Romans · chapter 12 · verse 18
Romans 12:18 in Kannada
ಸಾಧ್ಯ ವಾದರೆ ನಿಮ್ಮಿಂದಾಗುವ ಮಟ್ಟಿಗೆ ಎಲ್ಲರ ಸಂಗಡ ಸಮಾಧಾನವಾಗಿರ್ರಿ.
Saadhya vaadare nimmindaaguva mattige ellara sangada samaadhaanavaagirri.
Romans 12:18 in English
- King James Version (KJV)
- If it be possible, as much as lieth in you, live peaceably with all men.
- World English Bible (WEB)
- If it is possible, as much as it is up to you, be at peace with all men.
- American Standard Version (ASV)
- If it be possible, as much as in you lieth, be at peace with all men.
- Bible in Basic English (BBE)
- As far as it is possible for you be at peace with all men.
- Darby Translation (DBY)
- if possible, as far as depends on you, living in peace with all men;
- Webster's Bible (WBS)
- If [it is] possible, as much as lieth in you, live peaceably with all men.
- Young's Literal Translation (YLT)
- If possible — so far as in you — with all men being in peace;
Read in context
- 16ಒಬ್ಬರಿಗೊಬ್ಬರು ಒಂದೇ ಮನಸ್ಸುಳ್ಳುವರಾಗಿರ್ರಿ; ದೊಡ್ಡಸ್ತಿಕೆಗಳ ಮೇಲೆ ಮನಸ್ಸಿಡದೆ ದೀನರ ಸಂಗಡ ಬಳಿಕೆಯಾಗಿರ್ರಿ. ನಿಮ್ಮನ್ನು ನೀವೇ ಬುದ್ಧಿವಂತರೆಂದು ಭಾವಿಸಿಕೊಳ್ಳಬೇಡಿರಿ.
- 17ಯಾರಿಗೂ ಕೆಟ್ಟದ್ದಕ್ಕೆ ಪ್ರತಿಯಾಗಿ ಕೆಟ್ಟದ್ದನ್ನು ಮಾಡಬೇಡಿರಿ. ಎಲ್ಲರ ದೃಷ್ಟಿಯಲ್ಲಿ ಯಾವದು ಗೌರವ ವಾದದ್ದೋ ಅದನ್ನೇ ಮಾಡುವವರಾಗಿರ್ರಿ.
- 18ಸಾಧ್ಯ ವಾದರೆ ನಿಮ್ಮಿಂದಾಗುವ ಮಟ್ಟಿಗೆ ಎಲ್ಲರ ಸಂಗಡ ಸಮಾಧಾನವಾಗಿರ್ರಿ.
- 19ಅತಿ ಪ್ರಿಯರೇ, ನೀವೇ ಮುಯ್ಯಿಗೆ ಮುಯ್ಯಿ ತೀರಿಸದೆ ಶಿಕ್ಷಿಸುವದನ್ನು ದೇವರಿಗೆ ಬಿಡಿರಿ. ಯಾಕಂದರೆ--ಮುಯ್ಯಿಗೆ ಮುಯ್ಯಿ ತೀರಿಸು ವದು ನನ್ನ ಕೆಲಸ, ನಾನೇ ಪ್ರತಿಫಲವನ್ನು ಕೊಡುವೆನು ಎಂದು ಕರ್ತನು ಹೇಳುತ್ತಾನೆ ಎಂಬದಾಗಿ ಬರೆದದೆ.
- 20ಹಾಗಾದರೆ ನಿನ್ನ ವೈರಿಯು ಹಸಿದಿದ್ದರೆ ಅವನಿಗೆ ಊಟಕ್ಕೆ ಬಡಿಸು; ಬಾಯಾರಿದ್ದರೆ ಕುಡಿಯುವದಕ್ಕೆ ಕೊಡು. ಹೀಗೆ ಮಾಡುವದರಿಂದ ಅವನ ತಲೆಯ ಮೇಲೆ ಕೆಂಡಗಳನ್ನು ಕೂಡಿಸಿಟ್ಟಂತಾಗುವದು.ಕೆಟ್ಟತನಕ್ಕೆ ಸೋತುಹೋಗದೆ ಒಳ್ಳೇತನದಿಂದ ಕೆಟ್ಟತನವನ್ನು ಸೋಲಿಸು.
Cross references
- Hebrews 12:14 ಇಬ್ರಿಯರಿಗೆ 12:14ಎಲ್ಲರ ಸಂಗಡ ಸಮಾಧಾನದಿಂದಿರುವದನ್ನೂ ಪರಿಶುದ್ಧತೆಯನ್ನೂ ಅನುಸರಿಸಿರಿ; ಪರಿಶುದ್ಧತೆಯಿಲ್ಲದೆ ಯಾವನೂ ಕರ್ತನನ್ನು ಕಾಣುವದಿಲ್ಲ.
- Romans 14:19 ರೋಮಾಪುರದವರಿಗೆ 14:19ಆದದರಿಂದ ನಾವು ಸಮಾಧಾನವನ್ನುಂಟು ಮಾಡುವವುಗಳನೂ ಪರಸ್ಪರ ಭಕ್ತಿವೃದ್ಧಿಯನ್ನುಂಟು ಮಾಡುವವುಗಳನ್ನೂ ಅನುಸರಿಸೋಣ.
- Matthew 5:9 ಮತ್ತಾಯನು 5:9ಸಮಾಧಾನ ಮಾಡುವವರು ಧನ್ಯರು; ಯಾಕಂದರೆ ಅವರು ದೇವರ ಮಕ್ಕಳೆಂದು ಕರೆಯಲ್ಪಡುವರು.
- 2 Corinthians 13:11 2 ಕೊರಿಂಥದವರಿಗೆ 13:11ಕಡೇ ಮಾತೇನಂದರೆ ಸಹೋದರರೇ, ನಿಮಗೆ ಶುಭವಾಗಲಿ. ಸಂಪೂರ್ಣರಾಗಿರ್ರಿ; ಆದರಣೆ ಹೊಂದಿದವರಾಗಿರ್ರಿ, ಒಂದೇ ಮನಸ್ಸುಳ್ಳವರಾಗಿರ್ರಿ, ಸಮಾಧಾನದಲ್ಲಿ ಜೀವಿಸಿರಿ; ಆಗ ಪ್ರೀತಿಯುಳ್ಳ ಶಾಂತಿಯ ದೇವರು ನಿಮ್ಮ ಸಂಗಡ ಇರುವನು.
- James 3:16–18 ಯಾಕೋಬನು 3:16–18ಹೊಟ್ಟೇಕಿಚ್ಚೂ ಜಗಳವೂ ಇರುವ ಕಡೆ ಗಲಿಬಿಲಿಯೂ ಸಕಲವಿಧವಾದ ಕೆಟ್ಟ ಕೃತ್ಯವೂ ಇರುವವು. ಆದರೆ ಮೇಲಣಿಂದ ಬರುವ ಜ್ಞಾನವು ಮೊದಲು ನಿರ್ಮಲವಾದದ್ದು, ಆಮೇಲೆ ಸಮಾಧಾನಕರವಾದದ್ದು, ವಿನಯವುಳ್ಳದ್ದು, ಸುಲಭವಾಗಿ ಒಪ್ಪಿಕೊಳ್ಳುವಂಥದು, ಕರುಣೆಯಿಂದಲೂ ಒಳ್ಳೇ ಫಲಗಳಿಂದಲೂ ತುಂಬಿರುವಂಥದ್ದು ಆಗಿದೆ; ಅದರಲ್ಲಿ ಪಕ್ಷಪಾತವೂ ಕಪಟವೂ ಇಲ್ಲ.ಸಮಾಧಾನ ಪಡಿಸುವವರಿಗೆ ಸಮಾಧಾನದಲ್ಲಿ ನೀತಿಯ ಫಲವು ಬಿತ್ತಲ್ಪಡುತ್ತದೆ. ಸಮಾಧಾನ ಪಡಿಸುವವರಿಗೆ ಸಮಾಧಾನದಲ್ಲಿ ನೀತಿಯ ಫಲವು ಬಿತ್ತಲ್ಪಡುತ್ತದೆ.
- Galatians 5:22 ಗಲಾತ್ಯದವರಿಗೆ 5:22ಆದರೆ ಆತ್ಮನ ಫಲವೇನಂದರೆ--ಪ್ರೀತಿ ಸಂತೋಷ ಸಮಾಧಾನ ದೀರ್ಘಶಾಂತಿ ವಿನಯ ಸದ್ಗುಣ ನಂಬಿಕೆ
- Mark 9:50 ಮಾರ್ಕನು 9:50ಉಪ್ಪು ಒಳ್ಳೆಯದು; ಆದರೆ ಉಪ್ಪು ತನ್ನ ಸಾರವನ್ನು ಕಳೆದುಕೊಂಡರೆ ಇನ್ನಾತರಿಂದ ನೀವು ಅದನ್ನು ರುಚಿಗೊಳಿಸುವಿರಿ? ನಿಮ್ಮೊಳಗೆ ಉಪ್ಪು ಇರಲಿ; ಮತ್ತು ಒಬ್ಬರ ಸಂಗಡಲೊಬ್ಬರು ಸಮಾಧಾನ ವಾಗಿರ್ರಿ ಅಂದನು.
- Proverbs 12:20 ಜ್ಞಾನೋಕ್ತಿಗಳು 12:20ಕೇಡನ್ನು ಕಲ್ಪಿಸುವವರ ಹೃದಯದಲ್ಲಿ ಮೋಸ; ಸಮಾಧಾನದ ಆಲೋಚನೆಯನ್ನು ಹೇಳುವವರಿಗೆ ಸಂತೋಷ.
- 1 Peter 3:11 1 ಪೇತ್ರನು 3:11ಅವನು ಕೆಟ್ಟದ್ದನ್ನು ಬಿಟ್ಟು ಒಳ್ಳೇದನ್ನು ಮಾಡಲಿ; ಸಮಾಧಾನವನ್ನು ಹುಡುಕಿ ಅದಕ್ಕೋಸ್ಕರ ಪ್ರಯತ್ನಪಡಲಿ.
- 2 Timothy 2:22 2 ತಿಮೊಥೆಯನಿಗೆ 2:22ಯೌವನದ ಇಚ್ಚೆಗಳಿಂದ ಸಹ ಓಡಿಹೋಗು; ಶುದ್ಧ ಹೃದಯವುಳ್ಳವರಾಗಿ ಕರ್ತನನ್ನು ಬೇಡಿಕೊಳ್ಳು ವವರ ಸಂಗಡ ನೀತಿ ವಿಶ್ವಾಸ ಪ್ರೀತಿ ಸಮಾಧಾನ ಇವುಗಳನ್ನು ಅನುಸರಿಸು.
- Psalm 34:14 ಕೀರ್ತನೆಗಳು 34:14ಕೇಡಿನಿಂದ ತೊಲಗಿ ಒಳ್ಳೆಯದನ್ನು ಮಾಡು; ಸಮಾ ಧಾನವನ್ನು ಹುಡುಕಿ ಅದನ್ನು ಹಿಂಬಾಲಿಸು.
- Romans 14:17 ರೋಮಾಪುರದವರಿಗೆ 14:17ಯಾಕಂದರೆ ತಿನ್ನುವದೂ ಕುಡಿಯುವದೂ ದೇವರ ರಾಜ್ಯವಲ್ಲ; ಆದರೆ ನೀತಿಯೂ ಸಮಾಧಾನವೂ ಪವಿತ್ರಾತ್ಮನಲ್ಲಿರುವ ಆನಂದವೂ ಆಗಿದೆ.