Romans · chapter 16 · verse 27
Romans 16:27 in Kannada
ಜ್ಞಾನಿಯಾದ ಒಬ್ಬನೇ ದೇವರಿಗೆ ಯೇಸು ಕ್ರಿಸ್ತನ ಮೂಲಕ ಎಂದೆಂದಿಗೂ ಮಹಿಮೆ ಉಂಟಾಗಲಿ. ಆಮೆನ್.
Jnyaaniyaada obbane devarige yesu kristana moolaka endendigoo mahime untaagali. Aamen.
Romans 16:27 in English
- King James Version (KJV)
- To God only wise, [be] glory through Jesus Christ for ever. Amen.
- American Standard Version (ASV)
- to the only wise God, through Jesus Christ, to whom be the glory for ever. Amen.
- Bible in Basic English (BBE)
- To the only wise God, through Jesus Christ, be the glory for ever. So be it.
- Darby Translation (DBY)
- [the] only wise God, through Jesus Christ, to whom be glory for ever. Amen.
- Webster's Bible (WBS)
- To God the only wise, [be] glory through Jesus Christ for ever. Amen.
- Young's Literal Translation (YLT)
- to the only wise God, through Jesus Christ, to him [be] glory to the ages. Amen.
Read in context
- 25ಪ್ರಕಟನೆಯಾದ ಈ ಮರ್ಮಕ್ಕೆ ಅನುಸಾರ ಅಂದರೆ ಯೇಸು ಕ್ರಿಸ್ತನ ವಿಷಯವಾದಂಥ ನಾನು ಸಾರುವಂಥ ಸುವಾರ್ತೆಗನುಸಾರ ನಿಮ್ಮನ್ನು ಸ್ಥಿರಪಡಿ ಸುವದಕ್ಕೆ ಶಕ್ತನಾಗಿರುವಾತನಿಂದ
- 26ಅನಾದಿಯಿಂದ ಗುಪ್ತವಾಗಿದ್ದ ಮರ್ಮವು ಈಗ ಪ್ರಕಾಶಕ್ಕೆ ಬಂದು ನಿತ್ಯನಾದ ದೇವರ ಅಪ್ಪಣೆಯ ಪ್ರಕಾರ ಪ್ರವಾದಿಗಳ ಗ್ರಂಥಗಳ ಮೂಲಕ ಅನ್ಯಜನರೆಲ್ಲರಿಗೆ ನಂಬಿಕೆಯೆಂಬ ವಿಧೇಯತ್ವವನ್ನು ಉಂಟುಮಾಡುವದಕ್ಕೋಸ್ಕರ ತಿಳಿಸ ಲ್ಪಟ್ಟಿದೆ.ಜ್ಞಾನಿಯಾದ ಒಬ್ಬನೇ ದೇವರಿಗೆ ಯೇಸು ಕ್ರಿಸ್ತನ ಮೂಲಕ ಎಂದೆಂದಿಗೂ ಮಹಿಮೆ ಉಂಟಾಗಲಿ. ಆಮೆನ್.
- 27ಜ್ಞಾನಿಯಾದ ಒಬ್ಬನೇ ದೇವರಿಗೆ ಯೇಸು ಕ್ರಿಸ್ತನ ಮೂಲಕ ಎಂದೆಂದಿಗೂ ಮಹಿಮೆ ಉಂಟಾಗಲಿ. ಆಮೆನ್.
Cross references
- 1 Timothy 1:17 1 ತಿಮೊಥೆಯನಿಗೆ 1:17ನಿತ್ಯನಾದ ಅರಸನೂ ನಿರ್ಲಯನೂ ಅದೃಶ್ಯನೂ ಆಗಿರುವ ಜ್ಞಾನಿಯಾದ ಒಬ್ಬನೇ ದೇವರಿಗೆ ಘನವೂ ಮಹಿಮೆಯೂ ಎಂದೆಂದಿಗೂ ಇರಲಿ. ಆಮೆನ್.
- Romans 11:36 ರೋಮಾಪುರದವರಿಗೆ 11:36ಸಮಸ್ತವು ಆತನಿಂದಲೂ ಆತನ ಮುಖಾಂತರವೂ ಆತನಿಗಾಗಿಯೂ ಇರುತ್ತದೆ; ಆತನಿಗೆ ಸದಾಕಾಲವೂ ಮಹಿಮೆಯಾಗಲಿ. ಆಮೆನ್.
- Revelation 7:10–12 ಪ್ರಕಟನೆ 7:10–12ಅವರು--ರಕ್ಷಣೆಯು ಸಿಂಹಾಸನದ ಮೇಲೆ ಕೂತಿರುವ ನಮ್ಮ ದೇವರಿಗೂ ಕುರಿಮರಿಯಾದಾತನಿಗೂ ಸೇರಿದ್ದು ಎಂದು ಮಹಾ ಶಬ್ದದಿಂದ ಕೂಗಿದರು. ಸಿಂಹಾಸನದ, ಹಿರಿಯರ ಮತ್ತು ನಾಲ್ಕು ಜೀವಿಗಳ ಸುತ್ತಲೂ ನಿಂತುಕೊಂಡಿದ್ದ ದೂತರೆಲ್ಲರೂ ಸಿಂಹಾಸನದ ಮುಂದೆ ಬೋರಲ ಬಿದ್ದು ದೇವರನ್ನು ಆರಾಧಿಸುತ್ತಾ.-- ಆಮೆನ್. ನಮ್ಮ ದೇವರಿಗೆ ಸ್ತೋತ್ರವೂ ಪ್ರಭಾವವೂ ಜ್ಞಾನವೂ ಕೃತಜ್ಞತಾಸ್ತುತಿಯೂ ಮಾನವೂ ಬಲವೂ ಸಾಮ ರ್ಥ್ಯವೂ ಯುಗಯುಗಾಂತರಗಳಲ್ಲಿ ಇರಲಿ ಎಂದು ಹೇಳಿದರು. ಆಮೆನ್.
- Romans 11:33–34 ರೋಮಾಪುರದವರಿಗೆ 11:33–34ಹಾ, ದೇವರ ಜ್ಞಾನದ ಮತ್ತು ತಿಳುವಳಿಕೆಯ ಐಶ್ವರ್ಯವು ಎಷ್ಟೋ ಅಗಾಧ ವಾಗಿದೆ! ಆತನ ತೀರ್ಪುಗಳು ಪರಿಶೋಧನೆಗೂ ಆತನ ಮಾರ್ಗಗಳು ಕಂಡು ಹಿಡಿಯುವದಕ್ಕೂ ಅಸಾಧ್ಯ ವಾಗಿವೆ! ಕರ್ತನ ಮನಸ್ಸನ್ನು ತಿಳಿದುಕೊಂಡವನು ಯಾರು? ಇಲ್ಲವೆ ಆತನಿಗೆ ಆಲೋಚನೆ ಹೇಳಿದವನು ಯಾರು?
- Revelation 19:1–6 ಪ್ರಕಟನೆ 19:1–6ಇವುಗಳಾದ ಮೇಲೆ ಪರಲೋಕದಲ್ಲಿ ಬಹಳ ಜನರ ಮಹಾ ಶಬ್ದವನ್ನು ನಾನು ಕೇಳಿದೆನು; ಅವರು--ಹಲ್ಲೆಲೂಯಾ; ನಮ್ಮ ದೇವ ರಾದ ಕರ್ತನಿಗೆ ರಕ್ಷಣೆಯೂ ಮಹಿಮೆಯೂ ಘನವೂ ಅಧಿಕಾರವೂ ಉಂಟಾದವು. ಆತನ ನ್ಯಾಯತೀರ್ಪು ಗಳು ಸತ್ಯವೂ ನೀತಿಯುಳ್ಳವುಗಳೂ ಆಗಿವೆ; ಯಾಕಂ ದರೆ ಜಾರತ್ವದಿಂದ ಭೂಲೋಕವನ್ನು ಕೆಡಿಸುತ್ತಿದ್ದ ಆ ಮಹಾಜಾರಸ್ತ್ರೀಗೆ ಆತನು ನ್ಯಾಯತೀರಿಸಿ ಆತನ ಸೇವಕರ ರಕ್ತಕ್ಕಾಗಿ ಅವಳಿಗೆ ಪ್ರತಿ ದಂಡನೆಯನ್ನು ಮಾಡಿದ್ದಾನೆ ಎಂದು ಹೇಳಿದರು. ತಿರಿಗಿ ಅವರು --ಹಲ್ಲೆಲೂಯಾ ಅಂದರು. ಅವಳ ಹೊಗೆಯು ಯುಗಯುಗಾಂತರಗಳಲ್ಲಿಯೂ ಏರಿ ಹೋಗುತ್ತದೆ. ಆಗ ಇಪ್ಪತ್ತನಾಲ್ಕು ಮಂದಿ ಹಿರಿಯರೂ ಆ ನಾಲ್ಕು ಜೀವಿಗಳೂ--ಆಮೆನ್. ಹಲ್ಲೆಲೂಯಾ ಎಂದು ಹೇಳುತ್ತಾ ಸಿಂಹಾಸನದ ಮೇಲೆ ಕೂತಿದ್ದ ದೇವರ ಮುಂದೆ ಅಡ್ಡಬಿದ್ದು ಆರಾಧಿಸಿದರು. ಆಮೇಲೆ ಸಿಂಹಾಸನದ ಕಡೆಯಿಂದ ಬಂದ ಒಂದು ಶಬ್ದವು--ದೇವರ ಸೇವಕರೆಲ್ಲರೇ, ಆತನಿಗೆ ಭಯ ಪಡುವ ಹಿರಿಕಿರಿಯರೇ, ನಮ್ಮ ದೇವರನ್ನು ಕೊಂಡಾಡಿರಿ ಎಂದು ಹೇಳಿತು. ತರುವಾಯ ಜನರ ದೊಡ್ಡ ಗುಂಪಿನ ಶಬ್ದದಂತೆಯೂ ಬಹಳ ನೀರುಗಳ ಘೋಷದಂತೆಯೂ ಗಟ್ಟಿಯಾದ ಗುಡುಗುಗಳ ಶಬ್ದದಂತೆಯೂ ಇದ್ದ ಒಂದು ಶಬ್ದವನ್ನು ನಾನು ಕೇಳಿದೆನು; ಅದು--ಹಲ್ಲೆಲೂಯಾ, ಸರ್ವಶಕ್ತನಾಗಿರುವ ದೇವರಾದ ಕರ್ತನು ಆಳುತ್ತಾನೆ.
- Revelation 1:5–6 ಪ್ರಕಟನೆ 1:5–6ಆತನು ನಮ್ಮನ್ನು ಪ್ರೀತಿಸಿ ತನ್ನ ಸ್ವಂತ ರಕ್ತದಿಂದ ನಮ್ಮನ್ನು ನಮ್ಮ ಪಾಪಗಳಿಂದ ತೊಳೆದು ತನ್ನ ತಂದೆ ಯಾದ ದೇವರಿಗೆ ನಮ್ಮನ್ನು ರಾಜರನ್ನಾಗಿಯೂ ಯಾಜಕ ರನ್ನಾಗಿಯೂ ಮಾಡಿದನು. ಆತನಿಗೆ ಯುಗ ಯುಗಾಂತರಗಳಲ್ಲಿ ಮಹಿಮೆಯೂ ಅಧಿಪತ್ಯವೂ ಇರಲಿ. ಆಮೆನ್.
- Revelation 5:9–14 ಪ್ರಕಟನೆ 5:9–14ಅವರು ಹೊಸ ಹಾಡನ್ನು ಹಾಡುತ್ತಾ--ನೀನು ಪುಸ್ತಕವನ್ನು ತೆಗೆದುಕೊಳ್ಳುವದಕ್ಕೂ ಅದರ ಮುದ್ರೆಗಳನ್ನು ಬಿಚ್ಚುವದಕ್ಕೂ ಯೋಗ್ಯ ನಾಗಿದ್ದೀ; ಯಾಕಂದರೆ ನೀನು ವಧಿತನಾಗಿ ನಿನ್ನ ರಕ್ತದಿಂದ ಸಕಲ ಕುಲ ಭಾಷೆ ಪ್ರಜೆ ಜನಾಂಗಗಳ ವರಿಂದ ನಮ್ಮನ್ನು ದೇವರಿಗಾಗಿ ವಿಮೋಚಿಸಿದ್ದೀ; ನಮ್ಮನ್ನು ನಮ್ಮ ದೇವರಿಗೊಸ್ಕರ ರಾಜರನ್ನಾಗಿಯೂ ಯಾಜಕರನ್ನಾ ಗಿಯೂ ಮಾಡಿದ್ದೀ; ನಾವು ಭೂಮಿಯ ಮೇಲೆ ಆಳುವೆವು ಎಂದು ಹೇಳಿದರು. ಇದಲ್ಲದೆ ನಾನು ನೋಡಲಾಗಿ ಸಿಂಹಾಸನದ, ಜೀವಿಗಳ ಮತ್ತು ಹಿರಿಯರ ಸುತ್ತಲು ಬಹುಮಂದಿ ದೂತರ ಶಬ್ದವನ್ನು ಕೇಳಿದೆನು; ಅವರ ಸಂಖ್ಯೆಯು ಕೋಟ್ಯಾನುಕೋಟಿ ಯಾಗಿಯೂ ಲಕ್ಷೋಪಲಕ್ಷವಾಗಿಯೂ ಇತ್ತು. ಅವರು--ವಧಿತನಾದ ಕುರಿಮರಿಯು ಬಲ ಐಶ್ವರ್ಯ ಜ್ಞಾನ ಸಾಮರ್ಥ್ಯ ಮಾನಪ್ರಭಾವ ಸ್ತೋತ್ರಗಳನ್ನು ಹೊಂದುವದಕ್ಕೆ ಯೋಗ್ಯನು ಎಂದು ಮಹಾಶಬ್ದದಿಂದ ಹೇಳಿದರು. ಇದಲ್ಲದೆ ಆಕಾಶ ದಲ್ಲಿಯೂ ಭೂಮಿಯ ಮೇಲೆಯೂ ಭೂಮಿಯ ಕೆಳಗೂ ಸಮುದ್ರದಲ್ಲಿಯೂ ಅವುಗಳಲ್ಲಿರುವ ಎಲ್ಲಾ ಸೃಷ್ಟಿಗಳೂ--ಸಿಂಹಾಸನಾಸೀನನಾಗಿರುವಾತನಿಗೂ ಕುರಿಮರಿಯಾದಾತನಿಗೂ ಸ್ತೋತ್ರಮಾನ ಪ್ರಭಾವ ಬಲವು ಯುಗಯುಗಾಂತರಗಳಲ್ಲಿಯೂ ಇರಲಿ ಎಂದು ಹೇಳುವದನ್ನು ನಾನು ಕೇಳಿದೆನು.ಆಗ ನಾಲ್ಕು ಜೀವಿಗಳು--ಆಮೆನ್ ಅಂದವು; ಇಪ್ಪತ್ತನಾಲ್ಕು ಮಂದಿ ಹಿರಿಯರು ಅಡ್ಡ ಬಿದ್ದು ಯುಗಯುಗಾಂತರಗಳಲ್ಲಿ ಜೀವಿಸುವಾತನನ್ನು ಆರಾಧಿಸಿದರು. ಆಗ ನಾಲ್ಕು ಜೀವಿಗಳು--ಆಮೆನ್ ಅಂದವು; ಇಪ್ಪತ್ತನಾಲ್ಕು ಮಂದಿ ಹಿರಿಯರು ಅಡ್ಡ ಬಿದ್ದು ಯುಗಯುಗಾಂತರಗಳಲ್ಲಿ ಜೀವಿಸುವಾತನನ್ನು ಆರಾಧಿಸಿದರು.
- 1 Peter 2:5 1 ಪೇತ್ರನು 2:5ನೀವು ಸಹ ಜೀವವುಳ್ಳ ಕಲ್ಲುಗಳಾಗಿದ್ದು ಆತ್ಮಸಂಬಂಧ ವಾದ ಮಂದಿರವಾಗುವದಕ್ಕೆ ಕಟ್ಟಲ್ಪಡುತ್ತಾ ಇದ್ದೀರಿ, ಮತ್ತು ಯೇಸು ಕ್ರಿಸ್ತನ ಮೂಲಕ ದೇವರಿಗೆ ಸಮರ್ಪಕ ವಾದ ಆತ್ಮೀಯ ಯಜ್ಞಗಳನ್ನು ಸಮರ್ಪಿಸುವದಕ್ಕೆ ಪವಿತ್ರ ಯಾಜಕ ವರ್ಗದವರಾಗಿದ್ದೀರಿ.
- Philippians 4:20 ಫಿಲಿಪ್ಪಿಯವರಿಗೆ 4:20ನಮ್ಮ ತಂದೆಯೂ ದೇವರೂ ಆಗಿರುವಾತನಿಗೆ ಯುಗ ಯುಗಾಂತರಗಳಲ್ಲಿಯೂ ಮಹಿಮೆ ಇರಲಿ. ಆಮೆನ್.
- Ephesians 3:10 ಎಫೆಸದವರಿಗೆ 3:10ನಾನಾ ವಿಧವಾದ ದೇವರ ಜ್ಞಾನವು ಪರಲೋಕದಲ್ಲಿ ಈಗ ರಾಜತ್ವಗಳಿಗೂ ಅಧಿಕಾರಗಳಿಗೂ ಸಭೆಯ ಮೂಲಕ ಗೊತ್ತಾಗಬೇಕೆಂಬದಾಗಿಯೂ ಆತನು ಉದ್ದೇಶಿಸಿದ್ದನು.
- Colossians 2:2–3 ಕೊಲೊಸ್ಸೆಯವರಿಗೆ 2:2–3ಹೇಗಂದರೆ, ಅವರ ಹೃದಯಗಳು ಪ್ರೀತಿಯಲ್ಲಿ ಹೊಂದಿಕೊಂಡು ಆದರಣೆ ಹೊಂದಿ ಸಂಪೂರ್ಣ ನಿಶ್ಚಯವೆಂಬ ಭಾಗ್ಯವನ್ನು ಪಡೆದು ತಂದೆಯಾದ ದೇವರ ಮತ್ತು ಕ್ರಿಸ್ತನ ಮರ್ಮವನ್ನು ತಿಳಿಯುವದೇ; ಆತನಲ್ಲಿ (ಕ್ರಿಸ್ತನಲ್ಲಿ) ಜ್ಞಾನ ತಿಳುವಳಿಕೆಯ ಎಲ್ಲಾ ನಿಕ್ಷೇಪಗಳು ಅಡಕವಾಗಿವೆ.
- 2 Peter 3:18 2 ಪೇತ್ರನು 3:18ಕೃಪೆಯಲ್ಲಿಯೂ ನಮ್ಮ ಕರ್ತನೂ ರಕ್ಷಕನೂ ಆಗಿರುವ ಯೇಸು ಕ್ರಿಸ್ತನ ವಿಷಯವಾದ ಜ್ಞಾನದಲ್ಲಿಯೂ ಬೆಳೆಯಿರಿ. ಆತನಿಗೆ ಈಗಲೂ ಸದಾಕಾಲವೂ ಮಹಿಮೆ ಇರಲಿ. ಆಮೆನ್.