Romans · chapter 3 · verse 27
Romans 3:27 in Kannada
ಹಾಗಾದರೆ ಹೊಗಳಿಕೊಳ್ಳುವದು ಹೇಗೆ? ಅದು ಇಲ್ಲದೆ ಹೋಯಿತು. ಯಾವ ನಿಯಮದಿಂದ? ಕ್ರಿಯೆಗಳಿಂದಲೋ? ಅಲ್ಲ; ವಿಶ್ವಾಸ ನಿಯಮವನ್ನು ಅನುಸರಿಸುವದರಿಂದಲೇ.
Haagaadare hogalikolluvadu hege? Adu illade hoyitu. Yaava niyamadinda? Kriyegalindalo? Alla; vishvaasa niyamavannu anusarisuvadarindale.
Romans 3:27 in English
- King James Version (KJV)
- Where [is] boasting then? It is excluded. By what law? of works? Nay: but by the law of faith.
- World English Bible (WEB)
- Where then is the boasting? It is excluded. By what kind of law? Of works? No, but by a law of faith.
- American Standard Version (ASV)
- Where then is the glorying? It is excluded. By what manner of law? of works? Nay: but by a law of faith.
- Bible in Basic English (BBE)
- What reason, then, is there for pride? It is shut out. By what sort of law? of works? No, but by a law of faith.
- Darby Translation (DBY)
- Where then [is] boasting? It has been excluded. By what law? of works? Nay, but by law of faith;
- Webster's Bible (WBS)
- Where [is] boasting then? It is excluded. By what law? of works? No; but by the law of faith.
- Young's Literal Translation (YLT)
- Where then [is] the boasting? it was excluded; by what law? of works? no, but by a law of faith:
Read in context
- 25ಈತನು ತನ್ನ ರಕ್ತದ ಮೂಲಕ ನಂಬಿಕೆಯಿದ್ದವರಿಗಾಗಿ ಪಾಪದ ಪ್ರಾಯಶ್ಚಿತ್ತವಾಗಿರಬೇಕೆಂದು ದೇವರು ಈತನನ್ನು ಮುಂದಿಟ್ಟನು. ದೇವರು ಹಿಂದಿನಕಾಲದ ಪಾಪಗಳನ್ನು ಸಹಿಸಿಕೊಂಡಿರಲಾಗಿ
- 26ತನ್ನ ನೀತಿಯನ್ನು ಈಗಿನ ಕಾಲದಲ್ಲಿ ಹೀಗೆ ತೋರಿಸಿ ತಾನು ನೀತಿವಂತನಾಗಿಯೂ ಯೇಸುವಿನಲ್ಲಿ ನಂಬಿಕೆಯಿಡುವವರನ್ನು ನೀತಿವಂತ ರೆಂದು ನಿರ್ಣಯಿಸುವವನಾಗಿಯೂ ಪ್ರಸಿದ್ಧಿಪಡಿಸಿ ಕೊಂಡನು.
- 27ಹಾಗಾದರೆ ಹೊಗಳಿಕೊಳ್ಳುವದು ಹೇಗೆ? ಅದು ಇಲ್ಲದೆ ಹೋಯಿತು. ಯಾವ ನಿಯಮದಿಂದ? ಕ್ರಿಯೆಗಳಿಂದಲೋ? ಅಲ್ಲ; ವಿಶ್ವಾಸ ನಿಯಮವನ್ನು ಅನುಸರಿಸುವದರಿಂದಲೇ.
- 28ಆದದರಿಂದ ನ್ಯಾಯ ಪ್ರಮಾಣದ ಕ್ರಿಯೆಗಳಿಲ್ಲದೆ ನಂಬಿಕೆಯಿಂದಲೇ ಮನು ಷ್ಯನು ನೀತಿವಂತನೆಂದು ನಿರ್ಣಯಿಸಲ್ಪಡುವನೆಂಬ ದಾಗಿ ನಾವು ತೀರ್ಮಾನಿಸಿಕೊಂಡಿದ್ದೇವಲ್ಲಾ.
- 29ದೇವರು ಯೆಹೂದ್ಯರಿಗೆ ಮಾತ್ರ ದೇವರಾಗಿ ದ್ದಾನೋ? ಅನ್ಯಜನಗಳಿಗೆ ಸಹ ದೇವರಲ್ಲವೇ? ಹೌದು, ಆತನು ಅನ್ಯಜನರಿಗೆ ಸಹ ದೇವರಾಗಿದ್ದಾನೆ;
Cross references
- Romans 4:2 ರೋಮಾಪುರದವರಿಗೆ 4:2ಅಬ್ರಹಾ ಮನು ಕ್ರಿಯೆಗಳಿಂದಲೇ ನೀತಿವಂತನಾದ ಪಕ್ಷದಲ್ಲಿ ಹೊಗಳಿಕೊಳ್ಳುವದಕ್ಕೆ ಅವನಿಗೆ ಅಸ್ಪದವಿರುವದು; ಆದರೆ ದೇವರ ಮುಂದೆ ಹೊಗಳಿಕೊಳ್ಳುವದಕ್ಕೆ ಆಸ್ಪದವಿರುವದಿಲ್ಲ.
- Romans 2:23 ರೋಮಾಪುರದವರಿಗೆ 2:23ನ್ಯಾಯಪ್ರಮಾಣದಲ್ಲಿ ಹೆಚ್ಚಳಪಡುವ ನೀನು ನ್ಯಾಯಪ್ರಮಾಣವನ್ನು ವಿಾರುವದರಿಂದ ದೇವ ರನ್ನು ಅವಮಾನಪಡಿಸುತ್ತೀಯೋ?
- 1 Corinthians 1:29–31 1 ಕೊರಿಂಥದವರಿಗೆ 1:29–31ಹೀಗಿರಲು ಆತನ ಮುಂದೆ ಹೊಗಳಿಕೊಳ್ಳುವದಕ್ಕೆ ಯಾರಿಗೂ ಆಸ್ಪದವಿಲ್ಲ. ಆದರೆ ನೀವು ಕ್ರಿಸ್ತ ಯೇಸುವಿನಲ್ಲಿ ರುವದು ಆತನಿಂದಲೇ; ಆತನು ನಮಗೆ ದೇವರ ಕಡೆಯಿಂದ ಜ್ಞಾನವು ನೀತಿ ಶುದ್ಧೀಕರಣ ವಿಮೋಚನೆ ಗಳಾಗಿ ಮಾಡಲ್ಪಟ್ಟಿದ್ದಾನೆ.ಹೆಚ್ಚಳ ಪಡುವವನು ಕರ್ತನಲ್ಲಿಯೇ ಹೆಚ್ಚಳಪಡಲಿ ಎಂದು ಬರೆಯಲ್ಪಟ್ಟಂತೆ ಆಯಿತು. ಹೆಚ್ಚಳ ಪಡುವವನು ಕರ್ತನಲ್ಲಿಯೇ ಹೆಚ್ಚಳಪಡಲಿ ಎಂದು ಬರೆಯಲ್ಪಟ್ಟಂತೆ ಆಯಿತು.
- Ephesians 2:8–10 ಎಫೆಸದವರಿಗೆ 2:8–10ನಂಬಿಕೆಯ ಮೂಲಕ ಕೃಪೆ ಯಿಂದಲೇ ನೀವು ರಕ್ಷಣೆ ಹೊಂದಿದವರಾಗಿದ್ದೀರಿ. ಆ ರಕ್ಷಣೆಯು ನಿಮ್ಮಿಂದುಂಟಾದದ್ದಲ್ಲ, ಅದು ದೇವರ ದಾನವೇ. ಅದು ಕ್ರಿಯೆಗಳಿಂದ ಉಂಟಾದದ್ದಲ್ಲ; ಆದದರಿಂದ ಹೊಗಳಿಕೊಳ್ಳುವದಕ್ಕೆ ಯಾರಿಗೂ ಆಸ್ಪದ ವಿಲ್ಲ. ದೇವರು ಮುಂದಾಗಿ ನೇಮಿಸಿದ ಸತ್ಕ್ರಿಯೆ ಗಳಲ್ಲಿ ನಾವು ನಡೆಯುವಂತೆ ಕ್ರಿಸ್ತ ಯೇಸುವಿನಲ್ಲಿ ಸೃಷ್ಟಿಸಲ್ಪಟ್ಟವರಾದ ನಾವು ಆತನ ಕೆಲಸವಾಗಿದ್ದೇವೆ.
- Romans 2:17 ರೋಮಾಪುರದವರಿಗೆ 2:17ಇಗೋ, ನೀನು ಯೆಹೂದ್ಯನೆಂದು ಕರೆಯಲ್ಪ ಟ್ಟವನೂ ನ್ಯಾಯಪ್ರಮಾಣದಲ್ಲಿ ಭರವಸವಿಟ್ಟವನೂ ದೇವರಲ್ಲಿ ಹೆಚ್ಚಳಪಡುವವನೂ ಆಗಿದ್ದು
- Galatians 3:22 ಗಲಾತ್ಯದವರಿಗೆ 3:22ಹಾಗಾದರೆ ಯೇಸು ಕ್ರಿಸ್ತನಲ್ಲಿ ನಂಬಿಕೆಯಿಡು ವದರಿಂದ ಉಂಟಾಗುವ ಆ ವಾಗ್ದಾನವು ನಂಬುವ ವರಿಗೇ ಕೊಡಲ್ಪಡುವಂತೆ ಎಲ್ಲರೂ ಪಾಪಕ್ಕೊಳ ಗಾಗಿದ್ದಾರೆಂದು ಬರಹವು ತೀರ್ಮಾನಿಸಿತು.
- 1 John 5:11–12 1 ಯೋಹಾನನು 5:11–12ಆ ಸಾಕ್ಷಿ ಯಾವದಂದರೆ ದೇವರು ನಮಗೆ ನಿತ್ಯಜೀವವನ್ನು ಅನುಗ್ರಹಿಸಿದನು.ಈ ಜೀವವು ಆತನ ಮಗನಲ್ಲಿ ಅದೆ ಎಂಬದೇ. ಯಾವನಲ್ಲಿ (ದೇವರ) ಮಗನು ಇದ್ದಾನೋ ಅವನಿಗೆ ಜೀವ ಉಂಟು; ಯಾವನಲ್ಲಿ ದೇವರ ಮಗನು ಇರುವ ದಿಲ್ಲವೋ ಅವನಿಗೆ ಜೀವವಿಲ್ಲ.
- Romans 7:21 ರೋಮಾಪುರದವರಿಗೆ 7:21ಹೀಗಿರಲಾಗಿ ಒಳ್ಳೆಯದನ್ನು ಮಾಡ ಲಿಚ್ಛಿಸುವ ನನಗೆ ಕೆಟ್ಟದ್ದಾಗಿರುವ ನಿಯಮವು ನನ್ನಲ್ಲಿ ಕಾಣಬರುತ್ತದೆ.
- Zephaniah 3:11 ಚೆಫನ್ಯ 3:11ಆ ದಿನದಲ್ಲಿ ನೀನು ನನಗೆ ವಿರೋಧ ವಾಗಿ ಪಾಪ ಮಾಡಿದ ನಿನ್ನ ಎಲ್ಲಾ ಕ್ರಿಯೆಗಳ ನಿಮಿತ್ತ ನಾಚಿಕೆಪಡದೆ ಇರುವಿ; ಆಗ ನಿನ್ನ ಹೆಚ್ಚಳದಲ್ಲಿ ಸಂಭ್ರಮ ಪಡುವವರನ್ನು ನಿನ್ನ ಮಧ್ಯದೊಳಗಿಂದ ತೆಗೆದುಹಾಕು ವೆನು; ನನ್ನ ಪರಿಶುದ್ಧ ಪರ್ವತಕ್ಕೋಸ್ಕರ ಇನ್ನು ಮೇಲೆ ನೀನು ಗರ್ವಪಡುವದೇ ಇಲ್ಲ.
- Romans 8:2 ರೋಮಾಪುರದವರಿಗೆ 8:2ಜೀವವನ್ನುಂಟು ಮಾಡುವ ಆತ್ಮನ ನಿಯಮವು ಕ್ರಿಸ್ತ ಯೇಸುವಿನಲ್ಲಿ ನನ್ನನ್ನು ಪಾಪ ಮರಣಗಳ ನಿಯಮ ದಿಂದ ಬಿಡಿಸಿತು.
- Romans 7:23 ರೋಮಾಪುರದವರಿಗೆ 7:23ಆದರೆ ನನ್ನ ಅಂಗಗಳಲ್ಲಿ ಬೇರೊಂದು ನಿಯಮವುಂಟೆಂದು ನಾನು ನೋಡುತ್ತೇನೆ; ಅದು ನನ್ನ ಮನಸ್ಸಿನಲ್ಲಿರುವ ನಿಯಮಕ್ಕೆ ವಿರೋಧವಾಗಿ ಕಾದಾಡಿ ನನ್ನನ್ನು ಸೆರೆ ಹಿಡಿದು ನನ್ನ ಅಂಗಗಳಲ್ಲಿರುವ ಪಾಪದ ನಿಯಮಕ್ಕೆ ವಶಮಾಡುವಂಥದ್ದಾಗಿದೆ.
- Mark 16:16 ಮಾರ್ಕನು 16:16ನಂಬಿ ಬಾಪ್ತಿಸ್ಮ ಮಾಡಿಸಿಕೊಳ್ಳುವವನು ರಕ್ಷಣೆ ಹೊಂದುವನು. ಆದರೆ ನಂಬದೆ ಹೋಗುವವನು ದಂಡನೆಗೆ ಗುರಿಯಾಗುವನು.