Romans · chapter 2 · verse 28
Romans 2:28 in Kannada
ಹೊರಗೆ ಯೆಹೂದ್ಯನಾಗಿರುವವನು ಯೆಹೂದ್ಯನಲ್ಲ; ಹೊರಗೆ ಶರೀರದಲ್ಲಿ ಮಾಡಿರುವ ಸುನ್ನತಿಯು ಸುನ್ನತಿಯಲ್ಲ.ಆದರೆ ಒಳಗೆ ಯೆಹೂದ್ಯ ನಾಗಿರುವವನೇ ಯೆಹೂದ್ಯನು; ಸುನ್ನತಿಯು ಹೃದಯಕ್ಕೆ ಸಂಬಂಧಪಟ್ಟದ್ದಾಗಿ ಅಕ್ಷರೀಕವಾಗಿರದೆ ಆತ್ಮೀಕವಾದದ್ದೇ ಆಗಿದೆ. ಹೀಗೆ ಅವನ ಹೊಗಳಿಕೆಯು ಮನುಷ್ಯರಿಂದಾ ಗಿರದೆ ದೇವರಿಂದಲೇ ಆಗಿರುವದು.
Horage yehoodyanaagiruvavanu yehoodyanalla; horage shareeradalli maadiruva sunnatiyu sunnatiyalla.aadare olage yehoodya naagiruvavane yehoodyanu; sunnatiyu hrudayakke sambandhapattaddaagi akshareekavaagirade aatmeekavaadadde aagide. Heege avana hogalikeyu manushyarindaa girade devarindale aagiruvadu.
Romans 2:28 in English
- King James Version (KJV)
- For he is not a Jew, which is one outwardly; neither [is that] circumcision, which is outward in the flesh:
- World English Bible (WEB)
- For he is not a Jew who is one outwardly, neither is that circumcision which is outward in the flesh;
- American Standard Version (ASV)
- For he is not a Jew who is one outwardly; neither is that circumcision which is outward in the flesh:
- Bible in Basic English (BBE)
- The true Jew is not one who is only so publicly, and circumcision is not that which may be seen in the flesh:
- Darby Translation (DBY)
- For he is not a Jew who [is] one outwardly, neither that circumcision which is outward in flesh;
- Webster's Bible (WBS)
- For he is not a Jew, who is one outwardly; neither [is that] circumcision, which is outward in the flesh:
- Young's Literal Translation (YLT)
- For he is not a Jew who is [so] outwardly, neither [is] circumcision that which is outward in flesh;
Read in context
- 26ಆದದರಿಂದ ಸುನ್ನತಿಯಿಲ್ಲದವನು ನ್ಯಾಯ ಪ್ರಮಾಣದ ನೀತಿಯನ್ನು ಕೈಕೊಂಡರೆ ಸುನ್ನತಿಯಿಲ್ಲದವನಾದ ಅವನಿಗೆ ಅದು ಸುನ್ನತಿಯೆಂದು ಎಣಿಸಲ್ಪಡುವದಿಲ್ಲವೋ?
- 27ಸ್ವಾಭಾವಿಕವಾಗಿ ಸುನ್ನತಿಯಿಲ್ಲದವನಾಗಿದ್ದು ನ್ಯಾಯಪ್ರಮಾಣ ವನ್ನು ನೆರವೇರಿಸುವದಾದರೆ ನ್ಯಾಯಪ್ರಮಾಣವೂ ಸುನ್ನತಿಯೂ ಇದ್ದು ನ್ಯಾಯಪ್ರಮಾಣವನ್ನು ವಿಾರಿ ನಡೆಯುವ ನಿನಗೆ ಅವನು ತೀರ್ಪು ಮಾಡುವ ದಿಲ್ಲವೋ?
- 28ಹೊರಗೆ ಯೆಹೂದ್ಯನಾಗಿರುವವನು ಯೆಹೂದ್ಯನಲ್ಲ; ಹೊರಗೆ ಶರೀರದಲ್ಲಿ ಮಾಡಿರುವ ಸುನ್ನತಿಯು ಸುನ್ನತಿಯಲ್ಲ.ಆದರೆ ಒಳಗೆ ಯೆಹೂದ್ಯ ನಾಗಿರುವವನೇ ಯೆಹೂದ್ಯನು; ಸುನ್ನತಿಯು ಹೃದಯಕ್ಕೆ ಸಂಬಂಧಪಟ್ಟದ್ದಾಗಿ ಅಕ್ಷರೀಕವಾಗಿರದೆ ಆತ್ಮೀಕವಾದದ್ದೇ ಆಗಿದೆ. ಹೀಗೆ ಅವನ ಹೊಗಳಿಕೆಯು ಮನುಷ್ಯರಿಂದಾ ಗಿರದೆ ದೇವರಿಂದಲೇ ಆಗಿರುವದು.
- 29ಆದರೆ ಒಳಗೆ ಯೆಹೂದ್ಯ ನಾಗಿರುವವನೇ ಯೆಹೂದ್ಯನು; ಸುನ್ನತಿಯು ಹೃದಯಕ್ಕೆ ಸಂಬಂಧಪಟ್ಟದ್ದಾಗಿ ಅಕ್ಷರೀಕವಾಗಿರದೆ ಆತ್ಮೀಕವಾದದ್ದೇ ಆಗಿದೆ. ಹೀಗೆ ಅವನ ಹೊಗಳಿಕೆಯು ಮನುಷ್ಯರಿಂದಾ ಗಿರದೆ ದೇವರಿಂದಲೇ ಆಗಿರುವದು.
Cross references
- Galatians 6:15 ಗಲಾತ್ಯದವರಿಗೆ 6:15ಕ್ರಿಸ್ತ ಯೇಸುವಿನಲ್ಲಿ ಸುನ್ನತಿಯಾಗುವದರಿಂದ ಏನೂ ಪ್ರಯೋಜನವಿಲ್ಲ, ಸುನ್ನತಿಯಾಗದೆ ಇರುವದ ರಿಂದಲೂ ಏನೂ ಪ್ರಯೋಜನವಿಲ್ಲ; ಆದರೆ ಹೊಸ ಸೃಷ್ಟಿಯೇ ಬೇಕು.
- Matthew 3:9 ಮತ್ತಾಯನು 3:9ಮತ್ತು -- ಅಬ್ರಹಾಮನು ನಮಗೆ ತಂದೆಯಾಗಿದ್ದಾನೆ ಎಂದು ನಿಮ್ಮ ನಿಮ್ಮೊಳಗೆ ಅಂದು ಕೊಳ್ಳಬೇಡಿರಿ; ಯಾಕಂದರೆ ದೇವರು ಅಬ್ರಹಾಮನಿಗೆ ಈ ಕಲ್ಲುಗಳಿಂದ ಮಕ್ಕಳನ್ನು ಎಬ್ಬಿಸ ಶಕ್ತನೆಂದು ನಾನು ನಿಮಗೆ ಹೇಳುತ್ತೇನೆ.
- Revelation 2:9 ಪ್ರಕಟನೆ 2:9ನಾನು ನಿನ್ನ ಕೃತ್ಯಗಳನ್ನೂ ಸಂಕಟವನ್ನೂ ಬಡತನವನೂ ಬಲ್ಲೆನು; (ಆದರೂ ನೀನು ಐಶ್ವರ್ಯವಂತನೇ). ಇದಲ್ಲದೆ ತಮ್ಮನ್ನು ಯೆಹೂದ್ಯರೆಂದು ಹೇಳಿಕೊಳ್ಳು ವವರ ದೂಷಣೆಯನ್ನು ನಾನು ಬಲ್ಲೆನು; ಅವರು ಯೆಹೂದ್ಯರಲ್ಲ, ಸೈತಾನನ ಸಭಾಮಂದಿರದವರಾಗಿ ದ್ದಾರೆ.
- Romans 9:6–8 ರೋಮಾಪುರದವರಿಗೆ 9:6–8ದೇವರ ಮಾತು ನಿರರ್ಥಕವಾಯಿತೆಂತಲ್ಲ; ಯಾಕಂದರೆ ಇಸ್ರಾಯೇಲ್ಯರಿಗೆ ಸಂಬಂಧಪಟ್ಟವ ರೆಲ್ಲರೂ ಇಸ್ರಾಯೇಲ್ಯರಲ್ಲ; ಇಲ್ಲವೆ ಅವರು ಅಬ್ರಹಾಮನ ಸಂತತಿಯವರಾದ ಕಾರಣ ಅವರೆ ಲ್ಲರೂ ಮಕ್ಕಳಲ್ಲ; ಆದರೆ--ಇಸಾಕನಲ್ಲಿಯೇ ನಿನ್ನ ಸಂತ ತಿಯು ಕರೆಯಲ್ಪಡುವದು ಎಂಬದೇ. ಅಂದರೆ--ಶರೀರ ಸಂಬಂಧವಾದ ಮಕ್ಕಳು ದೇವರ ಮಕ್ಕಳಲ್ಲ; ಆದರೆ ವಾಗ್ದಾನದ ಮಕ್ಕಳೇ ಆತನ ಸಂತತಿಯೆಂದು ಎಣಿಸಲ್ಪಟ್ಟಿದ್ದಾರೆ.
- Isaiah 48:1–2 ಯೆಶಾಯ 48:1–2ಇಸ್ರಾಯೇಲೆಂಬ ಹೆಸರಿನವರೂ ಯೆಹೂದವೆಂಬ ಒರತೆಯಿಂದ ಬಂದವರೂ ಆದ ಯಾಕೋಬನ ಮನೆತನದವರೇ, ಇದನ್ನು ಕೇಳಿರಿ; ಕರ್ತನ ಹೆಸರಿನ ಮೇಲೆ ಆಣೆಯಿಟ್ಟು, ಇಸ್ರಾಯೇಲಿನ ದೇವರನ್ನು ಸ್ಮರಿಸುತ್ತೀರಿ. ಆದರೆ ಸತ್ಯದಿಂದಲೂ ಅಥವಾ ನೀತಿಯಿಂದಲೂ ಅಲ್ಲ. ಅವರು ತಾವು ಪರಿಶುದ್ಧ ಪಟ್ಟಣದವರು ಎಂದು ಇಸ್ರಾಯೇಲಿನ ದೇವರ ಮೇಲೆ ಆತುಕೊಳ್ಳುತ್ತಾರೆ. ಸೈನ್ಯಗಳ ಕರ್ತನು ಎಂಬದು ಆತನ ಹೆಸರು.
- Romans 4:10–12 ರೋಮಾಪುರದವರಿಗೆ 4:10–12ಹಾಗಾದರೆ ಅದು ಯಾವಾಗ ಎಣಿಸಲ್ಪಟ್ಟಿತು? ಅವನಿಗೆ ಸುನ್ನತಿಯಾದ ಮೇಲೆಯೋ? ಸುನ್ನತಿಯಾಗು ವದಕ್ಕೆ ಮೊದಲೋ? ಸುನ್ನತಿಯಾದ ಮೇಲೆ ಅಲ್ಲ, ಸುನ್ನತಿಯಾಗುವದಕ್ಕೆ ಮೊದಲೇ ಎಣಿಸಲ್ಪಟ್ಟಿತು. ಆಮೇಲೆ ನೀತಿಗೆ ಮುದ್ರೆಯಾಗಿ ಸುನ್ನತಿಯನ್ನು ಗುರುತಾಗಿ ಹೊಂದಿದನು. ಇದು ಸುನ್ನತಿಯಾಗುವದಕ್ಕೆ ಮೊದಲೇ ಅವನಿಗಿದ್ದ ನಂಬಿಕೆಯಿಂದಾಯಿತು. ಹೀಗೆ ಅವನು ನಂಬುವವರೆಲ್ಲರಿಗೆ ಅಂದರೆ ಅವರು ಸುನ್ನತಿ ಯಿಲ್ಲದವರಾದಾಗ್ಯೂ ಅವರಿಗೆ ತಂದೆಯಾದನು; ಹೀಗೆ ಅವರೂ ನೀತಿವಂತರೆಂದು ಎಣಿಸಲ್ಪಡುವರು. ಇದಲ್ಲದೆ ಸುನ್ನತಿಯಿದ್ದವರಿಗೆ ತಂದೆಯಾದವನು ಸುನ್ನತಿಯವರಿಗೆ ಮಾತ್ರವಲ್ಲ, ಆದರೆ ಅಬ್ರಹಾಮನು ಸುನ್ನತಿ ಮಾಡಿಸಿಕೊಳ್ಳುವದಕ್ಕೆ ಮುಂಚೆ ನಡೆದ ನಂಬಿಕೆಯ ಹೆಜ್ಜೆಜಾಡಿನಲ್ಲಿ ನಡೆಯುತ್ತಿರುವ ಸುನ್ನತಿ ಯಿಲ್ಲದವರಿಗೂ ತಂದೆಯಾಗಿದ್ದಾನೆ.
- Hosea 1:6–9 ಹೋಶೇಯ 1:6–9ಅವಳು ತಿರುಗಿ ಬಸುರಾಗಿ ಮಗಳನ್ನು ಹೆತ್ತಳು. ಆಗ ದೇವರು ಅವನಿಗೆ-- ಅವಳನ್ನು ಲೋರುಹಾಮ ಎಂಬ ಹೆಸರಿನಿಂದ ಕರೆ; ಯಾಕಂದರೆ ನಾನು ಇನ್ನು ಮೇಲೆ ಇಸ್ರಾಯೇಲಿನ ಮನೆತನ ದವರನ್ನು ಕರುಣಿಸುವದೇ ಇಲ್ಲ; ಆದರೆ ನಾನು ಅವರನ್ನು ಸಂಪೂರ್ಣವಾಗಿ ತೆಗೆದುಬಿಡುತ್ತೇನೆ. ನಾನು ಯೆಹೂದದ ಮನೆತನದವರನ್ನು ಕರುಣಿಸಿ ಅವರನ್ನು ಬಿಲ್ಲಿನಿಂದಲಾದರೂ ಕತ್ತಿಯಿಂದಲಾದರೂ ಯುದ್ಧದಿಂದಲಾದರೂ ಕುದುರೆಗಳಿಂದಲಾದರೂ ಇಲ್ಲವೆ ಕುದುರೆಯ ಸವಾರರಿಂದಲಾದರೂ ರಕ್ಷಿಸು ವದಿಲ್ಲ; ಆದರೆ ಅವರನ್ನು ಅವರ ದೇವರಾದ ಕರ್ತ ನಿಂದ ರಕ್ಷಿಸುವೆನು ಅಂದನು. ಆಕೆಯು ಲೊರು ಹಾಮಳನ್ನು ಮೊಲೆ ಬಿಡಿಸಿದ ಮೇಲೆ ಗರ್ಭಿಣಿಯಾಗಿ ಒಬ್ಬ ಮಗನನ್ನು ಹೆತ್ತಳು. ಆಗ ದೇವರು--ಅವನ ಹೆಸರನ್ನು ಲೋ ಅಮ್ಮಿ ಎಂದು ಕರೆ, ಯಾಕಂದರೆ ನೀವು ನನ್ನ ಜನರಲ್ಲ, ನಾನು ನಿಮ್ಮ ದೇವರಾಗಿರುವದಿಲ್ಲ ಅಂದನು.
- Psalm 73:1 ಕೀರ್ತನೆಗಳು 73:1ನಿಜವಾಗಿ ದೇವರು ಇಸ್ರಾಯೇಲಿಗೂ ಶುದ್ಧ ಹೃದಯದವರಿಗೂ ಒಳ್ಳೆಯವನು.
- 1 Peter 3:21 1 ಪೇತ್ರನು 3:21ಆ ನೀರಿಗೆ ಅನುರೂಪವಾದ ಬಾಪ್ತಿಸ್ಮವು ಯೇಸು ಕ್ರಿಸ್ತನ ಪುನರುತ್ಥಾನದ ಮೂಲಕ ಈಗ ನಮ್ಮನ್ನು ರಕ್ಷಿಸುತ್ತದೆ; (ಅದು ಮೈಕೊಳೆಯನ್ನು ಹೋಗಲಾಡಿ ಸುವಂಥದ್ದಲ್ಲ. ಆದರೆ ದೇವರ ಕಡೆಗಿರುವ ನಮ್ಮ ಒಳ್ಳೇ ಮನಸ್ಸಾಕ್ಷಿಯ ಉತ್ತರವಾಗಿದೆ).ಆತನು ಪರಲೋಕಕ್ಕೆ ಹೋಗಿ ದೇವರ ಬಲಗಡೆಯಲ್ಲಿದ್ದಾನೆ; ದೂತರೂ ಪ್ರಭುತ್ವ ಗಳೂ ಅಧಿಕಾರಗಳೂ ಆತನಿಗೆ ಅಧೀನ ಮಾಡಲ್ಪಟ್ಟಿದ್ದಾರೆ.
- John 1:47 ಯೋಹಾನನು 1:47ಯೇಸು ತನ್ನ ಬಳಿಗೆ ಬರುವ ನತಾನಯೇಲನನ್ನು ಕಂಡು ಅವನ ವಿಷಯವಾಗಿ--ಇಗೋ, ಇವನು ನಿಜ ವಾಗಿಯೂ ಇಸ್ರಾಯೇಲನು; ಇವನಲ್ಲಿ ಕಪಟವಿಲ್ಲ ಅಂದನು.
- Isaiah 1:9–15 ಯೆಶಾಯ 1:9–15ಸೈನ್ಯ ಗಳ ಕರ್ತನು ನಮಗೆ ಮಿಕ್ಕಿದ್ದರಲ್ಲಿ ಸ್ವಲ್ಪವನ್ನಾದರೂ ಉಳಿಸದೆ ಹೋಗಿದ್ದರೆ, ಸೊದೋಮಿನ ಹಾಗೆಯೂ ಗೊಮೋರಕ್ಕೆ ಸಮಾನವಾಗಿಯೂ ಇರುತ್ತಿದ್ದೆವು. ಸೊದೋಮಿನ ಅಧಿಪತಿಗಳೇ, ನೀವು ಕರ್ತನ ಮಾತನ್ನು ಕೇಳಿರಿ; ಗೊಮೋರದ ಪ್ರಜೆಗಳೇ, ನಮ್ಮ ದೇವರ ನ್ಯಾಯಪ್ರಮಾಣಕ್ಕೆ ಕಿವಿಗೊಡಿರಿ. ನೀವು ಲೆಕ್ಕವಿಲ್ಲದಷ್ಟು ಯಜ್ಞಗಳನ್ನು ನನಗೆ ಅರ್ಪಿಸುವ ಉದ್ದೇಶವೇನು? ಎಂದು ಕರ್ತನು ನುಡಿಯುತ್ತಾನೆ. ಟಗರುಗಳ ದಹನಬಲಿಗಳು, ಪುಷ್ಟಿ ಪ್ರಾಣಿಗಳ ಕೊಬ್ಬು, ಇದೆಲ್ಲಾ ನನಗೆ ಸಾಕಾಯಿತು; ಹೋರಿ, ಕುರಿ, ಹೋತಗಳ ರಕ್ತಕ್ಕೆ ನಾನು ಸಂತೋಷಪಡುವ ದಿಲ್ಲ. ನೀವು ನನ್ನ ಸನ್ನಿಧಿಯಲ್ಲಿ ಕಾಣಿಸಿಕೊಳ್ಳ ಬೇಕೆಂದು ಬರುತ್ತೀರಲ್ಲಾ; ನನ್ನ ಪ್ರಾಕಾರಗಳನ್ನು ತುಳಿ ಯಲು ಯಾರು ನಿಮ್ಮನ್ನು ಕೇಳಿಕೊಂಡರು? ಇನ್ನು ವ್ಯರ್ಥವಾದ ಕಾಣಿಕೆಗಳನ್ನು ತಾರದಿರಿ, ಧೂಪವು ನನಗೆ ಅಸಹ್ಯ, ಹುಣ್ಣಿಮೆಗಳೂ ಸಬ್ಬತ್ತುಗಳೂ ಸಭೆಗಳು ಕೂಡುವದೂ ಇವು ಬೇಡ; ದುಷ್ಟತನದಿಂದ ಕೂಡಿದ ವಿಶೇಷ ಕೂಟವನ್ನು ಸಹ ನಾನು ಸಹಿಸಲಾರೆನು. ನಿಮ್ಮ ಹುಣ್ಣಿಮೆಗಳನ್ನೂ ನೇಮಕವಾದ ಹಬ್ಬಗಳನ್ನೂ ನನ್ನ ಆತ್ಮವು ಹಗೆಮಾಡುತ್ತದೆ. ಅವು ನನಗೆ ಭಾರ, ಸಹಿಸಲು ಬೇಸರ. ನೀವು ನಿಮ್ಮ ಕೈಗಳನ್ನು ಚಾಚಲು ನಾನು ನನ್ನ ಕಣ್ಣುಗಳನ್ನು ನಿಮಗೆ ಮರೆಮಾಡುವೆನು; ಹೌದು, ನೀವು ಬಹು ಪ್ರಾರ್ಥನೆಗಳನ್ನು ಮಾಡಿ ದರೂ ನಾನು ಕೇಳೆನು, ನಿಮ್ಮ ಕೈಗಳು ರಕ್ತದಿಂದ ತುಂಬಿಯವೆ.
- Jeremiah 9:26 ಯೆರೆಮೀಯ 9:26ಐಗುಪ್ತವನ್ನೂ ಯೆಹೂದ ವನ್ನೂ ಎದೋಮನ್ನೂ ಅಮ್ಮೋನನ ಮಕ್ಕಳನ್ನೂ ಮೋವಾಬನ್ನೂ ಅರಣ್ಯ ನಿವಾಸಿಗಳಾಗಿರುವ ಕಟ್ಟ ಕಡೆಯ ಮೂಲೆಯಲ್ಲಿ ಇರುವವರನ್ನೂ ನಾನು ಶಿಕ್ಷಿಸುವ ದಿನಗಳು ಬರುತ್ತವೆ. ಈ ಜನಾಂಗಗಳವರು ಸುನ್ನತಿ ಯಿಲ್ಲದವರು; ಇಸ್ರಾಯೇಲಿನ ಮನೆತನದವರೆಲ್ಲರೂ ಹೃದಯದಲ್ಲಿ ಸುನ್ನತಿಯಿಲ್ಲದವರಾಗಿದ್ದಾರೆ.