Romans · chapter 15 · verse 17
Romans 15:17 in Kannada
ಆದದರಿಂದ ದೇವರಿಗೆ ಸಂಬಂಧಪಟ್ಟವುಗಳಲ್ಲಿ ಯೇಸು ಕ್ರಿಸ್ತನ ಮೂಲಕ ನಾನು ಹೆಚ್ಚಳಪಡುತ್ತೇನೆ.
Aadadarinda devarige sambandhapattavugalalli yesu kristana moolaka naanu hechchalapaduttene.
Romans 15:17 in English
- King James Version (KJV)
- I have therefore whereof I may glory through Jesus Christ in those things which pertain to God.
- World English Bible (WEB)
- I have therefore my boasting in Christ Jesus in things pertaining to God.
- American Standard Version (ASV)
- I have therefore my glorying in Christ Jesus in things pertaining to God.
- Bible in Basic English (BBE)
- So I have pride in Christ Jesus in the things which are God's.
- Darby Translation (DBY)
- I have therefore [whereof to] boast in Christ Jesus in the things which pertain to God.
- Webster's Bible (WBS)
- I have therefore cause for glorying through Jesus Christ, in those things which pertain to God.
- Young's Literal Translation (YLT)
- I have, then, a boasting in Christ Jesus, in the things pertaining to God,
Read in context
- 15ಆದಾಗ್ಯೂ ಸಹೋದರರೇ, ದೇವರು ನನಗೆ ಕೊಟ್ಟ ಕೃಪೆಯಿಂದ ಇವುಗಳನ್ನು ನಿಮ್ಮ ಜ್ಞಾಪಕಕ್ಕೆ ತರುವ ಹಾಗೆ ನಾನು ಒಂದು ವಿಧದಲ್ಲಿ ಹೆಚ್ಚು ಧೈರ್ಯದಿಂದ ನಿಮಗೆ ಬರೆದಿದ್ದೇನೆ;
- 16ಹೀಗೆ ಅನ್ಯಜನಗಳೆಂಬ ಅರ್ಪಣೆಯು ಪವಿತ್ರಾತ್ಮನ ಮೂಲಕ ಶುದ್ಧೀಕರಿಸಲ್ಪಟ್ಟು ಆತನಿಂದ ಅಂಗೀಕಾರವಾಗುವಂತೆ ನಾನು ದೇವರ ಸುವಾರ್ತಾ ಸೇವೆಯನ್ನು ನಡಿಸುತ್ತಾ ಅನ್ಯಜನರಿಗೆ ಯೇಸು ಕ್ರಿಸ್ತನ ಸೇವಕನಾಗಿರುವೆನು.
- 17ಆದದರಿಂದ ದೇವರಿಗೆ ಸಂಬಂಧಪಟ್ಟವುಗಳಲ್ಲಿ ಯೇಸು ಕ್ರಿಸ್ತನ ಮೂಲಕ ನಾನು ಹೆಚ್ಚಳಪಡುತ್ತೇನೆ.
- 18ಮಾತಿ ನಿಂದಲೂ ಕ್ರಿಯೆಯಿಂದಲೂ ಬಲವಾದ ಸೂಚಕ ಕಾರ್ಯಗಳಿಂದಲೂ ಅದ್ಭುತಕಾರ್ಯಗಳಿಂದಲೂ ದೇವರಾತ್ಮನ ಬಲದಿಂದಲೂ ಅನ್ಯಜನಗಳವರು ವಿಧೇಯರಾಗುವಂತೆ ಕ್ರಿಸ್ತನು ನನ್ನ ಮೂಲಕ ಮಾಡ ದಿರುವವುಗಳನ್ನು ಮಾತನಾಡಲು ನಾನು ಧೈರ್ಯ ಪಡುವದಿಲ್ಲ.
- 19ಹೀಗೆ ಯೆರೂಸಲೇಮ್ ಮೊದಲು ಗೊಂಡು ಇಲ್ಲುರಿಕದ ಸುತ್ತಲೂ ನಾನು ಕ್ರಿಸ್ತನ ಸುವಾರ್ತೆಯನ್ನು ಪೂರ್ಣವಾಗಿ ಸಾರಿದ್ದೇನೆ.
Cross references
- 2 Corinthians 2:14–16 2 ಕೊರಿಂಥದವರಿಗೆ 2:14–16ಕ್ರಿಸ್ತನಲ್ಲಿ ನಮ್ಮನ್ನು ಯಾವಾಗಲೂ ಜಯೋತ್ಸವ ದೊಡನೆ ಮೆರಸುತ್ತಾ ಆತನ ವಿಷಯವಾದ ಜ್ಞಾನ ವೆಂಬ ಸುವಾಸನೆಯನ್ನು ನಮ್ಮ ಮೂಲಕ ಎಲ್ಲಾ ಸ್ಥಳಗಳಲ್ಲಿ ವ್ಯಾಪನಗೊಳಿಸುತ್ತಾ ಬರುವ ದೇವರಿಗೆ ಸ್ತೋತ್ರ; ರಕ್ಷಣೆ ಹೊಂದಿದವರಲ್ಲಿಯೂ ನಾಶವಾಗುವವರಲ್ಲಿಯೂ ನಾವು ದೇವರಿಗಾಗಿ ಕ್ರಿಸ್ತನ ಪರಿಮಳವಾಗಿದ್ದೇವೆ. ನಾವು ನಾಶವಾಗುವವರಿಗೆ ಮರಣದಿಂದಾದ ಮರಣದ ವಾಸನೆಯಾಗಿಯೂ ರಕ್ಷಿಸಲ್ಪಟ್ಟವರಿಗೆ ಜೀವದಿಂದಾದ ಜೀವದ ಸುವಾಸನೆ ಯಾಗಿಯೂ ಇದ್ದೇವೆ; ಹೀಗಿರುವಾಗ ಇವುಗಳಿಗೆ ಯೋಗ್ಯನು ಯಾರು?ನಾವು ದೇವರ ವಾಕ್ಯವನ್ನು ಕಲಬೆರಿಕೆ ಮಾಡುವವರಾದ ಹೆಚ್ಚು ಪಾಲಿನ ಜನರ ಹಾಗಿರದೆ ನಿಷ್ಕಪಟಿಗಳಾಗಿ ದೇವರಿಂದ ಹೊಂದಿದ ವರಿಗೆ ತಕ್ಕ ಹಾಗೆ ಕ್ರಿಸ್ತನಲ್ಲಿದ್ದುಕೊಂಡು ದೇವರ ಸಮಕ್ಷಮದಲ್ಲಿಯೇ ಮಾತನಾಡುತ್ತೇವೆ.
- 2 Corinthians 12:11–21 2 ಕೊರಿಂಥದವರಿಗೆ 12:11–21ನಾನು ಹೀಗೆ ಹೊಗಳಿಕೊಳ್ಳುವದರಲ್ಲಿ ಬುದ್ಧಿಹೀನ ನಾದೆನು; ಅದಕ್ಕೆ ನೀವೇ ನನ್ನನ್ನು ಬಲವಂತ ಮಾಡಿದಿರಿ. ನಿಮ್ಮಿಂದಲೇ ನನಗೆ ಹೊಗಳಿಕೆಯು ಉಂಟಾಗಬೇಕಾಗಿತ್ತು; ಯಾಕಂದರೆ ನಾನು ಏನೂ ಅಲ್ಲದವನಾದರೂ ಅತಿಶ್ರೇಷ್ಠರಾದ ಅಪೊಸ್ತಲರಿಗಿಂತ ಯಾವದರಲ್ಲಿಯೂ ನಾನು ಕಡಿಮೆಯಾದವನಲ್ಲ. ಎಲ್ಲಾ ತಾಳ್ಮೆಯಲ್ಲಿಯೂ ಸೂಚಕಕಾರ್ಯಗಳನ್ನು ಅದ್ಭುತಗಳನ್ನು ಮಹತ್ಕಾರ್ಯಗಳನ್ನು ನಡಿಸಿದ್ದ ರಲ್ಲಿಯೂ ಅಪೊಸ್ತಲನಿಗೆ ಇರತಕ್ಕ ಲಕ್ಷಣಗಳು ನಿಜ ವಾಗಿ ನಿಮ್ಮ ಮಧ್ಯದಲ್ಲಿ ತೋರಿದವು. ಭಾರವನ್ನು ನಾನು ನಿಮ್ಮ ಮೇಲೆ ಹಾಕಲಿಲ್ಲವೆಂಬ ಒಂದೇ ವಿಷಯದಲ್ಲಿ ಹೊರತು ಇನ್ನಾವ ವಿಷಯ ದಲ್ಲಿಯೂ ನಿಮ್ಮನ್ನು ಮಿಕ್ಕಾದ ಸಭೆಗಳವರಿಗಿಂತ ಕಡಿಮೆ ಮಾಡಲಿಲ್ಲವಲ್ಲಾ; ನಾನು ಮಾಡಿದ ಈ ಅನ್ಯಾಯವನ್ನು ಕ್ಷಮಿಸಿರಿ. ಇಗೋ, ನಾನು ನಿಮ್ಮ ಬಳಿಗೆ ಬರುವದಕ್ಕೆ ಸಿದ್ಧವಾಗಿರುವದು ಇದು ಮೂರನೆಯ ಸಾರಿ; ನಾನು ನಿಮಗೆ ಭಾರವಾಗಿ ರುವದಿಲ್ಲ; ನಾನು ನಿಮ್ಮ ಸೊತ್ತನು ಆಶಿಸದೆ ನಿಮ್ಮನ್ನೇ ಆಶಿಸುತ್ತೇನೆ. ಯಾಕಂದರೆ ಮಕ್ಕಳು ತಂದೆತಾಯಿ ಗಳಿಗೋಸ್ಕರ ಆಸ್ತಿಯನ್ನು ಕೂಡಿಸಿಡುವದು ತಕ್ಕದ್ದಲ್ಲ, ತಂದೆತಾಯಿಗಳು ಮಕ ನಾನಂತೂ ನನಗಿರುವದನ್ನು ನಿಮಗೋಸ್ಕರ ಅತಿ ಸಂತೋಷದಿಂದ ವೆಚ್ಚಮಾಡುತ್ತೇನೆ, ನನ್ನನ್ನೇ ವೆಚ್ಚ ಮಾಡಿಕೊಳ್ಳುತ್ತೇನೆ. ನಾನು ನಿಮ್ಮನ್ನು ಹೆಚ್ಚಾಗಿ ಪ್ರೀತಿಸಿದರೆ ನೀವು ನನ್ನನ್ನು ಕಡಿಮೆಯಾಗಿ ಪ್ರೀತಿಸುತ್ತೀರಿ. ಅದಿರಲಿ, ನಾನು ನಿಮಗೆ ಭಾರವಿಲ್ಲದ ವನಾಗಿದ್ದಾಗ್ಯೂ ಯುಕ್ತಿಯುಳ್ಳವನಾಗಿ ನಾನು ನಿಮ್ಮನ್ನು ಉಪಾಯದಿಂದ ಹಿಡಿದೆನು. ನಿಮ್ಮ ಬಳಿಗೆ ಕಳುಹಿಸಿದವರಲ್ಲಿ ಯಾವನ ಮೂಲಕವಾಗಿಯಾಗಲಿ ನಿಮ್ಮಿಂದ ನಾನು ಲಾಭ ಪಡೆದುಕೊಂಡೆನೋ? ನಾನು ತೀತನನ್ನು ಅಪೇಕ್ಷಿಸಿ ಅವನ ಜೊತೆಯಲ್ಲಿ ಒಬ್ಬ ಸಹೋದರನನ್ನು ಕಳುಹಿಸಿಕೊಟ್ಟೆನು; ತೀತನು ನಿಮ್ಮಿಂದ ಏನಾದರೂ ಲಾಭವನ್ನು ಪಡೆದು ಕೊಂಡನೋ? ನಾವಿಬ್ಬರೂ ಒಂದೇ ಆತ್ಮನಿಂದ ನಡೆಯಲಿಲ್ಲವೋ? ನಾವು ಒಂದೇ ತರವಾದ ಹೆಜ್ಜೆ ಜಾಡಿನಲ್ಲಿ ನಡೆಯಲಿಲ್ಲವೋ? ನಾವು ತಪ್ಪಿಲ್ಲದವರೆಂದು ನಿಮಗೆ ಹೇಳುತ್ತೇ ವೆಂದು ನೆನಸುತ್ತೀರೋ? ದೇವರ ಸನ್ನಿಧಾನದಲ್ಲಿಯೇ ನಾವು ಕ್ರಿಸ್ತನಲ್ಲಿದ್ದು ಮಾತನಾಡುವವರಾಗಿದ್ದೇವೆ. ಅತಿ ಪ್ರಿಯರೇ, ನಾವು ಮಾಡುವದನ್ನೆಲ್ಲಾ ನಿಮ್ಮ ಭಕ್ತಿವೃದ್ದಿಗೋಸ್ಕರವೇ ಮಾಡುತ್ತೇವೆ. ನಾನು ಬಂದಾಗ ಒಂದು ವೇಳೆ ನೀವು ನನ್ನ ಇಷ್ಟದ ಪ್ರಕಾರ ಇರುವದಿಲ್ಲವೇನೋ, ನಾನು ನಿಮ್ಮ ಇಷ್ಟದ ಪ್ರಕಾರ ತೋರುವದಿಲ್ಲವೇನೋ, ಒಂದು ವೇಳೆ ನಿಮ್ಮಲ್ಲಿ ವಾಗ್ವಾದಗಳು ಹೊಟ್ಟೆಕಿಚ್ಚು ಕೋಪ ಜಗಳ ಚಾಡಿ ಹೇಳುವದು ಕಿವಿಯೂದುವದು ಉಬ್ಬಿಕೊಳ್ಳುವದು ಕಲಹ ಎಬ್ಬಿಸುವದು ಇವುಗಳು ಕಾಣಬಇದಲ್ಲದೆ ನಾನು ತಿರಿಗಿ ಬಂದಾಗ ನಿಮ್ಮ ಮಧ್ಯದಲ್ಲಿ ನಾನು ಕುಂದಿಹೋಗು ವಂತೆ ನನ್ನ ದೇವರು ಮಾಡಾನೆಂತಲೂ ಅಶುದ್ಧತೆ ಹಾದರತನ ಬಂಡುತನಗಳನ್ನು ನಡಿಸಿ ಪಶ್ಚಾತ್ತಾಪ ಪಡದೆ ಆಗಲೇ ಪಾಪ ಮಾಡಿದ ಅನೇಕರ ವಿಷಯವಾಗಿ ನಾನು ವ್ಯಥೆಪಡಬೇಕಾದೀತೆಂತಲೂ ನನಗೆ ಭಯವುಂಟು. ಇದಲ್ಲದೆ ನಾನು ತಿರಿಗಿ ಬಂದಾಗ ನಿಮ್ಮ ಮಧ್ಯದಲ್ಲಿ ನಾನು ಕುಂದಿಹೋಗು ವಂತೆ ನನ್ನ ದೇವರು ಮಾಡಾನೆಂತಲೂ ಅಶುದ್ಧತೆ ಹಾದರತನ ಬಂಡುತನಗಳನ್ನು ನಡಿಸಿ ಪಶ್ಚಾತ್ತಾಪ ಪಡದೆ ಆಗಲೇ ಪಾಪ ಮಾಡಿದ ಅನೇಕರ ವಿಷಯವಾಗಿ ನಾನು ವ್ಯಥೆಪಡಬೇಕಾದೀತೆಂತಲೂ ನನಗೆ ಭಯವುಂಟು.
- 2 Corinthians 7:4 2 ಕೊರಿಂಥದವರಿಗೆ 7:4ನಿಮ್ಮೊಂದಿಗೆ ಮಾತನಾಡು ವದಕ್ಕೆ ನನಗೆ ಬಹಳ ಧೈರ್ಯವೂ ನಿಮ್ಮ ವಿಷಯದಲ್ಲಿ ನನಗೆ ಬಹಳ ಹೆಚ್ಚಳವೂ ಉಂಟು; ನಾನು ಆದರಣೆ ಯಿಂದ ತುಂಬಿದವನಾಗಿ ನಮಗಾಗುವ ಎಲ್ಲಾ ಸಂಕಟಗಳಲ್ಲಿ ಅತ್ಯಧಿಕವಾದ ಸಂತೋಷದಿಂದ ಇದ್ದೇನೆ.
- Hebrews 5:1 ಇಬ್ರಿಯರಿಗೆ 5:1ಪ್ರತಿಯೊಬ್ಬ ಮಹಾಯಾಜಕನು ಮನುಷ್ಯ ರೊಳಗಿಂದ ಆರಿಸಲ್ಪಟ್ಟು ಮನುಷ್ಯರಿ ಗೋಸ್ಕರ ದೇವರ ಕಾರ್ಯಗಳಿಗಾಗಿ ನೇಮಿಸಲ್ಪಡು ತ್ತಾನಲ್ಲಾ. ಅವನು ಕಾಣಿಕೆಗಳನ್ನೂ ಯಜ್ಞಗಳನ್ನೂ ಪಾಪಗಳಿಗೋಸ್ಕರ ಸಮರ್ಪಿಸಬೇಕು.
- 2 Corinthians 3:4–6 2 ಕೊರಿಂಥದವರಿಗೆ 3:4–6ಇಂಥ ಭರವಸವು ಕ್ರಿಸ್ತನ ಮೂಲಕವೇ ದೇವರ ಮುಂದೆ ನಮಗುಂಟು. ನಮ್ಮಿಂದಲೇ ಏನಾದರೂ ಉಂಟಾಯಿ ತೆಂದು ಆಲೋಚಿಸಿಕೊಳ್ಳುವದಕ್ಕೆ ನಮ್ಮಷ್ಟಕ್ಕೆ ನಾವೇ ಸಮರ್ಥರೆಂತಲ್ಲ; ನಮಗಿರುವ ಸಾಮರ್ಥ್ಯವು ದೇವರಿಂದಲೇ ಬಂದದ್ದು; ಆತನು ನಮ್ಮನ್ನು ಸಹ ಹೊಸ ಒಡಂಬಡಿಕೆಗೆ ಸಮರ್ಥರಾದ ಸೇವಕರನ್ನಾಗಿ ಮಾಡಿದ್ದಾನೆ; ಅಕ್ಷರಕ್ಕನುಸಾರವಾಗಿ ಅಲ್ಲ; ಆತ್ಮನಿಗನು ಸಾರವಾಗಿಯೇ. ಯಾಕಂದರೆ ಅಕ್ಷರವು ಮರಣ ವನ್ನುಂಟು ಮಾಡುತ್ತದೆ; ಆತ್ಮವು ಜೀವವನ್ನುಂಟು ಮಾಡುತ್ತದೆ.
- Philippians 3:3 ಫಿಲಿಪ್ಪಿಯವರಿಗೆ 3:3ಆತ್ಮದಲ್ಲಿ ದೇವರನ್ನು ಆರಾಧಿಸುವವರೂ ಕ್ರಿಸ್ತ ಯೇಸುವಿನಲ್ಲಿ ಸಂತೋಷಿಸುವವರೂ ಶರೀರದಲ್ಲಿ ಭರವಸೆಯಿಲ್ಲದವರೂ ಆದ ನಾವೇ ಸುನ್ನತಿಯವರಾಗಿ ದ್ದೇವೆ.
- 2 Corinthians 12:1 2 ಕೊರಿಂಥದವರಿಗೆ 12:1ಹೆಚ್ಚಳಪಡುವದು ಹೇಗೂ ವಿಹಿತವಲ್ಲ ದಿದ್ದರೂ ಅದು ನನಗೆ ಅವಶ್ಯವಾಗಿದೆ; ಆದದರಿಂದ ಕರ್ತನು ನನಗೆ ದಯಪಾಲಿಸಿದ ದರ್ಶನಗಳ ಮತ್ತು ಪ್ರಕಟನೆಗಳ ವಿಷಯವಾಗಿ ಹೇಳುತ್ತೇನೆ.
- 2 Corinthians 11:16–30 2 ಕೊರಿಂಥದವರಿಗೆ 11:16–30ನನ್ನನ್ನು ಬುದ್ಧಿಹೀನನೆಂದು ಯಾರೂ ನೆನಸಬಾರ ದೆಂದು ತಿರಿಗಿ ನಾನು ಹೇಳುತ್ತೇನೆ ಹಾಗೆ ನೆನಸಿದರೂ ನನ್ನನ್ನು ಬುದ್ಧಿಹೀನನಾಗಿಯಾದರೂ ಸೇರಿಸಿಕೊಳ್ಳಿರಿ; ಯಾಕಂದರೆ ನಾನು ಸಹ ಅಲ್ಪ ಸ್ವಲ್ಪ ಹೊಗಳಿಕೊಳ್ಳ ಬೇಕೆಂದಿದ್ದೇನೆ. ನಾನು ಈಗ ಆಡುವ ಮಾತುಗಳನ್ನು ಕರ್ತನ ಮಾತಿನ ಪ್ರಕಾರ ಹೇಳದೆ ಭರವಸದಿಂದ ಹೊಗಳಿಕೊಳ್ಳುವ ಬುದ್ಧಿ ಹೀನನಂತೆ ಆಡುತ್ತೇನೆ. ಅನೇಕರು ಶಾರೀರಿಕ ರೀತಿಯಲ್ಲಿ ಹೊಗಳಿಕೊಳ್ಳು ವದರಿಂದ ನಾನೂ ಹೊಗಳಿಕೊಳ್ಳುತ್ತೇನೆ. ನೀವು ಬುದ್ಧಿವಂತರಾಗಿದ್ದು ಬುದ್ಧಿಹೀನರನ್ನು ಸಂತೋಷದಿಂದ ಸಹಿಸಿಕೊಳ್ಳುತ್ತೀರಲ್ಲಾ. ಒಬ್ಬನು ನಿಮ್ಮನ್ನು ತನಗೆ ವಶಮಾಡಿಕೊಂಡರೂ ಒಬ್ಬನು ನಿಮ್ಮನ್ನು ನುಂಗಿ ಬಿಟ್ಟರೂ ಒಬ್ಬನು ನಿಮ್ಮನ್ನು ಮರುಳುಗೊಳಿಸಿ ಹಿಡಿದರೂ ಒಬ್ಬನು ತನ್ನನ್ನು ಹೆಚ್ಚಿಸಿಕೊಂಡರೂ ಒಬ್ಬನು ನಿಮ್ಮ ಮುಖದ ಮೇಲೆ ಹೊಡೆದರೂ ನೀವು ಸಹಿಸಿಕೊಳ್ಳುತ್ತೀರಲ್ಲಾ. ನಾವು ಬಲವಿಲ್ಲದವರೋ ಎಂಬಂತೆ ಅವ ಮಾನದ ವಿಷಯವಾಗಿ ನಾನು ಮಾತನಾಡುತ್ತೇನೆ. ಹೇಗಿದ್ದರೂ ಯಾವನಾದರೂ ಧೈರ್ಯವುಳ್ಳವ ನಾಗಿದ್ದರೆ (ನಾನು ಬುದ್ಧಿಹೀನನಂತೆ ಮಾತ ನಾಡುತ್ತೇನೆ) ನಾನು ಸಹ ಧೈರ್ಯವುಳ್ಳವನಾಗಿದ್ದೇನೆ. ಅವರು ಇಬ್ರಿಯರೋ? ನಾನೂ ಇಬ್ರಿಯನು; ಅವರು ಇಸ್ರಾಯೇಲ್ಯರೊ? ನಾನೂ ಇಸ್ರಾಯೇ ಲ್ಯನು; ಅವರು ಅಬ್ರಹಾಮನ ವಂಶದವರೋ? ನಾನೂ ಅದೇ ವಂಶದವನು; ಅವರು ಕ್ರಿಸ್ತನ ಸೇವಕರೋ? (ನಾನು ಬುದ್ಧಿಹೀನನಂತೆ ಮಾತನಾಡು ತ್ತೇನೆ) ಅವರಿಗಿಂತ ನಾನು ಹೆಚ್ಚಾಗಿ ಸೇವೆ ಮಾಡುವವ ನಾಗಿದ್ದೇನೆ; ಹೆಚ್ಚಾಗಿ ಪ್ರಯಾಸಪಟ್ಟೆನು. ಮಿತಿವಿಾರಿ ಪೆಟ್ಟುಗಳನ್ನು ತಿಂದೆನು; ಹೆಚ್ಚಾಗಿ ಸೆರೆಮನೆಗಳಲ್ಲಿ ಬಿದ್ದೆನು; ಅನೇಕ ಸಾರಿ ಮರಣಗಳಲ್ಲಿ ಸಿಕ್ಕಿಕೊಂಡೆನು. ಐದು ಸಾರಿ ಯೆಹೂದ್ಯರಿಂದ ನನಗೆ ಒಂದು ಕಡಿಮೆ ನಾಲ್ವತ್ತು ಏಟುಗಳು ಬಿದ್ದವು; ನಾನು ಮೂರು ಸಾರಿ ಚಡಿಗಳಿಂದ ಹೊಡಿಸಿಕೊಂಡೆನು. ಒಂದು ಸಾರಿ ನನ್ನ ಮೇಲೆ (ಕೊಲ್ಲುವದಕ್ಕೆ) ಕಲ್ಲೆಸೆದರು; ಮೂರು ಸಾರಿ ನಾನಿದ್ದ ಹಡಗು ಒಡೆದುಹೋಯಿತು; ಒಂದು ರಾತ್ರಿ ಒಂದು ಹಗಲು ಸಮುದ್ರದಲ್ಲಿ ಇದ್ದೆನು. ಎಷ್ಟೋ ಪ್ರಯಾಣಗಳನ್ನು ಮಾಡಿದೆನು; ನೀರಿನ ಅಪಾಯಗಳು ಕಳ್ಳರ ಅಪಾಯಗಳೂ ಸ್ವಂತ ಜನರಿಂದ ಅಪಾಯಗಳೂ ಅನ್ಯಜನರಿಂದ ಅಪಾಯಗಳೂ ಪಟ್ಟಣದಲ್ಲಿ ಅಪಾಯಗಳೂ ಕಾಡಿನಲ್ಲಿ ಅಪಾಯ ಗಳೂ ಸಮುದ್ರದಲ್ಲಿ ಅಪಾಯಗಳೂ ಸುಳ್ಳು ಸಹೋ ದರರೊಳಗೆ ಇರುವಾಗ ಅಪಾಯಗಳೂ ನನಗೆ ಸಂಭವಿಸಿದವು. ಪ್ರಯಾಸ ಪರಿಶ್ರಮಗಳಿಂದ ಆನೇಕ ಸಾರಿ ನಿದ್ದೆಗೆಟ್ಟು ಹಸಿವೆ ಬಾಯಾರಿಕೆಗಳನ್ನ ನುಭವಿಸಿ ಅನೇಕ ಸಾರಿ ಉಪವಾಸವಾಗಿಯೂ ಚಳಿಯಲ್ಲಿಯೂ ವಸ್ತ್ರವಿಲ್ಲದೆಯೂ ಇದ್ದು ಆತನನ್ನು ಸೇವಿಸಿದ್ದೇನೆ. ಇನ್ನೂ ಬೇರೆ ಹೊರಗಿನವುಗಳಲ್ಲದೆ ಎಲ್ಲಾ ಸಭೆಗಳ ವಿಷಯವಾದ ಚಿಂತೆಯನ್ನು ಪ್ರತಿ ದಿನವೂ ನಾನು ಹೊರುತ್ತಿದ್ದೇನೆ. ಯಾರಾದರೂ ಬಲವಿಲ್ಲದವನಾದರೆ ನಾನು ಬಲವಿಲ್ಲದವನಾಗದೆ ಇರುವೆನೋ? ಯಾರಾದರೂ ಮುಗ್ಗರಿಸಿದರೆ ನಾನು ತಾಪಪಡದೆ ಇರುವೆನೋ? ನಾನು ಹೆಚ್ಚಳಪಡಲೇಬೇಕಾದರೆ ನನ್ನ ಬಲ ಹೀನತೆಗಳಲ್ಲಿ ಹೆಚ್ಚಳಪಡುವೆನು.
- Hebrews 2:17 ಇಬ್ರಿಯರಿಗೆ 2:17ಆದದರಿಂದ ಆತನು ಎಲ್ಲವುಗಳಲ್ಲಿ ತನ್ನ ಸಹೋದರರಿಗೆ ಸಮಾನ ವಾಗಿ ಮಾಡಲ್ಪಟ್ಟನು. ಹೀಗೆ ಆತನು ಜನರ ಪಾಪಗಳಿ ಗೋಸ್ಕರ ಶಾಂತಿ ಮಾಡುವದಕ್ಕೆ ದೇವರ ಕಾರ್ಯ ಗಳಲ್ಲಿ ಕರುಣೆಯೂ ನಂಬಿಕೆಯೂ ಉಳ್ಳ ಮಹಾ ಯಾಜಕನಾದನು.ತಾನೇ ಶೋಧಿಸಲ್ಪಟ್ಟು ಬಾಧೆ ಯನ್ನು ಅನುಭವಿಸಿರುವದರಿಂದ ಶೋಧಿಸಲ್ಪಡು ವವರಿಗೆ ಸಹಾಯಮಾಡುವದಕ್ಕೆ ಶಕ್ತನಾಗಿದ್ದಾನೆ.
- Romans 4:2 ರೋಮಾಪುರದವರಿಗೆ 4:2ಅಬ್ರಹಾ ಮನು ಕ್ರಿಯೆಗಳಿಂದಲೇ ನೀತಿವಂತನಾದ ಪಕ್ಷದಲ್ಲಿ ಹೊಗಳಿಕೊಳ್ಳುವದಕ್ಕೆ ಅವನಿಗೆ ಅಸ್ಪದವಿರುವದು; ಆದರೆ ದೇವರ ಮುಂದೆ ಹೊಗಳಿಕೊಳ್ಳುವದಕ್ಕೆ ಆಸ್ಪದವಿರುವದಿಲ್ಲ.