattavaru jeevitaraagi eddu bandantaaguvadillave.
Romans 11:15 in English
- King James Version (KJV)
- For if the casting away of them [be] the reconciling of the world, what [shall] the receiving [of them be], but life from the dead?
- World English Bible (WEB)
- For if the rejection of them is the reconciling of the world, what would their acceptance be, but life from the dead?
- American Standard Version (ASV)
- For if the casting away of them [is] the reconciling of the world, what [shall] the receiving [of them be], but life from the dead?
- Bible in Basic English (BBE)
- For, if by their putting away, the rest of men have been made friends with God, what will their coming back again be, but life from the dead?
- Darby Translation (DBY)
- For if their casting away [be the] world's reconciliation, what [their] reception but life from among [the] dead?
- Webster's Bible (WBS)
- For if the rejection of them [be] the reconciling of the world, what [shall] the receiving [of them be] , but life from the dead?
- Young's Literal Translation (YLT)
- for if the casting away of them [is] a reconciliation of the world, what the reception — if not life out of the dead?
Read in context
- 13ಅನ್ಯಜನರಾದ ನಿಮ್ಮೊಂದಿಗೆ ನಾನು ಮಾತನಾಡು ತ್ತೇನೆ. ನಾನು ಅನ್ಯಜನಗಳಿಗೆ ಅಪೊಸ್ತಲನಾಗಿ ರುವದರಿಂದ ನನ್ನ ಉದ್ಯೋಗವನ್ನು ಗಣನೆಗೆ ತರುತ್ತೇನೆ.
- 14ಹೀಗೆ ಯಾವ ವಿಧದಲ್ಲಿಯಾದರೂ ನನ್ನ ಸ್ವಜನರಲ್ಲಿ ಹುರುಡನ್ನು ಹುಟ್ಟಿಸಿ ಅವರಲ್ಲಿ ಕೆಲವರು ರಕ್ಷಣೆ ಹೊಂದುವಂತೆ ಮಾಡೇನು.
- 15ಅವರನ್ನು ತಳ್ಳುವದರಿಂದ ಲೋಕವು ಸಮಾಧಾನವಾಗು ವದಾದರೆ ಅವರನ್ನು ಸೇರಿಸಿಕೊಳ್ಳುವದರಿಂದ ಏನಾಗುವದು? ಸತ್ತವರು ಜೀವಿತರಾಗಿ ಎದ್ದು ಬಂದಂತಾಗುವದಿಲ್ಲವೇ.
- 16ಪ್ರಥಮ ಫಲವು ಪವಿತ್ರವಾಗಿದ್ದರೆ ಕಣಕವೂ ಪವಿತ್ರವಾಗಿದೆ ಮತ್ತು ಬೇರು ಪವಿತ್ರವಾಗಿದ್ದರೆ ಕೊಂಬೆಗಳೂ ಪವಿತ್ರವಾಗಿವೆ.
- 17ಆದರೆ ಕೆಲವು ಕೊಂಬೆಗಳು ಮುರಿದು ಹಾಕಲ್ಪಟ್ಟ ದ್ದರಿಂದ ಕಾಡೆಣ್ಣೇ ಮರದಂತಿರುವ ನೀನು ಅವುಗಳ ತಾವಿನಲ್ಲಿ ಕಸಿಕಟ್ಟಿಸಿಕೊಂಡವನಾಗಿ ಊರೆಣ್ಣೇ ಮರದ ರಸವತ್ತಾದ ಬೇರಿನಲ್ಲಿ ಪಾಲು ಹೊಂದಿದವನಾಗಿದ್ದೀ.
Cross references
- Ephesians 1:10 ಎಫೆಸದವರಿಗೆ 1:10ಅದೇನಂದರೆ ಕಾಲವು ಪರಿಪೂರ್ಣವಾದ ಯುಗದಲ್ಲಿ ಆತನು ಪರಲೋಕದಲ್ಲಿರುವವುಗಳನ್ನೂ ಭೂ ಲೋಕದಲ್ಲಿರುವವುಗಳನ್ನೂ ಆತನಲ್ಲಿ ಅಂದರೆ ಕ್ರಿಸ್ತನಲ್ಲಿ ಎಲ್ಲವನ್ನು ಒಂದುಗೂಡಿಸಬೇಕೆಂದಿದ್ದನು.
- Romans 5:10–11 ರೋಮಾಪುರದವರಿಗೆ 5:10–11ವೈರಿ ಗಳಾಗಿದ್ದ ನಾವು ದೇವರ ಮಗನ ಮರಣದ ಮೂಲಕ ಆತನೊಂದಿಗೆ ಸಮಾಧಾನವಾಗಿದ್ದರೆ ಸಮಾಧಾನವಾದ ನಮಗೆ ಆತನ ಜೀವದಿಂದ ರಕ್ಷಣೆಯಾಗುವದು ಮತ್ತೂ ನಿಶ್ಚಯವಲ್ಲವೇ. ಇಷ್ಟು ಮಾತ್ರವಲ್ಲದೆ ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ಈಗ ಸಮಾಧಾನ ಹೊಂದಿದವರಾಗಿ ಆತನ ಮುಖಾಂತರ ನಾವು ಸಹ ದೇವರಲ್ಲಿ ಹರ್ಷಗೊಳ್ಳುತ್ತೇವೆ.
- Romans 11:11–12 ರೋಮಾಪುರದವರಿಗೆ 11:11–12ಹಾಗಾದರೆ--ಅವರು ಬಿದ್ದುಹೋಗುವಂತೆ ಎಡವಿದರೆಂದು ನಾನು ಹೇಳಬೇಕೋ? ಹಾಗೆ ಎಂದಿಗೂ ಆಗಬಾರದು; ಆದರೆ ಅವರಲ್ಲಿ ಹುರುಡು ಹುಟ್ಟಿಸುವದಕ್ಕಾಗಿ ಅವರ ಬೀಳುವಿಕೆಯ ಮೂಲಕವೇ ಅನ್ಯಜನರಿಗೆ ರಕ್ಷಣೆಯುಂಟಾಯಿತು. ಅವರ ಬೀಳುವಿಕೆಯು ಲೋಕದ ಐಶ್ವರ್ಯಕ್ಕೂ ಅವರ ಕುಂದುವಿಕೆಯು ಅನ್ಯಜನಗಳ ಸಂಪತ್ತಿಗೂ ಆಗಿರು ವದಾದರೆ ಅವರ ಸಮೃದ್ಧಿಯು ಇನ್ನೂ ಎಷ್ಟೋ ಹೆಚ್ಚಾಗಿರುವದಲ್ಲವೇ?
- 2 Corinthians 5:18–20 2 ಕೊರಿಂಥದವರಿಗೆ 5:18–20ಎಲ್ಲವುಗಳು ದೇವರವುಗಳಾಗಿವೆ; ಆತನು ಯೇಸು ಕ್ರಿಸ್ತನ ಮೂಲಕ ನಮ್ಮನ್ನು ತನಗೆ ಸಮಾಧಾನಪಡಿಸಿಕೊಂಡು ಸಮಾಧಾನದ ವಿಷಯವಾದ ಸೇವೆಯನ್ನು ನಮಗೆ ಅನುಗ್ರಹಿಸಿದ್ದಾನೆ. ಅದೇನಂದರೆ, ದೇವರು ಮನುಷ್ಯರ ಅಪರಾಧಗಳನ್ನು ಅವರ ಲೆಕ್ಕಕ್ಕೆ ಹಾಕದೆ ಲೋಕವನ್ನು ಕ್ರಿಸ್ತನಲ್ಲಿ ತನಗೆ ಸಮಾಧಾನಪಡಿಸಿ ಕೊಳ್ಳುತ್ತಿದ್ದನೆಂಬದೇ; ಆ ಸಮಾಧಾನದ ವಾಕ್ಯವನ್ನು ನಮ್ಮ ವಶಕ್ಕೆ ಕೊಟ್ಟಿದ್ದಾನೆ. ದೇವರೇ ನಮ್ಮ ಮೂಲಕ ನಿಮ್ಮನ್ನು ಬೇಡಿ ಕೊಳ್ಳುತ್ತಾನೋ ಎಂಬಂತೆ ನಾವು ಈಗ ಕ್ರಿಸ್ತನ ರಾಯಭಾರಿಗಳಾಗಿದ್ದೇವೆ. ದೇವರೊಂದಿಗೆ ಸಮಾ ಧಾನವಾಗಿರೆಂದು ಕ್ರಿಸ್ತನಿಗೆ ಬದಲಾಗಿ ನಾವು ನಿಮ್ಮನ್ನು ಬೇಡಿಕೊಳ್ಳುತ್ತೇವೆ.ನಾವು ಆತನಲ್ಲಿ ದೇವರ ನೀತಿಯಾಗುವಂತೆ ದೇವರು ಪಾಪವನ್ನರಿಯ ಆತನನ್ನು ನಮಗೋಸ್ಕರ ಪಾಪವಾಗ ಮಾಡಿದನು.
- Colossians 1:20–21 ಕೊಲೊಸ್ಸೆಯವರಿಗೆ 1:20–21ಆತನ ಶಿಲುಬೆಯ ರಕ್ತದಿಂದ ತಾನು ಸಮಾಧಾನವನ್ನು ಉಂಟುಮಾಡಿ ಆತನಿಂದ ಭೂಪರ ಲೋಕಗಳಲ್ಲಿರುವ ಎಲ್ಲವುಗಳನ್ನು ಆತನ ಮೂಲಕ ತನಗೆ ಸಂಧಾನಪಡಿಸಿಕೊಂಡನು. ಇದಲ್ಲದೆ ನೀವು ಹಿಂದಿನ ಕಾಲದಲ್ಲಿ ಅನ್ಯರೂ ದುಷ್ಕೃತ್ಯಗಳಿಂದ ದ್ವೇಷ ಮನಸ್ಸುಳ್ಳವರೂ ಆಗಿದ್ದಿರಿ. ಆದಾಗ್ಯೂ ಈಗ ಆತನು ನಿಮ್ಮನ್ನು ಸಂಧಾನಪಡಿಸಿ ಕೊಂಡಿದ್ದಾನೆ.
- Luke 15:24 ಲೂಕನು 15:24ಯಾಕಂದರೆ ಈ ನನ್ನ ಮಗನು ಸತ್ತವನಾಗಿದ್ದನು, ತಿರಿಗಿ ಬದುಕಿದ್ದಾನೆ; ಕಳೆದು ಹೋಗಿದ್ದನು, ಈಗ ಸಿಕ್ಕಿದ್ದಾನೆ ಎಂದು ಹೇಳಿದನು; ಹೀಗೆ ಅವರು ಸಂತೋಷ ಪಡಲಾರಂಭಿಸಿದರು.
- Luke 15:32 ಲೂಕನು 15:32ಆದರೆ ಈ ನಿನ್ನ ತಮ್ಮನು ಸತ್ತವನಾಗಿದ್ದನು, ತಿರಿಗಿ ಬದುಕಿದ್ದಾನೆ; ಕಳೆದು ಹೋದ ವನಾಗಿದ್ದನು, ಸಿಕ್ಕಿದ್ದಾನೆ. ಆದಕಾರಣ ನಾವು ಸಂತೋ ಷಿಸಿ ಆನಂದಪಡುವದು ಯುಕ್ತವಾದದ್ದೇ ಎಂದು ಹೇಳಿದನು ಅಂದನು.
- Revelation 11:11 ಪ್ರಕಟನೆ 11:11ಮೂರುವರೆ ದಿನಗಳಾದ ಮೇಲೆ ದೇವರಿಂದ ಜೀವಾತ್ಮ ಬಂದು ಆ ಶವಗಳಲ್ಲಿ ಸೇರಲು ಅವು ಕಾಲೂರಿ ನಿಂತವು. ಅವರನ್ನು ನೋಡಿದವರಿಗೆ ಮಹಾ ಭಯವು ಹಿಡಿಯಿತು.
- Daniel 9:24 ದಾನಿಯೇಲನು 9:24ಅಕ್ರಮಗಳನ್ನು ಮುಗಿಸುವದಕ್ಕೂ ಪಾಪಗಳನ್ನು ಮುಚ್ಚುವದಕ್ಕೂ ಅಪರಾಧಗಳಿಗೆ ಪ್ರಾಯಶ್ಚಿತ್ತ ಮಾಡು ವದಕ್ಕೂ ನಿತ್ಯವಾದ ನೀತಿಯನ್ನು ಬರಮಾಡುವದಕ್ಕೂ ಆ ದರ್ಶನಕ್ಕೂ ಪ್ರವಾದಿಗೂ ಮುದ್ರೆಹಾಕುವದಕ್ಕೂ ಅತಿಪರಿಶುದ್ಧನನ್ನು ಅಭಿಷೇಕ ಮಾಡುವದಕ್ಕೂ ನಿನ್ನ ಜನರ ಮೇಲೆಯೂ ನಿನ್ನ ಪರಿಶುದ್ಧ ಪಟ್ಟಣದ ಮೇಲೆಯೂ ಎಪ್ಪತ್ತು ವಾರಗಳು ನೇಮಿಸಲ್ಪಟ್ಟಿವೆ.
- Ezekiel 37:1–14 ಯೆಹೆಜ್ಕೇಲನು 37:1–14ಕರ್ತನ ಕೈ ನನ್ನ ಮೇಲೆ ಇತ್ತು; ಅದು ಕರ್ತನ ಆತ್ಮದ ಮೂಲಕ ನನ್ನನ್ನು ಹೊರಗೆ ತಂದು ಪೂರ್ತಿಯಾಗಿ ಎಲುಬುಗಳು ತುಂಬಿರುವ ಕಣಿವೆಗಳ ಮಧ್ಯ ತಳದಲ್ಲಿ ನನ್ನನ್ನು ಬಿಟ್ಟಿತು. ಅವುಗಳ ಸುತ್ತಲೂ ನನ್ನನ್ನು ಹಾದುಹೋಗುವಂತೆ ಮಾಡಿತು; ಇಗೋ, ತೆರೆದಿರುವ ಆ ಕಣಿವೆಯಲ್ಲಿ ಒಣಗಿಹೋದ ಎಲುಬುಗಳು ಲೆಕ್ಕವಿಲ್ಲದಷ್ಟು ಬಿದ್ದಿದ್ದವು. ಆತನು ನನಗೆ ಹೇಳಿದ್ದು--ಮನಷ್ಯಪುತ್ರನೇ, ಈ ಎಲುಬುಗಳು ಜೀವಿಸುವವೇ ಎಂದಾಗ ನಾನು ಉತ್ತರವಾಗಿ, ಓ ದೇವರಾದ ಕರ್ತನೇ, ನೀನೇ ತಿಳಿದಿರುವೆ ಎಂದೆನು. ಆತನು ನನಗೆ ಹೇಳಿದ್ದೇನಂದರೆ--ಈ ಎಲುಬುಗಳ ಮೇಲೆ ಪ್ರವಾದಿಸು ಮತ್ತು ಅವುಗಳಿಗೆ ಹೇಳು--ಓ ಒಣಗಿದ ಎಲುಬುಗಳೇ, ನೀವು ಕರ್ತನ ವಾಕ್ಯವನ್ನು ಕೇಳಿರಿ. ದೇವರಾದ ಕರ್ತನು ಈ ಎಲುಬುಗಳಿಗೆ ಹೀಗೆ ಹೇಳುತ್ತಾನೆ--ಇಗೋ, ನಾನು ನಿಮ್ಮಲ್ಲಿ ಉಸಿರನ್ನು ಬರಮಾಡುತ್ತೇನೆ; ನೀವು ಬದುಕುವಿರಿ; ನಾನು ನಿಮ್ಮ ಮೇಲೆ ನರಗಳನ್ನು ಹಬ್ಬಿಸಿ ಮಾಂಸವನ್ನು ಹರಡಿ ಚರ್ಮದಿಂದ ಮುಚ್ಚಿ ನಿಮ್ಮೊಳಗೆ ಉಸಿರನ್ನು ಕೊಟ್ಟು ಬದುಕಿಸುತ್ತೇನೆ; ನಾನೇ ಕರ್ತನೆಂದು ನೀವು ತಿಳಿ ಯುವಿರಿ. ಹಾಗೆಯೇ ನಾನು ಆಜ್ಞೆಯನ್ನು ಪಡೆದ ಪ್ರಕಾರ ಪ್ರವಾದಿಸಿದೆನು; ನಾನು ಪ್ರವಾದಿಸುವಾಗ ಅಲ್ಲಿ ಒಂದು ಶಬ್ದವಾಯಿತು; ಇಗೋ, ಅದು ಕದ ಲುತ್ತಿತ್ತು, ಎಲುಬುಗಳೆಲ್ಲಾ ಒಂದು ಗೂಡಿ ಎಲುಬಿಗೆ ಎಲುಬು ಸೇರಿಕೊಂಡಿತು. ನಾನು ನೋಡಿದಾಗ ಇಗೋ, ನರಗಳು ಹಬ್ಬಿಕೊಂಡವು ಮಾಂಸವು ಹರಡಿಕೊಂಡಿತು, ಅವುಗಳ ಮೇಲೆ ಚರ್ಮವು ಮುಚ್ಚಿ ಕೊಂಡಿತು. ಆದರೆ ಅವುಗಳಿಗೆ ಉಸಿರೇ ಇರಲಿಲ್ಲ. ಆಮೇಲೆ ಆತನು ನನಗೆ ಹೇಳಿದ್ದೇನಂದರೆ--ಪ್ರವಾ ದಿಸು, ಉಸಿರಿನ ಕಡೆಗೆ ಪ್ರವಾದಿಸು, ಮನುಷ್ಯ ಪುತ್ರನೇ, ಆ ಉಸಿರಿಗೆ ಹೇಳು--ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಓ ಉಸಿರೇ, ನಾಲ್ಕು ದಿಕ್ಕುಗಳಿಂದ ಬಂದು ಈ ಹತ ಶರೀರಗಳು ಬದುಕುವಂತೆ ಅದರ ಮೇಲೆ ಸುಳಿ, ನಾನು ಆತನ ಆಜ್ಞೆಯ ಹಾಗೆಯೇ ಪ್ರವಾದಿಸಿದೆನು; ಅವುಗಳಲ್ಲಿ ಉಸಿರು ಬಂತು; ಅವುಗಳೆಲ್ಲಾ ಕಾಲೂರಿ ನಿಂತು ಅತ್ಯಂತ ಮಹಾ ಸೈನ್ಯ ವಾದವು. ಆಮೇಲೆ ಆತನು ನನಗೆ ಹೇಳಿದ್ದೇನಂದರೆ--ಮನುಷ್ಯಪುತ್ರನೇ, ಈ ಎಲುಬುಗಳು ಸಂಪೂರ್ಣ ಇಸ್ರಾಯೇಲ್ ಮನೆತನಗಳೇ; ಇಗೋ, ನಮ್ಮ ಎಲುಬುಗಳು ಒಣಗಿಸಲ್ಪಟ್ಟಿವೆ ಮತ್ತು ನಮ್ಮ ನಿರೀಕ್ಷೆಯು ಕಳೆದುಹೋಗಿದೆ; ನಾವು ಶುದ್ಧವಾಗಿ ನಮ್ಮ ಭಾಗಗಳನ್ನು ಕತ್ತರಿಸಿಕೊಂಡಿದ್ದೇವೆ ಎಂದು ಅವರು ಹೇಳುವರು. ಆದದರಿಂದ ನೀನು ಪ್ರವಾದಿಸು ಮತ್ತು ಅವರಿಗೆ ಹೇಳು--ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಓ ನನ್ನ ಜನರೇ, ನಾನು ನಿಮ್ಮ ಸಮಾಧಿಗಳನ್ನು ತೆರೆಯುವೆನು ಮತ್ತು ಸಮಾಧಿಗಳಿಂದ ನೀವು ಹೊರಗೆ ಬರುವಂತೆ ಮಾಡುವೆನು. ಇಸ್ರಾ ಯೇಲ್ ದೇಶಕ್ಕೆ ನಿಮ್ಮನ್ನು ತರುವೆನು. ಓ ನನ್ನ ಜನರೇ, ಯಾವಾಗ ನಾನು ನಿಮ್ಮ ಸಮಾಧಿಗಳನ್ನು ತೆರೆದು ಹೊರಗೆ ಬರಮಾಡುವೆನೋ ಆಗ ನಾನೇ ಕರ್ತನೆಂದು ನೀವು ತಿಳಿದುಕೊಳ್ಳುವಿರಿ. ನನ್ನ ಆತ್ಮ ವನ್ನು ನಿಮ್ಮೊಳಗೆ ಇಟ್ಟಾಗ ನೀವು ಬದುಕುವಿರಿ ಮತ್ತು ನಾನು ನಿಮ್ಮನ್ನು ನಿಮ್ಮ ಸ್ವಂತ ದೇಶದಲ್ಲಿರಿಸುವೆನು; ಆಮೇಲೆ ನಾನೇ ಕರ್ತನು ಮಾತನಾಡಿ ನಡೆಸಿದ್ದೇನೆಂ ದು ನೀವು ತಿಳಿಯುವಿರಿ ಎಂದು ಕರ್ತನು ಹೇಳುತ್ತಾನೆ.
- Romans 11:1–2 ರೋಮಾಪುರದವರಿಗೆ 11:1–2ಹಾಗಾದರೆ--ದೇವರು ತನ್ನ ಪ್ರಜೆಯನ್ನು ತಳ್ಳಿಬಿಟ್ಟದ್ದುಂಟೇ ಎಂದು ನಾನು ಕೇಳುತ್ತೇನೆ. ಹಾಗೆ ಎಂದಿಗೂ ಹೇಳಬಾರದು. ಯಾಕಂದರೆ ನಾನು ಸಹ ಇಸ್ರಾಯೇಲ್ಯನು. ಅಬ್ರ ಹಾಮನ ಸಂತತಿಯವನು, ಬೆನ್ಯಾವಿಾನನ ಗೋತ್ರ ದವನು ಆಗಿದ್ದೇನಲ್ಲಾ. ದೇವರು ಮುಂದಾಗಿ ಅರಿತುಕೊಂಡಿದ್ದ ತನ್ನ ಜನರನ್ನು ತಳ್ಳಿಹಾಕಲಿಲ್ಲ. ಎಲೀಯನ ವಿಷಯವಾಗಿಯಾದರೋ ಅವನು ಇಸ್ರಾಯೇಲ್ಯರಿಗೆ ವಿರೋಧವಾಗಿ ದೇವರಿಗೆ ವಿಜ್ಞಾಪನೆ ಮಾಡುತ್ತಾ--
- Revelation 20:4–6 ಪ್ರಕಟನೆ 20:4–6ತರುವಾಯ ಸಿಂಹಾಸನಗಳನ್ನು ಕಂಡೆನು. ಅವುಗಳ ಮೇಲೆ ಕೂತಿದ್ದವರಿಗೆ ನ್ಯಾಯತೀರಿಸುವ ಅಧಿಕಾರವು ಕೊಡಲ್ಪಟ್ಟಿತು. ಇದಲ್ಲದೆ ಯೇಸುವಿನ ವಿಷಯವಾದ ಸಾಕ್ಷಿಯ ನಿಮಿತ್ತವಾಗಿಯೂ ದೇವರ ವಾಕ್ಯದ ನಿಮಿತ್ತವಾಗಿಯೂ ತಲೆಹೊಯಿಸಿಕೊಂಡವರ ಆತ್ಮಗಳನ್ನೂ ಮೃಗಕ್ಕೂ ಅದರ ವಿಗ್ರಹಕ್ಕೂ ಮಿಕ್ಕ ಸತ್ತವರು ಆ ಸಾವಿರ ವರುಷ ತೀರುವತನಕ ತಿರಿಗಿ ಬದುಕಲಿಲ್ಲ; ಇದೇ ಪ್ರಥಮ ಪುನರುತ್ಥಾನವು. ಪ್ರಥಮ ಪುನರುತ್ಥಾ ನದಲ್ಲಿ ಸೇರಿರುವವನು ಧನ್ಯನೂ ಪರಿಶುದ್ಧನೂ ಆಗಿ ದ್ದಾನೆ. ಇಂಥವರ ಮೇಲೆ ಎರಡನೆಯ ಮರಣಕ್ಕೆ ಅಧಿಕಾರವಿಲ್ಲ; ಆದರೆ ಅವರು ದೇವರಿಗೂ ಕ್ರಿಸ್ತನಿಗೂ ಯಾಜಕರಾಗಿ ಕ್ರಿಸ್ತನೊಂದಿಗೆ ಸಾವಿರ ವರುಷ ಆಳುವರು.