Romans · chapter 4 · verse 1
Romans 4:1 in Kannada
ಹಾಗಾದರೆ ನಮ್ಮ ಮೂಲಪಿತೃವಾಗಿರುವ ಅಬ್ರಹಾಮನು ಶರೀರಸಂಬಂಧವಾಗಿ ಏನು ಪಡೆದುಕೊಂಡನೆಂದು ಹೇಳಬೇಕು?
Haagaadare namma moolapitruvaagiruva abrahaamanu shareerasambandhavaagi enu padedukondanendu helabeku?
Romans 4:1 in English
- King James Version (KJV)
- What shall we say then that Abraham our father, as pertaining to the flesh, hath found?
- World English Bible (WEB)
- What then will we say that Abraham, our forefather, has found according to the flesh?
- American Standard Version (ASV)
- What then shall we say that Abraham, our forefather, hath found according to the flesh?
- Bible in Basic English (BBE)
- What, then, may we say that Abraham, our father after the flesh, has got?
- Darby Translation (DBY)
- What shall we say then that Abraham our father according to flesh has found?
- Webster's Bible (WBS)
- What shall we then say that Abraham our father, as pertaining to the flesh, hath found?
- Young's Literal Translation (YLT)
- What, then, shall we say Abraham our father, to have found, according to flesh?
Read in context
- 1ಹಾಗಾದರೆ ನಮ್ಮ ಮೂಲಪಿತೃವಾಗಿರುವ ಅಬ್ರಹಾಮನು ಶರೀರಸಂಬಂಧವಾಗಿ ಏನು ಪಡೆದುಕೊಂಡನೆಂದು ಹೇಳಬೇಕು?
- 2ಅಬ್ರಹಾ ಮನು ಕ್ರಿಯೆಗಳಿಂದಲೇ ನೀತಿವಂತನಾದ ಪಕ್ಷದಲ್ಲಿ ಹೊಗಳಿಕೊಳ್ಳುವದಕ್ಕೆ ಅವನಿಗೆ ಅಸ್ಪದವಿರುವದು; ಆದರೆ ದೇವರ ಮುಂದೆ ಹೊಗಳಿಕೊಳ್ಳುವದಕ್ಕೆ ಆಸ್ಪದವಿರುವದಿಲ್ಲ.
- 3ಹಾಗಾದರೆ ಬರಹವು ಹೇಳುವ ದೇನು? ಅಬ್ರಹಾಮನು ದೇವರನ್ನು ನಂಬಿದನು; ಆ ನಂಬಿಕೆಯು ಅವನ ಲೆಕ್ಕಕ್ಕೆ ನೀತಿ ಎಂದು ಎಣಿಸಲ್ಪಟ್ಟಿತು.
Cross references
- Isaiah 51:2 ಯೆಶಾಯ 51:2ನಿಮ್ಮ ತಂದೆಯಾದ ಅಬ್ರಹಾಮನನ್ನು ಮತ್ತು ನಿಮ್ಮನ್ನು ಹೆತ್ತ ಸಾರಳನ್ನು ದೃಷ್ಟಿಸಿರಿ; ನಾನು ಅವನೊಬ್ಬನನ್ನೇ ಕರೆದು ಆಶೀರ್ವ ದಿಸಿ ವೃದ್ಧಿಗೊಳಿಸಿದೆನು.
- Romans 4:16 ರೋಮಾಪುರದವರಿಗೆ 4:16ಆದಕಾರಣ ಕೃಪೆ ಯಿಂದಲೇ ದೊರೆಯುವ ಆ ಬಾಧ್ಯತೆಯು ನಂಬಿಕೆಯ ಮುಖಾಂತರ ಸಿಕ್ಕುತ್ತದೆ. ಹೀಗೆ ಆ ವಾಗ್ದಾನವು ಅಬ್ರಹಾ ಮನ ಸಂತತಿಯವರೆಲ್ಲರಿಗೂ ಅಂದರೆ ನ್ಯಾಯ ಪ್ರಮಾಣವನ್ನು ಆಧಾರ ಮಾಡಿಕೊಂಡವರಿಗೆ ಮಾತ್ರ ವಲ್ಲದೆ ನಮ್ಮೆಲ್ಲರಿಗೆ ತಂದೆಯಾಗಿರುವ ಅಬ್ರಹಾಮ ನಲ್ಲಿದ್ದಂಥ ನಂಬಿಕೆ
- 2 Corinthians 11:22 2 ಕೊರಿಂಥದವರಿಗೆ 11:22ಅವರು ಇಬ್ರಿಯರೋ? ನಾನೂ ಇಬ್ರಿಯನು; ಅವರು ಇಸ್ರಾಯೇಲ್ಯರೊ? ನಾನೂ ಇಸ್ರಾಯೇ ಲ್ಯನು; ಅವರು ಅಬ್ರಹಾಮನ ವಂಶದವರೋ? ನಾನೂ ಅದೇ ವಂಶದವನು;
- Acts 13:26 ಅಪೊಸ್ತಲರ ಕೃತ್ಯಗಳು 13:26ಜನರೇ, ಸಹೋದರರೇ, ಅಬ್ರಹಾಮನ ವಂಶ ಸ್ಥರೇ, ನಿಮ್ಮಲ್ಲಿ ದೇವರಿಗೆ ಭಯಪಡುವವರೇ, ನಿಮಗೆ ಈ ರಕ್ಷಣೆಯ ವಾಕ್ಯವು ಕಳುಹಿಸಿಯದೆ.
- John 8:56 ಯೋಹಾನನು 8:56ನಿಮ್ಮ ತಂದೆಯಾದ ಅಬ್ರಹಾಮನು ನನ್ನ ದಿನವನ್ನು ನೋಡಲು ಸಂತೋಷಿ ಸಿದನು, ಅದನ್ನು ನೋಡಿ ಅವನು ಉಲ್ಲಾಸಗೊಂಡನು ಎಂದು ಹೇಳಿದನು.
- Luke 3:8 ಲೂಕನು 3:8ಹಾಗಾದರೆ ಮಾನಸಾ ಂತರಕ್ಕೆ ಯೋಗ್ಯವಾದ ಫಲಗಳನ್ನು ಫಲಿಸಿರಿ,--ಅಬ್ರಹಾಮನು ನಮಗೆ ತಂದೆಯಾಗಿದ್ದಾನೆಂದು ನಿಮ್ಮೊಳಗೆ ಅಂದುಕೊಳ್ಳುವದಕ್ಕೆ ಆರಂಭಿಸಬೇ ಡಿರಿ; ಯಾಕಂದರೆ--ದೇವರು ಅಬ್ರಹಾಮನಿಗೆ ಈ ಕಲ್ಲುಗಳಿಂದ ಮಕ್ಕಳನ್ನು ಎಬ್ಬಿಸಶಕ್ತನೆಂದು ನಾನು ನಿಮಗೆ ಹೇಳುತ್ತೇನೆ.
- Matthew 3:9 ಮತ್ತಾಯನು 3:9ಮತ್ತು -- ಅಬ್ರಹಾಮನು ನಮಗೆ ತಂದೆಯಾಗಿದ್ದಾನೆ ಎಂದು ನಿಮ್ಮ ನಿಮ್ಮೊಳಗೆ ಅಂದು ಕೊಳ್ಳಬೇಡಿರಿ; ಯಾಕಂದರೆ ದೇವರು ಅಬ್ರಹಾಮನಿಗೆ ಈ ಕಲ್ಲುಗಳಿಂದ ಮಕ್ಕಳನ್ನು ಎಬ್ಬಿಸ ಶಕ್ತನೆಂದು ನಾನು ನಿಮಗೆ ಹೇಳುತ್ತೇನೆ.
- Romans 7:7 ರೋಮಾಪುರದವರಿಗೆ 7:7ಹಾಗಾದರೆ ನಾವು ಏನು ಹೇಳೋಣ? ನ್ಯಾಯ ಪ್ರಮಾಣವು ಪಾಪವೋ? ಹಾಗೆ ಎಂದಿಗೂ ಅಲ್ಲ; ನ್ಯಾಯಪ್ರಮಾಣದಿಂದಲೇ ಹೊರತು ಪಾಪವೆಂಬದು ಏನೋ ನನಗೆ ಗೊತ್ತಿರಲಿಲ್ಲ. ಯಾಕಂದರೆ--ನೀನು ಆಶಿಸಬಾರದು ಎಂದು ನ್ಯಾಯಪ್ರಮಾಣವು ಹೇಳ ದಿದ್ದರೆ ದುರಾಶೆಯೆಂದರೆ ಏನೋ ನನಗೆ ತಿಳಿಯು ತ್ತಿರಲಿಲ್ಲ.
- John 8:33 ಯೋಹಾನನು 8:33ಅದಕ್ಕೆ ಅವರು ಪ್ರತ್ಯುತ್ತರವಾಗಿ ಆತನಿಗೆ--ನಾವು ಅಬ್ರಹಾಮನ ಸಂತತಿಯವರಾಗಿರಲಾಗಿ ಯಾವ ಮನುಷ್ಯನಿಗೂ ಎಂದಿಗೂ ಗುಲಾಮರಾಗಿರಲಿಲ್ಲ; ಹಾಗಾದರೆ--ನಿಮಗೆ ಬಿಡುಗಡೆಯಾಗುವದೆಂದು ನೀನು ಹೇಗೆ ಹೇಳುತ್ತೀ ಅಂದರು.
- Luke 16:24–25 ಲೂಕನು 16:24–25ಅವನು--ತಂದೆಯಾದ ಅಬ್ರಹಾ ಮನೇ, ನನ್ನ ಮೇಲೆ ಕರುಣೆ ಇಟ್ಟು ಲಾಜರನು ತನ್ನ ತುದಿಬೆರಳನ್ನು ನೀರಲ್ಲಿ ಅದ್ದಿ ನನ್ನ ನಾಲಿಗೆಯನ್ನು ತಣ್ಣಗೆ ಮಾಡುವಂತೆ ಅವನನ್ನು ಕಳುಹಿಸು; ಯಾಕಂದರೆ ನಾನು ಈ ಉರಿಯಲ್ಲಿ ಯಾತನೆಪಡುತ್ತಾ ಇದ್ದೇನೆ ಎಂದು ಕೂಗಿ ಹೇಳಿದನು. ಆದರೆ ಅಬ್ರಹಾ ಮನು--ಮಗನೇ, ನೀನು ನಿನ್ನ ಜೀವಿತಕಾಲದಲ್ಲಿ ನಿನ್ನ ಒಳ್ಳೆಯವುಗಳನ್ನು ಹೊಂದಿದಿ; ಅದೇ ರೀತಿಯಲ್ಲಿ ಲಾಜರನು ಕೆಟ್ಟವುಗಳನ್ನು ಹೊಂದಿದ್ದನ್ನು ನೆನಪಿಗೆ ತಂದುಕೋ. ಆದರೆ ಈಗ ಅವನು ಆದರಣೆ ಹೊಂದುತ್ತಾ ಇದ್ದಾನೆ; ನೀನು ಯಾತನೆಪಡುತ್ತಾ ಇದ್ದೀ.
- Romans 8:31 ರೋಮಾಪುರದವರಿಗೆ 8:31ಹಾಗಾದರೆ ಈ ವಿಷಯಗಳಲ್ಲಿ ನಾವು ಏನು ಹೇಳೋಣ? ದೇವರು ನಮ್ಮ ಕಡೆ ಇದ್ದರೆ ನಮ್ಮನ್ನು ಎದುರಿಸುವವರು ಯಾರು?
- Luke 16:29–31 ಲೂಕನು 16:29–31ಅದಕ್ಕೆ ಅಬ್ರಹಾಮನು ಅವನಿಗೆ--ಅವರಿಗೆ ಮೋಶೆಯೂ ಪ್ರವಾದಿಗಳೂ ಇದ್ದಾರೆ. ಅವರು ಹೇಳಿದ್ದನ್ನು ಅವರು ಕೇಳಲಿ ಅಂದನು. ಆಗ ಅವನು--ಹಾಗಲ್ಲ, ತಂದೆ ಯಾದ ಅಬ್ರಹಾಮನೇ, ಸತ್ತವರೊಳಗಿಂದ ಒಬ್ಬನು ಅವರ ಬಳಿಗೆ ಹೋದರೆ ಅವರು ಮಾನಸಾಂತರ ಪಡುವರು ಅಂದನು.ಆದರೆ ಅವನು--ಅವರು ಮೋಶೆಯು ಮತ್ತು ಪ್ರವಾದಿಗಳು ಹೇಳಿದ್ದನ್ನು ಕೇಳದೆ ಹೋದರೆ ಸತ್ತವರೊಳಗಿಂದ ಒಬ್ಬನು ಎದ್ದರೂ ಅವರು ಒಪ್ಪುವದಿಲ್ಲ ಎಂದು ಅವನಿಗೆ ಹೇಳಿದನು. ಆದರೆ ಅವನು--ಅವರು ಮೋಶೆಯು ಮತ್ತು ಪ್ರವಾದಿಗಳು ಹೇಳಿದ್ದನ್ನು ಕೇಳದೆ ಹೋದರೆ ಸತ್ತವರೊಳಗಿಂದ ಒಬ್ಬನು ಎದ್ದರೂ ಅವರು ಒಪ್ಪುವದಿಲ್ಲ ಎಂದು ಅವನಿಗೆ ಹೇಳಿದನು.