Romans · chapter 3 · verse 1
Romans 3:1 in Kannada
ಹಾಗಾದರೆ ಯೆಹೂದ್ಯರಿಗಿರುವ ಪ್ರಾಧಾ ನ್ಯತೆ ಏನು? ಇಲ್ಲವೆ ಸುನ್ನತಿಯಿಂದ ಲಾಭವೇನು?
Haagaadare yehoodyarigiruva praadhaa nyate enu? Illave sunnatiyinda laabhavenu?
Romans 3:1 in English
- King James Version (KJV)
- What advantage then hath the Jew? or what profit [is there] of circumcision?
- World English Bible (WEB)
- Then what advantage does the Jew have? Or what is the profit of circumcision?
- American Standard Version (ASV)
- What advantage then hath the Jew? or what is the profit of circumcision?
- Bible in Basic English (BBE)
- How then is the Jew better off? or what profit is there in circumcision?
- Darby Translation (DBY)
- What then [is] the superiority of the Jew? or what the profit of circumcision?
- Webster's Bible (WBS)
- What advantage then hath the Jew? or what profit [is there] of circumcision?
- Young's Literal Translation (YLT)
- What, then, [is] the superiority of the Jew? or what the profit of the circumcision?
Read in context
- 1ಹಾಗಾದರೆ ಯೆಹೂದ್ಯರಿಗಿರುವ ಪ್ರಾಧಾ ನ್ಯತೆ ಏನು? ಇಲ್ಲವೆ ಸುನ್ನತಿಯಿಂದ ಲಾಭವೇನು?
- 2ಎಲ್ಲಾ ವಿಷಯಗಳಲ್ಲಿಯೂ ಬಹಳ ಉಂಟು; ಮುಖ್ಯವಾಗಿ ದೈವೋಕ್ತಿಗಳು ಅವರಿಗೆ ಒಪ್ಪಿಸಲ್ಪಟ್ಟವು.
- 3ಕೆಲವರು ನಂಬದಿದ್ದರೆ ಏನು? ಅವರ ಅಪನಂಬಿಕೆಯು ದೇವರ ವಿಷಯವಾದ ನಂಬಿಕೆಯನ್ನು ನಿರರ್ಥಕ ಮಾಡುವದೋ?
Cross references
- Romans 2:25–29 ರೋಮಾಪುರದವರಿಗೆ 2:25–29ನೀನು ನ್ಯಾಯಪ್ರಮಾಣವನ್ನು ಕೈಕೊಂಡರೆ ಸುನ್ನತಿಯು ನಿಜವಾಗಿಯೂ ಪ್ರಯೋಜನವಾದದ್ದೇ. ಆದರೆ ನೀನು ನ್ಯಾಯಪ್ರಮಾಣವನ್ನು ವಿಾರುವದಾದರೆ ನಿನ್ನ ಸುನ್ನತಿಯು ಸುನ್ನತಿ ಅಲ್ಲ. ಆದದರಿಂದ ಸುನ್ನತಿಯಿಲ್ಲದವನು ನ್ಯಾಯ ಪ್ರಮಾಣದ ನೀತಿಯನ್ನು ಕೈಕೊಂಡರೆ ಸುನ್ನತಿಯಿಲ್ಲದವನಾದ ಅವನಿಗೆ ಅದು ಸುನ್ನತಿಯೆಂದು ಎಣಿಸಲ್ಪಡುವದಿಲ್ಲವೋ? ಸ್ವಾಭಾವಿಕವಾಗಿ ಸುನ್ನತಿಯಿಲ್ಲದವನಾಗಿದ್ದು ನ್ಯಾಯಪ್ರಮಾಣ ವನ್ನು ನೆರವೇರಿಸುವದಾದರೆ ನ್ಯಾಯಪ್ರಮಾಣವೂ ಸುನ್ನತಿಯೂ ಇದ್ದು ನ್ಯಾಯಪ್ರಮಾಣವನ್ನು ವಿಾರಿ ನಡೆಯುವ ನಿನಗೆ ಅವನು ತೀರ್ಪು ಮಾಡುವ ದಿಲ್ಲವೋ? ಹೊರಗೆ ಯೆಹೂದ್ಯನಾಗಿರುವವನು ಯೆಹೂದ್ಯನಲ್ಲ; ಹೊರಗೆ ಶರೀರದಲ್ಲಿ ಮಾಡಿರುವ ಸುನ್ನತಿಯು ಸುನ್ನತಿಯಲ್ಲ.ಆದರೆ ಒಳಗೆ ಯೆಹೂದ್ಯ ನಾಗಿರುವವನೇ ಯೆಹೂದ್ಯನು; ಸುನ್ನತಿಯು ಹೃದಯಕ್ಕೆ ಸಂಬಂಧಪಟ್ಟದ್ದಾಗಿ ಅಕ್ಷರೀಕವಾಗಿರದೆ ಆತ್ಮೀಕವಾದದ್ದೇ ಆಗಿದೆ. ಹೀಗೆ ಅವನ ಹೊಗಳಿಕೆಯು ಮನುಷ್ಯರಿಂದಾ ಗಿರದೆ ದೇವರಿಂದಲೇ ಆಗಿರುವದು. ಆದರೆ ಒಳಗೆ ಯೆಹೂದ್ಯ ನಾಗಿರುವವನೇ ಯೆಹೂದ್ಯನು; ಸುನ್ನತಿಯು ಹೃದಯಕ್ಕೆ ಸಂಬಂಧಪಟ್ಟದ್ದಾಗಿ ಅಕ್ಷರೀಕವಾಗಿರದೆ ಆತ್ಮೀಕವಾದದ್ದೇ ಆಗಿದೆ. ಹೀಗೆ ಅವನ ಹೊಗಳಿಕೆಯು ಮನುಷ್ಯರಿಂದಾ ಗಿರದೆ ದೇವರಿಂದಲೇ ಆಗಿರುವದು.
- Genesis 25:32 ಆದಿಕಾಂಡ 25:32ಏಸಾವನು--ಇಗೋ, ನಾನು ಸಾಯುತ್ತಿದ್ದೇನೆ; ಚೊಚ್ಚಲತನದ ಹಕ್ಕಿನಿಂದ ನನಗೇನು ಲಾಭ ಅಂದನು.
- Ecclesiastes 6:11 ಪ್ರಸಂಗಿ 6:11ವ್ಯರ್ಥವಾದದ್ದನ್ನು ವೃದ್ಧಿಗೊಳಿಸುವ ಅನೇಕ ಸಂಗತಿ ಗಳು ಇರುವದರಿಂದ ಮನುಷ್ಯನಿಗೆ ಏನು ಲಾಭ?ನೆರಳಿನಂತೆ ತನ್ನ ವ್ಯರ್ಥವಾದ ಜೀವಿತದ ಎಲ್ಲಾ ದಿವಸಗಳು ಕಳೆಯುವ ಮನುಷ್ಯನಿಗೆ ಈ ಜೀವಿತ ದಲ್ಲಿ ಯಾವದು ಒಳ್ಳೇದೆಂದು ಯಾವನು ಬಲ್ಲನು? ಸೂರ್ಯನ ಕೆಳಗೆ ಅವನ ತರುವಾಯ ಏನು ಇರುವ ದೆಂದು ಯಾವ ಮನುಷ್ಯನಿಗೆ ಹೇಳಬಲ್ಲನು.
- Ecclesiastes 6:8 ಪ್ರಸಂಗಿ 6:8ಬುದ್ಧಿಹೀನನಿಗಿಂತ ಜ್ಞಾನಿಗೆ ಹೆಚ್ಚು ಏನಿದೆ? ಜೀವಿತರ ಮುಂದೆ ನಡೆಯುವದಕ್ಕೆ ತಿಳಿದ ಬಡವನಿಗೆ ಏನಿದೆ?
- Hebrews 13:9 ಇಬ್ರಿಯರಿಗೆ 13:9ನಾನಾ ವಿಧವಾದ ಅನ್ಯೋಪದೇಶಗಳ ಸೆಳವಿಗೆ ಸಿಕ್ಕಬೇಡಿರಿ. ಯಾಕಂದರೆ ಕೃಪೆಯೊಂದಿಗೆ ಹೃದಯವನ್ನು ದೃಢ ಮಾಡಿಕೊಳ್ಳುವದು ಉತ್ತಮವೇ; ಭೋಜನ ಪದಾರ್ಥಗಳಲ್ಲಿ ಮಗ್ನರಾದವರು ಅವುಗಳಲ್ಲಿ ಏನೂ ಪ್ರಯೋಜನ ಹೊಂದಲಿಲ್ಲ.
- 1 Corinthians 15:32 1 ಕೊರಿಂಥದವರಿಗೆ 15:32ನಾನು ಎಫೆಸದಲ್ಲಿ ಮೃಗಗಳೊಂದಿಗೆ ಯುದ್ಧ ಮಾಡಿದ್ದು ಕೇವಲ ಮನುಷ್ಯರೀತಿಯಾಗಿದ್ದು ಸತ್ತವರು ಎದ್ದು ಬರುವದಿಲ್ಲವಾದರೆ ಅದರಿಂದ ನನಗೇನು ಪ್ರಯೋಜನ? ಹಾಗಾದರೆ ನಾವು ತಿನ್ನೋಣ, ಕುಡಿಯೋಣ, ನಾಳೆ ಸಾಯುತ್ತೇವಲ್ಲಾ.
- Malachi 3:14 ಮಲಾಕಿಯ 3:14ನೀವು--ದೇವರನ್ನು ಸೇವಿಸುವದು ವ್ಯರ್ಥವೆಂದೂ ನಾವು ಆತನ ನಿಯಮಗಳನ್ನು ಕೈಕೊಂಡು ಸೈನ್ಯಗಳ ಕರ್ತನ ಮುಂದೆ ದುಃಖವಾಗಿ ನಡೆದದ್ದರಿಂದ ಏನು ಪ್ರಯೋ ಜನವೆಂದೂ ಹೇಳಿದಿರಿ.
- Isaiah 1:11–15 ಯೆಶಾಯ 1:11–15ನೀವು ಲೆಕ್ಕವಿಲ್ಲದಷ್ಟು ಯಜ್ಞಗಳನ್ನು ನನಗೆ ಅರ್ಪಿಸುವ ಉದ್ದೇಶವೇನು? ಎಂದು ಕರ್ತನು ನುಡಿಯುತ್ತಾನೆ. ಟಗರುಗಳ ದಹನಬಲಿಗಳು, ಪುಷ್ಟಿ ಪ್ರಾಣಿಗಳ ಕೊಬ್ಬು, ಇದೆಲ್ಲಾ ನನಗೆ ಸಾಕಾಯಿತು; ಹೋರಿ, ಕುರಿ, ಹೋತಗಳ ರಕ್ತಕ್ಕೆ ನಾನು ಸಂತೋಷಪಡುವ ದಿಲ್ಲ. ನೀವು ನನ್ನ ಸನ್ನಿಧಿಯಲ್ಲಿ ಕಾಣಿಸಿಕೊಳ್ಳ ಬೇಕೆಂದು ಬರುತ್ತೀರಲ್ಲಾ; ನನ್ನ ಪ್ರಾಕಾರಗಳನ್ನು ತುಳಿ ಯಲು ಯಾರು ನಿಮ್ಮನ್ನು ಕೇಳಿಕೊಂಡರು? ಇನ್ನು ವ್ಯರ್ಥವಾದ ಕಾಣಿಕೆಗಳನ್ನು ತಾರದಿರಿ, ಧೂಪವು ನನಗೆ ಅಸಹ್ಯ, ಹುಣ್ಣಿಮೆಗಳೂ ಸಬ್ಬತ್ತುಗಳೂ ಸಭೆಗಳು ಕೂಡುವದೂ ಇವು ಬೇಡ; ದುಷ್ಟತನದಿಂದ ಕೂಡಿದ ವಿಶೇಷ ಕೂಟವನ್ನು ಸಹ ನಾನು ಸಹಿಸಲಾರೆನು. ನಿಮ್ಮ ಹುಣ್ಣಿಮೆಗಳನ್ನೂ ನೇಮಕವಾದ ಹಬ್ಬಗಳನ್ನೂ ನನ್ನ ಆತ್ಮವು ಹಗೆಮಾಡುತ್ತದೆ. ಅವು ನನಗೆ ಭಾರ, ಸಹಿಸಲು ಬೇಸರ. ನೀವು ನಿಮ್ಮ ಕೈಗಳನ್ನು ಚಾಚಲು ನಾನು ನನ್ನ ಕಣ್ಣುಗಳನ್ನು ನಿಮಗೆ ಮರೆಮಾಡುವೆನು; ಹೌದು, ನೀವು ಬಹು ಪ್ರಾರ್ಥನೆಗಳನ್ನು ಮಾಡಿ ದರೂ ನಾನು ಕೇಳೆನು, ನಿಮ್ಮ ಕೈಗಳು ರಕ್ತದಿಂದ ತುಂಬಿಯವೆ.