Romans · chapter 16 · verse 3
Romans 16:3 in Kannada
ಕ್ರಿಸ್ತ ಯೇಸುವಿನಲ್ಲಿ ನನ್ನ ಸಹಾಯಕರಾದ ಪ್ರಿಸ್ಕಿಲ್ಲಳಿಗೂ ಅಕ್ವಿಲನಿಗೂ ನನ್ನ ವಂದನೆಗಳನ್ನು ತಿಳಿಸಿರಿ.
Krista yesuvinalli nanna sahaayakaraada priskillaligoo akvilanigoo nanna vandanegalannu tilisiri.
Romans 16:3 in English
- King James Version (KJV)
- Greet Priscilla and Aquila my helpers in Christ Jesus:
- World English Bible (WEB)
- Greet Prisca and Aquila, my fellow workers in Christ Jesus,
- American Standard Version (ASV)
- Salute Prisca and Aquila my fellow-workers in Christ Jesus,
- Bible in Basic English (BBE)
- Give my love to Prisca and Aquila, workers with me in Christ Jesus,
- Darby Translation (DBY)
- Salute Prisca and Aquila, my fellow-workmen in Christ Jesus,
- Webster's Bible (WBS)
- Greet Priscilla and Aquila my helpers in Christ Jesus:
- Young's Literal Translation (YLT)
- Salute Priscilla and Aquilas, my fellow-workmen in Christ Jesus —
Read in context
- 1ನಾನು ನಿಮಗೆ ಒಪ್ಪಿಸುವ ನಮ್ಮ ಸಹೋದರಿಯಾದ ಫೊಯಿಬೆಯನ್ನು ಪ್ರೀತಿಯಿಂದ ಅಂಗೀಕರಿಸಿರಿ. ಆಕೆಯು ಕೆಂಕ್ರೆಯ ಲ್ಲಿರುವ ಸಭೆಯ ಸೇವಕಳಾಗಿದ್ದಾಳೆ.
- 2ನೀವು ಆಕೆಯನ್ನು ಪರಿಶುದ್ಧರಿಗೆ ತಕ್ಕಂತೆ ಕರ್ತನಲ್ಲಿ ಅಂಗೀಕರಿಸಿ ಆಕೆಯ ಕೆಲಸದಲ್ಲಿ ಆಕೆಗೆ ಅವಶ್ಯವಾದ ಸಹಾಯವನ್ನು ಮಾಡಿರಿ; ಆಕೆಯು ನನಗೂ ಅನೇಕರಿಗೂ ಸಹಾಯ ಮಾಡಿದವಳಾಗಿದ್ದಾಳೆ.
- 3ಕ್ರಿಸ್ತ ಯೇಸುವಿನಲ್ಲಿ ನನ್ನ ಸಹಾಯಕರಾದ ಪ್ರಿಸ್ಕಿಲ್ಲಳಿಗೂ ಅಕ್ವಿಲನಿಗೂ ನನ್ನ ವಂದನೆಗಳನ್ನು ತಿಳಿಸಿರಿ.
- 4ಅವರು ನನ್ನ ಪ್ರಾಣಕ್ಕಾಗಿ ತಮ್ಮ ಕುತ್ತಿಗೆಗಳನ್ನೇ ಒಡ್ಡಿದರು. ನಾನು ಮಾತ್ರವೇ ಅಲ್ಲ, ಅನ್ಯಜನರ ಸಭೆಗಳವರೆಲ್ಲರೂ ಅವರನ್ನು ವಂದಿಸುತ್ತಾರೆ.
- 5ಅದರಂತೆಯೇ ಅವರ ಮನೆಯಲ್ಲಿರುವ ಸಭೆಗೂ ವಂದನೆ ಹೇಳಿರಿ; ಅಖಾಯದಲ್ಲಿ ಕ್ರಿಸ್ತನಿಗೆ ಪ್ರಥಮ ಫಲವಾಗಿರುವ ನನ್ನ ಪ್ರಿಯನಾದ ಎಪೈನೆತನಿಗೂ ವಂದನೆ.
Cross references
- Acts 18:26 ಅಪೊಸ್ತಲರ ಕೃತ್ಯಗಳು 18:26ಅವನು ಸಭಾಮಂದಿರದಲ್ಲಿ ಧೈರ್ಯದಿಂದ ಮಾತನಾಡುವದಕ್ಕೆ ಪ್ರಾರಂಭಿಸಿದನು. ಅವನ ಮಾತುಗಳನ್ನು ಪ್ರಿಸ್ಕಿಲ್ಲಳೂ ಅಕ್ವಿಲನೂ ಕೇಳಿ ಅವನನ್ನು ತಮ್ಮಲ್ಲಿಗೆ ಕರೆದುಕೊಂಡು ಹೋಗಿ ದೇವರ ಮಾರ್ಗವನ್ನು ಅವನಿಗೆ ಇನ್ನೂ ಪೂರ್ಣವಾಗಿ ವಿವರಿಸಿದರು.
- 2 Timothy 4:19 2 ತಿಮೊಥೆಯನಿಗೆ 4:19ಪ್ರಿಸ್ಕಳಿಗೂ ಅಕ್ವಿಲ್ಲನಿಗೂ ಒನೆಸಿಫೊರನ ಮನೆಯ ವರಿಗೂ ವಂದನೆ.
- 1 Corinthians 16:19 1 ಕೊರಿಂಥದವರಿಗೆ 16:19ಆಸ್ಯ ಸಭೆಗಳವರು ನಿಮಗೆ ವಂದನೆ ಹೇಳುತ್ತಾರೆ. ಅಕ್ವಿಲನೂ ಪ್ರಿಸ್ಕಿಲ್ಲಳೂ ತಮ್ಮ ಮನೆಯಲ್ಲಿ ಕೂಡುವ ಸಭೆಯವರೊಂದಿಗೆ ಕರ್ತನಲ್ಲಿ ಅನೇಕ ವಂದನೆಗಳನ್ನು ಹೇಳುತ್ತಾರೆ.
- 1 Corinthians 16:16 1 ಕೊರಿಂಥದವರಿಗೆ 16:16ಆದದರಿಂದ ಅಂಥವರಿಗೂ ನಮ್ಮೊಂದಿಗೆ ಸಹಾಯ ಮಾಡುತ್ತಾ ಪ್ರಯಾಸಪಡುವ ಪ್ರತಿಯೊಬ್ಬನಿಗೂ ನೀವು ಅಧೀನರಾಗಬೇಕೆಂದು ನಾನು ನಿಮ್ಮನ್ನು ಬೇಡಿ ಕೊಳ್ಳುತ್ತೇನೆ.
- Romans 16:9 ರೋಮಾಪುರದವರಿಗೆ 16:9ಕ್ರಿಸ್ತನಲ್ಲಿ ನಮ್ಮ ಸಹಾಯಕನಾದ ಉರ್ಬಾನನಿಗೂ ನನ್ನ ಪ್ರಿಯನಾದ ಸ್ತಾಖುನಿಗೂ ವಂದನೆಗಳು.
- Acts 18:2–17 ಅಪೊಸ್ತಲರ ಕೃತ್ಯಗಳು 18:2–17ಪೊಂತದಲ್ಲಿ ಹುಟ್ಟಿದ ಅಕ್ವಿಲನೆಂಬ ಒಬ್ಬ ಯೆಹೂದ್ಯ ನನ್ನು ಅಲ್ಲಿ ಕಂಡನು. (ಯೆಹೂದ್ಯರೆಲ್ಲರೂ ರೋಮಾ ಪುರವನ್ನು ಬಿಟ್ಟು ಹೋಗಬೇಕೆಂದು ಕ್ಲೌದ್ಯನು ಆಜ್ಞೆ ವಿಧಿಸಿದ್ದನು). ಆದಕಾರಣ ಅಕ್ವಿಲನೂ ಅವನ ಹೆಂಡತಿಯಾದ ಪ್ರಿಸ್ಕಿಲ್ಲಳೂ ಕೆಲವು ದಿವಸಗಳ ಮುಂಚೆ ಇತಾಲ್ಯದಿಂದ ಅಲ್ಲಿಗೆ ಬಂದಿದ್ದರು; ಪೌಲನು ಅವರ ಅವರು ತಮ್ಮ ವೃತ್ತಿಯಿಂದ ಗುಡಾರ ಮಾಡುವವರಾಗಿದ್ದದರಿಂದ ಅವನು ಅವ ರೊಂದಿಗೆ ಇದ್ದು ಕೆಲಸ ಮಾಡುತ್ತಿದ್ದನು ಯಾಕಂದರೆ ಅವನೂ ಅದೇ ಕಸಬಿನವನಾಗಿದ್ದನು. ಅವನು ಪ್ರತಿ ಸಬ್ಬತ್ ದಿನವೂ ಸಭಾಮಂದಿರದಲ್ಲಿ ಚರ್ಚಿಸಿ ಯೆಹೂದ್ಯರನ್ನೂ ಗ್ರೀಕರನ್ನೂ ಒಡಂಬಡಿಸುತ್ತಿದ್ದನು. ಸೀಲ ತಿಮೊಥೆಯರು ಮಕೆದೋನ್ಯದಿಂದ ಬಂದಾಗ ಪೌಲನು ಆತ್ಮದಲ್ಲಿ ಒತ್ತಾಯ ಮಾಡಲ್ಪಟ್ಟು ಯೇಸುವೇ ಕ್ರಿಸ್ತನೆಂದು ಯೆಹೂದ್ಯರಿಗೆ ಸಾಕ್ಷಿಕೊಟ್ಟನು. ಅವರು ಎದುರಿಸಿ ದೇವದೂಷಣೆ ಮಾಡಲಾಗಿ ಅವನು ತನ್ನ ವಸ್ತ್ರವನ್ನು ಝಾಡಿಸಿ ಅವರಿಗೆ--ನಿಮ್ಮ ರಕ್ತವು ನಿಮ್ಮ ತಲೆಗಳ ಮೇಲೆ ಇರಲಿ; ನಾನು ಇಂದಿನಿಂದ ದೋಷರಹಿತನಾಗಿ ಅನ್ಯಜನರ ಬಳಿಗೆ ಹೋಗುತ್ತೇನೆ ಎಂದು ಹೇಳಿ ಆ ಸ್ಥಳದಿಂದ ಹೊರಟು ದೇವರನ್ನು ಆರಾಧಿಸುವವನಾಗಿದ್ದ ಯುಸ್ತನೆಂಬವನ ಮನೆಗೆ ಹೋದನು. ಅವನ ಮನೆ ಸಭಾಮಂದಿರದ ಮಗ್ಗುಲಲ್ಲೇ ಇತ್ತು. ಸಭಾಮಂದಿರದ ಮುಖ್ಯಾಧಿಕಾರಿಯಾದ ಕ್ರಿಸ್ಪನು ತನ್ನ ಮನೆಯವರೆಲ್ಲರ ಸಹಿತ ಕರ್ತನಲ್ಲಿ ನಂಬಿಕೆಯಿಟ್ಟನು. ಕೊರಿಂಥ ದಲ್ಲಿ ಅನೇಕರು ಕೇಳಿ ನಂಬಿ ಬಾಸ್ತಿಸ್ಮ ಮಾಡಿಸಿಕೊಂಡರು. ಇದಲ್ಲದೆ ಕರ್ತನು ರಾತ್ರಿಯಲ್ಲಿ ಪೌಲನಿಗೆ ದರ್ಶನ ಕೊಟ್ಟು--ನೀನು ಹೆದರಬೇಡ; ಸುಮ್ಮನಿರದೆ ಮಾತ ನಾಡುತ್ತಲೇ ಇರು. ನಾನೇ ನಿನ್ನೊಂದಿಗಿದ್ದೇನೆ; ಯಾರೂ ನಿನ್ನ ಮೇಲೆ ಬಿದ್ದು ಕೇಡುಮಾಡುವದಿಲ್ಲ; ಈ ಪಟ್ಟಣದಲ್ಲಿ ಬಹಳ ಮಂದಿ ನನಗೆ ಇದ್ದಾರೆ ಎಂದು ಹೇಳಿದನು. ಅವನು ಒಂದು ವರುಷ ಆರು ತಿಂಗಳು ಅಲ್ಲೇ ಇದ್ದುಕೊಂಡು ಅವರಲ್ಲಿ ದೇವರ ವಾಕ್ಯವನ್ನು ಉಪದೇಶ ಮಾಡುತ್ತಿದ್ದನು. ಗಲ್ಲಿಯೋನನು ಅಖಾಯದ ಪ್ರತಿನಿಧಿ ಯಾಗಿದ್ದಾಗ ಯೆಹೂದ್ಯರು ಒಮ್ಮನಸ್ಸಿನಿಂದ ಪೌಲನಿಗೆ ವಿರೋಧವಾಗಿ ಧಂಗೆ ಎಬ್ಬಿಸಿ ನ್ಯಾಯಸ್ಥಾನದ ಮುಂದೆ ಹಿಡುಕೊಂಡು ಬಂದು-- ಇವನು ನ್ಯಾಯ ಪ್ರಮಾಣಕ್ಕೆ ಪ್ರತಿಕೂಲವಾಗಿ ದೇವರನ್ನು ಆರಾಧಿಸ ಬೇಕೆಂದು ಮನುಷ್ಯರನ್ನು ಪ್ರೇರೇಪಿಸುತ್ತಾನೆ ಎಂದು ಹೇಳಿದರು. ಪೌಲನು ಪ್ರತಿವಾದ ಮಾಡಬೇಕೆಂದಿ ದ್ದಾಗ ಗಲ್ಲಿಯೋನನು ಯೆಹೂದ್ಯರಿಗೆ--ಯೆಹೂ ದ್ಯರೇ, ಅನ್ಯಾಯವು ದುಷ್ಕಾರ್ಯವು ಇಂಥದ್ದೇನಾ ದರೂ ಇದ್ದ ಪಕ್ಷಕ್ಕೆ ನಾನು ನಿಮ್ಮ ಮಾತನ್ನು ಸಹನ ದಿಂದ ಕೇಳುವದು ನ್ಯಾಯವೇ. ಆದರೆ ನೀವು ಮಾಡುವ ವಿವಾದದ ಮಾತುಗಳೂ ಹೆಸರುಗಳೂ ನಿಮ್ಮ ನ್ಯಾಯಪ್ರಮಾಣದ ವಿಷಯವಾಗಿರುವದಾದರೆ ಅವುಗಳನ್ನು ನೀವೇ ನೋಡಿಕೊಳ್ಳಿರಿ; ಇಂಥ ವಿಷಯ ಗಳನ್ನು ವಿಚಾರಣೆ ಮಾಡುವದಕ್ಕೆ ನನಗಂತೂ ಮನಸ್ಸಿಲ್ಲ ಎಂದು ಹೇಳಿ ಅವರನ್ನು ನ್ಯಾಯ ಸ್ಥಾನದಿಂದ ಹೊರಡಿಸಿಬಿಟ್ಟನು. ಆಗ ಗ್ರೀಕರೆಲ್ಲರೂ ಸಭಾಮಂದಿರದ ಮುಖ್ಯ ಅಧಿಕಾರಿಯಾಗಿದ್ದ ಸೋಸ್ಥೆನ ನನ್ನು ಹಿಡಿದುಕೊಂಡು ನ್ಯಾಯಸ್ಥಾನದ ಮುಂದೆ ಹೊಡೆದರು. ಗಲ್ಲಿಯೋನನಾದರೋ ಅವುಗಳಲ್ಲಿ ಒಂದಕ್ಕಾದರೂ ಲಕ್ಷ್ಯಕೊಡಲಿಲ್ಲ.