Romans · chapter 5 · verse 16
Romans 5:16 in Kannada
ಇದಲ್ಲದೆ ಪಾಪಮಾಡಿದ ಆ ಒಬ್ಬನಿಂದಲೇ ಬಂದಂತೆ ಈ ದಾನವು ಬರಲಿಲ್ಲ; ಯಾಕಂದರೆ ಒಬ್ಬ ಮನುಷ್ಯನ ಅಪರಾಧದ ದೆಸೆಯಿಂದಲೇ ತೀರ್ಪು ಉಂಟಾಯಿತು. ಆದರೆ ಉಚಿತವಾದ ದಾನವು ಅನೇಕರ ಅಪರಾಧಗಳ ಕಾರಣದಿಂದ ಉಂಟಾಗಿ ನಿರ್ಣಯಿಸುವಂಥದ್ದಾಗಿದೆ.
Idallade paapamaadida aa obbanindale bandante ee daanavu baralilla; yaakandare obba manushyana aparaadhada deseyindale teerpu untaayitu. Aadare uchitavaada daanavu anekara aparaadhagala kaaranadinda untaagi nirnayisuvanthaddaagide.
Romans 5:16 in English
- King James Version (KJV)
- And not as [it was] by one that sinned, [so is] the gift: for the judgment [was] by one to condemnation, but the free gift [is] of many offences unto justification.
- World English Bible (WEB)
- The gift is not as through one who sinned; for the judgment came by one to condemnation, but the free gift followed many trespasses to justification.
- American Standard Version (ASV)
- And not as through one that sinned, [so] is the gift: for the judgment [came] of one unto condemnation, but the free gift [came] of many trespasses unto justification.
- Bible in Basic English (BBE)
- And the free giving has not the same effect as the sin of one: for the effect of one man's sin was punishment by the decision of God, but the free giving had power to give righteousness to wrongdoers in great number.
- Darby Translation (DBY)
- And [shall] not as by one that has sinned [be] the gift? For the judgment [was] of one to condemnation, but the act of favour, of many offences unto justification.
- Webster's Bible (WBS)
- And not as [it was] by one that sinned, [so is] the gift. For the judgment [was] by one to condemnation, but the free gift [is] of many offenses to justification.
- Young's Literal Translation (YLT)
- and not as through one who did sin [is] the free gift, for the judgment indeed [is] of one to condemnation, but the gift [is] of many offences to a declaration of 'Righteous,'
Read in context
- 14ಆದರೂ ಆದಾಮನಿಂದ ಮೋಶೆಯವರೆಗೂ ಮರಣದ ಆಳಿಕೆಯು ನಡೆಯುತ್ತಿತ್ತು. ಆದಾಮನ ಆ ಅತಿಕ್ರಮಣಕ್ಕೆ ಸಮಾನವಾದ ಪಾಪವನ್ನು ಮಾಡದೆ ಇದ್ದವರ ಮೇಲೆಯೂ ಅದು ನಡೆಯುತ್ತಿತ್ತು. ಆ ಆದಾಮನು ಬರಬೇಕಾದ ಒಬ್ಬಾತನಿಗೆ ಸೂಚನೆ ಯಾಗಿದ್ದಾನೆ.
- 15ಆದರೆ ಆ ಅಪರಾಧವು ಇದ್ದಂತೆ ಉಚಿತವಾದ ದಾನವು ಇರುವದಿಲ್ಲ; ಹೇಗಂದರೆ ಆ ಒಬ್ಬನ ಅಪ ರಾಧದಿಂದ ಎಲ್ಲಾ ಮನುಷ್ಯರು ಸತ್ತವರಾಗಿದ್ದರೆ ದೇವರ ಕೃಪೆಯೂ ಯೇಸು ಕ್ರಿಸ್ತನೆಂಬ ಈ ಒಬ್ಬ ಮನುಷ್ಯನ ಕೃಪೆಯಿಂದಾದ ದಾನವೂ ಅನೇಕರಿಗೆ ಹೇರಳವಾಗಿ ದೊರೆಯುವದು ಮತ್ತೂ ನಿಶ್ಚಯವಲ್ಲವೇ.
- 16ಇದಲ್ಲದೆ ಪಾಪಮಾಡಿದ ಆ ಒಬ್ಬನಿಂದಲೇ ಬಂದಂತೆ ಈ ದಾನವು ಬರಲಿಲ್ಲ; ಯಾಕಂದರೆ ಒಬ್ಬ ಮನುಷ್ಯನ ಅಪರಾಧದ ದೆಸೆಯಿಂದಲೇ ತೀರ್ಪು ಉಂಟಾಯಿತು. ಆದರೆ ಉಚಿತವಾದ ದಾನವು ಅನೇಕರ ಅಪರಾಧಗಳ ಕಾರಣದಿಂದ ಉಂಟಾಗಿ ನಿರ್ಣಯಿಸುವಂಥದ್ದಾಗಿದೆ.
- 17ಒಬ್ಬನ ಅಪರಾಧದಿಂದ ಮರಣವು ಉಂಟಾಗಿ ಆ ಒಬ್ಬನ ದೆಸೆಯಿಂದಲೇ ಆಳಿದ್ದರೆ ಕೃಪೆಯನ್ನೂ ನೀತಿಯ ದಾನವನ್ನೂ ಹೇರಳವಾಗಿ ಹೊಂದಿದವರು ಯೇಸು ಕ್ರಿಸ್ತನೆಂಬ ಈ ಒಬ್ಬನ ಮೂಲಕ ಜೀವದಲ್ಲಿ ಆಳುವದು ಮತ್ತೂ ನಿಶ್ಚಯವಲ್ಲವೇ).
- 18ಹೀಗಿರಲಾಗಿ ಒಬ್ಬನ ಅಪರಾಧದಿಂದಲೇ ಎಲ್ಲಾ ಮನುಷ್ಯರಿಗೆ ಅಪರಾಧ ನಿರ್ಣಯವು ಹೇಗೆ ಬಂತೋ ಹಾಗೆಯೇ ಒಬ್ಬನ ನೀತಿಯಿಂದಲೇ ಉಚಿತಾರ್ಥವಾದ ದಾನವು ಎಲ್ಲಾ ಮನುಷ್ಯರಿಗೆ ಜೀವದ ನೀತಿ ನಿರ್ಣಯಕ್ಕಾಗಿ ಬಂದಿತು.
Cross references
- Acts 13:38–39 ಅಪೊಸ್ತಲರ ಕೃತ್ಯಗಳು 13:38–39ಆದದರಿಂದ ಜನರೇ, ಸಹೋದರರೇ, ಈ ಮನುಷ್ಯನ ಮೂಲಕವಾಗಿ ಪಾಪಪರಿಹಾರವು ದೊರೆಯುತ್ತದೆಂಬದು ನಿಮಗೆ ಸಾರೋಣವಾಗು ತ್ತದೆಂದೂ ಮೋಶೆಯ ಯಾವ ನ್ಯಾಯಪ್ರಮಾಣ ದಿಂದ ಯಾವವುಗಳಲ್ಲಿ ನೀವು ನೀತಿವಂತರೆಂಬ ನಿರ್ಣಯವನ್ನು ಹೊಂದಲಾರದೆ ಹೋಗಿದ್ದಿರೋ ಅವೆಲ್ಲವುಗಳಿಂದ ನಂಬುವವರೆಲ್ಲರೂ ಆತನ ಮೂಲಕ ನೀತಿವಂತರೆಂಬ ನಿರ್ಣಯವನ್ನು ಹೊಂದಿದ್ದಾರೆಂದು ನಿಮಗೆ ತಿಳಿದಿರಲಿ.
- Isaiah 1:18 ಯೆಶಾಯ 1:18ಈಗ ಬನ್ನಿರಿ, ನಾವು ಒಟ್ಟಾಗಿ ವಾದಿಸೋಣ ಎಂದು ಕರ್ತನು ಹೇಳುತ್ತಾನೆ; ನಿಮ್ಮ ಪಾಪಗಳು ಕಡು ಕೆಂಪಾಗಿದ್ದರೂ ಹಿಮದಂತೆ ಬಿಳುಪಾಗುವವು; ಕಡು ಕೆಂಪಿನಂತೆ ಕೆಂಪಾಗಿದ್ದರೂ ಉಣ್ಣೆಯಂತೆ ಆಗುವವು.
- Isaiah 44:22 ಯೆಶಾಯ 44:22ನಾನು ನಿನ್ನ ದ್ರೋಹಗಳನ್ನು ಗಾಢವಾದ ಮೇಘದಂತೆ ಅಳಿಸಿಬಿಟ್ಟಿದ್ದೇನೆ; ನಿನ್ನ ಪಾಪಗಳನ್ನು ಮೋಡದಂತೆ ಹಾರಿಸಿದ್ದೇನೆ; ನನ್ನ ಕಡೆಗೆ ತಿರಿಗಿಕೋ, ನಾನು ನಿನ್ನನ್ನು ವಿಮೋಚಿಸಿದ್ದೇನೆ.
- Isaiah 43:25 ಯೆಶಾಯ 43:25ನಾನಾಗಿ ನಾನೇ ನನಗೋಸ್ಕರ ನಿನ್ನ ದ್ರೋಹಗಳನ್ನು ಅಳಿಸಿಬಿಡುತ್ತೇನೆ. ನಿನ್ನ ಪಾಪ ಗಳನ್ನು ನನ್ನ ನೆನಪಿನಲ್ಲಿಡೆನು.
- 1 Corinthians 11:32 1 ಕೊರಿಂಥದವರಿಗೆ 11:32ಆದರೆ ನಾವು ನಮ್ಮನ್ನು ವಿಚಾರಿಸಿ ಕೊಂಡಾಗ ಲೋಕದವರ ಸಂಗಡ ನಮಗೆ ಅಪರಾಧಿಗಳೆಂಬ ನಿರ್ಣಯವಾಗಬಾರದೆಂದು ಕರ್ತನು ನಮ್ಮನ್ನು ಶಿಕ್ಷಿಸುತ್ತಾನೆ.
- Galatians 3:10 ಗಲಾತ್ಯದವರಿಗೆ 3:10ನ್ಯಾಯ ಪ್ರಮಾಣದ ಕ್ರಿಯೆಗಳನ್ನು ಆಧಾರ ಮಾಡಿಕೊಳ್ಳುವವ ರೆಲ್ಲರೂ ಶಾಪಾಧೀನರಾಗಿದ್ದಾರೆ. ಹೇಗಂದರೆ, ನ್ಯಾಯ ಪ್ರಮಾಣದ ಗ್ರಂಥದೊಳಗೆ ಬರೆದಿರುವವುಗಳನ್ನೆಲ್ಲಾ ನಿತ್ಯವೂ ಕೈಕೊಳ್ಳದಿರುವ ಪ್ರತಿಯೊಬ್ಬನು ಶಾಪಗ್ರಸ್ತ ನೆಂದು ಬರೆದದೆ.
- James 2:10 ಯಾಕೋಬನು 2:10ಯಾಕಂದರೆ ಯಾವನಾದರೂ ನ್ಯಾಯಪ್ರಮಾಣವನ್ನೆಲ್ಲಾ ಕೈಕೊಂಡು ನಡೆದು ಒಂದೇ ಒಂದರಲ್ಲಿ ತಪ್ಪಿದರೆ ಅವನು ಎಲ್ಲಾ ವಿಷಯದಲ್ಲಿಯೂ ಅಪರಾಧಿಯಾಗುತ್ತಾನೆ.
- 1 Corinthians 6:9–11 1 ಕೊರಿಂಥದವರಿಗೆ 6:9–11ಅನೀತಿವಂತರು ದೇವರ ರಾಜ್ಯಕ್ಕೆ ಬಾಧ್ಯರಾಗುವದಿಲ್ಲವೆಂಬದು ನಿಮಗೆ ತಿಳಿಯದೋ? ಮೋಸಹೋಗಬೇಡಿರಿ; ಜಾರರು ವಿಗ್ರಹಾರಾಧಕರು ವ್ಯಭಿಚಾರಿಗಳು ವಿಟರು ಪುರುಷಗಾಮಿಗಳು ಕಳ್ಳರು ಲೋಭಿಗಳು ಕುಡುಕರು ಬೈಯುವವರು ಸುಲು ಕೊಳ್ಳುವವರು ದೇವರ ರಾಜ್ಯಕ್ಕೆ ಬಾಧ್ಯರಾಗುವದಿಲ್ಲ. ನಿಮ್ಮಲ್ಲಿ ಕೆಲವರು ಅಂಥವರಾಗಿದ್ದಿರಿ; ಆದರೂ ಕರ್ತನಾದ ಯೇಸುವಿನ ಹೆಸರಿನಲ್ಲಿಯೂ ನಮ್ಮ ದೇವರ ಆತ್ಮನಲ್ಲಿಯೂ ತೊಳೆಯಲ್ಪಟ್ಟಿರಿ; ಶುದ್ಧೀಕರಿಸಲ್ಪಟ್ಟಿರಿ ಮತ್ತು ನೀತಿವಂತರೆಂಬ ನಿರ್ಣಯವನ್ನು ಹೊಂದಿದಿರಿ.
- 1 Timothy 1:13–16 1 ತಿಮೊಥೆಯನಿಗೆ 1:13–16ಮೊದಲು ದೇವದೂಷಕನೂ ಹಿಂಸಕನೂ ಕೇಡು ಮಾಡುವವನೂ ಆಗಿದ್ದ ನಾನು ಅವಿಶ್ವಾಸಿಯಾಗಿ ತಿಳಿಯದೆ ಹಾಗೆ ಮಾಡಿದ್ದರಿಂದ ನನ್ನ ಮೇಲೆ ಕರುಣೆ ಉಂಟಾಯಿತು. ನಮ್ಮ ಕರ್ತನ ಕೃಪೆಯು ಕ್ರಿಸ್ತ ಯೇಸುವಿನಲ್ಲಿರುವ ನಂಬಿಕೆ ಮತ್ತು ಪ್ರೀತಿಯೊಂದಿಗೆ ಅತ್ಯಧಿಕವಾಯಿತು. ಕ್ರಿಸ್ತ ಯೇಸು ಪಾಪಿಗಳನ್ನು ರಕ್ಷಿಸುವದಕ್ಕೋಸ್ಕರ ಈ ಲೋಕಕ್ಕೆ ಬಂದನು ಎಂದು ಹೇಳುವದು ನಂಬತಕ್ಕದ್ದಾಗಿಯೂ ಸರ್ವಾಂಗೀಕಾರಕ್ಕೆ ಯೋಗ್ಯವಾದದ್ದಾಗಿಯೂ ಅದೆ; ಆ ಪಾಪಿಗಳಲ್ಲಿ ನಾನೇ ಮುಖ್ಯನು. ಹೇಗಿದ್ದರೂ ಇನ್ನು ಮುಂದೆ ನಿತ್ಯ ಜೀವಕ್ಕಾಗಿ ತನ್ನ ಮೇಲೆ ನಂಬಿಕೆಯಿಡುವವರಿಗೆ ದೃಷ್ಟಾಂತವಿರಬೇಕೆಂದು ಯೇಸು ಕ್ರಿಸ್ತನು ಮೊದಲು ನನ್ನನ್ನು ಕರುಣಿಸಿ ನನ್ನಲ್ಲಿ ತನ್ನ ಪೂರ್ಣದೀರ್ಘ ಶಾಂತಿಯನ್ನು ತೋರ್ಪಡಿಸಿದನು.
- Genesis 3:6–19 ಆದಿಕಾಂಡ 3:6–19ಸ್ತ್ರೀಯು--ಆ ಮರದ ಫಲವು ಆಹಾರಕ್ಕೆ ಒಳ್ಳೇದಾಗಿಯೂ ಕಣ್ಣಿಗೆ ರಮ್ಯವಾಗಿಯೂ ಒಬ್ಬನನ್ನು ಜ್ಞಾನಿಯನ್ನಾಗಿ ಮಾಡುವದಕ್ಕೆ ಅಪೇಕ್ಷಿಸತಕ್ಕದ್ದಾಗಿಯೂ ಅದೆ ಎಂದು ನೋಡಿ ಅದರ ಫಲವನ್ನು ತೆಗೆದುಕೊಂಡು ತಿಂದಳು; ತನ್ನ ಸಂಗಡ ಇದ್ದ ತನ್ನ ಗಂಡನಿಗೂ ಕೊಟ್ಟಳು; ಅವನೂ ತಿಂದನು. ಆಗ ಅವರಿಬ್ಬರ ಕಣ್ಣುಗಳು ತೆರೆಯಲ್ಪಟ್ಟು ತಾವು ಬೆತ್ತಲೆಯಾಗಿದ್ದೇವೆಂದು ತಿಳಿದು ಕೊಂಡರು; ಅವರು ಅಂಜೂರದ ಎಲೆಗಳನ್ನು ಹೊಲಿದುಕೊಂಡು ತಮಗೆ ತಾವೇ ಉಡುಗೆಗಳನ್ನು ಮಾಡಿಕೊಂಡರು. ಆಗ ಕರ್ತನಾದ ದೇವರು ದಿನದ ತಂಗಾಳಿಯಲ್ಲಿ ತೋಟದೊಳಗೆ ತಿರುಗಾಡುವ ಶಬ್ದವನ್ನು ಆದಾಮನೂ ಅವನ ಹೆಂಡತಿಯೂ ಕೇಳಿ ದೇವರಾದ ಕರ್ತನ ಸನ್ನಿಧಿಯಿಂದ ತೋಟದ ಮರಗಳಲ್ಲಿ ಅಡಗಿಕೊಂಡರು. ಆಗ ಕರ್ತನಾದ ದೇವರು ಆದಾಮನನ್ನು ಕರೆದು ಅವನಿಗೆ--ನೀನು ಎಲ್ಲಿದ್ದೀ ಅಂದನು. ಅದಕ್ಕ ವನು--ನಿನ್ನ ಶಬ್ದವನ್ನು ತೋಟದಲ್ಲಿ ನಾನು ಕೇಳಿ ಬೆತ್ತಲೆಯಾಗಿರುವದರಿಂದ ಭಯಪಟ್ಟು ಅಡಗಿ ಕೊಂಡೆನು ಅಂದನು. ಅದಕ್ಕೆ ಆತನು--ನೀನು ಬೆತ್ತಲೆಯಾಗಿದ್ದೀ ಎಂದು ನಿನಗೆ ತಿಳಿಸಿದವರು ಯಾರು? ತಿನ್ನಬಾರದೆಂದು ನಾನು ನಿನಗೆ ಆಜ್ಞಾಪಿಸಿದ ಮರದ ಫಲವನ್ನು ತಿಂದಿದ್ದೀಯೋ? ಅನ್ನಲು ಅವನು--ನೀನು ನನ್ನ ಸಂಗಡ ಇರುವದಕ್ಕೆ ಕೊಟ್ಟ ಸ್ತ್ರೀಯು ಆ ಮರದ ಫಲವನ್ನು ನನಗೆ ಕೊಟ್ಟಳು; ನಾನು ತಿಂದೆನು ಎಂದು ಹೇಳಿದನು. ಕರ್ತನಾದ ದೇವರು ಸ್ತ್ರೀಗೆ--ಇದೇನು ನೀನು ಮಾಡಿದ್ದು ಎಂದು ಕೇಳಿದಾಗ ಸ್ತ್ರೀಯು--ಸರ್ಪವು ನನ್ನನ್ನು ವಂಚಿಸಿದ್ದರಿಂದ ನಾನು ತಿಂದೆನು ಅಂದಳು. ಆಗ ಕರ್ತನಾದ ದೇವರು ಸರ್ಪಕ್ಕೆ--ನೀನು ಇದನ್ನು ಮಾಡಿದ ಕಾರಣ ಎಲ್ಲಾ ಪಶುಗಳಲ್ಲಿಯೂ ಎಲ್ಲಾ ಅಡವಿಯ ಮೃಗಗಳ ಲ್ಲಿಯೂ ಶಪಿಸಲ್ಪಟ್ಟು ಜೀವದಿಂದಿರುವ ದಿವಸಗಳಲ್ಲೆಲ್ಲಾ ಹೊಟ್ಟೆಯಿಂದ ಹರಿದಾಡಿ ಮಣ್ಣನ್ನು ತಿನ್ನುವಿ. ನಿನಗೂ ಸ್ತ್ರೀಗೂ ನಿನ್ನ ಸಂತತಿಗೂ ಸ್ತ್ರೀ ಸಂತತಿಗೂ ಹಗೆತನ ಇಡುವೆನು; ಆತನು ನಿನ್ನ ತಲೆಯನ್ನು ಜಜ್ಜುವನು ಮತ್ತು ನೀನು ಆತನ ಹಿಮ್ಮಡಿಯನ್ನು, ಕಚ್ಚುವಿ ಅಂದನು. ಸ್ತ್ರೀಗೆ ಆತನು--ನಾನು ನಿನ್ನ ದುಃಖವನ್ನೂ ಗರ್ಭವೇದನೆಯನ್ನೂ ಅಧಿಕವಾಗಿ ಹೆಚ್ಚಿಸುವೆನು, ನೀನು ಕಷ್ಟದಿಂದ ಮಕ್ಕಳನ್ನು ಹೆರುವಿ, ನಿನ್ನ ಗಂಡನ ಮೇಲೆ ನಿನಗೆ ಆಶೆ ಇರುವದು; ಅವನು ನಿನ್ನನ್ನು ಆಳುವನು ಅಂದನು. ಆದಾಮನಿಗೆ ಆತನು--ನೀನು ನಿನ್ನ ಹೆಂಡತಿಯ ಮಾತನ್ನು ಕೇಳಿ ತಿನ್ನಬಾರದೆಂದು ನಾನು ನಿನ ಆಜ್ಞಾಪಿಸಿದ ಮರದ ಫಲವನ್ನು ತಿಂದಕಾರಣ ನಿನ್ನ ನಿಮಿತ್ತ ಭೂಮಿಯು ಶಪಿಸಲ್ಪಟ್ಟಿದೆ; ನಿನ್ನ ಜೀವನದ ದಿನಗಳಲ್ಲೆಲ್ಲಾ ದುಃಖದಲ್ಲೇ ನೀನು ಅದರ ಫಲವನ್ನು ತಿನ್ನುವಿ. ಇದಲ್ಲದೆ ಭೂಮಿಯು ಮುಳ್ಳುಗಳನ್ನೂ ದತ್ತೂರಿಗಳನ್ನೂ ನಿನಗಾಗಿ ಬೆಳೆಯುವದು. ನೀನು ಹೊಲದ ಪಲ್ಯವನ್ನು ತಿನ್ನುವಿ. ನೀನು ಮಣ್ಣಿಗೆ ತಿರುಗುವ ವರೆಗೆ ನಿನ್ನ ಹಣೆಯ ಬೆವರನ್ನು ಸುರಿಸಿ ರೊಟ್ಟಿಯನ್ನು ತಿನ್ನುವಿ. ಯಾಕಂದರೆ ನೀನು ಅದ ರೊಳಗಿಂದ ಅಂದರೆ (ಮಣ್ಣಿನೊಳಗಿಂದ) ತೆಗೆಯ ಲ್ಪಟ್ಟೆ; ನೀನು ಮಣ್ಣಾಗಿದ್ದಿ, ಮಣ್ಣಿಗೆ ತಿರುಗಿಕೊಳ್ಳುವಿ ಅಂದನು.
- Luke 7:47–50 ಲೂಕನು 7:47–50ಆದದರಿಂದ ನಾನು ಹೇಳುವದೇ ನಂದರೆ--ಬಹಳವಾಗಿರುವ ಅವಳ ಪಾಪಗಳು ಕ್ಷಮಿಸ ಲ್ಪಟ್ಟಿವೆ. ಯಾಕಂದರೆ ಅವಳು ಬಹಳವಾಗಿ ಪ್ರೀತಿಸಿ ದಳು; ಆದರೆ ಯಾವನಿಗೆ ಸ್ವಲ್ಪವಾಗಿ ಕ್ಷಮಿಸಲ್ಪಡು ವದೋ ಅವನು ಸ್ವಲ್ಪವಾಗಿ ಪ್ರೀತಿಸುವನು. ಆತನು ಆಕೆಗೆ--ನಿನ್ನ ಪಾಪಗಳು ಕ್ಷಮಿಸಲ್ಪಟ್ಟಿವೆ ಅಂದನು. ಆತನ ಸಂಗಡ ಊಟಕ್ಕೆ ಕೂತವರು ತಮ್ಮೊಳಗೆ--ಪಾಪಗಳನ್ನು ಸಹ ಕ್ಷಮಿಸುವದಕ್ಕೆ ಈತನು ಯಾರು ಎಂದು ತಮ್ಮಲ್ಲಿ ಅಂದುಕೊಳ್ಳಲಾರಂಭಿಸಿದರು.ಆಗ ಆತನು ಆ ಸ್ತ್ರೀಗೆ--ನಿನ್ನ ನಂಬಿಕೆಯು ನಿನ್ನನ್ನು ರಕ್ಷಿಸಿಯದೆ, ಸಮಾಧಾನದಿಂದ ಹೋಗು ಅಂದನು. ಆಗ ಆತನು ಆ ಸ್ತ್ರೀಗೆ--ನಿನ್ನ ನಂಬಿಕೆಯು ನಿನ್ನನ್ನು ರಕ್ಷಿಸಿಯದೆ, ಸಮಾಧಾನದಿಂದ ಹೋಗು ಅಂದನು.
Original words (Greek)
- And · G2532καί kaí
- not · G3756οὐ ou
- as · G5613ὡς hōs
- by · G1223διά diá
- one · G1520εἷς heîs
- sinned · G264ἁμαρτάνω hamartánō
- gift · G1434δώρημα dṓrēma
- for · G1063γάρ gár
- judgment · G2917κρίμα kríma
- by · G1537ἐκ ek
- one · G1520εἷς heîs
- to · G1519εἰς eis
- condemnation · G2631κατάκριμα katákrima
- but · G1161δέ dé
- gift · G5486χάρισμα chárisma
- of · G1537ἐκ ek
- many · G4183πολύς polýs
- offences · G3900παράπτωμα paráptōma
- unto · G1519εἰς eis
- justification · G1345δικαίωμα dikaíōma