Romans · chapter 11 · verse 27
Romans 11:27 in Kannada
ನಾನು ಅವರ ಪಾಪಗಳನ್ನು ತೆಗೆದು ಹಾಕುವದು ಅವರ ಸಂಗಡ ಮಾಡಿಕೊಂಡ ನನ್ನ ಒಡಂಬಡಿಕೆಯಾಗಿದೆ ಎಂಬದು.
Naanu avara paapagalannu tegedu haakuvadu avara sangada maadikonda nanna odambadikeyaagide embadu.
Romans 11:27 in English
- King James Version (KJV)
- For this [is] my covenant unto them, when I shall take away their sins.
- World English Bible (WEB)
- This is my covenant with them, when I will take away their sins.”
- American Standard Version (ASV)
- And this is my covenant unto them, When I shall take away their sins.
- Bible in Basic English (BBE)
- And this is my agreement with them, when I will take away their sins.
- Darby Translation (DBY)
- And this is the covenant from me to them, when I shall have taken away their sins.
- Webster's Bible (WBS)
- For this [is] my covenant to them, when I shall take away their sins.
- Young's Literal Translation (YLT)
- and this to them [is] the covenant from Me, when I may take away their sins.'
Read in context
- 25ಸಹೋದರರೇ, ನಿಮ್ಮನ್ನು ನೀವೇ ಬುದ್ಧಿವಂತ ರೆಂಬದಾಗಿ ಎಣಿಸಿಕೊಳ್ಳದಂತೆ ಗುಪ್ತವಾಗಿದ್ದ ಒಂದು ಸಂಗತಿ ನಿಮಗೆ ತಿಳಿದಿರಬೇಕೆಂದು ಅಪೇಕ್ಷಿಸುತ್ತೇನೆ. ಅದೇನಂದರೆ, ಇಸ್ರಾಯೇಲ್ಯರಲ್ಲಿ ಒಂದು ಪಾಲು ಜನರಿಗೆ ಉಂಟಾದ ಕುರುಡುತನವು ಅನ್ಯಜನಗಳು ಸಂಪೂರ್ಣವಾಗಿ ದೇವರ ರಾಜ್ಯದಲ್ಲಿ ಸೇರುವ ತನಕ
- 26ಹೀಗೆ ಇಸ್ರಾಯೇಲ್ ಜನರೆಲ್ಲಾ ರಕ್ಷಣೆಹೊಂದುವರು. ಇದಕ್ಕೆ ಆಧಾರವಾಗಿ--ಬಿಡಿಸು ವಾತನು ಚೀಯೋನಿನೊಳಗಿಂದ ಹೊರಟುಬಂದು ಯಾಕೋಬಿನಲ್ಲಿರುವ ಭಕ್ತಿಹೀನತೆಯನ್ನು ನಿವಾರಣೆ ಮಾಡುವನು.
- 27ನಾನು ಅವರ ಪಾಪಗಳನ್ನು ತೆಗೆದು ಹಾಕುವದು ಅವರ ಸಂಗಡ ಮಾಡಿಕೊಂಡ ನನ್ನ ಒಡಂಬಡಿಕೆಯಾಗಿದೆ ಎಂಬದು.
- 28ಸುವಾರ್ತೆಯ ವಿಷಯದಲ್ಲಿ ಅವರು ನಿಮ್ಮ ನಿಮಿತ್ತವಾಗಿ ವೈರಿಗಳಾ ಗಿದ್ದಾರೆ; ಆದರೆ ಆಯ್ಕೆಯ ವಿಷಯದಲ್ಲಿ ಅವರು ಪಿತೃಗಳ ನಿಮಿತ್ತವಾಗಿ ಪ್ರಿಯರಾಗಿದ್ದಾರೆ.
- 29ದೇವರ ದಾನಗಳೂ ಕರೆಯುವಿಕೆಯೂ ಪಶ್ಚಾತ್ತಾಪವಿಲ್ಲದವು ಗಳಾಗಿವೆ.
Cross references
- Jeremiah 31:31–34 ಯೆರೆಮೀಯ 31:31–34ಇಗೋ, ನಾನು ಇಸ್ರಾಯೇಲಿನ ಮನೆತನದವರ ಸಂಗಡಲೂ ಯೆಹೂದದ ಮನೆತನದವರ ಸಂಗ ಡಲೂ ಹೊಸ ಒಡಂಬಡಿಕೆಯನ್ನು ಮಾಡಿಕೊಳ್ಳುವ ದಿನಗಳು ಬರುವವೆಂದು ಕರ್ತನು ಅನ್ನುತ್ತಾನೆ. ನಾನು ಅವರ ತಂದೆಗಳ ಸಂಗಡ ಅವರನ್ನು ಐಗುಪ್ತದೇಶದಿಂದ ಹೊರತರುವದಕ್ಕೆ ಅವರ ಕೈ ಹಿಡಿದ ದಿನದಲ್ಲಿ ಮಾಡಿದ ಒಡಂಬಡಿಕೆಯ ಹಾಗಲ್ಲ; ನಾನು ಅವರ ಯಜಮಾನನಾಗಿದ್ದಾಗ್ಯೂ ಆ ನನ್ನ ಒಡಂಬಡಿಕೆಯನ್ನು ಅವರು ವಿಾರಿದರೆಂದು, ಕರ್ತನು ಅನ್ನುತ್ತಾನೆ. ಆದರೆ ನಾನು ಇಸ್ರಾಯೇಲಿನ ಮನೆತನದವರ ಸಂಗಡ ಮಾಡುವ ಒಡಂಬಡಿಕೆ ಇದೇ. ಆ ದಿನಗಳಾದ ಮೇಲೆ ನಾನು ನನ್ನ ನ್ಯಾಯಪ್ರಮಾಣವನ್ನು ಅವರೊಳಗೆ ಇಟ್ಟು ಅವರ ಹೃದಯದಲ್ಲಿ ಅದನ್ನು ಬರೆಯುವೆನು; ನಾನು ಅವರಿಗೆ ದೇವರಾಗಿರುವೆನು ಅವರು ನನಗೆ ಪ್ರಜೆ ಯಾಗಿರುವರು ಎಂದು ಕರ್ತನು ಅನ್ನುತ್ತಾನೆ. ನೆರೆ ಯವನಿಗೆ ನೆರೆಯವನೂ ಸಹೋದರನಿಗೆ ಸಹೋ ದರನೂ-- ಕರ್ತನನ್ನು ತಿಳಿಯಿರಿ ಎಂದು ಇನ್ನು ಮೇಲೆ ಬೋಧಿಸುವದಿಲ್ಲ; ಅವರೆಲ್ಲರೂ ಚಿಕ್ಕವನು ಮೊದಲು ಗೊಂಡು ದೊಡ್ಡವನ ವರೆಗೂ ನನ್ನನ್ನು ತಿಳಿಯುವ ರೆಂದು ಕರ್ತನು ಅನ್ನುತ್ತಾನೆ; ಅವರ ಅಕ್ರಮವನ್ನು ಮನ್ನಿಸುವೆನು; ಪಾಪಗಳನ್ನು ಇನ್ನು ಮೇಲೆ ಜ್ಞಾಪಕ ಮಾಡುವದಿಲ್ಲ.
- Isaiah 59:21 ಯೆಶಾಯ 59:21ಕರ್ತನು ಹೇಳುವದೇ ನಂದರೆ--ನಾನಾದರೋ ಅವರ ಸಂಗಡ ಮಾಡುವ ಒಡಂಬಡಿಕೆ ಇದೇ--ನಿನ್ನ ಮೇಲಿರುವ ನನ್ನ ಆತ್ಮನೂ ನಾನು ನಿನ್ನ ಬಾಯಲ್ಲಿ ಇಟ್ಟಿರುವ ನನ್ನ ವಾಕ್ಯಗಳೂ ಇಂದಿನಿಂದ ಸದಾಕಾಲಕ್ಕೆ ನಿನ್ನ ಬಾಯಿಂದಲೂ ನಿನ್ನ ಸಂತಾನದ ಬಾಯಿಂದಲೂ ನಿನ್ನ ಸಂತತಿಯ ಸಂತಾ ನದ ಬಾಯಿಂದಲೂ ತೊಲಗುವದಿಲ್ಲವೆಂದು ಕರ್ತನು ಹೇಳುತ್ತಾನೆ.
- Ezekiel 36:25–29 ಯೆಹೆಜ್ಕೇಲನು 36:25–29ಆಮೇಲೆ ನಾನು ನಿಮ್ಮ ಮೇಲೆ ಶುದ್ಧವಾದ ನೀರನ್ನು ಚಿಮುಕಿಸುತ್ತೇನೆ ಮತ್ತು ನೀವು ಶುದ್ಧರಾಗುವಿರಿ; ಅಶುದ್ಧತ್ವಗಳಿಂದಲೂ ನಿಮ್ಮ ಎಲ್ಲಾ ವಿಗ್ರಹಗಳಿಂದಲೂ ನಿಮ್ಮನ್ನು ಶುದ್ಧೀಕರಿಸುವೆನು. ನಿನಗೆ ಹೊಸ ಹೃದಯವನ್ನು ಕೊಟ್ಟು ಹೊಸ ಆತ್ಮ ವನ್ನು ನಿಮ್ಮೊಳಗೆ ಇಡುವೆನು; ನಿಮ್ಮ ದೇಹದಿಂದ ಕಲ್ಲಿನ ಹೃದಯವನ್ನು ಹೊರಗೆ ತೆಗೆದು ನಿಮಗೆ ಮಾಂಸದ ಹೃದಯವನ್ನು ಕೊಡುತ್ತೇನೆ. ನನ್ನ ಆತ್ಮ ವನ್ನು ನಿಮ್ಮೊಳಗೆ ಇಡುವೆನು; ನೀವು ನನ್ನ ನಿಯಮ ಗಳಲ್ಲಿ ನಡೆಯುವ ಹಾಗೆ ಮಾಡುವೆನು ಮತ್ತು ನೀವು ನನ್ನ ನ್ಯಾಯವಿಧಿಗಳನ್ನು ಅನುಸರಿಸಿ ನಡೆಯುವಿರಿ. ನಾನು ನಿಮ್ಮ ತಂದೆಗಳಿಗೆ ಕೊಟ್ಟ ದೇಶದಲ್ಲಿ ವಾಸಿ ಸುವಿರಿ; ನೀವು ನನ್ನ ಜನರಾಗಿರುವಿರಿ; ನಾನು ನಿಮ್ಮ ದೇವರಾಗಿರುವೆನು. ಅಲ್ಲದೆ ನಾನು ನಿಮ್ಮನ್ನು ನಿಮ್ಮ ಅಶುದ್ಧತ್ವಗಳಿಂದಲೂ ಸಹ ರಕ್ಷಿಸುವೆನು; ಬೆಳೆ ಬೆಳೆ ಯಲೆಂದು ಹೇಳಿ ಅದನ್ನು ಹೆಚ್ಚಿಸುವೆನು, ಕ್ಷಾಮವನ್ನು ನಿಮ್ಮ ಮೇಲೆ ಬರಮಾಡುವದಿಲ್ಲ.
- Jeremiah 32:38–40 ಯೆರೆಮೀಯ 32:38–40ಅವರು ನನಗೆ ಜನರಾಗಿರುವರು; ನಾನು ಅವರಿಗೆ ದೇವರಾಗಿರುವೆನು. ಅವರಿಗೂ ಅವರ ತರುವಾಯ ಅವರ ಮಕ್ಕಳಿಗೂ ಒಳ್ಳೇದಕ್ಕಾಗಿ ಅವರು ಯಾವಾಗಲೂ ನನಗೆ ಭಯ ಪಡುವ ಹಾಗೆ ಅವರಿಗೆ ಒಂದೇ ಹೃದಯವನ್ನೂ ಒಂದೇ ಮಾರ್ಗವನ್ನೂ ಕೊಡುವೆನು. ಅವರಿಗೆ ಒಳ್ಳೇದನ್ನು ಮಾಡುವ ಹಾಗೆ ನಾನು ತಿರುಗಿಸಿ ಬಿಡೆನೆಂದು ನಿತ್ಯವಾದ ಒಡಂಬಡಿಕೆಯನ್ನು ಅವರ ಸಂಗಡ ಮಾಡುತ್ತೇನೆ; ಅವರು ನನ್ನನ್ನು ಬಿಡದ ಹಾಗೆ ನನ್ನ ಭಯವನ್ನು ಅವರ ಹೃದಯಗಳಲ್ಲಿ ಇಡುತ್ತೇನೆ.
- Isaiah 27:9 ಯೆಶಾಯ 27:9ಹೀಗಿರಲು (ಈ ಕಾರಣದಿಂದ) ಯಾಕೋಬು ಯಜ್ಞವೇದಿಯ ಕಲ್ಲುಗಳನ್ನೆಲ್ಲಾ ಒಡೆದುಹೋದ ಸುಣ್ಣದ ಕಲ್ಲುಗಳಂತೆ ಮಾಡುವಾಗ ವಿಗ್ರಹಸ್ತಂಭಗಳೂ ಸೂರ್ಯಸ್ತಂಭ ಗಳೂ ಏಳುವದಿಲ್ಲ ಮತ್ತು ಅದರ ಪಾಪಪರಿಹಾರಕ್ಕೆ ಗುರುತಾದ ಪೂರ್ಣಫಲವು ಇದೇ.
- Isaiah 43:25 ಯೆಶಾಯ 43:25ನಾನಾಗಿ ನಾನೇ ನನಗೋಸ್ಕರ ನಿನ್ನ ದ್ರೋಹಗಳನ್ನು ಅಳಿಸಿಬಿಡುತ್ತೇನೆ. ನಿನ್ನ ಪಾಪ ಗಳನ್ನು ನನ್ನ ನೆನಪಿನಲ್ಲಿಡೆನು.
- Hebrews 8:8–12 ಇಬ್ರಿಯರಿಗೆ 8:8–12ಆತನು ಆದರ ಮೇಲೆ ತಪ್ಪುಹೊರಿಸಿ ಹೀಗೆಂ ದನು--ಇಗೋ, ನಾನು ಇಸ್ರಾಯೇಲ್ ಮನೆತನ ದೊಂದಿಗೂ ಯೆಹೂದ ಮನೆತನದೊಂದಿಗೂ ಹೊಸ ದಾಗಿರುವ ಒಂದು ಒಡಂಬಡಿಕೆಯನ್ನು ಮಾಡಿ ಕೊಳ್ಳುವ ದಿನಗಳು ಬರುವವು. ಈ ಒಡಂಬಡಿಕೆಯು ನಾನು ಇವರ ಪಿತೃಗಳನ್ನು ಕೈಹಿಡಿದು ಐಗುಪ್ತದೇಶ ದೊಳಗಿಂದ ಕರಕೊಂಡು ಬಂದ ದಿನದಲ್ಲಿ ಅವರ ಸಂಗಡ ಮಾಡಿಕೊಂಡ ಒಡಂಬಡಿಕೆಯಂಥದಲ್ಲ; ಅವರು ನನ್ನ ಒಡಂಬಡಿಕೆಯಲ್ಲಿ ಸ್ಥಿರವಾಗಿ ನಿಲ್ಲಲಿಲ್ಲವಾ ದದರಿಂದ ನಾನು ಅವರನ್ನು ಲಕ್ಷ್ಯಕ್ಕೆ ತರಲಿಲ್ಲ ಎಂದು ಕರ್ತನು ಹೇಳುತ್ತಾನೆ. ಆ ದಿನಗಳ ತರುವಾಯ ನಾನು ಇಸ್ರಾಯೇಲ್ ಮನೆತನದ ವರೊಂದಿಗೆ ಮಾಡಿಕೊಳ್ಳುವ ಒಡಂಬಡಿಕೆಯು ಹೀಗಿರುವದು, ಅದೇನಂದರೆ--ನನ್ನ ಆಜ್ಞೆಗಳನ್ನು ಅವರ ಮನಸ್ಸಿನಲ್ಲಿ ಇಡುವೆನು; ಅವರ ಹೃದಯಗಳಲ್ಲಿ ಅವುಗಳನ್ನು ಬರೆಯುವೆನು; ನಾನು ಅವರಿಗೆ ದೇವರಾಗಿರುವೆನು. ಅವರು ನನ್ನ ಜನರಾಗಿರ ಇದಲ್ಲದೆ ಪ್ರತಿ ಯೊಬ್ಬನು ತನ್ನ ನೆರೆಯವನಿಗೂ ತನ್ನ ಸಹೋದ ರನಿಗೂ--ಕರ್ತನನ್ನು ತಿಳಿದುಕೊಳ್ಳಿರಿ ಎಂದು ಉಪ ದೇಶಿಸುವದಿಲ್ಲ; ಯಾಕಂದರೆ ಚಿಕ್ಕವರಿಂದ ದೊಡ್ಡವರ ವರೆಗೂ ನನ್ನನ್ನು ಅರಿತುಕೊಳ್ಳುವರು. ನಾನು ಅವರ ಅನೀತಿಯ ವಿಷಯವಾಗಿ ಕರುಣೆಯುಳ್ಳವನಾಗಿದ್ದು ಅವರ ಪಾಪಗಳನ್ನೂ ಅಪರಾಧಗಳನ್ನೂ ನನ್ನ ನೆನಪಿಗೆ ಇನ್ನೆಂದಿಗೂ ತರುವದಿಲ್ಲ ಎಂದು ಕರ್ತನು ನುಡಿಯು ತ್ತಾನೆ.ಇಲ್ಲಿ ಆತನು--ಹೊಸಒಡಂಬಡಿಕೆಯೆಂದು ಹೇಳಿದ್ದರಲ್ಲಿ ಮೊದಲಿದ್ದದ್ದನ್ನು ಹಳೆಯದಾಗಿ ಮಾಡಿ ದ್ದಾನೆ. ಅದು ಹಳೇದಾಗುತ್ತಾ ಕ್ಷೀಣವಾಗಿ ಇಲ್ಲದಂತಾ ಗುವದಕ್ಕೆ ಸಿದ್ಧವಾಗಿದೆ ಎಂದು ಹೇಳುತ್ತಾನೆ.
- John 1:29 ಯೋಹಾನನು 1:29ಮರುದಿನ ಯೋಹಾನನು ತನ್ನ ಕಡೆಗೆ ಬರುತ್ತಿದ್ದ ಯೇಸುವನ್ನು ನೋಡಿ--ಇಗೋ, ಲೋಕದ ಪಾಪ ವನ್ನು ತೆಗೆದುಹಾಕುವ ದೇವರ ಕುರಿಮರಿ ಎಂದು ಹೇಳಿದನು.
- Hebrews 10:16 ಇಬ್ರಿಯರಿಗೆ 10:16ಹೇಗೆಂದರೆ ಆತನು ಮೊದಲು ಹೇಳಿದಂತೆ--ಆ ದಿನಗಳಾದ ಮೇಲೆ ನನ್ನ ಆಜ್ಞೆಗಳನ್ನು ಅವರ ಹೃದಯಗಳಲ್ಲಿ ಇಡುವೆನು, ಅವರ ಮನಸ್ಸುಗಳಲ್ಲಿ ಅವುಗಳನ್ನು ಬರೆಯುವೆನು. ನಾನು ಅವರ ಸಂಗಡ ಮಾಡಿಕೊಳ್ಳುವ ಒಡಂಬಡಿಕೆಯು ಇದೇ.
- Jeremiah 50:20 ಯೆರೆಮೀಯ 50:20ಕರ್ತನು ಹೀಗೆ ಅನ್ನುತ್ತಾನೆ--ಆ ದಿವಸಗಳಲ್ಲಿ ಆ ಕಾಲದಲ್ಲಿ ಇಸ್ರಾ ಯೇಲಿನ ಅಕ್ರಮವನ್ನು ಹುಡುಕಿದರೂ ಅಲ್ಲಿ ಏನೂ ಇರದು; ಯೆಹೂದದ ಪಾಪಗಳನ್ನು ಹುಡುಕಿದರೂ ಅವು ಸಿಕ್ಕುವದಿಲ್ಲ. ನಾನು ಉಳಿಸುವವರನ್ನು ಮನ್ನಿಸುತ್ತೇನೆ.
- Isaiah 55:3 ಯೆಶಾಯ 55:3ನಿಮ್ಮ ಕಿವಿಗಳನ್ನು ಬಾಗಿಸಿಕೊಂಡು ನನ್ನ ಬಳಿಗೆ ಬನ್ನಿರಿ; ಕೇಳಿರಿ, ನಿಮ್ಮ ಪ್ರಾಣವು ಬದುಕು ವದು; ನಿಶ್ಚಯವಾಗಿ ದಾವೀದನಿಗೆ ಖಂಡಿತವಾಗಿ ಮಾಡಿದ ಕರುಣೆಗಳ ಪ್ರಕಾರ ನಿಮ್ಮ ಸಂಗಡ ನಿತ್ಯ ವಾದ ಒಡಂಬಡಿಕೆಯನ್ನು ಮಾಡುವೆನು.
- Hosea 14:2 ಹೋಶೇಯ 14:2ಮಾತುಗಳನ್ನು ನಿಮ್ಮ ಸಂಗಡ ತೆಗೆದುಕೊಂಡು ಕರ್ತನ ಕಡೆಗೆ ತಿರಿಗಿಕೊಂಡು ಆತನಿಗೆ--ಎಲ್ಲಾ ದುಷ್ಕತ್ಯವನ್ನು ತೆಗೆದು ಹಾಕಿ ನಮ್ಮನ್ನು ಕೃಪೆಯಿಂದ ಸ್ವೀಕರಿಸು; ಆಗ ನಮ್ಮ ತುಟಿಗಳ ಯಜ್ಞಗಳನ್ನು ನಿನಗೆ ಅರ್ಪಿಸುವೆವು.