Romans · chapter 4 · verse 21
Romans 4:21 in Kannada
ಆತನು ತನ್ನ ವಾಗ್ದಾನವನ್ನು ನೆರವೇರಿ ಸುವದಕ್ಕೆ ಸಮರ್ಥನೆಂದು ಪೂರಾ ಭರವಸವಿಟ್ಟನು.
Aatanu tanna vaagdaanavannu neraveri suvadakke samarthanendu pooraa bharavasavittanu.
Romans 4:21 in English
- King James Version (KJV)
- And being fully persuaded that, what he had promised, he was able also to perform.
- World English Bible (WEB)
- and being fully assured that what he had promised, he was also able to perform.
- American Standard Version (ASV)
- and being fully assured that what he had promised, he was able also to perform.
- Bible in Basic English (BBE)
- And being certain that God was able to keep his word.
- Darby Translation (DBY)
- and being fully persuaded that what he has promised he is able also to do;
- Webster's Bible (WBS)
- And being fully persuaded, that what he had promised, he was able also to perform.
- Young's Literal Translation (YLT)
- and having been fully persuaded that what He hath promised He is able also to do:
Read in context
- 19ಅವನು ಹೆಚ್ಚು ಕಡಿಮೆ ನೂರುವರುಷದವನಾಗಿದ್ದು ತನ್ನ ದೇಹವು ಆಗಲೇ ಮೃತಪ್ರಾಯವಾಯಿತೆಂದೂ ಸಾರಳಿಗೆ ಗರ್ಭಕಾಲ ಕಳೆದುಹೋಯಿತೆಂದೂ ಯೋಚಿಸಿದನು; ಆದಾಗ್ಯೂ ಅವನು ಅಪನಂಬಿಕೆಯಿಂದ ಚಂಚಲನಾಗಲಿಲ್ಲ.
- 20ದೇವರು ಮಾಡಿದ ವಾಗ್ದಾನದ ವಿಷಯದಲ್ಲಿ ಅವನು ಅಪನಂಬಿಕೆಯಿಂದ ಚಂಚಲಚಿತ್ತನಾಗಲಿಲ್ಲ; ಆದರೆ ದೇವರನ್ನು ಘನಪಡಿಸುವವನಾಗಿ ದೃಢನಂಬಿಕೆಯುಳ್ಳ ವನಾದನು.
- 21ಆತನು ತನ್ನ ವಾಗ್ದಾನವನ್ನು ನೆರವೇರಿ ಸುವದಕ್ಕೆ ಸಮರ್ಥನೆಂದು ಪೂರಾ ಭರವಸವಿಟ್ಟನು.
- 22ಆದದರಿಂದ ಆ ನಂಬಿಕೆಯು ಅವನ ಲೆಕ್ಕಕ್ಕೆ ನೀತಿ ಯೆಂದು ಎಣಿಸಲ್ಪಟ್ಟಿತು.
- 23ಆದರೆ ಅದು ಅವನ ಲೆಕ್ಕಕ್ಕೆ ನೀತಿಯೆಂದು ಎಣಿಸಲ್ಪಟ್ಟದ್ದು ಅವನಿಗೋಸ್ಕರ ಮಾತ್ರವಲ್ಲದೆ
Cross references
- Luke 1:37 ಲೂಕನು 1:37ಯಾಕಂದರೆ ದೇವರಿಗೆ ಅಸಾಧ್ಯವಾದದ್ದು ಯಾವದೂ ಇಲ್ಲ ಎಂದು ಹೇಳಿ ದನು.
- Jeremiah 32:27 ಯೆರೆಮೀಯ 32:27ಇಗೋ, ನಾನೇ ಕರ್ತನು, ಸಮಸ್ತ ಜನರ ದೇವರು; ನನಗೆ ಕಠಿಣವಾದ ಕಾರ್ಯ ಒಂದಾದರೂ ಉಂಟೋ?
- Luke 1:45 ಲೂಕನು 1:45ಕರ್ತನಿಂದ ತನಗೆ ಹೇಳಲ್ಪಟ್ಟವುಗಳು ನೆರವೇರುವವೆಂದು ನಂಬಿದವಳು ಧನ್ಯಳು ಎಂದು ಹೇಳಿದಳು.
- Jeremiah 32:17 ಯೆರೆಮೀಯ 32:17ಓ ಕರ್ತನಾದ ದೇವರೇ, ಇಗೋ, ನೀನು ನಿನ್ನ ಮಹಾಬಲದಿಂದ ನಿನ್ನ ಕೈಚಾಚಿ ಆಕಾಶವನ್ನೂ ಭೂಮಿಯನ್ನೂ ಉಂಟುಮಾಡಿದ್ದೀ; ನಿನಗೆ ಕಠಿಣವಾದ ಕಾರ್ಯ ಒಂದೂ ಇಲ್ಲ.
- Hebrews 11:19 ಇಬ್ರಿಯರಿಗೆ 11:19ತನ್ನ ಮಗನನ್ನು ಸತ್ತವರೊಳಗಿಂದಲೂ ದೇವರು ಎಬ್ಬಿಸ ಸಮರ್ಥನಾಗಿದ್ದಾನೆಂದು ಎಣಿಸಿದನು. ಸತ್ತವರೊಳಗಿಂದಲೇ ಜೀವಿತನಾಗಿ ಬಂದವನಂತೆ ಅವನನ್ನು ಉಪಮಾನವಾಗಿ ಹೊಂದಿದನು.
- Genesis 18:14 ಆದಿಕಾಂಡ 18:14ಕರ್ತನಿಗೆ ಅಸಾಧ್ಯವಾದದ್ದು ಯಾವದಾದರೂ ಇದೆಯೋ? ಬರುವ ವರುಷ ಇದೇ ಸಮಯಕ್ಕೆ ನಾನು ನಿನ್ನ ಬಳಿಗೆ ತಿರಿಗಿ ಬರುವೆನು; ಆಗ ಸಾರಳಿಗೆ ಮಗನು ಇರುವನು ಅಂದನು.
- 2 Timothy 1:12 2 ತಿಮೊಥೆಯನಿಗೆ 1:12ಇದರ ನಿಮಿತ್ತದಿಂದಲೇ ಈ ಶ್ರಮೆಗಳನ್ನು ಅನುಭವಿಸುತ್ತಾ ಇದ್ದೇನೆ; ಆದರೂ ನಾನು ನಾಚಿಕೆಪಡುವದಿಲ್ಲ; ಯಾಕಂ ದರೆ ನಾನು ನಂಬಿರುವಾತನನ್ನು ಬಲ್ಲೆನು, ನಾನು ಆತನಿಗೆ ಒಪ್ಪಿಸಿದ್ದನ್ನು ಆತನು ಆ ದಿನಕ್ಕಾಗಿ ಕಾಪಾಡು ವದಕ್ಕೆ ಶಕ್ತನಾಗಿದ್ದಾನೆಂದೂ ದೃಢವಾಗಿ ನಂಬಿದ್ದೇನೆ.
- Matthew 19:26 ಮತ್ತಾಯನು 19:26ಅದಕ್ಕೆ ಯೇಸು ಅವರನ್ನು ದೃಷ್ಟಿಸಿ ನೋಡಿ ಅವರಿಗೆ--ಇದು ಮನುಷ್ಯರಿಗೆ ಅಸಾಧ್ಯ; ಆದರೆ ದೇವರಿಗೆ ಎಲ್ಲವು ಸಾಧ್ಯವೇ ಎಂದು ಹೇಳಿದನು.
- Romans 8:38 ರೋಮಾಪುರದವರಿಗೆ 8:38ಹೇಗಂದರೆ ಮರಣವಾಗಲಿ ಜೀವವಾಗಲಿ ದೂತರಾಗಲಿ ರಾಜತ್ವಗಳಾಗಲಿ ಅಧಿಕಾರಗಳಾಗಲಿ ಈಗಿನವುಗಳಾ ಗಲಿ ಮುಂಬರುವವುಗಳಾಗಲಿಉನ್ನತವಾಗಲಿ ಅಗಾಧವಾಗಲಿ ಬೇರೆ ಯಾವ ಸೃಷ್ಟಿಯಾಗಲಿ ನಮ್ಮನ್ನು ನಮ್ಮ ಕರ್ತನಾದ ಕ್ರಿಸ್ತ ಯೇಸುವಿನಲ್ಲಿರುವ ದೇವರ ಪ್ರೀತಿಯಿಂದ ಅಗಲಿಸಲಾರವೆಂದು ನನಗೆ ನಿಶ್ಚಯ ಉಂಟು.
- Psalm 115:3 ಕೀರ್ತನೆಗಳು 115:3ನಮ್ಮ ದೇವರು ಪರಲೋಕದಲ್ಲಿದ್ದಾನೆ; ತಾನು ಇಚ್ಚಿಸುವ ದನ್ನೆಲ್ಲಾ ಮಾಡುತ್ತಾನೆ.
- 2 Corinthians 9:8 2 ಕೊರಿಂಥದವರಿಗೆ 9:8ದೇವರು ಸಕಲ ವಿಧವಾದ ಕೃಪೆಯನ್ನು ನಿಮಗೆ ಧಾರಾಳವಾಗಿ ಅನುಗ್ರಹಿಸುವದಕ್ಕೆ ಶಕ್ತನಾದ್ದರಿಂದ ನೀವು ಯಾವಾ ಗಲೂ ಎಲ್ಲಾ ವಿಷಯಗಳಲ್ಲಿ ಪರಿಪೂರ್ಣತೆ ಯುಳ್ಳವರಾಗಿ ಸಕಲಸತ್ಕಾರ್ಯಗಳನ್ನು ಹೇರಳವಾಗಿ ಮಾಡುವವರಾಗಿರುವಿರಿ.
- Romans 14:4 ರೋಮಾಪುರದವರಿಗೆ 14:4ಮತ್ತೊಬ್ಬನ ಸೇವಕನ ವಿಷಯವಾಗಿ ತೀರ್ಪುಮಾಡುವದಕ್ಕೆ ನೀನು ಯಾರು? ಅವನು ನಿಂತರೂ ಬಿದ್ದರೂ ಅದು ಅವನ ಯಜಮಾನನಿಗೇ ಸೇರಿದ್ದು. ಹೌದು, ಅವನು ನಿಲ್ಲಿಸಲ್ಪಡುವನು; ಅವನನ್ನು ನಿಲ್ಲಿಸುವದಕ್ಕೆ ದೇವರು ಶಕ್ತನಾಗಿದ್ದಾನೆ.