Romans · chapter 13 · verse 12
Romans 13:12 in Kannada
ಇರುಳು ಬಹಳ ಮಟ್ಟಿಗೆ ಕಳೆಯಿತು; ಹಗಲು ಸವಿಾಪವಾಯಿತು; ಆದದರಿಂದ ನಾವು ಕತ್ತಲೆಗೆ ಅನುಗುಣವಾದ ಕೃತ್ಯಗಳನ್ನು ಬಿಟ್ಟು ಬೆಳಕಿಗೆ ಅನುಗುಣವಾದ ಆಯುಧಗಳನ್ನು ಧರಿಸಿಕೊಳ್ಳೋಣ.
Irulu bahala mattige kaleyitu; hagalu saviాpavaayitu; aadadarinda naavu kattalege anugunavaada krutyagalannu bittu belakige anugunavaada aayudhagalannu dharisikollona.
Romans 13:12 in English
- King James Version (KJV)
- The night is far spent, the day is at hand: let us therefore cast off the works of darkness, and let us put on the armour of light.
- World English Bible (WEB)
- The night is far gone, and the day is near. Let’s therefore throw off the deeds of darkness, and let’s put on the armor of light.
- American Standard Version (ASV)
- The night is far spent, and the day is at hand: let us therefore cast off the works of darkness, and let us put on the armor of light.
- Bible in Basic English (BBE)
- The night is far gone, and the day is near: so let us put off the works of the dark, arming ourselves with light,
- Darby Translation (DBY)
- The night is far spent, and the day is near; let us cast away therefore the works of darkness, and let us put on the armour of light.
- Webster's Bible (WBS)
- The night is far spent, the day is at hand: let us therefore cast off the works of darkness, and let us put on the armor of light.
- Young's Literal Translation (YLT)
- the night did advance, and the day came nigh; let us lay aside, therefore, the works of the darkness, and let us put on the armour of the light;
Read in context
- 10ಪ್ರೀತಿಯು ತನ್ನ ನೆರೆಯವನಿಗೆ ಯಾವ ಕೇಡನ್ನೂ ಮಾಡುವದಿಲ್ಲ. ಆದಕಾರಣ ಪ್ರೀತಿ ಯಿಂದಲೇ ನ್ಯಾಯಪ್ರಮಾಣವು ನೆರವೇರುತ್ತದೆ.
- 11ಈಗ ನಿದ್ರೆಯಿಂದ ಎಚ್ಚರವಾಗತಕ್ಕ ಕಾಲವೆಂದು ಅರಿತುಕೊಳ್ಳಿರಿ; ನಾವು ಮೊದಲು ನಂಬಿದ ಕಾಲದಲ್ಲಿ ಇದ್ದದ್ದಕ್ಕಿಂತ ಈಗ ನಮ್ಮ ರಕ್ಷಣೆಯು ಹತ್ತಿರವಾಯಿತು.
- 12ಇರುಳು ಬಹಳ ಮಟ್ಟಿಗೆ ಕಳೆಯಿತು; ಹಗಲು ಸವಿಾಪವಾಯಿತು; ಆದದರಿಂದ ನಾವು ಕತ್ತಲೆಗೆ ಅನುಗುಣವಾದ ಕೃತ್ಯಗಳನ್ನು ಬಿಟ್ಟು ಬೆಳಕಿಗೆ ಅನುಗುಣವಾದ ಆಯುಧಗಳನ್ನು ಧರಿಸಿಕೊಳ್ಳೋಣ.
- 13ದುಂದೌತನ ಕುಡಿಕತನಗಳಲ್ಲಾಗಲಿ ಕಾಮವಿಲಾಸ ನಿರ್ಲಜ್ಜಾಕೃತ್ಯಗಳಲ್ಲಿಯಾಗಲಿ ಜಗಳ ಹೊಟ್ಟೇಕಿಚ್ಚು ಗಳಲ್ಲಿಯಾಗಲಿ ಇರದೆ ಹಗಲು ಹೊತ್ತಿಗೆ ತಕ್ಕ ಹಾಗೆ ಮಾನಸ್ಥರಾಗಿ ನಡೆದುಕೊಳ್ಳೋಣ.ನೀವು ದೇಹದ ಆಶೆಗಳನ್ನು ಪೂರೈಸುವದಕ್ಕಾಗಿ ಚಿಂತಿಸದೆ ಕರ್ತನಾದ ಯೇಸು ಕ್ರಿಸ್ತನನ್ನು ಧರಿಸಿಕೊಳ್ಳಿರಿ.
- 14ನೀವು ದೇಹದ ಆಶೆಗಳನ್ನು ಪೂರೈಸುವದಕ್ಕಾಗಿ ಚಿಂತಿಸದೆ ಕರ್ತನಾದ ಯೇಸು ಕ್ರಿಸ್ತನನ್ನು ಧರಿಸಿಕೊಳ್ಳಿರಿ.
Cross references
- Ezekiel 18:31–32 ಯೆಹೆಜ್ಕೇಲನು 18:31–32ನೀವು ಮಾಡುವ ದುಷ್ಟತ್ವಗಳನ್ನೆಲ್ಲಾ ನಿಮ್ಮಿಂದ ಬಿಟ್ಟುಬಿಡಿರಿ; ಹೊಸ ಹೃದಯವನ್ನೂ ಹೊಸ ಆತ್ಮವನ್ನೂ ನೀವು ಪಡಕೊಳ್ಳಿರಿ; ಯಾಕಂದರೆ ಓ ಇಸ್ರಾಯೇಲಿನ ಮನೆತನದವರೇ, ನೀವು ಸಾಯುವದೇಕೆ?ಸಾಯುವವನ ಸಾವಿನಲ್ಲಿ ನನಗೆ ಸಂತೋಷವಿಲ್ಲವೆಂದು ದೇವರಾದ ಕರ್ತನು ಹೇಳುತ್ತಾನೆ; ಆದಕಾರಣ ತಿರುಗಿಕೊಂಡು ಬಾಳಿರಿ. ಸಾಯುವವನ ಸಾವಿನಲ್ಲಿ ನನಗೆ ಸಂತೋಷವಿಲ್ಲವೆಂದು ದೇವರಾದ ಕರ್ತನು ಹೇಳುತ್ತಾನೆ; ಆದಕಾರಣ ತಿರುಗಿಕೊಂಡು ಬಾಳಿರಿ.
- Ephesians 5:11 ಎಫೆಸದವರಿಗೆ 5:11ತ್ತಲೆಗೆ ಸಂಬಂಧ ವಾದ ಕೃತ್ಯಗಳಿಂದ ಯಾವ ಫಲವೂ ಬರಲಾರದು; ಅವುಗಳಲ್ಲಿ ಪಾಲುಗಾರರಾಗಿರದೆ ಅವುಗಳನ್ನು ಖಂಡಿಸಿರಿ.
- 2 Corinthians 6:7 2 ಕೊರಿಂಥದವರಿಗೆ 6:7ಸತ್ಯವಾಕ್ಯದಿಂದ, ದೇವರ ಶಕ್ತಿಯಿಂದ, ಎಡಬಲಗೈ ಗಳಲ್ಲಿ ನೀತಿಯೆಂಬ ಆಯುಧಗಳಿಂದ,
- Colossians 3:8–17 ಕೊಲೊಸ್ಸೆಯವರಿಗೆ 3:8–17ಈಗಲಾದರೋ ಕ್ರೋಧ ಕೋಪ ಮತ್ಸರ ದೇವದೂಷಣೆ ನಿಮ ಬಾಯಿಂದ ಹೊರಡುವ ದುರ್ಭಾಷೆ ಇವುಗಳನ್ನು ವಿಸರ್ಜಿಸಿಬಿಡಿರಿ. ಒಬ್ಬರಿಗೊಬ್ಬರು ಸುಳ್ಳಾಡಬೇಡಿರಿ; ನೀವು ಹಳೇ ಮನುಷ್ಯನನ್ನು ಅವನ ಕೃತ್ಯಗಳ ಕೂಡ ತೆಗೆದುಹಾಕಿದ್ದೀರಲ್ಲವೇ? ನೀವು ನೂತನ ಮನುಷ್ಯನನ್ನು ಧರಿಸಿಕೊಂಡವರಾಗಿದ್ದೀರಿ ಅವನನ್ನು ಸೃಷ್ಟಿಸಿದಾತನ ಹೋಲಿಕೆಯ ಮೇರೆಗೆ ಜ್ಞಾನದಲ್ಲಿ ಅವನು ನೂತನವಾಗುತ್ತಾನೆ. ಇದರಲ್ಲಿ ಗ್ರೀಕನು ಯೆಹೂದ್ಯನು ಎಂಬ ಭೇದವಿಲ್ಲ; ಸುನ್ನತಿ ಮಾಡಿಸಿ ಕೊಂಡವರು ಸುನ್ನತಿ ಮಾಡಿಸಿಕೊಳ್ಳದವರು ಎಂಬ ಭೇದವಿಲ್ಲ, ಮ್ಲೇಚ್ಛ ಹೂನರೆಂದಿಲ್ಲ; ದಾಸನು ಸ್ವತಂತ್ರನು ಎಂಬ ಭೇದವಿಲ್ಲ; ಆದರೆ ಕ್ರಿಸ್ತನೇ ಸಮಸ್ತರಲ್ಲಿಯೂ ಸಮಸ್ತವೂ ಆಗಿದ್ದಾನೆ. ಆದದರಿಂದ ನೀವು ದೇವರಿಂದ ಆರಿಸಿಕೊಂಡ ವರೂ ಪರಿಶುದ್ಧರೂ ಪ್ರಿಯರೂ ಆಗಿರುವವರಿಗೆ ತಕ್ಕಂತೆ ಕನಿಕರ ದಯೆ ದೀನಮನಸ್ಸು ಸಾತ್ವಿಕತ್ವ ದೀರ್ಘಶಾಂತಿ ಎಂಬ ಸದ್ಗುಣಗಳನ್ನು ಧರಿಸಿಕೊಳ್ಳಿರಿ. ಯಾವನಿ ಗಾದರೂ ಒಬ್ಬನಿಗೆ ಇನ್ನೊಬ್ಬನ ಮೇಲೆ ವಿರೋಧವಾಗಿ ವ್ಯಾಜ್ಯವಿದ್ದರೂ ಒಬ್ಬರಿಗೊಬ್ಬರು ತಾಳಿಕೊಂಡು ಕ್ರಿಸ್ತನು ನಿಮ್ಮನ್ನು ಕ್ಷಮಿಸಿದಂತೆಯೇ ನೀವು ಒಬ್ಬರಿಗೊಬ್ಬರು ಕ್ಷಮಿಸಿರಿ. ಇದೆಲ್ಲಾದರ ಮೇಲೆ ಪ್ರೀತಿಯನ್ನು ಧರಿಸಿಕೊಳ್ಳಿರಿ; ಅದು ಸಂಪೂರ್ಣ ಮಾಡುವ ಬಂಧವಾಗಿದೆ. ದೇವರ ಸಮಾಧಾನವು ನಿಮ್ಮ ಹೃದಯಗಳಲ್ಲಿ ಆಳಲಿ; ಅದಕ್ಕಾಗಿಯೇ ನೀವು ಸಹ ಒಂದೇ ದೇಹವಾಗಿರುವಂತೆ ಕರೆಯಲ್ಪಟ್ಟಿದ್ದೀರಿ; ಇದಲ್ಲದೆ ನೀವು ಕೃತಜ್ಞತೆಯುಳ್ಳವರಾಗಿರ್ರಿ. ಸಕಲ ಜ್ಞಾನದಲ್ಲಿ ಕ್ರಿಸ್ತನ ವಾಕ್ಯವು ನಿಮ್ಮಲ್ಲಿ ಸಮೃದ್ಧಿಯಾಗಿ ವಾಸಿಸಲಿ; ಒಬ್ಬರಿಗೊಬ್ಬರು ಉಪದೇಶಿಸುತ್ತಾ ಬುದ್ದಿ ಹೇಳುತ್ತಾ ಕೀರ್ತನೆಗಳಿಂದಲೂ ಸಂಗೀತಗಳಿಂದಲೂ ಆತ್ಮ ಸಂಬಂಧವಾದ ಹಾಡುಗಳಿಂದಲೂ ಕೃಪೆಯಿಂದ ನಿಮ್ಮ ಹೃದಯಗಳಲ್ಲಿ ಕರ್ತನಿಗೆ ಹಾಡುತ್ತಾ ಇರ್ರಿ. ನೀವು ಮಾತಿನಿಂದಾಗಲಿ ಕ್ರಿಯೆಯಿಂದಾಗಲಿ ಏನು ಮಾಡಿದರೂ ಅದೆಲ್ಲವನ್ನು ಕರ್ತನಾದ ಯೇಸುವಿನ ಹೆಸರಿನಲ್ಲಿಯೇ ಮಾಡಿರಿ. ಆತನ ಮೂಲಕ ತಂದೆ ಯಾದ ದೇವರಿಗೆ ಕೃತಜ್ಞತಾಸ್ತುತಿಯನ್ನು ಸಲ್ಲಿಸಿರಿ.
- James 1:21 ಯಾಕೋಬನು 1:21ಆದಕಾರಣ ಎಲ್ಲಾ ಮಲಿನತೆಯನ್ನೂ ಎಲ್ಲಾ ದುಷ್ಟತನವನ್ನೂ ತೆಗೆದುಹಾಕಿ ಒಳಗೆ ಬೇರೂರಿರುವ ವಾಕ್ಯಕ್ಕೆ ನಮ್ರತೆ ಯಿಂದ ಎಡೆಕೊಡಿರಿ; ಅದು ನಿಮ್ಮ ಆತ್ಮಗಳನ್ನು ರಕ್ಷಿಸು ವದಕ್ಕೆ ಸಾಮರ್ಥ್ಯವುಳ್ಳದ್ದಾಗಿದೆ.
- Ephesians 6:11–18 ಎಫೆಸದವರಿಗೆ 6:11–18ನೀವು ಸೈತಾನನ ತಂತ್ರೋಪಾಯಗಳನ್ನು ಎದುರಿಸಿ ನಿಲ್ಲುವದಕ್ಕೆ ಶಕ್ತರಾಗುವಂತೆ ದೇವರ ಸರ್ವಾಯುಧ ಗಳನ್ನು ಧರಿಸಿಕೊಳ್ಳಿರಿ. ನಾವು ಹೋರಾಡುವದು ಮನುಷ್ಯಮಾತ್ರದವರ ಸಂಗಡವಲ್ಲ; ರಾಜತ್ವಗಳ ಮೇಲೆಯೂ ಅಧಿಕಾರಿಗಳ ಮೇಲೆಯೂ ಈ ಲೋಕದ ಅಂಧಕಾರದ ಅಧಿಪತಿಗಳ ಮೇಲೆಯೂ ಆಕಾಶಮಂಡಲದಲ್ಲಿರುವ ದುರಾತ್ಮಗಳ ದುಷ್ಟತನದ ಮೇಲೆಯೂ ಹೋರಾಡುವವರಾಗಿದ್ದೇವೆ. ಆದದ ರಿಂದ ಕೆಟ್ಟ ದಿನದಲ್ಲಿ ನೀವು ಅವುಗಳನ್ನು ಎದುರಿಸಿ ಮಾಡಬೇಕಾದದ್ದೆಲ್ಲವನ್ನು ಮಾಡಿ ನಿಲ್ಲಲು ಶಕ್ತರಾಗು ವಂತೆ ದೇವರ ಸರ್ವಾಯುಧವನ್ನು ನಿಮಗಾಗಿ ತೆಗೆದು ಕೊಳ್ಳಿರಿ. ಸತ್ಯವೆಂಬ ನಡುಕಟ್ಟನ್ನು ಕಟ್ಟಿಕೊಂಡು ನೀತಿಯೆಂಬ ಎದೆಕವಚವನ್ನು ಧರಿಸಿಕೊಳ್ಳಿರಿ.ಸಮಾಧಾನದ ವಿಷಯವಾದ ಸುವಾರ್ತೆಯನ್ನು ತಿಳಿಸುವದರಲ್ಲಿ ಸಿದ್ಧವಾದ ಮನಸ್ಸೆಂಬ ಕೆರಗಳನ್ನು ಮೆಟ್ಟಿಕೊಂಡು ನಿಲ್ಲಿರಿ. ಸಮಾಧಾನದ ವಿಷಯವಾದ ಸುವಾರ್ತೆಯನ್ನು ತಿಳಿಸುವದರಲ್ಲಿ ಸಿದ್ಧವಾದ ಮನಸ್ಸೆಂಬ ಕೆರಗಳನ್ನು ಮೆಟ್ಟಿಕೊಂಡು ನಿಲ್ಲಿರಿ. ಎಲ್ಲಾದಕ್ಕಿಂತ ಹೆಚ್ಚಾಗಿ ನಂಬಿಕೆ ಯೆಂಬ ಗುರಾಣಿಯನ್ನು ಹಿಡುಕೊಳ್ಳಿರಿ. ಆದರಿಂದ ನೀವು ಕೆಡುಕನ ಅಗ್ನಿಬಾಣಗಳನ್ನೆಲ್ಲಾ ಆರಿಸುವದಕ್ಕೆ ಶಕ್ತರಾಗುವಿರಿ. ಇದಲ್ಲದೆ ರಕ್ಷಣೆಯೆಂಬ ಶಿರಸ್ತ್ರಾಣ ವನ್ನು ಇಟ್ಟುಕೊಂಡು ಆತ್ಮನು ಕೊಡುವ ದೇವರ ವಾಕ್ಯವೆಂಬ ಕತ್ತಿಯನ್ನು ಹಿಡಿಯಿರಿ. ನೀವು ಆತ್ಮ ಪ್ರೇರಿತರಾಗಿ ಎಲ್ಲಾ ಸಮಯಗಳಲ್ಲಿ ಸಕಲವಿಧ ವಾದ ಪ್ರಾರ್ಥನೆಯಿಂದಲೂ ವಿಜ್ಞಾಪನೆಯಿಂದಲೂ ಪ್ರಾರ್ಥಿಸಿರಿ. ಇದರಲ್ಲಿ ಪೂರ್ಣ ಸ್ಥಿರಚಿತ್ತರಾಗಿದ್ದು ಪರಿಶುದ್ಧರೆಲ್ಲರ ವಿಷಯದಲ್ಲಿ ವಿಜ್ಞಾಪನೆಮಾಡುತ್ತಾ ಎಚ್ಚರವಾಗಿರ್ರಿ.
- Ephesians 4:22 ಎಫೆಸದವರಿಗೆ 4:22ಯೇಸುವಿನಲ್ಲಿರುವ ಸತ್ಯೋಪದೇಶವು ಯಾವದೆಂದರೆ--ನೀವು ನಿಮ ಹಿಂದಿನ ನಡತೆಯನ್ನು ಅನುಸರಿಸದೆ ಪೂರ್ವಸ್ವಭಾವ ವನ್ನು ತೆಗೆದು ಹಾಕಿಬಿಡಬೇಕು; ಅದು ಮೋಸಕರವಾದ ದುರಾಶೆಗಳಿಂದ ಕೆಟ್ಟು ಹೋಗುವಂಥದು.
- Romans 13:14 ರೋಮಾಪುರದವರಿಗೆ 13:14ನೀವು ದೇಹದ ಆಶೆಗಳನ್ನು ಪೂರೈಸುವದಕ್ಕಾಗಿ ಚಿಂತಿಸದೆ ಕರ್ತನಾದ ಯೇಸು ಕ್ರಿಸ್ತನನ್ನು ಧರಿಸಿಕೊಳ್ಳಿರಿ.
- Isaiah 30:22 ಯೆಶಾಯ 30:22ಕೆತ್ತಿದ ನಿಮ್ಮ ವಿಗ್ರಹಗಳ ಬೆಳ್ಳಿಯ ಕವಚಗಳನ್ನು ಎರಕದ ನಿಮ್ಮ ವಿಗ್ರಹಗಳ ಬಂಗಾರದ ಹೊದಿಕೆಯನ್ನು ನೀವು ಹೊಲಸುಮಾಡಿ ಆ ವಿಗ್ರಹಕ್ಕೆ ತೊಲಗಿಹೋಗಿರಿ ಎಂದು ಹೊಲೆಯ ಬಟ್ಟೆಯಂತೆ ಬಿಸಾಡಿಬಿಡುವಿರಿ.
- 1 Thessalonians 5:5–8 1 ಥೆಸಲೊನೀಕದವರಿಗೆ 5:5–8ನೀವೆಲ್ಲರೂ ಬೆಳಕಿನ ಮಕ್ಕಳೂ ಹಗಲಿನ ಮಕ್ಕಳೂ ಆಗಿದ್ದೀರಷ್ಟೆ; ನಾವು ರಾತ್ರಿಯವರೂ ಅಲ್ಲ, ಕತ್ತಲೆ ಯವರೂ ಅಲ್ಲ. ಆದಕಾರಣ ನಾವು ಇತರರಂತೆ ನಿದ್ರೆಮಾಡದೆ ಎಚ್ಚರವಾಗಿರೋಣ, ಸ್ವಸ್ಥಚಿತ್ತರಾಗಿ ರೋಣ. ನಿದ್ರೆ ಮಾಡುವವರು ರಾತ್ರಿಯಲ್ಲಿ ನಿದ್ರೆ ಮಾಡುತ್ತಾರೆ. ಅಮಲೇರುವವರು ರಾತ್ರಿಯಲ್ಲಿ ಅಮ ಲೇರುತ್ತಾರೆ. ನಾವಾದರೋ ಹಗಲಿನವರಾಗಿರಲಾಗಿ ವಿಶ್ವಾಸ ಪ್ರೀತಿಗಳೆಂಬ ಎದೆಕವಚವನ್ನೂ ರಕ್ಷಣೆಯ ನಿರೀಕ್ಷೆಯೆಂಬ ಶಿರಸ್ತ್ರಾಣವನ್ನೂ ಧರಿಸಿಕೊಂಡು ಸ್ವಸ್ಥ ಚಿತ್ತರಾಗಿರೋಣ.
- John 3:19–21 ಯೋಹಾನನು 3:19–21ಆ ತೀರ್ಪು ಏನಂದರೆ, ಬೆಳಕು ಲೋಕಕ್ಕೆ ಬಂದಿದ್ದರೂ ಮನುಷ್ಯರ ಕ್ರಿಯೆಗಳು ಕೆಟ್ಟವುಗಳಾ ಗಿರುವದರಿಂದ ಅವರು ಬೆಳಕಿಗಿಂತ ಕತ್ತಲೆಯನ್ನೇ ಪ್ರೀತಿ ಮಾಡಿದರು. ಕೆಟ್ಟದ್ದನ್ನು ಮಾಡುವ ಪ್ರತಿ ಯೊಬ್ಬನು ತನ್ನ ಕೃತ್ಯಗಳು ಖಂಡಿಸಲ್ಪಟ್ಟಾವೆಂದು ಬೆಳಕನ್ನು ಹಗೆಮಾಡುತ್ತಾನೆ ಮತ್ತು ಬೆಳಕಿಗೆ ಬರುವದಿಲ್ಲ. ಆದರೆ ಸತ್ಯವನ್ನು ಅನುಸರಿಸುವವನು ತನ್ನ ಕೃತ್ಯಗಳು ದೇವರಿಂದ ಮಾಡಲ್ಪಟ್ಟವುಗಳೆಂದು ಪ್ರಕಟವಾಗು ವಂತೆ ಬೆಳಕಿಗೆ ಬರುತ್ತಾನೆ ಎಂದು ಹೇಳಿದನು.
- 1 Peter 2:1 1 ಪೇತ್ರನು 2:1ಆದಕಾರಣ ಎಲ್ಲಾ ಕೆಟ್ಟತನವನ್ನೂ ಎಲ್ಲಾ ವಂಚನೆಯನ್ನೂ ಕಪಟವನ್ನೂ ಹೊಟ್ಟೇ ಕಿಚ್ಚನ್ನೂ ಎಲ್ಲಾ ಕೆಟ್ಟ ಮಾತುಗಳನ್ನೂ ವಿಸರ್ಜಿಸಿರಿ.
Original words (Greek)
- night · G3571νύξ nýx
- spent · G4298προκόπτω prokóptō
- day · G2250ἡμέρα hēméra
- hand · G1448ἐγγίζω engízō
- us · G659ἀποτίθημι apotíthēmi
- therefore · G3767οὖν oûn
- off · G659ἀποτίθημι apotíthēmi
- works · G2041ἔργον érgon
- darkness · G4655σκότος skótos
- and · G2532καί kaí
- on · G1746ἐνδύω endýō
- armour · G3696ὅπλον hóplon
- light · G5457φῶς phōs