Romans · chapter 2 · verse 26
Romans 2:26 in Kannada
ಆದದರಿಂದ ಸುನ್ನತಿಯಿಲ್ಲದವನು ನ್ಯಾಯ ಪ್ರಮಾಣದ ನೀತಿಯನ್ನು ಕೈಕೊಂಡರೆ ಸುನ್ನತಿಯಿಲ್ಲದವನಾದ ಅವನಿಗೆ ಅದು ಸುನ್ನತಿಯೆಂದು ಎಣಿಸಲ್ಪಡುವದಿಲ್ಲವೋ?
Aadadarinda sunnatiyilladavanu nyaaya pramaanada neetiyannu kaikondare sunnatiyilladavanaada avanige adu sunnatiyendu enisalpaduvadillavo?
Romans 2:26 in English
- King James Version (KJV)
- Therefore if the uncircumcision keep the righteousness of the law, shall not his uncircumcision be counted for circumcision?
- World English Bible (WEB)
- If therefore the uncircumcised keep the ordinances of the law, won’t his uncircumcision be accounted as circumcision?
- American Standard Version (ASV)
- If therefore the uncircumcision keep the ordinances of the law, shall not his uncircumcision be reckoned for circumcision?
- Bible in Basic English (BBE)
- If those who have not circumcision keep the rules of the law, will it not be credited to them as circumcision?
- Darby Translation (DBY)
- If therefore the uncircumcision keep the requirements of the law, shall not his uncircumcision be reckoned for circumcision,
- Webster's Bible (WBS)
- Therefore, if the uncircumcision keepeth the righteousness of the law, shall not his uncircumcision be counted for circumcision?
- Young's Literal Translation (YLT)
- If, therefore the uncircumcision the righteousness of the law may keep, shall not his uncircumcision for circumcision be reckoned?
Read in context
- 24ಬರೆಯಲ್ಪಟ್ಟ ಪ್ರಕಾರ--ನಿಮ್ಮ ಮೂಲಕ ದೇವರ ಹೆಸರು ಅನ್ಯ ಜನಾಂಗಗಳಲ್ಲಿ ದೂಷಿಸಲ್ಪಡುತ್ತದೆ.
- 25ನೀನು ನ್ಯಾಯಪ್ರಮಾಣವನ್ನು ಕೈಕೊಂಡರೆ ಸುನ್ನತಿಯು ನಿಜವಾಗಿಯೂ ಪ್ರಯೋಜನವಾದದ್ದೇ. ಆದರೆ ನೀನು ನ್ಯಾಯಪ್ರಮಾಣವನ್ನು ವಿಾರುವದಾದರೆ ನಿನ್ನ ಸುನ್ನತಿಯು ಸುನ್ನತಿ ಅಲ್ಲ.
- 26ಆದದರಿಂದ ಸುನ್ನತಿಯಿಲ್ಲದವನು ನ್ಯಾಯ ಪ್ರಮಾಣದ ನೀತಿಯನ್ನು ಕೈಕೊಂಡರೆ ಸುನ್ನತಿಯಿಲ್ಲದವನಾದ ಅವನಿಗೆ ಅದು ಸುನ್ನತಿಯೆಂದು ಎಣಿಸಲ್ಪಡುವದಿಲ್ಲವೋ?
- 27ಸ್ವಾಭಾವಿಕವಾಗಿ ಸುನ್ನತಿಯಿಲ್ಲದವನಾಗಿದ್ದು ನ್ಯಾಯಪ್ರಮಾಣ ವನ್ನು ನೆರವೇರಿಸುವದಾದರೆ ನ್ಯಾಯಪ್ರಮಾಣವೂ ಸುನ್ನತಿಯೂ ಇದ್ದು ನ್ಯಾಯಪ್ರಮಾಣವನ್ನು ವಿಾರಿ ನಡೆಯುವ ನಿನಗೆ ಅವನು ತೀರ್ಪು ಮಾಡುವ ದಿಲ್ಲವೋ?
- 28ಹೊರಗೆ ಯೆಹೂದ್ಯನಾಗಿರುವವನು ಯೆಹೂದ್ಯನಲ್ಲ; ಹೊರಗೆ ಶರೀರದಲ್ಲಿ ಮಾಡಿರುವ ಸುನ್ನತಿಯು ಸುನ್ನತಿಯಲ್ಲ.ಆದರೆ ಒಳಗೆ ಯೆಹೂದ್ಯ ನಾಗಿರುವವನೇ ಯೆಹೂದ್ಯನು; ಸುನ್ನತಿಯು ಹೃದಯಕ್ಕೆ ಸಂಬಂಧಪಟ್ಟದ್ದಾಗಿ ಅಕ್ಷರೀಕವಾಗಿರದೆ ಆತ್ಮೀಕವಾದದ್ದೇ ಆಗಿದೆ. ಹೀಗೆ ಅವನ ಹೊಗಳಿಕೆಯು ಮನುಷ್ಯರಿಂದಾ ಗಿರದೆ ದೇವರಿಂದಲೇ ಆಗಿರುವದು.
Cross references
- Colossians 2:11 ಕೊಲೊಸ್ಸೆಯವರಿಗೆ 2:11ನೀವು ಆತನಲ್ಲಿ ಸುನ್ನತಿಯನ್ನೂ ಹೊಂದಿದ್ದಿರಿ; ಆ ಸುನ್ನತಿಯು ಕೈಯಿಂದ ಮಾಡಿದ್ದಲ್ಲ; ಇದು ಕ್ರಿಸ್ತನಿಂದಾದ ಸುನ್ನತಿಯಾಗಿದ್ದು ಪಾಪದ ಶರೀರ ವನ್ನು ವಿಸರ್ಜಿಸುವದೇ.
- 1 Corinthians 7:18–19 1 ಕೊರಿಂಥದವರಿಗೆ 7:18–19ಸುನ್ನತಿ ಯಲ್ಲಿದ್ದು ಕರೆಯಲ್ಪಟ್ಟವನು ಯಾವನಾದರೂ ಇದ್ದಾನೋ? ಅವನು ಸುನ್ನತಿ ಇಲ್ಲದವನಂತಾಗ ಬಾರದು; ಸುನ್ನತಿ ಇಲ್ಲದೆ ಕರೆಯಲ್ಪಟ್ಟವನು ಯಾವ ನಾದರೂ ಇದ್ದಾನೋ? ಅವನು ಸುನ್ನತಿ ಮಾಡಿಸಿ ಕೊಳ್ಳಬಾರದು. ಸುನ್ನತಿಯಾದರೂ ಏನೂ ಇಲ್ಲ, ಸುನ್ನತಿಯಾಗದ್ದಿದರೂ ಏನೂ ಇಲ್ಲ; ಆದರೆ ದೇವರ ಆಜ್ಞೆಗಳನ್ನು ಅನುಸರಿಸಿ ನಡೆಯುವದೇ ಆಗಿದೆ.
- Romans 8:4 ರೋಮಾಪುರದವರಿಗೆ 8:4ಹೀಗೆ ಶರೀರಕ್ಕನುಸಾರ ವಾಗಿ ನಡೆಯದೆ ಆತ್ಮನಿಗನುಸಾರವಾಗಿ ನಡೆಯುವವ ರಾದ ನಮ್ಮಲ್ಲಿ ನ್ಯಾಯಪ್ರಮಾಣದ ನೀತಿಯು ನೆರ ವೇರುವದು.
- Acts 11:3–18 ಅಪೊಸ್ತಲರ ಕೃತ್ಯಗಳು 11:3–18ನೀನು ಸುನ್ನತಿಯಿಲ್ಲದವರ ಬಳಿಗೆ ಹೋಗಿ ಅವರ ಸಂಗಡ ಊಟಮಾಡಿದೆಯಲ್ಲಾ ಎಂದು ಕೇಳಿದರು. ಆದರೆ ಪೇತ್ರನು ನಡೆದ ಸಂಗತಿಯನ್ನು ಅವರಿಗೆ ಮೊದಲಿ ನಿಂದ ಕ್ರಮವಾಗಿ ವಿವರಿಸಿ ಹೇಳಿದ್ದೇನಂದರೆ-- ನಾನು ಯೊಪ್ಪ ಪಟ್ಟಣದಲ್ಲಿ ಪ್ರಾರ್ಥನೆ ಮಾಡುತ್ತಿ ದ್ದಾಗ ಪರವಶನಾಗಿದ್ದ ನನಗೆ ಒಂದು ದರ್ಶನ ವಾಯಿತು; ಅದೇನಂದರೆ, ಆಕಾಶದಿಂದ ನಾಲ್ಕು ಮೂಲೆಗಳಿಂದ ದೊಡ್ಡ ಜೋಳಿಗೆಯಂತಿರುವ ಒಂದು ಪಾತ್ರೆಯು ಇಳಿಸಲ್ಪಟ್ಟು ನನ್ನ ಬಳಿಗೆ ಬಂತು. ಅದೇನೆಂದು ತಿಳುಕೊಳ್ಳುವದಕ್ಕೆ ನಾನು ಚೆನ್ನಾಗಿ ನೊಡಿದಾಗ ಭೂಮಿಯ ಮೇಲಿರುವ ನಾಲ್ಕು ಕಾಲು ಗಳುಳ್ಳ ಪಶುಗಳನ್ನೂ ಕಾಡು ಮೃಗಗಳನ್ನೂ ಹರಿ ದಾಡುವ ಕ್ರಿಮಿಕೀಟಗಳನ್ನೂ ಆಕಾಶದ ಪಕ್ಷಿಗಳನ್ನೂ ಕಂಡೆನು. ಆಗ--ಪೇತ್ರನೇ, ಎದ್ದು ಕೊಂದು ತಿನ್ನು ಎಂದು ನನಗೆ ಹೇಳುವ ಧ್ವನಿಯನ್ನು ಕೇಳಿದೆನು. ಆದರೆ ನಾನು--ಕರ್ತನೇ, ಹಾಗಲ್ಲ; ಹೊಲೆಯಾದ ದ್ದಾಗಲೀ ಅಶುದ್ಧವಾದದ್ದಾಗಲೀ ಯಾವದೂ ಯಾವ ಸಮಯದಲ್ಲೂ ನನ್ನ ಬಾಯೊಳಗೆ ಸೇರಲಿಲ್ಲ ಎಂದು ಹೇಳಿದೆನು; ಅದಕ್ಕೆ--ದೇವರು ಶುದ್ಧ ಮಾಡಿದ್ದನ್ನು ನೀನು ಹೊಲೆಯೆನ್ನಬಾರದು ಎಂಬದಾಗಿ ತಿರಿಗಿ ಆಕಾಶದಿಂದ ಧ್ವನಿಯು ನನಗೆ ಉತ್ತರಕೊಟ್ಟಿತು. ಇದು ಮೂರು ಸಾರಿ ಆಯಿತು. ಆಮೇಲೆ ಎಲ್ಲವೂ ತಿರಿಗಿ ಆಕಾಶಕ್ಕೆ ಎತ್ತಲ್ಪಟ್ಟಿತು. ಆಗ ಇಗೋ, ತಕ್ಷಣವೇ ಮೂರು ಮಂದಿ ಮನುಷ್ಯರು ನಾನಿದ್ದ ಮನೆಗೆ ಆಗಲೇ ಬಂದಿದ್ದರು. ಅವರು ಕೈಸರೈಯದಿಂದ ನನ್ನ ಹತ್ತಿರಕ್ಕೆ ಕಳುಹಿಸಲ್ಪಟ್ಟವರು. ಏನೂ ಸಂಶಯಪಡದೆ ಅವರ ಜೊತೆಯಲ್ಲಿ ಹೋಗಬೇಕೆಂದು ಆತ್ಮನು ನನಗೆ ಅಪ್ಪಣೆಕೊಟ್ಟನು; ಇದಲ್ಲದೆ ಈ ಆರು ಮಂದಿ ಸಹೋದರರು ನನ್ನೊಂದಿಗೆ ಬಂದರು; ನಾವು ಆ ಮನುಷ್ಯನ ಮನೆಯೊಳಕ್ಕೆ ಸೇರಿದೆವು. ಅವನು ತನ್ನ ಮನೆಯಲ್ಲಿ ಒಬ್ಬ ದೂತನನ್ನು ಕಂಡನೆಂದು ನಮಗೆ ತಿಳಿಸಿದನು. ಆ ದೂತನು ಅವನಿಗೆ--ನೀನು ಯೊಪ್ಪಕ್ಕೆ ಜನರನ್ನು ಕಳುಹಿಸಿ ಪೇತ್ರನೆನಿಸಿಕೊಳ್ಳುವ ಸೀಮೋನನನ್ನು ಕರೆಯಿಸು; ಅವನು ನಿನಗೆ ವಾಕ್ಯ ಗಳನ್ನು ಹೇಳುವನು; ಆ ವಾಕ್ಯಗಳಿಂದ ನಿನಗೂ ನಿನ್ನ ಮನೆಯವರೆಲ್ಲರಿಗೂ ರಕ್ಷಣೆಯಾಗುವದು ಎಂದು ಹೇಳಿದನೆಂಬದಾಗಿ ತಿಳಿಸಿದನು. ನಾನು ಮಾತನಾ ಡುವದಕ್ಕೆ ಪ್ರಾರಂಭಿಸಿದಾಗ ಪವಿತ್ರಾತ್ಮನು ಮೊದಲು ನಮ್ಮ ಮೇಲೆ ಬಂದಹಾಗೆ ಅವರ ಮೇಲೆಯೂ ಬಂದನು. ಆಗ--ಯೋಹಾನನು ನಿಜವಾಗಿಯೂ ನೀರಿನ ಬಾಪ್ತಿಸ್ಮ ಮಾಡಿಸಿದನು; ನೀವಾದರೋ ಪವಿತ್ರಾತ್ಮನಿಂದ ಬಾಪ್ತಿಸ್ಮ ಹೊಂದುವಿರಿ ಎಂದು ಕರ್ತನು ಹೇಳಿದ ಮಾತು ನನ್ನ ನೆನಪಿಗೆ ಬಂತು. ಕರ್ತನಾಗಿರುವ ಯೇಸು ಕ್ರಿಸ್ತನಲ್ಲಿ ನಂಬಿಕೆಯಿಟ್ಟ ನಮಗೆ ದೇವರು ಕೊಟ್ಟ ದಾನಕ್ಕೆ ಸರಿಯಾದ ದಾನವನ್ನು ಅವರಿಗೂ ಕೊಟ್ಟಿರಲಾಗಿ ದೇವರನ್ನು ತಡೆಯುವದಕ್ಕೆ ನಾನು ಎಷ್ಟರವನು ಎಂದು ಹೇಳಿದನು. ಅವರು ಇವುಗಳನ್ನು ಕೇಳಿ ಮೌನವಾಗಿದ್ದು ದೇವ ರನ್ನು ಕೊಂಡಾಡಿ--ಹಾಗಾದರೆ ಅನ್ಯ ಜನಾಂಗದವ ರಿಗೂ ಜೀವಕ್ಕಾಗಿ ಮಾನಸಾಂತರವನ್ನು ದೇವರು ದಯಪಾಲಿಸಿದ್ದಾನೆ ಎಂದು ಹೇಳಿದರು.
- Romans 3:30 ರೋಮಾಪುರದವರಿಗೆ 3:30ದೇವರು ಒಬ್ಬನೇ ಆಗಿರಲಾಗಿ ಆತನು ಸುನ್ನತಿಯವರನ್ನು ನೀತಿವಂತರೆಂದು ನಿರ್ಣಯಿಸು ವದಕ್ಕೆ ಅವರ ನಂಬಿಕೆಯಿಂದಲೇ. ಸುನ್ನತಿಯಿಲ್ಲ ದವರನ್ನು ಹಾಗೆಯೇ ನಿರ್ಣಯಿಸುವದು ನಂಬಿಕೆಯ ಮೂಲಕವೇ.ಹಾಗಾದರೆ ನಂಬಿಕೆಯಿಂದ ನ್ಯಾಯಪ್ರಮಾಣವನ್ನು ನಿರರ್ಥಕ ಮಾಡುತ್ತೇವೋ? ಹಾಗೆ ಎಂದಿಗೂ ಅಲ್ಲ; ಹೌದು, ನಾವು ನ್ಯಾಯಪ್ರಮಾಣವನ್ನು ಸ್ಥಿರಪಡಿಸುತ್ತೇವೆ.
- Acts 10:34–35 ಅಪೊಸ್ತಲರ ಕೃತ್ಯಗಳು 10:34–35ಆಗ ಪೇತ್ರನು ತನ್ನ ಬಾಯಿ ತೆರೆದು ಹೇಳಿದ್ದೇನಂದರೆ--ನಿಜವಾಗಿಯೂ ದೇವರು ಪಕ್ಷಪಾತಿ ಅಲ್ಲವೆಂದು ನಾನು ತಿಳಿದಿದ್ದೇನೆ. ಆದರೆ ಪ್ರತಿ ಯೊಂದು ಜನಾಂಗದವರಲ್ಲಿ ದೇವರಿಗೆ ಭಯಪಟ್ಟು ನೀತಿಯನ್ನು ನಡಿಸುವವನು ಆತನಿಗೆ ಮೆಚ್ಚಿಕೆಯಾ ಗಿದ್ದಾನೆ.
- Matthew 15:28 ಮತ್ತಾಯನು 15:28ಆಗ ಯೇಸು ಪ್ರತ್ಯುತ್ತರವಾಗಿ ಆಕೆಗೆ--ಓ ಸ್ತ್ರೀಯೇ, ನಿನ್ನ ನಂಬಿಕೆಯು ದೊಡ್ಡದು; ನೀನು ಇಷ್ಟಪಟ್ಟಂತೆಯೇ ನಿನಗಾಗಲಿ ಎಂದು ಹೇಳಿ ದನು. ಮತ್ತು ಆಕೆಯ ಮಗಳು ಅದೇ ಗಳಿಗೆಯಲ್ಲಿ ಸ್ವಸ್ಥಳಾದಳು.
- Philippians 3:3 ಫಿಲಿಪ್ಪಿಯವರಿಗೆ 3:3ಆತ್ಮದಲ್ಲಿ ದೇವರನ್ನು ಆರಾಧಿಸುವವರೂ ಕ್ರಿಸ್ತ ಯೇಸುವಿನಲ್ಲಿ ಸಂತೋಷಿಸುವವರೂ ಶರೀರದಲ್ಲಿ ಭರವಸೆಯಿಲ್ಲದವರೂ ಆದ ನಾವೇ ಸುನ್ನತಿಯವರಾಗಿ ದ್ದೇವೆ.
- Acts 10:2–4 ಅಪೊಸ್ತಲರ ಕೃತ್ಯಗಳು 10:2–4ಅವನು ಭಕ್ತನೂ ತನ್ನ ಮನೆಯವರೆಲ್ಲರ ಸಹಿತವಾಗಿ ದೇವರಿಗೆ ಭಯಪಡುವವನೂ ಆಗಿದ್ದು ಜನರಿಗೆ ಬಹಳವಾಗಿ ದಾನವನ್ನು ಮಾಡುತ್ತಾ ದೇವರಿಗೆ ನಿತ್ಯವೂ ಪ್ರಾರ್ಥನೆ ಮಾಡುತ್ತಾ ಇದ್ದನು. ಹಗಲಿನಲ್ಲಿ ಸುಮಾರು ಒಂಭತ್ತನೆಯ ತಾಸಿಗೆ (ಮೂರು ಘಂಟೆಗೆ) ಅವನಿಗಾದ ದರ್ಶನದಲ್ಲಿ ಒಬ್ಬ ದೇವದೂತನು ಅವನ ಬಳಿಗೆ ಬಂದು--ಕೊರ್ನೇ ಲ್ಯನೇ ಎಂದು ಕರೆಯುವದನ್ನು ಅವನು ಪ್ರತ್ಯಕ್ಷವಾಗಿ ಕಂಡನು. ಅವನು ಆ ದೂತನನ್ನು ದೃಷ್ಟಿಸಿ ನೋಡಿ ಭಯಹಿಡಿದವನಾಗಿ--ಕರ್ತನೇ, ಇದೇನು ಎಂದು ಕೇಳಲು ದೂತನು ಅವನಿಗೆ--ನಿನ್ನ ಪ್ರಾರ್ಥನೆಗಳೂ ನಿನ್ನ ದಾನಗಳೂ ದೇವರ ಮುಂದೆ ಜ್ಞಾಪಕಾರ್ಥವಾಗಿ ಮೇಲಕ್ಕೇರಿ ಬಂದವು.
- Matthew 8:11–12 ಮತ್ತಾಯನು 8:11–12ನಾನು ನಿಮಗೆ ಹೇಳುವದೇನಂದರೆ--ಬಹಳ ಜನರು ಪೂರ್ವದಿಂದಲೂ ಪಶ್ಚಿಮದಿಂದಲೂ ಬಂದು ಪರ ಲೋಕರಾಜ್ಯದಲ್ಲಿ ಅಬ್ರಹಾಮ್ ಇಸಾಕ್ ಯಾಕೋಬ್ ಅವರೊಂದಿಗೆ ಕೂತುಕೊಳ್ಳುವರು. ಆದರೆ ರಾಜ್ಯದ ಮಕ್ಕಳು ಹೊರಗೆ ಕತ್ತಲೆಯಲ್ಲಿ ದೊಬ್ಬಲ್ಪಡುವರು; ಅಲ್ಲಿ ಗೋಳಾಟವೂ ಹಲ್ಲು ಕಡಿಯೋಣವೂ ಇರುವವು.
- Isaiah 56:6–7 ಯೆಶಾಯ 56:6–7ಕರ್ತನನ್ನು ಸೇವಿಸುವದಕ್ಕೂ ಆತನ ಹೆಸರನ್ನು ಪ್ರೀತಿಮಾಡುವದಕ್ಕೂ ಆತನ ಸೇವಕರಾಗಿ ರುವದಕ್ಕೂ ತಾವೇ ಕರ್ತನೊಂದಿಗೆ ಸೇರಿಕೊಂಡಿರುವ ಅನ್ಯರ ಮಕ್ಕಳನ್ನು ಸಬ್ಬತ್ ದಿನವನ್ನು ಅಪವಿತ್ರ ಮಾಡದೆ ಕೈಕೊಳ್ಳುವ ಪ್ರತಿಯೊಬ್ಬನನ್ನೂ ನನ್ನ ಒಡಂಬಡಿಕೆಯನ್ನು ಹಿಡಿದುಕೊಂಡಿರುವವರನೂ ನನ್ನ ಪರಿಶುದ್ಧ ಪರ್ವತಕ್ಕೆ ತರುತ್ತೇನೆ; ನನ್ನ ಪ್ರಾರ್ಥನೆಯ ಆಲಯದಲ್ಲಿ ಅವರಿಗೆ ಆನಂದವ ನ್ನುಂಟು ಮಾಡುವೆನು; ನನ್ನ ಯಜ್ಞವೇದಿಯ ಮೇಲೆ ಅವರು ಅರ್ಪಿಸುವ ದಹನಬಲಿಗಳೂ, ಯಜ್ಞಗಳೂ ನನಗೆ ಒಪ್ಪಿಗೆಯಾಗುವವು; ಯಾಕಂದರೆ ನನ್ನ ಆಲ ಯವು ಸಮಸ್ತ ಜನಗಳಿಗೆ ಪ್ರಾರ್ಥನಾಲಯವು ಎಂದು ಕರೆಯಲ್ಪಡುವದು.
- Ephesians 2:11 ಎಫೆಸದವರಿಗೆ 2:11ಆದಕಾರಣ ಪೂರ್ವಕಾಲದಲ್ಲಿ ಶಾರೀರಿಕವಾಗಿ ಅನ್ಯಜನರಾಗಿದ್ದು ಶರೀರದಲ್ಲಿ ಕೈಗಳಿಂದ ಮಾಡಲ್ಪಟ ಸುನ್ನತಿಯಿದ್ದವರೆಂದು ಕರೆಯಲ್ಪಟ್ಟವರಿಂದ ಸುನ್ನತಿಯಿಲ್ಲ ದವರೆಂದು ನೀವು ಕರೆಯಲ್ಪಟ್ಟಿದ್ದೀರಿ.
Original words (Greek)
- Therefore · G3767οὖν oûn
- if · G1437ἐάν eán
- uncircumcision · G203ἀκροβυστία akrobystía
- keep · G5442φυλάσσω phylássō
- righteousness · G1345δικαίωμα dikaíōma
- law · G3551νόμος nómos
- not · G3780οὐχί ouchí
- his · G846αὐτός autós
- uncircumcision · G203ἀκροβυστία akrobystía
- counted · G3049λογίζομαι logízomai
- for · G1519εἰς eis
- circumcision · G4061περιτομή peritomḗ