Romans · chapter 4 · verse 14
Romans 4:14 in Kannada
ನ್ಯಾಯ ಪ್ರಮಾಣವನ್ನನುಸರಿಸುವವರು ಬಾಧ್ಯರಾಗಿದ್ದರೆ ನಂಬಿ ಕೆಯು ವ್ಯರ್ಥವಾಯಿತು, ವಾಗ್ದಾನವೂ ನಿರರ್ಥಕ ವಾಯಿತು.
Nyaaya pramaanavannanusarisuvavaru baadhyaraagiddare nambi keyu vyarthavaayitu, vaagdaanavoo nirarthaka vaayitu.
Romans 4:14 in English
- King James Version (KJV)
- For if they which are of the law [be] heirs, faith is made void, and the promise made of none effect:
- World English Bible (WEB)
- For if those who are of the law are heirs, faith is made void, and the promise is made of no effect.
- American Standard Version (ASV)
- For if they that are of the law are heirs, faith is made void, and the promise is made of none effect:
- Bible in Basic English (BBE)
- For if they who are of the law are the people who get the heritage, then faith is made of no use, and the word of God has no power;
- Darby Translation (DBY)
- For if they which [are] of law be heirs, faith is made vain, and the promise made of no effect.
- Webster's Bible (WBS)
- For if they who are of the law [are] heirs, faith is made void, and the promise made of no effect.
- Young's Literal Translation (YLT)
- for if they who are of law [are] heirs, the faith hath been made void, and the promise hath been made useless;
Read in context
- 12ಇದಲ್ಲದೆ ಸುನ್ನತಿಯಿದ್ದವರಿಗೆ ತಂದೆಯಾದವನು ಸುನ್ನತಿಯವರಿಗೆ ಮಾತ್ರವಲ್ಲ, ಆದರೆ ಅಬ್ರಹಾಮನು ಸುನ್ನತಿ ಮಾಡಿಸಿಕೊಳ್ಳುವದಕ್ಕೆ ಮುಂಚೆ ನಡೆದ ನಂಬಿಕೆಯ ಹೆಜ್ಜೆಜಾಡಿನಲ್ಲಿ ನಡೆಯುತ್ತಿರುವ ಸುನ್ನತಿ ಯಿಲ್ಲದವರಿಗೂ ತಂದೆಯಾಗಿದ್ದಾನೆ.
- 13ಅವನು ಲೋಕಕ್ಕೆ ಬಾಧ್ಯನಾಗುವನೆಂಬ ವಾಗ್ದಾ ನವು ಅಬ್ರಹಾಮನಿಗಾಗಲಿ ಅವನ ಸಂತತಿಯವರಿ ಗಾಗಲಿ ನ್ಯಾಯಪ್ರಮಾಣದಿಂದ ಆದದ್ದಲ್ಲ, ನಂಬಿಕೆ ಯಿಂದಾದ ನೀತಿಯಿಂದಲೇ ಆದದ್ದು.
- 14ನ್ಯಾಯ ಪ್ರಮಾಣವನ್ನನುಸರಿಸುವವರು ಬಾಧ್ಯರಾಗಿದ್ದರೆ ನಂಬಿ ಕೆಯು ವ್ಯರ್ಥವಾಯಿತು, ವಾಗ್ದಾನವೂ ನಿರರ್ಥಕ ವಾಯಿತು.
- 15ನ್ಯಾಯಪ್ರಮಾಣವು ದೇವರ ಕೋಪಕ್ಕೆ ಗುರಿಮಾಡುವಂಥದ್ದು. ನ್ಯಾಯಪ್ರಮಾಣವಿಲ್ಲದ ಪಕ್ಷ ದಲ್ಲಿ ಆಜ್ಞಾತಿಕ್ರಮಣವೂ ಇಲ್ಲ;
- 16ಆದಕಾರಣ ಕೃಪೆ ಯಿಂದಲೇ ದೊರೆಯುವ ಆ ಬಾಧ್ಯತೆಯು ನಂಬಿಕೆಯ ಮುಖಾಂತರ ಸಿಕ್ಕುತ್ತದೆ. ಹೀಗೆ ಆ ವಾಗ್ದಾನವು ಅಬ್ರಹಾ ಮನ ಸಂತತಿಯವರೆಲ್ಲರಿಗೂ ಅಂದರೆ ನ್ಯಾಯ ಪ್ರಮಾಣವನ್ನು ಆಧಾರ ಮಾಡಿಕೊಂಡವರಿಗೆ ಮಾತ್ರ ವಲ್ಲದೆ ನಮ್ಮೆಲ್ಲರಿಗೆ ತಂದೆಯಾಗಿರುವ ಅಬ್ರಹಾಮ ನಲ್ಲಿದ್ದಂಥ ನಂಬಿಕೆ
Cross references
- Galatians 3:18–24 ಗಲಾತ್ಯದವರಿಗೆ 3:18–24ಆ ಬಾಧ್ಯತೆಯು ನ್ಯಾಯಪ್ರಮಾಣದಿಂದ ದೊರೆ ಯುವದಾದರೆ ಅದು ಇನ್ನು ವಾಗ್ದಾನದಿಂದ ದೊರೆಯು ವದಿಲ್ಲವೆಂದಾಯಿತು; ಆದರೆ ದೇವರು ಅದನ್ನು ಅಬ್ರಹಾಮನಿಗೆ ವಾಗ್ದಾನದ ಮೂಲಕವಾಗಿಯೇ ದಯಪಾಲಿಸಿದ್ದಾನೆ. ಹಾಗಾದರೆ ನ್ಯಾಯಪ್ರಮಾಣವು ಯಾತಕ್ಕೆ? ವಾಗ್ದಾನದ ಸಂತತಿಯಾದಾತನು ಬರುವತನಕ ದೇವರು ಇಂಥಿಂಥದ್ದು ಅಪರಾಧವೆಂದು ತೋರಿಸುವದಕ್ಕಾಗಿ ಅದನ್ನು ವಾಗ್ದಾನದ ತರುವಾಯ ನೇಮಿಸಿ ದೂತರ ಮುಖಾಂತರ ಒಬ್ಬ ಮಧ್ಯಸ್ಥನ ಕೈಯಲ್ಲಿ ಕೊಟ್ಟನು. ಮಧ್ಯಸ್ಥನು ಒಬ್ಬನ ಮಧ್ಯಸ್ಥನಲ್ಲ; ಆದರೆ ದೇವರು ಒಬ್ಬನೇ. ಹಾಗಾದರೆ ನ್ಯಾಯಪ್ರಮಾಣವು ದೇವರ ವಾಗ್ದಾನಗಳಿಗೆ ವಿರುದ್ಧವೋ? ಹಾಗೆ ಎಂದಿಗೂ ಹೇಳಬಾರದು; ಕೊಡಲ್ಪಟ್ಟಿದ್ದ ನ್ಯಾಯಪ್ರಮಾಣವು ಬದುಕಿಸುವದಕ್ಕೆ ಶಕ್ತಿಯುಳ್ಳದ್ದಾಗಿದ್ದರೆ ನಿಜವಾಗಿ ನ್ಯಾಯಪ್ರಮಾಣದಿಂದಲೇ ನೀತಿಯುಂಟಾಗುತ್ತಿತ್ತು. ಹಾಗಾದರೆ ಯೇಸು ಕ್ರಿಸ್ತನಲ್ಲಿ ನಂಬಿಕೆಯಿಡು ವದರಿಂದ ಉಂಟಾಗುವ ಆ ವಾಗ್ದಾನವು ನಂಬುವ ವರಿಗೇ ಕೊಡಲ್ಪಡುವಂತೆ ಎಲ್ಲರೂ ಪಾಪಕ್ಕೊಳ ಗಾಗಿದ್ದಾರೆಂದು ಬರಹವು ತೀರ್ಮಾನಿಸಿತು. ಆದರೆ ನಂಬಿಕೆ ಬರುವದಕ್ಕೆ ಮೊದಲು, ತರು ವಾಯ ಪ್ರಕಟವಾಗಲಿರುವ ಆ ನಂಬಿಕೆಗೆ ವಶವಾಗು ವದಕ್ಕಾಗಿ ನಾವು ನ್ಯಾಯಪ್ರಮಾಣದ ಅಧೀನದಲ್ಲಿ ಇರಿಸಲ್ಪಟ್ಟಿದ್ದೆವು. ನಾವು ನಂಬಿಕೆಯ ಮೂಲಕ ನೀತಿವಂತರೆಂದು ನಿರ್ಣಯಿಸಲ್ಪಡುವಂತೆ ನಮ್ಮನ್ನು ಕ್ರಿಸ್ತನ ಬಳಿಗೆ ತರುವದಕ್ಕಾಗಿ ನ್ಯಾಯಪ್ರಮಾಣವು ನಮ್ಮ ಉಪಾಧ್ಯಾಯನಂತಿತ್ತು.
- Philippians 3:9 ಫಿಲಿಪ್ಪಿಯವರಿಗೆ 3:9ನಾನು ಕ್ರಿಸ್ತನಲ್ಲಿರುವ ವನಾಗಿ ಕಾಣಿಸಿಕೊಳ್ಳಬೇಕೆಂದು ನ್ಯಾಯಪ್ರಮಾಣ ದಿಂದಾಗುವ ಸ್ವನೀತಿಯನ್ನಾಶ್ರಯಿಸದೆ ಆತನನ್ನು ನಂಬು ವದರಿಂದ ದೊರಕುವಂಥ ಅಂದರೆ ನಂಬಿಕೆಯ ಆಧಾರ ದಿಂದ ದೇವರು ಕೊಡುವಂಥ ನೀತಿಯನ್ನೇ ಹೊಂದಿ ದ್ದೇನೆ.
- Hebrews 7:19 ಇಬ್ರಿಯರಿಗೆ 7:19ನ್ಯಾಯ ಪ್ರಮಾಣವು ಯಾವದನ್ನೂ ಸಿದ್ದಿಗೆ ತಾರದಿರುವ ದರಿಂದ ಉತ್ತಮವಾಗಿರುವ ನಿರೀಕ್ಷೆಯು ಸಿದ್ಧಿಗೆ ತಂದಿತು. ಇದರಿಂದ ನಾವು ದೇವರ ಸವಿಾಪಕ್ಕೆ ಸೇರುತ್ತೇವೆ.
- Romans 4:16 ರೋಮಾಪುರದವರಿಗೆ 4:16ಆದಕಾರಣ ಕೃಪೆ ಯಿಂದಲೇ ದೊರೆಯುವ ಆ ಬಾಧ್ಯತೆಯು ನಂಬಿಕೆಯ ಮುಖಾಂತರ ಸಿಕ್ಕುತ್ತದೆ. ಹೀಗೆ ಆ ವಾಗ್ದಾನವು ಅಬ್ರಹಾ ಮನ ಸಂತತಿಯವರೆಲ್ಲರಿಗೂ ಅಂದರೆ ನ್ಯಾಯ ಪ್ರಮಾಣವನ್ನು ಆಧಾರ ಮಾಡಿಕೊಂಡವರಿಗೆ ಮಾತ್ರ ವಲ್ಲದೆ ನಮ್ಮೆಲ್ಲರಿಗೆ ತಂದೆಯಾಗಿರುವ ಅಬ್ರಹಾಮ ನಲ್ಲಿದ್ದಂಥ ನಂಬಿಕೆ
- Isaiah 55:11 ಯೆಶಾಯ 55:11ನನ್ನ ಬಾಯಿಂದ ಹೊರಡುವ ನನ್ನ ವಾಕ್ಯವು ಹಾಗೆಯೂ ಇರುವದು; ಅದು ಸುಮ್ಮನೆ ನನ್ನ ಬಳಿಗೆ ಹಿಂತಿರುಗದೆ ನಾನು ಯಾವದನ್ನು ಮೆಚ್ಚು ತ್ತೇನೋ ಅದನ್ನು ಅದು ಮಾಡುವದು; ನಾನು ಅದನ್ನು ಯಾವದರ ನಿಮಿತ್ತ ಕಳುಹಿಸಿದೆನೋ ಅದರಲ್ಲಿ ಅದು ಸಫಲವಾಗುವದು.
- Hebrews 7:28 ಇಬ್ರಿಯರಿಗೆ 7:28ನ್ಯಾಯಪ್ರಮಾಣವು ನಿರ್ಬಲರಾದ ಮನುಷ್ಯರನ್ನು ಮಹಾಯಾಜಕರನ್ನಾಗಿ ಮಾಡುತ್ತದೆ; ಆದರೆ ನ್ಯಾಯಪ್ರಮಾಣದ ತರುವಾಯ ಆಣೆಯೊಡನೆ ಉಂಟಾದ ವಾಕ್ಯವು ಸದಾಕಾಲಕ್ಕೂ ಪ್ರತಿಷ್ಠೆ ಮಾಡಿಕೊಂಡ ಮಗನನ್ನೇ ಮಹಾಯಾಜಕ ನನ್ನಾಗಿ ಮಾಡುತ್ತದೆ.
- Romans 3:31 ರೋಮಾಪುರದವರಿಗೆ 3:31ಹಾಗಾದರೆ ನಂಬಿಕೆಯಿಂದ ನ್ಯಾಯಪ್ರಮಾಣವನ್ನು ನಿರರ್ಥಕ ಮಾಡುತ್ತೇವೋ? ಹಾಗೆ ಎಂದಿಗೂ ಅಲ್ಲ; ಹೌದು, ನಾವು ನ್ಯಾಯಪ್ರಮಾಣವನ್ನು ಸ್ಥಿರಪಡಿಸುತ್ತೇವೆ.
- Galatians 2:21 ಗಲಾತ್ಯದವರಿಗೆ 2:21ನಾನು ದೇವರ ಕೃಪೆಯನ್ನು ನಿರರ್ಥಕ ಮಾಡುವದಿಲ್ಲ. ನ್ಯಾಯಪ್ರಮಾಣದಿಂದ ನೀತಿಯುಂಟಾಗುವದಾದರೆ ಕ್ರಿಸ್ತನು ಮರಣವನ್ನು ಹೊಂದಿದ್ದು ವ್ಯರ್ಥವಾಯಿತು.
- Psalm 119:126 ಕೀರ್ತನೆಗಳು 119:126ಕರ್ತನೆ, ಕೆಲಸಮಾಡುವದಕ್ಕೆ ಇದು ನಿನಗೆ ಸಮಯವಾಗಿದೆ; ಅವರು ನಿನ್ನ ನ್ಯಾಯಪ್ರಮಾಣವನ್ನು ನಿರರ್ಥಕ ಮಾಡಿ ದ್ದಾರೆ.
- Numbers 30:12 ಅರಣ್ಯಕಾಂಡ 30:12ಆದರೆ ಅವಳ ಗಂಡನು ಅವುಗಳನ್ನು ಕೇಳಿದ ದಿವಸದಲ್ಲೇ ಅವುಗಳನ್ನು ಪೂರ್ಣವಾಗಿ ನಿರರ್ಥಕಮಾಡಿದ ಪಕ್ಷ ದಲ್ಲಿ ಅವಳ ಪ್ರಮಾಣಗಳಿಗೋಸ್ಕರವೂ ಅವಳ ಪ್ರಾಣದ ಕಟ್ಟಳೆಗೋಸ್ಕರವೂ ಅವಳ ತುಟಿಗಳಿಂದ ಹೊರಟದ್ದು ಯಾವದಾಗಲಿ ನಿಲ್ಲದು, ಅವಳ ಗಂಡನು ಅವುಗಳನ್ನು ನಿರರ್ಥಕಮಾಡಿದ್ದಾನೆ; ಕರ್ತನು ಅವಳನ್ನು ಕ್ಷಮಿಸುವನು.
- Jeremiah 19:7 ಯೆರೆಮೀಯ 19:7ನಾನು ಈ ಸ್ಥಳದಲ್ಲಿ ಯೆಹೂದದ, ಯೆರೂಸಲೇಮಿನ ಆಲೋಚನೆಯನ್ನು ಶೂನ್ಯ ಮಾಡುವೆನು; ಅವರ ಶತ್ರುಗಳ ಮುಂದೆಯೂ ಅವರ ಪ್ರಾಣವನ್ನು ಹುಡುಕು ವವರ ಕೈಯಿಂದಲೂ ಅವರನ್ನು ಕತ್ತಿಯಿಂದ ಬೀಳು ವಂತೆ ಮಾಡುವೆನು; ಅವರ ಹೆಣಗಳನ್ನು ಆಕಾಶದ ಪಕ್ಷಿಗಳಿಗೂ ಭೂಮಿಯ ಮೃಗಗಳಿಗೂ ಆಹಾರವಾಗಿ ಕೊಡುವೆನು.
- Galatians 5:4 ಗಲಾತ್ಯದವರಿಗೆ 5:4ನಿಮ್ಮಲ್ಲಿ ಯಾರಾದರೂ ನ್ಯಾಯ ಪ್ರಮಾಣದ ಮೂಲಕ ನೀತಿವಂತರಾಗಬೇಕೆಂದಿದ್ದರೆ ಅವರಿಗೆ ಕ್ರಿಸ್ತನಿಂದ ಯಾವ ಪ್ರಯೋಜನವೂ ಆಗುವದಿಲ್ಲ; ನೀವು ಕೃಪೆಯಿಂದ ಬಿದ್ದವರಾಗಿದ್ದೀರಿ.