Romans · chapter 14 · verse 18
Romans 14:18 in Kannada
ಕ್ರಿಸ್ತನ ಸೇವೆಯನ್ನು ಮಾಡುವವನು ಈ ವಿಷಯಗಳಲ್ಲಿ ದೇವರಿಗೆ ಮೆಚ್ಚಿಕೆಯಾದವನಾಗಿಯೂ ಮನುಷ್ಯರಿಗೆ ಸಂಭಾವಿತನಾಗಿಯೂ ಇರುವನಷ್ಟೆ.
Kristana seveyannu maaduvavanu ee vishayagalalli devarige mechchikeyaadavanaagiyoo manushyarige sambhaavitanaagiyoo iruvanashte.
Romans 14:18 in English
- King James Version (KJV)
- For he that in these things serveth Christ [is] acceptable to God, and approved of men.
- World English Bible (WEB)
- For he who serves Christ in these things is acceptable to God and approved by men.
- American Standard Version (ASV)
- For he that herein serveth Christ is well-pleasing to God, and approved of men.
- Bible in Basic English (BBE)
- And he who in these things is Christ's servant, is pleasing to God and has the approval of men.
- Darby Translation (DBY)
- For he that in this serves the Christ [is] acceptable to God and approved of men.
- Webster's Bible (WBS)
- For he that in these things serveth Christ, [is] acceptable to God, and approved by men.
- Young's Literal Translation (YLT)
- for he who in these things is serving the Christ, [is] acceptable to God and approved of men.
Read in context
- 16ನಿಮಗಿರುವ ಮೇಲು ದೂಷಣೆಗೆ ಆಸ್ಪದವಾಗಬಾರದು.
- 17ಯಾಕಂದರೆ ತಿನ್ನುವದೂ ಕುಡಿಯುವದೂ ದೇವರ ರಾಜ್ಯವಲ್ಲ; ಆದರೆ ನೀತಿಯೂ ಸಮಾಧಾನವೂ ಪವಿತ್ರಾತ್ಮನಲ್ಲಿರುವ ಆನಂದವೂ ಆಗಿದೆ.
- 18ಕ್ರಿಸ್ತನ ಸೇವೆಯನ್ನು ಮಾಡುವವನು ಈ ವಿಷಯಗಳಲ್ಲಿ ದೇವರಿಗೆ ಮೆಚ್ಚಿಕೆಯಾದವನಾಗಿಯೂ ಮನುಷ್ಯರಿಗೆ ಸಂಭಾವಿತನಾಗಿಯೂ ಇರುವನಷ್ಟೆ.
- 19ಆದದರಿಂದ ನಾವು ಸಮಾಧಾನವನ್ನುಂಟು ಮಾಡುವವುಗಳನೂ ಪರಸ್ಪರ ಭಕ್ತಿವೃದ್ಧಿಯನ್ನುಂಟು ಮಾಡುವವುಗಳನ್ನೂ ಅನುಸರಿಸೋಣ.
- 20ದೇವರ ಕಾರ್ಯವನ್ನು ಆಹಾರದ ನಿಮಿತ್ತವಾಗಿ ಕೆಡಿಸಬಾರದು. ಎಲ್ಲಾ ಪದಾರ್ಥಗಳೂ ಶುದ್ಧವೇ ಹೌದು; ಆದರೆ ವಿಘ್ನವನ್ನುಂಟು ಮಾಡು ವಂತೆ ತಿನ್ನುವವನಿಗೆ ಅದು ಕೆಟ್ಟದ್ದಾಗಿದೆ.
Cross references
- 2 Corinthians 8:21 2 ಕೊರಿಂಥದವರಿಗೆ 8:21ಯಾಕಂದರೆ ಕರ್ತನ ದೃಷ್ಟಿಯಲ್ಲಿ ಮಾತ್ರವಲ್ಲದೆ ಮನುಷ್ಯರ ದೃಷ್ಟಿಯಲ್ಲಿಯೂ ಗೌರವ ವಾದವುಗಳನ್ನು ಯೋಚನೆಗೆ ತಂದುಕೊಳ್ಳುವವರಾ ಗಿದ್ದೇವೆ.
- 1 Peter 2:5 1 ಪೇತ್ರನು 2:5ನೀವು ಸಹ ಜೀವವುಳ್ಳ ಕಲ್ಲುಗಳಾಗಿದ್ದು ಆತ್ಮಸಂಬಂಧ ವಾದ ಮಂದಿರವಾಗುವದಕ್ಕೆ ಕಟ್ಟಲ್ಪಡುತ್ತಾ ಇದ್ದೀರಿ, ಮತ್ತು ಯೇಸು ಕ್ರಿಸ್ತನ ಮೂಲಕ ದೇವರಿಗೆ ಸಮರ್ಪಕ ವಾದ ಆತ್ಮೀಯ ಯಜ್ಞಗಳನ್ನು ಸಮರ್ಪಿಸುವದಕ್ಕೆ ಪವಿತ್ರ ಯಾಜಕ ವರ್ಗದವರಾಗಿದ್ದೀರಿ.
- 1 Peter 2:20 1 ಪೇತ್ರನು 2:20ತಪ್ಪುಮಾಡಿ ಗುದ್ದು ತಿನ್ನುವದರಲ್ಲಿ ನೀವು ತಾಳ್ಮೆ ಯಿಂದಿದ್ದರೆ ಅದರಿಂದೇನು ಹೆಚ್ಚಳ? ಆದರೆ ಒಳ್ಳೇ ದನ್ನು ಮಾಡಿ ಬಾಧೆಪಡುವದರಲ್ಲಿ ನೀವು ತಾಳ್ಮೆಯಿಂದಿ ದ್ದರೆ ಇದು ದೇವರಿಗೆ ಅಂಗೀಕೃತವಾಗಿದೆ.
- 2 Corinthians 5:11 2 ಕೊರಿಂಥದವರಿಗೆ 5:11ನಾವು ಕರ್ತನ ಭಯವನ್ನು ಅರಿತವರಾದ ಕಾರಣ ಮನುಷ್ಯರನ್ನು ಒಡಂಬಡಿಸುತ್ತೇವೆ; ಆದರೆ ನಾವು ದೇವರಿಗೂ ನಿಮ್ಮ ಮನಸ್ಸಾಕ್ಷಿಗಳಿಗೂ ತೋರಿ ಬಂದಿದ್ದೇವೆಂದು ನಾನು ಭರವಸವುಳ್ಳವನಾಗಿದ್ದೇನೆ.
- 1 Thessalonians 1:3–4 1 ಥೆಸಲೊನೀಕದವರಿಗೆ 1:3–4ನಂಬಿಕೆಯ ಫಲವಾದ ನಿಮ್ಮ ಕೆಲಸವನ್ನೂ ಪ್ರೀತಿಪೂರ್ವಕವಾದ ನಿಮ್ಮ ಪ್ರಯಾಸವನ್ನೂ ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೇಲಣ ನಿರೀಕ್ಷೆಯಿಂದುಂಟಾದ ನಿಮ್ಮ ಸೈರಣೆ ಯನ್ನೂ ನಾವು ನಮ್ಮ ತಂದೆಯಾದ ದೇವರ ಮುಂದೆ ಎಡೆಬಿಡದೆ ಜ್ಞಾಪಕಮಾಡಿಕೊಳ್ಳುತ್ತೇವೆ. ಪ್ರಿಯ ಸಹೋದರರೇ, ದೇವರು ನಿಮ್ಮನ್ನು ಆದುಕೊಂಡಿ ದ್ದಾನೆಂಬದ್ದನ್ನು ಬಲ್ಲೆವು.
- Romans 12:1–2 ರೋಮಾಪುರದವರಿಗೆ 12:1–2ಆದದರಿಂದ ಸಹೋದರರೇ, ನೀವು ನಿಮ್ಮ ದೇಹಗಳನ್ನು ಪರಿಶುದ್ಧವೂ ದೇವರಿಗೆ ಮೆಚ್ಚಿಕೆಯೂ ಆಗಿರುವ ಸಜೀವಯಜ್ಞವಾಗಿ ಸಮರ್ಪಿಸ ಬೇಕೆಂದು ದೇವರ ಕರುಣೆಯಿಂದ ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ; ಇದೇ ನಿಮ್ಮ ಯೋಗ್ಯವಾದ ಸೇವೆ ಯಾಗಿದೆ. ಇಹಲೋಕವನ್ನು ಅನುಸರಿಸದೆ ಉತ್ತಮ ವಾದದ್ದೂ ಮೆಚ್ಚಿಕೆಯಾದದ್ದೂ ಪರಿಪೂರ್ಣ ವಾದದ್ದೂ ಆಗಿರುವ ದೇವರ ಚಿತ್ತವೇನೆಂದು ನೀವು ವಿವೇಚಿಸಿ ತಿಳಿದುಕೊಳ್ಳುವಂತೆ ನೂತನ ಮನಸ್ಸನ್ನು ಹೊಂದಿಕೊಂಡು ರೂಪಾಂತರಗೊಂಡವರಾಗಿರ್ರಿ.
- Acts 10:35 ಅಪೊಸ್ತಲರ ಕೃತ್ಯಗಳು 10:35ಆದರೆ ಪ್ರತಿ ಯೊಂದು ಜನಾಂಗದವರಲ್ಲಿ ದೇವರಿಗೆ ಭಯಪಟ್ಟು ನೀತಿಯನ್ನು ನಡಿಸುವವನು ಆತನಿಗೆ ಮೆಚ್ಚಿಕೆಯಾ ಗಿದ್ದಾನೆ.
- 1 Timothy 5:4 1 ತಿಮೊಥೆಯನಿಗೆ 5:4ಆದರೆ ಯಾವ ವಿಧವೆಗಾದರೂ ಮಕ್ಕಳಾಗಲಿ, ಮೊಮ್ಮಕ್ಕಳಾ ಗಲಿ, ಇದ್ದರೆ ಅವರೇ ಮೊದಲು ತಮ್ಮ ಮನೆಯಲ್ಲಿ ಭಕ್ತಿ ತೋರಿಸುವದಕ್ಕೂ ತಂದೆತಾಯಿಗಳಿಗೆ ಪ್ರತ್ಯುಪ ಕಾರ ಮಾಡುವದಕ್ಕೂ ಕಲಿತುಕೊಳ್ಳಲಿ; ಇದು ದೇವರ ದೃಷ್ಟಿಯಲ್ಲಿ ಯೋಗ್ಯವಾದದ್ದೂ ಮೆಚ್ಚಿಕೆಯಾದದ್ದೂ ಆಗಿದೆ.
- Romans 16:18 ರೋಮಾಪುರದವರಿಗೆ 16:18ಅಂಥವರು ನಮ್ಮ ಕರ್ತನಾದ ಯೇಸು ಕ್ರಿಸ್ತನ ಸೇವೆಯನ್ನು ಮಾಡದೆ ತಮ್ಮ ಹೊಟ್ಟೆಯ ಸೇವೆಯನ್ನೇ ಮಾಡುವವರಾಗಿ ನಯದ ನುಡಿ ಗಳಿಂದಲೂ ಹೊಗಳಿಕೆಯ ಮಾತುಗಳಿಂದಲೂ ನಿಷ್ಕಪ ಟಿಗಳ ಹೃದಯಗಳನ್ನು ಮೋಸಗೊಳಿಸುತ್ತಾರೆ.
- Colossians 3:24 ಕೊಲೊಸ್ಸೆಯವರಿಗೆ 3:24ಕರ್ತನಿಂದ ಬಾಧ್ಯತೆಯೆಂಬ ಪ್ರತಿಫಲವನ್ನು ಹೊಂದುವರೆಂದು ತಿಳಿದಿದ್ದೀರಲ್ಲಾ. ಯಾಕಂದರೆ ನೀವು ಕರ್ತನಾದ ಕ್ರಿಸ್ತನನ್ನು ಸೇವಿಸುವವರಾಗಿದ್ದೀರಿ.ಆದರೆ ಅನ್ಯಾಯ ಮಾಡುವವನು ತಾನು ಮಾಡಿದ ಅನ್ಯಾಯಕ್ಕೆ ತಕ್ಕದ್ದನ್ನು ಹೊಂದುವನು ಮತ್ತು ಅದರಲ್ಲಿ ಪಕ್ಷಪಾತವಿಲ್ಲ.
- 2 Corinthians 6:4 2 ಕೊರಿಂಥದವರಿಗೆ 6:4ಆದರೆ ಎಲ್ಲಾ ಸಂಗತಿಗಳಲ್ಲಿ ಹೆಚ್ಚು ತಾಳ್ಮೆಯಲ್ಲಿಯೂ ಸಂಕಟ ಗಳಲ್ಲಿಯೂ ಕೊರತೆಗಳಲ್ಲಿಯೂ ಇಕ್ಕಟ್ಟುಗಳಲ್ಲಿಯೂ
- Romans 6:22 ರೋಮಾಪುರದವರಿಗೆ 6:22ಈಗಲಾದರೋ ನೀವು ಪಾಪದಿಂದ ಬಿಡುಗಡೆಯನ್ನು ಹೊಂದಿ ದೇವರಿಗೆ ದಾಸರಾದದರಿಂದ ಪರಿಶುದ್ಧತೆಯೇ ನಿಮಗೆ ಫಲ; ಅದರ ಅಂತ್ಯವು ನಿತ್ಯಜೀವವೇ.ಯಾಕಂದರೆ ಪಾಪದ ಸಂಬಳ ಮರಣ. ಆದರೆ ದೇವರ ದಾನವು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮುಖಾಂತರ ನಿತ್ಯಜೀವವು.