Romans · chapter 2 · verse 21
Romans 2:21 in Kannada
ಆದದರಿಂದ ಬೇರೊಬ್ಬನಿಗೆ ಬೋಧಿಸುವ ನೀನು ನಿನಗೆ ನೀನೇ ಬೋಧಿಸಿಕೊಳ್ಳುವದಿಲ್ಲವೋ? ಕದಿಯ ಬೇಡವೆಂದು ಬೇರೊಬ್ಬನಿಗೆ ಸಾರುವ ನೀನು ಕದಿಯು ತ್ತೀಯೋ?
Aadadarinda berobbanige bodhisuva neenu ninage neene bodhisikolluvadillavo? Kadiya bedavendu berobbanige saaruva neenu kadiyu tteeyo?
Romans 2:21 in English
- King James Version (KJV)
- Thou therefore which teachest another, teachest thou not thyself? thou that preachest a man should not steal, dost thou steal?
- World English Bible (WEB)
- You therefore who teach another, don’t you teach yourself? You who preach that a man shouldn’t steal, do you steal?
- American Standard Version (ASV)
- thou therefore that teachest another, teachest thou not thyself? thou that preachest a man should not steal, dost thou steal?
- Bible in Basic English (BBE)
- You who give teaching to others, do you give it to yourself? you who say that a man may not take what is not his, do you take what is not yours?
- Darby Translation (DBY)
- thou then that teachest another, dost thou not teach thyself? thou that preachest not to steal, dost thou steal?
- Webster's Bible (WBS)
- Thou therefore who teachest another, teachest thou not thyself? thou that preachest a man should not steal, dost thou steal?
- Young's Literal Translation (YLT)
- Thou, then, who art teaching another, thyself dost thou not teach?
Read in context
- 19ಇದಲ್ಲದೆ ನೀನೇ ಕುರುಡರ ಮಾರ್ಗದರ್ಶ ಕನೂ ಕತ್ತಲೆಯಲ್ಲಿರುವವರಿಗೆ ಬೆಳಕೂ
- 20ಮೂರ್ಖರ ಉಪಾಧ್ಯಾಯನೂ ಶಿಶುಗಳ ಬೋಧಕನೂ ನ್ಯಾಯ ಪ್ರಮಾಣದಲ್ಲಿರುವ ತಿಳುವಳಿಕೆಯ ಮತ್ತು ಸತ್ಯದ ಸ್ವರೂಪವುಳ್ಳವನೂ ಆಗಿದ್ದೀ ಎಂದು ನಂಬಿಕೊಂಡಿದ್ದೀ.
- 21ಆದದರಿಂದ ಬೇರೊಬ್ಬನಿಗೆ ಬೋಧಿಸುವ ನೀನು ನಿನಗೆ ನೀನೇ ಬೋಧಿಸಿಕೊಳ್ಳುವದಿಲ್ಲವೋ? ಕದಿಯ ಬೇಡವೆಂದು ಬೇರೊಬ್ಬನಿಗೆ ಸಾರುವ ನೀನು ಕದಿಯು ತ್ತೀಯೋ?
- 22ವ್ಯಭಿಚಾರ ಮಾಡಬಾರದೆಂದು ಹೇಳುವ ನೀನು ವ್ಯಭಿಚಾರ ಮಾಡುತ್ತೀಯೋ? ವಿಗ್ರಹಗಳನ್ನು ಅಸಹ್ಯಿಸುವ ನೀನು ಪವಿತ್ರಸ್ಥಳವನ್ನು ಹೊಲೆಮಾಡು ತ್ತೀಯೋ?
- 23ನ್ಯಾಯಪ್ರಮಾಣದಲ್ಲಿ ಹೆಚ್ಚಳಪಡುವ ನೀನು ನ್ಯಾಯಪ್ರಮಾಣವನ್ನು ವಿಾರುವದರಿಂದ ದೇವ ರನ್ನು ಅವಮಾನಪಡಿಸುತ್ತೀಯೋ?
Cross references
- 1 Corinthians 9:27 1 ಕೊರಿಂಥದವರಿಗೆ 9:27ಆದರೆ ನಾನು ಬೇರೆಯವರಿಗೆ ಸಾರಿದ ಮೇಲೆ ಯಾವ ವಿಧದಲ್ಲಿಯೂ ನಾನು ಭ್ರಷ್ಠನಾಗದಂತೆ ನನ್ನ ದೇಹವನ್ನು ಅಧೀನತೆಯಲ್ಲಿಟ್ಟು ಅದನ್ನು ಸ್ವಾಧೀನಪಡಿಸಿಕೊಳ್ಳುತ್ತೇನೆ.
- Matthew 23:3–28 ಮತ್ತಾಯನು 23:3–28ಆದದರಿಂದ ಅವರು ನಿಮಗೆ ಹೇಳುವವು ಗಳನ್ನೆಲ್ಲಾ ಕೈಕೊಂಡು ನಡೆಯಿರಿ; ಅವರ ಕ್ರಿಯೆಗಳ ಪ್ರಕಾರ ನೀವು ಮಾಡಬೇಡಿರಿ; ಯಾಕಂದರೆ ಅವರು ಹೇಳುತ್ತಾರೆ, ಮಾಡುವದಿಲ್ಲ. ಹೊರುವದಕ್ಕೆ ಅವರು ಭಾರವಾದ ಮತ್ತು ಕ್ರೂರವಾದ ಹೊರೆಗಳನ್ನು ಕಟ್ಟಿ ಜನರ ಹೆಗಲುಗಳ ಮೇಲೆ ಹೊರಿಸುತ್ತಾರೆ. ತಾವಾ ದರೋ ತಮ್ಮ ಬೆರಳುಗಳಲ್ಲಿ ಒಂದರಿಂದ ಲಾದರೂ ಅವುಗಳನ್ನು ಸರಿಸುವದಿಲ್ಲ. ಆದರೆ ತಾವು ಮಾಡುವ ತಮ್ಮ ಕ್ರಿಯೆಗಳನ್ನೆಲ್ಲಾ ಜನರು ನೋಡುವಂತೆ ಮಾಡು ತ್ತಾರೆ. ಅವರು ತಮ್ಮ ಜ್ಞಾಪಕಪಟ್ಟಿಗಳನ್ನು ಅಗಲಮಾಡಿ ಉಡುಪುಗಳ ಅಂಚುಗಳನ್ನು ಉದ್ದ ಮಾಡುತ್ತಾ ಔತಣಗಳಲ್ಲಿ ಪ್ರಥಮ ಸ್ಥಾನಗಳನ್ನೂ ಸಭಾಮಂದಿರ ಗಳಲ್ಲಿ ಮುಖ್ಯಸ್ಥಳಗಳನ್ನೂ ಸಂತೆಯ ಸ್ಥಳಗಳಲ್ಲಿ ವಂದನೆಗಳನ್ನೂ ಮತ್ತು ಜನರಿಂದ--ಬೋಧಕರೇ, ಬೋಧಕರೇ ಎಂದು ಕರೆಯಲ್ಪಡುವದನ್ನೂ ಅವರು ಪ್ರೀತಿಸುತ್ತಾರೆ. ಆದರೆ ನೀವು ಬೋಧಕರೆಂದು ಕರೆ ಯಲ್ಪಡಬೇಡಿರಿ. ಕ್ರಿಸ್ತನೊಬ್ಬನೇ ನಿಮ್ಮ ಬೋಧಕನು ಮತ್ತು ನೀವೆಲ್ಲರೂ ಸಹೋದರರು. ಭೂಮಿಯ ಮೇಲೆ ಯಾರನ್ನೂ ನಿಮ್ಮ ತಂದೆಯೆಂದು ಕರೆಯಬೇಡಿರಿ; ಪರಲೋಕದಲ್ಲಿರುವಾತನೊಬ್ಬನೇ ನಿಮ್ಮ ತಂದೆ. ನೀವು ಗುರುಗಳೆಂದು ಕರೆಯಲ್ಪಡಬೇಡಿರಿ; ಕ್ರಿಸ್ತ ನೊಬ್ಬನೇ ನಿಮ್ಮ ಗುರುವು. ಆದರೆ ನಿಮ್ಮಲ್ಲಿ ಅತಿ ದೊಡ್ಡವನಾಗಿರುವವನು ನಿಮ್ಮ ಸೇವಕನಾಗಿರಬೇಕು. ಯಾವನಾದರೂ ತನ್ನನ್ನು ಹೆಚ್ಚಿಸಿಕೊಂಡರೆ ಅವನು ತಗ್ಗಿಸಲ್ಪಡುವನು; ತನ್ನನ್ನು ತಗ್ಗಿಸಿಕೊಳ್ಳುವವನು ಹೆಚ್ಚಿಸಲ್ಪಡುವನು. ಆದರೆ ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನಿಮಗೆ ಅಯ್ಯೋ! ನೀವು ಮನುಷ್ಯರ ಮುಂದೆ ಪರ ಲೋಕರಾಜ್ಯವನ್ನು ಮುಚ್ಚುತ್ತೀರಿ. ನೀವಂತೂ ಪ್ರವೇಶಿ ಸುವದಿಲ್ಲ, ಪ್ರವೇಶಿಸುವವರನ್ನೂ ನೀವು ಒಳಗೆ ಹೋಗಗೊಡಿಸುವದಿಲ್ಲ. ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನಿಮಗೆ ಅಯ್ಯೋ! ನೀವು ವಿಧವೆಯರ ಮನೆಗಳನ್ನು ನುಂಗುತ್ತೀರಿ; ಮತ್ತು ನಟನೆಗಾಗಿ ಉದ್ದವಾದ ಪ್ರಾರ್ಥನೆಯನ್ನು ಮಾಡುತ್ತೀರಿ; ಆದದರಿಂದ ನೀವು ಹೆಚ್ಚಾದ ದಂಡನೆಯನ್ನು ಹೊಂದುವಿರಿ. ಕಪಟಿಗಳಾದ ಫರಿಸಾಯರೇ, ಶಾಸ್ತ್ರಿಗಳೇ, ನಿಮಗೆ ಅಯ್ಯೋ! ಒಬ್ಬನನ್ನು ಮತಾಂತರ ಮಾಡು ವದಕ್ಕೆ ನೀವು ಸಮುದ್ರವನ್ನೂ ಭೂಮಿಯನ್ನೂ ಸುತ್ತುತ್ತೀರಿ; ಮತಾಂತರ ಮಾಡಿದ ಮೇಲೆ ಅವನನ್ನು ನಿಮಗಿಂತಲೂ ಎರಡರಷ್ಟು ನರಕದ ಮಗನನ್ನಾಗಿ ಮಾಡುತ್ತೀರಿ. ಕುರುಡರಾದ ಮಾರ್ಗದರ್ಶಕರೇ, ನಿಮಗೆ ಅಯ್ಯೋ! ಒಬ್ಬನು ದೇವಾಲಯದ ಮೇಲೆ ಆಣೆಯಿಟ್ಟರೆ ಅದು ಏನೂ ಅಲ್ಲ ಅನ್ನುತ್ತೀರಿ; ಆದರೆ ಯಾವನಾದರೂ ದೇವಾಲಯದ ಚಿನ್ನದ ಮೇಲೆ ಆಣೆಯಿಟ್ಟರೆ ಅವನು ಸಾಲಗಾರನು ಎಂದು ಅನ್ನುತ್ತೀರಿ. ಮೂರ್ಖರೇ, ಕುರುಡರೇ, ಯಾವದು ದೊಡ್ಡದು? ಚಿನ್ನವೋ ಇಲ್ಲವೆ ಚಿನ್ನವನ್ನು ಪಾವನ ಮಾಡುವ ದೇವಾಲಯವೋ? ಯಾರಾದರೂ ಯಜ್ಞವೇದಿಯ ಮೇಲೆ ಆಣೆಯಿಡುವದಾದರೆ ಅದು ಏನೂ ಅಲ್ಲವೆಂದೂ ಯಾರಾದರೂ ಅದರಲ್ಲಿರುವ ಕಾಣಿಕೆಯ ಮೇಲೆ ಆಣೆಯಿಟ್ಟರೆ ಅವನು ಅಪರಾಧಿ ಯೆಂದೂ ಅನ್ನುತ್ತೀರಿ. ಮೂರ್ಖರೇ, ಕುರುಡರೇ, ಯಾವದು ದೊಡ್ಡದು? ಕಾಣಿಕೆಯೋ ಇಲ್ಲವೆ ಕಾಣಿಕೆಯನ್ನು ಪಾವನಮಾಡುವ ಯಜ್ಞವೇದಿಯೋ? ಆದದರಿಂದ ಯಜ್ಞವೇದಿಯ ಮೇಲೆ ಆಣೆಯಿಡು ವವನು ಅದರ ಮೇಲೆಯೂ ಅದರಲ್ಲಿರುವಂಥವುಗಳ ಮೇಲೆಯೂ ಆಣೆಯಿಡುವವನಾಗಿದ್ದಾನೆ. ದೇವಾ ಲಯದ ಮೇಲೆ ಆಣೆಯಿಡುವವನು ಅದರ ಮೇಲೆ ಯೂ ಆದರಲ್ಲಿ ವಾಸಿಸುವಾತನ ಮೇಲೆಯೂ ಆಣೆ ಯಿಡುವವನಾಗಿದ್ದಾನೆ. ಪರಲೋಕದ ಮೇಲೆ ಆಣೆ ಯಿಡುವವನು ದೇವರ ಸಿಂಹಾಸನದ ಮೇಲೆಯೂ ಅದರ ಮೇಲೆ ಕೂತಿರುವಾತನ ಮೇಲೆಯೂ ಆಣೆಯಿಡುವವನಾಗಿದ್ದಾನೆ. ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನಿಮಗೆ ಅಯ್ಯೋ! ನೀವು ಮರುಗ ಸೋಪು ಜೀರಿಗೆ ಗಳಲ್ಲಿ ದಶಮ ಭಾಗವನ್ನು ಸಲ್ಲಿಸುತ್ತೀರಿ. ಆದರೆ ನ್ಯಾಯ ಪ್ರಮಾಣದ ತೀರ್ಪು ಕರುಣೆ ನಂಬಿಕೆ ಎಂಬ ಈ ಪ್ರಾಮುಖ್ಯವಾದವುಗಳನ್ನು ಬಿಟ್ಟುಬಿಟ್ಟಿದ್ದೀರಿ. ಇವುಗ ಳೊಂದಿಗೆ ಆ ಬೇರೆಯವುಗಳನೂ ಕುರುಡ ಮಾರ್ಗದರ್ಶಕರಾದ ನೀವು ಸೊಳ್ಳೇ ಸೋಸುವವರು ಮತ್ತು ಒಂಟೇ ನುಂಗುವವರು. ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನಿಮಗೆ ಅಯ್ಯೋ! ನೀವು ಪಾತ್ರೆಯ ಮತ್ತು ತಟ್ಟೆಯ ಹೊರಭಾಗವನ್ನು ಶುಚಿಮಾಡುತ್ತೀರಿ. ಆದರೆ ಅವು ಒಳಗೆ ಸುಲಿಗೆಯಿಂದಲೂ ದುರಾಶೆಯಿಂದಲೂ ತುಂಬಿರುತ್ತವೆ. ಕುರುಡನಾದ ಫರಿಸಾಯನೇ, ಮೊದಲು ಪಾತ್ರೆಯ ಮತ್ತು ತಟ್ಟೆಯ ಒಳಗಿನ ಭಾಗ ವನ್ನು ಶುಚಿಮಾಡು; ಆಗ ಅವುಗಳ ಹೊರ ಭಾಗವೂ ಶುಚಿಯಾಗುವದು. ಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನಿಮಗೆ ಅಯ್ಯೋ! ಯಾಕಂದರೆ ನೀವು ಸುಣ್ಣಾ ಹಚ್ಚಿದ ಸಮಾಧಿ ಗಳಿಗೆ ಹೋಲಿಕೆಯಾಗಿದ್ದೀರಿ. ಅವು ಹೊರಗೆ ನಿಜಕ್ಕೂ ಅಂದವಾಗಿ ಕಾಣುತ್ತವೆ; ಆದರೆ ಒಳಗೆ ಸತ್ತವರ ಎಲುಬು ಗಳಿಂದಲೂ ಎಲ್ಲಾ ಅಶುದ್ಧತೆಯಿಂದಲೂ ತುಂಬಿರು ತ್ತವೆ. ಅದರಂತೆಯೇ ನೀವು ಸಹ ಹೊರಗಡೆ ಮನುಷ್ಯರಿಗೆ ನೀತಿವಂತರಂತೆ ಕಾಣಿಸಿಕೊಳ್ಳುತ್ತೀರಿ; ಆದರೆ ನೀವು ಒಳಗೆ ಕಪಟದಿಂದಲೂ ದುಷ್ಟತನ ದಿಂದಲೂ ತುಂಬಿದವರಾಗಿದ್ದೀರಿ.
- Luke 12:47 ಲೂಕನು 12:47ಇದಲ್ಲದೆ ತನ್ನ ಒಡೆಯನ ಚಿತ್ತವನ್ನು ತಿಳಿದು ತನ್ನನ್ನು ಸಿದ್ಧಮಾಡಿಕೊಳ್ಳದೆ ಇಲ್ಲವೆ ಅವನ ಚಿತ್ತಕ್ಕೆ ಅನುಸಾರವಾಗಿ ಮಾಡದೆ ಇದ್ದ ಸೇವಕನು ಬಹಳ ಪೆಟ್ಟುಗಳನ್ನು ತಿನ್ನುವನು.
- Titus 2:1–7 ತೀತನಿಗೆ 2:1–7ನೀನಾದರೋ ಸ್ವಸ್ಥಬೋಧನೆಗೆ ಅನು ಗುಣವಾಗಿ ಮಾತನಾಡು. ಹೇಗೆಂದರೆ, ವೃದ್ಧರು ಸ್ವಸ್ಥಚಿತ್ತರಾಗಿರುವವರೂ ಗೌರವವುಳ್ಳವರೂ ಜಿತೇಂದ್ರಿಯರೂ ನಂಬಿಕೆ ಪ್ರೀತಿ ತಾಳ್ಮೆ ಇವುಗಳಲ್ಲಿ ಸ್ವಸ್ಥತೆಯುಳ್ಳವರೂ ಆಗಿರಬೇಕೆಂದು ಹೇಳು. ಅದೇ ಪ್ರಕಾರ ವೃದ್ಧಸ್ತ್ರೀಯರು ನಡತೆಯಲ್ಲಿ ಪರಿಶುದ್ಧತೆಗೆ ತಕ್ಕ ಹಾಗೆ ಇರುವವರಾಗಿದ್ದು ಸುಳ್ಳಾಗಿ ದೂರುವವರೂ ಹೆಚ್ಚಾಗಿ ಮದ್ಯಪಾನ ಮಾಡುವವರೂ ಆಗಿರದೆ ಇದಲ್ಲದೆ ದೇವರ ವಾಕ್ಯವು ದೂಷಿಸಲ್ಪ ಡದಂತೆ ಯೌವನ ಸ್ತ್ರೀಯರು ಸ್ವಸ್ಥಚಿತ್ತರೂ ತಮ್ಮ ಗಂಡಂದಿರನ್ನು ಮತ್ತು ಮಕ್ಕಳನ್ನು ಪ್ರೀತಿಸುವವರೂ ವಿವೇಕವುಳ್ಳವರೂ ಪತಿವ್ರತೆಯರೂ ಮನೆಯನ್ನು ನೋಡಿಕೊಳ್ಳುವವರೂ ಒಳ್ಳೆಯವರೂ ತಮ್ಮ ಗಂಡಂದಿ ರಿಗೆ ವಿಧೇಯರೂ ಆಗಿರಬೇಕೆಂದು ಅವರಿಗೆ ಹೇಳು. ಹಾಗೆಯೇ ಯೌವನಸ್ಥರು ಸ್ವಸ್ಥಚಿತ್ತರಾಗಿರಬೇಕೆಂದು ಅವರನ್ನು ಎಚ್ಚರಿಸು. ಎಲ್ಲಾ ವಿಷಯಗಳಲ್ಲಿ ನಿನ್ನನ್ನು ಸತ್ಕಾರ್ಯಗಳ ಮಾದರಿಯಾಗಿ ತೋರಿಸಿಕೊಂಡು ಬೋಧನೆಯಲ್ಲಿ ನಿರ್ಮಲತ್ವವನ್ನೂ ಗೌರವವನ್ನೂ ಯಥಾರ್ಥತೆಯನ್ನೂ ಖಂಡಿಸಲಾಗದಂಥ ಸ್ವಸ್ಥವಾದ ಮಾತನ್ನೂ ತೋರಿಸು;
- Micah 3:11 ಮೀಕ 3:11ಅದರ ಮುಖ್ಯಸ್ಥರು ಲಂಚಕ್ಕೆ ನ್ಯಾಯತೀರಿಸುತ್ತಾರೆ; ಅದರ ಯಾಜಕರು ಸಂಬಳಕ್ಕೆ ಬೋಧಿಸುತ್ತಾರೆ; ಅದರ ಪ್ರವಾ ದಿಗಳು ಹಣಕ್ಕೆ ಶಕುನ ಹೇಳುತ್ತಾರೆ; ಆದರೂ ಕರ್ತನ ಮೇಲೆ ಆತುಕೊಂಡು--ಕರ್ತನು ನಮ್ಮ ಮಧ್ಯದಲ್ಲಿ ಇಲ್ಲವೋ? ನಮ್ಮ ಮೇಲೆ ಕೇಡು ಬರುವದಿಲ್ಲ ಅನ್ನು ತ್ತಾರೆ.ಆದಕಾರಣ ನಿಮ್ಮ ನಿಮಿತ್ತವೇ, ಚೀಯೋನು ಹೊಲದ ಹಾಗೆ ಉಳಲ್ಪಡುವದು; ಯೆರೂಸಲೇಮು ದಿಬ್ಬೆಗಳಾಗುವದು, ಆಲಯದ ಪರ್ವತವು ಅಡವಿಯ ಉನ್ನತ ಸ್ಥಳಗಳ ಹಾಗಾಗುವದು.
- Psalm 50:16–21 ಕೀರ್ತನೆಗಳು 50:16–21ಆದರೆ ದುಷ್ಟನಿಗೆ ದೇವರು ಹೇಳುವದೇನಂದರೆ --ನನ್ನ ನಿಯಮಗಳನ್ನು ಪ್ರಕಟಿಸುವದು ನಿನಗೇನು? ಇಲ್ಲವೆ ನನ್ನ ಒಡಂಬಡಿಕೆಯನ್ನು ನಿನ್ನ ಬಾಯಲ್ಲಿ ಉಚ್ಚರಿಸುವದೇಕೆ? ನೀನು ಶಿಕ್ಷಣವನ್ನು ಹಗೆಮಾಡಿ ನನ್ನ ವಾಕ್ಯಗಳನ್ನು ನಿನ್ನ ಹಿಂದೆ ಹಾಕುತ್ತೀಯಲ್ಲಾ. ಕಳ್ಳನನ್ನು ನೋಡಿದರೆ ಅವನೊಂದಿಗೆ ಒಪ್ಪುತ್ತೀ; ಜಾರರ ಸಂಗಡ ನಿನ್ನ ಪಾಲು ಇದೆ. ನೀನು ನಿನ್ನ ಬಾಯನ್ನು ಕೇಡಿಗೆ ಒಪ್ಪಿಸುತ್ತೀ; ನಿನ್ನ ನಾಲಿಗೆಯು ಮೋಸವನ್ನು ಜೋಡಿಸುತ್ತದೆ. ನೀನು ಕೂತು ಕೊಂಡು ನಿನ್ನ ಸಹೋದರನಿಗೆ ವಿರೋಧವಾಗಿ ನುಡಿ ಯುತ್ತೀ; ನಿನ್ನ ಸ್ವಂತ ಒಡಹುಟ್ಟಿದವನ ಮೇಲೆ ಚಾಡಿ ಹೇಳುತ್ತೀ. ಇವುಗಳನ್ನು ನೀನು ಮಾಡಿದಾಗ್ಯೂ ನಾನು ಮೌನವಾಗಿದ್ದೆನು; ಆದದರಿಂದ ನಾನೂ ಸಹ ನಿನ್ನ ಹಾಗೆ ಒಬ್ಬನೆಂದು ನೀನು ನೆನಸಿದಿ; ಆದರೆ ನಾನು ನಿನ್ನನ್ನು ಗದರಿಸಿ ನಿನ್ನ ಕಣ್ಣುಗಳ ಮುಂದೆ ಈ ಕೃತ್ಯಗಳನ್ನು ಕ್ರಮವಾಗಿಡುವೆನು.
- Luke 11:46 ಲೂಕನು 11:46ಅದಕ್ಕೆ ಆತನು--ನ್ಯಾಯಶಾಸ್ತ್ರಿಗಳಾದ ನಿಮಗೂ ಅಯ್ಯೋ! ಯಾಕಂದರೆ ಹೊರಲು ಕಠಿಣವಾದ ಹೊರೆ ಗಳನ್ನು ಮನುಷ್ಯರ ಮೇಲೆ ಹೊರಿಸಿ ನಿಮ್ಮ ಬೆರಳುಗಳಲ್ಲಿ ಒಂದರಿಂದಾದರೂ ನೀವು ಆ ಹೊರೆಗಳನ್ನು ಮುಟ್ಟು ವದಿಲ್ಲ.
- Amos 8:4–6 ಆಮೋಸ 8:4–6ಬಡವರನ್ನು ನುಂಗುವವರೇ, ದೇಶದ ಬಡವರನ್ನು ಮುಗಿಸಬೇಕೆಂದಿರುವವರೇ, ಇದನ್ನು ಕೇಳಿರಿ. ನಾವು ಧಾನ್ಯವನ್ನು ಮಾರುವ ಹಾಗೆ ಅಮಾವಾಸ್ಯೆಯು ಗೋಧಿ ಯನ್ನು ಇಡುವ ಹಾಗೆ ಸಬ್ಬತ್ತು ಯಾವಾಗ ತೀರುವದೆಂದೂ ಎಫವನ್ನು ಚಿಕ್ಕದಾಗಿಯು ಶೆಕೇಲನ್ನು ದೊಡ್ಡದಾಗಿಯು ಕಳ್ಳತ್ರಾಸುಗಳನ್ನು ಮೋಸಕ್ಕಾಗಿ ಮಾಡೋಣವೆಂದೂ ಬಡವರನ್ನು ಬೆಳ್ಳಿಗೆ ದರಿದ್ರ ರನ್ನು ಕೆರಗಳ ಜೋಡಿಗೆ ಕೊಂಡುಕೊಂಡು ಗೋಧಿಯ ಕಸವನ್ನು ಮಾರೋಣವೆಂದೂ ಹೇಳುತ್ತೀರಲ್ಲಾ?
- Ezekiel 22:27 ಯೆಹೆಜ್ಕೇಲನು 22:27ಅಲ್ಲಿನ ಪ್ರಧಾನರು ಸುಲಿಗೆಗಾಗಿ ರಕ್ತ ಸುರಿಸಿ ಪ್ರಾಣ ಗಳನ್ನು ನುಂಗುವ ಹಾಗೆ ಬೇಟೆಯ ತೋಳಗಳಂತಿ ದ್ದಾರೆ.
- Matthew 21:13 ಮತ್ತಾಯನು 21:13ಆತನು ಅವರಿಗೆ--ನನ್ನ ಮನೆಯು ಪ್ರಾರ್ಥನೆಯ ಮನೆ ಎಂದು ಕರೆಯಲ್ಪಡುವದಾಗಿ ಬರೆದದೆ; ಆದರೆ ನೀವು ಅದನ್ನು ಕಳ್ಳರ ಗವಿಯನ್ನಾಗಿ ಮಾಡಿದ್ದೀರಿ ಎಂದು ಹೇಳಿದನು.
- Ezekiel 22:12–13 ಯೆಹೆಜ್ಕೇಲನು 22:12–13ನಿನ್ನಲ್ಲಿ ರಕ್ತ ಚೆಲ್ಲುವ ಹಾಗೆ ಲಂಚತಿಂದಿದ್ದಾರೆ; ಬಡ್ಡಿಯನ್ನೂ ಲಾಭವನ್ನೂ ತೆಗೆದುಕೊಂಡಿದ್ದಾರೆ; ಬಲಾತ್ಕಾರದಿಂದ ನಿನ್ನ ನೆರೆಯವರಲ್ಲಿ ದುರ್ಲಾಭಮಾಡಿಕೊಂಡಿದ್ದಾರೆ; ನನ್ನನ್ನು ಮರೆತುಬಿಟ್ಟಿ ದ್ದಾರೆಂದು ದೇವರಾದ ಕರ್ತನು ಹೇಳುತ್ತಾನೆ. ಆದದರಿಂದ ಇಗೋ, ನೀನು ಮಾಡಿದ ಈ ದುರ್ಲಾಭದಿಂದಲೂ ನಿನ್ನಲ್ಲಿರುವ ನಿನ್ನ ರಕ್ತಾಪ ರಾಧದಿಂದಲೂ ನಾನು ನನ್ನ ಕೈ ಬಡಿದುಕೊಂಡಿದ್ದೇನೆ.
- Luke 4:23 ಲೂಕನು 4:23ಆತನು ಅವರಿಗೆ--ವೈದ್ಯನೇ, ನಿನ್ನನ್ನು ನೀನೇ ವಾಸಿ ಮಾಡಿಕೋ ಎಂಬ ಈ ನಾನ್ನುಡಿಯನ್ನು ನೀವು ನನಗೆ ನಿಶ್ಚಯವಾಗಿ ಹೇಳಿ ಕಪೆರ್ನೌಮಿನಲ್ಲಿ ಯಾವದು ನಡೆಯಿತೆಂದು ನಾವು ಕೇಳಿದೆವೋ ಅದನ್ನು ಇಲ್ಲಿ ನಿನ್ನ ದೇಶದಲ್ಲಿಯೂ ಮಾಡು ಎಂದು ಹೇಳುವಿರಿ ಅಂದನು.